Tag: congress highcommand

  • ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ: ಡಿಕೆಶಿ

    ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ: ಡಿಕೆಶಿ

    ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ (Congress Highcommand) ನಮಗೆ ದೇವಸ್ಥಾನ ಇದ್ದ ಹಾಗೆ, ಸಮಯ ಸಿಕ್ಕರೆ ಹೈಕಮಾಂಡ್ ಭೇಟಿಯಾಗಿ ಅವರಿಗೆ ಕೈ ಮುಗಿದು ಬರುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ಎರಡು ದಿನ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎತ್ತಿನಹೊಳೆ ಯೋಜನೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾಗಬೇಕು. ತುಮಕೂರು ಮತ್ತು ಹಾಸನ ವಿಚಾರದಲ್ಲಿ ಕೇಂದ್ರ ಅನುಮತಿ ಕೊಡಬೇಕಿದೆ. ಈ ವಿಷಯದ ಕುರಿತು ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ. ಅರಣ್ಯ ಸಚಿವರ ಜೊತೆ ಕೇಂದ್ರ ಜಲ ಸಂಪನ್ಮೂಲ ಸಚಿವರು ಸಮಯ ಕೊಟ್ಟಿದ್ದಾರೆ. ಅವರ ಜೊತೆಗೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನದಲ್ಲಿ ಮಾತ್ರ ಹಾರ್ಟ್ ಅಟ್ಯಾಕ್ ಕೇಸ್ ಜಾಸ್ತಿ ಆಗಿಲ್ಲ, ಇಡೀ ದೇಶದಲ್ಲಿ ಆಗ್ತಿದೆ: ಎ.ಮಂಜು

    ಇದೇ ವೇಳೆ ಸಮಯ ಸಿಕ್ಕರೆ ಹೈಕಮಾಂಡ್ ನಾಯಕರನ್ನು ಭೇಟಿಯಾಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಅನ್ನೋದು ದೇವಸ್ಥಾನ ಇದ್ದ ಹಾಗೆ. ಅವಕಾಶ ಸಿಕ್ಕರೆ ಭೇಟಿ ಆಗಿ ಕೈ ಮುಗಿದು ಬರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಮಾಚಲಪ್ರದೇಶ: 17 ದಿನದಲ್ಲಿ 19 ಬಾರಿ ಮೇಘಸ್ಫೋಟ – 82 ಸಾವು, ಬದರೀನಾಥ ಮಾರ್ಗ ಬಂದ್

  • ಏ.2ಕ್ಕೆ ಸಿಎಂ ಡೆಲ್ಲಿಗೆ – ಹನಿಟ್ರ‍್ಯಾಪ್ ಬಗ್ಗೆ ಮಾಹಿತಿ ಕೊಡ್ತಾರಾ ಸಿದ್ದರಾಮಯ್ಯ?

    ಏ.2ಕ್ಕೆ ಸಿಎಂ ಡೆಲ್ಲಿಗೆ – ಹನಿಟ್ರ‍್ಯಾಪ್ ಬಗ್ಗೆ ಮಾಹಿತಿ ಕೊಡ್ತಾರಾ ಸಿದ್ದರಾಮಯ್ಯ?

    ಬೆಂಗಳೂರು: ಎರಡೂವರೆ ತಿಂಗಳ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ (High Command) ಭೇಟಿಯಾಗಿ ಹನಿಟ್ರ‍್ಯಾಪ್ (Honey Trap) ಬಗ್ಗೆ ಮಾಹಿತಿ ಕೊಡ್ತಾರಾ ಎನ್ನುವ ಕೂತುಹಲ ಸೃಷ್ಟಿಯಾಗಿದೆ.

    ಹನಿಟ್ರ‍್ಯಾಪ್ ರಾಜಕೀಯ ಬಿಸಿಯ ನಡುವೆಯೇ ಸಿಎಂ ಡೆಲ್ಲಿ (Delhi) ಭೇಟಿ ಕುತೂಹಲ ಮೂಡಿಸಿದ್ದು, ಏ.2ರಂದು ಡೆಲ್ಲಿಗೆ ತೆರಳಲಿದ್ದಾರೆ. ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ. ಮೂರು ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಮಾತುಕತೆ ನಡೆಸುವ ಸಾಧ್ಯತೆಯಿದ್ದು, ಹನಿಟ್ರ‍್ಯಾಪ್ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ – ಓರ್ವ ಗಂಭೀರ

    ಇನ್ನೂ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಚಿವರ ಸ್ನೇಹ ಆರೋಪದ ಬಗ್ಗೆಯೂ ಮಾಹಿತಿ ಕೊಡುವ ಸಾಧ್ಯತೆಯಿದೆ. ಇನ್ನೂ ಇದೇ ಮೇನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬಲಿದ್ದು, ಸರ್ಕಾರ ಮತ್ತು ಪಕ್ಷದಿಂದ ಸಾಧನಾ ಸಮಾವೇಶ ನಡೆಸಲು ಅನುಮತಿ ಕೇಳಲಿದ್ದಾರೆ.

    ಇನ್ನುಳಿದಂತೆ ಪವರ್ ಶೇರ್, ಸಂಪುಟ ಪುನರಚನೆ ವಿಚಾರವಾಗಿಯೂ ಸೂಕ್ಷ್ಮವಾಗಿ ಮಾಹಿತಿ ಪಡೆಯುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ ಎನ್ನಲಾಗಿದೆ.ಇದನ್ನೂ ಓದಿ: ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’ ಬಿಡುಗಡೆಗೆ ರೆಡಿ!

  • ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್

    ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್

    ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ (KN Rajanna) ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ (Shamanur Shivashankarappa) ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (K.C Venugopal) ಇಬ್ಬರಿಗೂ ಶಿಸ್ತು ಮೀರಿ ಮಾತನಾಡದಂತೆ ದೂರವಾಣಿ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

    ಬಿಜೆಪಿ ಸಂಸದ ರಾಘವೇಂದ್ರ ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದರು. ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.

    ಲೋಕಸಭಾ ಚುನಾವಣೆ (Loksabha Election) ಇದೆ ಎಂಬ ಕಾರಣಕ್ಕೆ ಸದ್ಯಕ್ಕೆ ನೋಟಿಸ್ ನೀಡುತ್ತಿಲ್ಲ. ಹೀಗೆ ವಿವಾದಾತ್ಮಕವಾಗಿ ಮಾತನಾಡುವುದು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ. ಅಲ್ಲದೆ ಶಿಸ್ತುಬದ್ಧ ಕ್ರಮ ಎದುರಿಸಬೇಕಾಗುತ್ತದೆ ಎಂದೂ ವಾರ್ನ್ ಮಾಡಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ

  • ಹೈಕಮಾಂಡ್ ಸತಾಯಿಸಿದ ಬೇಸರಕ್ಕೆ ದೇವರ ಮೊರೆ ಹೋದ ಡಿಕೆಶಿ

    ಹೈಕಮಾಂಡ್ ಸತಾಯಿಸಿದ ಬೇಸರಕ್ಕೆ ದೇವರ ಮೊರೆ ಹೋದ ಡಿಕೆಶಿ

    ಬೆಂಗಳೂರು: ಬಹುತೇಕ ಕೆಪಿಸಿಸಿ ಪಟ್ಟಕ್ಕೆ ಡಿ.ಕೆ.ಶಿವಕುಮಾರ್ ಬರೋದು ಬಹುತೇಕ ಖಚಿತವಾಗಿದೆ. ವಾರದ ಹಿಂದೆಯೆ ಆಗಬೇಕಿದ್ದ ಅಧಿಕೃತ ಘೋಷಣೆ ಕಾರಣಾಂತರಗಳಿಂದ ತಡೆಹಿಡಿಯಲಾಗಿದೆ. ಆದರೆ ಹೈ ಕಮಾಂಡ್ ನ ಈ ವರ್ತನೆ ಡಿಕೆಶಿ ಬೇಸರಕ್ಕೆ ಕಾರಣವಾಗಿದೆ. ಆದರೆ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ಟ್ರಬಲ್ ಶೂಟರ್ ಆಗಿ ಹೊರ ಹೊಮ್ಮಿದ ತನಗೆ ಇಷ್ಟೊಂದು ಸತಾಯಿಸುವುದು ಸರಿನಾ ಅನ್ನೋದು ಡಿಕೆಶಿ ನೋವು ಎನ್ನಲಾಗಿದೆ.

    ಕೊಡುವಾಗ ಕೊಡಲಿ ಅಧಿಕಾರ ಬರುವಾಗ ಅದಾಗೆ ಬರುತ್ತದೆ ಬಿಡಿ ಎಂದು ಡಿಕೆಶಿ ತಮ್ಮ ಆಪ್ತರ ಮುಂದೆ ನೊಂದು ನುಡಿದಿದ್ದಾರೆ. ಇಂದಾಗುತ್ತಾ ನಾಳೆಯಾಗುತ್ತೆ ಕೆಪಿಸಿಸಿ ಪಟ್ಟಾಭಿಷೇಕ ಅಧಿಕೃತವಾಗಿ ಪ್ರಕಟವಾಗುತ್ತೆ ಎಂದು ತಲೆ ಕೆಡಿಸಿಕೊಳ್ಳುವ ಬದಲು ಸದ್ಯ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ.

    3 ದಿನಗಳ ಕಾಲ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ದೇವರ ಪೂಜೆಗೆ ಮೊರೆ ಹೋಗಿದ್ದಾರೆ. ಈ ಗೊಂದಲವೇ ಬೇಡ ಎಂದು ಗ್ವಾಲಿಯಾರ್ ನ ಪೀತಾಂಬರ ಪೀಠದಲ್ಲಿ ಪೂಜೆ ಸಲ್ಲಿಸಿ ಬರಲು ಮುಂದಾಗಿದ್ದಾರೆ. ಹೈ ಕಮಾಂಡ್ ಅಳೆದು ತೂಗಿ ಸತಾಯಿಸಿ ನೀಡುವ ಅಧಿಕಾರಕ್ಕಿಂತ ದೇವರ ಪೂಜೆಯಲ್ಲಿ ನಂಬಿಕೆ ಇಟ್ಟು ಭಕ್ತಿ ಮಾರ್ಗಕ್ಕೆ ಮೊರೆ ಹೋಗಿದ್ದಾರೆ. ಗ್ವಾಲಿಯರ್ ನಲ್ಲಿ ಭರ್ಜರಿ ಪೂಜೆ ಹೋಮ ಹವನದಲ್ಲಿ ಕಾಂಗ್ರೆಸ್ ಟ್ರಬಲ್ ಶೂಟರ್ ಬ್ಯುಸಿಯಾಗಿದ್ದಾರೆ.

  • ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಹೊಸ ದಾಳ

    ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಹೊಸ ದಾಳ

    ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಸಂದರ್ಭದಲ್ಲಿ ತಮ್ಮ ನಿರೀಕ್ಷೆಯಂತೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬುಧವಾರ ರಾಹುಲ್ ಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹಳೆಯ ವಿಶ್ವಾಸದಲ್ಲಿ ರಾಹುಲ್ ಗಾಂಧಿ ಮನವೊಲಿಸಬಹುದು ಅಂದುಕೊಂಡಿದ್ದ ಸಿದ್ದರಾಮಯ್ಯಗೆ ಅಲ್ಲಿ ಕೂಡ ನಿರಾಸೆಯಾಗಿದೆ. ಸಿದ್ದರಾಮಯ್ಯ ಏನೇ ಹೇಳಿದರು ಎಲ್ಲವನ್ನೂ ಸೋನಿಯಾ ಗಾಂಧಿ ಗಮನಕ್ಕೆ ತರುತ್ತೇನೆ. ಅವರ ನಿರ್ಧಾರವೇ ಅಂತಿಮ ಎಂದಿದ್ದಾರೆ.

    ಆಗ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ, ನನಗೆ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ಹಾಗೂ ವಿಪಕ್ಷ ನಾಯಕನ ಸ್ಥಾನ ಯಾವುದೂ ಬೇಡ. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾತ್ರ ನಮ್ಮವರಿಗೆ ಕೊಡಿ ಎಂದು ತಮ್ಮ ಬೇಡಿಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದಾರೆ. ಪಕ್ಷ ನನಗೆ 5 ವರ್ಷ ಮುಖ್ಯಮಂತ್ರಿ ಮಾಡಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಜವಬ್ದಾರಿ. ನಾನು ಹೇಳಿದವರನ್ನ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ. ಮುಂದಿನದ್ದು ನನ್ನ ಜವಬ್ದಾರಿ ಎಂದಿದ್ದಾರೆ. ಆ ಮೂಲಕ ತಮ್ಮ ಬೆಂಬಲಿಗರನ್ನ ಕೆಪಿಸಿಸಿ ಪಟ್ಟಕ್ಕೆ ತಂದು ಪಕ್ಷವನ್ನ ಪರೋಕ್ಷವಾಗಿ ತಾವೇ ಹಿಡಿತಕ್ಕೆ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದಾರೆ.

    ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ತಮ್ಮ ಸಿಎಂ ಹಾದಿ ಸುಗಮ ಅನ್ನೋದು ಸಿದ್ದರಾಮಯ್ಯ ಲೆಕ್ಕಾಚಾರವಾಗಿದೆ. ಎಲ್ಲವನ್ನೂ ಕೇಳಿಸಿಕೊಂಡ ರಾಹುಲ್ ಗಾಂಧಿ, ಇದನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯಿಂದಲೂ ಯಾವುದೇ ಖಚಿತ ಭರವಸೆ ಸಿಗದಿದ್ದರಿಂದ ಬೇಸರಗೊಂಡ ಸಿದ್ದರಾಮಯ್ಯ ನಿರಾಸೆಯಿಂದ ವಾಪಸ್ ಬಂದಿದ್ದಾರೆ.

  • ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್

    ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಅನ್ನೋದು ದೆಹಲಿಯಲ್ಲಿ ಇಂದು ತೀರ್ಮಾನವಾಗುವ ಸಾಧ್ಯತೆ ಇದೆ. ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಗೆ ಹೈ ಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಅವರು ದೆಹಲಿ ತಲುಪಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಜೊತೆ ಡಿಕೆಶಿ ಇಂದು ಮಾತುಕತೆ ನಡೆಸಲಿದ್ದಾರೆ.

    ಕೆಪಿಸಿಸಿಗೆ ಡಿ.ಕೆ ಶಿವಕುಮಾರ್ ರನ್ನ ಅಧ್ಯಕ್ಷರನ್ನಾಗಿಸಲು ಸೋನಿಯ ಗಾಂಧಿ ಮನವೊಲಿಸುವ ಸಾಧ್ಯತೆ ಇದೆ. ಡಿಕೆಶಿ ಒಪ್ಪಿದರೆ ಕೆಪಿಸಿಸಿಯ ನೂತನ ಸಾರಥಿ ಇಂದೇ ಅಂತಿಮವಾಗಲಿದೆ. ಕೆಪಿಸಿಸಿ ಸಾರಥ್ಯ ವಹಿಸಲು ಡಿಕೆಶಿ ಒಪ್ಪದಿದ್ದರೆ ಬೇರೆಯವರನ್ನ ಹುಡುಕಬೇಕಾದ ಅನಿವಾರ್ಯತೆಗೆ ಕಾಂಗ್ರೆಸ್ ಹೈ ಕಮಾಂಡ್ ಸಿಲುಕಲಿದೆ.

    ಹೈಕಮಾಂಡ್ ಗೆ ಡಿ.ಕೆ ಶಿವಕುಮಾರ್ ಪರವಾಗಿ ಒಲವಿದ್ದರೂ ಸಿದ್ದರಾಮಯ್ಯ ಬಣ ಹಾಗೂ ಮೂಲ ಕಾಂಗ್ರೆಸ್ ಬಣ ಎರಡರಿಂದಲೂ ಡಿಕೆಶಿ ಪೈಪೋಟಿ ಎದುರಿಸಬೇಕಾದ ಅನಿವಾರ್ಯತೆ ಡಿಕೆಶಿಗೆ ಎದುರಾಗಿದೆ.

    ಈ ಹಿಂದೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದ ಡಿಕೆಶಿ, ನಾನು ಯಾವುದೇ ಸ್ಥಾನಕ್ಕೂ ಅರ್ಜಿ ಹಾಕಿಕೊಂಡು ಓಡಾಡುವುದಿಲ್ಲ. ಸುಮ್ಮನೆ ಟಿವಿಯಲ್ಲಿ ನನ್ನ ಹೆಸರು ಹಾಕುತ್ತೀರಿ. ಹೀಗೆ ಹಾಕಿ ನನಗೆ ಯಾವ ಹುದ್ದೆಯೂ ಸಿಗದಂತೆ ಮಾಡುತ್ತೀರಿ ಎಂದು ಹೇಳಿ ನಕ್ಕಿದ್ದರು.

    ಹುಬ್ಬಳ್ಳಿಯಲ್ಲಿ ಎರಡು ತಿಂಗಳ ಹಿಂದೆ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದಾಗ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಸಿಗುತ್ತಾ ಎನ್ನುವ ಪ್ರಶ್ನೆಗೆ ಸಿಡಿಮಿಡಿಗೊಂಡಿದ್ದರು. ನಿಮಗ್ಯಾರು ಹೇಳಿದರು? ಊಹಾಪೋಹ ಸೃಷ್ಟಿಸಬೇಡಿ. ಅದೆಲ್ಲಾ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಸದ್ಯಕ್ಕೆ ಅಧ್ಯಕ್ಷರ ಬದಲಾವಣೆ ವಿಚಾರ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ನೀವೇ ಎಲ್ಲಾ ಊಹಾಪೋಹಗಳನ್ನು ಸೃಷ್ಟಿ ಮಾಡುವುದು ಎಂದು ಮಾಧ್ಯಮಗಳ ವಿರುದ್ಧ ಗುಡುಗಿದ್ದರು.

  • ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

    ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

    ಬೆಂಗಳೂರು: ದೋಸ್ತಿ ಸರ್ಕಾರದ ವಿಚಾರದಲ್ಲಿ ಹೆಜ್ಜೆ ಹೆಜ್ಜೆಗೂ ಅಡ್ಡಿಯಾಗ್ತಿರೋ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೆಣೆಯಲು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಒದ್ದಾಡ್ತಿದ್ದಾರೆ.

    ಕಾಂಗ್ರೆಸ್ ಹೈಕಮಾಂಡ್ ಕೂಡಾ ಸಿದ್ದರಾಮಯ್ಯ ಅವರ ಮಾತುಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುತ್ತಿರುವ ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ದಾಖಲೆ ಸಂಗ್ರಹಿಸ್ತಿದೆ. ಇದನ್ನೂ ಓದಿ: ಪಾರ್ಲಿಮೆಂಟ್ ಎಲೆಕ್ಷನ್‍ವರೆಗೂ ಅಷ್ಟೇ ಆಟ – ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದು ಸಿಡಿಗುಂಡು ?

    ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‍ಗೆ ಕರೆ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ದಾಖಲೆ ಕೇಳಿದ್ದಾರೆ. ಇದಕ್ಕೆ ಅಷ್ಟೇ ಫಾಸ್ಟ್ ಆಗಿ ರಿಯಾಕ್ಟ್ ಮಾಡಿರೋ ಸಿದ್ದರಾಮಯ್ಯ ವಿರೋಧಿ ಬಣ, ಕೇವಲ ಹತ್ತೇ ನಿಮಿಷಗಳಲ್ಲಿ ವೇಣುಗೋಪಾಲ್‍ಗೆ ವಿಡಿಯೋ ದಾಖಲೆ ನೀಡಿದೆ. ಇದನ್ನೂ ಓದಿ: ಮೈತ್ರಿ ಸರ್ಕಾರ 5 ವರ್ಷ ಪೂರೈಸುತ್ತೆ ಅಂತಾ ಅಷ್ಟೇ ಹೇಳುತ್ತೇನೆ-ಪರಮೇಶ್ವರ್

    ಈ ದಾಖಲೆ ಮುಂದಿಟ್ಟುಕೊಂಡು ಹೈಕಮಾಂಡ್ ಸಿದ್ದರಾಮಯ್ಯಗೆ ಕ್ಲಾಸ್ ತೆಗೆದುಕೊಳ್ಳುತ್ತಾ..? ಅಥವಾ ಇದು ಜೆಡಿಎಸ್ ನಾಯಕರ ಕಣ್ಣೊರೆಸೋ ತಂತ್ರನಾ..? ಗೊತ್ತಿಲ್ಲ.. ಒಟ್ಟಿನಲ್ಲಿ ಈ ಬೆಳವಣಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ನಾಂದಿ ಹಾಡಿದೆ.