Tag: Congress Protest

  • ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ಬೆಂಗಳೂರು: ಶುಕ್ರವಾರ (ಆ.8) ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಈ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ (Bengaluru Traffic) ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

    ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅವರು ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ದಾಖಲೆ ಬಿಡುಗಡೆ ಮಾಡಲಿದ್ದಾರೆ. ಈ ಹಿನ್ನೆಲೆ ಕೆಲವೆಡೆ ಸಂಚಾರ್ ಬಂದ್ ಮಾಡಿ, ಅವುಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ.ಇದನ್ನೂ ಓದಿ: ಕಂತೆ ಕಂತೆ ಹಣ ಕೇಸ್ – ನ್ಯಾ.ಯಶವಂತ್ ವರ್ಮಾ ಅರ್ಜಿ ವಜಾ

    ಎಲ್ಲೆಲ್ಲಿ ಸಂಚಾರ ಬಂದ್ ಹಾಗೂ ಪರ್ಯಾಯ ಮಾರ್ಗಗಳು ಯಾವವು?
    – ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್‌ನಿಂದ ಆನಂದ್ ರಾವ್ ಫ್ಲೈಓವರ್, ಒಲ್ಡ್ ಜೆಡಿಎಸ್ ರಸ್ತೆ, ಶೇಷಾದ್ರಿಪುರ ರಸ್ತೆಯಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಇವುಗಳ ಬದಲು ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕರ್, ರೇಸ್ ಕೋರ್ಸ್ ಫ್ಲೈಓವರ್ ಕಡೆಯಿಂದ ಪ್ರಯಾಣಿಸಬಹುದು.

    – ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಮೂಲಕ ಹೋಗಬಹುದು

    – ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚಾರ ನಿಷೇಧಿಸಲಾಗಿದ್ದು, ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಸಂಚರಿಸಲು ಸೂಚಿಸಲಾಗಿದೆ.

    – ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್‌ಕಡೆಯಿಂದ ಫ್ರೀಡಂಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್‌ನಿಂದ ಬಲ ತಿರುವು ಪಡೆದು ಸಾಗರ ಜಂಕ್ಷನ್‌ಕಡೆಗೆ ಸಂಚರಿಸಬಹುದು.

    – ಮೌರ್ಯ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂಪಾರ್ಕ್‌ಗೆ ತೆರಳುವವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.ಇದನ್ನೂ ಓದಿ: ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್

  • ಮುಂದುವರಿದ ಕಾಂಗ್ರೆಸ್ ಗದ್ದಲ – ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

    ಮುಂದುವರಿದ ಕಾಂಗ್ರೆಸ್ ಗದ್ದಲ – ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

    ಬೆಂಗಳೂರು: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಗಿದೆ.

    ಕಾಂಗ್ರೆಸ್ ಗದ್ದಲದ ನಡೆವೆಯೂ ಇವತ್ತು ಎರಡು ಬಿಲ್‍ಗಳನ್ನು ಮಂಡಿಸಿದ ಸರ್ಕಾರ ಆಂಗೀಕಾರವನ್ನು ಪಡೆದುಕೊಂಡಿದೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ರು. ಬಳಿಕ ವಿಧಾನಸಭೆ ಕಲಾಪವನ್ನು ಮಾರ್ಚ್ ನಾಲ್ಕಕ್ಕೆ ಮುಂದೂಡಲಾಯಿತು. ಸಿಎಂ ಮಾತನಾಡುವ ವೇಳೆಯೂ ಕಾಂಗ್ರೆಸ್ ಸದಸ್ಯರು ಅಡ್ಡಿಮಾಡಲು ಪ್ರಯತ್ನಿಸಿದ್ರು. ಓ… ಓ.. ದೇಶದ್ರೋಹಿ ಯಾರಪ್ಪಾ..? ಈಶ್ವರಪ್ಪ, ಈಶ್ವರಪ್ಪ ಎಂದು ಕೂಗುತ್ತಾ ಜೆ.ಪಿ.ನಡ್ಡಾ ಹೇಳಿಕೆಯ ಬಿತ್ತಿ ಪತ್ರ ತೋರಿಸಿ ಆಕ್ರೋಶ ಹೊರಹಾಕಿದರು. ಈ ವೇಳೆ ಸಿಟ್ಟಾದ ಸಿಎಂ, ನಿಮಗೆ ವಿರೋಧ ಪಕ್ಷದಲ್ಲಿ ಕೂರಲು ಅರ್ಹತೆ ಇಲ್ಲ. ಜವಾಬ್ದಾರಿ ಮರೆತು ಗದ್ದಲ ಮಾಡುತ್ತಿರುವುದು ನೋವಿನ ಸಂಗತಿ. ಕಾಂಗ್ರೆಸ್ ಧರಣಿಯಿಂದ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಶಾಂತಿ ಭಂಗ ಮಾಡುವ ನಿಮ್ಮನ್ನು ಜನರು ಎಂದೆಂದಿಗೂ ಕ್ಷಮಿಸುವುದಿಲ್ಲ ಅಂತ ಗರಂ ಆದರು. ಇದನ್ನೂ ಓದಿ: ಡಬಲ್ ಆಯ್ತು ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳ: ವಿಧಾನಸಭೆಯಲ್ಲಿ ಬಿಲ್ ಪಾಸ್

    ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಕಾಂಗ್ರೆಸ್ ಧರಣಿಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಆರಂಭದ ಎರಡು ದಿನ ಮಾತ್ರ ಕಲಾಪ ನಡೆಯಿತು. ಉಳಿದ ಐದು ದಿನ ನಿಮ್ಮದೇ ಗದ್ದಲ ಆಗಿದೆ. ಜನ ಈ ನಿಮ್ಮ ಗಲಾಟೆ ನೋಡುತ್ತಾ ಕೂರಲು ಸಾಧ್ಯವಿಲ್ಲ. ಇನ್ನು ಮೂರು ದಿನ ಸದನ ಕಲಾಪ ನಡೆಯಲು ಸಹಕರಿಸಬೇಕು. ಇಲ್ಲದಿದ್ರೆ ಸದನವನ್ನು ಮುಂದೂಡುತ್ತೇನೆ. ಸದನ ಮೌಲ್ಯ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಸದನದ ಹೊರಗೆ ಏನಾದ್ರೂ ಮಾಡಿಕೊಳ್ಳಿ. ಸದನದ ಮೌಲ್ಯ ಕಾಪಾಡಬೇಕು ಎಂದು ಪ್ರತಿಭಟನಾ ನಿರತ ಕಾಂಗ್ರೆಸ್ ಸದಸ್ಯರಿಗೆ ಸ್ಪೀಕರ್ ಮನವಿ ಮಾಡಿದ್ರು. ಆದರೂ ಗದ್ದಲ ಮುಂದುವರಿದಾಗ ವಿಧಾನಸಭೆ ಕಲಾಪವನ್ನು ಮಾರ್ಚ್ 4ಕ್ಕೆ ಮೂಂದೂಡಿಕೆ ಮಾಡಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶವಯಾತ್ರೆಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ: ಸಿದ್ದರಾಮಯ್ಯ