– ಕಳೆದ 3-4 ತಿಂಗಳಿನಿಂದ ಹಣವೇ ಬಂದಿಲ್ಲ ಅಂತ ಆಕ್ಷೇಪ
ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ (Gruhalakshmi Scheme). ಆದ್ರೆ ಕಳೆದ 3-4 ತಿಂಗಳಿಂದ ಎರಡು ಸಾವಿರ ರೂಪಾಯಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ದೀಪಾವಳಿ (Deepavali) ಸಮಯದಲ್ಲೇ ಮನೆಗೆ ಮಹಾಲಕ್ಷ್ಮಿ ಬಾರದೇ ಇರೋದು ಗೃಹಲಕ್ಷ್ಮೀಯರ ಆಕ್ರೋಶಕ್ಕೆ ಕಾರಣವಾಗ್ತಿದೆ.
ಕಾಂಗ್ರೆಸ್ ಸರ್ಕಾರ 2023ರ ವಿಧಾನಸಭಾ ಚುನಾವಣೆಯ ವೇಳೆ ಪಂಚ ಗ್ಯಾರಂಟಿ (Congress Guarantee) ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ. ಈ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ ಮಹತ್ವದ್ದಾಗಿದೆ. ಇದ್ರಿಂದಾಗಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾಯಾಗುತ್ತಿತ್ತು. ಆದ್ರೆ, ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ಸರ್ಕಾರ ಹಣ ಹಾಕಲು ವಿಳಂಬ ಮಾಡುತ್ತಿದೆ. ಇದು ಗೃಹಲಕ್ಷ್ಮಿ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗ್ತಿದೆ. ಇದನ್ನೂ ಓದಿ: ಭಟ್ಕಳ| ಮದುವೆ ಮಂಟಪದಲ್ಲಿ ಪಾರ್ಕಿಂಗ್ ವಿಷಯಕ್ಕೆ ನಡುರಸ್ತೆಯಲ್ಲೇ ಮಾರಾಮಾರಿ
ಇನ್ನೂ ಸರ್ಕಾರ ಮಹಿಳೆಯರ ಮತಗಳ ಮೇಲೆ ಕಣ್ಣಿಟ್ಟು ಈ ಯೋಜನೆ ಜಾರಿಗೊಳಿಸಿತ್ತು. ಅದರಂತೆ ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಒದಗಿಸುವ ಗುರಿಯೊಂದಿಗೆ ಈ ಯೋಜನೆಯನ್ನ ಜಾರಿಗೆ ತಂದಿತ್ತು. ಆದ್ರೆ ಮಹಿಳೆಯರಿಗೆ ಮನೆ ನಡೆಸಲು, ಮಕ್ಕಳ ಶಿಕ್ಷಣಕ್ಕೆ ಮೊದಲಾದವುಗಳಿಗೆ ಈ ಹಣ ಸಹಾಯಕವಾಗ್ತಿಲ್ಲ ಅಂತಾ ಸರ್ಕಾರದ ವಿರುದ್ದ ಹರಿಹಾಯುತ್ತಿದ್ದಾರೆ. ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್
ಕಳೆದ 3-4 ತಿಂಗಳಿನಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಸರಿಯಾಗಿ ಹಣ ಜಮಾ ಆಗದೇ ಇರೋದಕ್ಕೆ ಗೃಹಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಮನ ಹರಿಸಿ, ಆದಷ್ಟು ಬೇಗ ಬಾಕಿ ಕಂತಿನ ಹಣ ಬಿಡುಗಡೆ ಮಾಡಿದ್ರೇ, ಮಹಿಳೆಯರು ದೀಪಾವಳಿ ಹಬ್ಬವನ್ನು ಖುಷಿಯಿಂದ ಮಾಡಬಹುದು ಅನ್ನೋದು ಜನರ ಕೋರಿಕೆ.ಇದನ್ನೂ ಓದಿ: ಪತಿಯಿಂದ ವೈದ್ಯೆ ಹತ್ಯೆ; ಮಗಳಿಗಾಗಿ ಕಟ್ಟಿಸಿದ್ದ 4 ಕೋಟಿ ರೂ. ಮನೆ ಇಸ್ಕಾನ್‌ಗೆ ದಾನ ಮಾಡಿದ ತಂದೆ
















