ಬೆಂಗಳೂರು: ಸರ್ಕಾರ ಒಂದು ವರ್ಷ ಹೇಗೆ ಕೆಲಸ ಮಾಡಿತು ಅಂತ ಜನ ಹೇಳ್ತಾರೆ, ನಾಯಕರಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Sivakumar) ಹೇಳಿದ್ದಾರೆ.
ಒಂದು ವರ್ಷ ಸರ್ಕಾರ ಐಸಿಯುನಲ್ಲಿತ್ತು ಎಂಬ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಏನಾಯ್ತು ಅಂತ ಜನ ಹೇಳಬೇಕು, ನಾಯಕರು ಹೇಳೋದಲ್ಲ. ಹೆಣ್ಣು ಮಕ್ಕಳ ಬದುಕಿನಲ್ಲಿ ಬದಲಾವಣೆ ಯಾವ ಮಟ್ಟಕ್ಕೆ ಆಗಿದೆ ಅಂತ ತಾಯಂದಿರು ಹೇಳಬೇಕು ಎಂದಿದ್ದಾರೆ. ಇದನ್ನೂ ಓದಿ: ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್ ಅಂಬಾನಿ ಕುಟುಂಬ!
ಚುನಾವಣೆಗೂ ಮುನ್ನ ಕುಮಾರಸ್ವಾಮಿಯವರೇ ನುಡಿಮುತ್ತು ಹೇಳಿದ್ರಲ್ಲ. ಅವರ ನುಡಿ ಮುತ್ತುಗಳು ನಿಮ್ಮ ಹತ್ತಿರ ದಾಖಲೆ ಇದೆಯಲ್ಲ. ನಮ್ಮ ಬಗ್ಗೆ ಅವರು ಹೇಳಲೇಬೇಕು, ನಾವು ನಮ್ಮ ಬಗ್ಗೆ ಶಭಾಷ್ ಗಿರಿ ಕೊಡಿ ಅಂತ ಕೇಳಕ್ಕಾಗಲ್ಲ, ಕೇಳೋದೂ ಇಲ್ಲ. ಪಾಪ ಅವ್ರು ಇನ್ನೇನು ಮಾಡ್ತಾರೆ..? ಅವ್ರ ಕೈಯಲ್ಲಂತು ಏನೂ ಮಾಡೋಕೆ ಆಗಿಲ್ಲ. ಸರ್ಕಾರ ICU ನಲ್ಲಿ ಇತ್ತೋ ಅಥವಾ ಏನಾಗಿತ್ತೋ ಅಂತ ಜನ ಹೇಳಬೇಕು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ವರುಷ ಒಂದು ಸಮಸ್ಯೆಗಳು ನೂರೊಂದು – ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನ ವಜಾಗೊಳಿಸಲಿ: ಆರ್.ಅಶೋಕ್
ಬೆಲೆ ಏರಿಕೆಯಿಂದ ಹೇಗೆ ತತ್ತರಿಸಿದ್ರು ಅಂತ ತಾಯಂದಿರು ಹೇಳಬೇಕು? ಕುಮಾರಸ್ವಾಮಿ ಎಲೆಕ್ಷನ್‌ಗೆ ಮುಂಚೆನೇ ಕೆಟ್ಟ ಆಡಳಿತ ಇದೆ ಅಂತ ಹೇಳಿದ್ರು, ಈಗ ಮಾತನಾಡುತ್ತಿಲ್ಲ ಅಷ್ಟೇ. ಪಾಪ ಅವರು ನಮಗೆ ಶಭಾಷ್ ಗಿರಿ ಕೋಡೋಕೆ ಆಗುತ್ತಾ? ನಾವು ಸಹ ಅವರಿಂದ ಅದನ್ನ ನೀರಿಕ್ಷೆ ಮಾಡಿಲ್ಲ ಎಂದು ಕುಟುಕಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ನಿಮ್ಮೆಲ್ಲರ ಸಹಕಾರ, ಜನರಿಗೆ ಬಹಳ ತೃಪ್ತಿಕರವಾಗಿ ಸರ್ಕಾರ ನಡೆಸಿದ್ದೇವೆ. ಬರೀ ಗ್ಯಾರಂಟಿ ಒಂದೇ ಅಲ್ಲ. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಗಲ್ಲು ಹಾಕಿದ್ದೇವೆ. ಎಲೆಕ್ಷನ್ ಮತ್ತೆ ಬಂತು, ಮುಂದೆ ಅವರನ್ನು ಕಾರ್ಯರೂಪಕ್ಕೆ ತರಲು ಸಜ್ಜಾಗಿದ್ದೇವೆ. ಸಿಎಂ ಸಹ ಮೊನ್ನೆ ಸಭೆ ನಡೆಸಿ, ಟೆಂಡರ್ ಕರೆಯಲು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ನಿರ್ಧಾರವನ್ನ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ʻಪಬ್ಲಿಕ್ ಟಿವಿʼಯೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ಈ ನಿರ್ಧಾರವನ್ನ ಖಂಡಿಸುತ್ತೇನೆ. ಇದು ಶೋಭೆ ತರುವಂತಹದ್ದಲ್ಲ, ಅಧಿಕಾರ ಇದೆ ಅಂತ ರಾಜಕೀಯ ದೊಂಬರಾಟ ಮಾಡಲು ಹೊರಟಿದ್ದಾರೆ. ನೋಡೋಣ ಎಲ್ಲಿಯವರೆಗೆ ಇದೇ ರೀತಿ ಮಾಡ್ತಾರೆ ಅಂತ. ಬಿಜೆಪಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ವಿಚಾರ ಇಲ್ಲ, ಜನರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.
ಶಾಲೆಗಳಲ್ಲಿ ಹಿಜಬ್ (Hijab) ನಿಷೇಧ ವಾಪಸ್ ಪಡೆಯಬೇಕೆಂಬ ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ. ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ ಅಗತ್ಯ. ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ. ಈಗಲೇ ಎಚ್ಚೆತ್ತು ತೀರ್ಮಾನ ವಾಪಸ್ ಪಡೆಯಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ- ಹಿಜಬ್ ನಿಷೇಧ ವಾಪಸ್ಸಿಗೆ ವಿಜಯೇಂದ್ರ ಕಿಡಿ
ಕಾಂಗ್ರೆಸ್ ಸರ್ಕಾರ (Congress Government) ಭಂಡ ಸರ್ಕಾರ, ಹಿಜಬ್ ವಾಪಸ್ ಪಡೆಯಿರಿ ಅಂತ ಯಾವ ಮುಸ್ಲಿಂ ನಾಯಕರು ಹೇಳಿದ್ರು ಇವರಿಗೆ? ಅವರ ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೇ ಈರೀತಿ ಜನರನ್ನ ದಿಕ್ಕು ತಪ್ಪಿಸುತ್ತಿದ್ದಾರೆ. ಬರಗಾಲವನ್ನು ಮರೆತೇ ಬಿಟ್ಟಿದೆ ಸರ್ಕಾರ. ಕೂಡಲೇ ಹಿಜಬ್ ನಿಷೇಧ ವಾಪಸ್ ನಿರ್ಣಯ ಹಿಂದಕ್ಕೆ ಪಡಯಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್ ನಿಷೇಧಿಸಿರಲಿಲ್ಲ – ಸಿ.ಟಿ ರವಿ
ಸಿಎಂ ಹೇಳಿದ್ದೇನು?
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್ ಪಡೆಯಲಾಗುವುದು. ಬಿಜೆಪಿ ಸರ್ಕಾರ ಹಿಜಬ್ ನಿಷೇಧಿಸಿತ್ತು. ಅದನ್ನು ವಾಪಸ್ ಪಡೆಯಲಾಗುವುದು. ಹಿಜಬ್ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ. ಉಡುಪು ಅವರವರ ಇಷ್ಟ. ಹಿಜಬ್ ನಿಷೇಧ ವಾಪಸ್‌ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ. ಹಿಜಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಹೇಳಿದ್ದರು.
ಬೆಂಗಳೂರು: ಹೊಸ ವರ್ಷದ (New Year) ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ (Liquor Company) ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ (Congress Government Guarantee) ಗುಂಗಲ್ಲಿದ್ದ ಜನರಿಗೆ ಬೆಲೆ ಏರಿಕೆ ಶಾಕ್ ಬ್ಯಾಕ್ ಟು ಬ್ಯಾಕ್ ಎದುರಾಗುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು ಈಗಾಗಲೇ ಗಗನಕ್ಕೇರಿವೆ. ಒಂದು ಕಡೆ ಸರ್ಕಾರ ಜನರ ಮೂಗಿಗೆ ತುಪ್ಪ ಸವರಿದಂತೆ, ಈ ಕಡೆ ಉಚಿತ ಭಾಗ್ಯ ಕೊಟ್ಟು ಮತ್ತೊಂದು ಕಡೆ ದರ ಏರಿಸಿ ಹೊರೆಯನ್ನು ಜನರ ಮೇಲೆಯೇ ಹಾಕುತ್ತಿದೆ. ಇದನ್ನೂ ಓದಿ: ಪಿಓಕೆ ಸಮಸ್ಯೆ ಕುರಿತ ಅಮಿತ್ ಶಾ ಹೇಳಿಕೆಗೆ ರಾಗಾ ಆಕ್ಷೇಪ
ಎಷ್ಟು ದುಬಾರಿ?
ಜನವರಿ 1ರಿಂದ ಮದ್ಯ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಹಾಲಿ ಓಟಿ 180 ಎಂಎಲ್‌ಗೆ 100 ರೂಪಾಯಿ ಇದ್ದು, ಜ.1 ರಿಂದ ಓಟಿ ಬೆಲೆ 123 ರೂ.ಗೆ ಏರಿಕೆಯಾಗಲಿದೆ. ಬಿಪಿ ದರ ಹಾಲಿ 123 ರೂ. ಇದ್ದು ಜನವರಿಯಿಂದ 159 ರೂ. ಆಗಲಿದೆ. 8ಪಿಎಂ ದರ ಹಾಲಿ 100 ರೂ. ಇದ್ದು 123 ರೂ.ಗೆ ಏರಲಿದೆ. ಇದನ್ನೂ ಓದಿ: ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್ ಟಾರ್ಗೆಟ್!
ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಜನವರಿ 1ರಿಂದ ದರ ಏರಿಕೆ ಮಾಡುವಂತೆ ಬಾರ್ (Bar) ಮಾಲೀಕರಿಗೆ ಕಂಪನಿಗಳಿಂದ ಸೂಚನೆ ನೀಡಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಈ ಕಾರಣ ಗ್ರಾಹಕರ ಮೇಲೆ ಹೊರೆ ಹಾಕಲೇಬೇಕಾದ ಹಿನ್ನೆಲೆ ದರ ಏರಿಕೆಗೆ ಕಂಪನಿಗಳು ನಿರ್ಧಾರ ಮಾಡಿವೆ.
ಈ ಸಂಬಂಧ ಬಾರ್ ಮಾಲೀಕರಿಗೆ ಅಂದರೆ ಎಂಆರ್‌ಪಿ ಬಾರ್ ಮಾಲೀಕರಿಗೆ ಮೆಸೇಜ್ ಮೂಲಕ ಕಂಪನಿಗಳು ಮಾಹಿತಿ ರವಾನೆ ಮಾಡಿದ್ದು, ಸೂಚನೆಯಂತೆ ದರ ನಿಗದಿಯಂತೆ ಸಹಕರಿಸುವಂತೆ ಮನವಿ ಮಾಡಿವೆ.
ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35,000 ಕೋಟಿ ರೂ. ಗುರಿ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದಾರೆ.
ಕೋಲಾರ: ರಾಜ್ಯದ ಜನ ಕಾಂಗ್ರೆಸ್‌ಗೆ (Congress) ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು (Sriramulu) ಹೇಳಿದ್ದಾರೆ.
ಕೋಲಾರದ (Kolar) ಮುಳಬಾಗಿಲಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ (Lok Sabha Elections) ನಂತರ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸರ್ಕಾರ ಬೀಳುತ್ತೆ ಅನ್ನೋದನ್ನ ನಾನು ಒಪ್ಪಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಆ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡಿಯಲಿ ಬಿಡಿ. ಇನ್ನೂ ಯಾವುದೇ ಆಪರೇಷನ್ ಕಮಲ ಮಾಡುವುದಕ್ಕೆ ಹೋಗುವುದಿಲ್ಲ, ಬಹುಮತದೊಂದಿಗೆ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ನುಡಿದಿದ್ದಾರೆ.
ಡಿಕೆಶಿ ಸಿಬಿಐ ಕೇಸ್ ವಾಪಸ್ ವಿಚಾರ ಕುರಿತು ಮಾತನಾಡಿದ ಅವರು, ಸಿಬಿಐ ತನಿಖೆ (CBI Investigation) ಆಗಬೇಕಿದ್ದ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನ ಕ್ಯಾಬಿನೆಟ್ ವಾಪಸ್ ಪಡೆಯಲು ಅನುಮತಿ ನೀಡಿರುವುದು ನಮಗೆ ಭಯವಾಗಿದೆ. ಸರ್ಕಾರವನ್ನ ಬೊಂಬೆಯಂತೆ ಅವರು ನಡೆಸಿಕೊಳ್ಳುತ್ತಿದ್ದು, ಸರ್ಕಾರವೇ ಅವರಿಗೆ ತಲೆಬಾಗಿದೆಯಾ ಅನ್ನೋ ಪ್ರಶ್ನೆ ಮೂಡಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್ ವಾರ್ನಿಂಗ್
ಡಿಕೆಶಿ ಅವರಿಗೆ ಕಾನೂನಿನ ಬಗ್ಗೆ ಗೌರವ ಇದ್ದಿದ್ದರೇ, ಪ್ರಕರಣದಿಂದ ನ್ಯಾಯಯುತವಾಗಿ ಹೊರಬರುವ ವಿಶ್ವಾಸ ಇದ್ದಿದ್ದರೇ ಈ ರೀತಿಮಾಡುತ್ತಿರಲಿಲ್ಲ. ಕ್ಯಾಬಿನೆಟ್ ನಲ್ಲಿ ಈ ರೀತಿಯ ವಿಚಾರಗಳೇ ಚರ್ಚೆಗೆ ಬರುವುದಿಲ್ಲ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಇಂತಹ ವಿಷಯ ಚರ್ಚೆಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದೇ ವೇಳೆ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಹಿರಿಯ ನಾಯಕರಲ್ಲಿ ಅಸಮಾಧಾನ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಹಿರಿಯರು ಸೇರಿ ವಿಜಯೇಂದ್ರ ಅವರಿಗೆ ಅಧಿಕಾರ ಕೊಟ್ಟಿದ್ದಾರೆ, ಹೀಗಾಗಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಪಕ್ಷ ಮುನ್ನಡೆಸುವ ಕೆಲಸ ಮಾಡುತ್ತೇವೆ. ಅಸಮಾಧಾನ ಆಗಿರುವ ಯತ್ನಾಳ್ ಸೋಮಣ್ಣ ಅವರೂ ಸಮಧಾನ ಆಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲಕಿಯ ಅಚ್ಚರಿ ಬದುಕು- 14 ವರ್ಷದಿಂದ ಕೇವಲ ಬೆಲ್ಲ, ಹಾಲು ಸೇವಿಸ್ತಿದ್ದಾಳೆ ಈಕೆ!
ಇನ್ನೂ ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಸೇರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ. ಅವರು ಪಕ್ಷಕ್ಕೆ ಬರುವುದರಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ನನ್ನ ಅವರ ಮಧ್ಯೆ ಇರುವುದು ವೈಯಕ್ತಿಕ. ಆದ್ರೆ ರಾಜಕೀಯವಾಗಿ ನನ್ನ ಅವರ ನಡುವೆ ಏನೂ ದ್ವೇಷವಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕಾರ್ಮಿಕರ (Labours) ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು, ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.
ವಿಧಾನಸೌಧದ (Vidhana Soudha) ಕಾರ್ಮಿಕ ಇಲಾಖೆಯ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನ ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಗ್ರಾಹಕರಿಗೆ ರಶೀದಿ ನೀಡದೆ 1.62 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ ಅರೆಸ್ಟ್
ಶೂದ್ರ ಮತ್ತು ಮಹಿಳೆಯರನ್ನು ಶತ-ಶತಮಾನಗಳ ಕಾಲ ಶಿಕ್ಷಣದಿಂದ (Education) ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು, ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆ ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು, ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಟಿಹೆಚ್‌ಡಿಸಿಎಲ್ ಜೊತೆ 15,000 ಕೋಟಿ ರೂ. ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ
ಸಹಾಯಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. 83% ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯ ಬಿಟ್ಟರೆ, 2ನೇ ಅತಿದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವವರನ್ನು ನಾವು ವಿರೋಧಿಸಬೇಕು ಎಂದು ತಿಳಿಸಿದರು.
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲವಾಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅಂತ ಗ್ಯಾರಂಟಿ ಯೋಜನೆ ಸಮರ್ಥ ಮಾಡಿಕೊಂಡರು. ಕಾರ್ಯಕ್ರಮದಲ್ಲಿ 9.60 ಲಕ್ಷ ವಿದ್ಯಾರ್ಥಿಗಳಿಗೆ 226 ಕೋಟಿ ಶೈಕ್ಷಣಿಕ ಧನ ಸಹಾಯವನ್ನ ಸಿಎಂ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಸಂತೋಷ್ ಲಾಡ್, ಮುನಿಯಪ್ಪ ಸೇರಿ ಹಲವರು ಭಾಗವಹಿಸಿದ್ದರು. ಇದನ್ನೂ ಓದಿ: ನನ್ನ ಹೆಸರಲ್ಲಿ ಪೂಜೆ ಮಾಡಿಸ್ತಿರೋ ಹೆಣ್ಣುಮಕ್ಕಳಿಗೆ ಒಳ್ಳೆಯದಾಗಲಿ: ಸಿದ್ದರಾಮಯ್ಯ
ಬೆಂಗಳೂರು: ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು (Congress Guarantee) ಕೊಟ್ಟು ಕೈ ತೊಳೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ʻಕತ್ತಲೆಭಾಗ್ಯʼ ಹೆಸರಿನಲ್ಲಿ 6ನೇ ಗ್ಯಾರಂಟಿ ಕೊಡಲು ಸಿದ್ಧವಾಗಿದೆ. ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ, ಸರ್ಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ.
ರಾಜ್ಯ @INCKarnataka ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!!
ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2023
HDK ಟ್ವೀಟ್‌ನಲ್ಲಿ ಏನಿದೆ?
ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸನ್ನಾಹವನ್ನೂ (ಸಿದ್ಧತೆ) ನಡೆಸಿದೆ. ಅದರ ಹೆಸರು ಕತ್ತಲೆಭಾಗ್ಯ. ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ (Gruha Jyoti Scheme) ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ.
ಕಾವೇರಿ ಬಗ್ಗೆ ಸರ್ಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರ್ಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರ್ಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಆಗುತ್ತಾ?
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್‌ವೆಲ್‌ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆ ಎಳೆಯುತ್ತಿದೆ ಕಾಂಗ್ರೆಸ್ ಸರ್ಕಾರ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ.
ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರ್ಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ 20%ರಷ್ಟು ವಿದ್ಯುತ್ತನ್ನು ಸರ್ಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರ್ಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ?
ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರ್ಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ.
ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರ್ಕಾರದ್ದು. ಆ ಕಾರಣಕ್ಕಾಗಿಯೇ ಸರ್ಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ. ಇದನ್ನೂ ಓದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ 2 ದಿನ ವರುಣಾರ್ಭಟ – ಯೆಲ್ಲೋ ಅಲರ್ಟ್ ಘೋಷಣೆ
ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರ್ಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರ್ಕಾರದ ಉತ್ತರವೇನು? ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರವೇ (Congress Government) ಶಿವಮೊಗ್ಗ ಗಲಭೆಗೆ ಮುಖ್ಯಕಾರಣ. ಈ ಸರ್ಕಾರ ಇರುವ ವರೆಗೆ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲಿಮರು ತೀರ್ಮಾನಿಸಿದ್ದಾರೆ. ಹಿಂದೂ ಸಮಾಜವನ್ನು ಹೇಡಿ ಸಮಾಜವೆಂದು ತೋರಿಸುವ ಪ್ರಯತ್ನ ಅವರು ಮಾಡುತ್ತಿದ್ದಾರೆ. ಸಾಮೂಹಿಕ ದಂಗೆಗೆ ಪ್ರಚೋದನೆ ಕೊಡುತ್ತಿದ್ದಾರೆ ಎಂದು ಹಿಂದೂಪರ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕಿಡಿಕಾರಿದ್ದಾರೆ.
ಕಾರವಾರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂತ್ರಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಮುಸ್ಲಿಮರಿಗೆ (Muslims) ತಾನು ಹತ್ತಿರ ಎಂದು ತೋರಿಸಿಕೊಳ್ಳುವ ಪ್ರಯತ್ನದ ಪ್ರತಿಫಲವಾಗಿ ಊರೂರಿನಲ್ಲೂ ದಂಗೆಯ ವಾತಾವರಣ ಸೃಷ್ಟಿಯಾಗಿದೆ. ಗಲಭೆಗೆ ಸರ್ಕಾರದ ಬೆಂಬಲವಿದೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲಲ್ಲಿ ಮುಸ್ಲಿಮರು ಸ್ಕಾಟ್ ಫ್ರೀ ಯಾಗಿ ತಿರುಗುತಿದ್ದಾರೆ. ಅವರಿಗೆ ಸರ್ಕಾರ ಏನೂ ಮಾಡುವುದಿಲ್ಲ ಎಂಬ ಧೈರ್ಯವಿದೆ. ಕರ್ನಾಟಕದಲ್ಲಿ ಮುಂಬರುವ ದಿನಗಳು ಭಯಾನಕವಾಗಿರಲಿದೆ ಎಂದು ತೋರಿಸಿಕೊಡುತ್ತಿದ್ದಾರೆ. ಎಚ್ಚರಿಕೆಯ ವಾತಾವರಣ ರೂಪಿಸುತಿದ್ದಾರೆ, ನೀವು ಎಚ್ಚರಿಕೆಯಿಂದಿರಿ ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇವೆ ಎಂಬ ಹೇಳಿಕೆ ಕೊಡಲು ಸಿದ್ದರಾಮಯ್ಯ (Siddaramaiah) ಅವರೇ ಕಾರಣ ಆಗುವುದನ್ನು ಮುಂದಿನ ದಿನಗಳಲ್ಲಿ ನೋಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲೇ ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗಿದೆ. ಮಂಗಳೂರಿನಲ್ಲಿ ಏನು ಮಾಡಲಾಗಿಲ್ಲವೋ ಅದೆಲ್ಲವನ್ನು ಶಿವಮೊಗ್ಗಕ್ಕೆ ಸ್ಥಳಾಂತರ ಮಾಡಿದ್ದಾರೆ. ಶಿವಮೊಗ್ಗ ಅವರ ಬ್ರೀಡಿಂಗ್ ಸೆಂಟರ್ ಆಗುತ್ತಿದೆ. ನಾಳೆ ದಿನ ಐಸಿಸ್, ಎಲ್‌ಇಟಿಗೆ ಶಿವಮೊಗ್ಗ ದಿಂದ ರಿಕ್ರೂಪ್ಮೆಂಟ್ ಆಗಿ ಹೋದರೂ ಆಶ್ಚರ್ಯವಿಲ್ಲ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ಅ. 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ- ಕೆನಡಾಗೆ ಭಾರತ ಗಡುವು
ಶಿವಮೊಗ್ಗ ಕುದಿಯುತ್ತಿರುವ ಲಾವದಮೇಲೆ ಕುಳಿತಿದೆ: ರಾಜ್ಯ ಕಾಂಗ್ರೆಸ್ ಸರ್ಕಾರವೇ ಶಿವಮೊಗ್ಗ ಗಲಭೆಗೆ ಮುಖ್ಯಕಾರಣ. ಈ ಸರ್ಕಾರ ಇರುವ ವರೆಗೇ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲಿಮರು ತೀರ್ಮಾನಿಸಿದ್ದಾರೆ. ಮುಸ್ಲಿಮರು ಹಿಂದೂ ಸಮಾಜವನ್ನು ಹೇಡಿ ಸಮಾಜವೆಂದು ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಾಮೂಹಿಕ ದಂಗೆಗೆ ಪ್ರೇರೇಪಣೆ ಕೊಡುತಿದ್ದಾರೆ. ಹಿಂದೂಗಳನ್ನು ಯುದ್ಧಕ್ಕೆ ಬರುವಂತೆ ಪ್ರಚೋದನೆ ಮಾಡುತ್ತಿದ್ದಾರೆ. ಯಾವಾಗ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದರೂ ಆಗೆಲ್ಲಾ ಹಿಂದೂಗಳು ಬದುಕುವುದೇ ಕಷ್ಟವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) ಅವಧಿಯಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ, 6ನೇ ಗ್ಯಾರಂಟಿ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೋ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಎಸ್ಸಿಪಿ ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ.ಗಳನ್ನ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ. ರಾಜ್ಯ ಸರ್ಕಾರ ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ 34 ಸಾವಿರ ಕೋಟಿ ಕೊಡುವ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು ಎಸ್‌ಸಿಪಿ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ ಎಂದು ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಮನಸಿಲ್ಲದೇ ಎಸ್ಸಿಪಿ ಟಿಎಸ್ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಎಸ್ಸಿ-ಎಸ್ಟಿ ಸಮುದಾಯಕ್ಕಿರುವ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ ಎಸ್ಸಿ-ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್‌ಗೆ ಇರುವ ನಿರ್ಲಕ್ಷ್ಯ ಧೋರೆಣೆ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು- ಸುಪ್ರೀಂ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ ರಾಜ್ಯ ಸರ್ಕಾರದ (Congress Government) ವಿರುದ್ಧ ಸೋಮವಾರ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ರಾಜ್ಯಪಾಲರಿಗೆ ದೂರು ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ (Udupi College Case) ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ (Muslims) ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ಗಳನ್ನ ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ ಎಂದು ಕಿಡಿ ಕಾರಿದರು.
ಇದಕ್ಕೂ ಮುನ್ನ, ಮತಾಂತರ (Conversion) ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಮಸೂದೆ ಮಂಡನೆಯಾದ ಬಳಿಕ ರಾಜ್ಯಪಾಲರ ಅಂಕಿತ ಪಡೆಯಲು ಬರುತ್ತೆ. ಆಗ ಬಿಲ್ ಅನ್ನು ಮಾನ್ಯ ಮಾಡದಂತೆ ತಿಸ್ಕರಿಸಬೇಕು ಎಂದು ಕೇಳಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿ – ಉಡುಪಿಯ ಪಾದಬೆಟ್ಟುವಿನಲ್ಲಿ ವಿಶೇಷ ಹೋಮ
ಮತಾಂತರ, ಗೋಹತ್ಯೆ ವಿಚಾರವಾಗಿ ಮಾತನಾಡಿದಾಗ ನಮಗೆ ರಾಜ್ಯಪಾಲರು ಸ್ಪಂದಿಸಿದ್ದಾರೆ. ಮತಾಂತರದಿAದ ಮನೆ ಮನಗಳನ್ನ, ದೇಶವನ್ನ ಒಡೆಯುವ ಕೆಲಸ ಆಗ್ತಿದೆ. ಹಾಗಾಗಿ ಅದಕ್ಕೆ ಅವಕಾಶ ಕೊಡಬಾರದು. ಈ ಕಾನೂನು ವಾಪಾಸ್ ಪಡೆದ್ರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತೆ ಅಂತಾ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: 135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಆಪರೇಷನ್ ಭೀತಿ ಕಾಡುತ್ತಿದ್ಯಾ ಎಂಬ ಗಂಭೀರವಾದ ಪ್ರಶ್ನೆ ಎದ್ದಿದೆ.
ಈ ಪ್ರಶ್ನೆ ಏಳಲು ಕಾರಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆಡಿರುವ ಒಂದು ಮಾತು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕುಳಿತು ತಂತ್ರ ಮಾಡಿದರೆ ಗೊತ್ತಾಗುತ್ತದೆ ಎಂದು ಸಿಂಗಾಪುರದಲ್ಲಿ (Singapore) ಸರ್ಕಾರ ಬೀಳಿಸಲು ತಂತ್ರ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.