Tag: Congratulations

  • ವಿಜಯ್ ರಾಜಕಾರಣಕ್ಕೆ ಎಂಟ್ರಿ: ಅಭಿನಂದನೆ ಸಲ್ಲಿಸಿದ ತಲೈವ

    ವಿಜಯ್ ರಾಜಕಾರಣಕ್ಕೆ ಎಂಟ್ರಿ: ಅಭಿನಂದನೆ ಸಲ್ಲಿಸಿದ ತಲೈವ

    ಮಿಳಿನ ಹೆಸರಾಂತ ನಟ ದಳಪತಿ ವಿಜಯ್ ರಾಜಕಾರಣಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಜವಾಗಿಯೇ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ವಿಜಯ್ ಅವರಿಗೆ ಹೆಸರಾಂತ ನಟ ರಜನಿಕಾಂತ್ (Rajinikanth) ಅಭಿನಂದನೆ ಸಲ್ಲಿಸಿದ್ದಾರೆ. ರಾಜಕಾರಣಕ್ಕೆ ಶುಭಾಶಯ ತಿಳಿಸಿದ್ದಾರೆ.

    ವಿಜಯ್ ದಳಪತಿ (Vijay Thalapathy) ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (TVK) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ (Politics) ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

    ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

     

    ಸದ್ಯ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ ವಿಜಯ್ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಕಳೆದ ನವೆಂಬರ್‌ನಲ್ಲಿ ತ್ರಿಷಾ ಜೊತೆಗಿನ ವಿಜಯ್ ದಳಪತಿ ಸಿನಿಮಾ ರಿಲೀಸ್ ಆದ್ಮೇಲೆ ಹೊಸ ಚಿತ್ರಗಳನ್ನು ವಿಜಯ್ ಒಪ್ಪಿಕೊಂಡಿದ್ದಾರೆ. ವಿಜಯ್ ಹೊಸ ಪಕ್ಷದ ಕೆಲಸದ ಜೊತೆಗೆ ಸಿನಿಮಾ ಮಾಡುವ ಹುಮ್ಮಸಿನಲ್ಲಿದ್ದಾರೆ.

  • ಗ್ರ್ಯಾಮಿ ಪ್ರಶಸ್ತಿ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ

    ಗ್ರ್ಯಾಮಿ ಪ್ರಶಸ್ತಿ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ

    ನಿನ್ನೆ ಗ್ರ್ಯಾಮಿ ಪ್ರಶಸ್ತಿಯನ್ನು ಸ್ವೀಕರಿಸಿದ ಭಾರತದ ಸಂಗೀತಗಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಸಾಧಕರ ಸಾಧನೆಯನ್ನು ಪ್ರಧಾನಿ ಸ್ಮರಿಸಿದ್ದಾರೆ. ಕಳೆದ ವರ್ಷವೂ ಪ್ರಶಸ್ತಿ ಪಡೆದಿದ್ದ ರಿಕ್ಕಿ ಕೇಜ್ ಗೂ ಪ್ರಧಾನ ಅಭಿನಂದನೆ (congratulations) ಸಲ್ಲಿಸಿದ್ದರು.

    ನಿನ್ನೆಯಷ್ಟೇ 66ನೇ ಸಾಲಿನ ಗ್ರ್ಯಾಮಿ ಅವಾರ್ಡ್ (Grammy Award) ಪ್ರಶಸ್ತಿ ಪ್ರಕಟವಾಗಿದ್ದು, ಭಾರತಕ್ಕೆ ಮೂರು ಪ್ರಶಸ್ತಿಗಳು ಸಂದಿವೆ. ದಿ ಮೂಮೆಂಟ್ ಆಲ್ಬಂಗಾಗಿ ಖ್ಯಾತ ಸಂಗೀತಗಾರ ಜಾಕಿರ್ ಹುಸೇನ್ (Zakir Hussain) ಅವರ ಬ್ಯಾಂಡ್ ಶಕ್ತಿಗೆ ಪ್ರಶಸ್ತಿ ಬಂದಿದ್ದು, ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಆಲ್ಬಂನಲ್ಲಿ ಈ ಪ್ರಶಸ್ತಿ ಸಂದಿದೆ.

    ರಾಕೇಶ್ ಚೌರಾಸಿಯಾಗೆ (Rakesh Chaurasi) ಎರಡು ಗ್ರ್ಯಾಮಿ ಅವಾರ್ಡ್ ದೊರಕಿದ್ದು, ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್ ಹಾಗೂ ವಾದ್ಯಗಳ ವಿಭಾಗದಲ್ಲಿ ಈ ಎರಡು ಪ್ರಶಸ್ತಿಗಳನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಇನ್ನೂ ಹಲವಾರು ಪ್ರಶಸ್ತಿಗಳು ಬೇರೆ ಬೇರೆ ಸಂಗೀತಗಾರರು ಪಡೆದುಕೊಂಡಿದ್ದಾರೆ.

     

    ಭಾರತಕ್ಕೆ ಈ ಬಾರಿ ಮೂರು ಗ್ರ್ಯಾಮಿ ಪ್ರಶಸ್ತಿಗಳು ಬಂದಿರುವುದಕ್ಕೆ ರಿಕಿ ಕೇಜ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಯ ಸಂದೇಶವನ್ನು ಹಂಚಿಕೊಂಡಿದ್ದಾರೆ.

  • ದೀದಿ ಜಯಭೇರಿ- ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

    ದೀದಿ ಜಯಭೇರಿ- ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

    ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃಣ ಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿಯವರಿಗೆ ಅಭಿನಂದನೆಗಳು. ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ ಸಾಧ್ಯವಾಗುವ ಎಲ್ಲ ಬೆಂಬಲ ನೀಡುತ್ತದೆ. ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

    ಒಟ್ಟು 292 ಕ್ಷೇತ್ರಗಳಲ್ಲಿ ಟಎಂಸಿ 215ರಲ್ಲಿ ಗೆಲುವು ಪಡೆದುಕೊಂಡಿದೆ. ಬಿಜೆಪಿ 76ರಲ್ಲಿ ಗೆಲುವು ದಾಖಲಿಸಿದೆ. ಇತ್ತ ಶಿಷ್ಯ ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮದಲ್ಲಿ ಕಣಕ್ಕಿಳಿದಿದ್ದ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಒಮ್ಮೆ ಸುವೆಂದು ಮುನ್ನಡೆಗೆ ಬಂದ್ರೆ ಮರುಕ್ಷಣವೇ ಮಮತಾ ಲೀಡ್‍ಗೆ ತೆಗೆದುಕೊಳ್ಳುತ್ತಿದ್ದರು. ಕೊನೆವರೆಗೂ ವಿಜಯಮಾಲೆ ತೂಗೂಯ್ಯಾಲೆಯಲ್ಲೇ ಇತ್ತು. ಅಷ್ಟರ ಮಟ್ಟಿಗೆ ಸುವೆಂದು ಅಧಿಕಾರಿ ಬಿಗ್ ಫೈಟ್ ನೀಡಿದರು. ಕೊನೆಗೆ ಚುನಾವಣಾಧಿಕಾರಿಗಳು ಮಮತಾ 1,200 ಮತಗಳಿಂದ ಗೆದ್ದರು ಎಂದು ಘೋಷಿಸಿದ್ರು. ಆದ್ರೆ ಇದಾದ ಸ್ವಲ್ಪ ಹೊತ್ತಿಗೆ ಸುವೆಂದು 1,622 ಮತಗಳಿಂದ ಗೆದ್ದರು ಎಂದು ಘೋಷಿಸಲಾಯ್ತು.

    ಸದ್ಯ ನಂದಿಗ್ರಾಮ ಫಲಿತಾಂಶದ ಬಗ್ಗೆ ಗೊಂದಲ ಏರ್ಪಟ್ಟಿದೆ. ಮತ್ತೆ ಮರು ಎಣಿಕೆ ನಡೆಯುತ್ತಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮಮತಾ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

  • ಯುವಕ ಪ್ರಾಣ ಉಳಿಸಲು ನದಿಗೆ ಜಿಗಿದ ಸಾಹಸಿಗರಿಗೆ ಒಮನ್ ಕೆಸಿಎಫ್‍ಯಿಂದ ಶ್ಲಾಘನೆ

    ಯುವಕ ಪ್ರಾಣ ಉಳಿಸಲು ನದಿಗೆ ಜಿಗಿದ ಸಾಹಸಿಗರಿಗೆ ಒಮನ್ ಕೆಸಿಎಫ್‍ಯಿಂದ ಶ್ಲಾಘನೆ

    ಮಂಗಳೂರು: ದಕ್ಷಿಣ ಜಿಲ್ಲೆಯ ಬಂಟ್ವಾಳದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸ್ಥಳೀಯ ಯುವಕರ ತಂಡ ಜೀವದ ಹಂಗು ತೊರೆದು ನದಿಗೆ ಜಿಗಿದು ಬದುಕಿಸಲು ಪ್ರಯತ್ನ ಪಟ್ಟ ಘಟನೆ ಮೆಚ್ಚುಗೆಗೆ ಪಾತ್ರವಾಗಿತ್ತು. ಇಂತಹ ಮಾನವೀಯತೆ ಮೆರೆದ ತಂಡಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸಿದೆ.

    ಮೇ 24 ರಂದು ಬಂಟ್ವಾಳದ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ಸಂಧರ್ಭ ಗೂಡಿನಬಳಿಯ ನಿವಾಸಿಗಳಾದ ಮುಹಮ್ಮದ್, ಸಮೀರ್, ಝಾಯಿದ್, ಆರಿಫ್, ಮುಕ್ತಾರ್ ತೌಸೀಫ್ ರವರು ಜಾತಿ ಧರ್ಮವನ್ನು ಲೆಕ್ಕಿಸದೆ ಕೂಡಲೇ ತಮ್ಮ ಜೀವ ಪಣಕ್ಕಿಟ್ಟು ನದಿಗೆ ಜಿಗಿದಿದ್ದರು. ಯುವಕನನ್ನು ನದಿಯಿಂದ ದಡಕ್ಕೆ ಎಳೆತಂದು ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ರಕ್ಷಿಸಲು ಪ್ರಯತ್ನಿಸಿದ್ದರು.

    ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ. ನಂತರ ಯುವಕರು ನದಿಗೆ ಜಿಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿ ಮೆಚ್ಚುಗೆ ಗಳಿಸಿತ್ತು. ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಕೆಸಿಎಫ್ ಒಮಾನ್ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ

    ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ

    ಮುಂಬೈ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪುಣೆಯ ನಾಯ್ಡು ಆಸ್ಪತ್ರೆಯ ದಾದಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಆಸ್ಪತ್ರೆಯ ಸಿಬ್ಬಂದಿ ಮಾಡಿದ ಕಾರ್ಯವನ್ನು ಶ್ಲಾಘಿಸಿದ್ದಾರೆ.

    ಶುಕ್ರವಾರ ಸಂಜೆ ಪ್ರಧಾನಿ ಕಚೇರಿಯಿಂದ ನರ್ಸ್ ಛಾಯ ಜಗ್ತಾಪ್ ಅವರಿಗೆ ಕರೆ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ. ಕರೆ ಮಾಡಿ ಮರಾಠಿಯಲ್ಲಿ ಮಾತನಾಡಿದ ಮೋದಿ ಅವರು, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ. ನಂತರ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಛಾಯ ಜಗ್ತಾಪ್ ಅವರು ತಮ್ಮ ಸುರಕ್ಷತೆ ಮತ್ತು ಕುಟುಂಬದ ಭಯವನ್ನು ಹೇಗೆ ನಿವಾರಿಸುತ್ತಿದ್ದಾರೆ ಎಂದು ಮೋದಿ ಅವರು ಕೇಳಿದ್ದಾರೆ.

    ಇದಕ್ಕೆ ಉತ್ತರಿಸಿದ ಛಾಯ ಅವರು, ನನ್ನ ಕುಟುಂಬದ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನು ಕೆಲಸ ಮಾಡಬೇಕು. ಈ ಪರಿಸ್ಥಿತಿಯಲ್ಲಿ ನಾವು ರೋಗಿಗಳಿಗೆ ಸೇವೆ ಸಲ್ಲಿಸಬೇಕಾಗಿದೆ. ನಾನು ಅದನ್ನು ನಿರ್ವಹಿಸುತ್ತಿದ್ದೇನೆ ಎಂದಿದ್ದಾರೆ. ನಂತರ ಪ್ರಧಾನಿ ಅವರು ಆಸ್ಪತ್ರೆಗೆ ಬರುವ ರೋಗಿಗಳು ಭಯಭೀತರಾಗಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಛಾಯ ಹೌದು ಕೆಲವರು ತುಂಬಾ ಭಯಪಡುತ್ತಾರೆ. ನಾವು ಅವರೊಂದಿಗೆ ಮಾತನಾಡಿ ಧೈರ್ಯ ತುಂಬುತ್ತೇವೆ ಎಂದು ತಿಳಿಸಿದ್ದಾರೆ.

    ನಾವು ರೋಗಿಗಳಿಗೆ ಸಕಾರಾತ್ಮಕ ಸ್ಥೈರ್ಯವನ್ನು ತುಂಬುತ್ತೇವೆ. ಈಗಾಗಲೇ ನಮ್ಮ ಆಸ್ಪತ್ರೆಯಿಂದ ಏಳು ಕೊರೊನಾ ರೋಗಿಗಳು ಪೂರ್ತಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಛಾಯ ಅವರು ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮೋದಿ ಅವರು, ಕೊರೊನಾ ವೈರಸ್ ವಿರುದ್ಧ ನಿರಂತರ ಹೋರಾಡುತ್ತಿರುವ ನಿಮ್ಮಂತಹ ವೈದ್ಯಕೀಯ ಸಿಬ್ಬಂದಿಗೆ ಏನಾದರೂ ಹೇಳ ಬಯಸುತ್ತೀರಾ ಎಂದು ಕೇಳಿದ್ದಾರೆ.

    ಆಗ ಛಾಯ ಅವರು, ಭಯಪಡುವ ಅಗತ್ಯವಿಲ್ಲ. ನಾವು ಈ ರೋಗವನ್ನು ಓಡಿಸಬೇಕು ಮತ್ತು ನಮ್ಮ ದೇಶವನ್ನು ಗೆಲ್ಲುವಂತೆ ಮಾಡಬೇಕು. ಇದು ಆಸ್ಪತ್ರೆಗಳು ಮತ್ತು ಅಲ್ಲಿನ ಸಿಬ್ಬಂದಿ ವರ್ಗದವರ ಧ್ಯೇಯ ವಾಕ್ಯವಾಗಿರಬೇಕು ಎಂದು ಸಂದೇಶ ನೀಡಿದ್ದಾರೆ. ಛಾಯ ಅವರು ಈ ಮಾತನ್ನು ಹೇಳುತ್ತಿದ್ದಂತೆ ಖುಷಿಯಾದ ಮೋದಿ ಅವರು, ಛಾಯ ಅವರ ಭಕ್ತಿ ಮತ್ತು ಸೇವೆಗೆ ಅಭಿನಂದಿಸಿದ್ದಾರೆ.

    ನಿಮ್ಮಂತೆಯೇ ಲಕ್ಷಾಂತರ ದಾದಿಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈದ್ಯರು ಇದೀಗ ದೇಶದ ವಿವಿಧ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ನೀವು ಎಲ್ಲರೂ ನಿಜವಾದ ತಪಸ್ವಿಗಳು. ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ನಿಮ್ಮ ಅನುಭವಗಳನ್ನು ಕೇಳಿ ನನಗೆ ಸಂತೋಷವಾಗಿದೆ ಎಂದು ಮೋದಿ ಹರ್ಷ ವ್ಯಕ್ತಪಡಸಿದ್ದಾರೆ.

    ನಾನು ನನ್ನ ಕರ್ತವ್ಯವನ್ನು ಮಾಡುತ್ತಿದ್ದೇನೆ ಆದರೆ ನೀವು ರಾಷ್ಟ್ರದಾದ್ಯಂತ ಸೇವೆ ಸಲ್ಲಿಸುತ್ತಿದ್ದೀರಿ. ನಾವು ನಿಮಗೆ ಕೃತಜ್ಞರಾಗಿರಬೇಕು. ನಿಮ್ಮಂತಹ ಪ್ರಧಾನ ಮಂತ್ರಿಯನ್ನು ಪಡೆಯಲು ದೇಶವು ಅದೃಷ್ಟ ಮಾಡಿದೆ ಎಂದು ಛಾಯ ಅವರು ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಾಯ್ಡು ಆಸ್ಪತ್ರೆ ಪುಣೆಯಲ್ಲಿ ಅಧಿಕ ಕೊರೊನಾ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ.

  • ದೇಶ ಮೊದಲು, 370 ಕಲಂ ರದ್ದತಿಯನ್ನು ಸ್ವಾಗತಿಸುತ್ತೇನೆ: ಅಂಜಲಿ ನಿಂಬಾಳ್ಕರ್

    ದೇಶ ಮೊದಲು, 370 ಕಲಂ ರದ್ದತಿಯನ್ನು ಸ್ವಾಗತಿಸುತ್ತೇನೆ: ಅಂಜಲಿ ನಿಂಬಾಳ್ಕರ್

    ಬೆಂಗಳೂರು: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿದೆ. ನನಗೆ ದೇಶ ಮೊದಲು ಜಮ್ಮು- ಕಾಶ್ಮೀರ ವಿಶೇಷಾಧಿಕಾರ ರದ್ದು ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿ ಮತ್ತು 35 (ಎ)ನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಇದು ಸಂವಿಧಾನ ವಿರೋಧಿ ನೀತಿ ಎಂದು ಅಸಮಾಧಾನ ಹೊರಹಾಕುತ್ತಿರುವ ಸಮಯದಲ್ಲಿ ಬೆಳಗಾವಿಯ ಖಾನಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಂಜಲಿ ನಿಂಬಾಳ್ಕರ್, ನಮಗೆ ದೇಶ ಮೊದಲು, ನವ ಭಾರತ ನಿಮ್ಮೊಂದಿಗೆ ಇದೆ ಜಮ್ಮು- ಕಾಶ್ಮೀರ ವಿಶೇಷಾಧಿಕಾರ ರದ್ದು ಮಾಡಿದ್ದನ್ನು ಸ್ವಾಗತಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

    ಈ ವಿಚಾರವನ್ನು ಬೆಂಬಲಿಸಿದ್ದ ಕಾಂಗ್ರೆಸ್‍ನ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಭಾರತದ ಒಕ್ಕೂಟಕ್ಕೆ ಸೇರಿಸುವುದಕ್ಕೆ ಬೆಂಬಲ ನೀಡುತ್ತೇನೆ. ಈ ಮೂಲಕ ಭಾರತವು ಸಂಪೂರ್ಣ ಏಕೀಕರಣವಾಗಲಿದೆ. ಆದರೆ ಸಾಂವಿಧಾನಿಕ ಪ್ರಕ್ರಿಯೆಯನ್ನು ಅನುಸರಿಸಿದ್ದರೆ ಚೆನ್ನಾಗಿರುತ್ತಿತ್ತು. ಆಗ ಯಾವುದೇ ಪ್ರಶ್ನೆಗಳನ್ನು ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಅದೇನೇ ಇದ್ದರೂ, ಇದು ನಮ್ಮ ದೇಶದ ಹಿತಾಸಕ್ತಿ ಮತ್ತು ನಾನು ಇದನ್ನು ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದನ್ನು ಓದಿ: ಸಿದ್ಧಾಂತಗಳಿಂದಲೇ ಕಾಂಗ್ರೆಸ್ ಆತ್ಮಹತ್ಯೆ – ಪಕ್ಷವನ್ನೇ ತ್ಯಜಿಸಿದ ಕೈ ನಾಯಕ

    https://twitter.com/JM_Scindia/status/1158729410507182080

    ಈ 370 ಕಲಂ ರದ್ದು ಮಾಡಿದ ನಂತರ ಈ ವಿಚಾರವಾಗಿ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದ ಸೋನಿಯಾ ಗಾಂಧಿ ಅವರು, ಕೇಂದ್ರ ಸರ್ಕಾರದ ನಡೆಯನ್ನು ನಾವು ವಿರೋಧಿಸುತ್ತೇವೆ. ಆದರೆ, ನಮ್ಮ ವಿರೋಧವು ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ರಾಜ್ಯದ ವಿಧಾನಸಭೆಯನ್ನು ಸಂಪರ್ಕಿಸದಿರುವುದನ್ನು ಆಧರಿಸಿದೆ ಎಂದು ಕಾಂಗ್ರೆಸ್ ಸಂಸದರು ಹಾಗೂ ನಾಯಕರಿಗೆ ಸಭೆಯಲ್ಲಿ ಸ್ಪಷ್ಟಪಡಿಸಲಾಗಿತ್ತು.

    ರಾಹುಲ್ ಗಾಂಧಿ ಟ್ವೀಟ್ ಮಾಡಿ ಏಕಪಕ್ಷೀಯವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಇಬ್ಭಾಗ ಮಾಡುವ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳನ್ನು ಬಂಧಿಸುವುದು ಹಾಗೂ ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ರಾಷ್ಟ್ರದ ಏಕೀಕರಣವನ್ನು ಹೆಚ್ಚಿಸಲು ಸಾಧ್ಯವಿಲ್ಲ. ಜನರಿಂದ ದೇಶ ನಿರ್ಮಾಣವಾಗಿದೆ. ಇದು ಕೇವಲ ತುಂಡು ಭೂಮಿಯಲ್ಲ. ಆಡಳಿತಾತ್ಮಕ ಅಧಿಕಾರದ ದುರುಪಯೋಗ ಮಾಡಿರುವುದು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದ್ದರು.

  • ಕೊಹ್ಲಿಗೆ ಅಭಿನಂದನೆ ಸಲ್ಲಿಸಿದ್ರು ಡಿಸಿಪಿ ಚನ್ನಣ್ಣನವರ್

    ಕೊಹ್ಲಿಗೆ ಅಭಿನಂದನೆ ಸಲ್ಲಿಸಿದ್ರು ಡಿಸಿಪಿ ಚನ್ನಣ್ಣನವರ್

    ಬೆಂಗಳೂರು: ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

    ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಬಗ್ಗೆ ವಿರಾಟ್ ಅವರು “ನಮ್ಮ ಗೌರವಾನ್ವಿತ ರಾಷ್ಟ್ರಪತಿಯಿಂದ ನಾನು ಖೇಲ್ ರತ್ನ ಪ್ರಶಸ್ತಿ ಪಡೆದು ಕೊಂಡಿದ್ದೇನೆ” ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದರು.

    ವಿರಾಟ್ ಕೊಹ್ಲಿ ಮಾಡಿದ್ದ ಟ್ವೀಟ್ ಗೆ ಡಿಸಿಪಿ ರವಿ ಅವರು ರೀಟ್ವೀಟ್ ಮಾಡಿ, ‘ಅಭಿನಂದನೆಗಳು ವಿರಾಟ್ ಕೊಹ್ಲಿ’ ಎಂದು ಬರೆದು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ರನ್ ಮಷಿನ್ ಕೊಹ್ಲಿಗೆ ಖೇಲ್ ರತ್ನ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?

    ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ಕೋವಿಂದ್ ಅವರು, “ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ನಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ 2018ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಭಾರತದ ಕ್ರಿಕೆಟ್ ತಂಡದ ನಾಯಕತ್ವ ವಹಿಸಿರುವ ವಿರಾಟ್ ಕೊಹ್ಲಿ, 2016 ಟಿ20 ಕ್ರಿಕೆಟ್‍ನಲ್ಲಿ ಭಾಗವಹಿಸಿದ್ದರು. ಅಲ್ಲದೇ ಇದುವರೆಗೂ ಟೆಸ್ಟ್ ಕ್ರಿಕೆಟ್ ನಲ್ಲಿ 23 ಶತಕಗಳು ಮತ್ತು 19 ಅರ್ಧಶತಕಗಳನ್ನು ಗಳಿಸಿದ್ದಾರೆ” ಎಂದು ಟ್ವೀಟ್ ಮಾಡಿದ್ದರು.

    ಈ ಹಿಂದೆ ಕೊಹ್ಲಿ ಅವರ ಹೆಸರನ್ನು ಬಿಸಿಸಿಐ ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು. ಕಳೆದ ಬಾರಿ 2016 ರಲ್ಲಿ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು. ಆದರೆ ಆ ಸಾಲಿನಲ್ಲಿ ರಿಯೋ ಒಲಿಂಪಿಕ್ ಪದಕ ವಿಜೇತರಾಗಿದ್ದ ಪಿವಿ ಸಿಂಧು, ಸಾಕ್ಷಿ ಮಲಿಕ್ ಮತ್ತು ಜಿಮ್ನಾಸ್ಟಿಕ್ಸ್ ಇತಿಹಾಸದಲ್ಲಿ ಭಾರತದ ಪರ ವಿಶೇಷ ಸಾಧನೆ ಮಾಡಿದ್ದ ದೀಪಾ ಕರ್ಮಕರ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಸಿಕ್ಕಿತ್ತು. ಆದರೆ ಈ ಬಾರಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟಿಂಗ್ ಮೀರಾಬಾಯಿ ಚಾನುಗೆ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ದೊರೆತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv