Tag: Congress corporator

  • ಅಂಜುಮನ್ ಕಾಲೇಜು ಕೊಠಡಿಗೆ ನೇಹಾ ಹೆಸರು; ಧಾರವಾಡದಲ್ಲಿ ಸೋಮವಾರ ಅರ್ಧದಿನ ವ್ಯಾಪಾರ ಬಂದ್

    ಅಂಜುಮನ್ ಕಾಲೇಜು ಕೊಠಡಿಗೆ ನೇಹಾ ಹೆಸರು; ಧಾರವಾಡದಲ್ಲಿ ಸೋಮವಾರ ಅರ್ಧದಿನ ವ್ಯಾಪಾರ ಬಂದ್

    ಧಾರವಾಡ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ (Neha Hiremath) ಹತ್ಯೆ ರಾಜ್ಯಾದ್ಯಂತ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಧಾರವಾಡದ (Dharwad) ಅಂಜುಮನ್ ಸಂಸ್ಥೆ ಮಹತ್ವದ ನಿರ್ಣಯವೊಂದನ್ನು ತೆಗೆದುಕೊಂಡಿದೆ. ಧಾರವಾಡದ ಅಂಜುಮನ್ ಕಾಲೇಜಿನ ಒಂದು ಕೊಠಡಿಗೆ ನೇಹಾ ಹೆಸರಿಡಲು ನಿರ್ಧರಿಸಿದೆ.

    ಈ ಕುರಿತು ಮಾಹಿತಿ ನೀಡಿದ ಅಂಜುಮನ್ ಸಂಸ್ಥೆ (Anjuman Institution) ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ನೇಹಾ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಒಬ್ಬ ವಿದ್ಯಾರ್ಥಿನಿಯ ಹತ್ಯೆಯಾಗಿದೆ. ಅವಳ ನೆನಪಿಗಾಗಿ ನಾವು ನಮ್ಮ ಅಂಜುಮನ್ ಕಾಲೇಜಿನ ಒಂದು ಕೊಠಡಿಗೆ ನೇಹಾ ಹಿರೇಮಠ ಅವರ ಹೆಸರಿಡಲು ತೀರ್ಮಾನಿಸಿದ್ದೇವೆ. ಅದನ್ನು ಅವರ ತಂದೆ-ತಾಯಿಯಿಂದಲೇ ಉದ್ಘಾಟನೆ ಮಾಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಯಾಕೆ ನೀವು ಧ್ವನಿ ಎತ್ತುತ್ತಿಲ್ಲ: ಪ್ರಕಾಶ್ ರಾಜ್, ಚೇತನ್ ವಿರುದ್ಧ ಪ್ರಥಮ್ ಕಿಡಿ

    ನಾಳೆ ಅರ್ಧದಿನ ವ್ಯಾಪಾರ ಬಂದ್:
    ನೇಹಾ ಹತ್ಯೆ ಪ್ರಕರಣ ಖಂಡಿಸಿ ನಾಳೆ (ಏ.22) ಧಾರವಾಡದಲ್ಲಿ ಅಂಜುಮನ್ ಕಾಲೇಜದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮತ್ತೊಂದೆಡೆ ಮುಸ್ಲಿಂ ವ್ಯಾಪಾರಿಗಳು ತಮ್ಮ ವ್ಯಾಪಾರ ಬಂದ್ ಮಾಡಲಿದ್ದು, ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವ್ಯಾಪಾರಿಗಳು ಸೋಮವಾರ ಅರ್ಧದಿನ ವ್ಯಾಪಾರ ವಹಿವಾಟು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಮುಸ್ಲಿಂ ಶಿಕ್ಷಣ ಸಂಸ್ಥೆಗಳೂ ಇದಕ್ಕೆ ಸಾಥ್ ನೀಡಿವೆ ಎಂದು ಹೇಳಿದ್ದಾರೆ.

    ಮುಂದುವರಿದು ಮಾತನಾಡಿದ ಇಸ್ಮಾಯಿಲ್, ನೇಹಾ ಕೊಲೆಯನ್ನು ನಾವು ಖಂಡಿಸುತ್ತೇವೆ. ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಈ ನಾಡನ್ನ ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ: ಬಿಎಸ್‌ವೈ ಕಿಡಿ

  • ಪ್ರಕರಣ ದಿಕ್ಕು ತಪ್ಪಿಸುತ್ತಿದ್ದಾರೆ, ಸಿಎಂಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ತೇವೆ: ನೇಹಾ ತಂದೆ ಭಾವುಕ

    ಪ್ರಕರಣ ದಿಕ್ಕು ತಪ್ಪಿಸುತ್ತಿದ್ದಾರೆ, ಸಿಎಂಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ತೇವೆ: ನೇಹಾ ತಂದೆ ಭಾವುಕ

    – ನಿಮ್ಮ ಮಗನನ್ನ ನೀವೇ ಕೊಲ್ಲಿ, ಅದೇ ನಿಜವಾದ ಕ್ಷಮೆ ಎಂದ ನಿರಂಜನ್‌

    ಹುಬ್ಬಳ್ಳಿ: ನನ್ನ ಮಗಳ ಹತ್ಯೆ ಪ್ರಕರಣವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ್‌ ಆಯುಕ್ತರು ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಹೀಗೆ ಆದ್ರೆ, ನಾವೂ ಸಹ ಸಿಎಂಗೆ (Chief Minister) ಪತ್ರ ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಮೃತ ನೇಹಾಳ ತಂದೆ ನಿರಂಜನ್‌ ಹಿರೇಮಠ (Niranjan Hiremath) ಅವರು ಅಳಲು ತೋಡಿಕೊಂಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ನೇಹಾ ತಂದೆ, ನಮ್ಮದು ಕ್ರಿಮಿನಲ್‌ ಹಿನ್ನೆಲೆಯುಳ್ಳ ಕುಟುಂಬ ಅಲ್ಲ. ಐದು ಮಂದಿ ಸೇರಿ ನನ್ನ ಮಗಳ ಹತ್ಯೆ ಮಾಡಿದ್ದಾರೆ. ಉಳಿದ ಫಯಾಜ್‌ನನ್ನ (Fayaz) ಮುಂದಕ್ಕೆ ಬಿಟ್ಟು ಕೊಲೆ ಮಾಡಿಸಿದ್ದಾರೆ. ಆ ಸಂದರ್ಭದಲ್ಲಿ ಉಳಿದ ನಾಲ್ಕೂ ಜನರು ಅಲ್ಲೇ ಇದ್ದರು. ಆದ್ರೆ 100ಕ್ಕೆ ನೂರು ಪೊಲೀಸ್ ಆಯುಕ್ತರು (Hubli Police Commissioner) ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಆಡಳಿತ ಪಕ್ಷದ ಕೆಲ ಸ್ಥಳೀಯ ಜನಪ್ರತಿನಿಧಿಗಳೂ ತಪ್ಪು ಮಾಹಿತಿ ನೀಡಿದ್ದಾರೆ. ಗೃಹಸಚಿವರನ್ನ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ಬೆಳೆವಣಿಗೆ ನೋಡಿದರೆ ಪ್ರಕರಣ ದಾರಿ ತಪ್ಪುವ ಹಾಗೆ ಕಾಣುತ್ತಿದೆ. ಸಿ.ಎಂ ಅವರಿಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಭಾವುಕರಾಗಿದ್ದಾರೆ.

    ಈ ಪ್ರಕರಣದ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷದ ನಾಯಕರು ನನ್ನ ಬೆನ್ನಿಗೆ ನಿಂತು ಧೈರ್ಯ ಹೇಳಬೇಕು ಎಂದು ಪ್ರಕರಣ ಸತ್ಯಾಸತ್ಯತೆ ಹೊರತೆಗೆಯಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ; ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

    ಪರಮೇಶ್ವರ್‌ ವಿರುದ್ಧ ಬೇಸರ:
    ಗೃಹ ಸಚಿವ ಪರಮೇಶ್ವರ್ (G Parameshwara) ಅವರು ವಿಷಾದ ವ್ಯಕ್ತಪಡಿಸಿದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ನಿರಂಜನ ಅವರು, ಗೃಹ ಸಚಿವರು ವಿಷಾದ ವ್ಯಕ್ತಪಡಿಸಿದ್ದು ಇರಲಿ, ಆದ್ರೆ ಅವರು ನಮ್ಮ ಮನೆಗೆ ಬಂದು ಮಾತನಾಡಬೇಕಿತ್ತಲ್ಲ. ಆ ರೀತಿಯ ಬೆಳವಣಿಗೆ ಆಗಿಲ್ಲ. ಈಗ ನಾನು ಮಾತನಾಡಿದ್ದೇನೆ ಎಂದು ಸೃಷ್ಟಿ ಮಾಡಿ ಹೇಳುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

    ಇದೇ ವೇಳೆ ಮಗನಿಗೆ ಶಿಕ್ಷೆ ಆಗಬೇಕೆಂಬ ಹಂತಕ ಫಯಾಜ್ ತಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮಗಳನ್ನು ಕಳೆದುಕೊಂಡಿದ್ದೇನೆ. ಆ ಕುಟುಂಬ ಕ್ಷಮೆ ಕೇಳಿದರೆ ಸಾಲದು. ನಿಮ್ಮ ಮಗ ಇಷ್ಟು ವಿಕೃತ ಮನೋಭಾವ ಇರೋದರ ಮಾಹಿತಿ ನೀಡಬೇಕಿತ್ತು. ಮೊದಲ ಹೇಳಿದ್ದರೇ ಈ ದುರಂತ ಆಗುತ್ತಿಲ್ಲ. ನಮ್ಮ ಮಗಳನ್ನ ಉಳಿಸಿಕೊಳ್ಳುತ್ತಿದ್ದೆವು. ಅವರ ದಾರಿತಪ್ಪಿದ್ದಾನೆ ಅಂದಾಗ ಮಾಹಿತಿ ನೀಡಬೇಕಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

    ನಿಮ್ಮ ಮಗನನ್ನು ನೀವೇ ಕೊಲ್ಲಿ:
    ಈ ಹಿಂದೆಯೇ ಫಜಾಜ್ ತನ್ನ ತಂದೆಯನ್ನ ಕೊಲ್ಲಲು ಹೋಗಿದ್ದ ಅಂತಾ ಕೇಳಿದ್ದೇನೆ. ಅವರು ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಈವತ್ತು ನನ್ನ ಮಗಳು ಉಳಿಯುತ್ತಿದ್ದಳು. ಈಗ ನಿಮ್ಮ ಮಗನಿಗೆ ನೀವೇ ಜಾಮೀನುಕೊಟ್ಟು ಹೊರಗೆ ಕರೆದುಕೊಂಡು ಬನ್ನಿ. ನನ್ನ ಮಗಳಿಗೆ ಮಾಡಿದಂತೆನೀವು ಮಾಡಿ, ಅದೇ ನಿಜವಾದ ಕ್ಷಮೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು

  • ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ; ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

    ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ; ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

    ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ (Neha) ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು (Hubballi Vidyanagar Police) ಎಫ್‌ಐಆರ್ ದಾಖಲಿಸಿದ್ದಾರೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ (FIR) ಉಲ್ಲೇಖಿಸಿದ್ದಾರೆ.

    ಎಫ್‌ಐಆರ್‌ನಲ್ಲಿ ಏನಿದೆ?
    ನೇಹಾ ತಂದೆ ಹೇಳಿರುವಂತೆ, ಫಯಾಜ್ ನಮ್ಮ ಮಗಳ ಸಹಪಾಠಿ. ನನ್ನ ಮಗಳನ್ನು ಪ್ರೀತಿ ಮಾಡುವಂತೆ ಬಲವಂತ ಮಾಡುತ್ತಿದ್ದ. ಅಲ್ಲದೇ ಮದುವೆ ಮಾಡಿಕೊಡುವಂತೆ ನಮ್ಮ ಕುಟುಂಬಸ್ಥರಿಗೂ ಪದೇ ಪದೇ ದೂರವಾಣಿ ಕರೆ ಮಾಡಿ ಕೇಳುತ್ತಿದ್ದ. ಆದ್ರೆ ನಮ್ಮ ಮನೆಯವರು ನಮ್ಮ ಮಗಳು ನಿನ್ನನ್ನು ಇಷ್ಟಪಡುತ್ತಿಲ್ಲ. ಅವಳು ಇನ್ನು ಹೆಚ್ಚಿನ ವ್ಯಾಸಂಗ ಮಾಡಬೇಕು ಅಂದುಕೊಂಡಿದ್ದಾಳೆ ಅಂತ ಹೇಳುತ್ತಲೇ ಇದ್ದರು. ಇದರಿಂದ ಹತಾಷೆಗೊಂಡ ಫಯಾಜ್ ಇದೇ ತಿಂಗಳ 18ರಂದು ಹತ್ಯೆ ಮಾಡಿದ್ದಾನೆ ಎಂದು ಹೇಳಿಕೆ ದಾಖಲಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು

    ಏನಿದು ಪ್ರಕರಣ?
    ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್‌ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಪ್ರಾಣ ಬಿಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್‌ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ ಎನ್ನಲಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್‌ನನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ರಾಜ್ಯದ ವಿವಿಧೆಡೆ ಪ್ರತಿಭಟನೆ:
    ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ರಾಯಚೂರು, ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ ಭುಗಿಲೆದ್ದಿದೆ. ಅಲ್ಲದೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಗಳೂರಿನಲ್ಲಿರುವ ಗೃಹಸಚಿವರ ನಿವಾಸಕ್ಕೆ ಮುತ್ತಿಗೆ ಹಾಲು ಯತ್ನಿಸಿದೆ. ಈ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

  • ಕೇರಳದ ರೀತಿ ರಾಜ್ಯದಲ್ಲೂ ಲವ್ ಜಿಹಾದ್ ನಡೀತಿದೆ ಅಂದಿದ್ವಿ: ಆರ್.ಅಶೋಕ್

    ಕೇರಳದ ರೀತಿ ರಾಜ್ಯದಲ್ಲೂ ಲವ್ ಜಿಹಾದ್ ನಡೀತಿದೆ ಅಂದಿದ್ವಿ: ಆರ್.ಅಶೋಕ್

    – ಕರ್ನಾಟಕ ಸರ್ಕಾರ ಜಿಹಾದಿಗಳ ಸರ್ಕಾರ ಎಂದ ಪ್ರತಿಪಕ್ಷ ನಾಯಕ

    ಬೆಂಗಳೂರು: ಕರ್ನಾಟಕ ಸರ್ಕಾರ ಜಿಹಾದಿಗಳ ಸರ್ಕಾರ, ಸಿದ್ದರಾಮಯ್ಯ ಸರ್ಕಾರ (Siddaramaiah’s Government) ಬಂದ್ಮೇಲೆ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್ (Love Jihad) ಕೃತ್ಯಗಳು ಹೆಚ್ಚಾಗಿವೆ. ಲವ್ ಜಿಹಾದ್ ಕಾಂಗ್ರೆಸ್ ಅವರನ್ನೂ ಬಿಟ್ಟಿಲ್ಲ. ಕೇರಳದ ರೀತಿ ಕರ್ನಾಟಕದಲ್ಲೂ ಲವ್ ಜಿಹಾದ್ ನಡೆಯುತ್ತಿದೆ ಅಂತಾ ಹಿಂದೆಯೇ ಹೇಳಿದ್ವಿ ಅಂತಾ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು (Bengaluru BJP Office) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಘಟನೆ. ಕಾಂಗ್ರೆಸ್ ಸರ್ಕಾರ ನಾಚಿಕೆಗೇಡಿನ ಸರ್ಕಾರ. ಕಾನೂನು ವ್ಯವಸ್ಥೆಯನ್ನು ಗೂಂಡಾಗಳ ಕೈಗೆ ಕೊಟ್ಟಿದೆ. ಸರ್ಕಾರವನ್ನ ಡಾನ್‌ಗಳು ನಡೆಸುತ್ತಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ

    ಹುಬ್ಬಳ್ಳಿಯಲ್ಲಿ (Hubballi) ನಡೆದ ಘಟನೆ ಲವ್ ಜಿಹಾದ್ ಅಂತಾ ಕುಟುಂಬದವರು ಹೇಳಿದ್ದಾರೆ. ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಲವ್ ಜಿಹಾದ್ ಅಂತಾ ಹೇಳಿದ್ದು ಕಾಂಗ್ರೆಸ್ ಕಾರ್ಪೋರೇಟರ್. ಆದ್ರೆ ಆ ಹೆಣ್ಣು ಮಗಳ ಮೇಲೆ ಆಪಾದನೆ ಮಾಡ್ತಿದ್ದೀರಿ. ಕಾಂಗ್ರೆಸ್‌ನವರಿಗೆ ನಾಚಿಕೆ ಆಗಲ್ವಾ? ಕಾಂಗ್ರೆಸ್ ಅವರಿಗೆ ಮನುಷ್ಯತ್ವ ಇದ್ಯಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಗದಗ ಬಿಜೆಪಿ ನಗರಸಭೆ ಉಪಾಧ್ಯಕ್ಷೆಯ ಕುಟುಂಬದ ನಾಲ್ವರ ಬರ್ಬರ ಹತ್ಯೆ – ಮಲಗಿದ್ದಲ್ಲೇ ಕೊಲೆಗೈದು ದುಷ್ಕರ್ಮಿಗಳು ಪರಾರಿ

    ಚುನಾವಣೆ ಹತ್ತಿರ ಇದೆ. ಈ ವಿಷಯ ಬೆಳಕಿಗೆ ಬಂದ್ರೆ ಕಾಂಗ್ರೆಸ್‌ಗೆ ಛೀಮಾರಿ ಹಾಕ್ತಾರೆ ಅಂತಾ ಸಿದ್ದರಾಮಯ್ಯ ಅವರೇ ಫೀಲ್ಡಿಗೆ ಇಳಿದಿದ್ದಾರೆ. ಅವರ ಹೇಳಿಕೆಯನ್ನು ಗಮನಿಸಿದ್ದೇನೆ, ವೈಯಕ್ತಿಕ ಕಾರಣಕ್ಕೆ ನಡೆದಿರುವ ಕೊಲೆ ಅಂತಾ ಹೇಳಿದ್ದಾರೆ. ಕರ್ನಾಟಕದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ. ಲವ್ ಜಿಹಾದ್ ಮಾಡೋರಿಗೆ ಪಾಸ್ ಪೋರ್ಟ್ ಕೊಟ್ಟಿದ್ದಾರೆ. ಗಲಭೆ, ಕೊಲೆ ಮಾಡೋರಿಗೆ ವಿಸಾ ಕೊಟ್ಟಿದ್ದಾರೆ. ಕಾಂಗ್ರೆಸ್ ಅವರ ಸರ್ಕಾರ ಖದೀಮರ ಗ್ಯಾಂಗ್ ಆಗಿದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

  • ನೇಹಾ ಹತ್ಯೆಯಿಂದ ಕಟ್ಟೆಯೊಡೆದ ಆಕ್ರೋಶ; 3 ಕಿಮೀ ಪಾರ್ಥಿವ ಶರೀರ ಮೆರವಣಿಗೆಗೆ ಸಿದ್ಧತೆ – ಕಾಲೇಜು ಬಂದ್‌ಗೆ ಕರೆ!

    ನೇಹಾ ಹತ್ಯೆಯಿಂದ ಕಟ್ಟೆಯೊಡೆದ ಆಕ್ರೋಶ; 3 ಕಿಮೀ ಪಾರ್ಥಿವ ಶರೀರ ಮೆರವಣಿಗೆಗೆ ಸಿದ್ಧತೆ – ಕಾಲೇಜು ಬಂದ್‌ಗೆ ಕರೆ!

    ಹುಬ್ಬಳ್ಳಿ/ಬೆಳಗಾವಿ: ಹುಬ್ಬಳ್ಳಿಯಲ್ಲಿ (Hubballi) ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremut) ಭೀಕರ ಹತ್ಯೆ ಪ್ರಕರಣ ಸಂಬಂಧ ಹಿಂದೂಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ನೂರಾರು ಕಾರ್ಯಕರ್ತರು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ನೇಹಾಳನ್ನ ಕೊಂದ ಆರೋಪಿಯನ್ನು ಎನ್‌ಕೌಂಟರ್ ಮಾಡಬೇಕೆಂದು ಆಗ್ರಹಿಸಿವೆ.

    ಅಲ್ಲದೇ ನೇಹಾಳ ಕೊಲೆ ಖಂಡಿಸಿ ಎನ್‌ಎಸ್‌ಯುಐ (NSUI) ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮುಂಭಾಗ ಪ್ರತಿಭಟನೆ ಮಾಡಿದೆ. ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಕೊಲೆ ಆರೋಪಿಗಳನ್ನ ಗಲ್ಲಿಗೇರಿಸುವಂತೆ ಒತ್ತಾಯಿಸಿದೆ. ಇಂದು ಸಹ ಪ್ರತಿಭಟನೆ ಮುಂದುವರಿದಿದೆ. ಇದನ್ನೂ ಓದಿ: ರಾಣಿ ತರಹ ನೋಡಿಕೊಳ್ತಿದ್ವಿ, ಪ್ರತಿದಿನ ಕಾರಿನಲ್ಲೇ ಕಾಲೇಜಿಗೆ ಕಳಿಸ್ತಿದ್ವಿ – ಮಗಳ ಸಾವು ನೆನೆದು ತಂದೆ-ತಾಯಿ ಅಳಲು!

    ಮೃತದೇಹ 3 ಕಿಮೀ ಮೆರೆವಣಿಗೆ:
    ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ (KIMS Hospital) ನೇಹಾಳ ಮೃತದೇಹ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬಳಿಕ ಕುಟುಂಬಸ್ಥರಿಗೆ ಮೃಹದೇಹ ಹಸ್ತಾಂತರಿಸಲಾಗುತ್ತದೆ. ಅಲ್ಲಿಂದ ಸುಮಾರು 3 ಕಿಲೋಮೀಟರ್ ಪಾರ್ಥಿವ ಶರೀರವನ್ನು ಮೆರವಣಿಗೆ ನಡೆಸಲಿದ್ದು, ವೀರಶೈವ ಜಂಗಮ ರುದ್ರಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹುಬ್ಬಳ್ಳಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ – ಯುವಕ ಅರೆಸ್ಟ್‌

    ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್‌ ಹೋರಾಟ:
    ನೇಹಾಳ ಹತ್ಯೆ ಖಂಡಿಸಿ, ಹಿಂದೂಪರ ಮತ್ತು ವಿದ್ಯಾರ್ಥಿ ಸಂಘಟನೆಗಳಿಂದ ಇಂದು (ಏ.19) ಬೃಹತ್ ಪ್ರತಿಭಟನೆ (Protest) ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಎಬಿವಿಪಿಯಿಂದ ಮಹಾನಗರ ವ್ಯಾಪ್ತಿಯ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂ ಜಾಗರಣ ವೇದಿಕೆ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದ್ದು, ನಗರದಲ್ಲೆಡೆ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

    ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ:
    ಇನ್ನೂ ವಿದ್ಯಾರ್ಥಿನಿ ನೇಹಾಳ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿಕೊಳ್ಳಲಾಗಿದೆ. ಇಲ್ಲಿನ ಸವದತ್ತಿಯ ಎಪಿಎಂಸಿ ಹತ್ತಿರ ಇರುವ ಚೆನ್ನಬಸವೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಶುರುವಾಗಲಿದೆ. ಇದನ್ನೂ ಓದಿ: ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು?

  • ನಮ್ಮನೆ ಮಕ್ಕಳು ಸುರಕ್ಷಿತವಾಗಿ ಮನೆಗೆ ಹಿಂದಿರುಗುವ ಗ್ಯಾರಂಟಿ ಯಾವಾಗ ಕೊಡ್ತೀರಿ? – ಸಿಎಂಗೆ ಸಿ.ಟಿ ರವಿ ಪ್ರಶ್ನೆ

    ನಮ್ಮನೆ ಮಕ್ಕಳು ಸುರಕ್ಷಿತವಾಗಿ ಮನೆಗೆ ಹಿಂದಿರುಗುವ ಗ್ಯಾರಂಟಿ ಯಾವಾಗ ಕೊಡ್ತೀರಿ? – ಸಿಎಂಗೆ ಸಿ.ಟಿ ರವಿ ಪ್ರಶ್ನೆ

    ಬೆಂಗಳೂರು: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಹುಬ್ಬಳ್ಳಿಯ ಬಿವಿಬಿ ಕಾಲೇಜು (BVB College) ಕ್ಯಾಂಪಸ್‌ನಲ್ಲೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.

    ಘಟನೆ ಕುರಿತು ಹಲವೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಮಾಜಿ ಸಚಿವ ಸಿ.ಟಿ ರವಿ (CT Ravi), ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿಗಳೇ ಎಂಥಹ ಪರಿಸ್ಥಿತಿ ನಿರ್ಮಾಣವಾಗಿದೆ ರಾಜ್ಯದಲ್ಲಿ? ಕಾನೂನು ಸುವ್ಯವಸ್ಥೆ ಎಲ್ಲಿದೆ? ಮನೆಯಿಂದ ಹೊರಬಂದ ನಮ್ಮ ಮನೆ ಮಕ್ಕಳು ಸುರಕ್ಷಿತವಾಗಿ ಮನೆಗೆ ಹಿಂದಿರುಗುವ ಗ್ಯಾರೆಂಟಿ ಯಾವಾಗ ಕೊಡುತ್ತೀರಿ? ಬದುಕುವ ಮತ್ತು ಸುರಕ್ಷತೆಯ ಗ್ಯಾರಂಟಿ ಕೊಡದ ನಿಮ್ಮ ಸರ್ಕಾರದ ಮೇಲೆ ಯಾರಿಗೂ ಯಾವ ಭರವಸೆಯು ಇಲ್ಲ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫೈಜಲ್ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಪ್ರಾಣ ಬಿಟ್ಟಿದ್ದಾಳೆ.

    ಪ್ರೀತಿ ತಿರಸ್ಕರಿಸಿದ್ದಕ್ಕೆ ಕೊಲೆ ಶಂಕೆ:
    ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫೈಜಲ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫೈಜಲ್‌ನನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫೈಜಲ್‌ನನ್ನು ಬಂಧಿಸಿದ್ದಾರೆ.

  • ರಾಣಿ ತರಹ ನೋಡಿಕೊಳ್ತಿದ್ವಿ, ಪ್ರತಿದಿನ ಕಾರಿನಲ್ಲೇ ಕಾಲೇಜಿಗೆ ಕಳಿಸ್ತಿದ್ವಿ – ಮಗಳ ಸಾವು ನೆನೆದು ತಂದೆ-ತಾಯಿ ಅಳಲು!

    ರಾಣಿ ತರಹ ನೋಡಿಕೊಳ್ತಿದ್ವಿ, ಪ್ರತಿದಿನ ಕಾರಿನಲ್ಲೇ ಕಾಲೇಜಿಗೆ ಕಳಿಸ್ತಿದ್ವಿ – ಮಗಳ ಸಾವು ನೆನೆದು ತಂದೆ-ತಾಯಿ ಅಳಲು!

    ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಇಲ್ಲಿನ ಬಿವಿಬಿ ಕಾಲೇಜು (BVB College) ಕ್ಯಾಂಪಸ್‌ನಲ್ಲೇ ಭೀಕರವಾಗಿ ಕೊಲೆ (Student Murder) ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.

    ಇನ್ನೂ ಮಗಳ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಾಯಿ ಗೀತಾ, ನೇಹಾ (Neha) ಈಗಿನ ಹುಡುಗಿಯರ ತರಹ ಫ್ಯಾನ್ಸಿ ಇದ್ದಿಲ್ಲ. ಇನ್ನೊಬ್ಬರಿಗೆ ಕೇಡು ಬಯಸಿದವಳಲ್ಲ. ಅವಳಿಗೆ ಇಂತಹ ಮೋಸ ಆಯಿತು. ಅವಳನ್ನು ರಾಣಿ ತರಹ ನೋಡಿಕೊಳ್ಳುತ್ತಿದ್ದೆವು. ಪ್ರತಿದಿನ ಕಾರಿನಲ್ಲೇ ಕಾಲೇಜಿಗೆ ಕಳುಹಿಸಿ, ಕಾರಿನಲ್ಲೇ ಕರೆದುಕೊಂಡು ಬರುತ್ತಿದ್ದೆವು. ಇವತ್ತೂ ಸಹ ಕಾಲೇಜು ಮಗಿದ ತಕ್ಷಣ ನಾನೇ ಅವಳನ್ನ ಕರೆದುಕೊಂಡು ಬರಲು ಹೋಗಿದ್ದೆ. ಅಷ್ಟರಲ್ಲೇ ಅವಳಿಗೆ ಇಂತಹ ಸ್ಥಿತಿ ಬಂದೊದಗಿದೆ ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ – ಯುವಕ ಅರೆಸ್ಟ್‌

    ಮಗಳ ಸಾವಿನ ಬಗ್ಗೆ ಮಾತನಾಡಿರುವ ತಂದೆ ನಿರಂಜನ ಹಿರೇಮಠ, ನೇಹಾ ಎಂಸಿಎ ಓದುತ್ತಿದ್ದಳು. ಬಿವಿಬಿ ಹೆಚ್‌ಒಡಿ ಆಫೀಸ್‌ ಮುಂದೆಯೇ ತಲ್ವಾರ್‌ನಿಂದ ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಫೈಜಲ್ ಮತ್ತು ಮಗಳು ನೇಹಾ ಬಿಸಿಎ ಸಹಪಾಠಿಗಳು, ಇಬ್ಬರಿಗೂ ಹಳೇ ಪರಿಚಯ. ಆದರೆ ನೇಹಾ ಈಗ ಎಂಸಿಎ ಮಾಡುತ್ತಿದ್ದಳು, ಬಿವಿಬಿಯಲ್ಲಿ ಸುರಕ್ಷತೆ ಬಗ್ಗೆ ಸಾಕಷ್ಟು ಅಸಮಾಧಾನ ಮೂಡುತ್ತಿದೆ. ಅಪರಿಚಿತರು ಹೀಗೆ ತಲ್ವಾರ್‌ ಹಿಡಿದು ಬಂದು ಕೊಲೆ ಮಾಡ್ತಾರೆ ಅಂದ್ರೆ ಹೇಗೆ? ಕಾಲೇಜು ಒಳಗೆ ಮಾರಕಾಸ್ತ್ರ ತರಲು ಬಿಟ್ಟವರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

    ಏನಿದು ಪ್ರಕರಣ?
    ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ  ಫೈಜಲ್‌ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಪ್ರಾಣ ಬಿಟ್ಟಿದ್ದಾಳೆ. ಇದನ್ನೂ ಓದಿ: PublicTV Explainer: ಬೆಂಗಳೂರಿನ ಕುದುರೆಗಳಲ್ಲಿ ಗ್ಲ್ಯಾಂಡರ್ಸ್‌ ರೋಗ; ಏನಿದು ಮಾರಕ ಕಾಯಿಲೆ – ಮನುಷ್ಯರಿಗೂ ಹರಡುತ್ತಾ?

    ಪ್ರೀತಿ ತಿರಸ್ಕರಿಸಿದ್ದಕ್ಕೆ ಕೊಲೆ ಶಂಕೆ:
    ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫೈಜಲ್‌ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫೈಜಲ್‌ನನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫೈಜಲ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ನಾಸೀರ್ ಹುಸೇನ್‌ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಅಂತಾ ಹೇಳೇ ಇಲ್ಲ: ಸಚಿವ ನಾಗೇಂದ್ರ

  • ಡ್ರಗ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್- ಕಾರ್ಪೊರೇಟರ್ ಮಗನಿಗೆ ಎನ್‍ಸಿಬಿ ನೋಟಿಸ್

    ಡ್ರಗ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್- ಕಾರ್ಪೊರೇಟರ್ ಮಗನಿಗೆ ಎನ್‍ಸಿಬಿ ನೋಟಿಸ್

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಬೆಂಗಳೂರಿನ ಕಾಂಗ್ರೆಸ್ ಕಾರ್ಪೋರೇಟರ್ ಮಗನಿಗೆ ಎನ್‍ಸಿಬಿ ನೋಟಿಸ್ ಜಾರಿ ಮಾಡಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕಳೆದ ಮೂರು ದಿನಗಳ ಹಿಂದೆ ರಾಜಾಜಿನಗರದ ಫಸ್ಟ್ ಬ್ಲಾಕ್‍ನಲ್ಲಿರುವ ಕಾರ್ಪೋರೇಟರ್ ಕೇಶವಮೂರ್ತಿ ಅವರ ನಿವಾಸದ ಮೇಲೆ ಎನ್‍ಸಿಬಿ ದಾಳಿ ನಡೆಸಿತ್ತು. ಇದೀಗ ಕಾರ್ಪೋರೇಟರ್ ಮಗನಿಗೆ ಎನ್‍ಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.

    ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ದಾಳಿ ಇದಾಗಿದ್ದು, ಕಾರ್ಪೋರೇಟರ್ ಪುತ್ರ ಡಾರ್ಕ್‍ನೆಟ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಎನ್‍ಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಎನ್‍ಸಿಬಿ ಅಧಿಕಾರಿಗಳಿಗೆ ಯಾವುದೇ ಸಾಕ್ಷ್ಯ ಲಭ್ಯವಾಗಿರಲಿಲ್ಲ. ದಾಳಿ ಬಳಿಕ ಇದೀಗ ಬೆಂಗಳೂರಿನ ಎನ್‍ಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಪೋರೇಟರ್ ಕೇಶವಮೂರ್ತಿ, ನನ್ನ ಮಗನಿಗೆ ನೋಟಿಸ್ ವಿಚಾರ ನನಗೆ ಗೊತ್ತಿಲ್ಲ. ಮಗನಿಗೆ 26 ವರ್ಷ, ಡಿಗ್ರಿ ಅಪೂರ್ಣವಾಗಿದೆ. ಮಗನಿಗೆ ಸಿನಿಮಾದವರ ಯಾವುದೇ ಲಿಂಕ್ ಇಲ್ಲ. ಮಗ ಜಿಮ್ ಮಾಡಿಕೊಂಡು ಚೆನ್ನಾಗಿದ್ದಾನೆ ಎಂದು ಹೇಳಿದ್ದಾರೆ.

  • ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

    ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

    – ಮಾಜಿ ಮೇಯರ್ ಆಪ್ತ ವಶಕ್ಕೆ
    – ಮಧ್ಯರಾತ್ರಿ ಮತ್ತೆ 30 ಮಂದಿ ಬಂಧನ

    ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ ವಿಚಾರಣೆಗೆ ಕರೆಯಲಾಗಿದೆ. ಗಲಭೆ ಸಂಬಂಧ ಸಂಪತ್‍ರಾಜ್ ಆಪ್ತ ಅರುಣ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅರುಣ್ ಬಳಿ ಇದ್ದ ಮೊಬೈಲ್‍ನ್ನು ಸಂಪತ್‍ರಾಜ್ ಬಳಸುತ್ತಿದ್ದರು ಮತ್ತು ಆ ಮೊಬೈಲ್‍ನಲ್ಲಿ ಗಲಭೆಗೆ ಸಂಬಂಧಿಸಿದ ಮಹತ್ವದ ಸಾಕ್ಷ್ಯಗಳಿರಬಹುದು ಎಂಬ ಶಂಕೆಯಿಂದ ಖಾಕಿಗಳು ವಶಕ್ಕೆ ಪಡೆದಿದ್ದಾರೆ. ಮೊಬೈಲ್‍ನಲ್ಲಿರುವ ಮಾಹಿತಿಗಳನ್ನು ಪೊಲೀಸರು ಕಲೆ ಹಾಕಿದ್ದು ಅದರಲ್ಲಿನ ಸಾಕ್ಷ್ಯಗಳನ್ನ ಆಧರಿಸಿ ಕಾರ್ಪೋರೇಟರ್ ಗಳ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ವಿರುದ್ಧ ದೂರು ನೀಡಿದ್ದ ಫಿದೋಸ್ ಪಾಷಾ ಅನ್ನೋರ ಸ್ಕೂಟರ್‍ಗೂ ಡಿಜೆ ಹಳ್ಳಿ ಠಾಣೆ ಎದುರು ಬೆಂಕಿ ಹಚ್ಚಲಾಗಿತ್ತು. ದಂಗೆ ಸಂಬಂಧ ಮಧ್ಯರಾತ್ರಿ ಮತ್ತೆ 30 ಮಂದಿಯನ್ನು ಡಿಜೆ ಹಳ್ಳಿ ಮತ್ತು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಗಲಭೆಯಲ್ಲಿ ಬಂಧಿತರಾದವರ ಸಂಖ್ಯೆ 380ಕ್ಕೆ ಏರಿಕೆ ಆಗಿದೆ. ಇದನ್ನೂ ಓದಿ: ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವ್ರ ಲಿಸ್ಟ್ ಇದೆ: ಅಶೋಕ್