Tag: congres

  • ಮೊದಲ ಬಾರಿಗೆ ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ: ಪ್ರಿಯಾಂಕ್ ಖರ್ಗೆ

    ಮೊದಲ ಬಾರಿಗೆ ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ: ಪ್ರಿಯಾಂಕ್ ಖರ್ಗೆ

    – ಪಾರದರ್ಶಕತೆಯತ್ತ ಗ್ರಾಮೀಣಾಭಿವೃದ್ದಿ ಇಲಾಖೆ

    ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು, ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (PDO) ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು (Transfer) ಅವಕಾಶ ಕಲ್ಪಿಸಲಾಗಿದೆ. 2025ರ ಸೆಪ್ಟೆಂಬರ್ 10 ರಿಂದ 2025ರ ಸೆಪ್ಟೆಂಬರ್ 20 ರವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆಪ್ಟೆಂಬರ್ 23 ಹಾಗೂ 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ಪ್ರಕ್ರಿಯೆಗಳು ಜರುಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ದಿ ಆಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ದಿ ಸಹಾಯಕ (ಗ್ರೇಡ್-1 & ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು 2024ನ್ನು ರಚಿಸಿ, ಅಧಿಸೂಚಿಸಲಾಗಿದೆ. ಈ ನಿಯಮಗಳಿಗೆ ಸೂಕ್ತ ತಿದ್ದುಪಡಿಗಳನ್ನು ತಂದು, ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ಕಡ್ಡಾಯವಾಗಿ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ.

     
    ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಈಗಾಗಲೇ ಆನ್ ಲೈನ್ ಮೂಲಕ ವಿಶೇಷ ಪ್ರಕರಣಗಳ ಅಡಿಯಲ್ಲಿ 515 ಅರ್ಜಿಗಳು ಹಾಗೂ ಸಾಮಾನ್ಯ ಕೋರಿಕೆಯ ಅಡಿಯಲ್ಲಿ 1,215 ಅರ್ಜಿಗಳು ಸೇರಿದಂತೆ ಒಟ್ಟು 1,730 ಅರ್ಜಿಗಳು ಸ್ವೀಕೃತಗೊಂಡಿವೆ, ಪ್ರಸ್ತುತ ಖಾಲಿ ಹುದ್ದೆಗಳ, ಕಡ್ಡಾಯ ವರ್ಗಾವಣೆಗಳ ರಾಜ್ಯವಾರು ಅಂತಿಮ ಪಟ್ಟಿ ಹಾಗೂ ವರ್ಗಾವಣೆಯಿಂದ ವಿನಾಯತಿಗಾಗಿ ಕೋರಿಕೆ ಸಲ್ಲಿಸಿದವರ ಪಟ್ಟಿಯನ್ನು www.rdprtransfer.karnataka.gov.in ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಕಳೆದ 29ರಂದು ವಿಶೇಷ ಪ್ರಕರಣಗಳ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿಯನ್ನು ಸೆಪ್ಟೆಂಬರ್‌ 1ರಂದು ಸಾಮಾನ್ಯ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿರುವ ಸಚಿವರು ಈ ತಿಂಗಳ 3 ರಿಂದ 8ರವರೆಗೆ ವಿಶೇಷ ಪ್ರಕರಣಗಳ ಮೊದಲ ಸುತ್ತಿನ ಕೌನ್ಸಿಲಿಂಗ್ ಹಾಗೂ ಈ ತಿಂಗಳ 8ರಂದು ವಿಶೇಷ ಪ್ರಕರಣಗಳ ಎರಡನೇ ಸುತ್ತಿನ ಕೌನ್ಸಿಲಿಂಗ್ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯತ್ನಾಳ್ ಬಿಜೆಪಿಯಿಂದ ಯಾಕೆ ಉಚ್ಛಾಟನೆ ಆದ್ರು ಅಂತ ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ

    2024-25ನೇ ಸಾಲಿನ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ಘೋಷಿಸಿದ್ದಂತೆ ಸರ್ಕಾರ ಕಳೆದ ಜೂನ್ 25ರಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

    ಇಲಾಖೆಯು ಇದೇ ಮೊದಲ ಬಾರಿಗೆ ಪಿಡಿಒ ವರ್ಗಾವಣೆ ಪ್ರಕ್ರಿಯೆಯನ್ನು ಆನ್ ಲೈನ್ ಕೌನ್ಸಿಲಿಂಗ್ ಮೂಲಕ ನಡೆಸುತ್ತಿದ್ದು ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗುತ್ತದೆ. ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಗಳಿಗೆ ಸಂಬಂಧಿಸಿದಂತೆ 31 ಜಿಲ್ಲೆಗಳಲ್ಲಿ ಅರ್ಹತೆ ಹೊಂದಿದ 1,300 ನೌಕರರಿಗೆ ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಹೊರಡಿಸಿ ಸ್ಥಳದಲ್ಲೇ ನೌಕರರಿಗೆ ನೀಡಿದ್ದು, ಇಲಾಖೆ ಪ್ರಥಮ ಬಾರಿಗೆ ಪಾರದರ್ಶಕ ರೀತಿಯಲ್ಲಿ ಪ್ರಕ್ರಿಯೆಗಳನ್ನು ನಡೆಸಿದೆ ಎಂದು ಸಚಿವರು ತಿಳಿಸಿದ್ದಾರೆ.

  • ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಬೆಂಗಳೂರು: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ (ED Raid) ಮಾಡಿದೆ ಎಂದು ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ (Ashok Pattan) ಇಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇಡಿ ದಾಳಿ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಸದ ತುಕಾರಾಂ, ಶಾಸಕ ನಾಗೇಂದ್ರ ಸೇರಿದಂತೆ ಹಲವರ ಮೇಲೆ ಇಡಿ ದಾಳಿ ಮಾಡಿದೆ. ಎಂಪಿ ತುಕಾರಾಂ ಸಭ್ಯಸ್ಥ ವ್ಯಕ್ತಿ. ಬಳ್ಳಾರಿಯಲ್ಲಿ ಕಾಂಗ್ರೆಸ್‌ನವರ ಮೇಲೆ ದಾಳಿ ನಡೆದಿದೆ. ಇಡಿ ದಾಳಿ ಮಾಡಿ ತೇಜೊವಧೆಗೆ ಮಾಡೋ ಕೆಲಸ ಮಾಡ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಈಗ ದಾಳಿ ಮಾಡ್ತಿರೋದಕ್ಕೆ ರಾಜಕೀಯ ಕಾರಣ ಇದೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

    ಚುನಾವಣೆಗೆ ಹಣ ಬಳಕೆಯಾಗಿದೆ ಅನ್ನೋದಕ್ಕೆ ತನಿಖೆ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಆಗ್ತಿದೆ. ತನಿಖೆಯಲ್ಲಿ ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ‌. ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ ಎಂದರು.

    ನಾಗೇಂದ್ರ ಅವರನ್ನ ಮತ್ತೆ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾಗೇಂದ್ರ ಅವರನ್ನ ಸಂಪುಟಕ್ಕೆ ತೆಗೆದುಕೊಳ್ಳೋದು ಹೈಕಮಾಂಡ್, ಸಿಎಂಗೆ ಬಿಟ್ಟಿದ್ದು ಎಂದು ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

  • ಯೋಗೇಶ್ವರ್‌ಗೆ ಗೆಲುವು – ಮದ್ದೂರಿನ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಸಿಪಿವೈ ಪತ್ನಿ

    ಯೋಗೇಶ್ವರ್‌ಗೆ ಗೆಲುವು – ಮದ್ದೂರಿನ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಸಿಪಿವೈ ಪತ್ನಿ

    – ಚನ್ನಪಟ್ಟಣದ ಮನೆ ಮಗನನ್ನ ಗೆಲ್ಲಿಸಿದ್ದಾರೆ ಎಂದ ಶೀಲಾ ಯೋಗೇಶ್ವರ್‌

    ಮಂಡ್ಯ: ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ‌ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿ.ಪಿ ಯೋಗೇಶ್ವರ್‌ (CP Yogeshwar) ಪತ್ನಿ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

    ಚುನಾವಣೆ ಪೂರ್ವದಲ್ಲೇ ದೇಗುಲಕ್ಕೆ ಭೇಟಿ ನೀಡಿದ್ದ ಕುಟುಂಬ ಸಿಪಿವೈ ಗೆಲುವಿಗಾಗಿ ಹರಕೆ ಕಟ್ಟಿಕೊಂಡಿತ್ತು. ಅದರಂತೆ ದೇವಸ್ಥಾನಕ್ಕೆ ಬಂದು ಹೊಳೆ ಆಂಜನೇಯನಿಗೆ ಒಂದೂಕಾಲು ರೂಪಾಯಿ ಕಟ್ಟಿ ಹರಕೆ ತೀರಿಸಿದ್ದಾರೆ. ಬಳಿಕ ದೀಪ ಹಚ್ಚಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಪಿವೈ ಪತ್ನಿ ಶೀಲಾಗೆ (Sheela Yogeshwar) ಶಾಸಕ ಉದಯ್ ಪತ್ನಿ ವಿನೂತ್ ಸಾಥ್ ನೀಡಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ಕಷ್ಟದ ಸಂದರ್ಭದಲ್ಲಿ ಮಾತೃ ಪಕ್ಷ ಕೈಹಿಡಿಯಿತು. ಚನ್ನಪಟ್ಟಣ ಜನರ ಆಶಿರ್ವಾದದಿಂದ ಯೋಗೇಶ್ವರ್‌ ಗೆದ್ದಿದ್ದಾರೆ. ನನ್ನ ಪತಿಯ ಜನ್ಮ ಭೂಮಿ ಹಾಗೂ ಕರ್ಮ ಭೂಮಿ ಚನ್ನಪಟ್ಟಣ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

    ನಾವು ಸಾಮಾನ್ಯ ಕುಟುಂಬದಿಂದ ಬಂದವ್ರು. ಪತಿಯ ಜನಸೇವೆ ಗುರುತಿಸಿ ಜನ ಕೈ ಹಿಡಿದಿದ್ದಾರೆ. ಎರಡು ಸರಿ ಸೋಲು ಅನುಭವಿಸಿದ್ವಿ ಈ ಬಾರಿ ಭರವಸೆ ಇತ್ತು. ಚನ್ನಪಟ್ಟಣದ ಜನ ತಮ್ಮ ಮನೆ ಮಗನನ್ನ ಗೆಲ್ಲಿಸಿದ್ದಾರೆ. ನಮ್ಮದೇ ಸರ್ಕಾರ ಇರೋದ್ರಿಂದ ಜನ ಸೇವೆ ಮಾಡಬಹುದು. ಸಾಕಷ್ಟು ಅಭಿವೃದ್ಧಿ ಬಗ್ಗೆ ಜನರ ನಿರೀಕ್ಷೆ ಇದೆ. ಇದನ್ನೂ ಓದಿ: ಯುಪಿಯ ಕುಂದರ್ಕಿಯಲ್ಲಿ 11 ಮುಸ್ಲಿಮರನ್ನು ಸೋಲಿಸಿದ ಏಕೈಕ ಹಿಂದೂ ಅಭ್ಯರ್ಥಿ

    ಇಂದು ಆರ್.ಅಶೋಕ್ ಮಂಡ್ಯ ಪ್ರವಾಸ:
    ವಿಪಕ್ಷ ನಾಯಕ ಆರ್‌. ಅಶೋಕ್‌ ಇಂದು (ನ.24) ಮಂಡ್ಯ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕೇತ್ರದ ತಗ್ಗಹಳ್ಳಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹ ಪಾಲ್ಗೊಳ್ಳಲಿದ್ದಾರೆ.

    ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ನೂರಕ್ಕು ಹೆಚ್ಚು ಬೇರೆ ಬೇರೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ | ವಿಜಯೋತ್ಸವದ ವೇಳೆ ಅಗ್ನಿ ಅವಘಡ – ನೂತನ ಶಾಸಕನಿಗೆ ಗಾಯ 

  • ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ

    ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ

    ನವದೆಹಲಿ: ಲೋಕಸಭೆಯ (Lok Sabha ) ವಿಪಕ್ಷ ನಾಯಕರಾಗಿ ರಾಹುಲ್‌ ಗಾಂಧಿ (Rahul Gandhi) ಆಯ್ಕೆ ಆಗಿದ್ದಾರೆ.

    ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್‌ (Congress) ನಾಯಕರು ಹಿಂದೆ ಆಗ್ರಹ ಮಾಡಿದ್ದರು. ಆದರೆ ರಾಹುಲ್‌ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್‌ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.


    ಮೋದಿ (PM Narendra Modi) ಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಎರಡನೇ ಅವಧಿಯಲ್ಲಿ ಅಧಿರಂಜನ್‌ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು.

  • ಮಿಲಿಂದ್ ದಿಯೋರಾ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ: ಏಕನಾಥ್‌ ಶಿಂಧೆ

    ಮಿಲಿಂದ್ ದಿಯೋರಾ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ: ಏಕನಾಥ್‌ ಶಿಂಧೆ

    ಮುಂಬೈ: ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿರುವ ಮಿಲಿಂದ್ ದಿಯೋರಾ ಅವರು ಶಿವಸೇನೆ (Shivasene) ಸೇರ್ಪಡೆಯಾಗಲಿದ್ದಾರೆ ಎಂಬ ಗುಮಾನಿ ಎದ್ದಿದೆ. ಈ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಪಕ್ಷಕ್ಕೆ ಬಂದ್ರೆ ಸ್ವಾಗತಿಸುವುದಾಗಿ ಹೇಳಿದ್ದಾರೆ.

    ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ದಿಯೋರಾ ಅವರು ಕಾಂಗ್ರೆಸ್‌ (Congress) ತೊರೆದ ವಿಚಾರ ನನ್ನ ಗಮನಕ್ಕೆ ಬಂದಿದೆ. ಒಂದು ವೇಳೆ ಅವರು ಶಿವಸೇನೆಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.

    ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ (Milind Deora) ಇಂದು ಬೆಳಗ್ಗೆ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕಾಂಗ್ರೆಸ್ ಮತ್ತು ಶಿವಸೇನೆ ಬಣದ ನಡುವಿನ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯ ವಿಚಾರದಿಂದ ಅಸಮಾಧಾನಗೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ದಿಯೋರಾ ಅವರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆ ಇದೆ ಎಂದು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ವರದಿಗಳ ಪ್ರಕಾರ, ಮಿಲಿಂದ್‌ ದಿಯೋರಾ ಅವರು ತಮ್ಮ ಬೆಂಬಲಿಗರ ಮಾತುಗಳನ್ನು ಕೇಳುತ್ತಿದ್ದಾರೆ. ಆದರೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದಾಗಿ ತಿಳಿದುಬಂದಿದೆ. ಮಹಾರಾಷ್ಟ್ರದಲ್ಲಿ ಶಿಂಧೆ ಅವರ ಸೇನೆ ಮತ್ತು ಬಿಜೆಪಿ ಆಡಳಿತಾರೂಢ ಮೈತ್ರಿಕೂಟವಾಗಿದೆ.

  • ಡಿ.19 ರಂದು ಇಂಡಿಯಾ ಒಕ್ಕೂಟದ ಸಭೆ: ಜೈರಾಮ್‌ ರಮೇಶ್‌

    ಡಿ.19 ರಂದು ಇಂಡಿಯಾ ಒಕ್ಕೂಟದ ಸಭೆ: ಜೈರಾಮ್‌ ರಮೇಶ್‌

    ನವದೆಹಲಿ: ಇಂಡಿಯಾ ಒಕ್ಕೂಟದ (INDIA Bloc) ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jai Ram Ramesh) ಭಾನುವಾರ ಹೇಳಿದ್ದಾರೆ.

    ಈ ಹಿಂದೆ ಡಿಸೆಂಬರ್ 17 ರಂದು ಸಭೆ ನಿಗದಿಯಾಗಿತ್ತು. ಆದರೆ ಇದೀಗ ಮತ್ತೆ ಈ ಸಭೆಯನ್ನು ಮುಂದೂಡಿದ್ದು, ಇದಕ್ಕೆ ಕಾರಣ ತಿಳಿದುಬಂದಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ಹಿನ್ನೆಲೆಯಲ್ಲಿ ಡಿ.6ರಂದು ನಿಗದಿಯಾಗಿದ್ದ ಸಭೆಯನ್ನು ಡಿ. 17 ಕ್ಕೆ ಮುಂದೂಡಲಾಗಿತ್ತು.

    ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಡಿಸೆಂಬರ್ 6 ರಂದು ಕಾಂಗ್ರೆಸ್ ಸಭೆಯನ್ನು (Comgress Meeting) ಕರೆದಿತ್ತು . ಆದರೆ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪ್ರತಿಪಕ್ಷಗಳ ಸಭೆಯನ್ನು ಘೋಷಿಸಲಾಯಿತು. ಇದನ್ನೂ ಓದಿ: ಸೋದರಳಿಯನನ್ನು ರಾಜಕೀಯ ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಯಾವತಿ

    27 ಮೈತ್ರಿ ಪಕ್ಷಗಳ ಕೊನೆಯ ಸಭೆಯು ಮುಂಬೈನಲ್ಲಿ ನಡೆಯಿತು. ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಐದು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇದನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಪ್ರಮುಖ ಚುನಾವಣಾ ವಿಷಯಗಳ ಚರ್ಚೆಯ ಜೊತೆಗೆ ಸಮನ್ವಯ ಸಮಿತಿಯನ್ನು ರಚಿಸಿತು. ಅಲ್ಲದೇ 2024 ರ ಭಾರತೀಯ ಸಾರ್ವತ್ರಿಕ ಚುನಾವಣೆಗಳನ್ನು ಸಾಧ್ಯವಾದಷ್ಟು ಒಟ್ಟಾಗಿ ಎದುರಿಸಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.

    ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ ಮೈತ್ರಿಕೂಟದ ಹೆಸರು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (ಇಂಡಿಯಾ) ಅನ್ನು ಘೋಷಿಸಲಾಯಿತು. ಮೊದಲ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ಆಯೋಜಿಸಿದ್ದರು . ಈ ವೇಳೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ಪಕ್ಷಗಳು ನಿರ್ಧರಿಸಿದವು.

  • ಸಿಎಂ ಜೊತೆ ಹರಿಪ್ರಸಾದ್ ಜಟಾಪಟಿ – ಮಧು ಬಂಗಾರಪ್ಪ ಜೊತೆ ಮುಸುಕಿನ ಗುದ್ದಾಟ!

    ಸಿಎಂ ಜೊತೆ ಹರಿಪ್ರಸಾದ್ ಜಟಾಪಟಿ – ಮಧು ಬಂಗಾರಪ್ಪ ಜೊತೆ ಮುಸುಕಿನ ಗುದ್ದಾಟ!

    ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ (BK Hariprasad) ನಡುವಿನ ಜಟಾಪಟಿ ಜೋರಾಗಿದೆ. ಈ ಜಟಾಪಟಿ ಮಧ್ಯೆ ಈಡಿಗ ಸಮುದಾಯದ (Ediga Community) ಕಾಂಗ್ರೆಸ್‌ ನಾಯಕರಾದ ಮಧು ಬಂಗಾರಪ್ಪ (Madhu Bangarappa) ಹಾಗೂ  ಹರಿಪ್ರಸಾದ್ ನಡುವೆ ಮುಸುಕಿನ ಗುದ್ದಾಟವೂ ಜೋರಾಗಿ ನಡೆಯುತ್ತಿದೆ.

    ಹಿರಿತನದ ಆಧಾರದಲ್ಲಿ ಬಿ.ಕೆ.ಹರಿಪ್ರಸಾದ್ ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಮಧು ಬಂಗಾರಪ್ಪ ಅವರನ್ನು ಈಡಿಗ ಕೋಟಾದಲ್ಲಿ ಸಚಿವರನ್ನಾಗಿ ಮಾಡಿ ಸಿದ್ದರಾಮಯ್ಯ ಸಡ್ಡು ಹೊಡೆದಿದ್ದರು. ನಾನು ರಾಜ್ಯಸಭಾ ಸದಸ್ಯನಾಗಿ ಹಲವು ರಾಜ್ಯಗಳ ಉಸ್ತುವಾರಿಯಾಗಿ ನೇಮಕವಾಗಿದ್ದರೂ ಹಿರಿತನ ಆದ್ಯತೆಯಲ್ಲಿ ಸಿದ್ದರಾಮಯ್ಯನವರು ಸಚಿವ ಸ್ಥಾನ ತಪ್ಪಿಸಿದರು ಎಂಬ ಆಕ್ರೋಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಸಿಎಂ ಪರವಾಗಿ ಮಧು ಬಂಗಾರಪ್ಪ ಬ್ಯಾಟ್‌ ಬೀಸಿದ್ದರು. ಇದನ್ನೂ ಓದಿ: ಇಂದು ನನ್ನ ಕಣ್ಣು ತೆರೆಯಿತು: ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

     

    ಮಧು ಬಂಗಾರಪ್ಪ ಸಿಎಂ ಪರವಾಗಿ ಪ್ರತಿಕ್ರಿಯಿಸಿದ ಬಳಿಕ ಹರಿಪ್ರಸಾದ್‌ ಜೊತೆಗಿನ ಮುಸುಕಿನ ಗುದ್ದಾಟ ತೆರೆಯ ಮೇಲೆ ಪ್ರಕಟವಾಗಿತ್ತು. ಈಗ ಮಧು ಬಂಗಾರಪ್ಪ ಇನ್ನೊಂದು ಹೆಜ್ಜೆ ಮುಂದೆ ಹೋಗಿ ತಮ್ಮ ಸಮಾಜದ ಕಾರ್ಯಕ್ರಮಕ್ಕೆ ಸಿಎಂ ಅವರನ್ನು ಆಹ್ವಾನಿಸಿ ಹರಿಪ್ರಸಾದ್‌ಗೆ ಕೌಂಟರ್‌ ಕೊಟ್ಟಿದ್ದಾರೆ.

    ಭಾನುವಾರ ಅರಮನೆ ಮೈದಾನದಲ್ಲಿ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಮತ್ತು ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತಿ ಸಮಾವೇಶ ಆಯೋಜನೆಗೊಂಡಿದ್ದು, ಈ ಈಡಿಗ ಸಮಾವೇಶಕ್ಕೆ ಸಿದ್ದರಾಮಯ್ಯರನ್ನು ಆಹ್ವಾನಿಸಿ ಮಧು ಬಂಗಾರಪ್ಪ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈಡಿಗ ಸಮುದಾಯದ ನಾಯಕರಾಗಿರುವ ಹರಿಪ್ರಸಾದ್‌ ಈ ಸಮಾವೇಶಕ್ಕೆ ಹೋಗದೇ ಅಂತರ ಕಾಯ್ದುಕೊಂಡಿದ್ದಾರೆ. ಸಿದ್ದರಾಮಯ್ಯ  ಈಡಿಗ ಸಮುದಾಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹರಿಪ್ರಸಾದ್‌ಗೆ ಠಕ್ಕರ್‌ ನೀಡಿದ್ದಾರೆ.

     

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಶನಿವಾರ ಮಾತನಾಡಿದ್ದ ಹರಿಪ್ರಸಾದ್‌, ನಾನು ಬಾಲ್ ಇದ್ದಂತೆ. ತುಳಿದಷ್ಟು ಮೇಲೆ ಪುಟ್ಟಿದೇಳುತ್ತೇನೆ ಎಂದು ಹೇಳುವ ಮೂಲಕ ಸಿಎಂಗೆ ಟಾಂಗ್‌ ನೀಡಿದ್ದರು.

    ಬೆಂಗಳೂರಲ್ಲಿ ಈಡಿಗ ಸಮಾವೇಶ ನಡೆಯುತ್ತಿದೆ. ಇದು ರಾಜಕೀಯ ಪ್ರೇರಿತ ಮತ್ತು ರಾಜಕೀಯ ಕುತಂತ್ರದಿಂದ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶಕ್ಕೆ ನಾನು ಹೋಗುತ್ತಿಲ್ಲ. ನಮ್ಮ ಸಮಾಜಕ್ಕೆ ಒಳ್ಳೆಯದಾಗುವುದಿದ್ದರೆ ನಾನು ಪಾಲ್ಗೊಳ್ಳುತ್ತಿದ್ದೆ. ರಾಜಕೀಯ ಪ್ರೇರಿತ ಸಮಾವೇಶಗಳಲ್ಲಿ ನಾನು ಭಾಗಿಯಾಗುವುದಿಲ್ಲ. ಸಮಾವೇಶದಲ್ಲಿ ಸಂಘದವರು ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ ಎಂದು ಹೇಳಿ ಕಾರ್ಯಕ್ರಮ ಸಂಘಟಕರ ವಿರುದ್ಧವೂ ಹರಿಹಾಯ್ದಿದ್ದರು.

     

  • ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ

    ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ

    ಛತ್ತೀಸ್‌ಗಢ: ಪಂಚರಾಜ್ಯಗಳ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು (Exit Poll) ಪ್ರಕಟವಾಗುತ್ತಿದ್ದು ಈ ಬಾರಿ ಛತ್ತೀಸ್‌ಗಢದಲ್ಲಿ (Chhattisgarh) ಸಿಎಂ ಭೂಪೇಶ್‌ ಬಘೇಲ್‌ (Bhupesh Baghel) ನೇತೃತ್ವದ ಕಾಂಗ್ರೆಸ್‌ (Congress) ಸರಳ ಬಹುಮತ ಪಡೆಯುವ ಸಾಧ್ಯತೆಯಿದೆ.

    ಸಮೀಕ್ಷೆಗಳು ಬಿಜೆಪಿ (BJP) ಮತ್ತು ಕಾಂಗ್ರೆಸ್‌ ಮಧ್ಯೆ ಬಿರುಸಿನ ಸ್ಪರ್ಧೆ ನಡೆಯಲಿದೆ ಎಂದು ಭವಿಷ್ಯ ನುಡಿದಿವೆ. ಒಟ್ಟು 90 ಕ್ಷೇತ್ರಗಳಿರುವ ಇಲ್ಲಿ ಸರಳ ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ.  ಇದನ್ನೂ ಓದಿ: ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ

     

    ಯಾವ ಸಮೀಕ್ಷೆಯಲ್ಲಿ ಎಷ್ಟು ಸ್ಥಾನ?
    ಎಬಿಪಿ ನ್ಯೂಸ್‌: ಬಿಜೆಪಿ 36-48, ಕಾಂಗ್ರೆಸ್‌ 41-53
    ದೈನಿಕ್‌ ಭಾಸ್ಕರ್‌ : ಬಿಜೆಪಿ 35-45, ಕಾಂಗ್ರೆಸ್‌ 46-55
    ಇಂಡಿಯಾ ಟುಡೇ: ಬಿಜೆಪಿ 36-46, ಕಾಂಗ್ರೆಸ್‌ 40-50
    ಇಂಡಿಯಾ ಟಿವಿ: ಬಿಜೆಪಿ 30-40, ಕಾಂಗ್ರೆಸ್‌ 46-56

    2018ರ ಚುನಾವಣೆಯಲ್ಲಿ ಕಾಂಗ್ರೆಸ್‌ 68, ಬಿಜೆಪಿ 15, ಬಿಎಸ್‌ಪಿ 2, ಜೆಸಿಸಿ 5 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸಿದ ಬಳಿಕ ಭೂಪೇಶ್ ಬಘೇಲ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಚುನಾವಣಾ ಸಮಯದಲ್ಲಿ ಮಹದೇವ್‌ ಬೆಟ್ಟಿಂಗ್‌ ಆಪ್‌ ಭಾರೀ ಸದ್ದು ಮಾಡಿತ್ತು. ಈ ಹಗರಣದಿಂದ ಭೂಪೇಶ್ ಬಘೇಲ್ ಅವರಿಗೆ ಹಿನ್ನಡೆಯಾಗಬಹುದು ಎಂದು ವಿಶ್ಲೇಷಿಸಲಾಗಿತ್ತು. ಆದರೆ ಬಘೇಲ್‌ ಸರ್ಕಾರದ ಮೇಲೆ ಈ ಹಗರಣ ಪರಿಣಾಮ ಬೀರಿಲ್ಲ ಎಂದು ಸಮೀಕ್ಷೆಗಳು ಹೇಳುತ್ತಿವೆ. ಇದನ್ನೂ ಓದಿ: ತೆಲಂಗಾಣದಲ್ಲಿ ಬಿಆರ್‌ಎಸ್‌-ಕಾಂಗ್ರೆಸ್‌ ನಡುವೆ ಟಫ್‌ ಫೈಟ್‌

     

  • ಎಸ್‍ಇಪಿ ಜಾರಿಗೆ ಸರ್ಕಾರದ ಸಿದ್ಧತೆ – ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ

    ಎಸ್‍ಇಪಿ ಜಾರಿಗೆ ಸರ್ಕಾರದ ಸಿದ್ಧತೆ – ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ

    ಬೆಂಗಳೂರು: ಕಾಂಗ್ರೆಸ್‍ನ (Congres) ಐದು ಗ್ಯಾರಂಟಿ ಬಳಿಕ ಪ್ರಣಾಳಿಕೆಯಲ್ಲಿರುವ ಮತ್ತೊಂದು ಕಾರ್ಯಕ್ರಮ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ಶುರು ಮಾಡಿದೆ. ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಪಡಿಸಲು ಸರ್ಕಾರ ತಯಾರಿ ನಡೆಸಿದೆ.

    ಎನ್‍ಇಪಿ ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲು ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಎಸ್‍ಇಪಿ (SEP) ಜಾರಿ ಬಗ್ಗೆ ಈಗಾಗಲೇ ಹಲವು ಹಂತದ ಸಭೆಗಳನ್ನು ಉನ್ನತ ಶಿಕ್ಷಣ ಸಚಿವರೊಂದಿಗೆ ನಡೆಸಲಾಗಿದೆ. ಅದಕ್ಕಾಗಿ ಹಂತ ಹಂತವಾಗಿ ಎನ್‍ಇಪಿ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ವರ್ಷದಿಂದಲೇ ಎನ್‍ಇಪಿ ರದ್ದು ಮಾಡಿ ಎಸ್‍ಇಪಿ ಜಾರಿಗೆ ಸರ್ಕಾರದ ಚಿಂತನೆ ನಡೆಸಿದೆ. ಇದನ್ನೂ ಓದಿ: ಹಂಪಿ ಬೀದಿ ಬದಿ ವ್ಯಾಪಾರಿಯ ಮಗ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ 3ನೇ ರ‍್ಯಾಂಕ್

    ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‍ಇಪಿ ಅಡಿ ವಿದ್ಯಾರ್ಥಿಗಳನ್ನ ದಾಖಲಾತಿ ಮಾಡಿಕೊಳ್ಳುವುದನ್ನು ಕೈಬಿಡಲಾಗುತ್ತದೆ. ಈಗಾಗಲೇ ಅದರ ಅಡಿ ದಾಖಲಾದ ವಿದ್ಯಾರ್ಥಿಗಳ ಕೋರ್ಸ್ ಮುಕ್ತಾಯಕ್ಕೆ ಕ್ರಮವಹಿಸಲಾಗುತ್ತದೆ. ಎಸ್‍ಇಪಿ ಜಾರಿಗೆ ನೀತಿ ನಿಯಮಗಳು, ಪಠ್ಯಕ್ರಮ ಸೇರಿದಂತೆ ಶಿಕ್ಷಣ ನೀತಿ ರಚನೆಗೆ ತಜ್ಞರ ಸಮಿತಿ ರಚನೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಶೀಘ್ರವೇ ತಜ್ಞರ ರಚನೆ ಮಾಡಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ.

    ಬಹುತೇಕ ರಾಜ್ಯ ಸರ್ಕಾರದ ಅಧೀನದ ವಿವಿಗಳ ಅಭಿಪ್ರಾಯ ಪಡೆದಿರುವ ಸರ್ಕಾರ, ತಜ್ಞರ ಸಮಿತಿಯ ವರದಿ ಪಡೆದ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಕ್ರಮಕ್ಕೆ ಮಂದಾಗಲಿದೆ. ಎನ್‍ಇಪಿಯ ಕೆಲವು ಅಂಶಗಳೊಂದಿಗೆ ತಜ್ಞರ ಸಮಿತಿಯಿಂದ ಸರ್ಕಾರವೇ ವಿಶೇಷ ಶಿಕ್ಷಣ ನೀತಿ ರೂಪಿಸಲಿದೆ. ಈ ಯೋಜನೆ ಫಲಿಸಿದರೆ 2024-25ನೇ ಸಾಲಿನಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆ: ಟೂರ್ ಕಳಿಸಿದ ಆಕಾಂಕ್ಷಿಗೆ ಕೈ ಕೊಟ್ಟ ಸದಸ್ಯರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್

    ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಗಂಭೀರ ಆರೋಪ ಮಾಡಿದ್ದಾರೆ.

    ಹೌದು. ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಾಗಾದರೆ ಮುಖ್ಯಮಂತ್ರಿಗಿಂತ ಪವರ್ ಫುಲ್ ಆದ್ರಾ ಆ ಮಿನಿಸ್ಟರ್ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಸರ್ಕಾರದ ವಿರುದ್ಧ ಕುಮಾರಸ್ವಾಮಿ ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಸಚಿವರೊಬ್ಬರು ಅಧಿಕಾರ ತೆಗೆದುಕೊಳ್ಳದಂತೆ ಹೇಳಿದ್ದಾರೆ. ಸಿಎಂ ಆದೇಶ ಮಾಡಿದರೂ ಅಧಿಕಾರ ತೆಗೆದುಕೊಳ್ಳಬೇಡಿ ಎಂದಿದ್ದಾರೆ. ಆ ಸಚಿವರು ಸದ್ಯ ವಿದೇಶದಲ್ಲಿ ಇದ್ದಾರೆ ಅಂತ ಕುಮಾರಸ್ವಾಮಿ ಆರೋಪಿಸಿದ್ದಾರೆ.

    ಹಾಗಾದ್ರೆ ಎಷ್ಟು ಹಣ ಕೊಟ್ಟು ಬಂದ್ರು ಈ ಅಧಿಕಾರಿ..?. ಈಗ ಜ್ಯೋತಿ ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳ್ತಾರೆ ಇವರು ಎಂದು ಹೆಚ್‍ಡಿಕೆ ಅವರು ಸರ್ಕಾರವನ್ನ ಖಾರವಾಗಿ ಪ್ರಶ್ನಿಸಿದ್ದಾರೆ.