Tag: Congress Guarantee

  • ಇಂದು ಕಾಂಗ್ರೆಸ್ ಗ್ಯಾರಂಟಿಗೆ ಗುಡ್‌ಫ್ರೈಡೇ; ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ – ಐದರ ಪೈಕಿ 3 ಫ್ರೀ ಸ್ಕೀಂ ಘೋಷಣೆ?

    ಇಂದು ಕಾಂಗ್ರೆಸ್ ಗ್ಯಾರಂಟಿಗೆ ಗುಡ್‌ಫ್ರೈಡೇ; ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ – ಐದರ ಪೈಕಿ 3 ಫ್ರೀ ಸ್ಕೀಂ ಘೋಷಣೆ?

    ಬೆಂಗಳೂರು: ಸರ್ಕಾರದ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ಇಂದು (ಶುಕ್ರವಾರ) ನಡೆಯಲಿದೆ. ಭಾರೀ ಕುತೂಹಲ ಮೂಡಿಸಿರುವ ಸಂಪುಟ ಸಭೆಯಲ್ಲಿ ಸರ್ಕಾರ ತನ್ನ ಭರವಸೆಯ ಗ್ಯಾರಂಟಿಗಳ ಜಾರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಅದು ಐದು ಗ್ಯಾರಂಟಿಗಳ ಘೋಷಣೆನಾ ಅಥವಾ ಮೂರು ಗ್ಯಾರಂಟಿಗಳ ಜಾರಿನಾ ಎಂಬ ಪ್ರಶ್ನೆ ಜೊತೆಗೆ ಯಾವ ಕಂಡೀಶನ್ ಹಾಕಬಹುದು ಎಂಬ ಕುತೂಹಲವು ಮೂಡಿದೆ.

    ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ ಮಾತಿನಂತೆ ಇಂದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುತ್ತಾ? ಜನತೆಗೆ `ಪಂಚ’ ಕಜ್ಜಾಯ ಕೊಡುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಯಾಕೆಂದರೆ ಇಂದು ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ.

    ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಗೂ ಮುನ್ನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.

    ಕ್ಯಾಬಿನೆಟ್ ಸಭೆಯಲ್ಲಿಯೇ ಗ್ಯಾರಂಟಿ ಘೋಷಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಸುದ್ದಿಗೋಷ್ಢಿ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿಕೆಶಿ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ.

    5 ಗ್ಯಾರಂಟಿಗಳಲ್ಲಿ ಎಷ್ಟು ಗ್ಯಾರಂಟಿ ಘೋಷಣೆ ಅನ್ನೋದೇ ಸದ್ಯಕ್ಕೆ ಇರುವ ಕುತೂಹಲ. 5 ರ ಪೈಕಿ ಮೂರು ಗ್ಯಾರಂಟಿಗಳ ಘೋಷಣೆ ಸಾಧ್ಯತೆ ಇದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆಜಿ ಅಕ್ಕಿ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. ಉಳಿದ ಗೃಹಲಕ್ಷ್ಮಿ ಹಾಗೂ ಯುವನಿಧಿ ಗ್ಯಾರಂಟಿ ಸ್ವಲ್ಪ ದಿನಗಳ ನಂತರ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಗ್ಯಾರಂಟಿಗಳ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ.

  • ಹಾಸನದಲ್ಲೂ ʻಗ್ಯಾರಂಟಿʼ ಗಲಾಟೆ – ವಿದ್ಯುತ್‌ ಬಿಲ್‌ ಕೇಳಿದ ಸಿಬ್ಬಂದಿ ಮೇಲೆ ಕೋಳಿ ಅಂಗಡಿ ಮಾಲೀಕನಿಂದ ಹಲ್ಲೆ

    ಹಾಸನದಲ್ಲೂ ʻಗ್ಯಾರಂಟಿʼ ಗಲಾಟೆ – ವಿದ್ಯುತ್‌ ಬಿಲ್‌ ಕೇಳಿದ ಸಿಬ್ಬಂದಿ ಮೇಲೆ ಕೋಳಿ ಅಂಗಡಿ ಮಾಲೀಕನಿಂದ ಹಲ್ಲೆ

    ಹಾಸನ: ಕಾಂಗ್ರೆಸ್‌ ಸರ್ಕಾರ 200 ಯೂನಿಟ್‌ ಉಚಿತ ವಿದ್ಯುತ್‌ (200 Unit Electricity Free) ಭರವಸೆ ನೀಡಿರುವ ಹಿನ್ನೆಲೆ ಹಾಸನ ಜಿಲ್ಲೆಯಲ್ಲೂ ವಿದ್ಯುತ್ ಬಿಲ್ (Electricity Bill) ಪಾವತಿಸಲು ಜನರು ನಿರಾಕರಿಸುತ್ತಿದ್ದಾರೆ.

    ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ‌. ಇದನ್ನೂ ಓದಿ: ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲ್ಲೂಕಿನ, ಹಳೇ ಕೋರ್ಟ್ ರಸ್ತೆಯಲ್ಲಿರುವ ಕೋಳಿ ಅಂಗಡಿ ಮಾಲೀಕ ಸುರೇಶ್ ಎಂಬವರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬುಧವಾರ ಚೆಸ್ಕಾಂ ಸಿಬ್ಬಂದಿ (Chescom Employee) ಸಂತೋಷ್ ಹಾಗೂ ಇತರರು ಸುರೇಶ್ ಮನೆ ಬಳಿ ತೆರಳಿ ಬಾಕಿ 1,150 ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಾರೆ. ಆದ್ರೆ ಸುರೇಶ್‌ ನಾವು ಹಣ ಕಟ್ಟಲ್ಲ, ಸರ್ಕಾರ ಹೇಳಿದೆ ಆದರೂ ನೀನು ಬಿಲ್ ಕೇಳಲು ಬಂದಿದ್ದೀಯಾ ಅಂತಾ ಚೆಸ್ಕಾಂ ಸಿಬ್ಬಂದಿಯನ್ನ ಹಾಗೂ ಆತನ ಪತ್ನಿ ನಿಂದಿಸಿ ಜಗಳ ತೆಗಿದಿದ್ದಾನೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಯಾರಿಗೆ ಅಂತ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ: ಹೆಬ್ಬಾಳ್ಕರ್ ಹೇಳಿಕೆ ಒಪ್ಪದ ಡಿಕೆಶಿ

    ಇದು ಅತಿರೇಕಕ್ಕೆ ತಿರುಗಿ ಬಿಲ್ ಕಲೆಕ್ಟರ್ ಸಂತೋಷ್ ಮೇಲೆ ಸುರೇಶ್ ಹಾಗೂ ಆತನ ಅಪ್ರಾಪ್ತ ಪುತ್ರ ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದಾರೆ. ಸಂತೋಷ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

  • ಜೂನ್‌ 1ಕ್ಕೆ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ?

    ಜೂನ್‌ 1ಕ್ಕೆ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ?

    ಬೆಂಗಳೂರು: ಗುರುವಾರ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ (Cabinet Meeting) ಶುಕ್ರವಾರಕ್ಕೆ ಹೋಗಿದ್ದು ಯಾಕೆ ಎನ್ನುವುದು ಈಗ ಗೊತ್ತಾಗಿದೆ.

    ಕಾಂಗ್ರೆಸ್‌ ನೀಡಿದ ಗ್ಯಾರಂಟಿ (Congress Guarantee) ಜಾರಿ ಸಂಬಂಧ ಸಚಿವರ ಸಭೆಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳು (Finance Department Officers) ವಿರೋಧ ವ್ಯಕ್ತಪಡಿಸಿದ್ದಾರೆ.

    ಎಲ್ಲಾ ಐದೂ ಗ್ಯಾರಂಟಿಗಳ ಜಾರಿ‌ ಸದ್ಯಕ್ಕೆ ಕಷ್ಟ. ಬಜೆಟ್ ನಲ್ಲಿ ಅನುದಾನ ಹಂಚಿಕೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಉತ್ತರಕ್ಕೆ ಸಚಿವರುಗಳು, ನಾವು ಗ್ಯಾರಂಟಿ ಜಾರಿ ಮಾಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಯಾರಿಗೆ ಅಂತ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ: ಹೆಬ್ಬಾಳ್ಕರ್ ಹೇಳಿಕೆ ಒಪ್ಪದ ಡಿಕೆಶಿ

     

    ಸಚಿವರು ಜಾರಿಗೆ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳು ಒಂದು ದಿನ ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರ ನಡೆಯಬೇಕಿದ್ದ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆಯಾಗಿದೆ.

    ಕಾಂಗ್ರೆಸ್‌ ನಾಯಕರು ಚುನಾವಣಾ ಪ್ರಚಾರದಲ್ಲಿ ಐದು ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲೇ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಜಾರಿ ಸಂಬಂಧ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು.

    5 ಗ್ಯಾರಂಟಿ ಯೋಜನೆಗಳು ಯಾವುದು?
    ಗೃಹಜ್ಯೋತಿ : ಎಲ್ಲಾ ಮನೆಗಳಿಗೂ 200 ಯೂನಿಟ್‌ ಉಚಿತ ವಿದ್ಯುತ್‌
    ಗೃಹಲಕ್ಷ್ಮಿ : ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ.
    ಅನ್ನಭಾಗ್ಯ : ಬಿಪಿಎಲ್‌ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ
    ಯುವನಿಧಿ : ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ – ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1,500 ರೂ.
    ಉಚಿತ ಪ್ರಯಾಣ: ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ

  • ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್

    ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಷರತ್ತು ಅನ್ವಯಿಸುತ್ತೆ. ಮನೆಗೆ ಅತ್ತೆಯೇ ಸೀನಿಯರ್, ಆದ್ದರಿಂದ ಗೃಹಲಕ್ಷ್ಮಿ ಯೋಜನೆ ಯಾರಿಗೆ ಬೇಕೆಂದು ಅತ್ತೆಯನ್ನು ಕೇಳುತ್ತೇವೆ. ಅತ್ತೆ ನನ್ನ ಬದಲು ಸೊಸೆಗೆ ಯೋಜನೆ ಕೊಡಿ ಅಂದ್ರೆ `ಗೃಹಲಕ್ಷ್ಮಿ’ ಯೋಜನೆ ಸೊಸೆಗೆ ಸಿಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

    ಗೃಹಲಕ್ಷ್ಮಿ ಗ್ಯಾರಂಟಿ (Congress Guarantee) ಯೋಜನೆ ಜಾರಿ ಸಂಬಂಧ ನಗರದ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಹಳಷ್ಟು ಸರಳವಾಗಿ ಯೋಜನೆ ಜಾರಿಗೆ ತರುವ ಚಿಂತನೆ ಇದೆ. ಇಲಾಖೆ ಮಂತ್ರಿಗಳು ಮತ್ತು ಅಧಿಕಾರಿಗಳ ಸಭೆಯನ್ನು ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ. ನಮ್ಮ ಇಲಾಖೆಯ ಜೊತೆ ಆರ್‌ಡಿಪಿಆರ್, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯೂ ನಡೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಈ ವೇಳೆ ಗೃಹಲಕ್ಷ್ಮಿ ಯೋಜನೆಯನ್ನ ಅತ್ತೆಗೆ ಕೊಡಬೇಕೋ? ಸೊಸೆಗೆ ಕೊಡಬೇಕೋ ಎಂಬ ಪ್ರಶ್ನೆಗೆ ದನಿಗೂಡಿಸಿದ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಯಾರಿಗೆ ಕೊಡಬೇಕು ಎಂಬುದಕ್ಕೆ ಷರತ್ತು ಅನ್ವಯವಾಗುತ್ತದೆ. ಅತ್ತೆ ಸ್ವಯಂಪ್ರೇರಿತವಾಗಿ ಸೊಸೆಗೆ ಕೊಡುತ್ತೇನೆ ಅಂದರೆ ಆ ಕಂಡಿಷನ್ ಇಲ್ಲಿ ಅನ್ವಯಿಸುತ್ತೆ. ಗೃಹಲಕ್ಷ್ಮಿ ಯೋಜನೆ ಯಾರಿಗೆ ಬೇಕೆಂದು ಮೊದಲು ಅತ್ತೆಯನ್ನ ಕೇಳುತ್ತೇವೆ. ನನ್ನ ಬದಲು ಸೊಸೆಗೆ ಯೋಜನೆ ನೀಡಿ ಅಂದ್ರೆ ಗೃಹಲಕ್ಷ್ಮಿ ಯೋಜನೆ ಸೊಸೆಗೆ ಕೊಡುತ್ತೇನೆ. ಮೊದಲ ಆದ್ಯತೆಯನ್ನ ಮನೆಯಲ್ಲಿ ಅತ್ತೆಗೆ ಕೊಡುತ್ತೆವೆ. ಅತ್ತೆ ಪ್ರೀತಿಯಿಂದ ಸೊಸೆಗೆ ಕೊಡುವುದಾದರೆ ಕೊಡಲಿ. ಹಾಗೆ ಕೊಡುವುದಾದರೆ ಅತ್ತೆ ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ಇದಕ್ಕೆ ದನಿಗೂಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಮನೆಗೆ ಅತ್ತೆಯೇ ಸೀನಿಯರ್, ಹೀಗಾಗಿ ಅತ್ತೆಗೆ ಯೋಜನೆ ಕೊಡುವುದು ನಮ್ಮ ಆದ್ಯತೆ. ನಮ್ಮ ಸಂಸ್ಕೃತಿ ಪ್ರಕಾರ ಮನೆಗೆ ಅತ್ತೆಯೇ ಯಜಮಾನಿ. ಅತ್ತೆಯೇ ಪ್ರೀತಿಯಿಂದ ಸೊಸೆಗೆ ಹಣ ಕೊಡಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದ್ದಾರೆ.

  • ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಉಡುಪಿ: ಸರ್ಕಾರಿ ಬಸ್‌ಗಳೊಂದಿಗೆ (Govt Bus) ಖಾಸಗಿ ಬಸ್‌ಗಳಲ್ಲಿಯೂ (Private Bus) ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು (Free Travel Facility) ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.

    ಕಾಂಗ್ರೆಸ್ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ಎಲ್ಲಾ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಎನ್ನುವುದು ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಾಗಿತ್ತು. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ. ಜೂನ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ

  • ಐದರ ಪೈಕಿ ಮೂರು ಗ್ಯಾರಂಟಿ ಆರಂಭದಲ್ಲಿ ಜಾರಿ

    ಐದರ ಪೈಕಿ ಮೂರು ಗ್ಯಾರಂಟಿ ಆರಂಭದಲ್ಲಿ ಜಾರಿ

    ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ (Karnataka Government) ಮುಂದಾಗಿದೆ.

    ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಉಳಿದ ಎರಡು ಗ್ಯಾರಂಟಿ ವ್ಯಾಪ್ತಿಯ ಇಲಾಖೆಗಳ ಸಭೆ ನಡೆದಿಲ್ಲ. ಇದನ್ನೂ ಓದಿ: ಮಧ್ಯಪ್ರದೇಶ ಸರ್ಕಾರದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ – ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್

    ಅಧಿಕಾರಿಗಳ ಜತೆ ಇನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು ಸಭೆ ನಡೆಸಿಲ್ಲ.

    ಈಗಾಗಲೇ ಅಧಿಕಾರಿಗಳ ಸಭೆ ನಡೆಸಿದ ಇಂಧನ ಸಚಿವ ಕೆ ಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಆಹಾರ ಖಾತೆಯ ಸಚಿವ ಮುನಿಯಪ್ಪ ಸಭೆಯ ವರದಿಯನ್ನು ಸಿಎಂಗೆ ಒಪ್ಪಿಸಲಿದ್ದಾರೆ.

     

    5 ಗ್ಯಾರಂಟಿ ಯೋಜನೆಗಳು ಯಾವುದು?
    ಗೃಹಜ್ಯೋತಿ : ಎಲ್ಲಾ ಮನೆಗಳಿಗೂ 200 ಯೂನಿಟ್‌ ಉಚಿತ ವಿದ್ಯುತ್‌
    ಗೃಹಲಕ್ಷ್ಮಿ : ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ.
    ಅನ್ನಭಾಗ್ಯ : ಬಿಪಿಎಲ್‌ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ
    ಯುವನಿಧಿ : ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ – ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1,500 ರೂ.
    ಉಚಿತ ಪ್ರಯಾಣ: ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ

  • ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ (Free Bus Service) ಅನುಷ್ಠಾನಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಜೂನ್‌ 1 ರಂದು ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ.

    ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ಎಲ್ಲಾ ಮಹಿಳೆಯರಿಗೆ ಉಚಿತ ಎನ್ನುವುದು ಕಾಂಗ್ರೆಸ್‌ ಸರ್ಕಾರದ ಪ್ರಣಾಳಿಕೆಯಾಗಿತ್ತು. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಅನುಮಾನವೇ ಇಲ್ಲ ಎಂದು ತಿಳಿಸಿದ್ದಾರೆ.

    ಮಂಗಳವಾರ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ನಿಗಮದ ಪ್ರಯಾಣಿಕರ ಸಂಖ್ಯೆ, ಬಸ್‌ಗಳ ಸಂಖ್ಯೆ ವಾರ್ಷಿಕ ಆದಾಯದ ಬಗ್ಗೆ ಸಮಗ್ರ ಮಾಹಿತಿ ಪಡೆದರು.

    ಮಹಿಳೆಯರಿಗೆ ಉಚಿತ ಬಸ್ ಸೇವೆ ವಿಚಾರ ಕುರಿತು ಮಾತನಾಡುವಾಗ, ಪ್ರತಿ ವರ್ಷ ಅಂದಾಜು 3,200 ಕೋಟಿ ರೂ. ಖರ್ಚು ಬೇಕಾಗುತ್ತದೆ. ಸಾರಿಗೆ 4 ನಿಗಮ ನಷ್ಟದಲ್ಲಿವೆ. ಹಾಗಾಗಿ ಸರ್ಕಾರ ಸಹಾಯಧನ ನೀಡಿದರೆ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿತ್ತು. ಅದನ್ನು ಸರಿದೂಗಿಸಲು ನಿಗಮದ ಕೆಲವು ಆಸ್ತಿಗಳನ್ನು ಅಡವಿಟ್ಟು ಸಾಲ ಪಡೆಯಲಾಗಿದೆ. ಈಗಾಗಲೇ ಹಲವು ನಿಗಮಗಳಿಂದ ಸಾವಿರಾರು ಕೋಟಿ ಹಣ ಬರಬೇಕಿದೆ ಎಂದರು. ಇದೇ ವೇಳೆ ಬಸ್‌ಗಳ ಮಾಹಿತಿ ಕೊಟ್ಟ ಅಧಿಕಾರಿಗಳು ಸಾಮಾನ್ಯ ಬಸ್‌ಗಳಲ್ಲಿ ಉಚಿತ ಬಸ್ ಸೇವೆ ಕಲ್ಪಿಸಿದರೆ ಆರ್ಥಿಕ ಹೊರೆಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

    ಬಳಿಕ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಮ್ಮ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 240 ಘಟಕಗಳಿದ್ದು, 21,574 ವಾಹನಗಳನ್ನ ಒಳಗೊಂಡಿದೆ. 4 ನಿಗಮಗಳಿಂದ ಒಟ್ಟು 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರೊಂದಿಗೆ ಈ ವರ್ಷ 4,500ಕ್ಕೂ ಹೆಚ್ಚು ಬಸ್‌ಗಳು ಸೇರ್ಪಡೆಯಾಗುತ್ತಿವೆ. ಇನ್ನಷ್ಟು ಹೊಸ ಬಸ್‌ಗಳು ಬರಬೇಕಿದೆ. ಇದರಿಂದ ಪ್ರತಿದಿನ 82.51 ಲಕ್ಷ ಪ್ರಯಾಣಿಕರು ಓಡಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

    ಪ್ರತಿ ವರ್ಷ ನಾಲ್ಕು ನಿಗಮ ಸೇರಿ 8,946 ಕೋಟಿ ಆದಾಯ ಬರುತ್ತದೆ. ಬುಧವಾರ ಮಧ್ಯಾಹ್ನ 12 ಗಂಟೆಗೆ ಸರ್ಕಾರದ ಜೊತೆ ಮತ್ತೊಂದು ಸಭೆ ಇದೆ. ಅಲ್ಲಿ ಸಿಎಂ ಜೊತೆಗೆ ಗ್ಯಾರಂಟಿಗಳ ಬಗ್ಗೆ ಚರ್ಚಿಸಲಾಗುತ್ತದೆ. ಸಿಎಂ ಸಹ ಉಚಿತ ಬಸ್ ಸೇವೆ ಕಲ್ಪಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ವಿವರಿಸಿದರು.

    ಬಿಪಿಎಲ್, ಎಪಿಎಲ್ ಅಂತಾ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಎಲ್ಲಾ ಮಹಿಳೆಯರಿಗೆ ಕೊಡ್ತೇವೆ. ಜೂನ್ 1 ರಂದು ಸಿಎಂ ಘೋಷಣೆ ಮಾಡ್ತಾರೆ. ಬಿಜೆಪಿಯವರಿಗೆ ಹೋರಾಟ ಮಾಡೋಕೆ ಅವಕಾಶನೇ ಕೊಡಲ್ಲ ಎಂದು ಹೇಳಿದರು.

  • ಮನೆಯಲ್ಲಿ ಅತ್ತೆ-ಸೊತೆ ಇದ್ರೆ ಯಾರಿಗೆ ದುಡ್ಡು ಹಾಕಬೇಕು, ಮನೆ ಯಜಮಾನಿ ಯಾರು? – ಗ್ಯಾರಂಟಿ ಬಗ್ಗೆ ಡಿಕೆಶಿ ಮಾತು

    ಮನೆಯಲ್ಲಿ ಅತ್ತೆ-ಸೊತೆ ಇದ್ರೆ ಯಾರಿಗೆ ದುಡ್ಡು ಹಾಕಬೇಕು, ಮನೆ ಯಜಮಾನಿ ಯಾರು? – ಗ್ಯಾರಂಟಿ ಬಗ್ಗೆ ಡಿಕೆಶಿ ಮಾತು

    ಬೆಂಗಳೂರು: ಮನೆಯಲ್ಲಿ ಅತ್ತೆ-ಸೊಸೆ ಇದ್ದರೆ ಯಾರಿಗೆ ದುಡ್ಡು ಹಾಕಬೇಕು? ಮನೆ ಯಜಮಾನಿ ಯಾರು? ಬ್ಯಾಂಕ್‌ ಖಾತೆ ಇದೆಯಾ? ಎಲ್ಲವೂ ತೀರ್ಮಾನ ಆಗಬೇಕು ಎಂದು ಗ್ಯಾರಂಟಿ ಯೋಜನೆ (Congress Guarantee Card) ಜಾರಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಮಾತನಾಡಿದರು.

    1ನೇ ತಾರೀಖು ಕ್ಯಾಬಿನೆಟ್ ಇದೆ. ಗೈಡ್‌ಲೈನ್ಸ್ ಬರಲಿದೆ. ಸ್ಟ್ರೈಕ್ ಮಾಡೋರಿಗೆ ಬೇಡ ಅನ್ನಲ್ಲ,‌ ಮಾಡ್ಲಿ. 15 ಲಕ್ಷ ರೂ. ಪ್ರತಿಯೊಬ್ಬರ ಅಕೌಂಟ್‌ಗೆ ಹಾಕ್ತೀವಿ ಅಂದ್ರಲ್ಲಾ, ಹಾಕಿದ್ರಾ? ಮಗು ಹುಟ್ಟಿ ಇನ್ನೂ 15 ದಿನ ಆಗಿದೆ. ಬಟ್ಟೆ ಹೊಲಿಸಬೇಕು, ಅಳತೆ ಕೊಡಬೇಕು ಎಂದು ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬವನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಮನೆಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ, ಎಲ್ಲರಿಗೂ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

    ಮೊದಲು ಅವರು ಕೊಟ್ಟ ಭರವಸೆ ಬಗ್ಗೆ ಮಾತಾಡ್ಲಿ. ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ಟೀಕೆ ಮಾಡಲಿ. ಒಂದು ಲಕ್ಷ ಸಾಲ ಮನ್ನಾ ಮಾಡ್ತೇವೆ ಅಂದ್ರು.. ‌ಏನಾಯಿತು ಎಂದು ವಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

    ಖಾತೆ ವಿಚಾರವಾಗಿ ರಾಮಲಿಂಗರೆಡ್ಡಿ ಅಸಮಾಧಾನ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಹಿತದೃಷ್ಠಿಯಿಂದ ಭೇಟಿ ನೀಡಿ ಮಾತನಾಡಿದ್ದೇನೆ. ಕೆಲವೊಂದು ಊಹಾಪೋಹದ ಸ್ಟೋರಿ ಬಂದಿದೆ. ಎಂಟು ಬಾರಿ ಯಾರಾದರೂ ಆಯ್ಕೆಯಾಗಿದ್ರೆ ಅದು ರಾಮಲಿಂಗಾರೆಡ್ಡಿ. ನಾವು ಈ‌ ಪಕ್ಷ ಕಟ್ಟಿದ್ದೇವೆ, ಬೆಳೆಸಿದ್ದೇವೆ. ಸಾಕಷ್ಟು ನೋವುಗಳನ್ನ ಅನುಭವಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಸಿಎಂ ಆಗಿಯೇ ಆಗ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್

    ಕಳೆದ ಬಾರಿ ಅವರಿಗೂ ನನಗೂ ಸಚಿವ ಸ್ಥಾನ ಇರಲಿಲ್ಲ. ನಾವು ಬೇರೆ ಪಾರ್ಟಿಗೆ ಹೋಗಿದ್ರೆ ಏನೇನೋ ಆಗ್ತಿದ್ವಿ. ಮನುಷ್ಯ ಅಂದಮೇಲೆ ಸಿನಿಯಾರಿಟಿ ಅನ್ನೋದು ಬರುತ್ತೆ. ರಾಮಲಿಂಗಾರೆಡ್ಡಿ ಅವರು ಪಕ್ಷಕ್ಕೆ ಬದ್ಧರಾಗಿದ್ದಾರೆ. ಮನುಷ್ಯ ಅಂದಮೇಲೆ ಹಿರಿತನ‌ ಬರುತ್ತೆ. ಕೆಲವೊಮ್ಮೆ ರಾಜಕೀಯದಲ್ಲಿ ಏನೂ ಮಾಡಲು ಆಗಲ್ಲ ಎಂದು ತಿಳಿಸಿದರು.

  • ಕರೆಂಟ್‌ ಬಿಲ್‌ ಕಟ್ಟಿ ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ: ಅಶೋಕ್‌

    ಕರೆಂಟ್‌ ಬಿಲ್‌ ಕಟ್ಟಿ ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ: ಅಶೋಕ್‌

    ಬೆಂಗಳೂರು: ಕರೆಂಟ್‌ ಬಿಲ್‌ ಕಟ್ಟಿ ಸಿದ್ದರಾಮಯ್ಯನವರಿಗೆ (Siddaramaiah) ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್‌ (R Ashok) ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ (Karnataka Election) ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ನನಗೂ ಉಚಿತ, ನಿಮಗೂ ಉಚಿತ ಎಂದು ಹೇಳಿದ್ದರು. ಸಿದ್ದರಾಮಯ್ಯನವರು ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಕರೆಟ್‌ ಬಿಲ್‌ ಕಟ್ಟಿದರೆ ಅದು ಮುಖ್ಯಮಂತ್ರಿ ಹುದ್ದೆಗೆ ಮಾಡುವ ಅವಮಾನ. ನಾನೇ ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಸಿಎಂ ಅವರೇ ಹೇಳಿದ ಹಿನ್ನೆಲೆಯಲ್ಲಿ ಯಾರೂ ಕರೆಟ್‌ ಬಿಲ್‌ ಕಟ್ಟಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: Karnataka Cabinet Expansion – ಪ್ರಮುಖ ಐದು ಖಾತೆಗಳಿಗೆ ಡಿಕೆ ಶಿವಕುಮಾರ್‌ ಪಟ್ಟು

    ಸರ್ಕಾರದ ಬಂದ ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ (Congress Guarantee) ಯೋಜನೆ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಘೋಷಣೆ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ಯಾರೂ 200 ಯೂನಿಟ್‌ಗೆ ವಿದ್ಯುತ್‌ ಬಿಲ್‌ ಕಟ್ಟಬಾರದು ಮತ್ತು ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಟಿಕೆಟ್‌ ತೆಗೆದುಕೊಳ್ಳಬಾರದು ಎಂದು ಜನರಲ್ಲಿ ವಿನಂತಿ ಮಾಡಿದರು.

     

    ಚುನಾವಣೆ ಸಮಯದಲ್ಲಿ ಯಾವುದೇ ಷರತ್ತುಗಳನ್ನು ಹಾಕಿಲ್ಲ. ಹೀಗಾಗಿ ಈಗ ಷರತ್ತು ವಿಧಿಸುವಂತಿಲ್ಲ. ನಾನು ಕರೆಟ್‌ ಬಿಲ್‌ ಕಟ್ಟುವುದಿಲ್ಲ. ಕರೆಂಟ್ ಬಿಲ್ ಕಟ್ಟದ ಜನರ ಪರ ಬಿಜೆಪಿ ಇದೆ. ಬಿಲ್ ಕಟ್ಟದ ಮನೆಗಳಿಗೆ ಸಂಪರ್ಕ ತೆಗೆದರೆ ನಾನೇ ಹೋಗುತ್ತೇನೆ. ಆ ಜನರ ಪರ ನಾನೇ ಹೋಗಿ ಬೆಂಬಲಕ್ಕೆ ನಿಲ್ಲುತ್ತೇನೆ. ನಾವು ಆರು ತಂಡ ಮಾಡಿ ರಾಜ್ಯ ಸುತ್ತುತ್ತೇವೆ. ಜನರ ಮುಂದೆ ನಾವು ಗ್ಯಾರಂಟಿ ವಿಷಯ ಮಾತನಾಡಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಚ್ಚರಿಕೆ ನೀಡಿದ್ದಾರೆ.