Tag: Congress leaders

  • ಆಜಾದ್ ಬೆಂಬಲಿಸಿ 51 ನಾಯಕರ ರಾಜೀನಾಮೆ – ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಆಘಾತ

    ಆಜಾದ್ ಬೆಂಬಲಿಸಿ 51 ನಾಯಕರ ರಾಜೀನಾಮೆ – ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಆಘಾತ

    ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೈಕಮಾಂಡ್ ನಾಯಕರಿಗೆ ಶಾಕ್ ಮೂಡಿಸಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಈಗ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಬೆಚ್ಚಿಬೀಳುವಂತ ಆಘಾತ ನೀಡಿದ್ದಾರೆ.

    ಗುಲಾಂ ನಬಿ ಅಜಾದ್ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ ಅವರ ಬೆಂಬಲಿಗರು ರಾಜೀನಾಮೆ ನೀಡಿದ್ದು, ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ 51 ಮಂದಿ ಸಾಮೂಹಿಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈವರೆಗೂ 64 ಮಂದಿ ರಾಜೀನಾಮೆ ನೀಡಿದ್ದು, ಗುಲಾಂ ನಬಿ ಅಜಾದ್ ಅವರ ಹೊಸ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಲಡಾಕ್‍ನ ಸಿಂಧೂ ನದಿ ಸಂಗಮ ಸ್ಥಳಕ್ಕೆ ಶೋಭಾ ಕರಂದ್ಲಾಜೆ ಭೇಟಿ

    ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಎಲ್ಲ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ‌.

    ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕಳೆದ ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಅಸಮರ್ಥ ನಾಯಕರು ಪಕ್ಷವನ್ನು ಸಮಗ್ರವಾಗಿ ನಾಶಪಡಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ – ಏಷ್ಯಾಗೆ ಇದು ಫಸ್ಟ್ ಟೈಂ

    ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ಪ್ರಮುಖ ಕಾಂಗ್ರೆಸ್ ನಾಯಕರು, ನೂರಾರು ಪಂಚಾಯತ್ ರಾಜ್ ಸಂಸ್ಥೆ (ಪಿಆರ್‌ಐ) ಸದಸ್ಯರು, ಪುರಸಭೆ ಕಾರ್ಪೊರೇಟರ್‌ಗಳು, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಈಗಾಗಲೇ ಆಜಾದ್‌ ಪಕ್ಷ ಸೇರಲು ಕಾಂಗ್ರೆಸ್ ತೊರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಂದ್ರ ಸಚಿವೆಯ 18 ವಯಸ್ಸಿನ ಪುತ್ರಿ ಅಕ್ರಮ ಬಾರ್‌ ನಡೆಸುತ್ತಿದ್ದಾರೆಂದು ಆರೋಪ – ಕೈ ನಾಯಕರಿಗೆ ಸ್ಮೃತಿ ಇರಾನಿ ನೋಟಿಸ್‌

    ಕೇಂದ್ರ ಸಚಿವೆಯ 18 ವಯಸ್ಸಿನ ಪುತ್ರಿ ಅಕ್ರಮ ಬಾರ್‌ ನಡೆಸುತ್ತಿದ್ದಾರೆಂದು ಆರೋಪ – ಕೈ ನಾಯಕರಿಗೆ ಸ್ಮೃತಿ ಇರಾನಿ ನೋಟಿಸ್‌

    ನವದೆಹಲಿ: ಗೋವಾದಲ್ಲಿ ಅಕ್ರಮವಾಗಿ ಬಾರ್‌ ಹೊಂದಿದ್ದಾರೆ ಎಂದು ತಮ್ಮ ಪುತ್ರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೋಟಿಸ್‌ ನೀಡಿದ್ದಾರೆ.

    ಕಾಂಗ್ರೆಸ್‌ ನಾಯಕರಾದ ಪವನ್‌ ಖೇರಾ, ಜೈರಾಮ್‌ ರಮೇಶ್‌, ನೆಟ್ಟಾ ಡಿಸೋಜಾ ಅವರಿಗೆ ಸ್ಮೃತಿ ಇರಾನಿ ಲೀಗಲ್‌ ನೋಟಿಸ್‌ ಕೊಟ್ಟಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು. ನಿಮ್ಮ ಎಲ್ಲಾ ಆರೋಪಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಕೇಂದ್ರ ಸಚಿವೆ ಎಚ್ಚರಿಸಿದ್ದಾರೆ. ನನ್ನ 18 ವರ್ಷ ವಯಸ್ಸಿನ ಪುತ್ರಿ ವಿರುದ್ಧ ಅಕ್ರಮ ಬಾರ್‌ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್‌ ನಾಯಕರು ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಪುತ್ರಿಯ ಅಕ್ರಮ ಬಾರ್- ಸ್ಮೃತಿ ಇರಾನಿಯನ್ನು ವಜಾಗೊಳಿಸುವಂತೆ ಮೋದಿಗೆ ಒತ್ತಾಯ

    ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್‌ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್‌, ಕೂಡಲೇ ಸ್ಮೃತಿ ಇರಾನಿ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿತ್ತು.

     

    Congressಸ್ಮೃತಿ ಇರಾನಿ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳಿವೆ. ಇರಾನಿ ಅವರ ಪುತ್ರಿ ಗೋವಾದಲ್ಲಿ ರೆಸ್ಟೋರೆಂಟ್‌ ನಡೆಸುತ್ತಿದ್ದಾರೆ. ಅದರಲ್ಲಿ ಬಾರ್‌ ಕೂಡ ಇದ್ದು, ನಕಲಿ ಪರವಾನಗಿ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಆರೋಪಿಸಿದ್ದರು. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು – ವೀಡಿಯೋ ವೈರಲ್

    ಸ್ಮೃತಿ ಇರಾನಿ ಅವರನ್ನು ಕೇಂದ್ರ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪವನ್‌ ಹೇಳಿದ್ದರು.

    ನ್ಯಾಷನಲ್‌ ಹೆರಾಲ್ಡ್‌ ಹಗರಣದಲ್ಲಿ ಇ.ಡಿ ವಿಚಾರಣೆ ಎದುರಿಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ಕುರಿತು ನಿಲುವು ವ್ಯಕ್ತಪಡಿಸಿರುವುದಕ್ಕೆ ನನ್ನ ಪುತ್ರಿಯನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಕಾಂಗ್ರೆಸ್‌ ನನ್ನ ಮಗಳ ಚಾರಿತ್ರ್ಯ ಹರಣ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಕಿಡಿಕಾರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರಿಯಾಂಕಾ ಗಾಂಧಿಯನ್ನು ರಾಜ್ಯದಿಂದ ರಾಜ್ಯ ಸಭೆಗೆ ಸ್ಪರ್ಧಿಸಲು ಒಪ್ಪಿಸಿ – ರಾಹುಲ್‍ಗೆ ಮನವಿ

    ಪ್ರಿಯಾಂಕಾ ಗಾಂಧಿಯನ್ನು ರಾಜ್ಯದಿಂದ ರಾಜ್ಯ ಸಭೆಗೆ ಸ್ಪರ್ಧಿಸಲು ಒಪ್ಪಿಸಿ – ರಾಹುಲ್‍ಗೆ ಮನವಿ

    ಬೆಂಗಳೂರು: ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯದಿಂದ ರಾಜ್ಯ ಸಭೆಗೆ ಸ್ಪರ್ಧಿಸಲು ಒಪ್ಪಿಸಿ ಎಂದು ರಾಜ್ಯ ಕಾಂಗ್ರೆಸ್ ನಾಯಕರುಗಳು ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.

    ರಾಜಸ್ಥಾನದ ಉದಯಪುರದಲ್ಲಿ ರಾಹುಲ್ ಗಾಂಧಿ ಜೊತೆ ಇದೇ ವಿಚಾರ ಪ್ರಸ್ತಾಪಿಸಿರುವ ರಾಜ್ಯ ಕೈ ನಾಯಕರುಗಳು ಪ್ರಿಯಾಂಕಾ ಗಾಂಧಿ ಸ್ಪರ್ಧೆಯಿಂದ ಏನೆಲ್ಲಾ ಉಪಯೋಗ ಎನ್ನುವುದನ್ನು ವಿವರಿಸಿದ್ದಾರೆ.

    * ಪ್ರಿಯಾಂಕಾ ಗಾಂಧಿ ಸ್ಪರ್ಧೆಯಿಂದ ರಾಜ್ಯದಲ್ಲಿ ಪಕ್ಷಕ್ಕೆ ಹೇಗೆ ಸಹಾಯವಾಗಲಿದೆ.
    * 2023 ರ ಚುನಾವಣೆ ಗೆಲುವಿಗೆ ಹೇಗೆ ಸಹಕಾರಿಯಾಗಲಿದೆ.
    * ಪಕ್ಷ ಸಂಘಟನೆಗೆ ಪ್ರಿಯಾಂಕ ಗಾಂಧಿಯವರ ನೆರವನ್ನು ಪಕ್ಷ ಹೇಗೆ ಪಡೆಯಬಹುದು.
    * ಇದರಿಂದ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲು ಪಕ್ಷ ಸಂಘಟನೆಗೆ ಹೇಗೆ ನೆರವಾಗಲಿದೆ.

    ಎಲ್ಲವನ್ನೂ ಎಳೆ, ಎಳೆಯಾಗಿ ಬಿಡಿಸಿಟ್ಟಿದ್ದಾರೆ ಕೈ ನಾಯಕರುಗಳು. ಪ್ರಿಯಾಂಕಾ ಗಾಂಧಿ ಮನವೊಲಿಸಿ ರಾಜ್ಯದಿಂದ ಸ್ಪರ್ಧೆ ಮಾಡುವಂತೆ ಮಾಡಿ ಎಂದು ರಾಹುಲ್ ಗಾಂಧಿ ಬಳಿ ಮನವಿ ಮಾಡಿದ್ದಾರೆ. ನೀವು ಈ ವಿಚಾರವಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕೇಳಿ ನಾನು ಅವರಿಗೆ ಹೇಳುತ್ತೇನೆ ಎಂದು ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ. ಅಂತಿಮ ತೀರ್ಮಾನ ಅವರದೇ ಅವರ ಸ್ಪರ್ಧೆಗೆ ನನ್ನದೇನು ತಕರಾರಿಲ್ಲ ಎಂದಿದ್ದಾರೆ ಎನ್ನಲಾಗುತ್ತಿದೆ.

  • ಜಾತ್ರೆಯಲ್ಲಿ ತಡೆ ಹಾಕಿದ್ರು, ಜನರ ಹೊಟ್ಟೆ ಉರಿದಿದ್ದಕ್ಕೆ ಹೀಗೆಲ್ಲಾ ಆಗಿದೆ: ಡಿಕೆಶಿ

    ಜಾತ್ರೆಯಲ್ಲಿ ತಡೆ ಹಾಕಿದ್ರು, ಜನರ ಹೊಟ್ಟೆ ಉರಿದಿದ್ದಕ್ಕೆ ಹೀಗೆಲ್ಲಾ ಆಗಿದೆ: ಡಿಕೆಶಿ

    ಬೆಂಗಳೂರು: ಬಿಜೆಪಿಯವರು ವ್ಯಾಪಾರ, ಜಾತ್ರೆಯಲ್ಲಿ ತಡೆ ಹಾಕಿದ್ದರು. ಸೌಹಾರ್ದತೆಗೆ ಧಕ್ಕೆ ಮಾಡಿದರು. ಆಗ ಜನರ ಹೊಟ್ಟೆ ಉರಿದಿದ್ದಕ್ಕೆ ಹೀಗೆಲ್ಲಾ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

    ಹುಬ್ಬಳ್ಳಿ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ನೀತಿಯೇ ಇದಕ್ಕೆ ಕಾರಣ. ನಾನು ಹುಬ್ಬಳ್ಳಿಗೆ ಹೋಗುತ್ತೇನೆ. ಯಾರೂ ಕಾನೂನು ಕೈಗೆ ತೆಗೆಕೊಳ್ಳಬಾರದು ಎಂದು ಮನವಿ ಮಾಡಿದರು.

    ನಾನು ಈ ಗಲಾಟೆಯನ್ನು ಖಂಡಿಸುತ್ತೇನೆ. ಯಾರು ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಯಾರೇ ಒಬ್ಬ ತಪ್ಪು ಮಾಡಿದರೂ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕಲ್ಲು ಹೊಡೆಯೋಕೆ ಇವರು ಯಾರು ಎಂದು ಪ್ರಚೋದನಾಕಾರರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಯೋಗಿ ತರಹ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ.. : ಪ್ರಮೋದ್ ಮುತಾಲಿಕ್

    ಕರ್ನಾಟಕದ ಇಮೇಜ್ ನಮಗೆ ಮುಖ್ಯ. ಬಿಜೆಪಿ ಸರ್ಕಾರ ಸರಿಯಾಗಿ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಹೀಗೆಲ್ಲಾ ಆಗುತ್ತಿದೆ. ಘಟನೆಗೆ ಸಂಬಂಧಪಟ್ಟಂತೆ ಯಾರೇ ಇದ್ದರೂ ಅವರನ್ನು ಒಳಗೆ ಹಾಕಲಿ. ಇದರ ಹಿಂದೆ ಯಾರೇ ದೊಡ್ಡವರು ಇದ್ದರು ಕ್ರಮ ಕೈಗೊಳ್ಳಲಿ ಎಂದರು.

    ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಕೆಲಸ ಆಗುತ್ತಿದೆ. ಸಿಎಂ ನೈತಿಕ ಪೊಲೀಸ್ ಗಿರಿಗೆ ಕುಮ್ಮಕ್ಕು ಕೊಟ್ಟರು. ಚರ್ಚ್‍ನಲ್ಲಿ ಆಂಜನೇಯ ಪಠಣೆ ಮಾಡಿದರು ಅದರ ಮೇಲೂ ಕೇಸ್ ಹಾಕಿಲ್ಲ. ಜಾತ್ರೆಯಲ್ಲಿ ವ್ಯಾಪಾರಕ್ಕೆ ಅಡ್ಡಿ ಹಾಕಿದರು. ಅವರ ಮೇಲೆ ಯಾಕೆ ಕೇಸ್ ಹಾಕಲಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್‌ ಆಡಿಯೋ

    ಕಾಂಗ್ರೆಸ್ ನಾಯಕರ ಮೇಲೆ ಎಫ್‍ಐಆರ್ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಸಿಎಂ ಮನೆಗೆ ಹೋಗಬೇಕು ಅಂತಾ ಹೋದಾಗ ನಮ್ಮನ್ನು ಬಂಧಿಸಿ ಬಿಡುಗಡೆ ಮಾಡಿದರು. ಈಗ ಎಫ್‍ಐಆರ್ ಹಾಕಿದ್ದಾರೆ. ಈಶ್ವರಪ್ಪ ಜೊತೆ ಜನರು ಮೆರವಣಿಗೆ ಬಂದಿದ್ದರು. ಪ್ರತಿಭಟನೆ ಮಾಡಿದರು. ಅವರ ಮೇಲೆ ಯಾಕೆ ಕೇಸ್ ಹಾಕಿಲ್ಲ. ಈಶ್ವರಪ್ಪ ಮೇಲೆ ಶಿವಮೊಗ್ಗದಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವಾದರೂ ಬಂಧನವಾಗಿಲ್ಲ ಯಾಕೆ. ನಮ್ಮ ಮೇಲೆ ಮಾತ್ರ ಈ ಸರ್ಕಾರ ಕೇಸ್ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಸಂತೋಷ್‌ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಕಾಂಗ್ರೆಸ್‌ ನಾಯಕರ ಸಾಂತ್ವನ

    ಸಂತೋಷ್‌ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಕಾಂಗ್ರೆಸ್‌ ನಾಯಕರ ಸಾಂತ್ವನ

    ಬೆಳಗಾವಿ: ನಗರದ ಸಮರ್ಥ ಕಾಲೋನಿಯಲ್ಲಿರುವ ಮೃತ ಸಂತೋಷ್ ಪಾಟೀಲ್‌‌ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ,‌ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ‌ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ‌, ಸಲೀಂ ಅಹ್ಮದ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಸಂತೋಷ ಪಾಟೀಲ್ ಪತ್ನಿ ಜಯಶ್ರೀ ಹಾಗೂ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸಲಿ ಮಾಡೋದು ರಾಕ್ಷಸ ಪ್ರವೃತ್ತಿ: ಸಿದ್ದರಾಮಯ್ಯ

    ಈ ವೇಳೆ ಕಾಂಗ್ರೆಸ್ ನಾಯಕರ ಮುಂದೆ ಸಂತೋಷ್‌ ಕುಟುಂಬಸ್ಥರು ಕಣ್ಣೀರು ಹಾಕಿದ್ದಲ್ಲದೇ, 40 ಪರ್ಸೆಂಟ್‌ ಕಮಿಷನ್ ವಿಚಾರವಾಗಿ ನೋವು ತೋಡಿಕೊಂಡರು. 40ಪರ್ಸೆಂಟ್‌ ಕಮಿಷನ್‌ ಕೊಡದೇ ಇದ್ದರೆ ಯಾರ ಕಡೆಯಿಂದ ಬಿಲ್ ಮಾಡಿಸಿಕೊಳ್ಳುತ್ತೀಯಾ ಮಾಡಿಸಿಕೋ ಅಂತಾ ಸಂತೋಷನಿಗೆ ಹೇಳುತ್ತಿದ್ದರು ಎಂದು ಸಂತೋಷ್‌ ಪತ್ನಿ, ಈಶ್ವರಪ್ಪ ವಿರುದ್ಧ ದೂರಿದರು.

    ಈ ವೇಳೆ ಈಶ್ವರಪ್ಪ ಹತ್ತಿರ ಕರೆದುಕೊಂಡು ಹೋಗಿದ್ದು ಯಾರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ಕರೆದುಕೊಂಡ ಹೋಗಿದ್ದರು ಎಂದು ಕುಟುಂಬಸ್ಥರು ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಡಿಕೆಶಿ, ನೋಡಮ್ಮ ನಿನಗೆ ನ್ಯಾಯ ಕೊಡಿಸೋಕೆ ಬಂದಿದ್ದೇವೆ. ನೀನು ಧೈರ್ಯದಿಂದ ಇರು ಎಂದು ಸಮಾಧಾನಪಡಿಸಿದರು. ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಮಾಡ್ಕೋಳ್ಳೋದಿದ್ರೆ ತಮ್ಮ ಜಿಲ್ಲೆಯಲ್ಲೇ ಮಾಡ್ಕೋಬೇಕಿತ್ತು: ಸೋಮಲಿಂಗ ಸ್ವಾಮೀಜಿ

  • ಕಾಂಗ್ರೆಸ್ ಮುಖಂಡರ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲು

    ಕಾಂಗ್ರೆಸ್ ಮುಖಂಡರ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲು

    ಬೆಂಗಳೂರು: ಕಾಂಗ್ರೆಸ್ ಮುಖಂಡ ಮನೆ ಮುಂದೆ ಪ್ರತಿಭಟನೆ ಮಾಡಿದ ಪ್ರತಿಭಟನಕಾರರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

    ಇದೇ ತಿಂಗಳ 14 ರಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಗೋವಾ ಕಾಂಗ್ರೆಸ್ ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹಾದಾಯಿ ನೀರು ಕರ್ನಾಟಕಕ್ಕೆ ಕೊಡದೇ ಇರುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮನೆ ಮುಂದೆ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯಕ್ಷ ಡಾ. ರವಿಶೆಟ್ಟಿ ಬೆಂದೂರು, ನಾಗಮಂಗಲದ ಕುಮಾರ್, ಕೆ.ಎನ್. ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

    ಪ್ರತಿಭಟನಕಾರರು ಪ್ರತಿಭಟನೆಗೆ ಅನುಮತಿ ಇಲ್ಲದೇ ಕಾಂಗ್ರೆಸ್ ನಾಯಕರ ಮನೆ ಮುಂದೆ ಏಕಾಏಕಿ ಪ್ರತಿಭಟನೆ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವ ಆರೋಪದ ಮೇಲೆ ದೂರು ದಾಖಲಾಗಿದೆ. ಸದಾಶಿವ ನಗರದ ಮುಖ್ಯ ಪೇದೆ ಮಂಜುನಾಥ್ ಕೊಟ್ಟ ದೂರಿನ ಆಧಾರದ ಮೇಲೆ ಒಟ್ಟು ಆರು ಮಂದಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ ಬೆನ್ನಲ್ಲೇ ಶುರುವಾಯ್ತು ಸಿಂಧೂರ ಚಳುವಳಿ

  • ಸಮಾಜ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು: ಬಿ.ಸಿ ನಾಗೇಶ್ ತಿರುಗೇಟು

    ಸಮಾಜ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು: ಬಿ.ಸಿ ನಾಗೇಶ್ ತಿರುಗೇಟು

    – ಸಿದ್ದರಾಮಯ್ಯಗೆ ಹಿಜಬ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ

    ಮೈಸೂರು: ಸಮಾಜ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

    ರಾಜ್ಯ ಸರ್ಕಾರ ಹಿಜಬ್ ವಿಚಾರದಲ್ಲಿ ಸ್ಪಷ್ಟವಾದ ಆದೇಶ ಜಾರಿ ಮಾಡಿದೆ. ಈ ಬಗ್ಗೆ ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯ ಆದೇಶ ಕಟ್ಟುನಿಟ್ಟಾಗಿ ಪಾಲನೆ ಮಾಡಲೇಬೇಕು. ಪೊಲೀಸ್ ಇಲಾಖೆಯಲ್ಲಿನ ಮುಸ್ಲಿಂರು ಪೊಲೀಸ್ ಕ್ಯಾಪ್ ಹಾಕಲ್ಲ. ಟೋಪಿ ಹಾಕ್ತಿನಿ ಅಂದರೆ ನಡೆಯುತ್ತಾ? ಇದು ಅದೇ ರೀತಿ. ಸರಕಾರದ ಆದೇಶದಂತೆ ಸಮವಸ್ತ್ರ ಧರಿಸಬೇಕು ಎಂದರು. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

    ಸಮಾಜ, ಧರ್ಮ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು. ಅವರಿಂದ ನಮಗೆ ಪಾಠ ಬೇಡ. ರಾಹುಲ್ ಗಾಂಧಿ ಈ ವಿಚಾರದಲ್ಲಿ ಟ್ವೀಟ್ ಮಾಡುವಾಗ ಸಿನಿಮಾ ತಾರೆಯರು ಸಲಹೆ ಪಡೆಯದೆ ಅವರ ತಾಯಿಯ ಸಲಹೆ ಪಡೆದು ಟ್ವೀಟ್ ಮಾಡಲಿ ಎಂದರು. ರಾಹುಲ್ ಗಾಂಧಿಗೆ ತಾಯಿ ಶಾರದೆ, ಏಸು ಒಳ್ಳೆಯ ಬುದ್ಧಿ ಕೊಡಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

    ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಶಾದಿ ಭಾಗ್ಯ, ಒಂದೇ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಸಮಾಜ ಒಡೆದದ್ದು ಯಾರು ಎಂಬುದು ಜನರಿಗೆ ಗೊತ್ತಿದೆ. ಶಾಲೆಯಲ್ಲಿ ಶಾರದಾ ಪೂಜೆ, ಗಣಪತಿ ಪೂಜೆ ಇವೆಲ್ಲಾ ಬಿಜೆಪಿ ಸರ್ಕಾರ ಬಂದ ಮೇಲೆ ಬಂದಿಲ್ಲ. ಇದು ಈ ನೆಲದ ಸಂಸ್ಕೃತಿ, ಈ ಬಗ್ಗೆ ಪ್ರಶ್ನೆ ಮಾಡಬೇಡಿ ಎಂದಿದ್ದಾರೆ.

  • ಕಾಂಗ್ರೆಸ್ ನಾಯಕರು ಕಾವೇರಿ ಸಂಗಮದಲ್ಲಿ ಜನ್ರಿಗೆ ಕ್ಷಮೆಯಾಚಿಸಬೇಕು: ಆರಗ ಜ್ಞಾನೇಂದ್ರ

    ಕಾಂಗ್ರೆಸ್ ನಾಯಕರು ಕಾವೇರಿ ಸಂಗಮದಲ್ಲಿ ಜನ್ರಿಗೆ ಕ್ಷಮೆಯಾಚಿಸಬೇಕು: ಆರಗ ಜ್ಞಾನೇಂದ್ರ

    ಬೆಂಗಳೂರು: ಕಾವೇರಿ ನದಿ ನೀರಿನ ನಮ್ಮ ಹಕ್ಕಿನ ಪಾಲು ಪಡೆಯಲು, ವಿಫಲರಾದ ಕಾಂಗ್ರೆಸ್ ನಾಯಕರು ಸಂಗಮದ ದಂಡೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು.

    ಕೊರೊನಾ ಮಾರಿಯ ಸೋಂಕಿನ ವಾತಾವರಣದ ನಡುವೆಯೂ ಕಾನೂನನ್ನು ಲೆಕ್ಕಿಸದೆ, ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಅಲ್ಲಿನ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಹಾಗೂ ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಬೇಜವಾಬ್ದಾರಿ ಎಂದು ಆಕ್ರೋಶ ಹೊರಹಾಕಿದರು.

    ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರು ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ, ಆದರೆ ಜನತೆ ಬುದ್ಧಿವಂತರು ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ಧ ಯಾವುದೇ ಸಂಶಯ ಬೇಡ. ಆದರೆ ವಿವಾದ ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದ ಮುಂದಿದೆ ಎಂದು ಹೇಳಿದರು.

    ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ಐದು ವರ್ಷದಲ್ಲಿ ಕೇವಲ ಡಿಪಿಆರ್ ಸಲ್ಲಿಸಿದ್ದು ಬಿಟ್ಟರೆ ಬೇರೆ ಏನೂ ಮಾಡಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್

  • ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಬೆಂಗಳೂರು: ಅತ್ಯಾಚಾರದ ಕುರಿತು ಶಾಸಕ ರಮೇಶ್‌ ಕುಮಾರ್‌ ಅವರು ಬೆಳಗಾವಿ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.

    ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್‌ ಕುಮಾರ್‌ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಕಿಡಿಕಾರಿದ್ದಾರೆ. ರಮೇಶ್‌ ಕುಮಾರ್‌ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಕಡತದಿಂದ ತೆಗೆಯಬೇಕು ಎಂದು ಶಾಸಕಿ ಅಂಜಲಿ ನಿಂಬಾಳ್ಕರ್‌ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್

    ಇನ್ನು ಕೆಪಿಸಿಸಿ ರಾಮಲಿಂಗ ರೆಡ್ಡಿ ಅವರು ಕೂಡ ರಮೇಶ್‌ ಹೇಳಿಕೆಗೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ನೀಡಿದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್‌ ಕುಮಾರ್‌ ಟ್ವೀಟ್‌ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ರಿಲೇಶನ್‌ಶಿಪ್‌ನಲ್ಲಿ ಡಿಸ್ಟೆನ್ಸ್ ಹೆಚ್ಚಾಗಿದ್ದಕ್ಕೆ ಪ್ರಿಯಕರನಿಗೆ ಗುಂಡಿಟ್ಟ ಕಿರಾತಕಿ

  • ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು

    ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು

    ರಾಯಚೂರು: ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ರಾಯಚೂರಿನಲ್ಲಿ ಕೆಪಿಸಿಸಿ ರಾಜ್ಯ ಮುಖಂಡರ ಸಭೆ ಆಯೋಜಿಸಲಾಗಿದೆ. ಈ ವೇಳೆ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಬುಲೆನ್ಸ್‌ಗೂ ದಾರಿ ಬಿಡದೇ ಘೋಷಣೆಯನ್ನು ಕೂಗಿದ್ದಾರೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‍ನ ಹಲವಾರು ನಾಯಕರು ಭಾಗಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳ 220 ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಶಾಸಕರು, ಮಾಜಿ ಸಂಸದರು, ಜಿಲ್ಲಾ ಘಟಕಗಳ ಪ್ರಮುಖರು ಸಮಾವೇಶದಲ್ಲಿ ಹಾಜರಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್‍ನವರಿಗೆ ಬಾರ್ ಗೊತ್ತಿಲ್ವಾ? ಯಾರೂ ಹೋಗೋದೇ ಇಲ್ವಾ- ಬಿಸಿ ಪಾಟೀಲ್ ಪ್ರಶ್ನೆ

    ಕಾಂಗ್ರೆಸ್ ವಿಭಾಗೀಯ ಮಟ್ಟದ ಸಮಾವೇಶ ಹಿನ್ನೆಲೆ ನಗರದ ಗಾಂಧಿ ವೃತ್ತದ ಬಳಿ ಸುಮಾರು ಹೊತ್ತು ಟ್ರಾಫಿಕ್ ಜಾಮ್ ಆಯಿತು. ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುವುದರಲ್ಲಿ ಮುಳುಗಿದ್ದರು. ಇದರಿಂದ ಸಾರ್ವಜನಿಕರು ಪರದಾಡಬೇಕಾಯಿತು.

    ಸಭೆ ನಡೆಯುತ್ತಿರುವ ನಗರದ ಖಾಸಗಿ ಹೋಟೆಲ್ ಮುಂದೆ ಜನ ಜಮಾಯಿಸಿದ್ದರಿಂದ, ರಸ್ತೆ ಬಂದ್ ಆಗಿ ಮುಂದೆ ಹೋಗಲು ಆಗದೇ ಅಂಬುಲೆನ್ಸ್‌ನಲ್ಲಿದ್ದ ರೋಗಿ ಪರದಾಡುವಂತಾಯಿತು. ಕೋವಿಡ್ ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸೇರಿದ ಕಾರ್ಯಕರ್ತರು ನೂಕುನುಗ್ಗಲು ಮಾಡಿದರು. ಇದನ್ನೂ ಓದಿ:ಮೂವರ ವಿರುದ್ಧ ಹೈಕಮಾಂಡ್‍ಗೆ ಸಿಎಂ ದೂರು?