Tag: Congress activists

  • ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಮುಖಂಡನಿಗೆ ಥಳಿಸಿದ ಕೈ ಕಾರ್ಯಕರ್ತರು

    ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಮುಖಂಡನಿಗೆ ಥಳಿಸಿದ ಕೈ ಕಾರ್ಯಕರ್ತರು

    ನವದೆಹಲಿ: ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್ ಪವಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದಕ್ಕಾಗಿ ಬಿಜೆಪಿ ವಕ್ತಾರ ವಿನಾಯಕ್ ಅಂಬೇಕರ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋವನ್ನು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್ ಅಂಬೇಕರ್ ಅವರ ಮೇಲೆ ಎನ್‍ಸಿಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಬಿಜೆಪಿಯವರ ವಿರುದ್ಧ ನಡೆಸಿರುವ ಈ ದಾಳಿಯನ್ನು ನಾನು ಖಂಡಿಸುತ್ತೇನೆ. ಈ ಎನ್‍ಸಿಪಿ ಗೂಂಡಾಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಸಿಎಂ ಕಾರ್ಯಕ್ರಮಕ್ಕೂ ತಟ್ಟಿತು ಲೋಡ್ ಶೆಡ್ಡಿಂಗ್ ಬಿಸಿ

    ವೀಡಿಯೋದಲ್ಲಿ ಚೇರ್ ಮೇಲೆ ಅಂಬೇಕರ್ ಅವರೊಂದಿಗೆ ಕೆಲವರು ವಾಗ್ವಾದ ನಡೆಸುತ್ತಿರುವಾಗ, ವ್ಯಕ್ತಿಯೋರ್ವ ಕಪಾಳಮೋಕ್ಷ ಮಾಡಿರುವುದನ್ನು ಕಾಣಬಹುದಾಗಿದೆ. ಶನಿವಾರ ಶರದ್ ಪವಾರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಪೊಲೀಸರು ಬಂಧಿಸಿದ್ದು, ಮೇ 18ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದನ್ನೂ ಓದಿ: ಬಾಲಕಿಯ ಮೇಲೆ ಹರಿದ ಕಾರು- ಆಕ್ರೋಶಗೊಂಡು ಚಾಲಕನಿಗೆ ಬೆಂಕಿ ಹಚ್ಚಿದ ಜನ

    ನರಕ ಕಾಯುತ್ತಿದೆ ಮತ್ತು ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ ಎಂದು ಪೋಸ್ಟ್‌ ಮಾಡಲಾಗಿದೆ.  ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಹಂಚಿಕೊಂಡಿರುವ ಪವಾರ್ ಅವರ ಹೆಸರನ್ನು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿತ್ತು.

  • ಡಿಕೆಶಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಹೈಡ್ರಾಮಾ

    ಡಿಕೆಶಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಹೈಡ್ರಾಮಾ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯನ್ನು ವಿರೋಧಿ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಮನೆಯ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.

    ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಮನೆಯ ಮುಂದೆ ಹೈಡ್ರಾಮಾ ಮಾಡಿದ್ದಾರೆ. ಬಿಜೆಪಿ ಸರ್ಕಾರ ರಾಜಕೀಯವಾಗಿ ಸಿಬಿಐ ದಾಳಿ ಮಾಡಿಸುತ್ತಿದೆ. ಇದನ್ನು ನೀವು ನಿಲ್ಲಿಸಬೇಕು. ಬಿಜೆಪಿ ಈ ರೀತಿ ಪದೇ ಪದೇ ರಾಜಕೀಯ ಪ್ರೇರಿತ ದಾಳಿಯನ್ನು ಮಾಡಿಸುತ್ತಿದೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ಡಿಕೆಶಿ ಮನೆಯ ಮುಂದೆ ಪೊಲೀಸರನ್ನು ತಳ್ಳುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?

    ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುವ ಪ್ರಯತ್ನವನ್ನು ಮಾಡಿದ್ದಾರೆ. ಕೊನೆಗೆ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದವರನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದಾರೆ. ಇತ್ತ ಇಂದು ವಿವಿಧ ಕಾಯ್ದೆಗಳ ಜಾರಿ ಖಂಡಿಸಿ ಮತ್ತು ಹತ್ರಾಸ್ ಘಟನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಇತ್ತು. ಆದರೆ ಇದೀಗ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಡಿಕೆಶಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಡಿಕೆಶಿ ಮೇಲೆ ಸಿಬಿಐ ದಾಳಿ ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮೌರ್ಯ ಸರ್ಕಲ್ ಬಳಿಯ ಯೂತ್ ಕಾಂಗ್ರೆಸ್ ಬಿಲ್ಡಿಂಗ್ ಕಚೇರಿ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಹಠಾವೊ ಎಂದು ಘೋಷಣೆ ಕೂಗುತ್ತಾ ಸಿಬಿಐ ದಾಳಿಯನ್ನು ಖಂಡಿಸುತ್ತಿದ್ದಾರೆ. ಸೇಡಿನ ರಾಜಕಾರಣ ಮಾಡುತ್ತಿರುವ ಪ್ರಧಾನಿ ಮತ್ತು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ. ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಹರಿಪ್ರಸಾದ್, ಎಚ್.ಎಂ.ರೇವಣ್ಣ, ಉಗ್ರಪ್ಪ ಮತ್ತು ಚಂದ್ರಪ್ಪ ಆಗಮಿಸಿದ್ದಾರೆ.

    ಇತ್ತ ಕಾಂಗ್ರೆಸ್ ಭವನದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಬೆಳವಣಿಗೆ ಸಹಿಸದೇ ಇರೋರು ಈ ರೀತಿ ಮಾಡುತ್ತಿದ್ದಾರೆ. ಎಲ್ಲರ ಬಳಿಯೂ ಆಸ್ತಿ ಇದ್ದೇ ಇರುತ್ತೆ. ಆದರೆ ವಿರೋಧ ಪಕ್ಷದವರು ಹೀಗೆ ಮಾಡಿಸುತ್ತಿದ್ದಾರೆ. ನಾವು ಡಿಕೆಶಿಗೆ ಧೈರ್ಯ ತುಂಬಲು ಬಂದಿದ್ದೇವೆ ಎಂದು ಡಿಕೆಶಿ ಅಭಿಮಾನಿಗಳು ಹೇಳಿದ್ದಾರೆ.

  • ತಲ್ವಾರ್​ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತೆ..!

    ತಲ್ವಾರ್​ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತೆ..!

    ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಲ್ವಾರಿನಿಂದ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿ ಇದೀಗ ವಿವಾದಕ್ಕೀಡಾಗಿದ್ದಾರೆ..

    ಈ ಘಟನೆ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಇಸ್ಲಾಂಪುರದಲ್ಲಿ ನಡೆದಿದೆ. ಅಮೀರಾ ದೇಸಾಯಿ ತಲ್ವಾರ್ ನಿಂದ ಕೇಕ್ ಕತ್ತರಿಸಿದ ಕಾಂಗ್ರೆಸ್ ಕಾರ್ಯಕರ್ತೆ.

    ಅಮೀರಾ ಹುಟ್ಟುಹಬ್ಬವಿದ್ದ ಕಾರಣ ಶುಕ್ರವಾರ ರಾತ್ರಿ ತಲ್ವಾರ್ ಮುಖಾಂತರ ಕೇಕ್ ಕಟ್ ಮಾಡಿ ತಮ್ಮ ಕಾರ್ಯಕರ್ತರೊಂದಿಗೆ ಬರ್ತ್ ಡೇ ಆಚರಣೆ ಮಾಡಿದ್ದಾರೆ. ಇದೀಗ ಕಾರ್ಯಕರ್ತೆಯ ಹುಟ್ಟುಹಬ್ಬ ಆಚರಣೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಯಮಕನಮರಡಿ ಫೋಲೀಸ್ ಠಾಣಾ ವ್ಯಾಪ್ಯಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾ ಬಗ್ಗೆ ಹೇಳಿಕೆ ಕೊಟ್ಟಿದ್ದ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್

    ಸುಮಲತಾ ಬಗ್ಗೆ ಹೇಳಿಕೆ ಕೊಟ್ಟಿದ್ದ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್

    ಮಂಡ್ಯ: ‘ಸುಮಲತಾ ಮಂಡ್ಯ ಗೌಡ್ತಿ ಅಲ್ಲ’ ಎಂಬ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

    ಹಿರಿಯ ನಟನ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೆ ಖಂಡಿಸಿ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಹರಿಹಾಯ್ದಿದಿದ್ದು, ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಶ್ರೀಕಂಠೇಗೌಡ ಮನೆಗೆ ಮುತ್ತಿಗೆ ಹಾಕುವ ಬೆದರಿಕೆ ಕೂಡ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯದಲ್ಲಿರುವ ಕೆ.ಟಿ.ಶ್ರೀಕಂಠೇಗೌಡ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ

    ಶ್ರೀಕಂಠೇಗೌಡ ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರ ಬಂದೋಬಸ್ತ್ ನೀಡಲಾಗಿದೆ. ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಕೆ.ಟಿ.ಶ್ರೀಕಂಠೇಗೌಡ ಮನೆಗೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲನೆ ಮಾಡಿದ್ದಾರೆ. ಇತ್ತ ಶ್ರೀಕಂಠೇಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು, ಕಾಲಲ್ಲಿ ತುಳಿದು, ಚಿತ್ರಕ್ಕೆ ಬೆಂಕಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ನಟಿ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ, ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಮೂಲತಃ ಆಂಧ್ರದವರಾದ ಅವರು ಮಂಡ್ಯದಿಂದ ಹೇಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಬದುಕಿದ್ದಾಗ ರಾಜಕಾರಣ ನನಗೆ ಸಾಕು. ನನ್ನ ಮನೆಗೆ ರಾಜಕಾರಣ ಬೇಡ ಅಂತ ಸ್ಪಷ್ಟವಾಗಿ ಹೇಳಿದ್ದರು. ಈ ಹಿಂದೆ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾರನ್ನು ಕಣಕ್ಕಿಳಿಸಿ ಅವರ ಕೆಲಸ ನೋಡಿ ಆಗಿದೆ. ಎಷ್ಟರ ಮಟ್ಟಕ್ಕೆ ನಮ್ಮ ಕೆಲಸ ಮಾಡಿಕೊಟ್ಟರು ಅಂತ ಗೊತ್ತು ಎಂದು ವ್ಯಂಗ್ಯವಾಡಿದ್ದರು. ನಟಿ ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ, ಅವರ ಮೂಲ ಆಂಧ್ರಪ್ರದೇಶ ಎಂದು ವ್ಯಂಗ್ಯವಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಕಾರ್ಯಕರ್ತ ನಾಪತ್ತೆ-ಸಿಸಿಟಿವಿಯಲ್ಲಿ ಸೆರೆಯಾಯ್ತು ಹೈ ಡ್ರಾಮಾ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಕಾರ್ಯಕರ್ತ ನಾಪತ್ತೆ-ಸಿಸಿಟಿವಿಯಲ್ಲಿ ಸೆರೆಯಾಯ್ತು ಹೈ ಡ್ರಾಮಾ

    ಬೆಂಗಳೂರು: ಬ್ಯಾಟರಾಯನಪುರದ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತ ಭರತ್ ಭಾನುವಾರ ಕಾಂಗ್ರಸ್ ಪಕ್ಷಕ್ಕೆ ಸೇರಿದ್ದು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಈ ವೇಳೆ ಭರತ್ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಅಂತಾನೂ ಹೇಳಲಾಗುತ್ತಿತ್ತು. ಆದ್ರೆ ಸ್ವತಃ ಭರತ್ ಕಾರಿಗೆ ಬೆಂಕಿ ಹಚ್ಚುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

    ಸೋಮವಾರ ಜಕ್ಕೂರಿನ ಕಾರ್ಪೋರೆಟರ್ ಮುನಿಂದ್ರ ಅವ್ರ ಮನೆಯ ಮುಂದೆ ತನ್ನ ಕಾರನಲ್ಲಿ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭರತ್ ಓಡಿಹೋಗಿದ್ದಾರೆ. ಇಷ್ಟೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಿಜೆಪಿಯಿಂದ ಕಾಂಗ್ರಸ್ ಪಕ್ಷಕ್ಕೆ ಸೇರಿದ್ದಕ್ಕಾಗಿ ಬಿಜೆಪಿ ಅವ್ರು ಈ ರೀತಿ ಮಾಡಿದ್ದಾರೆ ಅಂತಾ ಸುಳ್ಳು ಸುದ್ದಿ ಹಬ್ಬಿಸಲು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಅದ್ರೆ ಅಲ್ಲಿದ್ದ ಸಿಸಿಟಿವಿ ಭರತ್ ಕುತಂತ್ರ ಬಯಲಾಗಿದೆ.

    ಇದೇ ರೀತಿ ಜನರಿಗೆ ಸುಳ್ಳು ಹೇಳಿಕೊಂಡೆ ಕಾಂಗ್ರೆಸ್ ನವರು ಇಲ್ಲಿ ಗೆದ್ದಿರೋದು. ಅಲಿ ಸಿಸಿಟಿವಿ ಇಲ್ಲ ಅಂದಿದ್ರೆ ನಮ್ಮ ಮೇಲೆ ಕಾಂಗ್ರಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ರು. ನಾವೇ ಪೊಲೀಸ್ ಕಂಪ್ಲೇಂಟ್ ಕೊಡಲಾಗಿದ್ದು, ಘಟನೆ ಬಳಿಕ ಭರತ್ ನಾಪತ್ತೆಯಾಗಿದ್ದನೆ.. ಇದು ಕಾಂಗ್ರೆಸ್‍ನವ್ರ ದೊಡ್ಡ ಕುತಂತ್ರ ಅಂತಾ ಬಿಜೆಪಿಯ ಅಭ್ಯರ್ಥಿ ಎ ರವಿ ಆರೋಪಿಸಿದ್ದಾರೆ.

    https://youtu.be/zuqIq7lIiaM