Tag: Congratulation

  • ಸಿಎಂ ಎಚ್‍ಡಿಕೆಗೆ ಶ್ರೀ ಚಂದ್ರಶೇಖರ ಶಿವಾಚಾರ್ಯರಿಂದ ಅಭಿನಂದನೆ

    ಸಿಎಂ ಎಚ್‍ಡಿಕೆಗೆ ಶ್ರೀ ಚಂದ್ರಶೇಖರ ಶಿವಾಚಾರ್ಯರಿಂದ ಅಭಿನಂದನೆ

    ಚಿಕ್ಕೋಡಿ: ಉತ್ತರ ಕರ್ನಾಟಕ ಹೋರಾಟದ ನೇತೃತ್ವ ವಹಿಸಿದ್ದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯರು ಸಿಎಂ ಕುಮಾರಸ್ವಾಮಿಯವರಿಗೆ ಎಲ್ಲಾ ಮಠಾಧೀಶರುಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

    ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತೆನೆ, ಹಲವು ಪ್ರಮುಖ ಇಲಾಖೆಯ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದು, ಆದಷ್ಟು ಬೇಗ ಬೆಳಗಾವಿಗೆ ಬರುತ್ತೇನೆ ಎಂದು ಸಿಎಂ ಭರವಸೆ ನೀಡಿರುವುದಕ್ಕೆ ಶ್ರೀಗಳು ಅಭಿನಂದನೆ ಸಲ್ಲಿಸಿ, ಆದಷ್ಟು ಬೇಗ ಕುಮಾರಸ್ವಾಮಿ ಅವರ ಕನಸಾಗಿರುವ ಸುವರ್ಣ ಸೌಧದಲ್ಲಿ ಸದಾ ಚಟುವಟಿಕೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಕೇಳಿಕೊಂಡಿದ್ದಾರೆ.

    ಎಲ್ಲಾ ರಾಜಕೀಯ ನಾಯಕರು ಪಕ್ಷಾತೀತವಾಗಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಬೇಕು. ಯಾವುದೇ ಮಠಾಧೀಶರಿಗೂ ರಾಜ್ಯ ಒಡೆಯುವ ಇಚ್ಛೆ ಇಲ್ಲ. ಅಲ್ಲದೇ ಮೈಸೂರು ರಾಜಮಾತೆ ಪ್ರಮೋದಾ ದೇವಿಯವರು ಉತ್ತರ ಕರ್ನಾಟಕದ ಅಭಿವೃದ್ಧಿ ಪಡಿಸುವಂತೆ ಮಾತನಾಡಿದ್ದು ನಮಗೆ ಖುಷಿ ತಂದಿದೆ ಎಂದು ಹೇಳಿಕೆ ನೀಡಿದ್ದಾರೆ.

  • ವಿಶ್ವ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಪದಕ ತಂದುಕೊಟ್ಟ ಹಿಮಾ ದಾಸ್ ಚಿರತೆಯ ಓಟದ ವಿಡಿಯೋ ನೋಡಿ

    ವಿಶ್ವ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಪದಕ ತಂದುಕೊಟ್ಟ ಹಿಮಾ ದಾಸ್ ಚಿರತೆಯ ಓಟದ ವಿಡಿಯೋ ನೋಡಿ

    ನವದೆಹಲಿ: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರ ಮೊದಲ ಚಿನ್ನದ ಪದಕ ಗೆದ್ದ ಹಿಮಾ ದಾಸ್ ಇತಿಹಾಸ ಸೃಷ್ಟಿಸಿದ್ದಾರೆ.

    ಗುರುವಾರ ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ಚಿನ್ನದ ಪದಕ ಗೆದ್ದು ದೇಶದ ಗೌರವ ಹೆಚ್ಚಿಸಿದ್ದರು. 18 ನೇ ವರ್ಷದ ಹಿಮಾ ದಾಸ್ 400 ಮೀಟರ್ ಓಟವನ್ನು 51.46 ಸೆಕೆಂಡ್ ಗಳಲ್ಲಿ ಸ್ಪರ್ಧೆಯನ್ನು ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು.

    ಸ್ಪರ್ಧೆಯಲ್ಲಿ ಗೆಲುವು ಪಡೆದ ಬಳಿಕ ಮಾತನಾಡಿರುವ ಹಿಮಾ ದಾಸ್, ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿರುವುದು ಸಂತಸ ತಂದಿದೆ. ನನಗೆ ಬೆಂಬಲ ನೀಡಿದ ಎಲ್ಲಾ ಭಾರತೀಯರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

    ಹೇಮಾ ದಾಸ್ ಚಿರತೆಯಂತೆ ಓಡಿದ ವಿಡಿಯೋವನ್ನು ಭಾರತದ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಸದ್ಯ ಹಿಮಾ ದಾಸ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

    ಅಂದಹಾಗೇ ಹಿಮಾದಾಸ್ ಅವರು ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 51.46 ಸೆಕೆಂಡ್ ಗಳಲ್ಲಿ ಓಟವನ್ನು ಪೂರ್ಣಗೊಳಿಸಿದ್ದು, ಆದರೆ ಕಳೆದ ತಿಂಗಳು ಗುವಾಹತಿಯಲ್ಲಿ ನಡೆದ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಕೇವಲ 51.13 ಸೆಕೆಂಡ್ ಗಳಲ್ಲಿ 400 ಮೀಟರ್ ದೂರವನ್ನು ಕ್ರಮಿಸಿದ್ದರು.

     

  • ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಯಿಂದ ಹಿಮಾದಾಸ್ ಗೆ ಅಭಿನಂದನೆ

    ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಯಿಂದ ಹಿಮಾದಾಸ್ ಗೆ ಅಭಿನಂದನೆ

    ನವದೆಹಲಿ: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರ ಮೊದಲ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳೆ ಹಿಮಾ ದಾಸ್ ಅವರನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

    ಕೋವಿಂದ್ ಮತ್ತು ಪ್ರಧಾನಿ ಮೋದಿ ಅವರು ಹಿಮಾದಾಸ್ ಗೆ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದು ಅಸ್ಸಾಂ ಮತ್ತು ಭಾರತಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ಕೋವಿಂದ್ ಹೇಳಿದ್ದಾರೆ. ಇನ್ನು ದಾಸ್ ಗೆಲುವು ಮುಂದಿನ ವರ್ಷಗಳಲ್ಲಿ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

    ಅಷ್ಟೇ ಅಲ್ಲದೇ “ವಿಶ್ವ ಅಂಡರ್ -20 ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ಚಿನ್ನದ ಪದಕ ಗೆದ್ದ ನಮ್ಮ ಸಂವೇದನೆಯ ಸ್ಪ್ರಿಂಟ್ ತಾರೆ ಹಿಮಾ ದಾಸ್ ಗೆ ಅಭಿನಂದನೆಗಳು. ಇದು ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮೊಟ್ಟಮೊದಲ ಟ್ರ್ಯಾಕ್ ಚಿನ್ನವಾಗಿದೆ. ಇದು ಅಸ್ಸಾಂ ಮತ್ತು ಭಾರತ ಹೆಮ್ಮೆ ಪಡುವ ಸಂಗತಿಯಾಗಿದೆ. ಈಗ ಹಿಮಾ ಒಲಿಂಪಿಕ್ ವೇದಿಕೆಯ ಬೇಕಾನ್ಸ್ ಆಗಿದ್ದಾರೆ” ಎಂದು ಕೋವಿಂದ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

    “ವಿಶ್ವ ಯು20 ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ನಲ್ಲಿ ಐತಿಹಾಸಿಕ ಚಿನ್ನವನ್ನು ಗೆದ್ದ ಕ್ರೀಡಾಪಟು ಹಿಮಾ ದಾಸ್ ಅವರಿಂದ ಭಾರತವು ಹೆಮ್ಮೆಯಿಂದ ಖುಷಿಪಟ್ಟಿದೆ. ಹಿಮಾ ದಾಸ್ ಅವರ ಈ ಸಾಧನೆಯು ಮುಂದಿನ ವರ್ಷಗಳಲ್ಲಿ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ. ಹಿಮಾ ದಾಸ್ ಗೆ ಅಭಿನಂದನೆಗಳು” ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

    ಗುರುವಾರ ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ 18 ನೇ ವಯಸ್ಸಿನಲ್ಲಿ ಹಿಮಾ ದಾಸ್ ಚಿನ್ನದ ಪದಕ ಗೆದ್ದು ದೇಶದ ಇತಿಹಾಸವನ್ನು ಬರೆದಿದ್ದಾರೆ. 400 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಸ್ 51.46 ಸೆಕೆಂಡ್ ಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಮೂಲಕ ಅಗ್ರಸ್ಥಾನಗಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.