ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ (Congress Guarantee) ಹಣ (Money) ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ (MLA Basavanthappa) ಹೇಳಿದ್ದಾರೆ.
ದಾವಣಗೆರೆಯ (Davanagere) ಮಾಯಕೊಂಡದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದು ಎಂದಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್‍ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಎಂದಿದ್ದಾರೆ.
ಚನ್ನಗಿರಿಯ ಅಮ್ಜದ್ ಅತ್ಯಾಚಾರ ಪ್ರಕರಣದ ವಿಚಾರವಾಗಿ, ಕಾನೂನಿನಡಿಯಲ್ಲಿ ಎಲ್ಲರಿಗೂ ಶಿಕ್ಷೆ ಆಗುತ್ತದೆ. ಯಾರೂ ಸಹ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಆತನ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಪಂಚ ಗ್ಯಾರಂಟಿಗಳ (Congress Guarantee) ಮೂಲಕವೇ ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದೆ. ಆದ್ರೆ, ಇದೀಗ ಉಚಿತಗಳ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಬೇಸರದ ಮಾತುಗಳನ್ನು ಆಡಿರೋದು ಚರ್ಚೆಗೆ ಗ್ರಾಸವಾಗಿದೆ.
ಎಲ್ಲಾ ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು ಎಂದು ಪ್ರಶ್ನಿಸಿದ್ದಾರೆ. ಜಲಮಂಡಳಿ ಸಭೆ ಬಳಿಕ ಮಾತಾಡಿದ ಅವರು, ಇನ್ಮೇಲೆ ಕಾವೇರಿ ನೀರನ್ನು ಫ್ರೀಯಾಗಿ ಕೊಡೋಕೆ ಆಗಲ್ಲ.. ಒಂದು ಪೈಸೆಯಾದರೂ ಬಿಲ್ ಕಟ್ಟಬೇಕು. ಸರ್ಕಾರಿ ನೌಕರರು ಸಂಬಳ ಜಾಸ್ತಿ ಮಾಡಿ ಅಂತಿದ್ದಾರೆ. ಹೀಗಾಗಿ ಎಲ್ಲಾ ಸರಿದೂಗಿಸಿಕೊಂಡು ಹೋಗಬೇಕಲ್ವಾ ಅಂತ ಕೇಳಿದ್ದಾರೆ.
ಈ ಮೂಲಕ ನೀರಿನ ದರ ಹೆಚ್ಚಿಸುವ ಸುಳಿವು ನೀಡಿದ್ದಾರೆ. ಇನ್ನೂ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆಯೂ ಕಂಡುಬರ್ತಿದೆ. ವಿದ್ಯುತ್ ದರ ಏರಿಕೆಗೆ 5 ವಿದ್ಯುತ್ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ. 3 ವರ್ಷದ ದರ ಏರಿಕೆಯನ್ನು ಈಗಲೇ ಪ್ರಕಟಿಸಿ ಎಂದು ಮೊರೆ ಇಟ್ಟಿವೆ. ಪ್ರತಿ ಯೂನಿಟ್‌ಗೆ 2025-26ರ ಸಾಲಿನಲ್ಲಿ 67 ಪೈಸೆ, 2026-27ರಲ್ಲಿ 74 ಪೈಸೆ ಮತ್ತು 2027-28ರಲ್ಲಿ 91 ಪೈಸೆ ಹೆಚ್ಚಳಕ್ಕೆ ಈಗಲೇ ಅನುಮೋದನೆ ನೀಡಿ ಎಂದು ಕೋರಿವೆ.
ಈ ಮಧ್ಯೆ, ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಮೆಟ್ರೋ ನೌಕರರಿಂದಲೇ ವಿರೋಧ ವ್ಯಕ್ತವಾಗಿವೆ. ದರ ಏರಿಕೆ ಬದಲು ಸೋರಿಕೆ ತಪ್ಪಿಸಿದ್ರೆ, ಅದ್ರಿಂದಲೇ 60-70ಕೋಟಿ ಉಳಿಸಬಹುದು ಎಂಬ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಫೆ.5 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿ ನಿವಾಸಿಗಳಿಗೆ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ಈ ಮೂಲಕ 500 ರೂ. ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ ಕಿಟ್ ಮತ್ತು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ ಕಾಂಗ್ರೆಸ್ ತನ್ನ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ `ಜೀವನ್ ರಕ್ಷಾ’ ಹೆಸರಿನಲ್ಲಿ 25 ಲಕ್ಷ ರೂ. ವಿಮೆ, `ಪ್ಯಾರಿ ದೀದಿ’ ಯೋಜನೆಯಡಿ 2,500 ರೂ. ನೀಡುವ ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದರು. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ `ಪ್ಯಾರಿ ದೀದಿ’ ಯೋಜನೆಯನ್ನು ಘೋಷಿಸಿದ್ದರು. ಅಲ್ಲದೇ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು.ಇದನ್ನೂ ಓದಿ: ಸತತ ಸೋಲಿನ ಬಳಿಕ ಬಿಸಿ ಮುಟ್ಟಿಸಿದ ಬಿಸಿಸಿಐ – ಟೀಂ ಇಂಡಿಯಾ ಆಟಗಾರರಿಗೆ ಮತ್ತೊಂದು ಟಫ್ ರೂಲ್ಸ್
– ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕೆಂದ ಸಿಎಂ
ಮಂಡ್ಯ: GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್, ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗಳಿಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.
ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು, ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ? ಎಂದು ಪ್ರಶ್ನಿಸಿದರು.
ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.
ಕೆ.ಆರ್ ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀವಿ ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.
– 75 ಸಾವಿರ ಕೋಟಿ ಅನುದಾನವನ್ನು ನೀಡುವ ಭರವಸೆ ನೀಡಿದ್ದ ಸಿಎಂ – ಎರಡು ಬಜೆಟ್ ಮಂಡನೆಯಾದ್ರೂ ಅನುದಾನ ಸಿಕ್ಕಿಲ್ಲ
ಬಾಗಲಕೋಟೆ: ಪಂಚ ಗ್ಯಾರಂಟಿಗಳಿಂದ (Congress Guarantee) ಸರ್ಕಾರದಲ್ಲಿ ದುಡ್ಡಿಲ್ಲ ಎಂಬ ಸಬೂಬು ಹೇಳಬೇಡಿ, ಬೆಂಗಳೂರಿನಲ್ಲಿರುವ (Bengaluru) ಒಂದು ಸರ್ಕಾರಿ ಆಸ್ತಿ ತೆಗೆದು ನಮ್ಮ ಕೃಷ್ಣಾ ಮೇಲ್ದಂಡೆ ಯೋಜನೆಗೆ (Upper Krishna Project) ದುಡ್ಡು ಕೊಡಿ ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ್ (SR Patil) ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ.
ಕೃಷ್ಣ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ, ಮುಳುಗಡೆ ಹಿತರಕ್ಷಣಾ ಸಮಿತಿ ವತಿಯಿಂದ ಬಾಗಲಕೋಟೆಯಲ್ಲಿ (Bagalkot) ಮಂಗಳವಾರ ಬೃಹತ್ ಹೋರಾಟದ ಧರಣಿ ಸತ್ಯಾಗ್ರಹದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದಲ್ಲಿ ಸಾವಿರಾರು ರೈತರು ಎಲ್ಲಾ ಪಕ್ಷದ ನಾಯಕರು ಭಾಗವಹಿಸಿದ್ದರು.
ಹೋರಾಟದಲ್ಲಿ ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಸ್.ಆರ್ ಪಾಟೀಲ್, 1964 ರಲ್ಲಿ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರಿಂದ ಅಡಿಗಲ್ಲು ಹಾಕಿದ ನಂತರ ಕುಂಟುತ್ತಾ ಸಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಚುನಾವಣೆಗೂ ಮುನ್ನ ವಿಜಯಪುರದಲ್ಲಿ ಭಾಷಣ ಮಾಡುವ ವೇಳೆ ಈಗಿನ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 75 ಸಾವಿರ ಕೋಟಿ ರೂ. ಅನುದಾನವನ್ನು ನೀಡುವ ಭರವಸೆಯನ್ನು ನೀಡಿದ್ದರು. ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗಾಗಿ ಪ್ರತೀ ವರ್ಷ 40 ಸಾವಿರ ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದರು. ಆದರೆ ಈಗ ಸರ್ಕಾರ ಬಂದು ಎರಡು ಬಜೆಟ್ ಆಗಿವೆ. ನೀರಾವರಿ ಯೋಜನೆಗೆ 40 ಸಾವಿರ ಕೋಟಿ ರೂ. ಇಟ್ಟಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರತಿ ತಿಂಗಳು ಸರಿಯಾಗಿ ನಿಮಗೆ ಸಂಬಳ ಸಿಗುತ್ತಾ – ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಹೆಬ್ಬಾಳ್ಕರ್ ಮೊಂಡುವಾದ
ಯಾವುದೇ ಸರ್ಕಾರ ಬಂದರೂ ಕೃಷ್ಣ ಮೇಲ್ದಂಡೆ ಯೋಜನೆಗೆ ಸರಿಯಾಗಿ ಅನುದಾನವನ್ನು ನೀಡುತ್ತಿಲ್ಲ. ಹೀಗೆ ಆದರೆ ಯೋಜನಾ ವೆಚ್ಚ ಹೆಚ್ಚಾಗುತ್ತಾ ಹೋಗುತ್ತದೆ. ಇದರಿಂದ ಮನೆ ಮಠ ಜಮಿನುಗಳನ್ನು ಕಳೆದುಕೊಂಡ ಸಂತ್ರಸ್ತರು ಪರಿಹಾರಕ್ಕಾಗಿ ಪರಿತಪಿಸುತ್ತಿದ್ದಾರೆ ಎಂದರು.
ಯಾವುದೇ ಸರ್ಕಾರ ಬಂದರೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ದುಡ್ಡು ನೀಡುತ್ತಿಲ್ಲ. ಕೃಷ್ಣೆಗೆ ಈ ರೀತಿಯ ತಾತ್ಸಾರ ಯಾಕೆ ಎಂದು ಅಧಿಕಾರ ಅನುಭವಿಸಿದ ಮೂರು ಸರ್ಕಾರಗಳಿಗೂ ಪ್ರಶ್ನೆ ಮಾಡಿದರು.
ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಈಗಿನ ಸರ್ಕಾರ ಪಂಚ ಗ್ಯಾರಂಟಿ ಇಂದ ಸರ್ಕಾರದಲ್ಲಿ ದುಡ್ಡಿಲ್ಲ ಎನ್ನುವ ಸಬೂಬು ಹೇಳುವ ಬದಲು ಬೆಂಗಳೂರಿನಲ್ಲಿರುವ ಒಂದು ಸರ್ಕಾರಿ ಆಸ್ತಿಯನ್ನ ಮಾರಿ ನಮ್ಮ ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ. ಟರ್ಫ್ ಕ್ಲಬ್, ರೇಸ್ ಕೋರ್ಸ್ ಮೈದಾನ ಹಾಗೂ ಗಾಲ್ಫ್ ಮೈದಾನ ತೆಗೆದರೆ 50 ಲಕ್ಷ ಕೋಟಿ ರೂ. ಬರುತ್ತದೆ. ಹೀಗೆ ನೂರರಷ್ಟು ಸರ್ಕಾರಿ ಆಸ್ತಿಗಳಿವೆ. ಅದರಲ್ಲಿ ಒಂದನ್ನು ತೆಗೆದು ಉತ್ತರ ಕರ್ನಾಟಕ ಭಾಗದ ಜನರ ಜೀವನ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಸರ್ಕಾರಕ್ಕೆ ಕಟುವಾಗಿ ಆಗ್ರಹಿಸಿದರು.
ನಾನು ಹಿಂದೆ ವಿಪಕ್ಷ ನಾಯಕನಾಗಿದ್ದಾಗ ಕೃಷ್ಣ ಮೇಲ್ದಂಡೆ ಯೋಜನೆಯ ಕಾಮಗಾರಿಗಾಗಿ ಪಾದಯಾತ್ರೆ, ಟ್ರ್ಯಾಕ್ಟರ್ ರ‍್ಯಾಲಿ ಮಾಡಿ ಸದನದಲ್ಲಿ ಕೃಷ್ಣೆಗಾಗಿ ಅನುದಾನ ನೀಡುವಂತೆ ಆಗ್ರಹಿಸಿದ್ದೆ. ಕೃಷ್ಣೆಗಾಗಿ ಹೋರಾಟ ಮಾಡಿದ್ದಕ್ಕೆ ನಾನು ಸದನದಿಂದ ಹೊರ ಬರಬೇಕಾಯಿತು ಎಂದು ತಮಗೆ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡದ್ದಕ್ಕೆ ಪಕ್ಷದ ನಾಯಕರ ಬಗ್ಗೆ ಪರೋಕ್ಷ ಬೇಸರವನ್ನು ಹೊರಹಾಕಿದರು.
ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯೋಣ. ಉಪವಾಸ ಸತ್ಯಾಗ್ರಹ ಮಾಡೋಣ, ಅದಕ್ಕೂ ಬಗ್ಗದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡಿ ಕೃಷ್ಣಾ ಕಾಮಗಾರಿಗೆ ದುಡ್ಡು ನೀಡುವಂತೆ ಸರ್ಕಾರಕ್ಕೆ ಆಗ್ರಹಿಸೋಣ ಎಂದು ರೈತರಿಗೆ ಕರೆ ನೀಡಿದರು.
ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ 80% ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ. ಮತ್ತು ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ, ಸರ್ಕಾರ ಇದ್ದನ್ನು ಗಮನದಲ್ಲಿಟ್ಟು ಅವರಿಗೆ ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು…
ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi), ಶೋಭಾ ಕರಂದ್ಲಾಜೆ (Shobha Karandlaje) ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ. ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ. ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.
– ಶಾಸಕರು ಅನುದಾನ ಕೇಳೋದು ತಪ್ಪಲ್ಲ, ನಾನೂ ಕೇಳ್ತೀನಿ ಎಂದ ಸಚಿವ
ಬೆಂಗಳೂರು: ರಾಜ್ಯ ಸರ್ಕಾರ ಶಾಸಕರಿಗೆ (MLAs) ಅನುದಾನ ಕೊಡ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ ಅನುದಾನ ಕೊಡ್ತಿಲ್ಲ. ಕೇಂದ್ರದಿಂದ ಶೀಘ್ರದಲ್ಲೇ ಅನುದಾನ ತಂದು, ನಮ್ಮ ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳ ಬಗ್ಗೆ ಶಾಸಕ ಗವಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು. ಗ್ಯಾರಂಟಿಗಳ ಬಗ್ಗೆ ಪಕ್ಷ, ಸರ್ಕಾರ (Congress Government) ತೀರ್ಮಾನ ಕೈಗೊಂಡಿದೆ. ಗ್ಯಾರಂಟಿ ಜಾರಿಗೆ ತರೋದಕ್ಕೆ ಕದ್ದು ಮುಚ್ಚಿ ತೀರ್ಮಾನ ಮಾಡಿಲ್ಲ. ಇದರಿಂದ ಜನ ನಮಗೆ ಮತ ಹಾಕಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಾಂಗ್ಲಾ-ಪಾಕ್ ಲವ್‌ಸ್ಟೋರಿ – ಭಾರತಕ್ಕೆ ಇರೋ ಆತಂಕ ಏನು?
ಗ್ಯಾರಂಟಿಗಳನ್ನು ಜಾರಿ ಮಾಡೋದು ನಮ್ಮ ಕರ್ತವ್ಯ. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ, ತಪ್ಪಿಲ್ಲ, ನಾನೂ ಕೇಳ್ತೀನಿ. ಸರ್ಕಾರ ಅನುದಾನ ಕೊಡ್ತಿದೆ. ಕಾರ್ಯಕ್ರಮಗಳು ಯಾವುದೂ ನಿಂತಿಲ್ಲ. ಹಿಂದಿನ ಸರ್ಕಾರ ಸಾಕಷ್ಟು ಬಿಲ್ ಬಾಕಿ ಉಳಿಸಿಹೋಗಿದ್ರು. ಕೇಂದ್ರವೂ ಸರಿಯಾದ ಅನುದಾನ ಕೊಡ್ತಿಲ್ಲ. ಕೇಂದ್ರದ ಅನುದಾನ ತಂದು, ನಮ್ಮ ಸಪನ್ಮೂಲವೂ ಹೆಚ್ಚಿಸಿಕೊಳ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜಾನ್ಸ್ ಟಿನ್ನಿಸ್‌ವುಡ್ 112ನೇ ವಯಸ್ಸಿನಲ್ಲಿ ನಿಧನ
ಕಲಬುರಗಿ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ ವಿಚಾರ ಕುರಿತು ಮಾತನಾಡಿ, ಇದರ ಬಗ್ಗೆ ಡಿಜಿಪಿ ಜೊತೆ ಚರ್ಚೆ ಮಾಡ್ತೇನೆ, ಏನು ಸಮಸ್ಯೆ ಇದೆ ಅಂತ ಮಾತಾಡ್ತೇನೆ ಎಂದರಲ್ಲದೇ, ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ. ಈ ವಿಚಾರ ಸಿಎಂಗೆ ಬಿಟ್ಟಿದ್ದು, ಸಿಎಂ, ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ನಡೆಸಿ ಪುನಾರಚನೆ ಮಾಡೋದು ಪದ್ಧತಿ. ಅವರಿಬ್ರೂ ಯಾವ ತೀರ್ಮಾನ ತಗೋತಾರೋ ನಮಗೆ ಗೊತ್ತಿಲ್ಲ, ಹೈಕಮಾಂಡ್ ಜೊತೆಗೂ ಚರ್ಚೆ ಮಾಡಬೇಕು ಎಂದರು.
ಇಂದಿರಾನಗರ ಕೊಲೆ ಪ್ರಕರಣದ ಕುರಿತು ಮಾಹಿತಿ ನೀಡಿದ ಸಚಿವರು, ತುಂಬಾ ಪರಿಚಯಸ್ಥನೇ ಈ ಕೊಲೆ ಮಾಡಿದ್ದಾನೆ. ಅವರಿಬ್ಬರೂ ಪ್ರೀತಿಸ್ತಿದ್ರು, ಹೊಟೇಲ್‌ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಆಕೆ ಕೇರಳದವರು, ಆತ ಅಸ್ಸಾಂ ಮೂಲ, ಈಥರ ಆದಾಗ ನಾವೂ ಗಮನಿಸ್ತಿರ್ತೀವಿ, ತನಿಖೆ ನಡೀತಿದೆ ಎಂದರು. ಇದನ್ನೂ ಓದಿ: ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ
545 ಪಿಎಸ್‌ಐ ಹುದ್ದೆಗೆ ಅಂತಿಮ ಪಟ್ಟಿಗೂ ಮುನ್ನವೇ ನೇಮಕಾತಿ ಆದೇಶ ನೀಡಲು ಗಡುವು ವಿಚಾರ ಕುರಿತು ಮಾತನಾಡಿ, ಸಿಂಧುತ್ವಕ್ಕೆ ಡಿಸಿಗಳಿಗೆ ಕಳಿಸಿದ್ದಾರೆ. ಸಿಂಧುತ್ವ ವೆರಿಫಿಕೇಷನ್ ಮಾಡಿ ಆರ್ಡರ್ ಕೊಡ್ತಾರೆ. ನಾನು ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ನೀವು ಆರ್ಡರ್ ಕೊಡಿ ಅಂತ ಹೇಳಿದ್ದೇನೆ. ಆಮೇಲೆ ಸಿಂಧುತ್ವ ಪರಿಶೀಲನೆ ಏನಾದರೂ ತಪ್ಪು ಬಂದರೇ ಕ್ಯಾನ್ಸಲ್ ಮಾಡೋಣ ಅಂತ ಹೇಳಿದ್ದೇವೆ. ಸಿಂಧುತ್ವ ವೆರಿಫಿಕೇಶನ್ ಆಗುವ ತನಕ ಮಾಡೋದಿಲ್ಲ ಎಂದು ಹೇಳಿದರು.
– ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸದಿದ್ರೆ ಅನುದಾನ ಬರೋದಿಲ್ಲ ಎಂದು ಕಾಂಗ್ರೆಸ್ ಶಾಸಕ ಬೇಸರ
ಬಳ್ಳಾರಿ: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ‘ಕೈ’ ಶಾಸಕರು ಬೇಸರ ಹೊರಹಾಕಿದ್ದಾರೆ.
ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ (H.R.Gaviyappa) ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ; ವಿಚಾರಣೆ ಡಿ.10 ಕ್ಕೆ ಮುಂದೂಡಿದ ಹೈಕೋರ್ಟ್
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರ್ತಿಲ್ಲ. ಬಸ್‌ನಲ್ಲಿ ಓಡಾಡೋದು ಸೇರಿದಂತೆ ಇನ್ನಿರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ (Karnataka) ಗ್ಯಾರಂಟಿಗಳು ಸರಿಯಾಗಿ ಕೊಡ್ತಿಲ್ಲ ಎಂದು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ. ಮಹಾರಾಷ್ಟ್ರ ಜನರನ್ನು ದಾರಿ ತಪ್ಪಿಸಲು ಹೇಳುತ್ತಿದ್ದಾರೆ. ಮತ ಪಡೆಯಲು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಜಾಹೀರಾತು ಅಲ್ಲಿನ ಬಿಜೆಪಿ ಸರ್ಕಾರ ನೀಡಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದರು.
ಬೆಂಗಳೂರು: ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಮೇಲೆ ಮಹಾರಾಷ್ಟ್ರ ಬಿಜೆಪಿ (Maharashtra BJP) ಘಟಕದ ವಿರುದ್ಧ ಕರ್ನಾಟಕ ಸರ್ಕಾರ (Karnataka Govt) ಪ್ರಕರಣ ದಾಖಲಿಸಲು ನಿರ್ಧರಿಸಿದೆ. ಈ ಕುರಿತು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ, ಸರಿಯಾದ ಪಾಠ ಕಲಿಸಲಿದೆ.#BJPExposedpic.twitter.com/WPmsgvnCoa
ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು (Advertisement) ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ, ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಳ್ಳಾರಿ| ಒಂದೇ ದಿನ ಸಿಸೇರಿಯನ್ – ಮೂವರು ಗರ್ಭಿಣಿಯರು ಸಾವು, ಐಸಿಯುನಲ್ಲಿ ನಾಲ್ವರಿಗೆ ಚಿಕಿತ್ಸೆ
ಮುಂದುವರಿದು ಅಲ್ಲದೇ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು (Guarantee Scheme) ಜಾರಿ ಆಗದೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹಿರಾತು ನೀಡಿದೆ. ಇವರಿಗೆ ನಾಚಿಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.
ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನಮ್ಮ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಿಕ್ಷೆ ಬೇಡುವವಳಿಗೆ ಮಗು ಕೊಟ್ಟು ತಾಯಿ ಕಣ್ಣೀರು – ಮಗುವಿನೊಂದಿಗೆ ಮಹಿಳೆ ಪರಾರಿ