Tag: Congress Guarantee Scheme

  • ಗ್ಯಾರಂಟಿ ಎಫೆಕ್ಟ್: ಬೆಳಗಾವಿಯ ಏಕೈಕ ಯೋಗ & ಪ್ರಕೃತಿ ಚಿಕಿತ್ಸಾಲಯ ಬಂದ್

    ಗ್ಯಾರಂಟಿ ಎಫೆಕ್ಟ್: ಬೆಳಗಾವಿಯ ಏಕೈಕ ಯೋಗ & ಪ್ರಕೃತಿ ಚಿಕಿತ್ಸಾಲಯ ಬಂದ್

    ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬೆನ್ನತ್ತಿ ಸರ್ಕಾರ (Government) ಬಳಿ ಹಣವಿಲ್ಲದ ಕಾರಣ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಬೆಳಗಾವಿ (Belagavi) ಜಿಲ್ಲೆಯ ಏಕೈಕ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ (Yoga & Nature Care Centre) ಮುಚ್ಚಲ್ಪಟ್ಟಿದೆ.

    ಬೀಗ ಹಾಕಿರುವ ಆಸ್ಪತ್ರೆಯ ಎದುರು ಆಸ್ಪತ್ರೆಯನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿದ್ದ ಸರ್ಕಾರಿ ಯೋಗ ಹಾಗೂ ಪ್ರಕೃತಿ ಚಿಕಿತ್ಸಾಲಯದಲ್ಲಿ ಫಲಕ ಹಾಕಲಾಗಿದೆ. ಇದನ್ನೂ ಓದಿ: Ranji Trophy | 74 ವರ್ಷಗಳ ಬಳಿಕ ಮೈಲುಗಲ್ಲು – ಹೆಲ್ಮೆಟ್‌ನಿಂದ ರಣಜಿ ಫೈನಲ್‌ ತಲುಪಿದ ಕೇರಳ!

    ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಬಡ ರೋಗಿಗಳಿಗೆ ಆಯುಷ್ ಇಲಾಖೆಯಿಂದ ಉಚಿತವಾಗಿ ನ್ಯಾಚುರೋಪತಿ ಚಿಕಿತ್ಸೆ ನೀಡಲಾಗುತ್ತಿತ್ತು. ಸರ್ಕಾರದ ಬಳಿ ಹಣವಿಲ್ಲದ ಕಾರಣ ಆಸ್ಪತ್ರೆಯು ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ. ಸರ್ಕಾರವು ಎಸ್‌ಡಿಎಂ ಸಂಸ್ಥೆಯ ಸಹಯೋಗದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿತ್ತು. ಆದರೆ ಈ ಬಾರಿ ಟೆಂಡರ್ ಪ್ರಕ್ರಿಯೆ ನಡೆಸದ ಕಾರಣ ಆಸ್ಪತ್ರೆಯನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಮುಂಬೈ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಯೋಜನೆಗಳಲ್ಲಿ ‘ವಸತಿ ಜಿಹಾದ್’: ಶಿವಸೇನಾ ನಾಯಕ ಆರೋಪ

    ಸಂಕೇಶ್ವರ ಪಟ್ಟಣದಲ್ಲಿರುವ ಈ ಆಸ್ಪತ್ರೆಗೆ ದಿನನಿತ್ಯ ಹುಕ್ಕೇರಿ ತಾಲೂಕು ಸೇರಿದಂತೆ ವಿವಿಧೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಓರ್ವ ಮುಖ್ಯ ವೈದ್ಯ ಸೇರಿದಂತೆ ನಾಲ್ಕು ಸಿಬ್ಬಂದಿಯಿಂದ ಬೆನ್ನು ನೋವು, ಸಂಧಿವಾತ ಸೇರಿದಂತೆ ವಿವಿಧ ಥೆರಪಿಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಅನೇಕ ಬಡ ರೋಗಿಗಳಿಗೆ ಅನುಕೂಲವಾಗುತ್ತಿತ್ತು. ಈ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸಾವಿರಾರು ರೂ. ಪಡೆಯುತ್ತಿದ್ದ ಕಾರಣ ಬಡ ರೋಗಿಗಳಿಗೆ ಈ ಆಸ್ಪತ್ರೆ ಸಾಕಷ್ಟು ಅನುಕೂಲ ಕಲ್ಪಿಸಿತ್ತು. ಇದನ್ನೂ ಓದಿ: 10 ದಿನಗಳ ಒಳಗೆ ನಿಗಮ ಮಂಡಳಿಗೆ ನಿರ್ದೇಶಕರ ನೇಮಕ: ಚಂದ್ರಶೇಖರ್

    ಏಕಾಏಕಿ ಆಸ್ಪತ್ರೆಯನ್ನು ಬಂದ್ ಮಾಡಿರುವ ಕಾರಣ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಬಡವರಿಗೆ ಸಿಗುತ್ತಿದ್ದ ಇಂಥ ಸೇವೆಗಳನ್ನು ಪುನರಾರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಭೆ ಬಳಿಕ ವಿಧಾನಸೌಧದಲ್ಲೇ ಎರಡು ಬಾರ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳ ನಡುವೆ ಗಲಾಟೆ

  • ರಾಜ್ಯ ಸರ್ಕಾರ ಬೆಲೆ ಏರಿಕೆಯಿಂದ ಜನರ ತಲೆ ಬೋಳಿಸುವ ಕಾರ್ಯ: ಛಲವಾದಿ ಆಕ್ಷೇಪ

    ರಾಜ್ಯ ಸರ್ಕಾರ ಬೆಲೆ ಏರಿಕೆಯಿಂದ ಜನರ ತಲೆ ಬೋಳಿಸುವ ಕಾರ್ಯ: ಛಲವಾದಿ ಆಕ್ಷೇಪ

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯಿಂದ ಜನರ ತಲೆ ಬೋಳಿಸುವ ಕಾರ್ಯಕ್ಕೆ ಕೈ ಹಾಕಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ಷೇಪ ವ್ಯಕ್ತಪಡಿಸಿದರು.

    ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶನಿವಾರ ಕಾಂಗ್ರೆಸ್ ಶಾಸಕ ಹರಿಪ್ರಸಾದ್ ಅವರು, ಈ ಗ್ಯಾರಂಟಿಗಳು ಸಾಕು, ಅಭಿವೃದ್ಧಿ ಕಡೆಗೆ ಗಮನ ಕೊಡಿ ಎಂದಿದ್ದಾರೆ. ಇದೀಗ ಸರ್ಕಾರ ಮೆಟ್ರೋ ದರ ಏರಿಸಿದೆ. ಹಾಲಿನ ದರ ಏರಿಕೆ, ಸ್ಟಾಂಪ್ ಡ್ಯೂಟಿ ಹೆಚ್ಚಳ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದು, ದವಸ ಧಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಇಷ್ಟೆಲ್ಲ ಆದರೂ ಯಾವುದಕ್ಕೆ ದರ ಏರಿಸಬೇಕು ಎಂಬುದರಲ್ಲಿ ಸರ್ಕಾರ ಬ್ಯೂಸಿಯಾಗಿದೆ. ಈ ಸರ್ಕಾರ ಎಲ್ಲ ವಿಚಾರದಲ್ಲೂ ಕೈಚೆಲ್ಲಿ ಕುಳಿತಿದೆ. ಇವರಿಗೆ ಗ್ಯಾರಂಟಿ ಯಾವುದೇ ಕಾರಣಕ್ಕೂ ಅದನ್ನು ರದ್ದು ಮಾಡುವುದಿಲ್ಲ ಎಂಬ ವಾದ ಒಂದೆಡೆ, ಇನ್ನೊಂದೆಡೆ ಬೆಲೆ ಏರಿಕೆ ಮೂಲಕ ಜನರ ತಲೆ ಬೋಳಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.ಇದನ್ನೂ ಓದಿ: ಕೆಲಸದ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆ – ಚಾಕುವಿನಿಂದ ಇರಿದು ಓರ್ವನ ಹತ್ಯೆ

    ಇದೇ ವೇಳೆ ರಾಜ್ಯಪಾಲರು ಕ್ಷುಲ್ಲಕ ಕಾರಣಕ್ಕಾಗಿ ಸುಗ್ರೀವಾಜ್ಞೆಯನ್ನು ವಾಪಸ್ ಕಳಿಸಿದ್ದಾರೆ ಎಂಬ ಉಗ್ರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಲ್ಲಿ ಪೀಪಲ್ ಸ್ಟಾರ್ಟ್ ಸಿಲ್ಲಿ ಥಿಂಗ್ಸ್ ಓನ್ಲಿ ಎಂದರಲ್ಲದೆ, ಈ ಸರ್ಕಾರ ಬಂದಾಗಲೇ ಹೆಚ್ಚು ಕಡಿಮೆ ಸ್ಮಶಾನ ಸೇರುವ ಪರಿಸ್ಥಿತಿ ಬಂದಿದೆ. ಈ ಸರ್ಕಾರದ ಕೆಟ್ಟ ಹೆಸರು ಶೇ.99ಕ್ಕೆ ಹೋಗಿದೆ ಎಂದರು.

    ಮಾನ್ಯ ರಾಜ್ಯಪಾಲರಿಗೆ, ಈ ಫೈನಾನ್ಸ್ ವಿಚಾರದಲ್ಲಿ ಅಥವಾ ಮೈಕ್ರೋ ಫೈನಾನ್ಸ್ ಮಾಡುವವರಿಗೂ ಇವರಿಗೂ ಏನು ಸಂಬಂಧ ಇರುತ್ತದೆ. ಬಹಳ ಕಾಲದಿಂದ ನಾವು ಕ್ರಮಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ. ಇವತ್ತಿನವರೆಗೆ ಕ್ರಮ ಜರುಗಿಸಲು ಈ ಸರ್ಕಾರಕ್ಕೆ ಆಗಿಲ್ಲ. ಈಗ 10 ವರ್ಷಗಳ ಶಿಕ್ಷೆಯನ್ನು ಅದರಲ್ಲಿ ನಮೂದಿಸಿ ಕಳಿಸಿದ್ದಾರೆ. ಇಂತಹ ತೀರ್ಮಾನ ತೆಗೆದುಕೊಳ್ಳಲು ಅದು ಸದನದಲ್ಲಿ ಚರ್ಚೆ ಆಗಬೇಕಿತ್ತು. ಸದನದಲ್ಲಿ ಏನೂ ಚರ್ಚೆ ಆಗದೇ ನೀವು ಇಷ್ಟಾನುಸಾರ ಮಾಡುವುದು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಕೂಡ. ಆದ್ದರಿಂದಲೇ ಅವರು ವಾಪಸ್ ಕಳಿಸಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

  • ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಅನ್ನೋದು ಗೊತ್ತಾಗುತ್ತಿಲ್ಲ- ಯತ್ನಾಳ್ ವ್ಯಂಗ್ಯ

    ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಅನ್ನೋದು ಗೊತ್ತಾಗುತ್ತಿಲ್ಲ- ಯತ್ನಾಳ್ ವ್ಯಂಗ್ಯ

    ವಿಜಯಪುರ: ಪಂಚ ಗ್ಯಾರಂಟಿಯಿಂದ (Guarantees) ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಸರ್ಕಾರದ್ದೆ ಗ್ಯಾರಂಟಿ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವ್ಯಂಗ್ಯವಾಡಿದ್ದಾರೆ.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ತಿಮ್ಮಾಪುರ್ ವರ್ಗಾವಣೆ ಭ್ರಷ್ಟಾಚಾರ ವಿಚಾರವಾಗಿ, ಕಾಂಗ್ರೆಸ್ ಸರ್ಕಾರ (Congress Governmnet) ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಾಡಿದೆ. ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಎಂದು ಗೊತ್ತಾಗುತ್ತಿಲ್ಲ. ಅಬಕಾರಿ ಇಲಾಖೆ ಹೊರತಾಗಿ ಸಚಿವರಿಗೆ ಮತ್ತೊಂದು ಸೋರ್ಸ್ ಇಲ್ಲ. ಅಬಕಾರಿ ಇಲಾಖೆಯ (Departmnet Of Excise) ವರ್ಗಾವಣೆಯಲ್ಲಿ ದೊಡ್ಡ ಉದ್ಯೋಗ ಹುಟ್ಟಿಕೊಂಡಿದೆ. ಏಕೆಂದರೆ ಅವರಿಗೆ ಗ್ಯಾರಂಟಿ ಇಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಅವರ ಸರ್ಕಾರದ್ದೆ ಗ್ಯಾರಂಟಿ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: Kamala, you’re fired – ಮಧ್ಯರಾತ್ರಿ 2:15 ಕ್ಕೆ ಕೊನೆಯ ಪ್ರಚಾರದಲ್ಲಿ ಗುಡುಗಿದ ಟ್ರಂಪ್‌

    ಸಿಎಂ ಸಿದ್ದರಾಮಯಯ್ಯಗೆ (CM Siddaramaiah) ಎಷ್ಟು ದಿನ ಮುಂದುವರೆಯುತ್ತೇನೆ ಎನ್ನುವ ಗ್ಯಾರಂಟಿ ಇಲ್ಲ, ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಏನೂ ಸಿಗುತ್ತಿಲ್ಲ ಹೀಗಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ.90 ರಷ್ಟು ಭ್ರಷ್ಟಾಚಾರ ಇದೆ. ಆಗ ನಮ್ಮದು ಶೇ.40 ರಷ್ಟು ಭ್ರಷ್ಟಾಚಾರ ಇದೆ ಎಂದು ಹೇಳುತ್ತಿದ್ದರು. ಜೊತೆಗೆ ಬಿಜೆಪಿ ಮೇಲೆ ಪೇಸಿಎಂ ಎಂದು ಆರೋಪ ಮಾಡುತ್ತಿದ್ದರು. ಆದರೆ ಯಾಕೆ ತನಿಖೆ ಮಾಡಲಿಲ್ಲ? ತನಿಖೆ ಮಾಡಿ ಸಾಬೀತು ಮಾಡುವುದಕ್ಕೆ ಆಗಲಿಲ್ಲ ಎಂದು ಪ್ರಶ್ನಿಸಿದರು.

    ಬೆಂಗಳೂರಲ್ಲಿ ಜಾಗಗಳ ಎನ್‌ಎ ಮಾಡಲು ಭ್ರಷ್ಟಾಚಾರ ಮಾಡಿದ್ದಾರೆ. ಎನ್‌ಎ ಮಾಡಲು ಡಿಕೆಶಿಗೆ ಹಣ ಕೊಡಬೇಕು. ಚದರ ಅಡಿಗೆ 75 ರಿಂದ 100 ರೂ. ಕೊಡಬೇಕು. ಡಿಕೆಶಿ (DCM DK Shivakumar) ಕ್ಯಾಲ್ಕುಲೇಟರ್ ತೆಗೆದುಕೊಂಡು ಕೂತಿರುತ್ತಾನೆ ಎಂದು ಆರೋಪಿಸಿದ್ದಾರೆ.

    ಇದೇ ವೇಳೆ ತಹಶಿಲ್ದಾರ್ ಕಚೇರಿ ಎಸ್‌ಡಿಎ ಆತ್ಮಹತ್ಯೆಯಲ್ಲಿ ಹೆಬ್ಬಾಳ್ಕರ್ (Lakshmi Hebbalkar) ಪಿಎ ಹೆಸರು ಬರೆದಿಟ್ಟ ವಿಚಾರವಾಗಿ ಮಾತನಾಡಿ, ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಹಳಷ್ಟು ದೂರುಗಳಿವೆ. ಭ್ರಷ್ಟಾಚಾರದ ತುತ್ತ ತುದಿಯಲ್ಲಿದ್ದಾರೆ. ಹಿಂದೆ ಮಾಡಿದ ಪಾಪದ ಫಲ ಈಗ ಕಾಡುತ್ತಿದೆ. ಈಶ್ವರಪ್ಪ ರಾಜೀನಾಮೆ ಕೊಡುವಂತೆ ಮಾಡಿದ ಪಾಪದ ಕೊಡ ತುಂಬಿ ಈಗ ಬೆನ್ನು ಹತ್ತಿದೆ. ಬೆಳಗಾವಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಐದಾರು ಸಾವಿರ ರೂ. ಕೆಲಸಕ್ಕೂ ಲಂಚ ಕೊಡಬೇಕಿದೆ. ಪಿಎ ಹೆಸರು ಬರೆದಿರುವುದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಹೊಣೆ. ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Pushpa 2: ಅಲ್ಲು ಅರ್ಜುನ್‌ ಜೊತೆ ಶ್ರೀಲೀಲಾ ಡ್ಯಾನ್ಸ್?‌