ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ (Congress Spokesperson) ಕೌಸ್ತವ್ ಬಾಗ್ಚಿ (Kaustav Bagchi) ಅವರನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆ ಶುಕ್ರವಾರ ಕೌಸ್ತವ್ ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಸಾಗರ್ದಿಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದ್ದು, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಾಗ್ಚಿ ಟೀಕಿಸಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಮೋದಿ ವಿರೋಧಿ ಬರಹ – 2 ತಿಂಗಳಲ್ಲಿ 4ನೇ ಘಟನೆ
ನವದೆಹಲಿ: ಮೋದಿ ಅಂದ್ರೆ ಮಸೂದ್ ಅಜರ್, ಒಸಾಮ ಬಿನ್ ಲಾಡೆನ್, ದಾವೂದ್ ಇಬ್ರಾಹಿಂ, ಐಎಸ್‍ಐ ಎಂದು ಕಾಂಗ್ರೆಸ್ ಹೊಸ ವ್ಯಾಖ್ಯಾನವನ್ನು ನೀಡಿದೆ.
ಖಾಸಗಿ ಸುದ್ದಿವಾಹಿನಿ ನಡೆಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ವಿವಾದಾತ್ಮಕ ವ್ಯಾಖ್ಯಾನವನ್ನು ನೀಡಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಗ್ರರ ಜೊತೆಗೆ ಹೊಲಿಕೆ ಮಾಡಿದ್ದು ಅಪರಾಧವಾಗಿದೆ. ಪವನ್ ಖೆರಾ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ವಾದವನ್ನು ಮುಂದುವರಿಸಿದ ಸಂಬಿತ್ ಪಾತ್ರಾ ಅವರು, ಪ್ರಧಾನಿ ನರೇಂದ್ರ ಮೋದಿ ಅಂದ್ರೆ ಮಸೂದ್ ಅಜರ್, ಒಸಾಮ ಬಿನ್ ಲಾಡೆನ್, ದಾವೂದ್ ಇಬ್ರಾಹಿಂ, ಐಎಸ್‍ಐ ಹೌದಾ ಎಂದು ಕಾರ್ಯಕ್ರಮ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಪ್ರಶ್ನಿಸಿದರು. ತಕ್ಷಣವೇ ಸಭಿಕರು ಅಲ್ಲ..ಅಲ್ಲ.. ಎಂದು ಧ್ವನಿಗೂಡಿಸಿದರು. ಹಾಗಾದರೆ ಈ ಹೇಳಿಕೆಯನ್ನು ಖಂಡಿಸುವುದಾದರೆ ಒಮ್ಮೆ ಎದ್ದು ನಿಂತು ‘ಶೇಮ್ ಶೇಮ್’ ಅಂತ ಹೇಳಿ ಎಂದು ಸಂಬಿತ್ ಪಾತ್ರಾ ಮನವಿ ಮಾಡಿದರು. ಇದನ್ನು ಓದಿ: ಅಂದು ಚಾಯ್‍ವಾಲಾ, ಇಂದು ನೀಚ್ ಅಂದ್ರು: ಬಿಜೆಪಿ ಭರ್ಜರಿ ಗೆಲುವಿಗೆ ಕಾರಣವಾಗುತ್ತಾ?
Congress Spokesperson Pawan Khera says that MODI stands for Masood, Osama, Dawood and ISI.
ಸಂಬಿತ್ ಪಾತ್ರಾ ಅವರು ಹೇಳುತ್ತಿದ್ದಂತೆ ಅನೇಕ ಸಭಿಕರು ಎದ್ದು ನಿಂತು ‘ಶೇಮ್ ಶೇಮ್’ ಎಂದು ಆಕ್ರೋಶ ಹೊರ ಹಾಕಿದರು. ಜನರ ಗದ್ದಲದಲ್ಲಿಯೇ ವಾಗ್ದಾಳಿ ನಡೆಸಿದ ಸಂಬಿತ್ ಪಾತ್ರಾ ಅವರು, ದೇಶದ ಒಬ್ಬ ಪ್ರಧಾನಿಯನ್ನು ಉಗ್ರರ ಜೊತೆಗೆ ಹೋಲಿಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಈ ಹೇಳಿಕೆಗೆ ಸಹೋದರ ಪವನ್ ಖೆರಾ ಅವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.
ಆದರೆ ಪವನ್ ಖೇರಾ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಲು ಹಿಂದೇಟು ಹಾಕಿದರು. ಬಿಜೆಪಿ ನಾಯಕರು ಪವನ್ ಖೇರಾ ಹೇಳಿಕೆಯನ್ನು ಖಂಡಿಸಿದ್ದು, ಕ್ಷಮೆಗೆ ಆಗ್ರಹಿಸಿದ್ದಾರೆ. ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕಪಡಿಸುತ್ತಿದ್ದಾರೆ.
ಪಾಠ ಕಲಿಯದ ಕಾಂಗ್ರೆಸ್:
ಚುನಾವಣೆಯ ಸಮಯದಲ್ಲಿ ಮೋದಿ ವಿರುದ್ಧ ವೈಯಕ್ತಿಕವಾಗಿ ದಾಳಿ ಮಾಡಿದಾಗ ಆ ದಾಳಿಗಳು ಮೋದಿ ಪರ ಅಲೆಯನ್ನು ಸೃಷ್ಟಿ ಮಾಡಿದ ಉದಾಹರಣೆಗಳು ಸಾಕಷ್ಟಿದೆ. ಆದರೂ ತಾವು ಮಾಡಿದ ತಪ್ಪಿನಿಂದ ಪಾಠ ಕಲಿಯದ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ಮೋದಿಯನ್ನು ಲೇವಡಿ ಮಾಡಿದ್ದಾರೆ.
2007 ರಲ್ಲಿ ಸೋನಿಯಾ ಗಾಂಧಿ ಮೌತ್ ಕಾ ಸೌದ್ಗಾರ್ (ಸಾವಿನ ಏಜೆಂಟ್) ಎಂದು ಮೋದಿಯನ್ನು ಟೀಕಿಸಿದ್ರು. ಇದನ್ನೇ ಬಳಸಿಕೊಂಡಿದ್ದ ಮೋದಿ ಅಂದು ಗುಜರಾತ್ ವಿಧಾನಸಭೆ ಚುನಾವಣೆ ಹಿಂದೂ ಮತಗಳನ್ನು ಧ್ರುವೀಕರಣ ಮಾಡಿಕೊಂಡು ಗೆಲವು ಸಾಧಿಸಿ ಸಿಎಂ ಆಗಿದ್ದರು.
2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಯೂಥ್ ಕಾಂಗ್ರೆಸ್ ರೀತಿಯಲ್ಲೇ ಮೋದಿಯನ್ನ ‘ಚಾಯ್ ವಾಲಾ’ ಅಂತಾ ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಅಂತಾ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಯಿತು.
2017ರ ಗುಜರಾತ್ ಚುನವಣೆಯ ಸಮಯದಲ್ಲಿ ತಾನೊಬ್ಬ ಶಿವಭಕ್ತ ಎನ್ನುತ್ತಿರುವ ಕಾಂಗ್ರೆಸ್‍ನವರಿಗೆ ಈಗ ಬಾಬಾ ಸಾಹೇಬ್‍ಗಿಂತ ಬಾಬಾ ಬೋಲೆ ಅಂದ್ರೆ ಶಿವನ ನೆನಪು ಆಗುತ್ತಿದೆ ಎಂದು ಹೇಳಿ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡುವ ಯತ್ನದಲ್ಲಿ ಮೋದಿಯೊಬ್ಬ `ನೀಚ ಮನುಷ್ಯ’, ಅವರಿಗೆ ಮೌಲ್ಯಗಳೇ ಇಲ್ಲ. ಅಂಥವರ ಬಗ್ಗೆ ಏನು ಹೇಳಲಿಕ್ಕೆ ಆಗುತ್ತೆ ಎಂದು ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ನಾಲಿಗೆಯನ್ನು ಹರಿಯಬಿಟ್ಟಿದ್ದರು.
ಈ ಹೇಳಿಕೆಗೆ ಸೂರತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇದು `ಗುಜರಾತ್ ಜನರಿಗೆ ಮಾಡಿದ ಅವಮಾನ’ ಎಂದು ಹೇಳಿ ತಿರುಗೇಟು ನೀಡಿದ್ದರು. ಅಯ್ಯರ್ ಹೇಳಿಕೆಯನ್ನು ಗುಜರಾತ್ ಬಿಜೆಪಿ ತನ್ನ ಪ್ರಚಾರದ ವೇಳೆ ಬಳಸಿಕೊಂಡಿತ್ತು.