ಬೆಂಗಳೂರು: ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಲು ಇದೇ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ವಿಧಾನಸಭೆಯಲ್ಲಿ ಮಾತಾಡಿದ ಸಿಎಂ, ಮೇಕೆದಾಟು ಯೋಜನೆಯ ಡಿಪಿಆರ್, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದಿದೆ. ಜೊತೆಗೆ ಕೇಂದ್ರದ ಪರಿಸರ ಇಲಾಖೆಯ ಅನುಮತಿ ಬೇಕಾಗಿದೆ. ಇದರ ಮಧ್ಯೆ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಚರ್ಚಿಸಲು ಈ ವಾರದಲ್ಲೇ ಸರ್ವ ಪಕ್ಷ ಸಭೆ ಕರೆಯುತ್ತೇನೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಐದು ವಲಯಗಳಲ್ಲಿ ಟೌನ್‍ಶಿಪ್ ನಿರ್ಮಾಣ: ಮುರುಗೇಶ್ ನಿರಾಣಿ
ನಮಗೂ ಆದಷ್ಟು ಬೇಗ ಮೇಕೆದಾಟು ಯೋಜನೆ ಆರಂಭ ಆಗಬೇಕು ಅನ್ನೋದಿದೆ. ಎಲ್ಲರ ಸಲಹೆ ಪಡೆದು ಮುಂದುವರೆಯುತ್ತೇವೆ ಎಂದು ಸಭೆಗೆ ಸಿಎಂ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮಿಳುನಾಡಿನವರು ರಾಜಕೀಯಕ್ಕಾಗಿ ಕೋರ್ಟ್‌ಗೆ ಹೋಗಿದ್ದಾರೆ. ಅದರ ಬಗ್ಗೆ ಸುಪ್ರೀಂ ಕೋರ್ಟ್ ಯಾವ ಆದೇಶವನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವೇ ಮೇಕೆದಾಟು ಕೋರ್ಟ್‌ನಲ್ಲಿದೆ ಎನ್ನುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದರು. ಅವತ್ತು ಶೇಖಾವತ್ ಇದನ್ನು ಹೇಳಿದ್ದು ಸುದ್ದಿಗೋಷ್ಠಿಯಲ್ಲಿ. ನನ್ನ ಸಮ್ಮುಖದಲ್ಲಿ ಅಲ್ಲ ಅಂತಾ ಸಿಎಂ ಸಮಜಾಯಿಷಿ ನೀಡಿದರು.
ಮೇಕೆದಾಟು ಯೋಜನೆ ಜಾರಿ ಸಂಬಂಧ ಕಾಂಗ್ರೆಸ್ ಬೃಹತ್ ಪಾದಯಾತ್ರೆ ನಡೆಸಿದೆ. ಆ ಮೂಲಕ ಕರ್ನಾಟಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದೆ. ಅತ್ತ ಕರ್ನಾಟಕ ಮೇಕೆದಾಟು ಡ್ಯಾಂ ನಿರ್ಮಿಸದಂತೆ ನೋಡಿಕೊಳ್ಳಿ ಎಂದು ಡಿಎಂಕೆ ಸರ್ಕಾರದ ಮೇಲೆ ಎಐಎಡಿಎಂಕೆ ಒತ್ತಡ ತರುತ್ತಿದೆ. ಇದನ್ನೂ ಓದಿ: ಸದನದಲ್ಲಿ ಸದ್ದು ಮಾಡಿದ ರೈತ ಮಹಿಳೆ ವಿಷ ಕುಡಿದ ಪ್ರಕರಣ
ಬೆಂಗಳೂರು: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಈ ಮೂಲಕ 5 ದಿನದ ಪಾದಯಾತ್ರೆಗೆ ಇಂದು ಬೇಕ್ ಬೀಳಲಿದೆ. ಕೊನೆಯ ದಿನ ಇಂದು ಬೃಹತ್ ಸಮಾವೇಶ ಅಂತಿಮ ಪಾದಯಾತ್ರೆ ನಡೆಯಲಿದ್ದು, ನಗರದಲ್ಲಿಂದು ಮೆಗಾ ಟ್ರಾಫಿಕ್ ಜಾಮ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.
ಬಳ್ಳಾರಿ ರಸ್ತೆ, ಮಲ್ಲೇಶ್ವರಂ, ಮೆಜೆಸ್ಟಿಕ್, ಚಾಮರಾಜಪೇಟೆ, ಬಸವನಗುಡಿ ಕಡೆ ಜಾಮ್ ಆಗುವ ಸಾಧ್ಯತೆಗಳಿವೆ. ಬೆಳಗ್ಗೆ 9.30ಗೆ ಪ್ಯಾಲೆಸ್ ಗ್ರೌಂಡ್ ನಿಂದ ಪಾದಯಾತ್ರೆ ಆರಂಭವಾಗಲಿದೆ. ನಂತರ ಕಾವೇರಿ ಥಿಯೇಟರ್, ಸ್ಯಾಂಕಿ ಟ್ಯಾಂಕ್, 18ನೇ ಕ್ಲಾಸ್, ಮೀಶ್ವರಂ, ಮಾರ್ಗೋಸಾ ರಸ್ತೆ, ಕೆ.ಸಿ. ಜನರಲ್ ಆಸ್ಪತ್ರೆ, ಲಿಂಕ್ ರಸ್ತೆ, ಶೇಷಾದ್ರಿಪುರಂ, ರಾಜೀವ್ ಗಾಂಧಿ ಪ್ರತಿಮೆ ಫ್ಲಾಟ್‍ಫಾರಂ ರಸ್ತೆಯಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಕಾಟನ್‍ಪೇಟೆ ಮುಖ್ಯರಸ್ತೆ, ಬ್ರಿಯಾಂಡ್ ಸರ್ಕಲ್, ರಾಯನ್ ಸರ್ಕಲ್ ಹಾಗೂ ಈದ್ಗಾ ಮೈದಾನದಲ್ಲಿ ಕೊನೆಯಾಗಲಿದೆ. ಇದನ್ನು ಓದಿ: ಕಾರು ಡ್ರೈವಿಂಗ್ ಮಾಡ್ಕೊಂಡೆ ಆಸ್ಪತ್ರೆಗೆ – ಹೆಣ್ಣು ಮಗುವಿನ ತಾಯಿಯಾದ ದಿಶಾ ಮದನ್
ಮೊದಲ ಹಂತದ 5 ಕಿಮೀ ನಲ್ಲಿ ಚಾಮರಾಜ ಪೇಟೆ ಈದ್ಗಾ ಮೈದಾನ ತಲುಪಲಿರುವ ಪಾದಯಾತ್ರೆ, ಅಲ್ಲಿ ಭೋಜನ ಮುಗಿಸಿ ಅಲ್ಲಿಂದ ನ್ಯಾಶನಲ್ ಕಾಲೇಜು ಆಟದ ಮೈದಾನದ ಕಡೆಗೆ 3 ಕಿಮೀ ಪಾದಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಬಸವನಗುಡಿಯ ನ್ಯಾಷನಲ್ ಗ್ರೌಂಡ್ಸ್ ನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಒಟ್ಟಾರೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಇಂದು ಅಂತಿಮ ತೆರೆ ಬೀಳಲಿದೆ. ಇದನ್ನು ಓದಿ: ಪುಟಿನ್ ಜೊತೆ 2ನೇ ಬಾರಿ ಮೋದಿ ಮಾತುಕತೆ
ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಿಲಿಕಾನ್ ಸಿಟಿ ಸ್ತಬ್ಧವಾಗುವ ಸಾಧ್ಯತೆಗಳಿವೆ. ಇಂದು ಬೆಂಗಳೂರು ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ ಇದೆ.
ಇಂದು ಜ್ಞಾನಭಾರತಿ ಮೆಟ್ರೋ ಸ್ಟೇಷನ್‍ನಿಂದ ಪಾದಯಾತ್ರೆ ಆರಂಭವಾಗಲಿದೆ. 3ನೇ ದಿನದ ಪಾದಯಾತ್ರೆ ಬೆಂಗಳೂರಿನಲ್ಲಿ ಸಂಚಾರ ಮಾಡಲಿದೆ. ಕೈನಾಯಕರ ಪಾದಯಾತ್ರೆ ನೂರಾರು ಮಂದಿಯೊಂದಿಗೆ ಸಾಗಲಿದೆ. ಹೀಗಾಗಿ ಇಂದು ಹಾಗೂ ನಾಳೆ ಹುಷಾರಾಗಿರಿ. ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತವಾಗುವುದು ಪಕ್ಕಾ.
ಇಂದು ಬೆಂಗಳೂರು ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ ಇದೆ. ಮೈಸೂರು ರೋಡಲ್ಲೂ ಜಾಮ್, ತುಮಕೂರು ರೋಡಲ್ಲೂ ಜಾಮ್. ಇಂದು ಈ ರಸ್ತೆಯಲ್ಲಿ ಓಡಾಡೋರು ಬದಲಿ ರೋಡ್ ನೋಡಿಕೊಳ್ಳಿ. ಜ್ಞಾನಭಾರತಿ ಮೆಟ್ರೋ ಸ್ಟೇಷನ್‍ನಿಂದ ಜಯದೇವ ಆಸ್ಪತ್ರೆವರೆಗೆ ಪಾದಯಾತ್ರೆ ಸಾಗಲಿದೆ.
ಇಂದು ಎಲ್ಲೆಲ್ಲಿ ಪಾದಯಾತ್ರೆ..?
ಜ್ಞಾನಭಾರತಿ ಮೆಟ್ರೋ ಸ್ಟೇಷನ್, ನಾಯಂಡಹಳ್ಳಿ, ನಾಯಂಡಹಳ್ಳಿ ಜಂಕ್ಷನ್, ಪೆಸೆಟ್ ಕಾಲೇಜ್ ಜಂಕ್ಷನ್, ಕತ್ರಿಗುಪ್ಪೆ ಮುಖ್ಯರಸ್ತೆ ಜಂಕ್ಷನ್, ವೆಂಕಟಾದ್ರಿ ಕಲ್ಯಾಣ ಮಂಟಪ, ಕದಿರೇನಹಳ್ಳಿ ಜಂಕ್ಷನ್, ಬನಶಂಕರಿ ದೇವಾಲಯ, ಜಯದೇವ ಆಸ್ಪತೆ, ಅದ್ವೈತ್ ಪೆಟ್ರೋಲ್ ಬಂಕ್ ನಲ್ಲಿ ಪಾದಯಾತ್ರೆ ಸಾಗಲಿದೆ. ಇದನ್ನೂ ಓದಿ: ಮಹಾಶಿವರಾತ್ರಿ ಹಬ್ಬದ ದಿನ ಉಪವಾಸ ಏಕೆ ಮಾಡ್ತಾರೆ?
ಜ್ಞಾನಭಾರತಿ ಮೆಟ್ರೋ- ಬಿಟಿಎಂ 1ನೇ ಹಂತ, ಕೆಂಚೇನಹಳ್ಳಿ ಕ್ರಾಸ್ ಜೈರಾಂದಾಸ್ ರೈಲ್ವೆ ಗೇಟ್, ಜಂಕ್ಷನ್- ಜ್ಞಾನಭಾರತಿ ಜಂಕ್ಷನ್, ಆರ್.ಆರ್.ಆರ್ಚ್ ಜಂಕ್ಷನ್-ಪಂತರಪಾಳ್ಯ ಜಂಕ್ಷನ್, ನಾಯಂಡಹಳ್ಳಿ ಜಂಕ್ಷನ್- ದೇವೇಗೌಡ ವೃತ್ತ, ಪಿ.ಇ.ಎಸ್ ಕಾಲೇಜ್ ಜಂಕ್ಷನ್-ಕೆಇಬಿ ಜಂಕ್ಷನ್ ಎನ್‍ಸಿಆರ್‍ಟಿ, ಜಂಕ್ಷನ್- ಇಟ್ಟಮಡುವು ಜಂಕ್ಷನ್- ಕತ್ರಿಗುಪ್ಪೆ ಜಂಕ್ಷನ್, ಕಾಮಾಕ್ಯ ಜಂಕ್ಷನ್- ವಿದ್ಯಾಪೀಠ ಪಾರ್ಕ್, ವೆಂಕಟಾದ್ರಿ ಕಲ್ಯಾಣ ಮಂಟಪ- ರಿಂಗ್ ರಸ್ತೆ, ಚನ್ನಮ್ಮ ಜಂಕ್ಷನ್- ಸಂಗಂ ಸರ್ಕಲ್, ರಾಜಲಕ್ಷ್ಮಿ ಜಂಕ್ಷನ್-ಅರಬಿಂದೋ ಜಂಕ್ಷನ್- 46ನೇ ಅಡ್ಡ, ರಸ್ತೆ 2ನೇ ಮುಖ್ಯ ರಸ್ತೆ- ಜಯನಗರ 5ನೇ ಬ್ಲಾಕ್, ರಾಗಿಗುಡ್ಡ ಜಂಕ್ಷನ್- ಜಯನಗರ- ಈಸ್ಟ್ ಎಂಡ್ ಜಂಕ್ಷನ್, ಜಯದೇವ ಜಂಕ್ಷನ್ – ಬಿಟಿಎಂ 20ನೇ ಮೈನ್‍ವರೆಗೆ ಕಾಂಗ್ರೆಸ್ ಪಾದಯಾತ್ರೆ ನಡೆಯಲಿದೆ.
ಬೆಂಗಳೂರು: ಮೇಕೆದಾಟು ಆಣೆಕಟ್ಟು ಯೋಜನೆ ಕಾಮಗಾರಿಗೆ ಒತ್ತಾಯಿಸಿ ನೀರಿಗಾಗಿ ನಡಿಗೆ ಹೆಸರಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಇಂದು 2ನೇ ದಿನ.
ಇಂದು ಬೆಳಗ್ಗೆ ಬಿಡದಿಯಿಂದ ಪಾದಯಾತ್ರೆ ಶುರುವಾಗಲಿದೆ. ನಿನ್ನೆಯಷ್ಟೇ ಕನಕಪುರ ಸರ್ಕಲ್‍ನಲ್ಲಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಉಸ್ತುವಾರಿ ಸುರ್ಜೆವಾಲಾ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರ ಮುಖಂಡರು ಚಾಲನೆ ನೀಡಿದ್ರು. ನಟ ನೆನಪಿರಲಿ ಪ್ರೇಮ್, ಸಾಧುಕೋಕಿಲಾ ಕೂಡ ಪಾಲ್ಗೊಂಡಿದ್ರು.
ರಾಮನಗರದಿಂದ ಹೊರಟ ಪಾದಯಾತ್ರೆ ಸದ್ಯ ಬಿಡದಿ ತಲುಪಿದೆ. ಮತ್ತೊಂದೆಡೆ ಬೆಂಗಳೂರಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಸರ್ಕಾರ ಷರತ್ತು ವಿಧಿಸಬಹುದು ಎನ್ನಲಾಗ್ತಿದೆ. ಪಾದಯಾತ್ರೆಗೆ ಅನುಮತಿ ಪಡೆಯದ ಕಾಂಗ್ರೆಸ್‍ಗೆ ಇಂತದೊಂದು ಆತಂಕ ಎದುರಾಗಿದೆ. ಕೇವಲ ಪಾದಯಾತ್ರೆ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ನಾಯಕರಿಗೆ ಈ ಬಾರಿಯು ಕೊನೆಗಳಿಗೆಯ ತೊಡಕಿನ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
ಟ್ರಾಫಿಕ್ ಸಮಸ್ಯೆ ತಪ್ಪಿಸಲು ಸರ್ಕಾರವೇ ಬದಲಿ ಮಾರ್ಗ ಸೂಚಿಸಬಹುದು ಎನ್ನಲಾಗ್ತಿದೆ. ಬೆಂಗಳೂರು ನಗರದ ಒಳಗೆ ಸಾವಿರಾರು ಜನರ ನಡಿಗೆಗೆ ಅವಕಾಶ ಸಿಗೋದು ಅನುಮಾನ. ಮಹಾನಗರದ ವ್ಯಾಪ್ತಿಯಲ್ಲಿ ಇಂತಿಷ್ಟೆ ಜನ ನಡೆಯಬೇಕು ಎಂಬ ಷರತ್ತು ವಿಧಿಸುವ ಸಾಧ್ಯತೆ ಇದೆ. ಇಲ್ಲವೆ ಬೇರೆ ಮಾರ್ಗದಲ್ಲಿ ನಡೆಯಿರಿ ಎಂಬ ಮಾರ್ಗದರ್ಶನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರವಿದ್ದರೂ, ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ: ಸಿದ್ದು ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗೆ ಪೂರಕವಾಗಿದೆ. ಕೋವಿಡ್ ಪ್ರಕರಣ ಹೆಚ್ಚಿರುವ ಈ ಸಮಯದಲ್ಲಿ ಇದು ಸೂಕ್ತವಾಗಿದೆ. ಕಾಂಗ್ರೆಸ್‌ನ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದೂ ಇಲ್ಲ, ಕ್ಷಮಿಸುವುದೂ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ
ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಆದರೂ ಶೇ. 5ರಿಂದ 6 ರಷ್ಟು ರೋಗಿಗಳು ಮಾತ್ರ ಆಸ್ಪತ್ರೆ ಸೇರುತ್ತಿದ್ದಾರೆ. ನರ್ಸ್‌ಗಳು ಕೂಡ ಸೋಂಕಿಗೆ ಒಳಗಾಗುತ್ತಿರುವುದು ಆತಂಕದ ವಿಚಾರ. ಹೀಗಾಗಿ ಮತ್ತಷ್ಟು ಎಚ್ಚರಿಕೆಯ ಅವಶ್ಯಕತೆ ಇದೆ. ರಾಜ್ಯದಲ್ಲಿ ಕೊರೊನಾ ಇನ್ನೂ ಪೀಕ್‌ಗೆ ಹೋಗಿಲ್ಲ ಎಂದು ತಜ್ಞರು ಕೂಡಾ ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಪೀಕ್‌ಗೆ ಹೋಗುವ ಸಾಧ್ಯತೆ ಇದೆ. 3- 4ನೇ ವಾರದಿಂದ ಕಡಿಮೆ ಆಗಲಿದೆಯೆಂದು ತಜ್ಞರು ಅಂದಾಜಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ
ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ, ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದಿದ್ದಾರೆ. 9 ತಿಂಗಳ ಹಿಂದೆ ಅವರು ಎರಡು ಡೋಸ್ ಪಡೆದಿದ್ದರು. ಬಿಎಂಸಿಆರ್‌ಐನಲ್ಲಿ ಈವರೆಗೆ 83,937 ಡೋಸ್‌ಗಳನ್ನು ನೀಡಲಾಗಿದೆ. ಈ ಪೈಕಿ 420 ಬಾಣಂತಿ, 1,179 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ಅರ್ಹರು ಮುನ್ನೆಚ್ಚರಿಕೆಗೆ ಲಸಿಕೆಯನ್ನು ಪಡೆಯಬೇಕು. ಲಸಿಕಾಕರಣ ಒಂದರಿಂದಲೇ ರಕ್ಷಣೆ ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಪ್ರಧಾನಿಗಳು ಕೂಡ ಅದನ್ನೇ ಹೇಳಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯೋಣ ಎಂದು ಕರೆ ನೀಡಿದರು.
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ಸ್ಪರ್ಧೆಯಲ್ಲಿ ನಾ ಮುಂದೆ ತಾ ಮುಂದೆ ಎಂದು ಸ್ಪರ್ಧೆಗೆ ಇಳಿವಂತೆ ಕಾಂಗ್ರೆಸ್‍ನವರು ಭಂಡತನದ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ಸಾಮಾನ್ಯ ಜ್ಞಾನದ ಗುಲಗಂಜಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹೆಚ್ಚಳದ ನಡುವೆ ಪಾದಯಾತ್ರೆ ಬೇಡ ಎಂದು ಹೈಕೋರ್ಟ್ ಹೇಳಿದ ವಿಷಯವನ್ನು ಸರ್ಕಾರ ಮೊದಲೇ ತಿಳಿಸಿತ್ತು. ಮುಖ್ಯಮಂತ್ರಿಗಳು, ಸಚಿವರ ಮನವಿ, ಜನರ ಅಭಿಪ್ರಾಯವನ್ನು ಧಿಕ್ಕರಿಸಿ ಪತ್ರಿಕಾ ಸಂಪಾದಕೀಯದ ಸಲಹೆಯನ್ನೂ ಬದಿಗೊತ್ತಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆ ಆರಂಭಿಸಿದರು ಎಂದು ಟೀಕಿಸಿದರು. ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಲು ಕಾಂಗ್ರೆಸ್ ಪಾದಯಾತ್ರೆಯೂ ಕಾರಣ: ಸಚಿವ ಸುಧಾಕರ್
ಕೋವಿಡ್ ತೀವ್ರವಾಗುತ್ತಿರುವಾಗಲೇ ಈ ಪಾದಯಾತ್ರೆ ಬೇಕಿತ್ತೇ ಪ್ರಶ್ನಿಸಿರುವ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಿ ಎಂದು ಸೂಚಿಸಿದೆ. ಅದೇ ರೀತಿ ಪಾದಯಾತ್ರೆ ನಿಲ್ಲಿಸಬಾರದೇ ಎಂದು ರಾಜ್ಯ ಸರ್ಕಾರವನ್ನೂ ಪ್ರಶ್ನಿಸಿದೆ. ಮಾನವೀಯತೆಯ ಲವಲೇಶವಿಲ್ಲದೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಶಾಸಕಿ ಮಲ್ಲಾಜಮ್ಮ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಂಜುಳಾ ಮಾನಸ, ವಿಧಾನ ಪರಿಷತ್ ಹಿರಿಯ ಸದಸ್ಯ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ವೀರಪ್ಪ ಮೊಯಿಲಿ, ಮಾಜಿ ಸಚಿವ ರೇವಣ್ಣ ಅವರಿಗೆ ಈಗಾಗಲೇ ಕೋವಿಡ್ ಬಂದಿದೆ. ಇದರಲ್ಲಿ ಪಾಲ್ಗೊಂಡ ಬಹಳಷ್ಟು ಜನರಿಗೆ ಕೋವಿಡ್ ಬಂದಿದೆ ಎಂದು ತಿಳಿಸಿದರು.
ನಿನ್ನೆ ರಾಮನಗರದಲ್ಲಿ ಪರೀಕ್ಷೆ ಮಾಡಿದ 100 ಜನರ ಪೈಕಿ 30 ಜನರಿಗೆ ಕೋವಿಡ್ ಇದೆ. ಇದು ಇನ್ನೂ ಹೆಚ್ಚಾಗುತ್ತಿದೆ. ಕಾಂಗ್ರೆಸ್‍ನದ್ದು ಪಾದಯಾತ್ರೆಯಲ್ಲ, ಕೋವಿಡ್ ಹೆಚ್ಚಳದ ಜಾತ್ರೆ. ಪಾದಯಾತ್ರೆ ವಿಚಾರ ಹೈಕಮಾಂಡ್‍ಗೆ ಗೊತ್ತಿತ್ತು. ಆದರೆ, ಉಸ್ತುವಾರಿ ಸುರ್ಜೇವಾಲಾ ಅವರು ಪರಿಸ್ಥಿತಿ ಕೈಮೀರಿದರೆ ಪಾದಯಾತ್ರೆ ನಿಲ್ಲಿಸಿ ಎಂದು ಇವತ್ತು ಸೂಚನೆ ಕೊಡುತ್ತಿದ್ದಾರೆ. ಇನ್ನೂ ಎಷ್ಟು ಕೈಮೀರಬೇಕು. ರಾಜ್ಯದಲ್ಲಿ ಕೋವಿಡ್ ಪ್ರಮಾಣ ಹೆಚ್ಚಳದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷದ ಹೈಕಮಾಂಡ್ ಪಾತ್ರ ದೊಡ್ಡದಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಬಗ್ಗೆ ನಮಗೆ ನಂಬಿಕೆ ಇಲ್ಲ: ಸುನಿಲ್ ಕುಮಾರ್
ಡಿ.ಕೆ.ಶಿವಕುಮಾರ್‌ರನ್ನು ಸಿಎಂ ಮಾಡಲು ಮತ್ತು ಅವರ ಬೇಳೆ ಬೇಯಿಸಲು ಹೈಕಮಾಂಡ್ ಕೂಡ ಕೋವಿಡ್ ಹೆಚ್ಚಿಸಲು ಸಹಾಯ ಮಾಡುತ್ತಿದೆ. ಪಾದಯಾತ್ರೆ ಮುಂದೂಡಿಕೆಗೆ ಹೈಕಮಾಂಡ್ ಯಾಕೆ ಮುಂದಾಗಲಿಲ್ಲ? ಡಿ.ಕೆ.ಶಿವಕುಮಾರ್ ಒಬ್ಬರಿಗೇ ಪಾದಯಾತ್ರೆಯ ಲಾಭ ಸಿಗಬಾರದೆಂದು ಸಿದ್ದರಾಮಯ್ಯರು ತಮಗೆ ಅನಾರೋಗ್ಯವಿದ್ದರೂ ಕಷ್ಟಪಟ್ಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದರು.
ರಾಜ್ಯ ಸರ್ಕಾರ ನೂರಾರು ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರೇ ನಿಯಮಗಳನ್ನು ಉಲ್ಲಂಘಿಸಿದ್ದು ಸರಿಯೇ? ಎಂದು ಕೇಳಿದರು. ಮೇಕೆದಾಟು ವಿಳಂಬಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾರಣ. 2013ರಿಂದ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ತಡೆಯಾಜ್ಞೆ ಇರಲಿಲ್ಲ. ಇದರ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಚರ್ಚೆ ನಡೆದಿದೆ. ಶಿವಕುಮಾರ್ ಮತ್ತು ಎಂ.ಬಿ.ಪಾಟೀಲರಿಗೆ ಮಂಪರು ಪರೀಕ್ಷೆ ಮಾಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ
ರಾಜ್ಯ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಚಾರದಲ್ಲಿ ಸಲಹೆಗಳನ್ನು ಸರ್ವಪಕ್ಷ ಸಭೆಯಲ್ಲಿ ತಿಳಿಸಬೇಕಿತ್ತು. ಇವರು ಪರಮ ಸ್ವಾರ್ಥಕ್ಕಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಈ ಪಾದಯಾತ್ರೆ ಮಾಡಿದ್ದಾರೆ ಎಂದು ಟೀಕಿಸಿದರು. ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿರಿ ಎಂದರು. ಈಗ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕೋವಿಡ್ ತಗುಲಿದಂತೆ ಕಾಣುತ್ತದೆ ಎಂದರು.
ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿ ಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹರಿಹಾಯ್ದರು.
ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ಕಾಪಾಡಲು ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಿರುವುದಕ್ಕೆ ಅಭಿನಂದನೆ. ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ. ಸರ್ಕಾರ ಪ್ರತಿಭಟನೆಯನ್ನು ತಡೆಯಲಿಲ್ಲ. ಆದರೆ ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಕೋರಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಅಧಿಕಾರಿಗಳ ಸ್ಫೂರ್ತಿ ಕಳೆಯುವ ಕೆಲಸ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನು ಮಾಜಿ ಪ್ರಧಾನಿ ಈಗ ಮೇಕೆದಾಟು ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ
ಸಿಎಂ ಬಸವರಾಜ ಬೊಮ್ಮಾಯಿಯವರು ನೀರಾವರಿ ಕ್ಷೇತ್ರದಲ್ಲಿ ಆಳ ಜ್ಞಾನ ಹೊಂದಿದ್ದು, ಯಾವ ರೀತಿ ಹೋರಾಟ ಮಾಡಬೇಕೆಂಬುದು ತಿಳಿದಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಉತ್ತರ ಪ್ರದೇಶದ ಕಾಂಗ್ರೆಸ್ ನಿಗದಿ ಮಾಡಿದ್ದ ಧರಣಿಯನ್ನು ಮುಂದೂಡಿದೆ. ಅದೇ ರೀತಿ ಇಲ್ಲೂ ಕಾಂಗ್ರೆಸ್ ಮಾಡಬೇಕಿತ್ತು ಎಂದು ಹೇಳಿದರು.
ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿ, ನೋಟಿಸ್ ಜಾರಿ ಮಾಡಿ ಕ್ರಮ ವಹಿಸಿದೆ. ಬಂಧಿಸುವುದು, ಲಾಠಿ ಚಾರ್ಜ್ ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಇಂದಿನ ಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ. ಇದು ಅಂತರರಾಜ್ಯ ಸಮಸ್ಯೆಯಾಗಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಡಿಎಂಕೆ ಪಕ್ಷ ಯಾರೊಂದಿಗೆ ಸರ್ಕಾರ ರಚಿಸಿದೆ ಎಂದು ನೋಡಬೇಕು. ಅವರ ಹೈಕಮಾಂಡ್ ಜೊತೆಯೇ ಅವರು ಚರ್ಚೆ ಮಾಡಬಹುದಿತ್ತು ತಿರುಗೇಟು ನೀಡಿದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ
ಮಕ್ಕಳ ಚಿಕಿತ್ಸೆ
ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಶೇ.30 ರಷ್ಟು ಹಾಸಿಗೆಗಳನ್ನು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯನ್ನು ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಎಲ್ಲಾ ಶಾಲೆಗಳಲ್ಲಿ 15 ದಿನಕ್ಕೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 4.89 ಕೋಟಿ ಜನರಿಗೆ ಮೊದಲ ಡೋಸ್, 3.98 ಕೋಟಿ ಜನರು ಎರಡನೇ ಡೋಸ್ ಪಡೆದಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಒಟ್ಟು 81.5% ಮಂದಿಗೆ ಎರಡೂ ಡೋಸ್ ನೀಡಲಾಗಿದೆ ಎಂದರು.
ಹೈಕೋರ್ಟ್ ಪ್ರಶ್ನೆ ಕುರಿತು ಪಬ್ಲಿಕ್ ಟಿವಿಯ ವರದಿಗಾರರಿಗೆ, ಡಿ.ಕೆ.ಶಿವಕುಮಾರ್ ಮೌನದಲ್ಲೇ ಪ್ರತಿಕ್ರಿಯಿಸಿದ್ದಾರೆ. ಕೇವಲ ಕೈ ಸನ್ನೆಯನ್ನಷ್ಟೇ ಮಾಡಿದ್ದಾರೆ. ಕೈ ಮುಗಿದು ಮುಖದ ಮೇಲೆ ಕೈಯನ್ನು ಇಟ್ಟಿದ್ದಾರೆ.
ನಿಮಗೆ ಜ್ವರ ಬಂದಿದೆ, ಅದಕ್ಕೆ ಮೌನ ವಹಿಸಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ, ಏನು ಬೇಕಾದರೂ ಹೇಳಿಕೊಳ್ಳಲಿ ಎಂಬಂತೆ ಕೈ ಸನ್ನೆ ಮೂಲಕವೇ ಪ್ರತಿಕ್ರಿಯಿಸಿ ಮುಂದಕ್ಕೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪಾದಯಾತ್ರೆ ಜೊತೆಗೆ ಮೌನಾಚರಣೆಯನ್ನೂ ಮಾಡುತ್ತಿದ್ದಾರೆ. ಇದನ್ನೂ ಓದಿ: ಪಾದಯಾತ್ರೆಗೆ ಹೊರಟಿಲ್ಲ, ಅರೆಸ್ಟ್ ಮಾಡ್ಲಿ ಅಂತ ಕಾಯುತ್ತಿದ್ದಾರೆ: ನಾರಾಯಣ ಗೌಡ
ಮೇಕೆದಾಟು ಪಾದಯಾತ್ರೆಗೆ ಜ.9ರಂದು ಚಾಲನೆ ಸಿಕ್ಕಿದೆ. ಪಾದಯಾತ್ರೆ ಮೂರು ದಿನ ಪೂರೈಸಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಕಾಂಗ್ರೆಸ್ ನಾಯಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಇವರು ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡಪರಿಣಾಮದ ಬಗ್ಗೆ ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು. ಈಗ ನಮ್ಮ ಆತಂಕ ನಿಜವಾಗುತ್ತಿದೆ. ಕೊರೊನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿರುವುದಲ್ಲದೇ ವಿತಂಡ ವಾದ ಮಂಡಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ, ಮನವಿ ಮಾಡುತ್ತೇನೆ. ನಿಮ್ಮ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ, ಪಾದಯಾತ್ರೆಯನ್ನು ಕೈಬಿಡಿ ಎಂದು ಮನವಿ ಮಾಡಿದ್ದಾರೆ.