Tag: Congress Guarantee

  • ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ

    ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ

    ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಪಂಚ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhakshmi Scheme) ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದೆ. ಇದೇ ವೇಳೆ ನೂರು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಸಾಧನೆಯನ್ನ ಕೈಪಿಡಿ ಮೂಲಕ ಹೊರತರಲಾಗಿದೆ.

    ಗೃಹಲಕ್ಷ್ಮಿ ಯೋಜನೆ ಚಾಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಈ ಹಿಂದೆ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಈ ಬಾರಿಯೂ ಕಾಂಗ್ರೆಸ್ ಸರ್ಕಾರ (Congress Government) ನೀಡಿದ ಎಲ್ಲ ಭರವಸೆಗಳನ್ನು 5 ವರ್ಷಗಳಲ್ಲಿ ಈಡೇರಿಸುತ್ತೇವೆ ಎನ್ನುವ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಯಾವತ್ತೂ ನಿಮಗೆ ಸುಳ್ಳು ಹೇಳಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ: ರಾಹುಲ್ ಗಾಂಧಿ

    ಮೋದಿಗೆ ತಿರುಗೇಟು
    ನಮ್ಮ ಪಕ್ಷದಿಂದ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಇದನ್ನ ನೆರವೇರಿಸಲು ಸಾಧ್ಯವಿಲ್ಲ ಅಂತ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಟೀಕೆ ಮಾಡಿದವು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತೆ ಅಂತಾ ಹೇಳಿದ್ದರು. ಆದ್ರೆ ನಾವಿಂದು ನಾಲ್ಕು ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ. ಯುವನಿಧಿ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ಬರುತ್ತದೆ. ಆದ್ರೆ ಕರ್ನಾಟಕ ದಿವಾಳಿ ಆಗಿಲ್ಲ. ಅಭಿವೃದ್ಧಿ ಕಾರ್ಯಕ್ರಮಗಳೂ ಸಹ ನಿಂತಿಲ್ಲ ಎಂದು ತಿರುಗೇಟು ನೀಡಿದರು.

    ಮೋದಿ ಅವರೇ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಅನುದಾನ ಕೊಟ್ಟಿದ್ದೇವೆ. ಕುಡಿಯುವ ನೀರಿನ ಯೋಜನೆಗೂ ಅನುದಾನ ಕೊಟ್ಟು ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ. ಕಾಂಗ್ರೆಸ್ ಯಾವತ್ತಿಗೂ ಬಡವರು, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಯುವಕರು, ಕಾರ್ಮಿಕರು ಹಾಗೂ ಎಲ್ಲ ನೊಂದ ಜನರ ಪರವಾಗಿ ಇರುವ ಸರ್ಕಾರ ಅನ್ನೋದನ್ನ ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಹೇಳಿದರು.

    ವಿರೋಧ ಪಕ್ಷದವರು ಏನೇ ಟೀಕೆ ಮಾಡಿದ್ರೂ ಅದೆಲ್ಲ ಸುಳ್ಳು, ಇವತ್ತು ಸತ್ಯ ನಿಮ್ಮ ಮುಂದೆ ಇದೆ. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ನಿಮ್ಮ ಮುಂದೆ ಇದೆ. ಪ್ರತಿಪಕ್ಷದವರು ಮಾಡುವ ಆರೋಪಗಳೆಲ್ಲವೂ ಸುಳ್ಳು ಎಂದು ಗುಡುಗಿದರು. ಇದನ್ನೂ ಓದಿ: 525 ಕೋಟಿ ನಕಲಿ ಜಿಎಸ್‌ಟಿ ವಹಿವಾಟು – 30ಕ್ಕೂ ಹೆಚ್ಚು ನಕಲಿ ಕಂಪನಿ ಸೃಷ್ಟಿಸಿದ್ದ ಇಬ್ಬರು ಅರೆಸ್ಟ್‌

    ನೂರು ದಿನಗಳ ಸಾಧನೆ
    ನಮ್ಮ ಸರ್ಕಾರ ಬಂದು ನೂರು ದಿನಗಳು ಕಳೆದಿವೆ. ನಮ್ಮ ಸಾಧನೆಯನ್ನ ತಿಳಿಸುವುದಕ್ಕೋಸ್ಕರ ಸಾಧನೆಗಳ ಕೈಪಿಡಿಯನ್ನು ಹೊರತರಲಾಗಿದೆ. ನಮ್ಮ ಸಾಧನೆ, ಕರ್ತವ್ಯ ಹಾಗೂ ಮುಂದಿನ ಯೋಜನೆಗಳನ್ನು ಜನರಿಗೆ ತಿಳಿಸುವುದು ಸರ್ಕಾರದ ಕರ್ತವ್ಯವೂ ಹೌದು. ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನ ಈಡೇರಿಸುವುದು ಸರ್ಕಾರದ ಜವಾಬ್ದಾರಿ. ಹಿಂದಿನ ಯಾವುದೇ ಸರ್ಕಾರಗಳು ನೂರು ದಿನಗಳಲ್ಲಿ ಕೊಟ್ಟ ಮಾತನ್ನು ಈಡೇರಿಸಿರಲಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದರು.

    5 ಗ್ಯಾರಂಟಿ ಜನರ ಮುಂದೆ ಇಟ್ಟಿದ್ದೇವೆ. ಅದರಲ್ಲಿ ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳನ್ನ ಜಾರಿಗೊಳಿಸಿದ್ದೇವೆ. ರಾಜ್ಯದಲ್ಲಿ ಸುಮಾರು 1.26 ಕುಟುಂಬಗಳಲ್ಲಿ ಕುಟುಂಬದ ಯಜಮಾನಿಗೆ 2 ಸಾವಿರ ಅವರ ಖಾತೆಗೆ ನೇರವಾಗಿ ಜಮೆ ಮಾಡುವ ಕೆಲಸ ಮಾಡುತ್ತಿದ್ದೇವೆ. 1.10 ಕೋಟಿ ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ಇಡೀ ಭಾರತದಲ್ಲಿ ಯಾವುದೇ ರಾಜ್ಯವೂ ಇಷ್ಟು ದೊಡ್ಡಮಟ್ಟದ ಕಾರ್ಯಕ್ರಮ ಮಾಡಿಲ್ಲ ಎಂದು ಹೇಳಿದರು.

    ಕಳೆದ ಜೂನ್ 11 ರಂದು ಶಕ್ತಿ ಯೋಜನೆ ಜಾರಿಗೆ ತರಲಾಯಿತು. ಅವತ್ತಿನಿಂದ ಆ.29ರ ವರೆಗೆ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿ, ಪ್ರಯೋಜನ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆ ಜುಲೈ 10 ರಂದು ಜಾರಿಗೆ ತರಲಾಯಿತು. ಆದ್ರೆ ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದ ಕೇಂದ್ರ ಸರ್ಕಾರ ಆಮೇಲೆ ಯೋಜನೆ ಯಶಸ್ವಿಯಾಗಬಾರದು ಅಂತ ಅಕ್ಕಿ ಕೊಡಲು ನಿರಾಕರಿಸಿತು. ಆದ್ದರಿಂದ ಅಕ್ಕಿ ಸಿಗೋವರೆಗೆ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ದಾರರಿಗೆ 175 ರೂ. ಖಾತೆಗೆ ಜಮೆ ಮಾಡುವ ಕೆಲಸ ಮಾಡಿದ್ದೇವೆ. ಜುಲೈನಿಂದ ಗೃಹಜ್ಯೋತಿ 200 ಯೂನಿಟ್ ಬಳಸುವವರಿಗೆ ಉಚಿತ ವಿದ್ಯುತ್ ಕಲ್ಪಿಸುತ್ತಿದ್ದೇವೆ. 1.56 ಕೋಟಿ ಜನ ನೋಂದಣಿ ಆಗಿದ್ದಾರೆ. ಅವರೆಲ್ಲರಿಗೂ ಶೂನ್ಯ ಬಿಲ್ ಕೊಡುತ್ತಿದ್ದೇವೆ ಎಂದು ಸರ್ಕಾರದ ಸಾಧನೆಯನ್ನ ಗುಣಗಾನ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

    ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

    ಮೈಸೂರು: ಕಾಂಗ್ರೆಸ್‍ನ ಗ್ಯಾರಂಟಿ (Congress Guarantee) ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಇಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಮೈಸೂರಿನ (Mysuru) ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11:30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಮನೆಯ ಮಹಾಲಕ್ಷ್ಮಿಯರ ಖಾತೆಗೆ 2000ರೂ. ಜಮೆಯಾಗಲಿದೆ.

    1.11 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು,  ಮಹಿಳೆಯರ ಖಾತೆಗೆ ನೇರವಾಗಿ 2000 ರೂ. ತಲುಪಲಿದೆ. ಇಂದು ಯೋಜನೆ ಅಧಿಕೃತವಾಗಿ ಜಾರಿಯಾಗುತ್ತಿದ್ದು 5-6 ದಿನದಲ್ಲಿ ಎಲ್ಲಾ 1.11 ಕೋಟಿ ಫಲಾನುಭವಿಗಳ ಅಕೌಂಟ್‍ಗೆ (Account) ಹಣ ತಲುಪಿಸಲು ತಯಾರಿ ಮಾಡಿಕೊಳ್ಳಲಾಗಿದೆ.  ಇದನ್ನೂ ಓದಿ: ನಾಡದೇವತೆಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

     

    ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಗೃಹಲಕ್ಷ್ಮಿಯಿಂದ ಕುತೂಹಲ ಹೆಚ್ಚಾಗಿದೆ. ಇಂದು ಯೋಜನೆಗೆ ಚಾಲನೆ ನೀಡಲಿರುವ ಸರ್ಕಾರ ಎಲ್ಲಾ ಖಾತೆಗಳಿಗೆ ಏಕ ಕಾಲದಲ್ಲಿ ಹಣ ಹಾಕಲು ಮುಂದಾಗಿದೆ. ಸರ್ವಸ್ ಸಮಸ್ಯೆ, ತಾಂತ್ರಿಕ ಅಡೆತಡೆ ಏನಾದರೂ ಎದುರಾದರೆ ಇನ್ನೆರಡು ದಿನದಲ್ಲಿ ಎಲ್ಲ ಫಲಾನುಭವಿಗಳ ಅಕೌಂಟ್‍ಗೆ ಹಣ ತಲುಪಲಿದೆ ಎನ್ನಲಾಗಿದೆ. ಗೃಹ ಲಕ್ಷ್ಮಿಯರ ಪಾಲಿನ ಹಣ ಪ್ರತಿ ತಿಂಗಳಿನ 5 ಅಥವಾ 6ನೇ ದಿನಾಂಕದಂದು ಮಹಿಳೆಯರ ಅಕೌಂಟ್‍ಗೆ ಬರುವ ಸಾಧ್ಯತೆಯಿದೆ.

    ಮೈಸೂರಿನಲ್ಲಿ ಬೃಹತ್ ವೇದಿಕೆಯ ಜೊತೆ ಒಂದು ಲಕ್ಷ ಕುರ್ಚಿ, ಬೃಹತ್ ಎಲ್‍ಇಡಿ ವೇದಿಕೆ ಹಾಕಲಾಗಿದೆ. ವೇದಿಕೆ ಕಾರ್ಯಕ್ರಮ ಮುಂಭಾಗ ಅರಮನೆ ಮಾದರಿಯ ಮುಖ್ಯ ದ್ವಾರ ನಿರ್ಮಿಸಲಾಗಿದೆ.

     

    ಕಾಂಗ್ರೆಸ್‍ನ ಐದು ಗ್ಯಾರಂಟಿಗಳು ಕರ್ನಾಟಕ ಮಾಡೆಲ್. ಈ ಮಾಡೆಲ್ ಈಗ ದೇಶದ ಎಲ್ಲಾ ಕಡೆಯೂ ಸುದ್ದಿಯಲ್ಲಿದೆ. ಬಹಳ ಬದ್ಧತೆಯಿಂದ ಈ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದ್ದೇವೆ. ಏಕಕಾಲಕ್ಕೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಆಧಿಕ ಅರ್ಜಿ ಸಲ್ಲಿಕೆ

    ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಆಧಿಕ ಅರ್ಜಿ ಸಲ್ಲಿಕೆ

    ಬೆಂಗಳೂರು: ಕಾಂಗ್ರೆಸ್‌ನ 5 ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ.

    ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು

    ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್‌ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಸಚಿವ ಸಂಪುಟದ ದೋಸ್ತಿಗಳ ನಡುವೆ ಮಹಾ ಬಿರುಕಿದೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಶಾಸಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂದು ಬ್ರಿಟಿಷರು ಭಾರತದ ಸಂಪತ್ತನ್ನ ಹೊತ್ತೊಯ್ದರು, ಇಂದು ಬಂಡವಾಳಿಗರ ಬಳಿ ಶೇಖರಣೆಗೊಳ್ತಿದೆ: ಸಿದ್ದರಾಮಯ್ಯ

    ಅಂದು ಬ್ರಿಟಿಷರು ಭಾರತದ ಸಂಪತ್ತನ್ನ ಹೊತ್ತೊಯ್ದರು, ಇಂದು ಬಂಡವಾಳಿಗರ ಬಳಿ ಶೇಖರಣೆಗೊಳ್ತಿದೆ: ಸಿದ್ದರಾಮಯ್ಯ

    ಬೆಂಗಳೂರು: ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ (77th IndependenceDay) ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

    ಬಳಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ, ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಇದು‌ ಜನರಿಗೆ ಅರ್ಥವಾಗಿರೋದ್ರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಅಂತ ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ 1,000 ವರ್ಷ ಭಾರತಕ್ಕೆ ದಿಕ್ಕು ತೋರಲಿದೆ: ಮೋದಿ

    ಇದೇ ವೇಳೆ 5 ಗ್ಯಾರಂಟಿಗಳ (Congress Guarantee) ಪ್ರಸ್ತಾಪ ಮಾಡಿದ ಸಿಎಂ, ಶಕ್ತಿ ಯೋಜನೆಯಿಂದ ನಿತ್ಯ 50-60 ಲಕ್ಷ ಮಹಿಳೆಯರು ನಿತ್ಯ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೂವರೆಗೆ 38.54 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಆಗಸ್ಟ್ 27 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದ್ದು, ಜುಲೈ 1 ರಿಂದ ಗೃಹಜ್ಯೋತಿ ಯೋಜನೆ ಜಾರಿಗೆ ಬಂದಿದೆ. ಇದುವರೆಗೆ ಗೃಹಜ್ಯೋತಿ ಯೋಜನೆಗೆ 1.49 ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ, ಬಾಡಿಗೆದಾರರೂ ಇದರ ಪ್ರಯೋಜನ ಪಡೆಯಲಿದ್ದಾರೆ. ಇದನ್ನೂ ಓದಿ: IndependenceDay: ಭಾಗ-3: ಕರ್ನಾಟಕ ಸ್ವಾತಂತ್ರ್ಯ ಹೋರಾಟದಲ್ಲಿ ಈಸೂರು ದುರಂತ ಸ್ಮರಣೀಯ

    ಈ ಯೋಜನೆಗೆ 13,910 ಕೋಟಿ ಖರ್ಚಾಗಲಿದೆ. ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ಯೋಜನೆ ಜಾರಿ ಮಾಡಿದ್ದೇವೆ. ಈವರೆಗೆ 1.04 ಕೋಟಿ ಕುಟುಂಬಗಳಿಗೆ ನಗದು ವರ್ಗಾವಣೆ ಆಗಿದೆ. ಉಳಿದ ಕುಟುಂಬಗಳಿಗೆ ಶೀಘ್ರವೇ ಹಣ ವರ್ಗಾವಣೆ ಮಾಡಲಾಗುತ್ತದೆ. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ. ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ. ಇದನ್ನು ಭಾವಿಸಿಯೇ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು ಎಂದು ಹೇಳಿದ್ದಾರೆ.

    ಸ್ವಾತಂತ್ರ್ಯವೇನೊ ಲಭಿಸಿತು. ಆದರೆ ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲ್ಲಿಯೇ 10% ರಷ್ಟು ಜನ 78% ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ. ಬ್ರಿಟಿಷರು ಭಾರತದಿಂದ ನಮ್ಮ ದೇಶದ ಸಂಪತ್ತನ್ನ ಹೊತ್ತೊಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ ಅಭಿವೃದ್ಧಿ ಸಾಧ್ಯವೆ? ಇದನ್ನೆಲ್ಲ ಮನಗಂಡು ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನ ಪಾಲಿಸುತ್ತಿದ್ದೇವೆ. ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದ್ದೇವೆ ಎಂದು ವಿವರಿಸಿದ್ದಾರೆ.

    ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ. ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನ ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆ ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗ ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ ಎಂದು ಹೇಳಿದ್ದಾರೆ.

    ಯಾವುದೇ ಯೋಜನೆ ಜಾರಿಗೊಳಿಸುವಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇದರಿಂದ ಅನುಕೂಲವಾಗುವುದೇ? ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ? ಎಂದು ಯೋಚಿಸಿಯೇ ಮುಂದಡಿಯಿಡುವುದು ನಮ್ಮ ಆಡಳಿತದ ಅಂತಃಸತ್ವವಾಗಿದೆ. ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ ಭ್ರಷ್ಟಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ [Universal Basic income] ಎಂಬ ಹೊಸ ಆರ್ಥಿಕ ಪ್ರಮೇಯ ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದೇವು. ಸರ್ಕಾರ ಅಧಿಕಾರಕ್ಕೆ ಬಂದ 3 ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ ಎಂದಿದ್ದಾರೆ.

    ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಕುರಿತು ಕೆಲವರು ನಕಾರಾತ್ಮಕ ಭಾವನೆ ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನ ಒಂದೇ ರೀತಿಯಲ್ಲಿ ಪರಿಭಾವಿಸಿದೆ.

    ಭಾಷಣ ಮುಖ್ಯಾಂಶಗಳು:
    * ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರದಿಂದ ಆದ್ಯತೆ.
    * ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣ ಕೈಗೊಳ್ಳಲು 200 ಕೋಟಿ ರೂ. ಅನುದಾನ
    * ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನ
    * ನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ.
    * ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆ ಪ್ರಾರಂಭಿಸಲು ಸಿದ್ಧತೆ
    * ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಿರ್ಧಾರ
    * ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Gruhajyothi Scheme: 5 ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ – ಸಿದ್ದರಾಮಯ್ಯ

    Gruhajyothi Scheme: 5 ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ – ಸಿದ್ದರಾಮಯ್ಯ

    ಕಲಬುರಗಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ `ಗೃಹಜ್ಯೋತಿ’ ಯೋಜನೆಗೆ (Gruhajyothi Scheme) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ತವರು ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು.

    ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಇವತ್ತಿನ ದಿನ ಐತಿಹಾಸಿಕ ದಿನ. ಜ್ಯೋತಿ ಬೆಳಗಿಸುವ ಮೂಲಕ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಿದ್ದೇವೆ. ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನ ಘೋಷಿಸಿ ರಾಜ್ಯದ ಜನರಿಗೆ ವಾಗ್ದಾನ ಮಾಡಿದ್ದೆವು. ನಾನು, ಡಿಕೆಶಿ ಗ್ಯಾರಂಟಿ ಕಾರ್ಡ್‌ಗೆ (Guarantee Card) ಸಹಿ ಮಾಡಿ ಹಂಚಿದ್ದೆವು. ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Gruhajyothi Scheme: ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಿಎಂ

    ಈ ಹಿಂದೆ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರದಲ್ಲಿದ್ದಾಗ 160 ಭರವಸೆಗಳಲ್ಲಿ 145 ಭರವಸೆಗಳನ್ನ ಈಡೇರಿಸಿದ್ದೇವೆ. ಈ ಬಾರಿಯೂ ಮುಂದಿನ 5 ವರ್ಷದಲ್ಲಿ ನಮ್ಮ ಪ್ರಣಾಳಿಕೆಯ ಎಲ್ಲಾ ಅಂಶ ಜಾರಿಗೆ ತರುತ್ತೆವೆ ಎಂದು ಭರವಸೆ ನೀಡಿದರು.

    ಈ ಐದು ಗ್ಯಾರಂಟಿ ಕೊಟ್ಟರೆ, ದೇಶ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದು ಪ್ರಧಾನಿ ಮೋದಿ (Narendra Modi) ಹೇಳಿದ್ದಾರೆ. ನಾವು ಐದು ಗ್ಯಾರಂಟಿ ಕೊಟ್ಟು ಆರ್ಥಿಕ ಶಿಸ್ತನ್ನೂ ಕೊಡುತ್ತೆವೆ. ಪ್ರಧಾನಿಮೋದಿ ಅವರು ರಾಜ್ಯದ ಎಲ್ಲಾ ಯೋಜನೆಗಳನ್ನ ಸಹ ನಿಲ್ಲಿಸುತ್ತಾರೆ. ಈ ರಾಜ್ಯದಲ್ಲಿ ದುರಾಡಳಿತ ಮಾಡಿ ಲೂಟಿ ಮಾಡಿ ಈ ರಾಜ್ಯದ ಜನರಿಗೆ ಅನ್ಯಾಯ ಮಾಡಿದವರು ಬಿಜೆಪಿ. ನಾವು ಅಧಿಕಾರದಲ್ಲಿದ್ದಾಗ 16 ಲಕ್ಷ ಮನೆ ಕಟ್ಟಿಸಿದ್ದಿವಿ. ಆದ್ರೆ ಬಿಜೆಪಿ ಅವರು ಕೇವಲ 8 ಲಕ್ಷ ಮನೆ ಕಟ್ಟಿಸಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

    ಕೇಂದ್ರದ ಮೋದಿ ಸರ್ಕಾರ, ರಾಜ್ಯದಲ್ಲಿದ್ದ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದಿಂದ ನಾವು ಆರ್ಥಿಕವಾಗಿ ಹಿಂದೆ ಹೋಗಿದ್ದೆವೆ. ಆದ್ರೆ ಕಾಂಗ್ರೆಸ್ ಜಾರಿಗೆ ತಂದ ಶಕ್ತಿ ಯೋಜನೆಯಿಂದ ಪ್ರತಿದಿನ 50 ಲಕ್ಷ ಹೆಣ್ಣುಮಕ್ಕಳು ಬಸ್ ನಲ್ಲಿ ಉಚಿತ ಸಂಚಾರ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿ ಅವರಿಗೆ ಹೊಟ್ಟೆ ಉರಿ ಬಂದಿದೆ. ಬಿಜೆಪಿಯವರಿಗೆ ತಾಕತ್ತಿದ್ದರೆ ಇಡೀ ದೇಶದಲ್ಲಿ ಈ ಯೋಜನೆ ಜಾರಿ ಮಾಡಲಿ ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸವಾಲ್ ಹಾಕಿದರು.

    ನಾವು ನುಡಿದಂತೆ ನಡೆದಿದ್ದೇವೆ. 200 ಯೂನಿಟ್ ಉಚಿತ ವಿದ್ಯುತ್ ಅಂತಾ ಹೇಳಿದ್ದೇವೆ. 2.14 ಕೋಟಿ ನೋಂದಣಿ ಮಾಡಿಕೊಳ್ಳಬೇಕಾದವರಿದ್ದಾರೆ. ಈಗಾಗಲೇ 1.40 ಕೋಟಿ ಮಂದಿ ನೋಂದಣಿ ಮಾಡಿಸಿದ್ದಾರೆ. ಇದೇ ತಿಂಗಳಿAದ ಶೂನ್ಯ ಬಿಲ್ ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24 ರಂದು ಚಾಲನೆ ಕೊಡ್ತೀವಿ. ನಿಜವಾಗಿಯೂ ಬಡವರ ವಿರೋಧಿ ಕೆಲಸ ಮಾಡ್ತಿರೋದು ಬಿಜೆಪಿಯವರು. ಎಫ್‌ಸಿಐ ಅಕ್ಕಿ ಕೊಡ್ತೀವಿ ಅಂದ್ರೂ ಕೇಂದ್ರ ಬಿಜೆಪಿ ಸರ್ಕಾರ ಬಿಡಲಿಲ್ಲ. ಒಂದು ಕೆಜಿ ಅಕ್ಕಿ ಕಡಿಮೆ ಮಾಡಿದ್ರೂ ಹೋರಾಟ ಮಾಡ್ತೀವಿ ಅನ್ನೋ ಈಶ್ವರಪ್ಪ, ಯಡಿಯೂರಪ್ಪ ಅವರು ಅಕ್ಕಿ ಕಡಿಮೆ ಮಾಡಿದಾಗ ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗೃಹಜ್ಯೋತಿ’ ಗ್ಯಾರಂಟಿಗೆ ಇಂದು ಚಾಲನೆ; ಕಲಬುರಗಿಯಲ್ಲಿ ಸಿಎಂ ಉದ್ಘಾಟನೆ – ಖರ್ಗೆ ತವರಲ್ಲಿ ಸಿದ್ಧತೆ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಇಂದು ಚಾಲನೆ; ಕಲಬುರಗಿಯಲ್ಲಿ ಸಿಎಂ ಉದ್ಘಾಟನೆ – ಖರ್ಗೆ ತವರಲ್ಲಿ ಸಿದ್ಧತೆ

    ಕಲಬುರಗಿ: ಐದು ಗ್ಯಾರಂಟಿ (Congress Guarantee) ಯೋಜನೆಗಳ ಪೈಕಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಇಂದು (ಶನಿವಾರ) ಕಲಬುರಗಿ (Kalaburagi) ನಗರದಲ್ಲಿ ವಿದ್ಯುಕ್ತವಾಗಿ ಚಾಲನೆ ಸಿಗಲಿದೆ. ಇದಕ್ಕಾಗಿ ನಗರದ ಎನ್‌ವಿ ಕಾಲೇಜು ಮೈದಾನದಲ್ಲಿ ಕಲಬುರಗಿ ಜಿಲ್ಲಾಡಳಿತ ಮತ್ತು ಜೆಸ್ಕಾಂ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

    ಇಂದು ಬೆಳಗ್ಗೆ 11:30 ಕ್ಕೆ 10 ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ವಿದ್ಯುತ್ ಬಿಲ್ ನೀಡುವುದರ ಮೂಲಕ ಸಿಎಂ ಸಿದ್ದರಾಮಯ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರಹೀಂಖಾನ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

    ಕಾರ್ಯಕ್ರಮಕ್ಕೆ ಕರ್ನಾಟಕ ಭಾಗದ ಏಳು ಜಿಲ್ಲೆಗಳ 20 ಸಾವಿರಕ್ಕೂ ಅಧಿಕ ಜನ ಬರಲಿದ್ದಾರೆ. 2024 ರ ಲೋಕಸಭಾ ಚುನಾವಣೆ ದೃಷ್ಟಿಕೋನದಿಂದ ಕಾಂಗ್ರೆಸ್ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ಚಾಲನೆ ಮಾಡುವುದರ ಮೂಲಕ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಾಕ್ಷಿಯಾಗಲಿದೆ.

    ಸಮಾರಂಭಕ್ಕೆ ಜನರನ್ನು ಕರೆತರಲು 282 ಸಾರಿಗೆ ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಿ ಎನ್‌ವಿ ಕಾಲೇಜು ಮೈದಾನದ ಸುತ್ತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ – ಮುತಾಲಿಕ್ ಆತಂಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ನವದೆಹಲಿ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (SC-ST) ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಿಕೆ‌ ಖಂಡಿಸಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು. ಸಂಸತ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಲಿತ ಸಂಸದರು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆಯಲ್ಲಿ ರಾಜ್ಯ ಸಂಸದರಾದ ಮುನಿಸ್ವಾಮಿ, ಉಮೇಶ್ ಜಾಧವ್, ದೇವೇಂದ್ರಪ್ಪ, ಅಮರೇಶ ನಾಯಕ್ ಭಾಗಿಯಾಗಿದ್ದರು. ಇದೇ ವೇಳೆ ಹಲವು ರಾಜ್ಯಗಳ ಎಸ್ಸಿ-ಎಸ್ಟಿ ಸಮುದಾಯದ ಸಂಸದರು ಭಾಗಿಯಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ

     

    ಪ್ರತಿಭಟನೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಹಿಂದ ಹೆಸರಿನಲ್ಲಿ ದಲಿತರ ಉದ್ಧಾರ ಮಾಡುವುದಾಗಿ ಹೇಳಿದ ಸಿದ್ದರಾಮಯ್ಯ ಅವರು ಎಸ್ಸಿ ಎಸ್ಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸಲು ವಿಫಲವಾಗಿ ದಲಿತ ಅಭಿವೃದ್ಧಿಗೆ ಇಟ್ಟ ಹಣವನ್ನು ಬಳಕೆಗೆ ನಿರ್ಧರಿಸಿದೆ. ಇದರ ಪರಿಣಾಮವಾಗಿ ಎಸ್ಸಿ ಎಸ್ಟಿಗೆ ಅಭಿವೃದ್ಧಿ ಕೊರತೆಯಾಗಲಿದೆ. ಈ ಹಣ ವಾಪಸ್ ಪಡೆಯಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಸಂಸದ ಮುನಿಸ್ವಾಮಿ ಮಾತನಾಡಿ, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಟೀಂ ದಲಿತರಿಗೆ ಮೀಸಲಿಟ್ಟ ಹಣ ಬಳಕೆ ‌ಮಾಡುತ್ತಿದೆ.‌ ಗ್ಯಾರಂಟಿಗೆ ಬಳಕೆ ಮಾಡುತ್ತಿದೆ. ಈ ಮೂಲಕ ದಲಿತರಿಗೆ ಅವಮಾನ ಮಾಡುತ್ತಿದೆ. ಸರ್ಕಾರದ ನಿರ್ಧಾರದಿಂದ ದಲಿತರ ಕೇರಿಗಳ ಅಭಿವೃದ್ಧಿ ಕುಂಠಿತಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಮತ್ತೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಬೊಮ್ಮಾಯಿ ಟೀಕೆ

    ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಬೊಮ್ಮಾಯಿ ಟೀಕೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) ಅವಧಿಯಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ, 6ನೇ ಗ್ಯಾರಂಟಿ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೋ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ದಲಿತರಿಗೆ ದ್ರೋಹ:
    ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಹಾದಿಯೇ ಅಯೋಮಯವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮೊದಲ ಬಾರಿಗೆ ಪರಿಸರ ಸ್ನೇಹಿ ಬೋಯಿಂಗ್‌ ಹೊಂದಿರುವ 20ನೇ ವಿಮಾನ ಪರಿಚಯಿಸಿದ ಆಕಾಶ ಏರ್‌ಲೈನ್‌

    ಎಸ್‌ಸಿಪಿ ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ.ಗಳನ್ನ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ. ರಾಜ್ಯ ಸರ್ಕಾರ ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ 34 ಸಾವಿರ ಕೋಟಿ ಕೊಡುವ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು ಎಸ್‌ಸಿಪಿ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ ಎಂದು ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ.

    ಸಮಾಜ ಕಲ್ಯಾಣ ಸಚಿವ ಡಾ.‌ಹೆಚ್.‌ಸಿ ಮಹದೇವಪ್ಪ ಅವರು ಮನಸಿಲ್ಲದೇ ಎಸ್ಸಿಪಿ ಟಿಎಸ್ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಎಸ್ಸಿ-ಎಸ್ಟಿ ಸಮುದಾಯಕ್ಕಿರುವ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ ಎಸ್ಸಿ-ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್‌ಗೆ ಇರುವ ನಿರ್ಲಕ್ಷ್ಯ ಧೋರೆಣೆ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು- ಸುಪ್ರೀಂ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    – ಇನ್ಮುಂದೆ ಎಸ್‌ಎಂಎಸ್‌ ಬಾರದಿದ್ದರೂ ಕೇಂದ್ರಕ್ಕೆ ಹೋಗಿ ಹೆಸರು ನೋಂದಾಯಿಸಲು ಅವಕಾಶ

    ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಗೆ ಅಧಿಕೃತ ಚಾಲನೆ ಸಿಕ್ಕ ಬಳಿಕ ಒಂದು ವಾರದಲ್ಲೇ 70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ.

    ಆರಂಭದಲ್ಲಿ ಫಲಾನುಭವಿಗಳು ತಮ್ಮ ಮೊಬೈಲ್‌ಗೆ ಸಂದೇಶ ಬಂದ ನಂತರ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬೇಕಿತ್ತು. ಈಗ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲಾಗಿದೆ. ಮೊಬೈಲ್‌ಗೆ ಮೆಸೇಜ್‌ ಬರದೇ ಇದ್ದರೂ ಅರ್ಹ ಫಲಾನುಭವಿಗಳು ಇನ್ಮುಂದೆ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ನೋಂದಣಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್

    ಇದುವರೆಗೂ ಮೆಸೇಜ್ ಬಂದರಷ್ಟೇ ಬೆಂಗಳೂರು ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ SMS ಲಭಿಸದೇ ಇದ್ದರೂ ದಾಖಲಾತಿಯೊಂದಿಗೆ ನೇರವಾಗಿ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಸಚಿವಾಲಯ ತಿಳಿಸಿದೆ.

    ಈ ನಡುವೆ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಕೆಲವು ಕೇಂದ್ರಗಳಲ್ಲಿ ಹಣ ಪಡೆಯುತ್ತಿದ್ದ ಬಗ್ಗೆ ದೂರು ಬಂದಿತ್ತು. ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ. ಇದನ್ನೂ ಓದಿ: ಶಿಕ್ಷಣ ಸಚಿವರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ

    ನೋಂದಣಿಗೆ ಹಣ ಪಡೆದಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ 112 ಸಂಖ್ಯೆಗೆ ಕರೆ ಮಾಡಿ ದೂರು ನೀಡುವಂತೆ ಇಲಾಖೆಯಿಂದ ಜನರಲ್ಲಿ ಮನವಿ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

    ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಇದೇ ಜುಲೈ 28 ರಂದು ಕರ್ನಾಟಕ ಹೈಕೋರ್ಟ್‌ (Karnataka High Court) ವಿಚಾರಣೆ ನಡೆಸಲಿದೆ.

    ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ (Congress Guarantee) ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ಸಿದ್ದರಾಮಯ್ಯ ಅವರು ಸಂವಿಧಾನದ ನಿಬಂಧನೆ, ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

    ಕೆ.ಎಂ.ಶಂಕರ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್‌ಡಿಕೆ ಶಪಥ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]