Tag: Congress Guarantee

  • ನನ್ನ ಅಸ್ತಿತ್ವವೇ ಹೊರಟೋಗಿದೆ, ನಾನೇನು ಕಡುಬು ತಿನ್ನೋಕೆ ರಾಜಕೀಯ ಮಾಡ್ತಿದ್ದೀನಾ – HDK ಪ್ರಶ್ನೆ

    ನನ್ನ ಅಸ್ತಿತ್ವವೇ ಹೊರಟೋಗಿದೆ, ನಾನೇನು ಕಡುಬು ತಿನ್ನೋಕೆ ರಾಜಕೀಯ ಮಾಡ್ತಿದ್ದೀನಾ – HDK ಪ್ರಶ್ನೆ

    ಬೆಂಗಳೂರು: ನಾನೇನು ಊಟ ಮಾಡ್ಕೊಂದು, ಕಡುಬು ತಿನ್ನೋಕೆ ರಾಜಕೀಯ (Politics) ಮಾಡ್ತಿದ್ದೀನಾ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಗ್ಯಾರಂಟಿ (Congress Guarantee) ಘೋಷಣೆಗಳ ವಿರುದ್ಧ ಕಿಡಿ ಕಾರಿದ್ದಾರೆ. ನನ್ನ ಅಸ್ತಿತ್ವವೇ ಹೊರಟೋಗಿದೆ. ಚುನಾವಣೆಯಲ್ಲಿ ನನ್ನ ಅಸ್ತಿತ್ವವನ್ನು ಕುಂಟಿತಗೊಳಿಸಿದ್ದು ಇದೇ ಗ್ಯಾರಂಟಿ ಅಲ್ಲವೇ? ಆವತ್ತು ರಸ್ತೆಯಲ್ಲಿ ನಿಂತು ನನಗೂ ಫ್ರೀ, ನಿನಗೂ ಫ್ರೀ, ಹೇ ಕಾಕಾ ಪಾಟೀಲ್‌ ನಿನಗೂ ಫ್ರೀ ಅಂತಾ ಕೂಗಿ ಹೇಳಿದವರು ಇವರೇ ಅಲ್ಲವೇ? ಯಾವ ಆಧಾರದ ಮೇಲೆ ಗ್ಯಾರಂಟಿ ಘೋಷಣೆ ಮಾಡಿದ್ರು. ಈಗ ಹೇಳಿದ ಮೇಲೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ಮೇಲೆ ಬಿಜೆಪಿ ಕಾರ್ಯಕರ್ತರು ಅಪಾಯದಲ್ಲಿದ್ದಾರೆ – ಪ್ರತಾಪ್‌ ಸಿಂಹ

    ನಿದ್ಯೋಗಿಗಳಿಗೆ ಮೂರು ಸಾವಿರ ರೂ. ಕೊಡ್ತೀನಿ ಅಂದಿದ್ರು, ಈಗ 2022-23ನೇ ಸಾಲಿನಲ್ಲಿ ಪಾಸಾದವರಿಗೆ ಅಂತಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ನಂಬಿ ಹೊಟ್ಟೆಗೆ ಇಟ್ಟಿಲ್ಲದವನು ಕಾಂಗ್ರೆಸ್‌ಗೆ (Congress) ವೋಟ್‌ ಹಾಕಿದ್ದಾನೆ, ಅವನಿಗೆ ಕೊಡಬೇಕು. ಇದೆಲ್ಲವನ್ನು ಮುಂದಿಟ್ಟುಕೊಂಡೇ ರಾಜಕೀಯ ಮಾಡ್ತಿರೋದು. ಅದು ಬಿಟ್ಟು ನಾನೇನು ಊಟ ಮಾಡ್ಕೊಂಡು, ಕಡುಬು ತಿನ್ನೋಕೆ ರಾಜಕೀಯ ಮಾಡ್ತಿದ್ದೀನಾ? ಜನತೆಯ ಸಮಸ್ಯೆ ಹಾಗೂ ಜನರಿಗೆ ಆಗುವ ದ್ರೋಹದ ಬಗ್ಗೆ ನನ್ನ ಧ್ವನಿ ಇರಬೇಕು. ಅದಕ್ಕಾಗಿ ನಾವು ಹೋರಾಟ ಮಾಡ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: The Kerala Story: ದಾವಣಗೆರೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿ ಪ್ರದರ್ಶನ

  • ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ರಾಯಚೂರು: ಕಾಂಗ್ರೆಸ್ ಸರ್ಕಾರ (Congress Government) ಘೋಷಿಸಿರುವ 200 ಯೂನಿಟ್‌ ಉಚಿತ ವಿದ್ಯುತ್ (200 Unit Electricity) ಗ್ಯಾರಂಟಿ ಗೊಂದಲದ ನಡುವೆ ರಾಯಚೂರಿನ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಗೋಲ್‌ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ. ಜೆಸ್ಕಾಂಗೆ (GESCOM) ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ.

    ಗ್ರಾಮಿಣ ಭಾಗದಲ್ಲಿ ಗ್ರಾಮಸ್ಥರು, ಬಡ ರೈತರಿಂದ (Farmers) ವಸೂಲಿ ಮಾಡಿದ ವಿದ್ಯುತ್ ಬಿಲ್‌ಗೆ ರಶೀದಿ ಕೊಡದೇ ಸಂಗ್ರಹಿಸಿದ ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಗ್ರಾಮ ವಿದ್ಯುತ್ ಬಿಲ್‌ ಕಲೆಕ್ಟರ್‌ಗಳೇ ಗುಳುಂ ಮಾಡಿರುವುದು ಬಯಲಾಗಿದೆ. ತಕ್ಷಣದ ಮಾಹಿತಿ ಪ್ರಕಾರ ರಾಯಚೂರು ತಾಲೂಕಿನ ಚಂದ್ರಬಂಡಾ ಜೆಸ್ಕಾಂ ಶಾಖೆ ಸೇರಿ ಸುಮಾರು 20 ಲಕ್ಷ ರೂಪಾಯಿ ವಂಚನೆಯಾಗಿರುವುದು ಕಂಡುಬಂದಿದೆ ಎಂದು ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ ಹೇಳಿದ್ದಾರೆ. ಇದನ್ನೂ ಓದಿ: ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ಆರ್.ಆರ್ ಸಂಖ್ಯೆಗಳ ವಸೂಲಾತಿ ಹಾಗೂ ಬ್ಯಾಂಕ್‌ಗೆ ಹಣ ಸಂದಾಯವಾದ ಕುರಿತು ಜೆಸ್ಕಾಂ ಅಧಿಕಾರಿಗಳು ಪರಿಶೀಲಿಸಿದಾಗ ನಕಲಿ ದಾಖಲೆಗಳ ಮೂಲಕ ಗೋಲ್‌ಮಾಲ್ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಚಂದ್ರಬಂಡಾ ಗ್ರಾಮದ ವಿದ್ಯುತ್ ಬಿಲ್‌ ಕಲೆಕ್ಟರ್‌ ಮಲ್ಲೇಶ್‌ಗೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನೋಟಿಸ್ ನೀಡಿದ್ದು ಕ್ರಮಕ್ಕೆ ಮುಂದಾಗಿದ್ದಾರೆ. ಆದ್ರೆ ಚಂದ್ರಬಂಡಾ ಮಾತ್ರವಲ್ಲದೇ ಹಲವೆಡೆ ಇದೇ ರೀತಿ ಗೋಲ್ ಮಾಲ್ ನಡೆದಿದ್ದು ಕೋಟ್ಯಾಂತರ ರೂಪಾಯಿ ವಂಚಿಸಿರುವ ಅನುಮಾನ ಮೂಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್‌ ಶಾಗೆ ಸ್ಟಾಲಿನ್‌ ಪತ್ರ

    ಗ್ರಾಮೀಣ ಭಾಗದ ಬಹುತೇಕ ಬಡ ರೈತರು ಉಚಿತ ವಿದ್ಯುತ್ ಭರವಸೆ ಇಟ್ಟುಕೊಂಡು ಕುಳಿತಿರುವಾಗ ತಮ್ಮ ಹಣ ದುರ್ಬಳಕೆಯಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಬಿಲ್ ಕೊಡದೇ, ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಇರುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಂತಾ ಒತ್ತಾಯಿಸಿದ್ದಾರೆ.

  • ಗ್ಯಾರಂಟಿ ನಂಬಿ BPL ಕಾರ್ಡ್‌ಗೆ ಮುಗಿಬಿದ್ದ ಜನ – ಅರ್ಜಿ ಸ್ವೀಕರಿಸೋದನ್ನೇ ನಿಲ್ಲಿಸಿದ ಇಲಾಖೆ!

    ಗ್ಯಾರಂಟಿ ನಂಬಿ BPL ಕಾರ್ಡ್‌ಗೆ ಮುಗಿಬಿದ್ದ ಜನ – ಅರ್ಜಿ ಸ್ವೀಕರಿಸೋದನ್ನೇ ನಿಲ್ಲಿಸಿದ ಇಲಾಖೆ!

    ಮಡಿಕೇರಿ: ಕಾಂಗ್ರೆಸ್ ಸರ್ಕಾರ (Congress Government) ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಉಚಿತ ಕೊಡುಗೆಗಳ ಭರವಸೆಗಳನ್ನ ಈಡೇರಿಸುವುದು ನಿಚ್ಚಳವಾಗಿದೆ. ಆದ್ರೆ ಆ ಕೊಡುಗೆಗಳನ್ನ ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈ ಉಚಿತ ಕೊಡುಗೆಗಳ ಲಾಭ ಪಡೆಯಲು ಉತ್ಸುಕರಾಗಿರುವ ಜನರು, ಬಿಪಿಎಲ್ ಕಾರ್ಡ್‌ (BPL Card) ಮಾಡಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ.

    ಇದರಿಂದ ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನರಿಗೆ ಇದೀಗ ಅರ್ಜಿ ಸ್ವೀಕಾರವನ್ನೇ ಅಹಾರ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷವನ್ನು ‌ನಂಬಿಕೆಟ್ಟವು ಅನ್ನೋ ಅನುಮಾನ ಜನರಲ್ಲಿ ಕಾಡತೋಡಗಿದೆ. ಇದನ್ನೂ ಓದಿ: ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?

    ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ಮನೆಗೂ 200 ಯೂನಿಟ್‌ ವಿದ್ಯುತ್‌ ಉಚಿತ, ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ, ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ, ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ ನೀಡುವುದಾಗಿ 5 ಗ್ಯಾರಂಟಿಗಳನ್ನ ಕಾಂಗ್ರೆಸ್ ಘೋಷಣೆ ಮಾಡಿದೆ. ಈಗಾಗಲೇ ಮೊದಲ ಕ್ಯಾಬಿನೆಟ್‌ ಸಭೆಯಲ್ಲೇ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಮುಂದಿನ ಸಭೆಯಲ್ಲೇ ಅನುಷ್ಠಾನಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

    ಇದಕ್ಕೆ ಪೂರಕವಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡುವ ನಿರ್ಧಾರಗಳನ್ನು ಕೈಗೊಂಡು ಅಧಿಕೃತ ಆದೇಶಗಳನ್ನ ಹೊರಡಿಸಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತ್ರ, ಹಾದಿಬೀದಿಯಲ್ಲಿ ಹೋಗುವವರಿಗೆಲ್ಲ ಈ ಯೋಜನೆಗಳ ಲಾಭ ಸಿಗುವುದಿಲ್ಲ. ನಿಜಕ್ಕೂ ಬಡವರಿಗೆ, ಅರ್ಹರಿಗೆ ಮಾತ್ರ ಸಿಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್‌ ದಾಖಲು

    ಇದೆಲ್ಲವನ್ನೂ ಗಮನಿಸಿರುವ ಕೊಡಗಿನ ಸಾರ್ವಜನಿಕರು ತಮ್ಮ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಸೈಟ್ ಗೆ ಮೊರೆ ಹೋಗಿದ್ದಾರೆ. ಕೆಲವರು ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್ ಗಳ ಸಹಾಯದಿಂದ ಆಹಾರ ahar.kar.nic.in ವೆಬ್ ಸೈಟ್ ಓಪನ್ ಮಾಡಲು ಪ್ರಯತ್ನಿಸುತ್ತಿದ್ದರೆ, ಇನ್ನೂ ಕೆಲವರು ಸಮೀಪದ ಸೈಬರ್ ಸೆಂಟರ್ ಗಳಿಗೆ ಹೋಗಿ ಬಿಪಿಎಲ್ ಕಾರ್ಡ್ ಗಳನ್ನೂ ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೆಚ್ಚಿನ ಜನರು ಏಕಕಾಲಕ್ಕೆ ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದು, ಇಲಾಖೆ ತಾತ್ಕಾಲಿಕವಾಗಿ ಅರ್ಜಿ ಸ್ವೀಕಾರವನ್ನ ಸ್ಥಗಿತಗೊಳಿಸಿದೆ ಎಂದು ತಮ್ಮ ವೆಬ್ ಸೈಟ್ ನಲ್ಲೆ ಸ್ಪಷ್ಟವಾಗಿ ನಮೂದಿಸಿಬಿಟ್ಟಿದ್ದಾರೆ.

    ಇನ್ನೂ ಈ ಸಮಸ್ಯೆ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳನ್ನು ಕೇಳಿದ್ರೆ. ಬಿಪಿಎಲ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದಂತೆ ಆಹಾರ ಇಲಾಖೆಯಲ್ಲಿ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕಾರ್ಡ್ ತಿದ್ದುಪಡಿಗೆ ಸರ್ವರ್‌ ಒಪನ್ ಇತ್ತು. ಮಾಚ್ 9ರಿಂದ ನೀತಿ ಸಂಹಿತೆ ಜಾರಿಯಾಗುವ ವರೆಗೂ GSC ಅಪ್ಲಿಕೇಶನ್ ಹಾಕುವುದಕ್ಕೆ ಅವಕಾಶ ನೀಡಲಾಗಿತ್ತು. ಮೇ ತಿಂಗಳಲ್ಲೂ 17 ಹಾಗೂ 18ರ ವರೆಗೂ ಸರ್ವರ್ ಒಪನ್ ಇತ್ತು. ಇದೀಗ ಸ್ಥಗಿತಗೊಳಿಸಲಾಗಿದೆ. ಮುಂದೆ ಸರ್ಕಾರ ನಿರ್ದೇಶನ ನೀಡುವವರೆಗೂ ಅರ್ಜಿಗಳನ್ನ ಸ್ಥಗಿತಗೊಳಿಸಲಾಗುತ್ತದೆ. ದೂರದ ಊರಿನ ಬಂದವರು ವಾಪಸ್‌ ಹೋಗುತ್ತಿದ್ದಾರೆ. ಸರ್ಕಾರದ ಅದೇಶ ಬರುವವರೆಗೂ ಜನರು ಕಾಯಲೇಬೇಕು ಎಂದು ಇಲಾಖೆಯ ಆಧಿಕಾರಿಗಳು ತಿಳಿಸಿದ್ದಾರೆ.

  • ಕಾಂಗ್ರೆಸ್‌ ಗ್ಯಾರಂಟಿ ನೆನಪಿಸಿ ಬಸ್ ಪ್ರಯಾಣಕ್ಕೆ ಟಿಕೆಟ್ ದುಡ್ಡು ಕೊಡದ ಅಜ್ಜಿ: ಕಂಗಾಲಾದ ಕಂಡಕ್ಟರ್

    ಕಾಂಗ್ರೆಸ್‌ ಗ್ಯಾರಂಟಿ ನೆನಪಿಸಿ ಬಸ್ ಪ್ರಯಾಣಕ್ಕೆ ಟಿಕೆಟ್ ದುಡ್ಡು ಕೊಡದ ಅಜ್ಜಿ: ಕಂಗಾಲಾದ ಕಂಡಕ್ಟರ್

    ರಾಯಚೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free Bus Pass) ಘೋಷಣೆ ಹಿನ್ನೆಲೆ ಜಿಲ್ಲೆಯಲ್ಲಿ ಬಸ್ ಪ್ರಯಾಣಕ್ಕೆ ಟಿಕೆಟ್ ದುಡ್ಡು (Bus Ticket Price) ನೀಡಲು ಕಿರಿಕ್‌ ಮಾಡುತ್ತಿರುವ ಪ್ರಸಂಗಗಳು ದಿನೇ-ದಿನೇ ಹೆಚ್ಚಾಗುತ್ತಿದೆ.

    ಅದೇ ರೀತಿ ಮಸ್ಕಿಯಿಂದ ಸಿಂಧನೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಅಜ್ಜಿಯೊಬ್ಬರು ಟಿಕೆಟ್ ದುಡ್ಡು ಕೊಡದೇ ಗಲಾಟೆ ಮಾಡಿದ್ದು ಕಂಡಕ್ಟರ್ ಕಂಗಾಲಾದ ಪ್ರಸಂಗ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಭೂಕಂಪ ಆಗ್ತಿದೆ, ಏನಾದ್ರೂ ಮಾಡಿಕೊಳ್ಳಲಿ `ಗ್ಯಾರಂಟಿ’ಗಳನ್ನ ಈಡೇರಿಸಲಿ – ಸಿ.ಟಿ ರವಿ

     

    ನಾನು ಟಿಕೆಟ್‌ಗೆ ರೊಕ್ಕ ಕೊಡಲ್ಲ ಅಂದ್ರೆ ಕೊಡಲ್ಲ ಅಂತಾ ಕಂಡಕ್ಟರ್‌ಗೆ ಅಜ್ಜಿ ಆವಾಜ್ ಹಾಕಿದ್ದಾರೆ. ಅಜ್ಜಿಯ ಮನವೊಲಿಸಿ ಟಿಕೆಟ್‌ ಹಣ ಪಡೆಯಲು ಕಂಡಕ್ಟರ್ ಹರಸಾಹಸ ಪಟ್ಟಿದ್ದಾನೆ. ಸರ್ಕಾರ ಇನ್ನೂ ನಮಗೆ ಆದೇಶ ಮಾಡಿಲ್ಲ ಮಾಡಿದ ಮೇಲೆ ದುಡ್ಡು ಕೊಡಬೇಡ ಎಂದ ಕಂಡಕ್ಟರ್‌ಗೆ, ʻನಾವು ವೋಟ್‌ ಹಾಕಿದ್ದೀವಿ ಫ್ರೀ ಟಿಕೆಟ್, ಫೀ ಕರೆಂಟ್ ಅಂತಾ ಹೇಳಿದ್ದಾರೆ. ಮಸ್ಕಿ ಶಾಸಕ ತುರವಿಹಾಳ ಬಸನಗೌಡ ಕೂಡ ದುಡ್ಡು ಕೊಡಬೇಡ ಅಂತಾ ಹೇಳಿದ್ದಾನೆ, ನಾನು ದುಡ್ಡು ಕೊಡಲ್ಲ ಅಂತಾ ಹೇಳಿ ಅಜ್ಜಿ ಹಠ ಹಿಡಿದ್ದರು.

    ಕೊನೆಗೆ ಕಂಡಕ್ಟರ್ ಅಜ್ಜಿ ಮನವೊಲಿಸಿ ಟಿಕೆಟ್ ಹಣ ಪಡೆಯುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಹೇಳಿಕೆಗಳಿಗೆ ಬ್ರೇಕ್‌ ಬೀಳದಿದ್ರೆ ಸರ್ಕಾರದಿಂದ ಹೊರಗಿರುತ್ತೇನೆ: ಎಂಬಿಪಿ ವಿರುದ್ಧ ಡಿಕೆಶಿ ಕೆಂಡಾಮಂಡಲ

  • ಕಾಂಗ್ರೆಸ್‌ನಲ್ಲಿ ಭೂಕಂಪ ಆಗ್ತಿದೆ, ಏನಾದ್ರೂ ಮಾಡಿಕೊಳ್ಳಲಿ `ಗ್ಯಾರಂಟಿ’ಗಳನ್ನ ಈಡೇರಿಸಲಿ – ಸಿ.ಟಿ ರವಿ

    ಕಾಂಗ್ರೆಸ್‌ನಲ್ಲಿ ಭೂಕಂಪ ಆಗ್ತಿದೆ, ಏನಾದ್ರೂ ಮಾಡಿಕೊಳ್ಳಲಿ `ಗ್ಯಾರಂಟಿ’ಗಳನ್ನ ಈಡೇರಿಸಲಿ – ಸಿ.ಟಿ ರವಿ

    ಚಿಕ್ಕಮಗಳೂರು: ಸಾಮಾನ್ಯವಾಗಿ ಆಡಳಿತದ ಕೊನೆಯ ವರ್ಷ ಪಕ್ಷದಲ್ಲಿ ಅಸಹನೆ ಹುಟ್ಟುತ್ತದೆ. ಆದ್ರೆ ಕಾಂಗ್ರೆಸ್ (Congress) ಪಕ್ಷದಲ್ಲಿ ಆರಂಭದಲ್ಲೇ ಭೂಕಂಪ ಶುರುವಾಗಿದೆ. ಅವರು ಏನಾದ್ರೂ ಮಾಡಿಕೊಳ್ಳಲಿ ಕೊಟ್ಟ ಎಲ್ಲಾ ಭರವಸೆಗಳನ್ನ ಈಡೇರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಒತ್ತಾಯಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಆರಂಭದಲ್ಲೇ ಒಳಗೆ ಅಸಹನೆ ಕುದಿಯುತ್ತಿದೆ, ಪಕ್ಷದೊಳಗೆ ಭೂಕಂಪದ ಮುನ್ಸೂಚನೆ ಕಾಣ್ತಿದೆ ಅನ್ನಿಸುತ್ತೆ. ಆ ಭೂಕಂಪ ಕಾಂಗ್ರೆಸ್ ಪಕ್ಷವನ್ನೇ ದುರ್ಬಲಗೊಳಿಸುವ ಭೂಕಂಪ ಆಗಬಹುದು, ಆಗದಿರಲೂಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂಗೆ ಕಳ್ಸಿ – ಸಿ.ಟಿ ರವಿ

    ಸಿದ್ದರಾಮಯ್ಯ (Siddaramaiah) ಈಗ ತಾನೇ ಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ. ಈಗಲೇ ಏಕೆ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ ಅನ್ನೋದು ಗೊತ್ತಾಗ್ತಿಲ್ಲ. ನೋಡೋದಕ್ಕೆ ಏನೋ ನಡೆಯುತ್ತಿದೆ ಅನ್ನಿಸುತ್ತೆ. ಪಕ್ಷದಲ್ಲಿ ಅಸಹನೆ ಹುಟ್ಟೋದು ಕಡೇ ವರ್ಷದಲ್ಲಿ. ಆರಂಭದಲ್ಲೇ ಒಳಗೆ ಕುದಿಯುತ್ತಿದೆ ಅಂದ್ರೆ ಭೂಕಂಪದ ಮುನ್ಸೂಚನೆ ಕಾಣುತ್ತಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ, ಅವರ ಪಕ್ಷ ಏನಾದ್ರು ಮಾಡಿಕೊಳ್ಳಲಿ. ಅವರು ಜನರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಳುಹಿಸಿದ ಮೆಸೇಜ್ ಎಡಿಟ್ ಮಾಡ್ಬೋದು – ವಾಟ್ಸಪ್‌ನಲ್ಲಿ ಹೊಸ ಆಯ್ಕೆ

  • `ಗ್ಯಾರಂಟಿ’ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ, 40% ಕಮಿಷನ್ ಆರೋಪ ತನಿಖೆಯಾಗಲಿ – ಬೊಮ್ಮಾಯಿ

    `ಗ್ಯಾರಂಟಿ’ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ, 40% ಕಮಿಷನ್ ಆರೋಪ ತನಿಖೆಯಾಗಲಿ – ಬೊಮ್ಮಾಯಿ

    – ಮಳೆ ಅನಾಹುತ – ಬಿಬಿಎಂಪಿ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಎಂದ ಮಾಜಿ ಸಿಎಂ

    ಬೆಂಗಳೂರು: ಗ್ಯಾರಂಟಿಗಳ (Congress Guarantee) ಬಗ್ಗೆ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ. ಕಾಂಗ್ರೆಸ್ ಕಾರ್ಯಕರ್ತರು (Congress Worker) ಜನರ ಬಳಿ ಹೋಗಿ ಸ್ಪಷ್ಟವಾಗಿ ಹೇಳಿಲ್ಲ. ಯಾವುದೋ ಕಂಪನಿಯಿಂದ ಬಂದವರಂತೆ ಹೋಗಿ ಗ್ಯಾರಂಟಿ ಸ್ಕೀಂಗಳ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್ ನಿಂದ ಅಂತಾ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದ್ರೆ `ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್’ ಅಂತಾ ಹೇಳಿದ್ದಾರೆ. ಈ ರೀತಿ ಜನರಿಗೆ ಮೋಸ ಮಾಡಿದ್ದು, ಮುಂದೆ ಎಲ್ಲವೂ ಬೆಳಕಿಗೆ ಬರಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಟೀಕಿಸಿದ್ದಾರೆ.

    ಬೆಂಗಳೂರು (Bengaluru) ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿದ್ದು, ಎಲ್ಲ ಜಿಲ್ಲೆಗಳಿಂದ ವರದಿ ತರಿಸಿದ್ದೇವೆ. ಒಂದೊದು ಜಿಲ್ಲೆಗಳಲ್ಲಿ ಒಂದೊಂದು ರೀತಿ ಚುನಾವಣೆ ನಡೆದಿದೆ. ಕೆಲವು ಕಡೆ ಲೋಪದೋಷಗಳಾಗಿದ್ದು, ಸರಿಪಡಿಸಲು ತೀರ್ಮಾನ ಮಾಡಿದ್ದೇವೆ. ಸೋತ ಕ್ಷೇತ್ರಗಳಲ್ಲಿ ಮರು ಸಂಘಟನೆ ಮಾಡಲು ಹಾಗೂ ಲೋಕಸಭೆ ತಯಾರಿ ಬಗ್ಗೆ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂಗೆ ಕಳ್ಸಿ – ಸಿ.ಟಿ ರವಿ

    ಬೆಂಗಳೂರಿನಲ್ಲಿ ಮಳೆ (Bengaluru Rain) ಅನಾಹುತ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲವೇ ಗಂಟೆಗಳ ಮಳೆಗೆ ಸಾವಾಗಿರೋದು ಬಹಳ ನೋವಿನ ಸಂಗತಿ. ಚಿಕ್ಕಮಗಳೂರಿನಲ್ಲಿ ಮೂರು ಸಾವಾಗಿದೆ. ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಆದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗ್ತಿದೆ. ಈ ಘಟನೆ ನಡೆಯೋದಿಕ್ಕೆ ಅವಕಾಶ ಕೊಟ್ಟಿದ್ದಾರೆ. ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವರು ಮಾಡಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸನ್ಮಾನದ ರೂಪದಲ್ಲಿ ಹಾಕುವ ಹಾರ-ತುರಾಯಿ, ಶಾಲು-ಶಲ್ಯಗಳು ನನಗೆ ಬೇಡ – ಸಿದ್ದರಾಮಯ್ಯ

    ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಗರದಲ್ಲಿ ಸಿಕ್ಕಾಪಟ್ಟೆ ಮರಗಳು ಬಿದ್ದಿವೆ. ಬಿದ್ದ ಮರಗಳನ್ನು ತೆಗೆಯುವ ಕೆಲಸ ಆಗಿಲ್ಲ. ಮುಂದಿನ 5 ದಿನ ಹೀಗೇ ಬಿಟ್ರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ಸಿಎಂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    40% ಕಮಿಷನ್ ಬಗ್ಗೆ ತನಿಖೆಯಾಗಲಿ:
    ಬಿಜೆಪಿ ಅವಧಿಯ ಹಗರಣಗಳ ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ನಾನು ಸ್ಪಷ್ಟವಾಗಿ ಹೇಳ್ತೀನಿ, ದಯವಿಟ್ಟು ಅವರು ಎಲ್ಲ ತನಿಖೆ ಮಾಡಿಸಲಿ. 40% ಕಮೀಷನ್ ಆರೋಪವನ್ನು ನಮ್ಮ ಮೇಲೆ ಹೊರೆಸಿದ್ದಾರೆ. 40% ಆಗಿದೆ ಅಂತಾ ಅವರು ಪುರಾವೆ ಸಮೇತ ತೋರಿಸಬೇಕು. ಕಾಂಗ್ರೆಸ್ ಸರ್ಕಾರ 40% ಆರೋಪ ಕುರಿತ ಎಲ್ಲ ದಾಖಲೆಗಳನ್ನು ಕೊಡಲಿ, ನಾವು 40% ಕಮೀಷನ್ ತಗೋತಿದ್ವಿ ಅಂತಾ ದಾಖಲೆಸಹಿತ ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.

  • ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂಗೆ ಕಳ್ಸಿ – ಸಿ.ಟಿ ರವಿ

    ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂಗೆ ಕಳ್ಸಿ – ಸಿ.ಟಿ ರವಿ

    * ಮಹಿಳೆಯರಿಗೆ ಉಚಿತ ಬಸ್ ಪಾಸ್, ಕೊಡಲೇಬೇಕು
    * ಗೃಹಿಣಿಯರಿಗೆ 2 ಸಾವಿರ ರೂ, ಕೊಡಲೇಬೇಕು
    * ಉಚಿತ ವಿದ್ಯುತ್ ಕೊಡಲೇಬೇಕು ಹೇಳಿದ್ಮೇಲೆ ಎಲ್ಲ ಗ್ಯಾರಂಟಿ ಕೊಡ್ಬೇಕು

    ಬೆಂಗಳೂರು: ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಕರೆ ನೀಡಿದ್ದಾರೆ.

    ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್‌ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ 3 ಸಾವಿರ ರೂ. ಕೊಡ್ತೀವಿ ಅಂದಿದ್ರು. ಈಗ 2022-23ರ ಸಾಲಿನ ಪದವೀಧರರಿಗೆ ಮಾತ್ರ ಅಂತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮತದಾರರಿಗೆ ಅವಮಾನ ಮಾಡಿದೆ – ಸಿಎಂ, ಡಿಸಿಎಂ ಕ್ಷಮೆಗೆ ಆಗ್ರಹಿಸಿದ ಈಶ್ವರಪ್ಪ

    ಮಹಿಳೆಯರಿಗೆ ಉಚಿತ ಬಸ್‌ಪಾಸ್ ಕೊಡಲೇಬೇಕು. ಗೃಹಿಣಿಯರಿಗೆ 2 ಸಾವಿರ ರೂ. ಕೊಡಲೇಬೇಕು. ಉಚಿತ ವಿದ್ಯುತ್ ಕೊಡಲೇಬೇಕು. ಹೇಳಿದ್ಮೇಲೆ ಎಲ್ಲ ಗ್ಯಾರಂಟಿನೂ ಕೊಡಲೇಬೇಕು ಎಂದು ಒತ್ತಾಯಿಸಿದರಲ್ಲದೇ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ

    ಬಿಜೆಪಿ ಅವಧಿಯ ಹಗರಣಗಳನ್ನು ತನಿಖೆಗೆ ಒಪ್ಪಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಸಮಯದ ಗಡುವಿನೊಳಗೆ ತನಿಖೆ ಮಾಡಲಿ. ಅಂತಹ ಹಗರಣ ನಡೆದಿದ್ದರೆ ಮೂರು ತಿಂಗಳಲ್ಲಿ ತನಿಖೆ ಮಾಡಿಸಲಿ. ಆಗ ಸತ್ಯ ಗೊತ್ತಾಗುತ್ತೆ. ಬಿಜೆಪಿ ಅವಧಿಯ ತನಿಖೆಗಳಷ್ಟೇ ಅಲ್ಲ, ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡಕ್ಕಾಗಲ್ಲ – ಡಿಸಿಎಂ ಡಿಕೆಶಿ

  • ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡಕ್ಕಾಗಲ್ಲ – ಡಿಸಿಎಂ ಡಿಕೆಶಿ

    ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡಕ್ಕಾಗಲ್ಲ – ಡಿಸಿಎಂ ಡಿಕೆಶಿ

    ಬೆಂಗಳೂರು: ಗ್ಯಾರಂಟಿ ಯೋಜನೆಗಳ (Congress Guarantee) ಅನುಷ್ಠಾನದ ಕುರಿತು ಮಾತನಾಡುತ್ತಾ ನೂತನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar), ಅದೆಲ್ಲದಕ್ಕೂ ವರದಿಗಳನ್ನ ಪಡೆಯಬೇಕಾಗುತ್ತೆ. ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋದಕ್ಕೆ ಆಗಲ್ಲ ಎಂದು ಹೇಳಿದರು.

    ಯಾರಿಗೆ ಹಣ ಕೊಡಬೇಕು? ಯಾರಿಗೆ ವಿದ್ಯುತ್ (Electricity)ಕೊಡಬೇಕು? ಫಲಾನುಭವಿಗಳು ಯಾರು ಎಂಬುದನ್ನೆಲ್ಲಾ ವರದಿ ಪಡೆದು ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ

    ಇದಕ್ಕೂ ಮುನ್ನ ಮಾತನಾಡಿದ ನೂತನ ಸಿಎಂ ಸಿದ್ದರಾಮಯ್ಯ (Siddaramaiah), ಕಾಂಗ್ರೆಸ್ ನೀಡಿದ ಎಲ್ಲಾ ಭರವಸೆಗಳು ಒಂದೇ ವರ್ಷದಲ್ಲಿ ಈಡೇರಿಸುವ ಭರವಸೆಗಳಲ್ಲ. 5 ವರ್ಷಗಳಲ್ಲಿ ಈಡೇರಿಸುವಂತಹದ್ದು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳ ಜಾರಿ ಬಗ್ಗೆ ಮಾತು ಕೊಟ್ಟಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ನಿರ್ಧಾರ ಮಾಡಿದ್ದು, ಮುಂದಿನ ಸಂಪುಟ ಸಭೆಯ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

    2013-2018 ರಲ್ಲಿ 158 ಭರವಸೆ ಈಡೇರಿಸಿದ್ವಿ, ಅದರ ಜೊತೆಗೆ 30 ಕಾರ್ಯಕ್ರಮಗಳನ್ನ ಹೊಸದಾಗಿ ಜಾರಿ ಮಾಡಿದ್ವಿ. ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ವಿದ್ಯಾಸಿರಿ ಯೋಜನೆಗಳನ್ನ ಹೊಸದಾಗಿ ಜಾರಿಗೊಳಿಸಿದ್ವಿ. ಜನರಿಗೆ ನಮ್ಮ ಮೇಲೆ ವಿಶ್ವಾಸ ಇದೆ. ನಾವು ಕೊಟ್ಡ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಆ ಒಂದು ಘಟನೆ ‘ಅನ್ನಭಾಗ್ಯ’ ಯೋಜನೆ ತರಲು ಸಿದ್ದರಾಮಯ್ಯರನ್ನ ಪ್ರೇರೇಪಿಸಿತ್ತು!