Tag: Congress convention

  • ಸಿದ್ದರಾಮಯ್ಯರ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಅಂತ ಡಿಕೆಶಿ ತೊಡೆ ತಟ್ಟಿ ಹೊರಟ್ಟಿದ್ದಾರೆ: ವಿಜಯೇಂದ್ರ

    ಸಿದ್ದರಾಮಯ್ಯರ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಅಂತ ಡಿಕೆಶಿ ತೊಡೆ ತಟ್ಟಿ ಹೊರಟ್ಟಿದ್ದಾರೆ: ವಿಜಯೇಂದ್ರ

    ಯಾದಗಿರಿ: ಸಿದ್ದರಾಮಯ್ಯ (CM Siddaramaiah) ಅವರ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆ ಶಿವಕುಮಾರ್ ಅವರು ತೊಡೆ ತಟ್ಟಿ ಹೊರಟ್ಟಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಎಂದು ಹೇಳಿದರು.

    ಯಾದಗಿರಿ (Yadagiri) ಜಿಲ್ಲೆಯ ಶಹಾಪುರದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಪಕ್ಷದಲ್ಲಿ ಬಡಿಗೆ ಹಿಡಿದುಕೊಂಡು ಹೊಡೆದಾಡಿಕೊಳ್ಳುತ್ತಾರೆ. ಹಿರಿಯ ನಾಯಕರು ಒಳಗೊಂಡಂತೆ ಶಾಸಕರುಗಳು ಬಡಿಗೆ ತೆಗೆದುಕೊಂಡು ರಸ್ತೆಯಲ್ಲಿ ಹೊಡೆದಾಟಿಕೊಳ್ಳುತ್ತಾರೆ. ಅಂತಹ ಪರಿಸ್ಥಿತಿ ಈಗ ನಿರ್ಮಾಣ ಆಗಿದೆ. ಮುಖ್ಯಮಂತ್ರಿ ಅವರು ತಮ್ಮ ಸ್ಥಾನ ತ್ಯಜಿಸಸಬೇಕು. ತಾನು ಮುಖ್ಯಮಂತ್ರಿ ಆಗಬೇಕೆಂದು ಡಿಕೆ ಶಿವಕುಮಾರ್ (DK Shivakumar) ಹೋರಾಟ ಪ್ರಾರಂಭ ಮಾಡಿದ್ದಾರೆ. ಬರುವ ದಿನಗಳಲ್ಲಿ ಯಾವ ಮಟ್ಟಕ್ಕೆ ಹೋಗುತ್ತದೆ ಉಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.ಇದನ್ನೂ ಓದಿ: 20 ಓವರ್‌ಗಳಲ್ಲಿ 37 ಸಿಕ್ಸರ್‌, 349 ರನ್‌ – ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ

    ಹಾಸನ (Hassan) ಕಾಂಗ್ರೆಸ್ ಸಮಾವೇಶದ (Congress Convention) ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಬದಿಗಿಟ್ಟು ಶಕ್ತಿ ಪ್ರದರ್ಶನ ಮಾಡಲು ಹೊರಟಿದ್ದಾರೆ. ಡಿಕೆಶಿ ಅವರು ಕೋಟೆಗೆ ನುಗ್ಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಯಾವ ರೀತಿ ಬದಲಾವಣೆ ಆಗುತ್ತದೆ ನೋಡಿ, ಸಿದ್ದರಾಮಯ್ಯ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆಶಿವಕುಮಾರ್ ಅವರು ತೊಡೆ ತಟ್ಟಿಕೊಂಡು ಹೊರಟ್ಟಿದ್ದಾರೆ ಎಂದರು.

    ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಪವರ್ ಪಾಲಿಟಿಕ್ಸ್ ಅಸಮಾಧಾನ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ಬಹಳ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟ ಆಗುತ್ತದೆ. ವಿಜಯೇಂದ್ರ ಅವರು ಹೇಳಿದ್ರೆ ಯಾರು ನಂಬುತ್ತಿಲ್ಲ, ಕಾಂಗ್ರೆಸ್‌ನಲ್ಲಿ ಈಗಾಗಲೇ ಕಚ್ಚಾಟ ಶುರುವಾಗಿದೆ. ಯಾವ ರೀತಿ ಬಡಿದಾಡಿಕೊಳ್ಳುತ್ತಾರೆ ನೋಡಬೇಕಿದೆ. ರಾಜ್ಯದ ರೈತರನ್ನು ವಕ್ಫ್ ಮೂಲಕ ಸಿದ್ದರಾಮಯ್ಯ ರೈತರನ್ನು ಬೀದಿಗೆ ತಂದಿದ್ದಾರೆ. ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರೈತರ ತೊಗರಿ ಬೆಳೆ ಹಾನಿಗೆ ಪರಿಹಾರ ಕೊಡುವ ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ, ಒಂದು ರೂಪಾಯಿ ಪರಿಹಾರವನ್ನು ಈ ಸರ್ಕಾರ ಕೊಟ್ಟಿಲ್ಲ, ರೈತರು ಈಗ ಪರದಾಡುತ್ತಿದ್ದಾರೆ ಎಂದು ತಿಳಿಸಿದರು.

    ಬಿಜೆಪಿಯಲ್ಲಿ ಬಣ ಬಡಿದಾಟ ವಿಚಾರವಾಗಿ ಮಾತನಾಡಿ, ಬಿಜೆಪಿಯಲ್ಲಿ ಯಾವುದೇ ಬಣವಿಲ್ಲ ಎಲ್ಲವೂ ಸರಿ ಹೋಗುತ್ತದೆಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:ಜನರಿಗೆ ಕಾನೂನಿನ ಬಗ್ಗೆ ಗೌರವವೂ ಇಲ್ಲ, ಭಯವೂ ಇಲ್ಲ: ರಸ್ತೆ ಅಪಘಾತಗಳ ಬಗ್ಗೆ ಗಡ್ಕರಿ ಆತಂಕ

  • ಕಳೆದ 50 ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ ಕೊಡುಗೆ ಏನು: ಹೆಚ್‌ಡಿ ರೇವಣ್ಣ ಪ್ರಶ್ನೆ

    ಕಳೆದ 50 ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ ಕೊಡುಗೆ ಏನು: ಹೆಚ್‌ಡಿ ರೇವಣ್ಣ ಪ್ರಶ್ನೆ

    – ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ
    -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದ ಶಾಸಕ

    ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ (Hassan) ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ (HD Revanna) ಹೇಳಿದರು.

    ರಾಜಧಾನಿ ದೆಹಲಿಯಲ್ಲಿ `ಪಬ್ಲಿಕ್ ಟಿವಿ’ಯೊಂದಿಗೆ ಹಾಸನದ ಕಾಂಗ್ರೆಸ್ (Congress) ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ, ಶಕ್ತಿ ಪ್ರದರ್ಶನ ನಡೆಯುತ್ತಿದೆ. ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ಕಾಂಗ್ರೆಸ್‌ನಿಂದ ಹಾಸನ ನಗರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ, ಅರಸೀಕೆರೆ ರೈಲು ಮಾರ್ಗ ಇರುತ್ತಿರಲಿಲ್ಲ, ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ

    ಈಗ ಏನು ಮಾತನಾಡಲ್ಲ 2028ಕ್ಕೆ ಮಾತನಾಡುತ್ತೇನೆ. ಇಂತಹ ಹತ್ತು ಸಮಾವೇಶ ಮಾಡಲಿ, ನಮಗೇನು ಪರಿಣಾಮ ಬೀರಲ್ಲ. ಜನರ ದೇವರ ಆಶೀರ್ವಾದ ಇದೆ. ಜೆಡಿಎಸ್ (JDS) ಕಂಡರೆ ಕಾಂಗ್ರೆಸ್‌ನವರು ಭಯ ಪಡುತ್ತಾರೆ. 2018ರಲ್ಲಿ ಯಾರು ಬಂದು ಕಾಲು ಕಟ್ಟಿದ್ದರೋ? ಹದಿನಾಲ್ಕು ತಿಂಗಳು ಆದಮೇಲೆ ಸರ್ಕಾರ ಯಾರು ತೆಗೆದರು? ಹಾಸನದಲ್ಲಿ ಲೋಕಸಭೆ ಚುನಾವಣೆ ಹೇಗಾಯಿತು? ಕಡೆಯ ಮೂರು ದಿನದಲ್ಲಿ ಏನಾಯಿತು? 2028 ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತದೆ. ಸಮಯ ಬಂದಾಗ ಮಾತನಾಡುತ್ತೀನಿ ಎಂದು ವಾಗ್ದಾಳಿ ನಡೆಸಿದರು.

    ಚನ್ನಪಟ್ಟಣದಲ್ಲಿ (Channapatna) ರಾಷ್ಟ್ರೀಯ ಪಕ್ಷಕ್ಕೆ ಅಭ್ಯರ್ಥಿ ಇರಲಿಲ್ಲ ಬಿಜೆಪಿಯಿಂದ ಕರೆ ತಂದರು. ಜೆಡಿಎಸ್, ದೇವೇಗೌಡರನ್ನು ಮುಗಿಸಲು ಯಾರಿಂದಲು ಸಾಧ್ಯವಿಲ್ಲ. ಸಮಾವೇಶದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಹೆದರಲ್ಲ. ಆರು ಬಾರಿ ಶಾಸಕನಾಗಿ ನಾನು ಇಂತಹದ್ದನ್ನು ಬಹಳ ನೋಡಿದ್ದೇನೆ. ಇದಕ್ಕೆಲ್ಲಾ ಹೆದರಿ ಓಡುವ ಮಾತೇ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಾಯುತಿ 2.0 ಸರ್ಕಾರ – ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ

  • ಜಾರಕಿಹೊಳಿ ಬೀಗರಿಗೆ ಡಿಕೆಶಿ ವಾರ್ನಿಂಗ್

    ಜಾರಕಿಹೊಳಿ ಬೀಗರಿಗೆ ಡಿಕೆಶಿ ವಾರ್ನಿಂಗ್

    ಬಳ್ಳಾರಿ: ಬಿಜೆಪಿ ಅಭ್ಯರ್ಥಿಯಾಗಿರುವ ಜಾರಕಿಹೊಳಿ ಬೀಗರಾದ ದೇವೇಂದ್ರಪ್ಪ ಹಾಗೂ ಅವರ ಪುತ್ರ ಅಬಕಾರಿ ಆಯುಕ್ತ ಮಂಜುನಾಥರಿಗೆ ಸಚಿವ ಡಿ.ಕೆ ಶಿವಕುಮಾರ್ ನೇರವಾಗಿ ವಾರ್ನಿಂಗ್ ನೀಡಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಚಿವ ಡಿಕೆ ಶಿವಕುಮಾರ್, ಯಾರ‌್ಯಾರೂ ಲಿಕ್ಕರ್ ಶಾಪ್ ಗಳ ಮಾಲೀಕರ ಬಳಿ ಹಫ್ತಾ ವಸೂಲಿ ಮಾಡುತ್ತಿದ್ದಾ ಎಂದು ನನಗೆ ಗೊತ್ತಿದೆ. ನಮ್ಮದೇನಿದ್ದರೂ ಅಭಿವೃದ್ಧಿ, ಹಫ್ತಾ ವಸೂಲಿ ರೋಲ್‍ಕಾಲ್ ಎಲ್ಲಾ ಬಂದ್. ಲಿಕ್ಕರ್ ಶಾಪಗಳ ಮಾಲೀಕರಿಗೆ ಹಣ ಕೊಡುವಂತೆ ಫೋನ್ ಬರುತ್ತಿರುವುದು ನನಗೆ ಗೊತ್ತಿದೆ. ಹಾಗೊಂದು ವೇಳೆ ಹಫ್ತಾ ವಸೂಲಿ ಮಾಡಿದರೆ ಸರಿಯಿರಲ್ಲ ಎಂದು ಡಿಕೆ ಶಿವಕುಮಾರ್ ಪರೋಕ್ಷವಾಗಿ ಜಾರಕಿಹೊಳಿ ಬೀಗರಾದ ಬಿಜೆಪಿ ಅಭ್ಯರ್ಥಿ ಹಾಗೂ ಅವರ ಪುತ್ರನಿಗೆ ಎಚ್ಚರಿಕೆ ನೀಡಿದ್ದಾರೆ.

    ದೇವೇಂದ್ರಪ್ಪ ಬೇಕಾದರೆ ಲೋಡ್ ಗಟ್ಟಲೇ ತುಂಬಿಕೊಂಡು ಬರಲಿ. ನಾವೂ ಚುನಾವಣೆ ಮಾಡೋಣ, ದೇವೇಂದ್ರಪ್ಪ ಅನ್ನೋ ಮೀನು ಶ್ರೀರಾಮುಲು ಅವರ ಗಾಳಕ್ಕೆ ಬಿದ್ದಿದೆ. ಆದರೆ ನಾವೂ ಯಾರಿಂದಲೂ ಹಫ್ತಾ ವಸೂಲಿ ಮಾಡಲು ಬಿಡುವುದಿಲ್ಲ ಎಂದರು. ಸಮಾವೇಶದಲ್ಲಿ ಸಚಿವ ಪರಮೇಶ್ವರ ನಾಯ್ಕ್, ತುಕಾರಾಂ ಸೇರಿದಂತೆ ಹಲವು ಕಾಂಗ್ರೆಸ್ ಜೆಡಿಎಸ್ ನಾಯಕರು ಭಾಗಿಯಾಗಿದ್ದರು.

  • ಚೋರ್ ಚೌಕಿದಾರ ಅಧಿಕಾರದಿಂದ ಕೆಳಗಿಳಿಯಬೇಕು: ಎಚ್.ಕೆ ಪಾಟೀಲ್

    ಚೋರ್ ಚೌಕಿದಾರ ಅಧಿಕಾರದಿಂದ ಕೆಳಗಿಳಿಯಬೇಕು: ಎಚ್.ಕೆ ಪಾಟೀಲ್

    ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಚೌಕಿದಾರ ಆಗಿ ಉಳಿದಿಲ್ಲ, ಇವತ್ತು ಅವರು ಚೋರ್ ಆಗಿದ್ದಾರೆ. ಚೋರ್ ಚೌಕಿದಾರರನ್ನು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಕೆ ಪಾಟೀಲ್ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

    ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿತ್ತು. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಅಂತ್ಯ ಸಂಸ್ಕಾರ ಮುಗಿದಿಲ್ಲ, ಆಗಲೇ ಚುನಾವಣಾ ಪ್ರಚಾರ ಮಾಡಿದ್ದಾರೆ. ಯೋಧರನ್ನ ಹೆಲಿಕಾಪ್ಟರ್ ಮೂಲಕ ಈಗ ಕಳುಹಿಸುವ ವ್ಯವಸ್ಥೆ ಮಾಡ್ತಿದ್ದಿರಲ್ಲ. ಈ ಮುಂಚೆ ಉಗ್ರರ ಬಗ್ಗೆ ಗುಪ್ತಚರ ಮಾಹಿತಿ ಇದ್ದರು ಯಾಕೆ ಗಮನ ಹರಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೆ ಐದು ವರ್ಷದ ಕಡಿಮೆ ಅವಧಿಯಲ್ಲಿ ಎಷ್ಟು ಜನ ಯೋಧರನ್ನ ಕಳೆದುಕೊಂಡಿದ್ದೇವೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಾವು ಯುದ್ಧ ಗೆದ್ದಿದ್ದೇವೆ. 1962ರಲ್ಲಿ ಯುದ್ಧ ಗೆದ್ದಿದ್ದೇವೆ. ಆಗ ನಾವು ಯುದ್ಧ ಗೆದ್ದಿದ್ದೇವೆ ನಮಗೆ ಮತ ಹಾಕಿ ಅಂತ ಯಾವಾಗಾದರೂ ಕೇಳಿದ್ದೇವಾ? ಎಂದು ಬಿಜೆಪಿಗೆ ಪ್ರಶ್ನೆ ಮಾಡಿ ಎಚ್.ಕೆ ಪಾಟೀಲ್ ವ್ಯಂಗ್ಯವಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv