Tag: Congress Guarantee

  • 5 ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ: ಸಿಎಂ ಭರವಸೆ

    5 ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ: ಸಿಎಂ ಭರವಸೆ

    ಬೆಂಗಳೂರು: ಐದು ಗ್ಯಾರಂಟಿ (Congress Guarantee) ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.

    78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳನ್ನು ಅಲ್ಲಗಳೆದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವ ಹಬ್ಬ – ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

    ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು.

    ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದರು. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

    ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪರೋಕ್ಷವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್‌ ಕೊಟ್ಟ ಸಿಎಂ, ನಾಡಿನ ಸಮಸ್ತ ಜನರು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮೂಲ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಗೌರವವಾಗಿರುತ್ತದೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಮತ್ತು ಹುತಾತ್ಮರಾದ ಅವರ ಕ್ರಾಂತಿಕಾರಿ ಸ್ನೇಹಿತರು, ನಮಗೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್, ವೈಜ್ಞಾನಿಕ ಹಾಗೂ ಜ್ಯಾತ್ಯತೀತ ತಳಹದಿಯಲ್ಲಿ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಜವಾಹರಲಾಲ್‌ ನೆಹರೂ ಮುಂತಾದ ಮಹನೀಯರನ್ನು ನಾವು ಸ್ಮರಿಸಬೇಕು ಹಾಗೂ ಅವರ ಆಶಯಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ನೆರೆಹೊರೆಯ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಇಲ್ಲಿಯೂ ಎದುರಾಗಿ ಬಿಡಬಹುದು ಎಂಬ ಎಚ್ಚರಿಕೆ ನಮ್ಮೆಲ್ಲರಲ್ಲಿ ಇರಬೇಕಾಗುತ್ತದೆ ಎಂದರು.

  • ಗ್ಯಾರಂಟಿ ಪರಿಷ್ಕರಣೆಗೆ ಕೆಲವು ಸಚಿವರಿಂದ ಹೈಕಮಾಂಡ್ ಮೇಲೆ‌ ಒತ್ತಡ

    ಗ್ಯಾರಂಟಿ ಪರಿಷ್ಕರಣೆಗೆ ಕೆಲವು ಸಚಿವರಿಂದ ಹೈಕಮಾಂಡ್ ಮೇಲೆ‌ ಒತ್ತಡ

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಕೆಲವು ಸಚಿವರೇ ಎಐಸಿಸಿ ನಾಯಕರ ‌ಮೇಲೆ‌ ಒತ್ತಡ ತಂದಿದ್ದಾರೆ ಎನ್ನಲಾಗಿದೆ.

    ಗ್ಯಾರಂಟಿ ಯೋಜನೆಯ ಸಮೀಕ್ಷೆ ನಡೆಸಿ‌ ಗ್ಯಾರಂಟಿ ಅನುಷ್ಠಾನದಲ್ಲಿ ಒಂದಷ್ಟು ಮಾರ್ಪಾಡು ಮಾಡಬೇಕು ಎಂಬುದು ಸಚಿವರ ವಾದ ಎನ್ನಲಾಗಿದೆ. ಗ್ಯಾರಂಟಿ ಯೋಜನೆಯನ್ನು ಅರ್ಹ ಫಲಾನಿಭವಿಗಳಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಒಂದಷ್ಟು ಮಾರ್ಪಾಡು ಮಾಡಬೇಕು. ಸಮೀಕ್ಷೆ ನಡೆಸಿ ಅದರ ಆಧಾರದಲ್ಲಿ ಪರಿಷ್ಕರಣೆ ನಡೆಸಬೇಕು ಎಂದು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಜೊತೆ ಈ ಬಗ್ಗೆ ಸಚಿವರೊಬ್ಬರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

    ಗ್ಯಾರಂಟಿ ಸಾಧಕ-ಬಾಧಕಗಳ ಸಮೀಕ್ಷೆ ಅಂತೂ ನಡೆಸಬೇಕು ಈ ಸಂಬಂಧ ಮುಖ್ಯಮಂತ್ರಿಗಳ‌ ಜೊತೆ ಚರ್ಚೆ ನಡೆಸುವುದಾಗಿ ಎಐಸಿಸಿ ನಾಯಕರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ವಾರ್ಷಿಕ 60 ಸಾವಿರ ಕೋಟಿ ವೆಚ್ಚ ತಗುಲುವ 5 ಗ್ಯಾರಂಟಿಗಳು ಅರ್ಹ ಫಲಾನುಭವಿಗಳಿಗೆ ಅಷ್ಟೇ ತಲುಪಿದರೆ ವೆಚ್ಚ ಕಡಿತ ಮಾಡಬಹುದು ಎಂಬುದು ಸಚಿವರ ವಾದ ಎನ್ನಲಾಗಿದೆ.

    ಅಂದಾಜು 20 ಸಾವಿರ ಕೋಟಿ ಉಳಿತಾಯ ಮಾಡಬಹುದು. ಯೋಜನೆ ಬಡವರು ಹಾಗೂ ಅರ್ಹ ಫಲಾನಿಭವಿಗಳಿಗೆ ಅಷ್ಟೇ ತಲುಪಿಸುವ ವ್ಯವಸ್ಥೆ ಮಾಡಿದರೆ ವೆಚ್ಚ ಕಡಿತ ಮಾಡಬಹುದು ಎಂಬುದು ಇದರ ಹಿಂದಿನ ಲೆಕ್ಕಾಚಾರ ಎಂದು ತಿಳಿದುಬಂದಿದೆ.

    ಗ್ಯಾರಂಟಿ ಕಾರಣಕ್ಕೆ ಇತರೆ ಅಭಿವೃದ್ಧಿ ಕಾರ್ಯಕ್ಕೆ ಹಣದ ಕೊರತೆ ಆಗಿದೆ ಎಂಬ ಮಾತುಗಳು ಸಚಿವರು ಹಾಗೂ ಶಾಸಕರಿಂದಲೇ ಕೇಳಿ ಬಂದಿತ್ತು. ಈಗ ಗ್ಯಾರಂಟಿ ಯೋಜನೆಯ ಸಮೀಕ್ಷೆ ನಡೆಸಿ ಪರಿಷ್ಕರಣೆ ನಡೆಸುವ ಬಗ್ಗೆ ಒಲವು ವ್ಯಕ್ತವಾಗಿದೆ ಎನ್ನಲಾಗುತ್ತಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲಾ ಎಂದಿದ್ದರು. ಆದರೆ ಗ್ಯಾರಂಟಿ ಸಮೀಕ್ಷೆಗೆ ಅವರು ಒಲವು ತೋರಿದ್ದಾರೆ ಎನ್ನಲಾಗಿದೆ. ಸಮೀಕ್ಷೆಯಲ್ಲಿ ಅರ್ಹತೆ ಮೀರಿ ಅನಗತ್ಯವಾಗಿ ಕೆಲವರು ಗ್ಯಾರಂಟಿ ಫಲಾನುಭವಿಗಳಾಗಿದ್ದಾರೆ ಎಂಬುದು ಖಾತರಿ ಆದರೆ, ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಿಎಂ ಜೊತೆ ಸ್ವತಃ ಎಐಸಿಸಿ ನಾಯಕರೇ ಈ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ.

  • ಮೂರು ಗ್ಯಾರಂಟಿಗಳ ಪರಿಷ್ಕರಣೆ, ಆ.22ಕ್ಕೆ ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಚಿವರ ಅಭಿಪ್ರಾಯ ಪಡೆಯಲು ಮುಂದಾದ ಸಿಎಂ

    ಮೂರು ಗ್ಯಾರಂಟಿಗಳ ಪರಿಷ್ಕರಣೆ, ಆ.22ಕ್ಕೆ ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಚಿವರ ಅಭಿಪ್ರಾಯ ಪಡೆಯಲು ಮುಂದಾದ ಸಿಎಂ

    ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ಗ್ಯಾರಂಟಿಗೆ ಕತ್ತರಿ ಹಾಕಲು ಮಹಾ ಪ್ಲ್ಯಾನ್ ಸಿದ್ಧವಾಗ್ತಿದೆ ಎನ್ನಲಾಗಿದೆ. ಮೂರು ಗ್ಯಾರಂಟಿಗಳ ಮಾನದಂಡಗಳ ಪರಿಷ್ಕರಣೆಗೆ ಕೈ ಹಾಕುವುದು ಗ್ಯಾರಂಟಿ ಎಂಬುದು ಸರ್ಕಾರ ಮೂಲಗಳ ಮಾಹಿತಿ.

    ಮೂರು ಗ್ಯಾರಂಟಿಗಳ ಪರಿಷ್ಕರಣೆ ಬಗ್ಗೆ ಹಣಕಾಸು ಇಲಾಖೆ ಡಿಟೇಲ್ಸ್ ರಿಪೋರ್ಟ್ ಕೊಟ್ಟಿದೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿ ಪರಿಷ್ಕರಣೆ ಬಿಸಿ ತಟ್ಟಲಿದೆ. ಸರ್ಕಾರಿ ನೌಕಕರು, ಐಟಿ ರಿಟರ್ನ್ಸ್ ಮಾಡುವವರು, ಎಪಿಎಲ್ ಕಾರ್ಡ್‌ದಾರರಿಗೆ ಗ್ಯಾರಂಟಿ ಕತ್ತರಿ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

    ಈ ನಡುವೆ ಆಗಸ್ಟ್ 22 ಗುರುವಾರ ಗ್ಯಾರಂಟಿ ಪರಿಷ್ಕರಣೆ ತೀರ್ಮಾನ ಮಾಡುವ ಸಾಧ್ಯತೆ ಇದೆ. ಆ.22 ರಂದು ಗುರುವಾರ ಕ್ಯಾಬಿನೆಟ್ ಸಭೆ ಕರೆದಿರುವ ಸಿಎಂ ಸಿದ್ದರಾಮಯ್ಯ ಸಚಿವರ ಅಭಿಪ್ರಾಯ ಕೇಳಲಿದ್ದಾರೆ ಎನ್ನಲಾಗಿದೆ.

    ಸಭೆಯಲ್ಲಿ ಸಚಿವರ ಜೊತೆ ಗ್ಯಾರಂಟಿ ಪರಿಷ್ಕರಣೆ ಸಂಬಂಧ ಮಹತ್ವದ ಚರ್ಚೆ ನಡೆಸಲಿದ್ದು, ಶಕ್ತಿ ಯೋಜನೆ, ಯುವನಿಧಿ ಹೊರತುಪಡಿಸಿ ಉಳಿದ ಮೂರು ಗ್ಯಾರಂಟಿಗಳಿಗೆ ಮಾರ್ಗಸೂಚಿ ಪರಿಷ್ಕರಣೆ ತೀರ್ಮಾನ ಮಾಡ್ತಾರೆ ಎನ್ನುತ್ತಿದೆ ಸರ್ಕಾರದ ಮೂಲಗಳು.

  • ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲ್ಲ: ಡಿಕೆಶಿ

    ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲ್ಲ: ಡಿಕೆಶಿ

    ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು (Guarantee Scheme) ನಮ್ಮ ಸರ್ಕಾರ ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತದೆ ಎಂಬ ಸುದ್ದಿ ಬರುತ್ತಿದೆ. ಆದರೆ ಇದು ಸುಳ್ಳು ಸುದ್ದಿಯಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

     

    ಕೆಲವು ಕಡೆ ಆದಾಯ ಹೆಚ್ಚಳ ಇರುವವರು ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ ಎನ್ನುವುದು ಸುಳ್ಳು ಎಂದರು.

    ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ ಎಂಬ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮುನಿಯಪ್ಪನವರು ಹೇಳಿಲ್ಲ. ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ ಎಂದು ಉತ್ತರಿಸಿದರು.

     

  • ಲೋಕಸಭೆಯಲ್ಲೂ ವಾಲ್ಮೀಕಿ ಹಗರಣ ಪ್ರತಿಧ್ವನಿ; ಗ್ಯಾರಂಟಿಗೆ SC-ST ಹಣ ಬಳಕೆ – ಸಿದ್ದರಾಮಯ್ಯ ವಿರುದ್ಧ ವಿತ್ತ ಸಚಿವೆ ಟೀಕೆ

    ಲೋಕಸಭೆಯಲ್ಲೂ ವಾಲ್ಮೀಕಿ ಹಗರಣ ಪ್ರತಿಧ್ವನಿ; ಗ್ಯಾರಂಟಿಗೆ SC-ST ಹಣ ಬಳಕೆ – ಸಿದ್ದರಾಮಯ್ಯ ವಿರುದ್ಧ ವಿತ್ತ ಸಚಿವೆ ಟೀಕೆ

    – ಯುಪಿಎ ಅವಧಿಯಲ್ಲಿ 26 ರಾಜ್ಯಗಳನ್ನ ಹೆಸರಿಸಿಲ್ಲ
    – ಜಮ್ಮು-ಕಾಶ್ಮೀರ 2024-25 ಬಜೆಟ್‌ಗೆ ಸಂಸತ್‌ ಅನುಮೋದನೆ

    ನವದೆಹಲಿ: ಸಂಸತ್ ಸಾಕ್ಷಿಯಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಬ್ಬರಿಸಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮ್ಮ ಮೇಲೆ ಮುಗಿಬಿದ್ದಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

    ಹಲ್ವಾ ಕಾರ್ಯಕ್ರಮದ ಫೋಟೋದಲ್ಲಿ ಎಸ್ಸಿ-ಎಸ್ಟಿ-ಒಬಿಸಿ ಅಧಿಕಾರಿಗಳೇ (SC, ST, OBC Officers) ಇರಲಿಲ್ಲ ಎಂಬ ವಿಪಕ್ಷ ನಾಯಕ ರಾಹುಲ್ ಟೀಕೆಗೆ ತಲೆ ಚಚ್ಚಿಕೊಂಡ ಬಗ್ಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. ಒಬಿಸಿ ಸಮುದಾಯದ ಚಾಯ್‌ವಾಲಾ ಪ್ರಧಾನಿ ಆಗಿರೋದೇ ವಿಪಕ್ಷಗಳಿಗೆ ಸಮಸ್ಯೆಯಾಗಿದೆ. ಹಲ್ವಾ ಕಾರ್ಯಕ್ರಮ ಫೋಟೋ ಸೆಷನ್ ಅಲ್ಲ. ಕೇಂದ್ರ ಬಜೆಟ್ ಸಿದ್ದತೆ ವೇಳೆ ನಡೆಯುವ ಹಲ್ವಾ ಕಾರ್ಯಕ್ರಮವನ್ನೂ ನೀವು ಇಷ್ಟು ಹಗುರವಾಗಿ ತೆಗೆದುಕೊಂಡ್ರೆಲ್ಲಾ ಎಂದು ನನಗೆ ನಗು ಬಂತು ಎಂದು ಕುಟುಕಿದ್ದಾರೆ.

    ಕರ್ನಾಟಕದ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ (Siddaramaiah) ಟೀಕೆಗೆ ಪ್ರತಿಕ್ರಿಯೆ ನೀಡಿದರು. ಯಾವುದೇ ರಾಜ್ಯಕ್ಕೂ ಅನುದಾನ ನೀಡಲು ಕೇಂದ್ರ ಸರ್ಕಾರ ನಿರಾಕರಣೆ ಮಾಡಿಲ್ಲ. ಯುಪಿಎ ಸರ್ಕಾರದ (UPA Governmement) ಅವಧಿಯಲ್ಲಿ ಮಂಡನೆ ಮಾಡಲಾಗುತ್ತಿದ್ದ ಬಜೆಟ್‌ಗಳಲ್ಲಿ ಎಲ್ಲ ರಾಜ್ಯಗಳ ಹೆಸರನ್ನೂ ಹೇಳುತ್ತಿದ್ರಾ? ನಾನು ಸಹ ಯುಪಿಎ ಅವಧಿಯ ಬಜೆಟ್‌ಗಳನ್ನ ನೋಡಿದ್ದೇನೆ. 2004-05ರ ಬಜೆಟ್‌ನಲ್ಲಿ 17 ರಾಜ್ಯಗಳನ್ನು ಹೆಸರಿಸಿಲ್ಲ, 2006-07ರ ಬಜೆಟ್‌ನಲ್ಲಿ 16 ರಾಜ್ಯಗಳನ್ನ ಹೆಸರಿಸಿಲ್ಲ. 2009ರ ಬಜೆಟ್ ಭಾಷಣದಲ್ಲಿ 26 ರಾಜ್ಯಗಳನ್ನ ಹೆಸರಿಸಿಲ್ಲ. ಹಾಗೆಂದ ಮಾತ್ರಕ್ಕೆ ಆ ರಾಜ್ಯಗಳಿಗೆ ಅನುದಾನ ಸಿಕ್ಕಿರಲಿಲ್ಲವೇ? ಅಂದಿನ ಯುಪಿಎ ಸರ್ಕಾರ ಆ ಎಲ್ಲಾ ರಾಜ್ಯಗಳಿಗೂ ಅನುದಾನ ತಡೆ ಹಿಡಿದಿತ್ತೇ? 2007ರಲ್ಲಿ ಅಂದಿನ ಯುಪಿಎ ಸರ್ಕಾರವೆ ಸ್ವಾಮಿನಾಥನ್ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು. 2013-2014ರ ಬಜೆಟ್‌ನಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಗೆ ಕೇವಲ 21,934 ಕೋಟಿ ರೂ. ಮೀಸಲಿಡಲಾಗಿತ್ತು. ಆದ್ರೆ 2024 -2025ರ ಬಜೆಟ್‌ನಲ್ಲಿ 1.23 ಲಕ್ಷ ಕೋಟಿ ಮೀಸಲಿಡಲಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ರೈತರ ಪರವಾಗಿ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು.

    ಮುಂದುವರಿದು, ರಾಜ್ಯದ ವಾಲ್ಮೀಕಿ, ಮುಡಾ ಹಗರಣಗಳನ್ನ ಪ್ರಸ್ತಾಪಿಸಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿ ಹಣ ದುರ್ಬಳಕೆ, ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು, ಯುಪಿಎ ಸರ್ಕಾರ ನಿರುದ್ಯೋಗ ಪ್ರಮಾಣವನ್ನು ಮುಚ್ಚಿಟ್ಟಿತ್ತು. ನಾವು ಪಾರದರ್ಶಕವಾಗಿದ್ದೇವೆ ಎಂದು ವಿತ್ತ ಸಚಿವೆ ಹೇಳಿಕೊಂಡಿದ್ದಾರೆ. ಗ್ಲೋಬಲ್ ಹಂಗರ್ ಇಂಡೆಕ್ಸ್ ಎಲ್ಲಾ ಸುಳ್ಳು ಎಂದಿದ್ದಾರೆ. ತಮ್ಮ ಬಜೆಟ್‌ನಲ್ಲಿ ಹಿಂದಿನ ಬಜೆಟ್‌ಗಳಿಂತ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

    ಜಮ್ಮು-ಕಾಶ್ಮೀರ 2024-25 ಬಜೆಟ್‌ಗೆ ಅನುಮೋದನೆ:
    ಇದೇ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ 2024-25ನೇ ಸಾಲಿನ ಬಜೆಟ್‌ಗೆ ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆ ದೊರೆತಿದೆ. ಧ್ವನಿ ಮತದ ಮೂಲಕ ಜಮ್ಮ ಮತ್ತು ಕಾಶ್ಮೀರದ ಬಜೆಟ್‌ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅನುಮೋದನೆ ಪಡೆದಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯನ್ನು 2024-25ರ ವರೆಗೆ ಜಿಡಿಪಿಯ 4.9%ರಷ್ಟು ತಗ್ಗಿಸಲಾಗಿದೆ. 2025-26ನೇ ಸಾಲಿನಲ್ಲಿ ಇದನ್ನು 4.5%ಕ್ಕೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.

  • ರಾಜ್ಯದ ಜನರಿಗೆ ಮತ್ತೊಂದು ಶಾಕ್‌ – ಬಸ್‌ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ

    ರಾಜ್ಯದ ಜನರಿಗೆ ಮತ್ತೊಂದು ಶಾಕ್‌ – ಬಸ್‌ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ

    ಬೆಂಗಳೂರು: ಸದ್ಯ ಪೆಟ್ರೋಲ್‌, ಡೀಸೆಲ್‌ ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕರುನಾಡಿನ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಬಸ್‌ ಪ್ರಯಾಣ ದರ ಹೆಚ್ಚಿಸಲು ಕೆಎಸ್‌ಆರ್‌ಟಿಸಿ (KSRTC) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

    ಬಸ್‌ ಪ್ರಯಾಣ ದರ 15% ರಿಂದ 20% ವರೆಗೆ ಹೆಚ್ಚಿಸಲು ಜುಲೈ 14ರಂದೇ ರಾಜ್ಯ ಸರ್ಕಾರಕ್ಕೆ (Karnataka Govt) ಪ್ರಸ್ತಾವನೆ ಸಲ್ಲಿಸಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರಿಂದು ಪ್ರತಿಕ್ರಿಯಿಸಿದ್ದು, ಪ್ರಸ್ತಾವನೆ ಬಂದಿದೆ. ನಾನಿನ್ನೂ ಅದನ್ನ ನೋಡಿಲ್ಲ, ದರ ಏರಿಕೆ ಮಾಡುವ ಬಗ್ಗೆ ಸಧ್ಯಕ್ಕೆ ಯಾವುದೇ ನಿರ್ಧಾರವೂ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

    ನಿರ್ಮಲಾ ಸೀತಾರಾಮನ್‌ಗೆ ಕೃತಜ್ಞತೆ ಇಲ್ಲ:
    ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬಿಜೆಪಿ ಪಕ್ಷದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಕೇಂದ್ರದಲ್ಲಿ ಅಧಿಕಾರ ಹಿಡಿದ ದಿನದಿಂದ ಬಿಜೆಪಿ (BJP) ಅನ್ಯಾಯ ಆಗುತ್ತಿದೆ. ರಾಜ್ಯಕ್ಕೆ ಕಾಯಂ ಆಗಿ ಚೊಂಬು ಸಿಗುತ್ತಿದೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್‌ ಆಯ್ಕೆ ಆಗಿದ್ದರೂ ಕೃತಜ್ಞತೆ ಇಲ್ಲ. ನರೇಂದ್ರ ಮೋದಿ ಏನ್ ಮಾಡಿಲ್ಲ ಅಂದರೂ 19 ಜನರನ್ನು ಜನ ಸಂಸದರನ್ನ ಆಯ್ಕೆ ಮಾಡಿ ಕಳಿಸಿದ್ದಾರೆ ಇದು ದುರದೃಷ್ಟಕರ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ ಮನೆ ಮುರುಕರು ಯಾರು ಅಂತ ಜನರಿಗೆ ಗೊತ್ತಾಗಿದೆ: ಬೊಮ್ಮಾಯಿ ಕಿಡಿ

    ಬಿಜೆಪಿ ದೇಶದ ಆಸ್ತಿಯನ್ನೇ ಮಾರುತ್ತಿದೆ:
    10 ವರ್ಷಗಳ ಹಿಂದೆ ಮೋದಿ ಏನು ಹೇಳಿರೋ ಈಗ ಅದೆಲ್ಲವನ್ನೂ ಮರೆತ್ತಿದ್ದಾರೆ. ಗಾಳಿ, ಬೆಳಕು ಬಿಟ್ಟು ಎಲ್ಲದಕ್ಕೂ ಜಿಎಸ್‌ಟಿ (GST) ಹಾಕಿದ್ದಾರೆ. ದೇಶದ ಸಂಪತ್ತನ್ನ ಲೂಟಿ ಮಾಡೋಕೆ ಬಿಟ್ಟಿದ್ದಾರೆ. ಅಂಬಾನಿ ಮೂಲಕ ಲೂಟಿ ಮಾಡೋಕೆ ಬಿಟ್ಟಿದ್ದಾರೆ. ದೇಶದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ. ಅನೇಕ ರಾಜ್ಯಗಳಿಗೆ ಬಜೆಟ್ ನಲ್ಲಿ ಹಣ ಕೊಟ್ಟಿಲ್ಲ. ಬಿಹಾರ ಆಂಧ್ರಪ್ರದೇಶಕ್ಕೆ ಹೆಚ್ಚಿನ ಹಣ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾಸ್ತಿ ದಿನ ಉಳಿಯಲ್ಲ. ಬಿಜೆಪಿ ಸರ್ಕಾರ ಇರುವರಿಗೆ ರಾಜ್ಯಕ್ಕೆ ಮಾರಕ ಎಂದು ಎಚ್ಚರಿಸಿದ್ದಾರೆ.

    140 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನ ಮೋದಿ ಮಾಡಿದ್ದಾರೆ. ಬಿಜೆಪಿ ಇರುವರಿಗೆ ನಮಗೆ ಭವಿಷ್ಯ ಇಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗ್ತಿದೆ. ರಾಜ್ಯದ ಜನತೆ ಬಗ್ಗೆ ಬಿಜೆಪಿಗೆ ಕೃತಜ್ಞತೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ (Lok Sabha Elections) 19 ಸೀಟ್ ನೀಡಿದ್ರೂ ರಾಜ್ಯದ ಜನತೆ ಬಗ್ಗೆ ಕೃತಜ್ಞತೆ ಇಲ್ಲ. ಈ ಬಗ್ಗೆ ರಾಜ್ಯದ ಸಂಸದರಿಗೆ ಮಾತನಾಡುವ ಶಕ್ತಿಯೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅತಿಹೆಚ್ಚು ಸ್ಟಾರ್ಟಪ್‌ಗಳು ನೋಂದಣಿಯಾಗಿರುವ ಎರಡನೇ ರಾಜ್ಯ ಕರ್ನಾಟಕ

  • ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

    ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

    – ಸಿಎಂ ಯಾರಿಗೂ ಅನುದಾನ ನೀಡಿಲ್ಲ – ರಾಯರೆಡ್ಡಿ ಬಾಂಬ್‌

    ಕೊಪ್ಪಳ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ (Guarantee Scheme) 60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ ಅನುದಾನ ಇಲ್ಲ.‌ ಯಾವಾಗಲೂ ಸಿಎಂ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಗೊತ್ತಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basvaraj Rayareddi) ಹೇಳಿದ್ದಾರೆ.

    ಕೊಪ್ಪಳದ‌ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಕೆರೆ ನಿರ್ಮಾಣಕ್ಕೆ ಭೂಮಿ ಪಡೆಯಲು ಆಯೋಜಿಸಿದ್ದ ರೈತರು ಮತ್ತು ಗ್ರಾಮಸ್ಥರ ಸಭೆಯಲ್ಲಿಂದು ಅವರು ಮಾತನಾಡಿದರು. ಇದನ್ನೂ ಓದಿ: ಆರ್ಕಿಟೆಕ್ಚರ್ ಕೋರ್ಸ್ ಅರ್ಹತಾ ಅಂಕ ಶೇ.45ಕ್ಕೆ ಇಳಿಕೆ – ಅರ್ಜಿ ಸಲ್ಲಿಸಲು ಜು.13 ರವರೆಗೆ ಅವಕಾಶ: ಕೆಇಎ

    ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.‌ ತುಂಬಾ ಕ್ಷೇತ್ರದ ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ, ಸಿಎಂ (Chief Minister) ಯಾರಿಗೂ ಅನುದಾನ ನೀಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: 2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ

    ನಮ್ಮ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತುಂಬಾ ಕಷ್ಟ ಆಗುತ್ತಿದೆ. ಸಿಎಂ ನನ್ನನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ಮಾಡಿಕೊಂಡಿದ್ದಾರೆ. ದಿನನಿತ್ಯ ಅವರ ಜೊತೆಯಲ್ಲೇ ಇರುವುದರಿಂದ ನನ್ನ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ರಾಜ್ಯದಲ್ಲಿ ಇದು ಒಂದೇ ಕೆಲಸ ಆಗುತ್ತಿದೆ. ಹಣಕಾಸಿನ ಆಂತರಿಕ ವಿಚಾರ, ನನಗೆ ಮಾತ್ರ ಗೊತ್ತಿದೆ.‌ ಇದನ್ನು ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌! 

  • ಗ್ಯಾರಂಟಿಗೆ ಪರಿಶಿಷ್ಟರ ಹಣ ಬಳಕೆ – ಮಧ್ಯಪ್ರವೇಶ ಮಾಡಿ ವರದಿ ಕೇಳಿದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ

    ಗ್ಯಾರಂಟಿಗೆ ಪರಿಶಿಷ್ಟರ ಹಣ ಬಳಕೆ – ಮಧ್ಯಪ್ರವೇಶ ಮಾಡಿ ವರದಿ ಕೇಳಿದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ

    ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್‌ನಲ್ಲಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (National Commission for Scheduled Castes) ಮಧ್ಯಪ್ರವೇಶ ಮಾಡಿದೆ.

    ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದೆ. 7 ದಿನಗಳ ಒಳಗಾಗಿ ಸಂಪೂರ್ಣ ವರದಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – 5 ಸ್ಥಳಗಳನ್ನು ತಿಳಿಸಿದ ಎಂಬಿಪಿ

    ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂಬ‌ ಮಾಹಿತಿ ಇದೆ. ಕರ್ನಾಟಕ ಸರ್ಕಾರವು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಂಚಿಕೆಯಿಂದ ಗ್ಯಾರಂಟಿ ಯೋಜನೆಗಳಿಗೆ ಯೋಜನೆಗಳಿಗೆ 14,730.53 ಕೋಟಿ ರೂ ಬಳಸಿಕೊಳ್ಳಲು ತೀರ್ಮಾನ ತೆಗೆದುಕೊಂಡಿದೆ. ಇದನ್ನೂ ಓದಿ: SSLC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ.31.02 ವಿದ್ಯಾರ್ಥಿಗಳು ಪಾಸ್‌

    ರಾಜ್ಯಗಳಲ್ಲಿನ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ವಿಶೇಷ ಕೇಂದ್ರ ಸಹಾಯ (ಎಸ್‌ಸಿಎ)ವೂ ಇದೆ. ಹಾಗಾಗಿ ಭಾರತ ಸಂವಿಧಾನದ 338 ನೇ ವಿಧಿಯ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಕಡ್ಡಾಯವಾಗಿ ಅನುಸರಿಸಲು ಆಯೋಗ ಬದ್ಧವಾಗಿದೆ. ದಯವಿಟ್ಟು ಈ ವಿಷಯದ ಬಗ್ಗೆ ವಿವರವಾದ ವರದಿಯನ್ನ 7 ದಿನಗಳೊಳಗೆ ಆಯೋಗಕ್ಕೆ ಒದಗಿಸಬೇಕೆಂದು ಪತ್ರ ಬರೆದಿದೆ. ಅಲ್ಲದೇ ಇದನ್ನು ಅತ್ಯಂತ ತುರ್ತು ಎಂದು ಪರಿಗಣಿಸಬೇಕೆಂದು  ಆಯೋಗ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

     

  • ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

    ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

    – ಅನರ್ಹ ಫಲಾನುಭವಿಗಳ ಪತ್ತೆಗೆ ಆಹಾರ ಇಲಾಖೆ ಸಜ್ಜು

    ಬೆಂಗಳೂರು: ಗ್ಯಾರಂಟಿಗಳ (Congress Guarantee) ಆರ್ಥಿಕ ಭಾರದಿಂದ ಕುಸಿದಂತಿರುವ ರಾಜ್ಯ ಸರ್ಕಾರ ಈಗ ರಿಯಲ್ ಆಪರೇಷನ್‌ಗೆ ಕೈ ಹಾಕಿದಂತೆ ಕಾಣುತ್ತಿದೆ. ರಾಜ್ಯದ 80% ರಷ್ಟು ಜನರ ಬಳಿ ಬಿಪಿಎಲ್ ಕಾರ್ಡ್ (BPL Card) ಇದ್ದು ಕೂಡಲೇ ಅನರ್ಹರನ್ನು ಪತ್ತೆ ಹಚ್ಚಿ ಎಂದು ರಾಜ್ಯ ಸರ್ಕಾರ (Karnataka Government) ಆದೇಶ ಪ್ರಕಟಿಸಿದೆ.

    ಈ ಬೆನ್ನಲ್ಲೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅನರ್ಹ ಫಲಾಭವಿಗಳನ್ನು ಪತ್ತೆ ಹಚ್ಚಲು ತಯಾರಿ ನಡೆಸಿದೆ. ಅಂದಾಜು 20 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಬಹುದು ಎಂದು ಹೇಳಲಾಗ್ತಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಗೋಲ್ಮಾಲ್‌ಗೆ ಸ್ಪೋಟಕಆಡಿಯೋ ಸಾಕ್ಷ್ಯ – ನಾಗೇಂದ್ರ ಕಡೆಯವರಿಂದಲೇ ಅಕ್ರಮ ಆರೋಪ

    ರಾಜ್ಯದಲ್ಲಿ ಸದ್ಯದ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು 4.36 ಕೋಟಿ ಮಂದಿ ಬಿಪಿಎಲ್ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಇದು ಸಾಲದೆಂಬಂತೆ ಹೊಸದಾಗಿ ಬಿಪಿಎಲ್ ಕಾರ್ಡ್‌ಗೆ 3 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ.

    ಇದೀಗ ಅನರ್ಹ, ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲು ಮುಂದಾಗಿದೆ. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಐಟಿ ಇಲಾಖೆಯ ನೆರವು ಪಡೆಯಲು ಆಹಾರ ಇಲಾಖೆ ಸಜ್ಜಾಗುತ್ತಿದೆ. ಇದನ್ನೂ ಓದಿ: ಜೈಲಿನ ಊಟದಿಂದ ಫುಡ್ ಪಾಯಿಸನ್ ಆಗ್ತಿದೆ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

    ಯಾರ ಕಾರ್ಡ್ ರದ್ದಾಗಬಹುದು?
    ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದಲ್ಲಿ, ಆದಾಯ ತೆರಿಗೆ ಪಾವತಿ ಮಾಡಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರಗಳಲ್ಲಿ 1000 ಚದರಡಿಯ ಪಕ್ಕಾ ಮನೆ ಇದ್ದಲ್ಲಿ, ಪ್ರತಿ ತಿಂಗಳು 150 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದಲ್ಲಿ, ವೈಟ್ ಬೋರ್ಡ್‌ 4 ಚಕ್ರದ ವಾಹನ ಇದ್ದು ಬಿಪಿಎಲ್‌ ಕಾರ್ಡ್‌ ಮಾಡಿಸಿದವರ ಕಾರ್ಡ್‌ ರದ್ದಾಗಲಿದೆ.

  • ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ: ಪರಮೇಶ್ವರ್‌

    ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ: ಪರಮೇಶ್ವರ್‌

    ಬೆಂಗಳೂರು: ಗ್ಯಾರಂಟಿಗಳಿಂದ (Congress Guarantee) ರಾಜ್ಯಕ್ಕೆ ಆರ್ಥಿಕ ಆಪತ್ತು ಎದುರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಕಾಂಗ್ರೆಸ್ (Congress) ಗರಂ ಆಗಿದೆ. ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎನ್ನುವುದು ಬಿಜೆಪಿ (BJP) ಆರೋಪ ಅಷ್ಟೇ ಎಂದು ಗೃಹ ಸಚಿವ ಜಿ ಪರಮೇಶ್ವರ್‌ (G Parameshwara) ಹೇಳಿದ್ದಾರೆ.

    ನಾವು ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ. ಸಮಸ್ಯೆ ಎದುರಾದರೆ ಅದನ್ನು ನಿವಾರಿಸುವ ಹೊಣೆಯೂ ಕೂಡ ನಮ್ಮದೇ. ನಮಗೆ ಬಿಜೆಪಿಯವರ ಸಲಹೆ ಸೂಚನೆ ಬೇಕಾಗಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

     

    ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಕೇಂದ್ರ ಮಂತ್ರಿ ಪ್ರಹ್ಲಾದ್‌ ಜೋಶಿ ಜೋಶಿ ಆರೋಪಕ್ಕೂ ಗೃಹಮಂತ್ರಿಗಳು ತಿರುಗೇಟು ನೀಡಿದ್ದಾರೆ. ಜೋಶಿಯವರು ಪತ್ರ ಬರೆಯಲಿ. ಅದಕ್ಕೆ ನಾವು ಯಾವ ರೀತಿ ಸ್ಪಂದಿಸುತ್ತೇವೆ ಎನ್ನುವುದು ಅವರಿಗೆ ಗೊತ್ತಾಗಲಿದೆ ಎಂದು ಪರಮೇಶ್ವರ್ ಹೇಳಿದರು. ಇದನ್ನೂ ಓದಿ: SCSP – TSP ಯೋಜನೆಯ 14 ಸಾವಿರ ಕೋಟಿ ಹಣ ಕಾಂಗ್ರೆಸ್‌ ಗ್ಯಾರಂಟಿಗೆ ಬಳಕೆ