Tag: Congress Candidates

  • ʻಕೈʼ ಹಿಡಿಯುತ್ತಾರಾ ಕುಸ್ತಿಪಟು ವಿನೇಶ್, ಬಜರಂಗ್ ಪುನಿಯಾ – ತೀವ್ರ ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ಭೇಟಿ

    ʻಕೈʼ ಹಿಡಿಯುತ್ತಾರಾ ಕುಸ್ತಿಪಟು ವಿನೇಶ್, ಬಜರಂಗ್ ಪುನಿಯಾ – ತೀವ್ರ ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ಭೇಟಿ

    – ಹರಿಯಾಣ ಚುನಾವಣೆಗೆ ಕಾಂಗ್ರೆಸ್‌ನಿಂದ ವಿನೇಶ್‌, ಬಜರಂಗ್‌ ಸ್ಪರ್ಧೆ ಬಹುತೇಕ ಫಿಕ್ಸ್‌!

    ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Polls) ಭರ್ಜರಿ ತಯಾರಿ ನಡೆಯುತ್ತಿರುವ ಹೊತ್ತಲ್ಲೇ ಖ್ಯಾತ ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾಗಿದ್ದಾರೆ. ಈ ಬೆನ್ನಲ್ಲೇ ಚುನಾವಣೆ ಸ್ಫರ್ಧೆ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ.

    ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬೆನ್ನಲ್ಲೇ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನೂ ಭೇಟಿಯಾಗಿದ್ದು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಆದರೆ ಪುನಿಯಾ ಮತ್ತು ಫೋಗಟ್ ಅವರನ್ನು ಚುನಾವಣಾ ಕಣದಲ್ಲಿ ಕಣಕ್ಕಿಳಿಸಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಕಾಂಗ್ರೆಸ್ ಮೌನವಹಿಸಿದ್ದು ಗುರುವಾರದ ವೇಳೆಗೆ ಸ್ಪಷ್ಟತೆ ಸಿಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

    ವಿನೇಶ್‌ ಫೋಗಟ್ (Vinesh Phogat) ಅವರು ಜನನಾಯಕ್ ಜನತಾ ಪಕ್ಷದ ಅಮರ್‌ಜೀತ್ ಧಂಡಾ ವಿರುದ್ಧ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಬಜರಂಗ್‌ ಪುನಿಯಾ (Bajrang Punia) ಅವರು ಸ್ಪರ್ಧೆ ಮಾಡಲಿರುವ ಕ್ಷೇತ್ರದ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ. ಈ ಬಗ್ಗೆ ಕುಸ್ತಿಪಟುಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ವಿನೇಶ್‌ ಫೋಗಟ್‌ ಅರ್ಜಿ ವಜಾ – ಸಿಗಲ್ಲ ಬೆಳ್ಳಿ ಪದಕ

    ಸದ್ಯ ಕಾಂಗ್ರೆಸ್ (Congress) ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ರಾಹುಲ್ ಗಾಂಧಿಯವರ ಚಿತ್ರವನ್ನು ಪೋಸ್ಟ್ ಮಾಡಿದೆ. ಪುನಿಯಾ ಮತ್ತು ಫೋಗಟ್ ಅವರು 2023 ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಆಗಿನ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಮಾಡಿದ್ದರು. ಬ್ರಿಜ್‌ ಭೂಷಣ್‌ ವಜಾಕ್ಕೆ ಆಗ್ರಹಿಸಿ ದೆಹಲಿಯ ಜಂತರ್‌-ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

    ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದವರೆಗೆ 90 ಸ್ಥಾನಗಳ ಪೈಕಿ 66 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದೆ. ಆದರೆ ಇನ್ನೂ ಹೆಸರುಗಳನ್ನು ಪ್ರಕಟಿಸಿಲ್ಲ. ಇನ್ನೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 5 ರಂದು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

    ಇತ್ತೀಚೆಗಷ್ಟೇ ಹರಿಯಾಣ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ (Deepender S Hooda) ಫೋಗಟ್ ಕುಟುಂಬವನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ವಿನೇಶ್ ಶೀಘ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ವಿನೇಶ್ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹೂಡಾ, ವಿನೇಶ್ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತು ಕಾಲ್ಪನಿಕ. ಕ್ರೀಡಾಪಟುಗಳು ಇಡೀ ದೇಶಕ್ಕೆ ಸೇರಿದವರು. ಅವರು ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ಗೊತ್ತಾಗುತ್ತದೆ. ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಅಂತ ಹೇಳಿದ್ದರು. ಇದನ್ನೂ ಓದಿ: ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ ನನ್ನನ್ನು ಕ್ಷಮಿಸು: ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

  • ವಿಧಾನ ಪರಿಷತ್ ಚುನಾವಣೆ – ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ಟಿಕೆಟ್‌

    ವಿಧಾನ ಪರಿಷತ್ ಚುನಾವಣೆ – ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ಟಿಕೆಟ್‌

    ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ (Vidhan Parishad Elections) ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

    ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ ಇಂದೇ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇದನ್ನೂ ಓದಿ: ನಮ್ಮ ಕಂಪನಿ ಹೆಸರಲ್ಲಿ ಅಕ್ರಮ ಖಾತೆ ತೆರೆದು ಹಣ ವರ್ಗಾವಣೆ: ಹ್ಯಾಪಿಯೆಸ್ಟ್‌ ಮೈಂಡ್ಸ್‌ ಟೆಕ್ನಾಲಜಿ ಕಂಪನಿ ಸ್ಪಷ್ಟನೆ

    ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

    ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌ 

  • ಚುನಾವಣಾ ಪ್ರಚಾರದ ವೇಳೆ ನಮಾಜ್ ಕೂಗು ಕೇಳಿ ಭಾಷಣ ನಿಲ್ಲಿಸಿದ ರಾಹುಲ್ ಗಾಂಧಿ

    ಚುನಾವಣಾ ಪ್ರಚಾರದ ವೇಳೆ ನಮಾಜ್ ಕೂಗು ಕೇಳಿ ಭಾಷಣ ನಿಲ್ಲಿಸಿದ ರಾಹುಲ್ ಗಾಂಧಿ

    ತುಮಕೂರು: ಜಿಲ್ಲೆಯ ತುರುವೆರೆಗೆ ಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ (Congress Candidate) ಬೆಮೆಲ್ ಕಾಂತರಾಜು ಪರ ರಾಹುಲ್ ಗಾಂಧಿ (Rahul Gandhi) ಅಬ್ಬರದ ಪ್ರಚಾರ ನಡೆಸಿದರು. ಬಳಿಕ ಇಲ್ಲಿನ ಗುರುಭವನ ಮೈದಾನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದರು.

    ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದ ವೇಳೆ ಸಮೀಪದಲ್ಲೇ ಇದ್ದ ಮಸೀದಿಯಲ್ಲಿ ನಮಾಜ್ (Namazz) ಮಾಡುತ್ತಿದ್ದರು. ಈ ವೇಳೆ ನಮಾಜ್‌ ಕೂಗು ಕೇಳಿಬರುತ್ತಿದ್ದಂತೆ ತಮ್ಮ ಭಾಷಣಕ್ಕೆ ಬ್ರೇಕ್ ಹಾಕಿದ್ದ ರಾಹುಲ್ ನಮಾಜ್ ಮುಗಿದ ಬಳಿಕ ಭಾಷಣ ಆರಂಭಿಸಿದರು. ಇದನ್ನೂ ಓದಿ: ಹಾಲಿ ಸಚಿವರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ತ್ರಿಕೋನ ಪೈಪೋಟಿ

    ಕಳೆದ ಬಾರಿ ನೀವು ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಲಿಲ್ಲ. ಆದ್ರೆ ಅವರು ಶಾಸಕರನ್ನ ಖರೀದಿ ಮಾಡಿ ಅಧಿಕಾರಕ್ಕೆ ಬಂದರು, ಈ ಮೂಲಕ ಲೋಕ ತಂತ್ರವನ್ನೇ ಹಾಳು ಮಾಡಿದರು. ಕಳೆದ 3 ವರ್ಷಗಳಲ್ಲಿ ಬಿಜೆಪಿ ಭ್ರಷ್ಟಾಚಾರ ಮಾಡಿದೆ. ಸಣ್ಣ ಸಣ್ಣ ಕೆಲಸಕ್ಕೂ 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಜನರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯಕ್ಕೆ ಹಣ ನೀಡುವ ಬದಲು ನಿಮ್ಮ ಜೇಬಿಗೆ ಕತ್ತರಿ ಹಾಕಿದ್ದಾರೆ. ಇದು ಪ್ರಧಾನ ಮಂತ್ರಿಗೂ ಗೊತ್ತು ಎಂದು ಕುಟುಕಿದರು. ಇದನ್ನೂ ಓದಿ: ಪ್ರಚಾರದ ನೆಪದಲ್ಲಿ ಮಹಿಳೆಯರನ್ನ ಮಂಚಕ್ಕೆ ಕರೆದ ಆರೋಪ – JDS ಅಭ್ಯರ್ಥಿ ವಿರುದ್ಧ ಕ್ರಮಕ್ಕೆ ಆಗ್ರಹ

    ಬಿಜೆಪಿ ಶಾಸಕರೊಬ್ಬರೇ `ಈಗಿನ ಸಿಎಂ 2 ಸಾವಿರ ಕೋಟಿ ಕೊಟ್ಟು ಸಿಎಂ ಆಗಿದ್ದಾರೆ’ ಅಂತಾ ಸಾರ್ವಜನಿಕವಾಗಿ ಹೇಳಿದ್ದಾರೆ. ಕರ್ನಾಟಕದ ಜನರ ಮತ ಕೇಳಲು ಬರುವ ನೀವು, ಭ್ರಷ್ಟಚಾರ ತಡೆಯಲು ನೀವು ಏನು ಕ್ರಮ ಕೈಗೊಂಡಿದ್ದೀರಾ ಎಂದು ಇಲ್ಲಿನ ಜನಕ್ಕೆ ಹೇಳಿ, ಕರ್ನಾಟಕದ ಜನತೆ ಕಟ್ಟಿದ ಟ್ಯಾಕ್ಸ್ ಹಣವನ್ನು ವಾಪಸ್ ಕೊಡಲಿಲ್ಲ ಅನ್ನೋದನ್ನು ಹೇಳಿ.. ಗೋವಾ – ಕರ್ನಾಟಕ ನಡುವಿನ ನೀರಿನ ಸಂಘರ್ಷಕ್ಕೆ ಏನು ಮಾಡಿದ್ರಿ ಅಂತಾ ಹೇಳಿ.. ರಾಜ್ಯದಲ್ಲಿ ಕಳೆದ 3 ವರ್ಷ ನಿಮ್ಮ ಸರ್ಕಾರ ಏನು ಮಾಡಿದೆ ಅಂತ ಹೇಳಿ… ಏಕೆಂದರೆ ಚುನಾವಣೆ ನಡೆಯುತ್ತಿರುವುದು ನಿಮಗೋಸ್ಕರ ಅಲ್ಲ, ಕರ್ನಾಟಕದ ಭವಿಷ್ಯಕ್ಕಾಗಿ ಎಂದು ಹೇಳಿದ್ದಾರೆ.

  • 130 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ – ಮುಸ್ಲಿಮರಿಗೆ ಕಡಿಮೆ ಟಿಕೆಟ್ ಸಾಧ್ಯತೆ

    130 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ – ಮುಸ್ಲಿಮರಿಗೆ ಕಡಿಮೆ ಟಿಕೆಟ್ ಸಾಧ್ಯತೆ

    ನವದೆಹಲಿ: ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (CEC) ಶುಕ್ರವಾರ (ಮಾ.17) ಸಭೆ ಸೇರಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹುತೇಕ ಫೈನಲ್ ಮಾಡಿದೆ.

    ಮೂರು ಗಂಟೆಗಳ ಕಾಲ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ರಾಜ್ಯ ನಾಯಕರ ಸಮ್ಮುಖದಲ್ಲಿ ಸ್ಕ್ರೀನಿಂಗ್ ಕಮಿಟಿ ಕಳಿಸಿದ ಹೆಸರುಗಳನ್ನು ಪರಿಶೀಲಿಸಿದರು. ಗೆಲ್ಲುವ ಅಭ್ಯರ್ಥಿಗಳ್ಯಾರು? ಎಂಬುದನ್ನು ಸರ್ವೇ ಸೇರಿ ಹಲವು ಮೂಲಗಳ ಮೂಲಕ ಕ್ರಾಸ್‌ಚೆಕ್ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    ಕೆಲ ಕ್ಷೇತ್ರಗಳಿಗೆ ಸಂಬಂಧಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಪರವಾಗಿ ಬ್ಯಾಟ್ ಮಾಡಿದರು ಎನ್ನಲಾಗಿದೆ. ಅಂತಿಮವಾಗಿ 130 ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನಾಲ್ವರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸಿಎಂ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿಯಲ್ಲಿ ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಕಣಕ್ಕಿಳಿಯೋ ಸಾಧ್ಯತೆ ಹೆಚ್ಚಾಗಿದೆ.

    ಈ ಬಾರಿ ಮುಸ್ಲಿಮರಿಗೆ ಕಡಿಮೆ ಟಿಕೆಟ್ ನೀಡೋ ಬಗ್ಗೆ ಚರ್ಚೆ ನಡೆದಿದೆ. ಕಳೆದ ಬಾರಿ 17, ಈ ಬಾರಿ 12ಕ್ಕೆ ಇಳಿಸಿ ಎಂದು ಕೆಲವರು ಸಲಹೆ ನೀಡಿದ್ದಾರೆ. ಆದರೆ ಇನ್ನೂ ಕೆಲವರು ಈ ಪ್ರಸ್ತಾವವನ್ನು ವಿರೋಧ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಆಗಬೇಕಿದ್ದು, ಹಗ್ಗಜಗ್ಗಾಟಗಳು ನಡೀತಿದೆ. ಇದನ್ನೂ ಓದಿ: ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಸಿಇಸಿ ಸಭೆ ಬಳಿಕ ರಾಜ್ಯ ನಾಯಕರ ಜೊತೆ ಖರ್ಗೆ ಇನ್ನೊಂದು ಸುತ್ತಿನ ಸಭೆ ನಡೆಸಿದ್ದಾರೆ. ಮೂಲಗಳ ಪ್ರಕಾರ ರಾಹುಲ್ ರಾಜ್ಯಕ್ಕೆ ಬಂದು ಹೋದ ಮಾರನೇ ದಿನ ಅಂದರೆ ಯುಗಾದಿ ಹಬ್ಬದ ಪರ್ವದಿನದಂದು ಕಾಂಗ್ರೆಸ್ ಫಸ್ಟ್ ಲಿಸ್ಟ್ ರಿಲೀಸ್ ಆಗಲಿದೆ.

    ಸಭೆ ಆರಂಭಕ್ಕೂ ಮುನ್ನ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್, ಜಿ. ಪರಮೇಶ್ವರ್ ಬಳಿ ಆಕಾಂಕ್ಷಿಗಳು ಲಾಬಿ ಮಾಡಿದ್ದು ಕಂಡುಬಂತು.