Tag: congress MLA

  • ಅಕ್ರಮ ಹಣ ವರ್ಗಾವಣೆ ಕೇಸ್‌ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

    ಅಕ್ರಮ ಹಣ ವರ್ಗಾವಣೆ ಕೇಸ್‌ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್‌ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ (Veerendra Puppy) ಅವರನ್ನ ಮತ್ತೆ 6 ದಿನ ಇಡಿ (ED – ಜಾರಿ ನಿರ್ದೇಶನಾಲಯ) ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

    ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (People’s Representatives Court) ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಕೋರ್ಟ್‌  ಸೂಚಿಸಿದೆ. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    veerendra puppy 2 1

    ಇದರೊಂದಿಗೆ ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ವಿರೇಂದ್ರ ಪಪ್ಪಿ ಇಡಿ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಡಿ ಪರ ವಕೀಲ ಪ್ರಮೋದ್ ಚಂದ್ರ ವಾದ ಮಂಡಿಸಿದ್ರೆ, ಆರೋಪಿ ವಿರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರು. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    veerendra puppy 5

    ಏನಿದು ಪ್ರಕರಣ?
    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು.

  • ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    – 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನ, 10 ಕೆ.ಜಿ ಬೆಳ್ಳಿ ವಶಕ್ಕೆ ಪಡೆದ ಇ.ಡಿ

    ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ (Sikkim) ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

    ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ. ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ಸೀಜ್ ಮಾಡಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ‌ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು, ನಾರ್ಕೋ ಅನಾಲಿಸಿಸ್‌ ಟೆಸ್ಟ್‌ ಮಾಡ್ಬೇಕು: ಗಿರೀಶ್‌ ಮಟ್ಟಣ್ಣನವರ್‌

    ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

    1 ಕೋಟಿ ಫಾರಿನ್ ಕರೆನ್ಸಿ ಪತ್ತೆ
    ಇದಲ್ಲದೇ ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊದಲ್ಲಿ ಕ್ಯಾಸಿನೊ ಆಭರಣ, ವಿವಿಧ ಬ್ಯಾಂಕುಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳು, ತಾಜ್, ಹಯಾತ್ ಮತ್ತು ಲೀಲಾ ಪಂಚತಾರಾ ಹೋಟೆಲ್‌ಗಳ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳು, 6 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದರ ಜೊತೆಗೆ ಐಷಾರಾಮಿ ಕಾರು, 12 ಕೋಟಿ ಮೌಲ್ಯದ ಇಂಡಿಯನ್ ಕರೆನ್ಸಿ, 1 ಕೋಟಿ ಫಾರಿನ್ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಇಡಿ ದಾಳಿಗೆ ಕಾರಣ ಏನು?
    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

  • ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    – ಮನೆ, ಕಂಪನಿಗಳಲ್ಲಿ ಮುಂದುವರೆದ ಶೋಧ

    ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ (Veerendra Puppy) ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಸಿಕ್ಕಿಂನಲ್ಲಿ (Sikkim) ಶಾಸಕರನ್ನ ವಶಕ್ಕೆ ಪಡೆಯಲಾಗಿದೆ.

    ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ (Illegal Money Transfer), ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಬೆಳಿಗ್ಗೆಯೇ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಈ ನಡುವೆ ಶಾಸಕರು ಸಿಕ್ಕಿಂನಲ್ಲಿ ಸ್ನೇಹಿತರೊಂದಿಗೆ ಇದ್ದಾಗ ವಶಕ್ಕೆ ಪಡೆಯಲಾಗಿದೆ.

    ಇಡಿ ದಾಳಿಗೆ ಕಾರಣ ಏನು?
    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು. ದಾಳಿ ವೇಳೆ ಶಾಸಕರು ಸಿಕ್ಕಿಂ ಪ್ರವಾಸದಲ್ಲಿರುವುದಾಗಿ ತಿಳಿದುಬಂದಿತ್ತು. ಹೊರತಾಗಿಯೂ ಅಧಿಕಾರಿಗಳ ಶೋಧ ಮುಂದುವರಿದಿದೆ.

    ಶಾಸಕರಿಗೆ ಸೇರಿದ ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್, ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್ ಕಂಪನಿಗಳು ಅಕ್ರಮ ಎಸಗಿವೆ ಎಂದು ಆರೋಪಿಸಲಾಗಿದೆ. ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶೋಧ ಕಾರ್ಯ ನಡೆಸುತ್ತಿದ್ದಾರೆ. 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಆಗಮಿಸಿದ್ದಾರೆ. ಮಹತ್ವದ ದಾಖಲೆಗಳನ್ನ ತೆಗೆಯುವ ಪ್ರಯತ್ನ ಮಾಡಲಾಗಿದೆ.

    ಕುಸುಮಾ ಮನೆ ಮೇಲೂ ದಾಳಿ
    ಇನ್ನೂ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ಕಾಂಗ್ರೆಸ್‌ ಮುಖಂಡೆ ಕುಸುಮಾ ಹನುಮಂತ ರಾಯಪ್ಪ ಅವರ ಮುದ್ದಿಪಾಳ್ಯ ರಸ್ತೆಯಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ. ಶೋಧ ಮುಂದುವರಿದಿದೆ.

  • ಚಿತ್ರದುರ್ಗ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ

    ಚಿತ್ರದುರ್ಗ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ

    ಚಿತ್ರದುರ್ಗ: ಇಲ್ಲಿನ ಕಾಂಗ್ರೆಸ್‌ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ (Veerendra Puppy) ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ (ಜಾರಿ ನಿರ್ದೇಶನಾಲಯ) ದಾಳಿ (ED Raid) ನಡೆಸಿದೆ.

    ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ವಿರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ಇದನ್ನೂ ಓದಿ: ಕೋಲಾರದಲ್ಲಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ – 6 ವರ್ಷಗಳ ಬಳಿಕ ಪ್ರಕರಣ ಭೇದಿಸಿದ ಶಿಡ್ಲಘಟ್ಟ ಪೊಲೀಸ್‌

    ದಾಳಿ ನಡೆಸಿ ಶಾಕ್‌ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಎಚ್ಚೆತ್ತ ಕೃಷಿ ಅಧಿಕಾರಿಗಳು – ಎಪಿಎಂಸಿ ಆವರಣದ ಕಮರ್ಷಿಯಲ್ ಅಂಗಡಿಗಳಿಗೆ ಲಾಕ್

  • ತುಮಕೂರು | ಕಾಂಗ್ರೆಸ್‌ನ ಮಾಜಿ ಶಾಸಕ ಆರ್. ನಾರಾಯಣ ನಿಧನ

    ತುಮಕೂರು | ಕಾಂಗ್ರೆಸ್‌ನ ಮಾಜಿ ಶಾಸಕ ಆರ್. ನಾರಾಯಣ ನಿಧನ

    ತುಮಕೂರು: ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಮಾಜಿ ಶಾಸಕ ಆರ್.ನಾರಾಯಣ (R. Narayana) ನಿಧನರಾಗಿದ್ದಾರೆ.

    81 ವರ್ಷದ ಆರ್.ನಾರಾಯಣ ವಯೋಸಹಜ ಕಾಯಿಲೆಯಿಂದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ

    ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಒಟ್ಟು ಮೂರು ಬಾರಿ ಶಾಸಕರಾಗಿದ್ದರು. ದಿ. ಎಸ್.ಎಮ್ ಕೃಷ್ಣ ಅವರು ಸಿಎಂ ಆಗಿದ್ದಾಗ ಹೌಸಿಂಗ್ ಬೋರ್ಡ್ ಚೇರ್ಮನ್ ಆಗಿ ಹಲವು ಗಮನಾರ್ಹ ಕೆಲಸ ಮಾಡಿದ್ದರು. ಇಂದು (ಡಿ.12) ಮಧ್ಯಾಹ್ನ 12 ಗಂಟೆಯಿಂದ ಅವರ ಗಾಂಧಿನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • ಸತೀಶ್ ಸೈಲ್‌ಗೆ 6 ಕೇಸ್‌ನಲ್ಲಿ 7 ವರ್ಷ ಜೈಲು – ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ: ಡಿಕೆಶಿ

    ಸತೀಶ್ ಸೈಲ್‌ಗೆ 6 ಕೇಸ್‌ನಲ್ಲಿ 7 ವರ್ಷ ಜೈಲು – ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ: ಡಿಕೆಶಿ

    ಬೆಂಗಳೂರು: ಬೇಲೆಕೇರಿ (Belekere) ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ (Satish Sail)  ಪ್ರಕರಣಗಳಲ್ಲಿ ತಲಾ 7 ವರ್ಷ ಜೈಲು ಶಿಕ್ಷೆ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.

    ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನ 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್‌ಗೆ 7 ವರ್ಷ ಜೈಲು ಎಂದು ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ. ಅಫೀಲು ಮಾಡಲು ಶಾಸಕರಿಗೆ ಅವಕಾಶವಿದೆ. ಅವರು ಲೀಗಲ್ ಟೀಂ ಜೊತೆ ಮಾತನಾಡುತ್ತಾರೆ. ಶಾಸಕ ಸ್ಥಾನದಿಂದ ಅನರ್ಹ ಆಗುವ ಕುರಿತು ನನಗೆ ತಿಳಿದಿಲ್ಲ. ಮುಂದೆ ಏನು ಆಗುತ್ತದೆ ನೋಡೋಣ ಎಂದರು.ಇದನ್ನೂ ಓದಿ: ಕಾರವಾರ| ಗಾಂಜಾ ಜೊತೆ ನಿಷೇಧಿತ ಮಾದಕ ವಸ್ತು ವಶ; ನಾಲ್ವರ ಬಂಧನ

    ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

    ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಿತ್ತು. ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್ ಸೈಲ್ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್ ಪ್ರಕಟಿಸಿದೆ.

    ಎಲ್ಲಾ ಪ್ರಕರಣಗಳಲ್ಲೂ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ.ಇದನ್ನೂ ಓದಿ: ರೈತರ ಆಸ್ತಿ ಒಂದಿಂಚೂ ಪಡೆದಿಲ್ಲ – ವಕ್ಫ್ ಆಸ್ತಿ ನಾವು ದಾಖಲಾತಿ ಮಾಡಿಕೊಂಡ್ರೆ ಏನು ತಪ್ಪು? – ಜಮೀರ್ ಪ್ರಶ್ನೆ

  • ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ 7 ವರ್ಷ ಜೈಲು

    ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ 7 ವರ್ಷ ಜೈಲು

    – 6 ಕೇಸ್‌ ಪೈಕಿ ಯಾವ್ಯಾವ ಪ್ರಕರಣದಲ್ಲಿ ಎಷ್ಟು ವರ್ಷ ಜೈಲು?

    ಕಾರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ‌ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

    ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್‌ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಿತ್ತು. ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್‌ ಸೈಲ್‌ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್‌ ಪ್ರಟಿಸಿದೆ.

    ಎಲ್ಲಾ ಪ್ರಕರಣಗಳಲ್ಲೂ ಸತೀಶ್‌ ಸೈಲ್‌ಗೆ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ.

  • ಅಕ್ರಮ ಹಣ ವರ್ಗಾವಣೆ ಕೇಸ್‌ – ಕಾಂಗ್ರೆಸ್‌ ಶಾಸಕ, ಪುತ್ರ, ಪ್ರಭಾವಿಗಳಿಗೆ ಸೇರಿದ 44 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಅಕ್ರಮ ಹಣ ವರ್ಗಾವಣೆ ಕೇಸ್‌ – ಕಾಂಗ್ರೆಸ್‌ ಶಾಸಕ, ಪುತ್ರ, ಪ್ರಭಾವಿಗಳಿಗೆ ಸೇರಿದ 44 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಚಂಡೀಗಢ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಹರಿಯಾಣದ ಕಾಂಗ್ರೆಸ್‌ ಶಾಸಕ ರಾವ್ ದಾನ್ ಸಿಂಗ್ (Rao Dan Singh) ಮತ್ತು ಅವರ ಪುತ್ರ ಹಾಗೂ ಇತರ ಕೆಲ ಪ್ರಭಾವಿಗಳಿಗೆ ಸೇರಿದ 44 ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (Enforcement Directorate) ಗುರುವಾರ ಹೇಳಿದೆ.

    ಹರಿಯಾಣ ಮಹೇಂದ್ರಗಢ ಕ್ಷೇತ್ರದ ಹಾಲಿ ಶಾಸಕರೂ ಆಗಿರುವ 65 ವರ್ಷ ವಯಸ್ಸಿನ ರಾವ್‌ ದಾನ್‌ ಸಿಂಗ್‌, ಇದೇ ಅಕ್ಟೋಬರ್‌ 5 ರಂದು ನಡೆಯಲಿರುವ ಚುನಾವಣೆಗೆ ಕಣಕ್ಕಿಳಿದ್ದಾರೆ. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    ಜಪ್ತಿ ಮಾಡಿದ ಆಸ್ತಿಗಳ ಪೈಕಿ, ರಾವ್‌ ದಾನ್‌ ಸಿಂಗ್‌ ಮತ್ತು ಅವರ ಮಗ ಅಕ್ಷತ್‌ ಸಿಂಗ್‌ಗೆ ಸೇರಿದ ಆಸ್ತಿಗಳು ಹೆಚ್ಚಾಗಿವೆ. ಗುರುಗ್ರಾಮ್‌ನ ಸೆಕ್ಟರ್ 99A ನಲ್ಲಿರುವ ಕೋಬನ್ ರೆಸಿಡೆನ್ಸಿಯಲ್ಲಿನ 31 ಫ್ಲಾಟ್‌ಗಳು, ಹರ್ಸಾರು ಗ್ರಾಮದಲ್ಲಿ 2.25 ಎಕರೆ ಜಮೀನು ಹಾಗೂ ಇತರ ಸಂಸ್ಥೈಗಳು ಸೇರಿವೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

    ದೆಹಲಿ, ಗುರುಗ್ರಾಮ್, ರೇವಾರಿ (ಹರಿಯಾಣ) ಮತ್ತು ಜೈಪುರ (ರಾಜಸ್ಥಾನ) ನಲ್ಲಿರುವ ಫ್ಲಾಟ್‌ಗಳು ಮತ್ತು ಲ್ಯಾಂಡ್ ಪಾರ್ಸೆಲ್‌ಗಳು ಸನ್‌ಸಿಟಿ ಪ್ರಾಜೆಕ್ಟ್ಸ್ ಪ್ರೈ. ಲಿಮಿಟೆಡ್ ಮತ್ತು ILD ಗ್ರೂಪ್ ಸಂಸ್ಥೆಯನ್ನೂ ಜಪ್ತಿ ಮಾಡಿರುವುದಾಗಿ ಇಡಿ ತಿಳಿಸಿದೆ. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    1,392 ಕೋಟಿ ರೂ. ಮೊತ್ತದ ಬ್ಯಾಂಕ್ ಸಾಲ ವಂಚನೆ ಮಾಡಿದ್ದಕ್ಕಾಗಿ ಅಲೈಡ್ ಸ್ಟ್ರಿಪ್ಸ್ ಲಿಮಿಟೆಡ್ ಹೆಸರಿನ ಕಂಪನಿಯ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಫ್‌ಐಆರ್‌ ದಾಖಲಿಸಿದ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಆಸ್ತಿಯನ್ನು ಜಪ್ತಿ ಮಾಡಿದ ಹೊರತಾಗಿಯೂ ರಾವ್ ದಾನ್ ಸಿಂಗ್ ಮತ್ತು ಮತ್ತವರ ಕುಟುಂಬಸ್ಥರನ್ನು ಇಡಿ ಇನ್ನೂ ತನಿಖೆಗೆ ಒಳಪಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

  • ಹರಿಯಾಣ, ಪಂಜಾಬ್‍ನಲ್ಲಿ ಇಡಿ ದಾಳಿ – ಭಾರೀ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ಪತ್ತೆ

    ಹರಿಯಾಣ, ಪಂಜಾಬ್‍ನಲ್ಲಿ ಇಡಿ ದಾಳಿ – ಭಾರೀ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ಪತ್ತೆ

    ನವದೆಹಲಿ: ಹರಿಯಾಣ (Haryana) ಮತ್ತು ಪಂಜಾಬ್‍ನಲ್ಲಿ (Punjab) ಮಾಜಿ ಶಾಸಕ ಹಾಗೂ ಹಾಲಿ ಶಾಸಕರ ಮನೆ ಮೇಲೆ ಇಡಿ (Enforcement Directorate) ಅಧಿಕಾರಿಗಳು ನಡೆಸಿದ ದಾಳಿಯ ವೇಳೆ 5 ಕೋಟಿ ರೂ. ಹಣ, ವಿದೇಶಿ ನಿರ್ಮಿತ ಅಕ್ರಮ ಶಸ್ತ್ರಾಸ್ತ್ರ, 300 ಕಾಟ್ರಿಡ್ಜ್‌ಗಳನ್ನು, 100 ಮದ್ಯದ ಬಾಟಲಿಗಳು ಸೇರಿದಂತೆ 4 ರಿಂದ 5 ಕೆಜಿ ತೂಕದ ಮೂರು ಚಿನ್ನದ ಬಿಸ್ಕೆಟ್‍ಗಳು ಪತ್ತೆಯಾಗಿವೆ.

    ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್‍ಎಲ್‍ಡಿ) ಮಾಜಿ ಶಾಸಕ ದಿಲ್‍ಬಾಗ್ ಸಿಂಗ್, ಕಾಂಗ್ರೆಸ್ ಶಾಸಕ (Congress MLA) ಸುರೇಂದರ್ ಪನ್ವಾರ್ (Surender Panwar) ಮತ್ತು ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

    ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‍ಜಿಟಿ) ಗಣಿಗಾರಿಕೆಯನ್ನು ನಿಷೇಧಿಸಿದ ನಂತರ ಯಮುನಾನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬಂಡೆಗಳು, ಜಲ್ಲಿ ಮತ್ತು ಮರಳು ಅಕ್ರಮ ಗಣಿಗಾರಿಕೆಯ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ಅನೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಬಳಿಕ ತನಿಖಾ ಸಂಸ್ಥೆಯು ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದಾದ ಬಳಿಕ ಈ ಇಬ್ಬರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು ಅಪಾರ ಪ್ರಮಾಣದ ನಗದು ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಣಿಗಾರಿಕೆ ಸಂಬಂಧಿತ ತೆರಿಗೆ ವಂಚನೆ ತಡೆಯಲು ಸರ್ಕಾರ ಆನ್‍ಲೈನ್ ಪೋರ್ಟಲ್‍ನ್ನು ಜಾರಿಗೆ ತಂದಿದೆ. ಕೆಲವು ಶಾಸಕರು ಈ ನಕಲಿ ಪೋರ್ಟಲ್ ಸೃಷ್ಟಿಸಿ ವಂಚಿಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಇದನ್ನೂ ಓದಿ: 15 ಭಾರತೀಯರಿದ್ದ ಸರಕು ಸಾಗಣೆ ಹಡಗು ಅಪಹರಣ

  • ಮಂಡ್ಯದಲ್ಲಿ ರೌಡಿಶೀಟರ್‌ಗೆ ಶಾಸಕರಿಂದ ಸನ್ಮಾನ

    ಮಂಡ್ಯದಲ್ಲಿ ರೌಡಿಶೀಟರ್‌ಗೆ ಶಾಸಕರಿಂದ ಸನ್ಮಾನ

    ಮಂಡ್ಯ: ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕರು (Congress MLA)  ರೌಡಿಶೀಟರ್ ಗಳ ಪೋಷಣೆಗೆ ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.

    ಕೆಆರ್‍ಎಸ್‍ನಲ್ಲಿ ನೃತ್ಯ ಕಾರಂಜಿ ಉದ್ಘಾಟನೆ ವೇಳೆ ರೌಡಿಶೀಟರ್ ಕೂಡ ಆಗಿರುವ ಗ್ರಾಮಪಂಚಾಯತ್ ಸದಸ್ಯ ದೇವರಾಜ್ ಆಲಿಯಾಸ್ ಬುಲ್ಲಿಗೆ ವೇದಿಕೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ಸನ್ಮಾನ ಮಾಡಿದ್ದಾರೆ.

    ಹಲವಾರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ದೇವರಾಜ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇರಲಿಲ್ಲ. ಆದರೂ ವೇದಿಕೆಗೆ ರೌಡಿ ಶೀಟರ್ ನನ್ನು ಕರೆದು ಸಮ್ಮಾನಿಸಿದ್ದಾರೆ. ಈ ವೇಳೆ ಶಾಸಕರ ಕಾಲಿಗೆ ರೌಡಿಶೀಟರ್ ಬಿದ್ದಿದ್ದಾರೆ. ಈ ಕ್ಷಣಕ್ಕೆ ಸಚಿವ ಚಲುವರಾಯಸ್ವಾಮಿ ಕೂಡ ಸಾಕ್ಷಿ ಆಗಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ!

    ಇತ್ತ ಶಾಸಕರು ಮಾತ್ರ ತಮ್ಮ ನಡೆಯನ್ನು ಸಮರ್ಥಿಸಿದ್ದಾರೆ. ನನ್ನ ಮೇಲೆಯೂ ಸಿಬಿಐ ಕೇಸ್ ಇದೆ. ಹಾಗಾದ್ರೆ ನಾನು ಕಾರ್ಯಕ್ರಮಕ್ಕೆ ಹೋಗಬಾರದು ಅಲ್ವಾ..? ಆಪಾದನೆ ಇದ್ದ ಮಾತ್ರಕ್ಕೆ ಅಪರಾಧಿ ಅಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]