Tag: congress govt

  • ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ – ಗೊಂದಲ, ಘರ್ಷಣೆ ತಪ್ಪಿಸಿ: ಅಶ್ವತ್ಥ ನಾರಾಯಣ್

    ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ – ಗೊಂದಲ, ಘರ್ಷಣೆ ತಪ್ಪಿಸಿ: ಅಶ್ವತ್ಥ ನಾರಾಯಣ್

    ಬೆಂಗಳೂರು: ಕಾಂಗ್ರೆಸ್ ನಾಯಕರು ಅಭಿವೃದ್ಧಿ ಮರೆತು, ಮತಗಳವು, ಸಮಾಜದಲ್ಲಿ ಗೊಂದಲ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ ಎಂದು ಶಾಸಕ ಡಾ‌. ಸಿ.ಎನ್.ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದರು.

    ಬೆಂಗಳೂರಿನಲ್ಲಿ ಮಾತಾಡಿದ ಅಶ್ವಥ್‌ ನಾರಾಯಣ್, ರಣದೀಪ್ ಸುರ್ಜೇವಾಲಾ ಅವರು ಮತಗಳ್ಳತನದ ವಿಷಯ ಬಿಟ್ಟು ‌’ಐ ಲವ್ ಮೊಹಮ್ಮದ್’ ಆಗುವುದನ್ನು ಹೋಗಿ ನೋಡಬೇಕು. ಐ ಲವ್ ಮೊಹಮ್ಮದ್‌ ನಡೆಸುವ ವ್ಯಕ್ತಿಗಳ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಸಮಾಜ ಉರಿದು ಹೋಗುತ್ತಿದೆ. ಇದರ ಬಗ್ಗೆ ಗಮನಿಸುವ ಬದಲು ಸರ್ಕಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಮಂತ್ರಿಗಳು ಏನು ಮಾಡಲು ಹೊರಟಿದ್ದೀರಿ? ಒಳ್ಳೆಯದಂತೂ ಮಾಡುತ್ತಿಲ್ಲ, ಅಭಿವೃದ್ಧಿ ಮಾಡುವುದಿಲ್ಲ, ಆಡಳಿತ ಮಾಡುತ್ತಿಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಿಲ್ಲ, ಮನೆ – ನೀರು ಕೊಡುವುದಿಲ್ಲ ಎಂದು ದೂರಿದರು. ನೀವು ಬಾಯಿಗೆ ಮಣ್ಣು ಹಾಕುತ್ತೀರಿ ಎಂದು ಟೀಕಿಸಿದರು. ಗೃಹ ಸಚಿವರೇ ನೀವೇನಾದರೂ ಎಚ್ಚರವಿದ್ದರೆ ಕ್ರಮ ಕೈಗೊಳ್ಳಿ. ನೀವು ಮುಖ್ಯಮಂತ್ರಿ ಲೋಕದಲ್ಲಿದ್ದೀರಿ. ಜನರು ಇಂಥ ಗೊಂದಲಗಳ ನಡುವೆ ಘರ್ಷಣೆಗಳಲ್ಲಿ ಸಿಲುಕುವುದು ಬೇಡ ಎಂದು ತಿಳಿಸಿದರು.

    ಐ ಲವ್ ಮೊಹಮ್ಮದ್ ಎಂಬ ಮೆರವಣಿಗೆಯನ್ನು ಯಾಕೆ ಮಾಡುತ್ತಿದ್ದಾರೆ? ಇದರ ಹಿಂದೆ ಇರುವವರು ಯಾರು ಎಂದು ಪ್ರಶ್ನಿಸಿದರು. ಸಮಾಜದಲ್ಲಿ ಈ ರೀತಿ ಕೋಮುಗಲಭೆ ಮಾಡಲು, ಪ್ರಚೋದಿಸಲು, ಸಮಾಜದಲ್ಲಿ ಶಾಂತಿ ಇರಬಾರದು, ಗಲಭೆ ಹುಟ್ಟುಹಾಕಬೇಕೆಂಬ ದುರುದ್ದೇಶದಿಂದ ಮಾಡುತ್ತಿರುವ ಪ್ರಯತ್ನ ಇದು. ಈ ಮುಂಚೆಯೂ ಮೆರವಣಿಗೆ ಪ್ರಾರಂಭ ಆಗುವ ಮೊದಲು ಐ ಲವ್ ಮೊಹಮ್ಮದ್ ಪೋಸ್ಟರ್‌ಗಳಿಂದ ಪ್ರಾರಂಭವಾಗಿದೆ ಎಂದು ತಿಳಿಸಿದರು.

    ಸರ್ಕಾರವಂತೂ ನಿಷ್ಕ್ರಿಯವಾಗಿದೆ. ಇದರ ಬಗ್ಗೆ ಕ್ರಮ ವಹಿಸುತ್ತಿಲ್ಲ. ಬೇಹುಗಾರಿಕೆ ನಿಷ್ಕ್ರಿಯವಾಗಿದ್ದು, ಇದಕ್ಕೆ ಕುಮ್ಮಕ್ಕು ಕೊಡುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ ಎಂದರಲ್ಲದೇ, ಇದಕ್ಕೆ ಪ್ರತಿಕ್ರಿಯೆ ಕೊಡದಿರಿ ಎಂದು ಸಮಾಜಕ್ಕೆ ಮನವಿ ಮಾಡಿದರು.

    ರಾಜ್ಯಕ್ಕೆ ಜಾತಿಗಣತಿ ಅಧಿಕಾರ ಇದೆಯೇ?
    ಇವರಿಗೆ ಏನು ಕೊಟ್ಟರೂ ತೃಪ್ತಿ ಇಲ್ಲ. ಯಾರೂ ಸಮಾಧಾನದಿಂದ ನೆಮ್ಮದಿಯಿಂದ ಬಾಳಬಾರದು ಎಂಬುದೇ ಸ್ಪಷ್ಟ ಉದ್ದೇಶ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತದೆಯಲ್ಲವೇ? ಜಾತಿಗಣತಿ ಮಾಡಲು ಯಾರಿಗೆ ಅಧಿಕಾರ ಇದೆ? ರಾಜ್ಯಕ್ಕೆ ಅಧಿಕಾರ ಇದೆಯೇ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರಶ್ನಿಸಿದರು. ಇದು ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಇದು ಪರಿಪೂರ್ಣ ಗಣತಿ ಆಗಲು ಸಾಧ್ಯವೇ ಎಂದು ಕೇಳಿದರು. ಜನರು ಇದರಲ್ಲಿ ಭಾಗವಹಿಸಬೇಕೆಂದು ತಿಳಿಸುವುದಾಗಿ ಹೇಳಿದರು.

    ಬಿಪಿಎಲ್ ಕಾರ್ಡ್ ರದ್ದು ಮಾಡುವ ಮಹಾನುಭಾವರು ಯಾರು? ಮಾಡಿಸಿದ ಆದಾಯ ದೃಢಪತ್ರ ಪಡೆಯುವ ಸರ್ಕಾರದಲ್ಲಿ ಇರುವವರು ಯಾರು? ಸರ್ಕಾರ ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧವಾಗಿದೆ. ಈ ಗಣತಿ, ಈ ಸರ್ವೇ ನಮ್ಮ ದೌರ್ಭಾಗ್ಯ ಆಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಜನಕಲ್ಯಾಣ ಯೋಜನೆಗಳನ್ನು ಹಿಂಪಡೆಯುವ ಹುನ್ನಾರ ಇದರ ಹಿಂದಿದೆ ಎಂದು ಆರೋಪಿಸಿದರು.

    ಸಮಾಜ ಒಡೆಯುವವರು, ದೇಶ ಒಡೆಯುವ ಕೆಲಸವನ್ನು ಅಥವಾ ತುಷ್ಟೀಕರಣ ರಾಜಕೀಯ, ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುವ ಕೆಲಸ, ಭಾಷೆಗಳ ಮೇಲೆ ಎತ್ತಿ ಕಟ್ಟುವವರು ಇದ್ದಾರೆ. ಒಂದೆಡೆ ವಿವಿಧತೆಯಲ್ಲಿ ಏಕತೆ ಎನ್ನುತ್ತಾರೆ. ಇನ್ನೊಂದೆಡೆ ವಿವಿಧತೆಯಲ್ಲಿ ವಿವಿಧತೆ ಮಾಡುವವರಿದ್ದಾರೆ ಎಂದು ಆಕ್ಷೇಪಿಸಿದರು. ಅಂಥ ಮಹಾನುಭಾವರೇ ಕಾಂಗ್ರೆಸ್ಸಿಗರು ಎಂದು ದೂರಿದರು.

  • GST ನೋಟಿಸ್‌ ಕೊಟ್ಟ ಕೋತಿ ಕೆಲಸ ರಾಜ್ಯ ಸರ್ಕಾರದ್ದು- ನೋಟಿಸ್ ವಾಪಸ್ ಪಡೆಯಬೇಕು: ಸಿ.ಟಿ.ರವಿ

    GST ನೋಟಿಸ್‌ ಕೊಟ್ಟ ಕೋತಿ ಕೆಲಸ ರಾಜ್ಯ ಸರ್ಕಾರದ್ದು- ನೋಟಿಸ್ ವಾಪಸ್ ಪಡೆಯಬೇಕು: ಸಿ.ಟಿ.ರವಿ

    -‌ ಜಿಎಸ್‌ಟಿ ನೋಟಿಸ್ ವಿರುದ್ಧ ಸಣ್ಣ ವರ್ತಕರ ಪ್ರತಿಭಟನೆಗೆ ಬಿಜೆಪಿ ಬೆಂಬಲ

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುವ ಮೂಲಕ ಡಿಜಿಟಲ್ ಇಂಡಿಯಾ ಅನ್ನು ಹಿಮ್ಮೆಟ್ಟಿಸುವುದಕ್ಕೆ ಷಡ್ಯಂತ್ರ ಮಾಡಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (C.T.Ravi) ಆರೋಪಿಸಿದ್ದಾರೆ.

    ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಐ ಪಾವತಿಯಲ್ಲಿ ಜಾಗತಿಕ ದಾಖಲೆ ಬರೆದಿದೆ. ಆದರೆ ಕಾಂಗ್ರೆಸ್ ಸರ್ಕಾರದವರು ಜನರಿಗೆ ಆತಂಕ ಮತ್ತು ಭಯದ ವಾತಾವರಣ ನಿರ್ಮಿಸಿದ್ದಾರೆ. ಅಂದರೆ ಕೇಂದ್ರದ ಸರ್ಕಾರದ ಡಿಜಿಟಲ್ ವಹಿವಾಟು ಯೋಜನೆಯ ಪ್ರಯತ್ನಕ್ಕೆ ಭಯ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ನೋಟಿಸ್ ಪರಿಣಾಮದಿಂದ ಸಣ್ಣ ವ್ಯಾಪಾರಿಗಳು ಭಯಗೊಂಡು ಯುಪಿಐ ಪಾವತಿ ಇಲ್ಲ. ನಗದು ಮಾತ್ರ ಎಂದು ಬೋರ್ಡ್ ಹಾಕಿದ್ದಾರೆ. ಭಯಪಡಿಸಿದ ಪರಿಣಾಮ ಮಧ್ಯವರ್ತಿಗಳು ಮತ್ತು ಕೆಲವು ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿರುವ ದೂರು ಕೂಡ ಬಂದಿದೆ. ಆದಕಾರಣ ರಾಜ್ಯ ತೆರಿಗೆ ಇಲಾಖೆ ನೀಡಿರುವ ನೋಟಿಸನ್ನು ಸರ್ಕಾರ ಹಿಂಪಡೆದು ಭಯದ ವಾತಾವರಣದಿಂದ ಸಣ್ಣ ವ್ಯಾಪಾರಿಗಳನ್ನು ಪಾರು ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರಿನ ನಂದಿನಿ ಬೂತ್‌ಗೆ 1 ಕೋಟಿ 3 ಲಕ್ಷ ಟ್ಯಾಕ್ಸ್!

    ರಾಜ್ಯ ಸರ್ಕಾರದ್ದೇ ಕೋತಿಯ ಪಾತ್ರ
    ತೆರಿಗೆ ಸಂಗ್ರಹವನ್ನು ಹೆಚ್ಚಿಸುವ ಸಲುವಾಗಿ ಹಣಕಾಸು ಇಲಾಖೆಯ ಸಭೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ಕೊಟ್ಟಿದ್ದಾರೆ. ಸಿದ್ದರಾಮಯ್ಯ ನಿರ್ದೇಶನದ ಮೇಲೆಯೆ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಉಪ ಮುಖ್ಯಮಂತ್ರಿಗಳು ಹೇಳಿದ ರೀತಿಯಲ್ಲಿ ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದ ಹಾಗೆ ಇದೆ. ಆದರೆ, ಇಲ್ಲಿ ಕೋತಿ ಯಾರು ಎಂದು ಸಿಟಿ ರವಿ ಪ್ರಶ್ನಿಸಿದರು.

    ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದು, ಇದರಲ್ಲಿ ಕೇಂದ್ರವನ್ನು ಏಕೆ ದೂರುತ್ತಿದ್ದೀರಿ ಎಂದು ಕೇಳಿದರು. ಇಲ್ಲಿ ಕೋತಿ ಕೆಲಸವನ್ನು ಮಾಡಿರುವುದು ನೀವು ಕೇಂದ್ರದ ಮೇಲೆ ತಪ್ಪು ಬರುವ ರೀತಿಯಲ್ಲಿ ನಿಮ್ಮ ಹೇಳಿಕೆಗಳು ತಪ್ಪು ಸಂದೇಶ ಕೊಡುತ್ತಿವೆ. ಅಲ್ಲಿಗೆ ಕೋತಿ ಕೆಲಸ ಮಾಡಿರುವುದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಂದು ಬಹಳ ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ವೈರಲ್‌ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ

    ಇಡೀ ದೇಶದಲ್ಲಿ ಸಣ್ಣ ವ್ಯಾಪಾರಸ್ಥರಿಗೆ ನೋಟಿಸ್ ಹೋಗಿಲ್ಲ. ಕರ್ನಾಟಕದಲ್ಲಿ ಮಾತ್ರ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಹೋಗಿದೆ. ಕೇರಳ, ಮಹಾರಾಷ್ಟ್ರ ಸೇರಿ ಎಲ್ಲಾ ಕಡೆ ನೋಟಿಸ್ ನೀಡಿದ್ದರೆ ಕೇಂದ್ರ ತೆಗೆದುಕೊಂಡಿರುವ ತೀರ್ಮಾನವೆಂದು ನೀವು ಆರೋಪ ಮಾಡಿದರೆ ಅದನ್ನು ಒಪ್ಪಬಹುದಾಗಿತ್ತು. ಮಹಾರಾಷ್ಟ್ರದಲ್ಲಿ ಸಣ್ಣ ವ್ಯಾಪಾರಿಗಳು, ಹೂವು, ತರಕಾರಿ, ಊಟದ ಗಾಡಿ, ಮಾಂಸವನ್ನು ಮಾರಾಟ ಮಾಡುವವರು ಇಂತಹವರಿಗೆ ನೋಟಿಸ್ ಹೋಗಿಲ್ಲ. ಕರ್ನಾಟಕದಲ್ಲಿ ಏಕೆ ನೋಟಿಸ್ ನೀಡಿದ್ದಾರೆ ಎಂದು ಪ್ರಶ್ನಿಸಿದರು.

    ಸೇವಾ ವಲಯಕ್ಕೆ ತೆರಿಗೆ ವಿನಾಯಿತಿ ಇರುವಂತದ್ದು ವಾರ್ಷಿಕ ವಹಿವಾಟು ಒಂದೂವರೆ ಕೋಟಿ ರೂ. ಮೀರಿದರೆ ಶೇ.1 ರಷ್ಟು ತೆರಿಗೆ. ಅದರಲ್ಲೂ ಶೇ.1 ರಲ್ಲಿ ಕೇಂದ್ರದ ಜಿಎಸ್‍ಟಿ ಶೇ.0.5 ರಷ್ಟು ಹೋದರೆ ರಾಜ್ಯದ ಎಸ್‍ಜಿಎಸ್‍ಟಿಗೆ ಶೇ.0.5 ರಷ್ಟು ಪಾವತಿಸುವ ಬಗ್ಗೆ ಪತ್ರಿಕೆಯಲ್ಲಿ ವಿವರವಾಗಿ ನಮೂದಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಕೇಂದ್ರದ ನೀತಿಯ ಪರಿಣಾಮವೆಂದು ಏಕೆ ಆರೋಪ ಹೊರಿಸುತ್ತೀರಿ ಎಂದು ಕೇಳಿದರು.

    ನಿಮ್ಮ ಸರ್ಕಾರದ ಎಡವಟ್ಟು ಎಂದು ಮೊದಲು ಒಪ್ಪಿಕೊಳ್ಳಿ. ನೀವು ಕೊಟ್ಟಿರುವ ನೋಟಿಸ್ ವಾಪಸ್ ತೆಗೆದುಕೊಳ್ಳಿ ಎಂದು ಒತ್ತಾಯಿಸಿದರು. ಸಣ್ಣ ವ್ಯಾಪಾರಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ, ಸದರಿ ಪ್ರತಿಭಟನೆಗೆ ನಮ್ಮ ನೈತಿಕ ಬೆಂಬಲವಿದೆ. ಬಿಜೆಪಿ ಮುಖಂಡರು ಕೂಡ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು.

    ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಒಪ್ಪಿಕೊಳ್ಳಿ
    ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ರಾಜಮಾರ್ಗಗಳು ಇವೆ. ಅದನ್ನು ಬಿಟ್ಟು ಸಣ್ಣ ವ್ಯಾಪಾರಿಗಳಿಗೆ ಬರೆಹಾಕುವ ಕೆಲಸವನ್ನು ಮಾಡಬೇಡಿ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಒಪ್ಪಿಕೊಳ್ಳಿ ಎಂದು ಸಿ.ಟಿ. ರವಿ ಒತ್ತಾಯಿಸಿದರು. ಬೆಂಗಳೂರು ಐಟಿ ವಲಯದ ರಾಜಧಾನಿ. ಈ ಐಟಿ ವಲಯಕ್ಕೆ ಡಿಜಿಟಲ್ ಪಾವತಿ ಮಾದರಿಯಾಗಿತ್ತು. ತರಕಾರಿ ವ್ಯಾಪಾರ ಮಾಡುವವರು ಡಿಜಿಟಲ್‍ನಲ್ಲಿ ಪಾವತಿ ಮಾಡಿಕೊಳ್ಳುತ್ತಾರೆ ಎಂದು ಅಂತರಾಷ್ಟ್ರೀಯ ಸುದ್ದಿಯಾಗಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ ಸರ್ಕಾರ ಭಯಪಡಿಸುವ ನಿರ್ಧಾರದಿಂದ ವಾಪಸ್ ಸರಿಯಬೇಕು ಎಂದು ಆಗ್ರಹಿಸಿದರು.

  • ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

    ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

    -ಕಾಲ್ತುಳಿತ ವಿಷಯಾಂತರಕ್ಕೆ ಜಾತಿಗಣತಿ ಪ್ರಸ್ತಾಪ ಎಂದ ವಿಜಯೇಂದ್ರ

    ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ, ಕುತಂತ್ರ ಮತ್ತು ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಆಕ್ಷೇಪಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಹಳ ದೊಡ್ಡ ಮನಸ್ಸು ಮಾಡಿ, 16ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯದ ಪರವಾಗಿ ವಿಚಾರಮಂಡನೆ ಮಾಡಿದ್ದು, ಅವರಿಗೆ ಅಭಿನಂದನೆಗಳು. ಕೇಂದ್ರದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳಿಗೆ ಮುಜುಗರವೇ, ಇವರು ರಾಜ್ಯದ ಮುಖ್ಯಮಂತ್ರಿಯೇ ಅಥವಾ ಕಾಂಗ್ರೆಸ್ಸಿನ ಮುಖ್ಯಮಂತ್ರಿಗಳೇ. ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿ ಹಣಕಾಸಿನ ವಿಚಾರ ಪ್ರಸ್ತಾಪ ಮಾಡಿ, ಸರಿಪಡಿಸಿ ಎಂದು ಹೇಳಿದ್ದಾರೆ ಎಂದರು.ಇದನ್ನೂ ಓದಿ:ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

    ದೆಹಲಿ (Delhi) ಸಭೆಯಲ್ಲಿ ಭಾಗವಹಿಸಿದ್ದು ಸ್ವಾಗತಾರ್ಹ. ಆದರೆ, ಮುಖ್ಯಮಂತ್ರಿಗಳನ್ನು ನೋಡಿದರೆ ಪಾಪ ಅನಿಸುತ್ತದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಕ್ರೋಢೀಕರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಹಾಗಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕರ್ನಾಟಕವು 100 ರೂ. ಕೊಟ್ಟರೆ ಕೇವಲ 13 ರೂ. ಬರುತ್ತಿದೆ ಎಂದು ಅರ್ಧಸತ್ಯವನ್ನಷ್ಟೇ ಅವರು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

    ಬಂದ ಅನುದಾನ ರಾಜ್ಯದಲ್ಲಿ ಸದ್ಬಳಕೆ ಆಗುತ್ತಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ, ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಇದ್ಯಾವುದು ಸತ್ಯವಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

    ಜಾತಿಗಣತಿ ವಿಚಾರ- ಈಗ ಜ್ಞಾನೋದಯ:
    ನಮ್ಮ ಹೋರಾಟಗಳ ಪರಿಣಾಮವಾಗಿ ಸುಮಾರು 3 ತಿಂಗಳ ಹಿಂದೆ ರಾಜ್ಯ ಸರ್ಕಾರ
    ಕ್ಕೆ ಮುಜುಗರ ಆಗುತ್ತಿತ್ತು. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕಾಂತರಾಜು ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದರು. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಹೇಳಿದರು. 4-5 ಕ್ಯಾಬಿನೆಟ್ ಸಭೆ ಆದರೂ ಅನುಷ್ಠಾನ ಆಗಲಿಲ್ಲ. 10 ವರ್ಷ ಕಳೆದಿದ್ದು, ಅಂಕಿಅಂಶಗಳು ಅವೈಜ್ಞಾನಿಕ, ಇದನ್ನು ತರಾತುರಿಯಲ್ಲಿ ಮಾಡಬಾರದು. ಹೊಸದಾಗಿ ಮಾಡಬೇಕಿದೆ ಎಂಬುವುದರ ಬಗ್ಗೆ ಎಲ್ಲವೂ ಚರ್ಚೆ ನಡೆದಿದೆ ಎಂದರು.

    ಇದರ ಕುರಿತು ಕಾಂಗ್ರೆಸ್ಸಿನ ಡಿಕೆಶಿ ಅವರು ಸೇರಿ ಸಚಿವರೂ ವಿರೋಧ ವ್ಯಕ್ತಪಡಿಸಿದ್ದರು. ಇದರ ನಡುವೆ ಈಗ ಅವರಿಗೆ ಜ್ಞಾನೋದಯವಾಗಿದೆ. ಯಾವಾಗ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟರೋ, ಈಗ ವಿಷಯಾಂತರ ಮಾಡಲು ಜಾತಿಗಣತಿ ವಿಷಯ ಪ್ರಸ್ತಾಪಿಸಿದ್ದಾರೆ. ಅಂತಿಮವಾಗಿ ಈ ವಿಷಯದಲ್ಲಿ ಇವರು ಏನೂ ಮಾಡಲು ಸಾಧ್ಯವಿಲ್ಲ. ಕೇಂದ್ರವು ಈಗಾಗಲೇ ಜನಗಣತಿ, ಜಾತಿ ಜನಗಣತಿ ಮಾಡುವುದಾಗಿ ಘೋಷಿಸಿದೆ. ಜಾತಿಗಣತಿಯು ರಾಜ್ಯ ಸರ್ಕಾರದ ಪರಿಮಿತಿಗೆ ಬರುತ್ತದೆಯೇ ಎಂಬ ಅನುಮಾನಗಳು ಹೆಚ್ಚಾಗಿವೆ. ಗೊಂದಲ ಸೃಷ್ಟಿಸಲು ಇದನ್ನು ಮಾಡುತ್ತಿದ್ದಾರೆ. ತಾರ್ಕಿಕ ಅಂತ್ಯಕ್ಕೆ ಒಯ್ಯುವ ಮನಸ್ಸು ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಹೇಳಿದರು.

    ಹಿಂದೂಗಳು ಟಾರ್ಗೆಟ್, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರ:
    ಮೊನ್ನೆ ನಮ್ಮ ಪಕ್ಷದ ಮುಖಂಡರ ಜೊತೆಗೂಡಿ ದಕ್ಷಿಣ ಕನ್ನಡಕ್ಕೆ ಭೇಟಿ ಕೊಟ್ಟಿದ್ದೇವೆ. ಅಲ್ಲಿರುವ ಜಿಲ್ಲಾಧಿಕಾರಿಗಳು, ಕಮಿಷನರ್, ಎಸ್ಪಿಯವರನ್ನು ಭೇಟಿ ಮಾಡಿದ್ದೇವೆ. ಇದು ಕೋಮು ನಿಗ್ರಹ ದಳ ಅಲ್ಲ, ಹಿಂದೂಗಳನ್ನು ಟಾರ್ಗೆಟ್ ಮಾಡಿ, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರ ಈ ದಳ ರಚನೆ ಹಿಂದಿದೆ ಎಂದು ಆರೋಪಿಸಿದರು. ಇದ್ಯಾವುದಕ್ಕೂ ನಾವು ಬಗ್ಗುವುದಿಲ್ಲ. ಈ ರೀತಿ ದಬ್ಬಾಳಿಕೆ ಕುತಂತ್ರವನ್ನು ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದ್ದು, ಅದನ್ನು ಎದುರಿಸುತ್ತೇವೆ ಎಂದರು.ಇದನ್ನೂ ಓದಿ: ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

  • ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕೋ ಕೆಲಸ ಬಿಜೆಪಿ ಮಾಡಿದೆ: ಆರ್.ಅಶೋಕ್‌

    ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕೋ ಕೆಲಸ ಬಿಜೆಪಿ ಮಾಡಿದೆ: ಆರ್.ಅಶೋಕ್‌

    ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ (Belagavi Session) ಈ ಬಾರಿ ಸರ್ಕಾರವನ್ನ ಸಮರ್ಥವಾಗಿ ಎದುರಿಸಿ ಕಟ್ಟಿ ಹಾಕಿದ್ದೇವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ (R.Ashok) ತಿಳಿಸಿದರು.

    ಬೆಳಗಾವಿ ಅಧಿವೇಶನ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಾರಿ ಬಿಜೆಪಿ ಒಗ್ಗಟ್ಟಿನಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಿದೆ. ಈ ಬಾರಿ 5 ದಿನ ಮಾತ್ರ ನಮಗೆ ಚರ್ಚೆಗೆ ಅವಕಾಶ ಸಿಕ್ತು. ಅದರಲ್ಲಿ ವಕ್ಫ್, ಬಾಣಂತಿಯರ ಸಾವು, ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಿ ಸರ್ಕಾರದ ವಿರುದ್ಧ ಪ್ರಬಲವಾಗಿ ಹೋರಾಟ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ವಿರುದ್ಧ ಸಂಚು: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿಟಿ ರವಿ

    ವಕ್ಫ್ ಬೋರ್ಡ್ ವಿಚಾರವಾಗಿ ನಮ್ಮ ಹೋರಾಟದ ಫಲವಾಗಿ ಸರ್ಕಾರ ನ್ಯಾಯಾಂಗ ತನಿಖೆ ಮಾಡಿದೆ. ಬಾಣಂತಿಯರ ಸಾವು ವಿಚಾರದಲ್ಲೂ ನ್ಯಾಯಾಂಗ ತನಿಖೆ ಮಾಡಲು ಒಪ್ಪಿದ್ದು, ಇದು ನಮ್ಮ ಹೋರಾಟದ ಫಲ ಎಂದರು.

    ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. 30 ಕ್ಕೂ ಹೆಚ್ಚು ಶಾಸಕರು ಚರ್ಚೆ ಮಾಡಿದ್ದಾರೆ. ನಮ್ಮ ಶಾಸಕರು ಒಂದಲ್ಲ ಒಂದು ವಿಚಾರದಲ್ಲಿ ಮಾತಾಡೋ ವ್ಯವಸ್ಥೆ ಮಾಡಿದ್ದೇನೆ. ನಮ್ಮ ಎಲ್ಲಾ ಶಾಸಕರಿಗೆ ಮಾತಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಉತ್ತರ ಕರ್ನಾಟಕ ಚರ್ಚೆ ಬಗ್ಗೆ ನೀಲನಕ್ಷೆ ಇರಬೇಕು ಅಂತ ಸರ್ಕಾರಕ್ಕೆ ಹೇಳಿದ್ದೇವೆಂದರು. ಸಿಎಂ ಸಂತೆ ಭಾಷಣ ಬಿಟ್ಟ ಘೋಷಣೆ ಮಾಡಿದ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಆ ಬಣ ಈ ಬಣ ಎನ್ನದೇ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ ನಾಯಕರು

  • ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ: ವಿಜಯೇಂದ್ರ ಕಿಡಿ

    ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ: ವಿಜಯೇಂದ್ರ ಕಿಡಿ

    ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ (Congress Govt) ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಇಷ್ಟಾದರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕಿಡಿ ಕಾರಿದ್ದಾರೆ.

    ಬೆಂಗಳೂರಿನ (Bengaluru) ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಬಂಡೆ ಅನ್ನೋದೇ ಡೇಂಜರ್ – ಸಿದ್ದರಾಮಯ್ಯ ಸ್ಥಿತಿಗೆ ಪರೋಕ್ಷವಾಗಿ ಡಿಕೆಶಿ ಕಾರಣ ಎಂದ ಹೆಚ್‍ಡಿಕೆ

    ವಿಜಯೇಂದ್ರ ಎಕ್ಸ್‌ ಖಾತೆಯಲ್ಲಿ ಏನಿದೆ?
    ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂತಹ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ. ಇದನ್ನೂ ಓದಿ: ನನ್ನ ವಿರುದ್ಧದ ಕೇಸ್ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಡ: ಕುಮಾರಸ್ವಾಮಿ

    ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ. ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

  • ರಾಜ್ಯ ಸರ್ಕಾರದ ದಿಕ್ಕು, ದಾರಿ ತಪ್ಪಿದೆ: ಜೋಶಿ ವಾಗ್ದಾಳಿ

    ರಾಜ್ಯ ಸರ್ಕಾರದ ದಿಕ್ಕು, ದಾರಿ ತಪ್ಪಿದೆ: ಜೋಶಿ ವಾಗ್ದಾಳಿ

    ಧಾರವಾಡ: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ದಿಕ್ಕು, ದಾರಿ ತಪ್ಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಒಬ್ಬರ ವಿರುದ್ಧ ಒಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸ್ಥಾನ ಸೃಷ್ಟಿ ಮಾಡಬೇಕು ಎಂಬ ಒತ್ತಾಯ ಎಬ್ಬಿಸುತ್ತಿದ್ದಾರೆ. ಇದನ್ನು ಸಿಎಂ ತಮ್ಮ ಬಾಲಂಗೋಚಿಗಳ ಕಡೆಯಿಂದ ಹೇಳಿಸುತ್ತಿದ್ದಾರೆ. ಇತ್ತ ಸಿಎಂ ಅವರನ್ನೇ ಬದಲಾವಣೆ ಮಾಡಿಸಬೇಕು ಎಂದು ಡಿಸಿಎಂ ತಮ್ಮ ಹಿಂಬಾಲಕರ ಕಡೆಯಿಂದ ಹೇಳಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿಕೆಶಿ ಸಿಎಂ ಆಗ್ತಾರೆ: ಜಿಟಿ ದೇವೇಗೌಡ

    ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ. ಒಬ್ಬರಿಗೊಬ್ಬರು ತಮ್ಮ ಹಿಂಬಾಲಕರನ್ನು ಬಿಡುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳತ್ತದೆ ಎನ್ನುತ್ತಾರೆ. ಏನು ಹೇಳಿದರೂ ಕ್ರಮ ಆಗಿಲ್ಲ. ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಬಂದು ತಲುಪಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್ ಹೀಗಾಗಿದೆ. ಗ್ಯಾರಂಟಿ ಕೊಟ್ಟರೂ ಲೋಕಸಭೆಯಲ್ಲಿ ಬಹುಪಾಲು ಬಿಜೆಪಿ ಮುಂದೆ ಇದೆ. ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ರಾಜ್ಯದ ಆಡಳಿತ ನಿಷ್ಟ್ರಿಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಇವರು ಕೂಡಲೇ ತಮ್ಮ ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

    ಬೆಲೆ ಏರಿಕೆ ಮಾಡಿ ಜನರಿಂದಲೇ ಹಣ ಪೀಕಿ ಅದೇ ದುಡ್ಡನ್ನು ಜನರಿಗೆ ಕೊಡುತ್ತಿದ್ದಾರೆ. ಒಂದು ಕೈಯಿಂದ ಕಸಿದುಕೊಂಡು ಇನ್ನೊಂದು ಕೈಯಿಂದ ಕೊಡುತ್ತಿದೆ. ಸಿದ್ದರಾಮಯ್ಯ ಒಬ್ಬ ವಿಫಲ ಮುಖ್ಯಮಂತ್ರಿ ಎಂದ ಜೋಶಿ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬೀಳುತ್ತದೆ ಎಂಬ ಗುಮಾನಿ ಬಗ್ಗೆ ನಾನು ಮೊದಲೂ ಪ್ರತಿಕ್ರಿಯೆ ನೀಡಿರಲಿಲ್ಲ. ಈಗಲೂ ಪ್ರತಿಕ್ರಿಯಿಸಲಾರೆ. ಜನ ಅವರಿಗೆ ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ. ಜನತೆಯ ಆದೇಶ ಐದು ವರ್ಷ. ಈ ಅವಧಿಯಲ್ಲಿ ಅವರು ಚೆನ್ನಾಗಿಯೇ ಆಡಳಿತ ಮಾಡಲಿ ಎಂಬುದೇ ನಮ್ಮ ಉದ್ದೇಶ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಅವರವರ ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಅದಕ್ಕೆ ಇವರು ಆಪರೇಶನ್ ಕಮಲ ಎನ್ನುತ್ತಾರೆ. ಆ ವಿಚಾರ ನಮ್ಮ ತಲೆಯಲ್ಲಿಲ್ಲ ಎಂದರಲ್ಲದೇ. ಸಮಾಜ ವಿಜ್ಞಾನ ಪಠ್ಯದಲ್ಲಿ ವೀರಶೈವ ಪದ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಿದ್ದರಾಮಯ್ಯ ಮತ್ತೆ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯತ ಎಂದು ಮೊದಲು ಹೇಳಿತ್ತು. ಈಗ ವೀರಶೈವ ಪದ ತೆಗೆದಿದೆ. ಅನಗತ್ಯವಾಗಿ ಕಿಚ್ಚು ಹಚ್ಚುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

  • ಸೋಲಿನಿಂದಾಗಿ ಜನರ ಮೇಲೆ ಸರ್ಕಾರ ಸೇಡು; ಇಂಧನ ದರ ಇಳಿಸುವವರೆಗೂ ಬಿಜೆಪಿ ಹೋರಾಟ- ಆರ್.ಅಶೋಕ್

    ಸೋಲಿನಿಂದಾಗಿ ಜನರ ಮೇಲೆ ಸರ್ಕಾರ ಸೇಡು; ಇಂಧನ ದರ ಇಳಿಸುವವರೆಗೂ ಬಿಜೆಪಿ ಹೋರಾಟ- ಆರ್.ಅಶೋಕ್

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ (Congress) ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ಹೊರಹಾಕಿದರು.

    ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸ್ಕೂಟರ್ ಶವಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉತ್ತರ ಭಾರತಕ್ಕೆ ಹೋಲಿಸಿದ್ರೆ ದಕ್ಷಿಣ ಭಾರತದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೆ

    ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೋ ರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.

    ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್‌ನಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ

    ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್‌ಗೆ ಮಾನವಿದ್ದರೆ ದರ ಏರಿಕೆ ವಾಪಸ್ ಪಡೆಯಲಿ ಎಂದು ಆಗ್ರಹಿಸಿದರು.

  • ಸರ್ಕಾರ ನಾಶ ಮಾಡೋದಕ್ಕೆ ನನ್ನ, ಸಿಎಂ ಮೇಲೆ ಶತ್ರು ಭೈರವಿ ಯಾಗ ಮಾಡಿಸ್ತಿದ್ದಾರೆ: ಡಿಕೆಶಿ ಬಾಂಬ್

    ಸರ್ಕಾರ ನಾಶ ಮಾಡೋದಕ್ಕೆ ನನ್ನ, ಸಿಎಂ ಮೇಲೆ ಶತ್ರು ಭೈರವಿ ಯಾಗ ಮಾಡಿಸ್ತಿದ್ದಾರೆ: ಡಿಕೆಶಿ ಬಾಂಬ್

    ಬೆಂಗಳೂರು: ನನ್ನ ಮತ್ತು ಮುಖ್ಯಮಂತ್ರಿಗಳ ಮೇಲೆ ಹಾಗೂ ನಮ್ಮ ಸರ್ಕಾರದ (Congress Govt) ವಿರುದ್ಧ ಶತ್ರು ಭೈರವಿ ಯಾಗ (Shatru Bhairavi Yaaga) ಮಾಡಿಸುತ್ತಿದ್ದಾರೆ. ಇದು ನಮ್ಮ ಸರ್ಕಾರವನ್ನು ನಾಶ ಮಾಡಬೇಕು ಅಂತಾ ರಾಜಕೀಯದಲ್ಲಿ ಇರುವವರೇ ಮಾಡಿಸುತ್ತಿರುವ ಯಾಗ ಅದಕ್ಕಾಗಿ ಅಘೋರಿಗಳ ಮೊರೆ ಹೋಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮತ್ತು ಮುಖ್ಯಮಂತ್ರಿಗಳ ಮೇಲೆ, ನಮ್ಮ ಸರ್ಕಾರದ ವಿರುದ್ಧ ಯಾಗ ನಡೆಯುತ್ತಿದೆ. ದೊಡ್ಡ ಮಟ್ಟದ ಪೂಜೆ ನಡೆಯುತ್ತಿದೆ. ಯಾವ ಪೂಜೆ ಮಾಡ್ತಿದ್ದಾರೆ? ಯಾರು ಮಾಡ್ತಿದ್ದಾರೆ? ಎಲ್ಲಿ ಮಾಡ್ತಿದ್ದಾರೆ? ಅಂತ ಎಲ್ಲವನ್ನು ಬರೆದುಕೊಟ್ಟಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಮೋದಿ ಭಾಷಣ ಪ್ರಧಾನಿ ಕಚೇರಿಯ ಘನತೆ ಕ್ಷೀಣಿಸುವಂತೆ ಮಾಡಿದೆ: ಮನಮೋಹನ್ ಸಿಂಗ್ ಆರೋಪ

    ಕೇರಳದ ರಾಜರಾಜೇಶ್ವರಿ ದೇವಸ್ಥಾನದ (Kerala’s Rajarajeshwari Temple )ಆಸುಪಾಸಿನಲ್ಲಿ ಶತ್ರು ನಾಶಕ್ಕಾಗಿ ಶತ್ರು ಭೈರವಿ ಯಾಗ ನಡೆಯುತ್ತಿದೆ. ನಮ್ಮ ಸರ್ಕಾರವನ್ನು ನಾಶ ಮಾಡಬೇಕು ಅಂತ ಅಘೋರಿಗಳ ಮೊರೆ ಹೋಗಿದ್ದಾರೆ. ಅದಕ್ಕಾಗಿ ಹಂದಿ, ಕುರಿ ಸೇರಿ ಎಲ್ಲಾ ಬಲಿ ಕೊಡ್ತಿದ್ದಾರೆ. ಇದೆಲ್ಲವನ್ನ ಯಾರು ಮಾಡಿಸುತ್ತಿದ್ದಾರೆ ಅಂತ ನಮಗೆ ಗೊತ್ತಿದೆ. ಅವರ ನಂಬಿಕೆ ಅವರು ಮಾಡಲಿ. ಆದ್ರೆ ನಾವು ನಂಬಿರುವ ದೇವರು ನಮ್ಮನ್ನ ಕಾಪಾಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ಪ್ರೀಕ್ವೆಲ್ ಸಿನಿಮಾಗೆ ಮಾಲಿವುಡ್ ನಟ ಎಂಟ್ರಿ

    ಶತ್ರು ಸಂಹಾರ ಯಾಗ ಮಾಡಿಸುವುದಕ್ಕಾಗಿಯೇ 5 ಹಂದಿ, 3 ಎಮ್ಮೆ, 21 ಕಪ್ಪು ಬಣ್ಣದ ಕುರಿ, 21 ಮೇಕೆಗಳನ್ನ ಬಲಿ ಕೊಡ್ತಿದ್ದಾರೆ. ಈ ಶತ್ರು ಸಂಹಾರ ಯಾಗ ಯಾರು ಮಾಡ್ತಿದ್ದಾರೆ? ಯಾರು ಮಾಡಿಸುತ್ತಿದ್ದಾರೆ? ಎಲ್ಲವೂ ನನಗೆ ಗೊತ್ತಿದೆ. ಇದೆಲ್ಲವನ್ನು ರಾಜಕೀಯದಲ್ಲಿ ಇರುವವರೇ ಮಾಡೋದು. ಆದ್ರೆ ಈ ಬಗ್ಗೆ ಸದ್ಯಕ್ಕೆ ನಾನು ಏನೂ ಮಾತಾಡೋದಿಲ್ಲ ಎಂದು ಆತಂಕಕಾರಿ ಸಂಗತಿಯನ್ನ ಬಿಚ್ಚಿಟ್ಟಿದ್ದಾರೆ.

    ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನಲ್ಲಿ ಕಿಡಿಗೇಡಿಗಳು ಶತ್ರು ಸಂಹಾರ ಯಾಗ ಮಾಡ್ತಿದ್ದಾರೆ. ಆದ್ರೆ ನಮ್ಮ ದೇವರ ಕೃಪೆ ಬಹಳ ಜೋರಾಗಿದೆ. ನಾನು ಹೊರಗೆ ಹೋಗುವ ಪ್ರತಿದಿನ ದೇವರಿಗೆ ಕೈ ಮುಗಿದು ಹೋಗ್ತೀನಿ. ಅದಕ್ಕೆ ಇಷ್ಟು ರಕ್ಷಣೆ ಎಲ್ಲಾ ಇದೆ ಎಂದ ಅವರು ಶತ್ರು ಸಂಹಾರ ಯಾಗದ ಬಗ್ಗೆ ಚೀಟಿಯಲ್ಲಿ ಬರೆದುಕೊಂಡಿದ್ದನ್ನ ಮಾಧ್ಯಮಗಳ ಮುಂದೆ ಪ್ರಸ್ತುತಪಡಿಸಿದ್ದಾರೆ. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್‌ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್ 

  • ಕಾಂಗ್ರೆಸ್ ಸರ್ಕಾರ ಈ ನಾಡನ್ನ ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ: ಬಿಎಸ್‌ವೈ ಕಿಡಿ

    ಕಾಂಗ್ರೆಸ್ ಸರ್ಕಾರ ಈ ನಾಡನ್ನ ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ: ಬಿಎಸ್‌ವೈ ಕಿಡಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Govt.) ಕರ್ನಾಟಕದಲ್ಲಿ ಮತಾಂಧ ಶಕ್ತಿಗಳನ್ನು ಬೆಳೆಸುವ ಕೆಲಸ ಮಾಡ್ತಿದೆ. ಒಂದೇ ವರ್ಷದಲ್ಲಿ ಈ ನಾಡನ್ನ ಮತಾಂಧರ ಯುದ್ಧಭೂಮಿಯನ್ನಾಗಿ ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಾಗ್ದಾಳಿ ನಡೆಸಿದರು.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು (Bengaluru BJP Office) ಡಿ.ವಿ ಸದಾನಂದಗೌಡ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ವೈ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕೊಲೆಯಾಗಿದೆ, ತಮ್ಮದೇ ಪಕ್ಷದ ಚುನಾಯಿತ ಪ್ರತಿನಿಧಿಗೆ ನ್ಯಾಯ ಒದಗಿಸುವುದು ಬಿಟ್ಟು ಆರೋಪಿ ಪರ ಸರ್ಕಾರ ನಿಂತಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳನ್ನ ಮುಸ್ಲಿಂಗೆ ಮತಾಂತರ ಮಾಡುವ ಕೆಲಸ ಆಗುತ್ತಿದೆ: ಮುನಿರತ್ನ ಆರೋಪ

    ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ. ಉಡುಪಿ ಹಾಸ್ಟೆಲ್ ವಿಡಿಯೋ ಪ್ರಕರಣ ತಾರ್ಕಿಕ ಅಂತ್ಯ ಮುಟ್ಟಿಲ್ಲ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ಮೇಲೆ ಯಾವ ಕ್ರಮಗಳೂ ಆಗಿಲ್ಲ. ಹೆಣ್ಣು ಮಕ್ಕಳು ರಾಜ್ಯದಲ್ಲಿ ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಸರ್ಕಾರದ ಆಡಳಿತ ವೈಖರಿ ಎಲ್ಲರಿಗೂ ತಿಳಿದಿದೆ. ಸಿದ್ದರಾಮಯ್ಯ ಸರ್ಕಾರದ ಆದ್ಯತೆಗಳೇನು ಅಂತ ಇದರಿಂದ ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ರೈತರು, ವಿದ್ಯಾರ್ಥಿಗಳು, ಮಹಿಳೆಯರ ಬದುಕಿಗೆ ಗ್ಯಾರಂಟಿ ಇಲ್ಲದಂತಾಗಿದೆ. ಭಯೋತ್ಪಾದಕರಿಗೆ, ದರೋಡೆಕೋರರಿಗೆ, ಹಲ್ಲೆಕೋರರಿಗೆ ಈ ಸರ್ಕಾರ ಗ್ಯಾರಂಟಿ ಕೊಟ್ಟಿದೆ ಅನ್ನೋದು ಸ್ಪಷ್ಟವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ

    ಮತಾಂಧ ಶಕ್ತಿ ಬೆಳೆಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡ್ತಿದೆ. ಒಂದೇ ವರ್ಷದಲ್ಲಿ ನಾಡನ್ನು ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ. 700ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ರೈತರಿಗೆ ನೀಡುತ್ತಿದ್ದ 4 ಸಾವಿರ ರೂ. ಕಿಸಾನ್ ಸಮ್ಮಾನ್ ನಿಧಿಯನ್ನು ನಿಲ್ಲಿಸಿದ್ದಾರೆ. ಇದೊಂದು ಕ್ರೂರ ಮತ್ತು ಕಲ್ಲು ಬಂಡೆಯಂಥ ಸರ್ಕಾರ. ಈಗಾಗಲೇ ಸರ್ಕಾರ ದಿವಾಳಿ ಆಗಿದೆ, ಅಭಿವೃದ್ಧಿ ಶೂನ್ಯ ಆಗಿದೆ, ನೀರಾವರಿ ಕೆಲಸಗಳು ಸ್ಥಗಿತವಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

  • ಹಿಜಬ್ ನಿಷೇಧ ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ- ಇಂದು ಉಲ್ಟಾ ಹೊಡೆದ್ರಾ ಸಿಎಂ?

    ಹಿಜಬ್ ನಿಷೇಧ ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ- ಇಂದು ಉಲ್ಟಾ ಹೊಡೆದ್ರಾ ಸಿಎಂ?

    ಮೈಸೂರು: ಹಿಜಬ್ ನಿಷೇಧ ಆದೇಶ ವಾಪಸ್ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಎದ್ದಿದೆ.

    ಈ ಸಂಬಂಧ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಿಜಬ್ ನಿಷೇಧ (Hijab Ban Withdraw) ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡ್ತಿದ್ದೀವಿ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಸಿದ್ದರಾಮಯ್ಯ ತೆಗೆದುಕೊಂಡಿರೋ ನಿರ್ಧಾರ ಖಂಡಿಸ್ತೇನೆ: ಯಡಿಯೂರಪ್ಪ

    ಈ ಮೂಲಕ ಭಾರೀ ವಿವಾದದ ಬಳಿಕ ಸಿಎಂ ಎಚ್ಚೆತ್ತುಕೊಂಡು ಇಂದು ಹೇಳಿಕೆ ಬದಲಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಬಳಿಕ ಹಿಜಬ್ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವ ಮೂಲಕ ಸಿಎಂ ಮತ್ತೊಂದು ವಿವಾದದಲ್ಲಿ ಸಿಲುಕಿದ್ರಾ ಅನ್ನೋ ಅನುಮಾನವೂ ಮೂಡಿದೆ. ಇದನ್ನೂ ಓದಿ: ಹಿಜಬ್‌ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ – ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಮುಸ್ಕಾನ್‌

    ಶುಕ್ರವಾರ ಸಿಎಂ ಹೇಳಿದ್ದೇನು..?: ನಿನ್ನೆ ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಹಿಜಬ್‌ ನಿಷೇಧಿಸಿತ್ತು. ಅದನ್ನು ವಾಪಸ್‌ ಪಡೆಯಲಾಗುವುದು. ಹಿಜಬ್‌ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌: ಸಿಎಂ ಸಿದ್ದರಾಮಯ್ಯ ಘೋಷಣೆ

    ಉಡುಪು ಅವರವರ ಇಷ್ಟ. ಹಿಜಬ್ ನಿಷೇಧ ವಾಪಸ್‌ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಹಿಜಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಹೇಳಿದ್ದರು.

    ಸಿಎಂ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಿಎಂ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದರು. ಹಿಜಬ್‌ ವಾಪಸ್‌ನಿಂದ ಮುಂದೆ ಆಗಬಹುದಾದ ಘಟನೆಗಳಿಗೆ ಸಿಎಂ ಅವರೇ ನೇರ ಕಾರಣ ಎಂದು ಬಿಜೆಪಿ ನಾಯಕರು ಕಿಡಿಕಾರಿದರು. ಈ ಬೆನ್ನಲ್ಲೇ ಇದೀಗ ಸಿಎಂ ನಾನು ಹಾಗೆ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.