Tag: Congress Guarantee
-

ಸಿದ್ರಾಮಯ್ಯ ಸಾಲ ಮನ್ನಾ ಅಂದಿದ್ರು, ನಾವ್ ದುಡ್ಡು ಕಟ್ಟಲ್ಲ – ಬ್ಯಾಂಕ್ ಸಿಬ್ಬಂದಿಗೆ ಸ್ತ್ರಿಶಕ್ತಿ ಸಂಘದ ಮಹಿಳೆಯರಿಂದ ಕ್ಲಾಸ್
ಕೋಲಾರ: ಡಿಸಿಸಿ ಬ್ಯಾಂಕ್ನಿಂದ (DCC Bank) ಕೊಟ್ಟದ್ದ ಸಾಲ (Loan) ಮರುಪಾವತಿಸುವಂತೆ ತಿಳಿಸಲು ಹೋದ ಅಧಿಕಾರಿಗಳಿಗೆ ಮಹಿಳೆಯರು ತರಾಟೆ ತೆಗೆದುಕೊಳ್ಳುತ್ತಿರುವ ಘಟನೆ ಕೋಲಾರದಿಂದ (Kolar) ವರದಿಯಾಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ (Congress Guarantee) ಜೊತೆಗೆ ಮಹಿಳೆಯರಿಗೆ ಸಿದ್ದರಾಮಯ್ಯ (Siddaramaiah) ನೀಡಿದ್ದ ಮತ್ತೊಂದು ಭರವಸೆ ಈ ಮೂಲಕ ಈಗ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿದ್ದರು. ಇದೇ ಕಾರಣಕ್ಕೆ ಈಗ ಕೋಲಾರ ಡಿಸಿಸಿ ಬ್ಯಾಂಕ್ ಸಿಬ್ಬಂದಿಗೆ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಂದ ಸಾಲ ವಸೂಲಿ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಸಿಹಿ ಸುದ್ದಿ – ಕೇರಳಕ್ಕೆ ಮುಂಗಾರು ಪ್ರವೇಶ
ಚುನಾವಣೆ ವೇಳೆ ಐದು ಲಕ್ಷದವರೆಗಿನ ಬಡ್ಡಿ ರಹಿತವಾಗಿ ನೀಡಿದ ಸಾಲವನ್ನು ಮನ್ನಾ ಮಾಡುವುದಾಗಿ ಕೋಲಾರದಲ್ಲಿ ಸಿದ್ದರಾಮಯ್ಯ ಮೊದಲು ಘೋಷಣೆ ಮಾಡಿದ್ದರು. ಅಲ್ಲದೆ ಈಗಿರುವ ಸಾಲದ ಮೊತ್ತವನ್ನು ಮಹಿಳಾ ಸ್ವಸಹಾಯ ಗುಂಪುಗಳಿಗೆ 1 ಲಕ್ಷ ರೂ. ನಷ್ಟು ಹೆಚ್ಚಿಗೆ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ. ಇದನ್ನೇ ಕಾರಣ ನೀಡಿ ಮಹಿಳೆಯರು ಸಾಲ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಹೊಸ ಷರತ್ತು – ಮಗ ತೆರಿಗೆದಾರನಾಗಿದ್ದರೆ ತಾಯಿಗೆ 2 ಸಾವಿರ ಸಿಗಲ್ಲ
-

ಗ್ಯಾರಂಟಿ ಜಾರಿಗೆ ಇಂದೇ ಗೈಡ್ಲೈನ್ಸ್- ಉಚಿತ ವಿದ್ಯುತ್ ಗ್ಯಾರಂಟಿ ಬಗ್ಗೆ ಮಾರ್ಗಸೂಚಿ?
– 200 ಯೂನಿಟ್ ಕರೆಂಟ್ ನೀಡುವಂತೆ ಆಗ್ರಹ
ಬೆಂಗಳೂರು: ಮಹಿಳೆಯರಿಗೂ ಉಚಿತ ಸರ್ಕಾರಿ ಬಸ್ ಪ್ರಯಾಣ ಬಗ್ಗೆ ಇಂದು ಸರ್ಕಾರ ಆದೇಶ ನೀಡುವ ಸಾಧ್ಯತೆ ಇದೆ. ಗೃಹ ಲಕ್ಷ್ಮಿ ಯೋಜನೆಗೂ ಇಂದು ಸರ್ಕಾರಿ ಆದೇಶ ನೀಡಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ (Gruhalaxmi Scheme) ಗೆ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ.
ಮಿನಿಮಮ್ ಕಂಡೀಷನ್ಸ್ ಮ್ಯಾಕ್ಸಿಮಮ್ ಬೆನಿಫಿಟ್ ಆಧಾರದಲ್ಲಿ ಆದೇಶಗಳ ಪ್ರಕಟವಾಗಲಿದ್ದು, ಆದೇಶಗಳ ಪ್ರಕಟಕ್ಕೆ ಸಂಬಂಧಿಸಿದ ಇಲಾಖೆ ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗ್ತಿದೆ. ಸರಾಸರಿ ವಿದ್ಯುತ್ ಬಳಕೆ ಮೇಲೆ ಉಚಿತ ಕೊಡಲು ಜನರ ವಿರೋಧವಿದ್ದು, 200 ಯೂನಿಟ್ ಉಚಿತ ವಿದ್ಯುತ್ (200 Unit Free Electricity) ನೀಡುವಂತೆ ರಾಜ್ಯಾದ್ಯಂತ ಆಗ್ರಹಿಸಿದ್ದಾರೆ. ಇದನ್ನೂ ಓದಿ: 200 ಯೂನಿಟ್ ವಿದ್ಯುತ್ ಫ್ರೀ – ಷರತ್ತುಗಳು ಅನ್ವಯ
ಎಲ್ಲ ಗ್ಯಾರಂಟಿಗಳಲ್ಲೂ ಉಚಿತ ವಿದ್ಯುತ್ ಗ್ಯಾರಂಟಿಗೆ ವಿದ್ಯುತ್ ಬಳಕೆದಾರರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನುಡಿದಂತೆ 200 ಯುನಿಟ್ ಉಚಿತ ವಿದ್ಯುತ್ ಕೊಡುವಂತೆ ತೀವ್ರ ಒತ್ತಾಯಿಸಿದ್ದಾರೆ. ಈ ವಿಚಾರ ಪರಿಗಣಿಸಿ ಉಚಿತ ವಿದ್ಯುತ್ ಆದೇಶದಲ್ಲಿ ಸರ್ಕಾರ ಬದಲಾವಣೆ ಮಾಡುತ್ತಾ..? ಅಥವಾ ವಾರ್ಷಿಕ ಬಳಕೆ ಮೇಲಿನ ಸರಾಸರಿ ಲೆಕ್ಕಾಚಾರದಲ್ಲೇ ಉಚಿತ ವಿದ್ಯುತ್ಗೆ ಮಿತಿ ಹಾಕುತ್ತಾ ಸರ್ಕಾರ ಅನ್ನೋದೇ ಸದ್ಯದ ಕುತೂಹಲ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ
-

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚಿಸಲು ಸದನವಿದೆ : ಸತೀಶ್ ಜಾರಕಿಹೊಳಿ
ಬೆಳಗಾವಿ: ಎಮ್ಮೆ ಕೋಣ ಕಡಿಯುವುದಾದರೆ, ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರ ಚರ್ಚೆ ಮಾಡಲು ಸದನ ಇದೆ. ಗೋಹತ್ಯೆ ನಿಷೇಧ ಕಾಯ್ದೆಯ (Cow Slaughter Act) ಬಗ್ಗೆ ಸರ್ಕಾರ ಸೂಕ್ತ ನಿಧಾರ ಕೈಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬೆಳಗಾವಿಯಲ್ಲಿ (Belagavi) ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯ (Congress Guarantee) ಬಗ್ಗೆ ಇಲ್ಲ ಸಲ್ಲದ ಅಪವಾದ ಮಾಡುತ್ತಿದ್ದಾರೆ. ಅವರ ಪಕ್ಷ ಸೋಲಿನಿಂದ ಕಂಗೆಟ್ಟಿದೆ. ಅದನ್ನು ಮರೆಸಲು ಹೊಸ ಹೊಸ ವಿಚಾರವನ್ನು ಜನರ ಮುಂದಿಡುತ್ತಿದೆ. ಇಲ್ಲಿಯವರೆಗೆ ಗ್ಯಾರಂಟಿ ವಿಚಾರವಾಗಿ ಮಾತನಾಡುತ್ತಿದ್ದರು. ಈಗ ಗೋಹತ್ಯೆ ವಿಚಾರವನ್ನು ಚರ್ಚೆಗೆ ತಂದಿದ್ದಾರೆ. ಇದೇ ರೀತಿ ಹೊಸ ಹೊಸ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರೈಲು ದುರಂತದ ಬೆನ್ನಲ್ಲೇ ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಘೋಷಿಸಿದ ಒಡಿಶಾ ಸಿಎಂ
ಗೊಹತ್ಯೆ ಕಾಯ್ದೆ ವಿಚಾರವಾಗಿ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿಗರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಐದು ವರ್ಷ ಹೋರಾಟವೇ ಗತಿ. ಅವರಿಗೆ ಬೇರೆ ಕೆಲಸವಿಲ್ಲ. ಕೊಮುದ್ವೇಷ ಹರಡುವುದೇ ಅವರ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ. ನಾಲ್ಕು ವರ್ಷ ಒಂದು ಉತ್ತಮ ಕೆಲಸ ಮಾಡಿಲ್ಲ ಈಗ ಗೆದ್ದ ಕೆಲವು ಬಿಜೆಪಿ ಶಾಸಕರಾದರೂ ಒಳ್ಳೆಯ ಕೆಲಸ ಮಾಡಲಿ ಎಂದಿದ್ದಾರೆ.
ಕರ್ನಾಟಕದ ಗ್ಯಾರಂಟಿ ಯೋಜನೆ ಬೇರೆ ರಾಜ್ಯಗಳಿಗೂ ಮಾದರಿ ಆಗಲಿದೆ. ಈ ಮೂಲಕ ಕರ್ನಾಟಕ ಮಾಡೆಲ್ ಹೆಸರು ಫೇಮಸ್ ಆಗಲಿದೆ ಎಂದಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು







