Tag: Congress Guarantee

  • ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್ – ನೋಂದಣಿ ಪ್ರಕ್ರಿಯೆ ಹೇಗೆ? ಯಾರು ಅರ್ಹರು?

    ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್ – ನೋಂದಣಿ ಪ್ರಕ್ರಿಯೆ ಹೇಗೆ? ಯಾರು ಅರ್ಹರು?

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Congress Guarantee) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ನೋಂದಣಿಗೆ ಇಂದು ಸಂಜೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಗೃಹಲಕ್ಷ್ಮಿ ಅಪ್ಲಿಕೇಶನ್‌  ಬಿಡುಗಡೆ ಮಾಡಲಿದ್ದು, ಸಂಜೆಯಿಂದ ಅರ್ಜಿ ಸ್ವೀಕಾರ ಆರಂಭ ಆಗಲಿದೆ.

    ಈ ನೋಂದಣಿಯನ್ನು ಮಹಿಳೆಯರೇ ಮಾಡಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂದು ಸರ್ಕಾರವೇ ತಿಳಿಸುತ್ತದೆ. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.

    ಅರ್ಜಿ ಸಲ್ಲಿಸಲು ಡೆಡ್‍ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆಯಡಿ ಆಗಸ್ಟ್ 16ರ ನಂತರ ಬಿಪಿಎಲ್ ಕುಟುಂಬದ ಒಡತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ.  ಇದನ್ನೂ ಓದಿ: 26 ಪಕ್ಷಗಳ ಮಹಾಮೈತ್ರಿಕೂಟಕ್ಕೆ ‘INDIA’ ಹೆಸರು ನಾಮಕರಣ

    ನೋಂದಣಿ ಪ್ರಕ್ರಿಯೆ ಹೇಗೆ?
    ಗೃಹಲಕ್ಷ್ಮಿ ನೋಂದಣಿಗೆ ಯಾರು ಪರದಾಡಬೇಕಿಲ್ಲ. ಯಜಮಾನಿಗೆ ಎಸ್‍ಎಂಎಸ್ ಮೂಲಕ ದಿನಾಂಕ, ಸಮಯ, ನೋಂದಣಿ ಸ್ಥಳದ ಮಾಹಿತಿ ಕಳುಹಿಸಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮಾಹಿತಿ ನೀಡಬೇಕಾಗುತ್ತದೆ. ನಿಗದಿತ ದಿನ ನೋಂದಣಿ ಸಾಧ್ಯವಾಗದಿದ್ದಲ್ಲಿ ಯಾವುದೇ ದಿನ ಸಂಜೆ ನೋಂದಣಿ ಮಾಡಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಂಪೂರ್ಣ ಉಚಿತ.

     

     ಯಾರು ಅರ್ಹರು?
    * ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
    * ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
    * ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
    * ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
    * ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
    * ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ

     

    ಎಲ್ಲೆಲ್ಲಿ ನೋಂದಣಿ ಮಾಡಿಕೊಳ್ಳಬಹುದು?
    ಗ್ರಾಮ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ

    ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ

    ಹಾಸನ: ಕಾಂಗ್ರೆಸ್‌ ಸರ್ಕಾರ (Congress Government) ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್‌ ರಾಜಣ್ಣ (KN Rajanna) ಹೇಳಿದ್ದಾರೆ.

    ಬಜೆಟ್‌ನಲ್ಲಿ (Budget 2023) ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ (Congress Guarantee) ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. ಇದನ್ನೂ ಓದಿ: ಲೋಕಸಮರಕ್ಕಾಗಿ BJP- JDS ದೋಸ್ತಿ- NDA ಸಭೆಯಲ್ಲಿ ಭಾಗಿಯಾಗ್ತಾರಾ ಹೆಚ್‍ಡಿಕೆ?

    ಬಿಜೆಪಿ ವಿರುದ್ಧ ವಾಗ್ದಾಳಿ:
    ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ. ರಾಷ್ಟ್ರೀಯ ಪಕ್ಷವೇ ನಾಯಕನನ್ನ ಆಯ್ಕೆ ಮಾಡದಿರುವುದು ವಿಪರ್ಯಾಸ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾವು ಹೇಳಿದ ಮಾತನ್ನು ನಿಜ ಮಾಡಲು HDK ಹೊರಟಿದ್ದಾರೆ: ದಿನೇಶ್ ಗುಂಡೂರಾವ್

    ಬಿಜೆಪಿಯಲ್ಲಿ ಆಂತರಿಕವಾಗಿಯೇ ಗೊಂದಲಗಳು ಏರ್ಪಟ್ಟಿವೆ. ಅವರೆಲ್ಲ ಕಾಂಗ್ರೆಸ್‌ ಮುಕ್ತ ಭಾರತ ಮಾಡ್ತೀವಿ ಅಂತಾ ಹೇಳಿದ್ದರು. ಆದ್ರೆ ನಾವು ಬಿಜೆಪಿ ಮುಕ್ತ ಭಾರತ ಮಾಡ್ತೀವಿ ಅಂತ ಹೇಳೋದಿಲ್ಲ. ಆದ್ರೆ ಬಿಜೆಪಿ ಪಕ್ಷಕ್ಕೆ ಈ ರಾಜ್ಯದಲ್ಲಿ ಭವಿಷ್ಯ ಇಲ್ಲ ಅನ್ನೋದನ್ನ ಹೇಳಬಲ್ಲೆ ಎಂದು ತಿವಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಧಿವೇಶನದಲ್ಲಿ ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗ್ತಿದೆ – ಬಿಎಸ್‌ವೈ ಪುತ್ರ ಅಸಮಾಧಾನ

    ಅಧಿವೇಶನದಲ್ಲಿ ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗ್ತಿದೆ – ಬಿಎಸ್‌ವೈ ಪುತ್ರ ಅಸಮಾಧಾನ

    ಶಿವಮೊಗ್ಗ: ರಾಜ್ಯದಲ್ಲಿ ಒಂದೆಡೆ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಆದ್ರೆ ಸದನದಲ್ಲಿ ಇದ್ಯಾವುದೂ ಚರ್ಚೆಯಾಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಯಾಗುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶಿಕಾರಿಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆದಿದೆ. ಈಗಲೂ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ (Congress Guarantee Scheme) ಬಗ್ಗೆ ಚರ್ಚೆ ಆಗ್ತಿದೆ. ರಾಜ್ಯದಲ್ಲಿ 21 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ನಾನೂ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಆದ್ರೆ ಕಾಂಗ್ರೆಸ್ ಇನ್ನೂ ಹನಿಮೂನ್ ಪೀರಿಯಡ್‌ನಿಂದ ಹೊರಬಂದಿಲ್ಲ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ KSRTC ಚಾಲನಾ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ಪರಿಹಾರ ಚೆಕ್ ವಿತರಣೆ

    ರಾಜ್ಯದಲ್ಲಿ ರೈತರು (Farmers) ಕಂಗಾಲಾಗಿದ್ದಾರೆ. ಮಲೆನಾಡಿನಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ರಾಜ್ಯದ ಜಲಾಶಯಗಳಲ್ಲಿ ನೀರು ಕಡಿಮೆಯಾಗಿದೆ. ಕಲಬುರಗಿ ಭಾಗದಲ್ಲಿ ತೊಗರಿ, ಹೆಸರು ಕಾಳು ಬೆಳೆದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಬೆಲೆ ಏರಿಕೆಯಾಗುತ್ತಿದ್ದರೆ, ಮತ್ತೊಂದು ಕಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಆದ್ರೆ ಅಧಿವೇಶನದಲ್ಲಿ ಇದ್ಯಾವುದೂ ಚರ್ಚೆಯಾಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳೇ ಚರ್ಚೆಗುತ್ತಿವೆ. ರಾಜ್ಯ ಸರ್ಕಾರ (Government Of Karnataka) ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆː ಮೊಬೈಲ್‌ನಲ್ಲೇ ಮಾಹಿತಿ ಪಡೆಯಬಹುದು – ಡಿಸಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ವೀಡಿಯೋ ಸಂವಾದ

    ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ ನಡೆಯುತ್ತಿದೆ. ಈ ಹಿಂದಿನ ಸರ್ಕಾರದಲ್ಲಿ ಹಗರಣಗಳು ನಡೆದಿದೆ ಅನ್ನೋ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದರು, ಚುನಾವಣೆ ಮುಗಿದ ನಂತರವೂ ಅದೇ ದಾಟಿಯಲ್ಲಿ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷ ಇದಕ್ಕೆಲ್ಲಾ ಹೆದರಿಕೊಳ್ಳೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ರಾಷ್ಟ್ರೋತ್ಥಾನ ಪರಿಷತ್ ಅಡಿಯಲ್ಲಿ ಜನಸೇವಾ ವಿದ್ಯಾಕೇಂದ್ರ ಕಳೆದ 30-40 ವರ್ಷಗಳಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುತ್ತಿದೆ. ಸಾವಿರಾರು ಮಕ್ಕಳಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೀಗ ಶಿಕ್ಷಣದಲ್ಲಿ ವ್ಯಾಪಾರೀಕರಣದ ಚರ್ಚೆಯಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೇಲೂ ಈ ಸರ್ಕಾರದ ವಕ್ರ ದೃಷ್ಟಿ ಬೀರಿದೆ. ಇದು ಸಚಿವರಿಗೆ, ಸಿಎಂ ಅವರಿಗೆ ಶೋಭೆ ತರುವಂತಹದಲ್ಲ ಎಂದು ಕುಟುಕಿದ್ದಾರೆ.

    ಗುಣಮಟ್ಟದ ಶಿಕ್ಷಣ ಕೊಡುವಂತಹ ಶಿಕ್ಷಣ ಕೇಂದ್ರಕ್ಕೆ ಕೊಟ್ಟ ಭೂಮಿಯನ್ನು ಹಿಂಪಡೆಯಬಾರದು. ಆದ್ರೆ ಕಾಂಗ್ರೆಸ್ ಹಿಂದಿನ ಸರ್ಕಾರದ ಅವಧಿಯಲ್ಲಿ ಕೊಟ್ಟ ಭೂಮಿಯನ್ನು ಹಿಂಪಡೆದುಕೊಂಡಿದೆ. ಅದು ಅಕ್ರಮ ಎನ್ನುವುದಾದರೆ ಕಳೆದ 30 ವರ್ಷಗಳಲ್ಲಿ ಯಾವ್ಯಾವ ಸರ್ಕಾರ ಯರ‍್ಯಾರಿಗೆ ಭೂಮಿ ಕೊಟ್ಟಿದೆ, ಪರಭಾರೆ ಮಾಡಿದೆ ಎಲ್ಲದರ ಬಗ್ಗೆ ಸದನದಲ್ಲಿ ಚರ್ಚೆಯಾಗಲಿ. 135 ಸೀಟು ಬಂದಿದೆ ಅಂತಾ ಆನೆ ನಡೆದಿದ್ದೇ ದಾರಿ ಎಂಬಂತೆ ಸಚಿವರು, ಶಾಸಕರು ವರ್ತಿಸುತ್ತಿದ್ದಾರೆ, ಅದು ನಮ್ಮ ದುರಾದೃಷ್ಟ. ಸದನದ ಒಳಗೇ ಇದಕ್ಕೆಲ್ಲಾ ಉತ್ತರ ಕೊಡ್ತೀವಿ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ – ಲಕ್ಷ್ಮಿ ಹೆಬ್ಬಾಳ್ಕರ್

    ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ – ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಮುಂದಿನ ಆಗಸ್ಟ್ ತಿಂಗಳಲ್ಲೇ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳಿಗೆ 2 ಸಾವಿರ ರೂ. ಹಾಕೋದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟಪಡಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಹೇಮಲತಾ ನಾಯಕ್ (Hemalatha Nayak) ಅವರು ಗೃಹಲಕ್ಷ್ಮಿ ಯೋಜನೆ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆಗಸ್ಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಮಾಡಲಾಗುತ್ತದೆ ಅಂತ ಭರವಸೆ ನೀಡಿದರು. ಗೃಹಲಕ್ಷ್ಮಿ ಯೋಜನೆಗೆ 30 ಸಾವಿರ ಕೋಟಿ ಹಣ ಬೇಕೆಂದು ಅಂದಾಜಿಸಲಾಗಿದೆ. 2023-24ರ ಬಜೆಟ್‌ನಲ್ಲಿ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು 17,500 ಕೋಟಿ ಅನುದಾನ ಒದಗಿಸಿದ್ದಾರೆ ‌ಎಂದು ವಿವರಿಸಿದರು.

    ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ನಾವು ಪ್ರಾರಂಭ ಮಾಡಿಲ್ಲ, ಹಾಗಾಗಿ ಸರ್ವರ್ ಸಮಸ್ಯೆ ವಿಷಯವೇ ಬರೋದಿಲ್ಲ. ಆ್ಯಪ್ ಕೂಡಾ ಬಿಡುಗಡೆ ಆಗಿಲ್ಲ. 2-3 ದಿನಗಳಲ್ಲಿ ಸುದ್ದಿಗೋಷ್ಠಿ ಮಾಡಿ ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆ ಮಾಡ್ತೀವಿ. ಅಂದೇ ಆ್ಯಪ್ ಕೂಡ ರಿಲೀಸ್ ಮಾಡ್ತೀವಿ ಎಂದರು. ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ತಿರುಪತಿ ದೇವರಲ್ಲಿ ಪ್ರಾರ್ಥನೆ; ಇಸ್ರೋ ವಿಜ್ಞಾನಿಗಳ ನಡೆಗೆ ಪ್ರಗತಿಪರ ಚಿಂತಕರ ಖಂಡನೆ

    ಆಗಸ್ಟ್ 16 ಅಥವಾ 17 ರಂದು ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕ್ತೀವಿ. ಮನೆ ಯಜಮಾನಿಗೆ ನಾವು 2 ಸಾವಿರ ರೂ. ಕೊಡ್ತಿದ್ದೇವೆ. ಕುಟುಂಬದ ಯಜಮಾನಿಗೆ ಯೋಜನೆ ಲಾಭ ಹೋಗುತ್ತೆ. ಯಾರ ಮನೆಯಲ್ಲೂ ಜಗಳ ತರಲು ಈ ಯೋಜನೆ ಕಾಂಗ್ರೆಸ್ ಮಾಡಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿದ ಮಹಿಳೆಯರಿಗೆ ಅನುಕೂಲ ಆಗಲು ಯೋಜನೆ ಜಾರಿ ಮಾಡಿದ್ವಿ. 4-5 ದಿನಗಳಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ಕೊಡಲಿದ್ದೇವೆ ಎಂದು ತಿಳಿಸಿದರು.

    ನಾವು ಪ್ರಾರಂಭ ಮಾಡಿರೋ ಸಹಾಯವಾಣಿಗೆ ಅತಿ ಹೆಚ್ಚು ಮಾಹಿತಿ ಗೃಹಲಕ್ಷ್ಮಿ ಬಗ್ಗೆ ಜನ ಕೇಳ್ತಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆಗೆ ಜನ ಉತ್ಸುಕರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ನಮಾಜ್‌ ಮಾಡೋಕೆ ಅನುಮತಿ ಕೊಟ್ರೆ ಕರ್ನಾಟಕವೇ ಹೊತ್ತಿ ಉರಿಯುತ್ತೆ – ಮುತಾಲಿಕ್‌ ಎಚ್ಚರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಕರಣ ಒಂದೇ, ದಂಡದ ಆದೇಶ ಎರಡೆರಡು- ಕೊಪ್ಪಳ ಅಬಕಾರಿ ಡಿಸಿ ಆದೇಶದ ಸುತ್ತ ಅನುಮಾನದ ಹುತ್ತ

    ಪ್ರಕರಣ ಒಂದೇ, ದಂಡದ ಆದೇಶ ಎರಡೆರಡು- ಕೊಪ್ಪಳ ಅಬಕಾರಿ ಡಿಸಿ ಆದೇಶದ ಸುತ್ತ ಅನುಮಾನದ ಹುತ್ತ

    ಕೊಪ್ಪಳ: ರಾಜ್ಯ ಸರ್ಕಾರ ತನ್ನ 5 ಗ್ಯಾರಂಟಿ ಯೋಜನೆ (Congress Guarantee Scheme) ಜಾರಿಗೆ ಹಣ ಹೊಂದಿಸಲು ಹರಸಾಹಸ ಮಾಡುತ್ತಿದೆ. ಅದಕ್ಕಾಗಿ ಹತ್ತಾರು ಇಲಾಖೆಗೆ ದಂಡದ ಟಾರ್ಗೆಟ್ ನೀಡಿ, ಹಣ ಸಂಗ್ರಹಿಸಲು ಸರ್ಕಾರ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ನಡುವೆ ಕೊಪ್ಪಳದ ಅಬಕಾರಿ ಅಧಿಕಾರಿಗಳ (Excise Officer) ಕಳ್ಳಾಟದಿಂದ ಸರ್ಕಾರದ ಬೊಕ್ಕಸಕ್ಕೆ ಕೊಕ್ಕೆ ಬಿದ್ದಂತಾಗಿದೆ.

    ಸರ್ಕಾರದ ಮೌಖಿಕ ಆದೇಶದ ಗುರಾಣಿ ಹಿಡಿದ ಅಬಕಾರಿ ಅಧಿಕಾರಿಗಳು, ಬಾರ್‌ಗಳಿಗೆ ದಂಡ ಹಾಕುತ್ತಿದ್ದಾರೆ. ಆದ್ರೆ ಹಾಕಿದ ದಂಡದ ಅರ್ಧ ಹಣ ಸೋರಿಕೆ ಆಗುತ್ತಿರುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    ಕೊಪ್ಪಳ ಅಬಕಾರಿ ಉಪ ಆಯುಕ್ತರ ಕಚೇರಿಯಿಂದ ಅಬಕಾರಿ ನಿಯಮ ಉಲ್ಲಂಘನೆ ಆರೋಪದಡಿ ವಿವಿಧ ಬಾರ್ ಗಳಿಗೆ ದಂಡ ವಿಧಿಸಲಾಗಿದೆ. ಆದ್ರೆ ಒಂದೇ ಪ್ರಕರಣಕ್ಕೆ ಎರಡೆರಡು ಬಾರಿ ಆದೇಶ ಮಾಡಲಾಗಿದ್ದು, ಮೊದಲು ಹೆಚ್ಚು ದಂಡ ಹಾಕಿ ನಂತರ ಕಡಿಮೆ ಮಾಡಲಾಗಿದೆ. ದಂಡ ಶುಲ್ಕ ಕಡಿಮೆ ಮಾಡಿ ಭಾರೀ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಿದ್ದ ಹಣ ಅಬಕಾರಿ ಇಲಾಖೆ ಅಧಿಕಾರಿಗಳ ಮನೆ ಸೇರುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಅಬಕಾರಿ ಇಲಾಖೆ ಅಧಿಕಾರಿಗಳು ಒಂದೇ ಪ್ರಕರಣಕ್ಕೆ ಒಮ್ಮೆ ಹೆಚ್ಚು ದಂಡ ವಿಧಿಸಿ, ಅದೇ ಪ್ರಕರಣಕ್ಕೆ ದಂಡ ಕಡಿಮೆ ಮಾಡಿ, ಆದೇಶಿಸಿರುವ ದಾಖಲೆಗಳು ಸದ್ಯ ಜಾಲತಾಣದಲ್ಲಿ ಹರಿದಾಡುತ್ತಿವೆ. ನಿಯಮದಂತೆ ಒಮ್ಮೆ ಮಾಡಿದ ಆದೇಶವನ್ನ ಮತ್ತೇ ಬದಲಾಯಿಸಲು ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ನಡೆ ಸಾಕಷ್ಟು ಅನುಮಾನ ಮೂಡಿಸಿದೆ. ಇದನ್ನೂ ಓದಿ: KMDC ಸಾಲ ವಸೂಲಾತಿ 50% ಪ್ರಗತಿ ತೋರಿಸಲು ಸಚಿವ ಜಮೀರ್ ಟಾರ್ಗೆಟ್!

    ಪ್ರಕರಣಗಳ ಮಾಹಿತಿ:
    ಕಳೆದ 2022ರ ನವೆಂಬರ್ 29ರಂದು ಗುನ್ನೆ ನಂ.18ರಲ್ಲಿ ಕುಷ್ಟಗಿ ವಲಯ ವ್ಯಾಪ್ತಿಯಲ್ಲಿ ರಾಜಶ್ವೇರಿ ಎಂಬವರ ಹೆಸರಿನ ಸಿಎಲ್ 7 ಬಾರ್‌ಗೆ ಗ್ರಾಹಕರಿಗೆ ರಶೀದಿ ನೀಡಿಲ್ಲ ಎಂಬ ಆರೋಪದಡಿ ಮೊದಲು 40 ಸಾವಿರ ರೂ. ದಂಡ ಹಾಕಿ, ನಂತರ 12 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಗುನ್ನೆ ನಂ.24ಕ್ಕೆ ಸಂಬಂಧಿಸಿದಂತೆ ಕುಕನೂರು ತಾಲೂಕು ತಳಕಲ್ ಗ್ರಾಮದ ನೀಲಮ್ಮ ಎಂಬುವರ ಹೆಸರಿನ ಸಿಎಲ್ 2 ಬಾರ್‌ಗೆ ಗ್ರಾಹಕರಿಗೆ ರಶೀದಿ ನೀಡಿಲ್ಲ ಎಂಬ ಆರೋಪದಡಿ ಮೊದಲು 40 ಸಾವಿರ ರೂ. ದಂಡ ಹಾಕಿ, ನಂತರ 15 ಸಾವಿರ ರೂ.ಗೆ ಹಾಗೂ ಗುನ್ನೆ ನಂ. 34ರಲ್ಲಿ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಸರ್ಕಾರಿ ಸ್ವಾಮ್ಯದ ಎಂಎಸ್ ಐಲ್ 11ಸಿ ಮದ್ಯ ಮಾರಾಟ ಮಳಿಗೆಗೆ ಮೊದಲು 30 ಸಾವಿರ ರೂ. ದಂಡ ಹಾಕಿ, ನಂತರ 10 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಇದರಂತೆ ಸಾಕಷ್ಟು ಪ್ರಕರಣದಲ್ಲಿ ಅಧಿಕಾರಿಗಳು ಇಂಥ ತಪ್ಪು ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಕಂಡುಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ

    ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಅಂತೆಯೇ ಇಂದಿನಿಂದ (ಜು.1) ಅನ್ನಭಾಗ್ಯ (Anna Bhagya) ಮತ್ತು ಗೃಹಜ್ಯೋತಿ (Gruhajyothi) ಯೋಜನೆಗೆ ಚಾಲನೆ ದೊರೆಯಲಿದೆ.

    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ – ಟ್ವೀಟ್‌ನಲ್ಲೇ ಕಾಲೆಳೆದ ಕಾಂಗ್ರೆಸ್‌

    ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂಪಾಯಿ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಅಕೌಂಟ್‌ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

    ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಇಂದಿನಿಂದ ಈ ಯೋಜನೆಯೂ ಆರಂಭವಾಗಲಿದೆ. ಈ ಯೋಜನೆ ಸೌಲಭ್ಯಕ್ಕಾಗಿ ಇಲ್ಲಿವರೆಗೆ ಒಟ್ಟು 86 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ 1.15 ಕೋಟಿಗೂ ಅಧಿಕ ಜನರು ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಯಾಗಿಲ್ಲ. ಇದನ್ನೂ ಓದಿ: ತಡವಾಗಿ ಬಂದ ಬಸ್ ಅಡ್ಡಗಟ್ಟಿ ಡ್ರೈವರ್‌ಗೆ ಕ್ಲಾಸ್‌ ತೆಗೆದುಕೊಂಡ ಮಹಿಳೆಯರು

    ಜುಲೈ ತಿಂಗಳಲ್ಲಿ ಬಳಸಿದ ವಿದ್ಯುತ್ ಆಗಸ್ಟ್ 1 ರಿಂದ ನೀಡುವ ಬಿಲ್‌ಗೆ ಸೇರ್ಪಡೆಯಾಗುವ ರೀತಿಯಲ್ಲಿ ಯೋಜನೆ ಜಾರಿಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ

    ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ

    ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ (Annabhagya Scheme) 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೀಗ ಈ ಹಣಕ್ಕಾಗಿ ಅಧಾರ್ ಲಿಂಕ್ (Aadhaar Card Link) ಕಡ್ಡಾಯವಾಗಿರುತ್ತದೆ.

    ಹೌದು. ಅನ್ನಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಬೇಕಾದರೆ ಬ್ಯಾಂಕ್ ಖಾತೆ (Bank Account) ಜೊತೆ ಆಧಾರ್ ಲಿಂಕ್ ಕಡ್ಡಾಯವಾಗಿ ಆಗಿರಬೇಕು. ಬಿಪಿಎಲ್ (BPL Card) ಪಡಿತರ ಚೀಟಿಯನ್ನು ನೀವು ಹೊಂದಿರಬೇಕು. ಪಡಿತರ ಚೀಟಿಯಲ್ಲಿ (Ration Card) ಮನೆ ಮುಖ್ಯಸ್ಥರು ಯಾರು ಅನ್ನೋದು ಕಾರ್ಡ್ ನಲ್ಲಿ ನಮೂದಾಗಿರುತ್ತದೆ. ಮನೆಯ ಮುಖ್ಯಸ್ಥರು ಸಾಮಾನ್ಯವಾಗಿ ಮಹಿಳೆಯರೇ ಆಗಿರುತ್ತಾರೆ. ಮನೆ ಯಜಮಾನಿಯ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಖಾತೆ ಇರಬೇಕು. ಇದನ್ನೂ ಓದಿ: PAN-Aadhaar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ

    ಬ್ಯಾಂಕ್ ಖಾತೆ ಮಾತ್ರವಲ್ಲ, ಖಾತೆಗೆ ಆಧಾರ್ ನಂಬರ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು. ಒಂದು ವೇಳೆ ಮನೆಯ ಮುಖ್ಯಸ್ಥರದ್ದು ಇಲ್ಲದೇ ಹೋದಲ್ಲಿ, ಪಡಿತರ ಚೀಟಿಯಲ್ಲಿರುವ ಯಾವುದಾದ್ರೂ ಒಬ್ಬರ ಹೆಸರಿನಲ್ಲಿ ಖಾತೆ ಆಧಾರ್ ಲಿಂಕ್ ಆಗಿದ್ರೂ ಆಗುತ್ತೆ. ಧನಭಾಗ್ಯಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆದರೆ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆ ವಿವರ ಮಾತ್ರ ಕಡ್ಡಾಯವಾಗಿರುತ್ತದೆ. ಇದನ್ನೂ ಓದಿ: ಆಟೋದಲ್ಲಿ ಬಂದಿದ್ದಕ್ಕೆ ಬಿರಿಯಾನಿ ವಾಪಸ್ – ಬೆಂಜ್ ಕಾರ್‌ಗೆ ಶಿಫ್ಟ್ ಮಾಡಿ ಸಿಎಂ ನಿವಾಸಕ್ಕೆ ಕಳುಹಿಸಿದ ಜಮೀರ್

    ಆಹಾರ ಇಲಾಖೆ ಮಾಹಿತಿ ಪ್ರಕಾರ, ಸದ್ಯ 1.28 ಫಲಾನುಭವಿಗಳು ಇದ್ದು ಅದರಲ್ಲಿ 6 ಲಕ್ಷ ಖಾತೆದಾರರ ಆಕೌಂಟ್ ಸಮಸ್ಯೆ ಹಾಗೂ ಅಧಾರ್ ಲಿಂಕ್ ಆಗದೇ ಇರುವ ಸಮಸ್ಯೆ ಇದೆ. ಹೀಗಾಗಿ ಜುಲೈ 1 ನಲ್ಲಿ ಇವರಿಗೆ ದುಡ್ಡು ಕೊಡೋಕೆ ಸಮಸ್ಯೆಯಾಗಬಹುದು. ಅಕೌಂಟ್, ಆಧಾರ್ ಲಿಂಕ್ ಮಾಡಿಸಿದ ಬಳಿಕವಷ್ಟೇ ದುಡ್ಡು ನೇರವಾಗಿ ಡಿಬಿಟಿ ಮೂಲಕ ಜಮೆಯಾಗುತ್ತೆ ಅಂತಾ ಅಧಿಕಾರಿಗಳು ಹೇಳಿದ್ದಾರೆ.

    ಮನೆ ಯಜಮಾನಿ 92% ಮಹಿಳೆಯರೇ ಆಗಿರೋದ್ರಿಂದ ಗೃಹಲಕ್ಷ್ಮಿಗೂ (Gruhalakshmi) ಮುಂಚಿತ ಆಗಿ ಅನ್ನಭಾಗ್ಯದ ದುಡ್ಡು ಮಹಿಳೆಯರಿಗೆ ಜಾಕ್ ಫಾಟ್ ಹೊಡೆಯಲಿದೆ. ಮನೆಯ ಮುಖ್ಯಸ್ಥರ ಹೆಸರಿನಲ್ಲಿ ಖಾತೆಗಳು ಇಲ್ಲದೇ ಇದ್ದರೆ ಕುಟುಂಬದ ಬೇರೆ ಸದಸ್ಯರ ಖಾತೆಯ ವಿವರವನ್ನು ಕೊಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Gruha Lakshmi Scheme: ಪ್ರತ್ಯೇಕ ಆಪ್‍ಗೆ ಕ್ಯಾಬಿನೆಟ್‌ನಲ್ಲಿ ಗ್ರೀನ್ ಸಿಗ್ನಲ್

    Gruha Lakshmi Scheme: ಪ್ರತ್ಯೇಕ ಆಪ್‍ಗೆ ಕ್ಯಾಬಿನೆಟ್‌ನಲ್ಲಿ ಗ್ರೀನ್ ಸಿಗ್ನಲ್

    ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ (Congress Guarantee) ಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಪ್ರತ್ಯೇಕ ಆ್ಯಪ್‍ಗೆ ಸಚಿವ ಸಂಪುಟ (Cabinet Meeting) ದಲ್ಲಿ ಗ್ರೀನ್ ಸಿಗ್ನಲ್ ದೊರಕಿದೆ. ಈ ಮೂಲಕ ಆಗಸ್ಟ್ ನಲ್ಲಿ ಗೃಹಿಣಿಯರ ಅಕೌಂಟ್ 2 ಸಾವಿರ ಫಿಕ್ಸ್ ಆದಂತಿದೆ.

    ಇಂದು (ಬುಧವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ (Gruhalakshmi App) ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತು ಸರ್ಕಾರದ ನಿರ್ಧಾರ ತೆಗೆದುಕೊಂಡಿದೆ.

    ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (laxmi Hebbalkar) ಅವರು ಸಿಎಂ ಸಿದ್ದರಾಮಯ್ಯಗೆ ಆಪ್ ಬಗ್ಗೆ ವಿವರಣೆ ನೀಡಿದರು. ಅಲ್ಲದೆ ಪ್ರತ್ಯೇಕ ಆಪ್ ಬಗ್ಗೆ ಸಂಪುಟ ಸಹೋದ್ಯೋಗಿಗಳಿಗೂ ಮಾಹಿತಿ ನೀಡಿದರು. ಬಳಿಕ ಆಪ್ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಯಿತು. ಅರ್ಜಿ ಸಲ್ಲಿಕೆ ಯಾವ ದಿನಾಂಕದಿಂದ ಆರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಈ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

    ಗೃಹ ಲಕ್ಷ್ಮಿಗಾಗಿಯೇ ಪ್ರತ್ಯೇಕ ಆಪ್ ಬಳಕೆ: ಹೆಚ್ಚೆಚ್ಚು ಅರ್ಜಿ ಸಲ್ಲಿಕೆ ಆದರು ಸರ್ವರ್ ಬ್ಯುಸಿ ಆಗದಂತೆ ಪ್ಲಾನ್ ಮಾಡಲಾಗುತ್ತಿದೆ. ಬಾಪೂಜಿ ಸೇವಾ ಕೇಂದ್ರದ ಮೂಲಕವು ಅರ್ಜಿ ಸ್ವೀಕಾರ ಮಾಡುವ ಸಾಧ್ಯತೆಗಳಿವೆ. ಮಾಹಿತಿ ಸಂಗ್ರಹ, ನೋಂದಣಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಬಹುದು. ಗ್ರಾಮಗಳಲ್ಲಿ ಪ್ರಜಾ ಪ್ರತಿನಿಧಿಗಳ ನೇಮಕದ ಮೂಲಕ ಅರಳವಾಗಿ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ. ಮೊಬೈಲ್‍ನಲ್ಲೇ ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಒನ್, ಗ್ರಾಮ ಒನ್, ಹಾಗೂ ಸೇವಾ ಕೇಂದ್ರಗಳಲ್ಲು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬಹುದು. ಖಾಸಗಿ ಸೈಬರ್ ಗಳಲ್ಲೂ ನೋಂದಣಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರ್ಕಾರ ಕಿತ್ತೊಗೆಯೋಣ – ಯಡಿಯೂರಪ್ಪ ಸಂಕಲ್ಪ

    ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರ್ಕಾರ ಕಿತ್ತೊಗೆಯೋಣ – ಯಡಿಯೂರಪ್ಪ ಸಂಕಲ್ಪ

    ಬೆಂಗಳೂರು: ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರ್ಕಾರ ಕಿತ್ತೊಗೆಯೋಣ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಸಂಕಲ್ಪ ಮಾಡಿದ್ದಾರೆ.

    ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ (BJP Workers) ಸಭೆಯಲ್ಲಿ ಮಾತನಾಡಿದ ಅವರು, ಈ ಸರ್ಕಾರವನ್ನು ಕಿತ್ತೊಗೆಯೋಣ. ಅದಕ್ಕಾಗಿ ನಾನು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕೂತು ಪ್ರತಿಭಟನೆ ಮಾಡ್ತೇನೆ. ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಸಿದ್ದರಾಮಯ್ಯ

    14 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಕೊಟ್ಟ ಗ್ಯಾರಂಟಿ (Congress Guarantee) ನಂಬಿ ಜನ ಮೋಸ ಹೋಗಿದ್ದಾರೆ. ಕಾಂಗ್ರೆಸ್ ಸುಳ್ಳಿನ ಗ್ಯಾರಂಟಿ ಪರಿಣಾಮದಿಂದಲೇ ನಾವು 100 ಸ್ಥಾನ ಗೆಲ್ಲೋದಕ್ಕೂ ಸಾಧ್ಯವಾಗಲಿಲ್ಲ. ವಿಧಾನಸಭೆ ಹೊರಗೆ, ಒಳಗೆ ಹೋರಾಟ ಮಾಡಬೇಕಿದೆ. ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣ, ಅದಕ್ಕೆ ಕಂಡೀಷನ್ ಹಾಕಿದ್ದಾರೆ. ಇದು ಮಹಿಳೆಯರಿಗೆ ಮಾಡಿದ ಅಪಮಾನ. ಹೆಜ್ಜೆಹೆಜ್ಜೆಗೆ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಬೇಕಿದೆ. ನಮ್ಮವರು 65 ಜನ ಇದ್ದಾರೆ. ಇದು ಕಡಿಮೆ ಸಂಖ್ಯೆಯೇನಲ್ಲಾ. ಇಷ್ಟು ಶಾಸಕರು ಇರೋವಾಗ ಯೋಚನೆ ಮಾಡುವ ಅವಶ್ಯಕತೆ ಇಲ್ಲ. ಗ್ಯಾರಂಟಿ ಈಡೇರಿಸುವಂತೆ ಬೀದಿಗಿಳಿಯಬೇಕು ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

    ಎಷ್ಟು ಬೇಗ ಸಾಧ್ಯವೋ ಅಷ್ಟುಬೇಗ ಈ ಸರ್ಕಾರವನ್ನ ಕಿತ್ತೊಗೆಯೋಣ. ನಾವು ಮನಸ್ಸು ಮಾಡಿದ್ರೆ, ವಿಧಾನ ಮಂಡಲವನ್ನೇ ನಡುಗಿಸಬಹುದು. ಮುಂದಿನ ಸರ್ಕಾರ ರಚನೆ ಮಾಡುವವರೆಗೂ ಪಕ್ಷ ಕಟ್ಟೋಣ, ಹೋರಾಟ ಮಾಡೋಣ. ಲೋಕಸಭಾ ಚುನಾವಣೆ ಗೆಲ್ಲೋಣ ಎಂದು ಕಾರ್ಯಕರ್ತರನ್ನ ಹುರಿದುಂಬಿಸಿದ್ದಾರೆ.

    ಕಾರ್ಯಕರ್ತರಿಂದ ಸಭೆಯಲ್ಲಿ ಗದ್ದಲ:
    ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮುಖಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯೋಕ್ ಹೋಗಿ ಬೌಲ್ಡ್ ಆಗಿದ್ದೀನಿ – ಸೋಮಣ್ಣ

    ದಾಸರಹಳ್ಳಿ ಶಾಸಕ ಮುನಿರಾಜು ಭಾಷಣ ಮಾಡುತ್ತಿದ್ದ ವೇಳೆ ರೊಚ್ಚಿಗೆದ್ದ ಕಾರ್ಯಕರ್ತರು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶಗಳು ಸಿಗ್ತಿಲ್ಲ. ಕಾರ್ಯಕರ್ತರು ತಪ್ಪು ಮಾಡಿದಾಗ ಬುದ್ದಿ ಹೇಳ್ತೀರಾ, ಅದೇ ನಾಯಕರು ತಪ್ಪುಮಾಡಿದಾಗ ಯಾಕೆ ಬುದ್ದಿ ಹೇಳಲ್ಲ? ಹಿಂದೆ ಯಡಿಯೂರಪ್ಪ ಅವರನ್ನ ಕೆಳಗಿಳಿಸಿದಾಗ ಯಾಕೆ ನಾಯಕರು ಮಾತನಾಡಲಿಲ್ಲ? ಎಂದು ಗದ್ದಲ ಶುರು ಮಾಡಿದರು.

    ಈ ವೇಳೆ ಕಾರ್ಯಕರ್ತರನ್ನ ಸಮಾಧಾನಪಡಿಸುವ ಪ್ರಯತ್ನ ಮಾಡಿದ ಮುನಿರಾಜು ಬೆನ್ನಿಗೆ ಚೂರಿ ಹಾಕಿದವರನ್ನ ಪಕ್ಷದಿಂದ ದೂರ ಇಡೋಣ, ಸಾಮಾನ್ಯ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಅವಕಾಶ ನೀಡೋಣ ಎಂದು ಹೇಳಿದರು.

  • 2ನೇ ವೀಕೆಂಡ್‌ನಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ – ಯಾವ ಬಸ್‌ನಲ್ಲಿ ಎಷ್ಟು ಮಂದಿ ಪ್ರಯಾಣ?

    2ನೇ ವೀಕೆಂಡ್‌ನಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ – ಯಾವ ಬಸ್‌ನಲ್ಲಿ ಎಷ್ಟು ಮಂದಿ ಪ್ರಯಾಣ?

    ಬೆಂಗಳೂರು: ಕಾಂಗ್ರೆಸ್‌ (Congress) ಸರ್ಕಾರದ ಶಕ್ತಿ ಯೋಜನೆ (Shakti Scheme) ಜಾರಿಯಾದ ಎರಡನೇ ವಿಕೇಂಡ್‌ನಲ್ಲೂ ಮಹಿಳೆಯರ ಪ್ರಯಾಣ ಮತ್ತಷ್ಟು ಹೆಚ್ಚಾಗಿದೆ. ವೀಕೆಂಡ್‌ ಸಂದರ್ಭದಲ್ಲಿ ಮಹಿಳೆಯರು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಹೆಚ್ಚೆಚ್ಚು ಪ್ರಯಾಣ ಮಾಡುತ್ತಿದ್ದಾರೆ.

    ಶನಿವಾರ ಕೂಡ 58,14,524 ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದರು. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ, ಈ ವಾರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಶನಿವಾರ 54,30,150 ಮಹಿಳೆಯರು ಪ್ರಯಾಣ ಮಾಡಿದ್ದರು. ಇದನ್ನೂ ಓದಿ: ವೋಲ್ವೋ ಬಸ್‌ಗಳಿಗೆ ‘ಶಕ್ತಿ’ ತುಂಬಿದ ಪುರುಷರು

    ನಿನ್ನೆ ಮಹಿಳಾ ಪ್ರಯಾಣಿಕರ ಸಂಖ್ಯೆ 58 ಲಕ್ಷ ದಾಟಿದೆ. ಯಾವ ಬಸ್‌ಗಳಲ್ಲಿ ಎಷ್ಟು ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂಬ ಬಗ್ಗೆ ವಿವರ ಇಲ್ಲಿದೆ.

    KSRTC ಬಸ್‌ಗಳಲ್ಲಿ ಒಟ್ಟು 17,29,314 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣಿಕರ ಟಿಕೆಟ್‌ ಮೌಲ್ಯ 4,92,92,066 ರೂ. ಆಗಿದೆ. ಹಾಗೆಯೇ BMTC ಬಸ್‌ಗಳಲ್ಲಿ 18,95,144 ಮಹಿಳೆಯರು ಪ್ರಯಾಣಿಸಿದ್ದಾರೆ. ಇವರ ಪ್ರಯಾಣದ ಟಿಕೆಟ್‌ ಮೌಲ್ಯ 2,41,94,354 ರೂ. ಆಗಿದೆ. ಇದನ್ನೂ ಓದಿ: 2ನೇ ವೀಕೆಂಡ್ – ಮೆಜೆಸ್ಟಿಕ್‌, ಸ್ಯಾಟಲೈಟ್ ಬಸ್ ನಿಲ್ದಾಣ ಖಾಲಿ, ಖಾಲಿ

    NWRTC ಬಸ್‌ಗಳಲ್ಲಿ 14,01,910 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಪ್ರಯಾಣಿಕರ ಟಿಕೆಟ್‌ ಮೌಲ್ಯ 3,50,40,233 ರೂ. ಆಗಿದೆ. ಅಂತೆಯೇ KKRTC ಬಸ್‌ಗಳಲ್ಲಿ ಒಟ್ಟು 7,88,156 ಮಹಿಳೆಯರು ಪ್ರಯಾಣ ಮಾಡಿದ್ದು, ಟಿಕೆಟ್‌ ಮೌಲ್ಯ 2,55,94,985 ಆಗಿದೆ.

    ಶಕ್ತಿ ಯೋಜನೆ ಜಾರಿಯಾದಾಗಿನಿಂದ ಅಂದರೆ, ಜೂನ್ 11 ರಿಂದ ಜೂನ್ 24 ರವರೆಗೆ ನಾಲ್ಕು ನಿಗಮದ ಬಸ್‌ಗಳಲ್ಲಿ ಓಡಾಟ ನಡೆಸಿದ ಮಹಿಳೆಯರ ಸಂಖ್ಯೆ 7,15,58,775 ಮಹಿಳೆಯರು ಪ್ರಯಾಣ ಬೆಳೆಸಿದ್ದಾರೆ. ಈ ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ 166,09,27,526 ರೂ. ತಲುಪಿದೆ. ಇದನ್ನೂ ಓದಿ: ಗೃಹಲಕ್ಷ್ಮಿಯನ್ನ ನಾನೇ ಹೋಲ್ಡ್ ಮಾಡಿಸಿದ್ದೇನೆ – ಡಿಸಿಎಂ ಡಿಕೆಶಿ