Tag: congresss

  • ಎಸಿಗಳು, ತಹಶೀಲ್ದಾರರು ಕಡ್ಡಾಯವಾಗಿ ಜನರಿಗೆ ಸಿಗಬೇಕು – ಕೃಷ್ಣ ಬೈರೇಗೌಡ ಫುಲ್ ಕ್ಲಾಸ್

    ಎಸಿಗಳು, ತಹಶೀಲ್ದಾರರು ಕಡ್ಡಾಯವಾಗಿ ಜನರಿಗೆ ಸಿಗಬೇಕು – ಕೃಷ್ಣ ಬೈರೇಗೌಡ ಫುಲ್ ಕ್ಲಾಸ್

    – ದಪ್ಪ ಚರ್ಮದವರನ್ನ ಹೇಗೆ ದಾರಿಗೆ ತರೋದು ಗೊತ್ತಿದೆ; ಬಿಸಿ ಮುಟ್ಟಿಸಿದ ಸಚಿವ

    ಬೆಂಗಳೂರು: ಎಸಿಗಳು, ತಹಶೀಲ್ದಾರರು (Tahsildar) ಕಡ್ಡಾಯವಾಗಿ ಇನ್ನು ಮುಂದೆ ಜನರಿಗೆ ಸಿಗಬೇಕು. ಜನರ ಆಶಯಗಳ ವಿರುದ್ಧ ಅಧಿಕಾರಿಗಳು ನಡೆದುಕೊಂಡ್ರೆ ಅಂತಹ ಅಧಿಕಾರಿಗಳ ಮೇಲೆ ಕೇಸ್ ದಾಖಲು ಮಾಡೋದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಎಚ್ಚರಿಕೆ ನೀಡಿದ್ದಾರೆ.

    ಭೂ ಸುರಕ್ಷಾ ಯೋಜನೆಯಲ್ಲಿ ಹಿಂದೆ ಬಿದ್ದಿದ್ದ ಬೆಂಗಳೂರು ನಗರ (Bengaluru City) ಮತ್ತು ಬೆಂಗಳೂರು ಗ್ರಾಮಾಂತರ (Bengaluru Rural)  ಜಿಲ್ಲೆಯ ಎಸಿಗಳು, ತಹಶೀಲ್ದಾರರು, ಶಿರಸ್ತೇದಾರರ ಸಭೆಯನ್ನು ಶುಕ್ರವಾರ ಸಚಿವರು ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವರು ಜನರ ಆಶಯದಂತೆ ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಯೋಜನೆ ನಿಗದಿತ ಸಮಯಕ್ಕೆ ಪೂರ್ಣಗೊಳಿಸದ ಗುತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಿ – ಪ್ರಿಯಾಂಕ್‌ ಖರ್ಗೆ ಸೂಚನೆ

    ಆನ್‌ಲೈನ್ ಸರ್ಟಿಫಿಕೇಶನ್ ವಿತರಣೆ ವಿಚಾರವನ್ನು ತಹಶೀಲ್ದಾರರು ಉದ್ದೇಶಪೂರ್ವಕವಾಗಿ ಬ್ಲಾಕ್ ಮಾಡಿದ್ದಾರೆ. ರಾಜ್ಯದಾದ್ಯಂತ 21 ಲಕ್ಷ ಪುಟ ವಿತರಣೆ ಆಗಿದ್ದರೆ, ಬೆಂಗಳೂರು ನಗರ-ಗ್ರಾಮಾಂತರದಲ್ಲಿ ಕೇವಲ 27 ಪುಟ ವಿತರಣೆ ಆಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

    ಬೆಂಗಳೂರು ನಗರ-ಗ್ರಾಮೀಣ ಜಿಲ್ಲೆಯ ತಹಶೀಲ್ದಾರರು ಕಚೇರಿಗೆ ಹೋಗಲ್ಲ. ನಿಮಗೆ ಬೇರೆಲ್ಲಿ ಕಚೇರಿ ಇದೆ ಎಂಬುದೇ ನಮಗೆ ಗೊತ್ತಿಲ್ಲ. ಇಲ್ಲಿವರೆಗೆ ನಾವೂ ಸಹಿಸಿಕೊಂಡಿದ್ದೇನೆ. ಇನ್ನೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಧಿಕಾರಿಗಳು ದಾರಿಗೆ ಬರದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

    ತಮ್ಮ ಆಫೀಸಲ್ಲಿ ಏನ್ ನಡೀತಾ ಇದೆ ಅಂತ ತಹಶೀಲ್ದಾರ್‌ಗಳಿಗೇ ಗೊತ್ತಿಲ್ಲ ಅಂದ್ರೆ ಏನರ್ಥ? ಕೆಲಸ ಮಾಡ್ರಿ ಅಂದ್ರೆ ನೆಪ ಹೇಳ್ತೀರಲ್ರಿ, ನಿಮಗೆ ನಾಚಿಕೆ ಆಗಲ್ವ? ಎಂದು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಇದು ಸಿಎಂ ಅಳಿವು-ಉಳಿವಿನ ಸಮಾವೇಶ, ಜನರ ಸಾವಿನ ಮೇಲೆ ಮೈಸೂರು ಸಾಧನಾ ಸಮಾವೇಶ – ಆರ್.ಅಶೋಕ್ ಲೇವಡಿ

    ಎಸಿಗಳು, ತಹಶೀಲ್ದಾರರು ಕಡ್ಡಾಯವಾಗಿ ಜನರ ಕೈಗೆ ಸಿಗಬೇಕು. ಅವರ ಸಮಸ್ಯೆ ಪರಿಹಾರ ಮಾಡಬೇಕು. ಇದನ್ನ ಕಡ್ಡಾಯವಾಗಿ ಮಾಡಬೇಕು. ಆಗೋ ಕೆಲಸ ಮಾಡಬೇಕು. ಆಗದೇ ಇರೋದಕ್ಕೆ ಪತ್ರ ಕೊಡಬೇಕು. ಕಚೇರಿಯಲ್ಲಿ ಎಂಟ್ರಿ ಇಲ್ಲದೆ ಹೊರಗೆ ಹೋದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಡಲಾಗಿದೆ ಎಂದಿದ್ದಾರೆ

    ಇದಕ್ಕೂ ಬಗ್ಗಿಲ್ಲ ಅಂದರೆ ಬೇರೆ ಮಾರ್ಗದಲ್ಲಿ ನಾವು ಸುಧಾರಣೆ ಮಾಡ್ತೀವಿ. ದಪ್ಪ ಚರ್ಮದವರನ್ನು ಹೇಗೆ ದಾರಿಗೆ ತರೋದು ಗೊತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಸಾರ್ವಜನಿಕರ ವಿರುದ್ಧ ಕೆಲಸ ಮಾಡಿದ್ರೆ ಅಂತ ಅಧಿಕಾರಿಗಳ ಮೇಲೆ ಕೇಸ್ ಹಾಕಲಾಗುವುದು. ಅಲ್ಲದೇ ಭೂಸುರಕ್ಷಾ ಯೋಜನೆಗೆ ವೇಗ ಕೊಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ

    ಇನ್ನು ಬಿಬಿಎಂಪಿ ವ್ಯಾಪ್ತಿಯ ನಿವೇಶನಗಳಿಗೆ ಬಿ ಖಾತೆಯಿಂದ ಎ ಖಾತೆಗೆ ದಾಖಲಾತಿ ಕೊಡೋ ವಿಚಾರಕ್ಕೆ ಪ್ರತಿಕ್ರಿಯಿಸಿದಅವರು, ರೂಲ್ಸ್ ಡ್ರಾಫ್ಸ್ ಆಗಿದೆ. ಕೂಡಲೇ ಜಾರಿ ಮಾಡಬೇಕು ಅನ್ನೋ ಉದ್ದೇಶ ಇದೆ. ಇದರಿಂದ ಎಷ್ಟೋ ಜನರಿಗೆ ಅನುಕೂಲ ಆಗಲಿದೆ. ಕೆಲವು ಕಾನೂನು ತಿದ್ದುಪಡಿ ಆಗಬೇಕು. ಆದಷ್ಟು ಬೇಗ ಕಾನೂನು ತಿದ್ದುಪಡಿ ಮಾಡಿ ಜಾರಿ ಮಾಡ್ತೀವಿ ಎಂದು ತಿಳಿಸಿದ್ದಾರೆ.

  • ಲೋಕ ಸಮರದಲ್ಲಿ ಒಕ್ಕಲಿಗ ಜಟಾಪಟಿ – ಏನಿದು ಫೋನ್‌ ಟ್ಯಾಪ್‌ ಕೇಸ್‌?

    ಲೋಕ ಸಮರದಲ್ಲಿ ಒಕ್ಕಲಿಗ ಜಟಾಪಟಿ – ಏನಿದು ಫೋನ್‌ ಟ್ಯಾಪ್‌ ಕೇಸ್‌?

    ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಅಖಾಡದಲ್ಲೀಗ ಒಕ್ಕಲಿಗ ಜಟಾಪಟಿ ಜೋರಾಗಿದೆ. ಒಕ್ಕಲಿಗ ಸಮುದಾಯದ (Okkaliga Community) ಓಲೈಕೆಗಾಗಿ ಕಾಂಗ್ರೆಸ್-ಜೆಡಿಎಸ್ (Congress-JDS) ನಡುವೆ  ದೊಡ್ಡ ಸಂಘರ್ಷವೇ ನಡೆದಿದೆ.

    ಆದಿಚುಂಚನಗಿರಿ ಶ್ರೀಗಳನ್ನು (Adichunchanagiri) ದೋಸ್ತಿ ನಾಯಕರು ಭೇಟಿ ಮಾಡಿದ ಬೆನ್ನಲ್ಲೇ, ಜೆಡಿಎಸ್-ಬಿಜೆಪಿ ಒಕ್ಕಲಿಗರ ವಿರೋಧಿ ಎಂದು ಬಿಂಬಿಸಲು ಕಾಂಗ್ರೆಸ್ ಹೊಸ ಹೊಸ ದಾಳ ಉರುಳಿಸ್ತಿದೆ. ಇದರ ಭಾಗವಾಗಿ ಹಳೆಯ ಘಟನೆಗಳನ್ನು ಕೆದಕಿ ದೇವೇಗೌಡರು ಮತ್ತು ಕುಮಾರಸ್ವಾಮಿ (Kumaraswamy) ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತು ಸಚಿವ ಚಲುವರಾಯಸ್ವಾಮಿ (Chaluvaraya Swamy) ಮುಂದಾಗಿದ್ದಾರೆ.  ಇದನ್ನೂ ಓದಿ: ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌

     

    ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಟ್ಯಾಪ್ ಮಾಡಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗೆ ಇನ್ನಿಲ್ಲದ ಕಿರುಕುಳ ಕೊಟ್ಟರು. ಆದಿಚುಂಚನಗಿರಿಗೆ ಪರ್ಯಾಯವಾಗಿ ಎರಡನೇ ಮಠ ಮಾಡಿದರು ಅಂತೆಲ್ಲಾ ದೂರಿದ್ದಾರೆ. 2004ರಲ್ಲಿ ಎಸ್‌ಎಂ ಕೃಷ್ಣ ಎರಡನೇ ಬಾರಿ ಸಿಎಂ ಆಗುವುದನ್ನು ದೇವೇಗೌಡರು ತಪ್ಪಿಸಿದ್ರು ಎಂದು ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಆರ್ಟಿಕಲ್ 370 ಸಹವಾಸ ಬೇಡ: ಕಾಂಗ್ರೆಸ್‍ಗೆ ಅಮಿತ್ ಶಾ ಎಚ್ಚರಿಕೆ

    ಈ ಆರೋಪಕ್ಕೆ ಅಹುದಹುದು. ಅದೆಲ್ಲಾ ಡಾಕ್ಯೂಮೆಂಟ್. ನೆನಪಿಸಿಕೊಂಡ್ರೆ ನೋವಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನಕ್ಕೆ ಕಾರಣವಾಗಿದೆ. ಅಂದ ಹಾಗೇ, 2019ರ ಲೋಕಸಭೆ ಚುನಾವಣೆಯಲ್ಲೂ ಫೋನ್ ಟ್ಯಾಪಿಂಗ್ ವಿಚಾರ ಸದ್ದು ಮಾಡಿತ್ತು.

     

     ಏನಿದು ಫೋನ್‌ ಟ್ಯಾಪಿಂಗ್‌ ಕೇಸ್‌?
    ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಈ ಪ್ರಕರಣ ನಡೆದಿತ್ತು. ಸರ್ಕಾರ ಪತನ ವೇಳೆ ಶ್ರೀಗಂಧ ಚೋರರ ಕೇಸಲ್ಲಿ ಸ್ವಾಮೀಜಿ ಫೋನ್ ಕದ್ದಾಲಿಕೆ ಮಾಡಲಾಗಿದೆ ಆರೋಪ ಕೇಳಿ ಬಂದಿತ್ತು.

    ಕುಮಾರಸ್ವಾಮಿ ವಿರುದ್ಧ ಯಾವುದೇ ಕೇಸ್, ತನಿಖೆ ಆಗಿರಲಿಲ್ಲ. ಆದರೆ ಅಲೋಕ್ ಕುಮಾರ್ ವಿರುದ್ಧ ಭಾಸ್ಕರ್‌ರಾವ್ ಕೇಸ್ ದಾಖಲಿಸಿದ್ದರು. ಕೊನೆಗೆ ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ, ಬಿ-ರಿಪೋರ್ಟ್ ಸಲ್ಲಿಕೆಯಾಗಿತ್ತು. ಆದರೆ ಭಾಸ್ಕರ್‌ ರಾವ್‌ ಬಿ ರಿಪೋರ್ಟ್‌ ಅನ್ನು ಪ್ರಶ್ನಿಸಿದ್ದರು. ಹೀಗಾಗಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರ್ಟ್‌ ಸಿಬಿಐಗೆ ನಿರ್ದೇಶನ ನೀಡಿತ್ತು. ಸಿಬಿಐನಿಂದ ಮರುತನಿಖೆ ನಡೆದಿದ್ದು ಇನ್ನೂ ಅಂತಿಮ ವರದಿ ಸಲ್ಲಿಸಿಲ್ಲ.

     

  • ಎಸ್‌ಟಿಎಸ್‌ಗೆ ಕೈ ಗಾಳ, ಆಪರೇಷನ್‌ ಹಸ್ತಕ್ಕೆ ಕಾರಣ ಅಮಿತ್‌ ಶಾ! – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಎಸ್‌ಟಿಎಸ್‌ಗೆ ಕೈ ಗಾಳ, ಆಪರೇಷನ್‌ ಹಸ್ತಕ್ಕೆ ಕಾರಣ ಅಮಿತ್‌ ಶಾ! – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಬೆಂಗಳೂರು: ಶಾಸಕ ಎಸ್.ಟಿ.ಸೋಮಶೇಖರ್ (ST Somashekar) ಹೆಸರು ಆಪರೇಷನ್ ಹಸ್ತದಲ್ಲಿ (Operation Hasta) ಜೋರಾಗಿ ಕೇಳಿ ಬರುತ್ತಿದೆ. ಆದರೆ ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ ಎನ್ನಲಾಗುತ್ತಿದೆ. ಈ ಬೆಳವಣಿಗೆಗೆ ಅಮಿತ್ ಶಾ (Amit Shah) ಕಾರಣ ಎಂಬುದೇ ಈಗ ಬಂದಿರುವ ಅಚ್ಚರಿಯ ವಿಚಾರ.

    ಹೌದು. ಯಶವಂತಪುರ ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಒಳಗೊಳಗೆ ವಿರೋಧಿಸಲು ಎಸ್.ಟಿ.ಸೋಮಶೇಖರ್ ಹಾಗೂ ಅಮಿತ್ ಶಾ ((Amit Shah) ನಡುವಿನ ಬಾಂಧವ್ಯ ಕಾರಣ ಎನ್ನಲಾಗಿದೆ. ಇಬ್ಬರು ಕೂಡ ಸಹಕಾರಿ ಕ್ಷೇತ್ರದಿಂದ ಬಂದವರಾಗಿರುವ ಕಾರಣ ಉತ್ತಮ ಬಾಂಧವ್ಯ ಏರ್ಪಟ್ಟಿದೆ.

     

    ಅಮಿತ್ ಶಾ ಜೊತೆ ಸೋಮಶೇಖರ್ ಒನ್ ಟು ಒನ್ ಸಂಪರ್ಕ ರಾಜ್ಯ ಬಿಜೆಪಿಯ ಕೆಲ ನಾಯಕರ ಕಣ್ಣು ಕೆಂಪಾಗಿಸಿತ್ತು. ಅದೇ ಕಾರಣಕ್ಕೆ ಸ್ಥಳಿಯ ಬಿಜೆಪಿ ನಾಯಕರ ಬಂಡಾಯಕ್ಕೆ ಕೆಲವು ನಾಯಕರು ತೆರೆಮರೆಯಲ್ಲಿ ಸಹಕಾರ ಕೊಡುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮೇರಾ ಬಿಲ್ ಮೇರಾ ಅಧಿಕಾರ್ – ಬಿಲ್ ಕೇಳಿ 1 ಕೋಟಿ ರೂ. ಬಹುಮಾನ ಗೆಲ್ಲಿ

    ಇದನ್ನೇ ಶಾಸಕ ಎಸ್.ಟಿ.ಸೋಮಶೇಖರ್ ನೇರವಾಗಿ ಅಮಿತ್ ಶಾ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ಸೋಮಶೇಖರ್ ಆತಂಕಕ್ಕೆ ತೆರೆ ಎಳೆಯಲು ಖುದ್ದು ಅಮಿತ್ ಶಾ ಅವರೇ ದೆಹಲಿಗೆ ಬುಲಾವ್ ನೀಡಿದ್ದು ಸೆಪ್ಟೆಂಬರ್ 2ರಂದು ಎಲ್ಲಾ ಗೊಂದಲ ಪರಿಹರಿಸಲಿದ್ದಾರೆ ಎನ್ನಲಾಗುತ್ತಿದೆ.

    ಎಸ್.ಟಿ.ಸೋಮಶೇಖರ್‌ ಅವರಿಗೆ ದೆಹಲಿಗೆ ಬರುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬುಲಾವ್ ಕೊಟ್ಟಿದ್ದು, ನಿರ್ಮಲ್ ಕುಮಾರ್ ಸುರಾನ ಮೂಲಕ ದೆಹಲಿಗೆ ಕರೆತರಲು ಸೂಚಿಸಿದ್ದಾರೆ. ಆಗಸ್ಟ್ 25 ರಂದು ದೆಹಲಿಗೆ ಎಸ್.ಟಿ.ಸೋಮಶೇಖರ್ ಭೇಟಿ ನೀಡಲಿದ್ದಾರೆ.

     

    ಮೊದಲು ಬಿ.ಎಲ್ ಸಂತೋಷ್ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಬಳಿಕ ಸೆಪ್ಟೆಂಬರ್ ಮೊದಲ ವಾರದಲ್ಲಿ ಜೆಪಿ ನಡ್ಡಾ ಅಥವಾ ಅಮಿತ್ ಶಾ ಭೇಟಿಯಾಗುವ ಸಾಧ್ಯತೆ ಇದೆ. ಉಳಿದ ವಲಸಿಗರ ಜತೆಗೂ ವರಿಷ್ಠರೇ ನೇರ ಮಾತುಕತೆ ನಡೆಸುವ ಸಂಭವ ಇದೆ. ಒಟ್ಟಿನಲ್ಲಿ ಹೈಕಮಾಂಡ್ ಜತೆಗಿನ ಸೋಮಶೇಖರ್ ಭೇಟಿ ಭಾರೀ ಕುತೂಹಲ ಮೂಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಬ್ಬಳ್ಳಿ ಧಾರವಾಡ ಮೇಯರ್‌ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ

    ಹುಬ್ಬಳ್ಳಿ ಧಾರವಾಡ ಮೇಯರ್‌ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ

    ಹುಬ್ಬಳ್ಳಿ: ಇದೇ 20 ರಂದು ನಡೆಯಲಿರುವ ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆಯಲ್ಲಿ (Hubballi-Dharwad Mayoral Elections) ಈ ಬಾರಿ ಅಧಿಕಾರಕ್ಕೆ ಏರಲು ಕಾಂಗ್ರೆಸ್‌ (Congress) ಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ನೇತೃತ್ವದಲ್ಲಿ ರಣತಂತ್ರ ರೂಪಿಸುತ್ತಿದೆ.

    ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಚಿವ ಸಂತೋಷ್ ಲಾಡ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ ರಹಸ್ಯ ಸಭೆ ನಡೆಸಿದ್ದಾರೆ. ಆಪರೇಷನ್ ಹಸ್ತದ ಭೀತಿಯಿಂದ ಬಿಜೆಪಿ ಸದಸ್ಯರು ಈಗಾಗಲೇ ದಾಂಡೇಲಿ ರೆಸಾರ್ಟ್ ಸೇರಿದ್ದು, ಉಳಿದ ಪಕ್ಷಗಳ ಮತ್ತು ಪಕ್ಷೇತರರ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ.

    ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಒಟ್ಟು 82 ಸದಸ್ಯ ಬಲ ಮ್ಯಾಜಿಕ್ ನಂಬರ್ 45 ಆಗಿದೆ. 39 ಬಿಜೆಪಿ,33 ಕಾಂಗ್ರೆಸ್, ಎಐಎಂಐಎಂ 3, ಜೆಡಿಎಸ್ 01, ಪಕ್ಷೇತರ-6 ಸ್ಥಾನಗಳನ್ನು ಹೊಂದಿದೆ‌. ಇದನ್ನೂ ಓದಿ: ರಶ್ ಅಂತ ಡ್ರೈವರ್ ಸೀಟ್‌ನಲ್ಲಿ ಮಕ್ಕಳ ಜೊತೆ ಬಸ್‌ ಹತ್ತಿದ ಮಹಿಳೆ

    ಶಾಸಕರು, ಸಂಸದರು, ಪರಿಷತ್ ಸದಸ್ಯರು ಮತಗಳನ್ನು ಪರಿಗಣಿಸಿ ಮತದಾನದ ವೇಳೆ ಒಟ್ಟು 89 ಸದಸ್ಯರು ಹಕ್ಕು ಚಲಾವಣೆ ಮಾಡಬಹುದು. ಇಬ್ಬರು ಶಾಸಕರು, ಓರ್ವ ಸಂಸದರು, ಇಬ್ಬರು ಪರಿಷತ್ ಸದಸ್ಯರ ಬಲ ಬಿಜೆಪಿಗಿದೆ.

     

    ಕಾಂಗ್ರೆಸ್‌ಗೆ ಓರ್ವ ಶಾಸಕರ ಬಲ ಮಾತ್ರವಿದೆ. ಶಾಸಕ ವಿನಯ ಕುಲಕರ್ಣಿಗೆ ಮತದಾನದ ಹಕ್ಕಿದೆ. ಆದರೆ ಧಾರವಾಡ ಜಿಲ್ಲೆಗೆ ಪ್ರವೇಶ ನಿಷೇಧ ಹಿನ್ನೆಲೆ ಮತದಾನಕ್ಕೆ ಬರುವುದು ಅನುಮಾನ. ಪರಿಷತ್‌ ಸಭಾಪತಿ ಆಗಿರುವ ಕಾರಣ ಬಸವರಾಜ ಹೊರಟ್ಟಿ ಮತದಾನ ಬರುವುದಿಲ್ಲ. ಈ ಕಾರಣಕ್ಕೆ ಮ್ಯಾಜಿಕ್‌ ಸಂಖ್ಯೆ 44ಕ್ಕೆ ಇಳಿದಿದೆ.

  • ಬಿಜೆಪಿಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ ; ಕೊಪ್ಪಳದಲ್ಲೂ ಕೈ ಕಮಾಲ್

    ಬಿಜೆಪಿಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ ; ಕೊಪ್ಪಳದಲ್ಲೂ ಕೈ ಕಮಾಲ್

    ಕೊಪ್ಪಳ : ಈ ಬಾರಿ ಚುನಾವಣೆಯ (Election) ಫಲಿತಾಂಶ (Result) ಪ್ರಕಟವಾಗಿದ್ದು, ಬಿಜೆಪಿಗೆ (BJP) ತೀವ್ರ ಮುಖಭಂಗವಾಗಿದೆ. ಅದೇ ರೀತಿ ಬಿಜೆಪಿಯಿಂದ ಬಂಡಾಯವೆದ್ದು ಗಂಗಾವತಿಯಲ್ಲಿ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 5 ಕ್ಷೇತ್ರವಿದ್ದು, 3 ಕಾಂಗ್ರೆಸ್ (Congress), 1 ಬಿಜೆಪಿ, 1 ಕೆಆರ್‌ಪಿಪಿ ಗೆಲುವು ಸಾಧಿಸಿದೆ.

    ಗಂಗಾವತಿ : ಕೆ.ಆರ್.ಪಿ.ಪಿಯ ಜನಾರ್ದನ ರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಪರಣ್ಣ ಮುನವಳ್ಳಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಅನ್ಸಾರಿ, ಜೆಡಿಎಸ್ ಅಭ್ಯರ್ಥಿಯಾಗಿ ಎಚ್. ಆರ್. ಚೆನ್ನಕೇಶವ ಸ್ಪರ್ಧಿಸಿದ್ದರು.

    ಕುಷ್ಟಗಿ: ಕುಷ್ಟಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‍ನ ಅಭ್ಯರ್ಥಿಯಾಗಿ ಅಮರೇಗೌಡ ಬಯ್ಯಾಪುರ ಜೆಡಿಎಸ್‍ನ ಶರಣಪ್ಪ ಕುಂಬಾರ, ಕೆಆರ್‍ಪಿಪಿಯ ಎಸ್ ಆರ್ ಹಿರೇಮಠ ಸ್ಪರ್ಧಿಸಿದ್ದರು.

    ಯಲಬುರ್ಗಾ: ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರೆಡ್ಡಿ ಗೆಲುವು ಸಾಧಿಸಿದ್ದು, ಬಿಜೆಪಿಯ ಅಭ್ಯರ್ಥಿಯಾಗಿ ಹಾಲಪ್ಪ ಆಚಾರ್, ಜೆಡಿಎಸ್‍ನ ಅಭ್ಯರ್ಥಿಯಾಗಿ ಮಲ್ಲನಗೌಡ ಸೋಲನುಭವಿಸಿದರು.

    ಕನಕಗಿರಿ: ಕನಕಗಿರಿ ಕಾಂಗ್ರೆಸ್ ಅಭ್ಯರ್ಥಿ ಶಿವರಾಜ ತಂಗಡಗಿ ಗೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ದಡೇಸೂಗೂರು, ಜೆಡಿಎಸ್ ಅಭ್ಯರ್ಥಿಯಾಗಿ ಪಿ.ವಿ.ರಾಜಗೋಪಾಲ ಕೆಆರ್‌ಪಿಪಿ ಅಭ್ಯರ್ಥಿಯಾಗಿ ಡಾ.ಚಾರುಲ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಖರ್ಗೆ ತವರಲ್ಲಿ ಮೋದಿ ಕಮಾಲ್ ವ್ಯರ್ಥ – 7 ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಜಯ

    ಕೊಪ್ಪಳ: ಕಾಂಗ್ರೆಸ್‍ನ ಕೆ ರಾಘವೆಂದ್ರ ಹಿಟ್ನಾಳ 36260 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಮಂಜುಳಾ ಅಮರೇಶ ಕರಡಿ, ಜೆಡಿಎಸ್ ಅಭ್ಯರ್ಥಿಯಾಗಿ ಸಿ ವಿ ಚಂದ್ರಶೇಖರ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗಿಲ್ಲ ಸ್ಥಾನ – 5 ಕ್ಷೇತ್ರದಲ್ಲಿ 3 ಕಡೆ ಕಾಂಗ್ರೆಸ್ ಗೆಲುವು

  • 75ನೇ ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ಪಕ್ಷಾತೀತ ಸ್ವಾತಂತ್ರ್ಯ ನಡಿಗೆ: ಡಿ.ಕೆ. ಶಿವಕುಮಾರ್

    75ನೇ ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ಪಕ್ಷಾತೀತ ಸ್ವಾತಂತ್ರ್ಯ ನಡಿಗೆ: ಡಿ.ಕೆ. ಶಿವಕುಮಾರ್

    ಬೆಂಗಳೂರು: ದೇಶದ 75ನೇ ಸ್ವಾತಂತ್ರ್ಯದಿನಾಚಾರಣೆ ಅಂಗವಾಗಿ ಆಗಸ್ಟ್ 15ರಂದು ಮಧ್ಯಾಹ್ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿವರೆಗೂ ರಾಷ್ಟ್ರಧ್ವಜ ಹಿಡಿದು `ಫ್ರೀಡಂ ಮಾರ್ಚ್’ (ಸ್ವಾತಂತ್ರ್ಯ ನಡಿಗೆ) ಎಂಬ ಪಕ್ಷಾತೀತ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕಾರ್ಯಕ್ರಮದಲ್ಲಿ ಸುಮಾರು 75 ಸಾವಿರದಿಂದ 1 ಲಕ್ಷದವರೆಗೂ ಜನ ಸೇರಲಿದ್ದಾರೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಜನರು ಬಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದು, ಯಾರು ಭಾಗವಹಿಸಲಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದರು.

    ಇದೊಂದು ಪಕ್ಷಾತೀತ ಕಾರ್ಯಾಕ್ರಮವಾಗಿದ್ದು, ಇದರಲ್ಲಿ ಎಲ್ಲ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಸಾಂಸ್ಕೃತಿಕ ಸಂಘಟನೆಗಳು, ಕ್ರೀಡಾಪಟುಗಳು, ಕಲಾವಿದರು ಸೇರಿದಂತೆ ಎಲ್ಲರೂ ಭಾಗವಹಿಸಬಹುದು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವವನ್ನು ರಾಜ್ಯದಲ್ಲಿ ಪಾದಯಾತ್ರೆ ಮೂಲಕ ಆಚರಿಸಲು ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು. ಈ ನಡಿಗೆಯನ್ನು ಒಂದು ಜಿಲ್ಲೆಯ ಎಷ್ಟು ತಾಲೂಕುಗಳಲ್ಲಿ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಕಾಂಗ್ರೆಸ್ ನಾಯಕರ ಇಚ್ಛೆಗೆ ಬಿಟ್ಟಿದ್ದೇವೆ ಎಂದು ತಿಳಿಸಿದರು.

    ಆ.1 ರಿಂದ ಆ.10 ರವರೆಗೆ ಅಥವಾ ಅದಕ್ಕಿಂತ ಮುಂಚಿತವಾಗಿ ಬೇಕಾದರೂ ಈ ಪಾದಯಾತ್ರೆ ಮಾಡಬಹುದು. ಕೆಲವು ನಾಯಕರು ತಮ್ಮ ಕ್ಷೇತ್ರಗಳಲ್ಲೇ 75 ಕಿ.ಮೀ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದು, ಅದಕ್ಕೂ ಅನುಮತಿ ನೀಡಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಕೊಡುಗೆ, ಈ ದೇಶಕ್ಕೆ ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ಕೊಡುಗೆಯಾಗಿ ನೀಡಿದ್ದು ಕಾಂಗ್ರೆಸ್. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

    ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ಇದ್ದರೆ ಅವರನ್ನು ಅಥವಾ ಅವರ ಕುಟುಂಬದವರನ್ನು ಭೇಟಿಯಾಗಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಆಯಾ ತಾಲೂಕಿನ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಲಾಗಿದೆ ಅಂದ್ರು.

    ಪಕ್ಷದ ವೇದಿಕೆಯಲ್ಲಿ ಸಿದ್ದರಾಮೋತ್ಸವ: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು 75ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಕ್ಷದ ಚೌಕಟ್ಟಿನಲ್ಲಿ ನಡೆಸಲು ಅವರ ಹಿತೈಷಿಗಳು ತೀರ್ಮಾನಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಆಗಮಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ ಎಂದು ಹೇಳಿದರು.

    ಪಕ್ಷ ಸಂಘಟನೆ ವಿಚಾರವಾಗಿ ಪದಾಧಿಕಾರಿಗಳ ಸಭೆ: ಇಂದು ಪಕ್ಷದ ಕಾರ್ಯಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳ ಸಭೆಯನ್ನು ನಡೆಸಿದ್ದು, ಪಕ್ಷದ ಸಂಘಟನೆ ಜವಾಬ್ದಾರಿಯನ್ನು ಯಾವ ರೀತಿ ನಿರ್ವಹಿಸಬೇಕು ಎಂದು ತಿಳಿಸಿದ್ದೇವೆ. ಮುಂದಿನ 10 ತಿಂಗಳು ಪ್ರತಿಯೊಬ್ಬರು ತಮಗೆ ವಹಿಸಿರುವ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ತಿಂಗಳಿಗೆ ಕನಿಷ್ಠ 20 ದಿನಗಳ ಕಾಲ ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ಪಾಸಿಟಿವ್‌ ಆಗಿ ಯೋಚಿಸೋಣ: ಕಾಳಿ ದೇವಿ ಕುರಿತ ವಿವಾದದ ಬಗ್ಗೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ

    ಬೂತ್ ಮಟ್ಟದಿಂದ ಪಂಚಾಯ್ತಿವರೆಗೂ ಎಲ್ಲ ವಿಭಾಗಗಳಲ್ಲೂ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಪಕ್ಷದ ಸಂಘಟನೆ ಮಾಡಬೇಕು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು 50 ವರ್ಷದೊಳಗಿನವರೇ ಆಗಿರುವಂತೆ ನೋಡಿಕೊಳ್ಳಬೇಕು. ಐದು ವರ್ಷ ಅಥವಾ ಎರಡು ಮೂರು ಅವಧಿಗೆ ಅಧ್ಯಕ್ಷರಾಗಿದ್ದವರಿಗೆ ಬಡ್ತಿ ನೀಡಿ ಆ ಸ್ಥಾನವನ್ನು ಹೊಸಬರಿಗೆ ನೀಡಬೆಕು. ಪ್ರತಿ ಪಂಚಾಯ್ತಿಗೂ ಪ್ರಧಾನ ಕಾರ್ಯದರ್ಶಿಗಳು ಪ್ರವಾಸ ಮಾಡಬೇಕು ಎಂದು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

    ಎಡಿಜಿಪಿ ಅಮೃತ್ ಪೌಲ್ ಅವರು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಇದರಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ನಾವು ಆಗ್ರಹಿಸಿದ್ದೇವೆ. ಈವರೆಗೂ ಬಂಧಿತರಾಗಿರುವವರ ಹೇಳಿಕೆ, ಯಾರು ಯಾರನ್ನು ಬಿಡಿಸಿದ್ದಾರೆ, ಏನೆಲ್ಲಾ ಪ್ರಭಾವ ಬೀರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಹೇಳಿದರು.

    ಡಿ.ಕೆ. ಶಿವಕುಮಾರ್ ಅವರು ಹವಾಲಾ ನಡೆಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ ಸಂಬಂಧ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಮೊದಲು ಅವರ ಮುಖ್ಯಮಂತ್ರಿಗಳು, ಅವರ ದೊಡ್ಡ ನಾಯಕರ ಮುಖಕ್ಕೆ ಅಂಟಿರುವ ಮಸಿ ತೊಳೆದುಕೊಳ್ಳಲಿ ಎಂದು ತಿರುಗೇಟು ಕೊಟ್ಟರು. ಇದೇ ವೇಳೆ ಜಮೀರ್ ಅಹ್ಮದ್ ಅವರ ಮನೆ ಮೇಲಿನ ಎಸಿಬಿ ದಾಳಿ ಮಾದರಿಯಲ್ಲಿ ಅಭಯ್ ಪಾಟೀಲ್ ಅವರ ಮೇಲೂ ಎಸಿಬಿ ದೂರು ದಾಖಲಿಸಿದ್ದು, ಅವರ ಮನೆ ಮೇಲೆ ದಾಳಿ ಮಾಡಲು ಸ್ಪೀಕರ್ ಅವರ ಅನುಮತಿ ಕೋರಲಾಗಿದೆ ಎಂಬುದನ್ನು ಗಮನಕ್ಕೆ ತಂದಾಗ ಕೇಳಿದ, ನನ್ನ ಮನೆ ಮೇಲೆ ದಾಳಿ ಮಾಡುವಾಗ ಯಾರೂ ಸ್ಪೀಕರ್ ಬಳಿ ಅನುಮತಿ ಕೇಳಿರಲಿಲ್ಲ ಎಂದರು.

    Live Tv
    [brid partner=56869869 player=32851 video=960834 autoplay=true]

  • ಸಂತೋಷ್‍ನದ್ದು ಆತ್ಮಹತ್ಯೆಯೋ, ಕೊಲೆಯೋ? ಈಶ್ವರಪ್ಪ

    ಸಂತೋಷ್‍ನದ್ದು ಆತ್ಮಹತ್ಯೆಯೋ, ಕೊಲೆಯೋ? ಈಶ್ವರಪ್ಪ

    ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಬರುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂತೋಷ್ ಪಾಟೀಲ್ ವಿರುದ್ಧ ನ್ಯಾಯಾಲಯದ ಮೂಲಕ ನೋಟಿಸ್ ಕೊಟ್ಟಾಗ ಹೆದರಿಕೊಂಡು ಈ ರೀತಿ ಮಾಡಿಕೊಂಡಿದ್ದಾರೆ ಅಂದುಕೊಂಡಿದ್ದೆ. ಆದರೆ ಆಮೇಲೆ ನನಗೆ ಒಂದೊಂದೇ ಅಂಶ ಅನುಮಾನ ಬರುತ್ತಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಬರುತ್ತಿದೆ. ಕೊಲೆ ಎನ್ನುವ ಅಂಶಗಳ ಬಗ್ಗೆ ಬೇರೆ ಬೇರೆಯವರ ಜೊತೆ ಮಾತನಾಡಿದಾಗ ಅನೇಕ ಅಂಶ ಮಾತನಾಡಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ತನಿಖೆ ವರದಿ ಬರಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

    ಆ ಮೃತ ಹುಡುಗನ ಬಗ್ಗೆ ನನಗೂ ಸಹ ಒಂದು ರೀತಿಯ ಸಹಾನುಭುತಿ ಇದೆ. ಆ ಹುಡುಗನನ್ನು ಯಾರಾದರೂ ದುರುಪಯೋಗ ಮಾಡಿಕೊಂಡಿದ್ದಾರಾ ಎನ್ನುವ ಬಗ್ಗೆ ತನಿಖೆ ಆದ ನಂತರವೇ ಸತ್ಯ ಹೊರಬರಲಿದೆ ಎಂದ ಅವರು ಇಡೀ ರಾಜ್ಯದಿಂದ ಎಲ್ಲರೂ ನನಗೆ ಬೆಂಬಲ ಕೊಡುತ್ತಿದ್ದಾರೆ.  ನನ್ನ ಬಗ್ಗೆ ಒಂದೇ ಒಂದು ಒಡಕು ಧ್ವನಿ ಇಲ್ಲ.  ಇದರಲ್ಲಿ ನಿಮ್ಮ ಯಾವುದೇ ತಪ್ಪು ಇಲ್ಲ. ಷಡ್ಯಂತ್ರ ಇದೆ. ಈ ಷಡ್ಯಂತ್ರದಿಂದ ನೀವು ಹೊರಗೆ ಬರುತ್ತೀರಾ ಎಂಬ ಮಾತನ್ನು ಎಲ್ಲರೂ ಹೇಳುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ವೀರಶೈವ ಸಮಾಜದವರ ಹೋರಾಟ ವಿಚಾರವಾಗಿ ಮಾತನಾಡಿ, ವೀರಶೈವ ಸಮಾಜದ ಯಾರೋ 4 ಜನ ಫ್ಲೆಕ್ಸ್ ಹಾಕಿದ ಮಾತ್ರಕ್ಕೆ ನಾನು ಒಪ್ಪಲ್ಲ. ಈ ಬಗ್ಗೆ ನ್ಯಾಯ ಹೊರಗೆ ಬರಬೇಕು. ಯಾರೂ ತಪ್ಪು ಮಾಡಿದ್ದಾರೋ, ಆ ತಪ್ಪು ಮಾಡಿದ್ದವರು ಹೊರಗೆ ಬರಬೇಕು. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಈ ಷಡ್ಯಂತ್ರದ ರೂವಾರಿಗಳು ಯಾರು? ವ್ಯಕ್ತಿನೋ, ಸಂಸ್ಥೆನೋ, ಪಕ್ಷನೋ ಎಂಬುದು ಹೊರಗೆ ಬರಬೇಕು. ಆಗ ನಿಜಕ್ಕೂ ಆತನ ಆತ್ಮಕ್ಕೆ ಶಾಂತಿ ಸಿಗುತ್ತದೆ. ಸಮಾಜದವರು, ಕುಟುಂಬದವರು ಏನು ಮಾಡಬೇಕೋ ಮಾಡಲಿ ಅದು ಅವರ ಕರ್ತವ್ಯ ಎಂದರು. ಇದನ್ನೂ ಓದಿ: ಹನುಮ ಜಯಂತಿ ಹಿನ್ನೆಲೆ ಕೇಸರಿ ಶಾಲು ಧರಿಸಿ ಗಣೇಶ್ ಹುಕ್ಕೇರಿ ಪಾದಯಾತ್ರೆ

    Eshwarappa

    ಸಂತೋಷ್ ಅವರದ್ದು ಆತ್ಮಹತ್ಯೆಯೋ, ಕೊಲೆಯೋ ಏನು ಎಂಬುದು ಗೊತ್ತಿಲ್ಲ. ಏನು ಗೊತ್ತಿಲ್ಲದೇ ಸರ್ಕಾರ ಸಹ ಏನು ಮಾಡಲು ಸಾಧ್ಯವಿಲ್ಲ. ತನಿಖೆಯ ವರದಿ ಬಂದ ನಂತರ ಸಿಎಂ ಜೊತೆ ಮಾತನಾಡುತ್ತೇನೆ. ತನಿಖೆ ನಡೆಯುವ ಸಂದರ್ಭದಲ್ಲಿ ಇದರ ಹಿಂದೆ ಡಿಕೆಶಿ ಇದ್ದಾರೋ, ಇಲ್ಲವೋ ಎಂಬ ಬಗ್ಗೆ ಈಗಲೇ ಹೇಳಲ್ಲ. ತನಿಖೆಯ ವರದಿ ಬಂದ ನಂತರ ಡಿಕೆಶಿಯೇ ಇದರ ಹಿಂದೆ ಇದ್ದಾರೆ ಎಂದು ಗೊತ್ತಾದರೆ ಆಗ ಹೇಳ್ತೇನೆ. ತನಿಖೆಯ ವರದಿ ತಿಳಿದುಕೊಳ್ಳದೇ ಏನು ಹೇಳಲು ಇಷ್ಟಪಡಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ, ಮುಸ್ಲಿಮರ ಮಧ್ಯೆ ಮತ-ಭೇದ ಪ್ರಾರಂಭವಾಗೋದಕ್ಕೆ ಈ 6 ವಿದ್ಯಾರ್ಥಿನಿಯರೇ ಕಾರಣ: ರಘುಪತಿ ಭಟ್

  • ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ: ಸಿಎಂ ಚನ್ನಿ ಭರವಸೆ

    ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ: ಸಿಎಂ ಚನ್ನಿ ಭರವಸೆ

    ಚಂಡೀಗಢ: ಮತದಾನಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ ಪಂಜಾಬ್‍ನಲ್ಲಿ ಚುನಾವಣೆ ಕಾವು ಜೋರಾಗಿದ್ದು, ಮತದಾರರನ್ನು ಓಲೈಸಲು ಹಲವು ಭರಪೂರ ಕೊಡುಗೆಗಳನ್ನು ಘೋಷಿಸಲಾಗುತ್ತಿದೆ. ಇದೇ ಹಾದಿಯಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಚಿತ ಕೊಡುಗೆಗಳ ಭರವಸೆ ನೀಡಿದ್ದಾರೆ.

    ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಂಜಾಬ್‍ನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಆರು ತಿಂಗಳಲ್ಲಿ ಬಡವರಿಗೆ ವಸತಿ ಕಲ್ಪಿಸುವುದಾಗಿ ಘೋಷಿಸಿದ್ದಾರೆ. ನಾವು ಶಿಕ್ಷಣ, ಆರೋಗ್ಯ ಮತ್ತು ವಸತಿಗಳಲ್ಲಿ ಕ್ಷೇತ್ರದಲ್ಲಿ ಕೇಂದ್ರಿಕರಿಸಲಿದ್ದು, ಸಣ್ಣ ಉದ್ಯಮಿಗಳಿಗೂ ತೇರಿಗೆ ರಿಯಾಯಿತಿ ನೀಡುತ್ತೇವೆ, ಮಹಿಳೆಯರ ಅಭ್ಯುದಯಕ್ಕಾಗಿ ಕಾಂಗ್ರೆಸ್ ಶ್ರಮಿಸುತ್ತಿದೆ ಎಂದು ಚನ್ನಿ ಟ್ವೀಟ್ ಮಾಡಿದ್ದಾರೆ.

    ಆಟಾ – ದಾಲ್ ( ಹಿಟ್ಟು – ಬೇಳೆ ) ಹೊಟ್ಟೆಯನ್ನು ಮಾತ್ರ ತುಂಬಿಸುತ್ತದೆ. ಪಂಜಾಬಿನ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯವಾಗಿದೆ. ಆದರೆ ಖಾಸಗಿ ಸಂಸ್ಥೆಗಳಲ್ಲಿ ಓದುವುದು ತುಂಬಾ ದುಬಾರಿಯಾಗಿದ್ದು, ಪೋಷಕರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದರಿಂದ ನಾವು ವಿದ್ಯಾವಂತರಾಗಿದ್ದೇವೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಗುಣಮಟ್ಟದ ಶಿಕ್ಷಣ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

    ಅಕಾಲಿ ಸರ್ಕಾರದ ಅವಧಿಯಲ್ಲಿ ರದ್ದುಪಡಿಸಿದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಗಳನ್ನು ಮರುಪ್ರಾರಂಭಿಸಲಾಗುವುದು. ಸಾಮಾನ್ಯ ವರ್ಗದ ಬಡ ವಿದ್ಯಾರ್ಥಿಗಳು ಮತ್ತು ರೈತ ಕುಟುಂಬದಿಂದ ಬಂದವರು ಸಹ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಶುಲ್ಕದ ಮೇಲೆ ಕಡಿಮೆ ನಿಬಂಧನೆಗಳು ಇರುತ್ತವೆ ಎಂದು ಚನ್ನಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಒಡಹುಟ್ಟಿದವರೇ ಕಾಂಗ್ರೆಸ್‌ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್‌

    ಯುವಕರಿಗೆ ಉದ್ಯೋಗದ ಭರವಸೆ ನೀಡಿರುವ ಅವರು, ಪ್ರತಿಯೊಬ್ಬ ಯುವಕರು ಉದ್ಯೋಗವನ್ನು ಹೊಂದಿರಬೇಕು, ಇದಕ್ಕಾಗಿ ಸರ್ಕಾರ ಸಾಲ ನೀಡಲಿದೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಹೊಂದಿರುವವರಿಗೆ ಮತ್ತು ವಿದೇಶದಲ್ಲಿ ಅಧ್ಯಯನ ಮಾಡಲು ಅಥವಾ ಕೆಲಸ ಮಾಡಲು ಬಯಸುವವರಿಗೆ ಖಾತರಿ ಯೋಜನೆಯನ್ನು ಪರಿಚಯಿಸುತ್ತೇವೆ. ಅಂತಹ ಅಭ್ಯರ್ಥಿಗಳ ವಿದೇಶಿ ಪ್ರಯಾಣಕ್ಕೆ ಅನುಕೂಲವಾಗುವ ಯೋಜನೆಗಳನ್ನು ಸಹ ಪರಿಚಯಿಸಲಾಗುವುದು ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ

    ನನಗೆ ಮೂರು ತಿಂಗಳು ಮಾತ್ರ ಸಿಕ್ಕಿತು. ಆದರೆ ಐದು ವರ್ಷ ಸಿಕ್ಕರೆ ಒಂದು ಲಕ್ಷ ಉದ್ಯೋಗ ಮಂಜೂರು ಮಾಡುತ್ತೇನೆ, ವಿದೇಶಿ ಆಸ್ಪತ್ರೆಗಳಲ್ಲಿ ಒದಗಿಸುವ ಸೌಲಭ್ಯಗಳ ಮಾದರಿಯಲ್ಲಿ ನಾವು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುತ್ತೇವೆ, ಆರು ತಿಂಗಳಲ್ಲಿ, ಪ್ರತಿಯೊಬ್ಬ ಬಡವನ ತಲೆಯ ಮೇಲೆ ಗಟ್ಟಿಯಾದ ಸೂರು ಇರುವುದನ್ನು ನಾನು ಖಚಿತಪಡಿಸುತ್ತೇನೆ. ಇದು ನನ್ನ ಬದ್ಧತೆ ಎಂದು ಅವರು ಟ್ವಿಟ್ ನಲ್ಲಿ ವಿವರಿಸಿದ್ದಾರೆ.

  • ತಾಕತ್ತಿದ್ರೆ ಬೇಗ್‍ರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ಲಿ: ಗುಂಡೂರಾವ್‍ಗೆ ಯತ್ನಾಳ್ ಸವಾಲು

    ತಾಕತ್ತಿದ್ರೆ ಬೇಗ್‍ರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ಲಿ: ಗುಂಡೂರಾವ್‍ಗೆ ಯತ್ನಾಳ್ ಸವಾಲು

    – 23ರಂದು ಶೋಕಾಚಾರಣೆ ಮಾಡಬೇಕು

    ವಿಜಯಪುರ: ತಾಕತ್ತಿದ್ದರೆ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರನ್ನು ಪಕ್ಷದಿಂದ 6 ವರ್ಷ ಉಚ್ಛಾಟನೆ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸವಾಲು ಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಶಾಸಕರು, ರೋಷನ್ ಬೇಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಹೀನಾಯವಾಗಿ ತೆಗಳಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಛಿದ್ರವಾಗುವ ಲಕ್ಷಣಗಳು ಕಾಣುತ್ತಿವೆ. ನಾವು ಆಪರೇಷನ್ ಕಮಲ ಮಾಡುವುದಿಲ್ಲ. ಮೈತ್ರಿ ಸರ್ಕಾರವು ತಾನಾಗಿಯೇ ಉರುಳುತ್ತದೆ ಎಂದು ತಿಳಿಸಿದರು.

    ಮೈತ್ರಿ ಸರ್ಕಾರ ಬೀಳುತ್ತದೆ ಎಂಬ ಭಯ ಸಿಎಂ ಕುಮಾರಸ್ವಾಮಿ ಅವರಿಗೆ ಶುರುವಾಗಿದೆ. ಹೀಗಾಗಿ ಅವರು ಜನರಿಂದ ದೂರ ಉಳಿದು, ಕೇವಲ ರೆಸಾರ್ಟಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರಿಗೆ ಯೋಜನೆ, ಅಭಿವೃದ್ಧಿ ಕಾರ್ಯಗಳನ್ನು ನೀಡಲು ವಿಫಲವಾದ ಮೈತ್ರಿ ಸರ್ಕಾರ ಗೌರವಯುತವಾಗಿ ರಾಜೀನಾಮೆ ನೀಡಬೇಕು. ಮುಂದೆ ಯಾರು ಸರ್ಕಾರ ರಚನೆ ಮಾಡಬೇಕು ಎನ್ನುವುದನ್ನು ರಾಜ್ಯಪಾಲರು ಹೇಳುತ್ತಾರೆ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯು ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುತ್ತದೆ ಎಂದು ಹೇಳಿದರು.

    ಎಕ್ಸಿಟ್ ಪೋಲ್ ನಂಬಲೇ ಬೇಕು. ಈಗ ಸಿಕ್ಕಿರುವ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಇನ್ನು ಮುಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೇವಲ ಟ್ವೀಟ್ ಮಾಡುತ್ತಾ ಕುಳಿತುಕೊಳ್ಳಬೇಕು. ಮಹಾಮೈತ್ರಿಯ 26 ಅಭ್ಯರ್ಥಿಗಳು 23ರಂದು ಶೋಕಾಚಾರಣೆ ಮಾಡಬೇಕು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದ ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟರ ಯುಗಾಂತ್ಯವಾಗುತ್ತದೆ ಎಂದರು.

  • ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

    ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

    ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ. ಉಗ್ರಪ್ಪರನ್ನು ಲೀಡ್ ಕೊಟ್ಟು ಗೆಲ್ಲಿಸಿದ್ದ ಕಾಂಗ್ರೆಸ್ ಶಾಸಕರ ಕನಸು ಚಿಗುರಿದೆ.

    ಉಗ್ರಪ್ಪರನ್ನ ಗೆಲ್ಲಿಸಿದ ಬಳ್ಳಾರಿಯ 6 ಜನ ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ…? ಯಾರಾಗಲಿದ್ದಾರೆ ಬಳ್ಳಾರಿ ಕೋಟೆಯ ಸಾಮ್ರಾಟ ಅನ್ನೋ ಕುತೂಹಲ ಮತ್ತೆ ಮೂಡಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಸೋಲಿನ ಆತಂಕದಲ್ಲಿದ್ದ ಸಿದ್ದರಾಮಯ್ಯ, ಎಲ್ಲಾ ಶಾಸಕರನ್ನು ಕರೆದು ಯಾರು ಹೆಚ್ಚು ಲೀಡ್ ಕೊಡ್ತಾರೋ ಅವರ ಹೆಸರು ಮಂತ್ರಿ ಸ್ಥಾನಕ್ಕೆ ಪರಿಗಣಿಸುವುದಾಗಿ ಟಾಸ್ಕ್ ನೀಡಿದ್ದರು. ಹೀಗಾಗಿ ಮಂತ್ರಿ ಸ್ಥಾನದ ಹಟಕ್ಕೆ ಬಿದ್ದು 6 ಮಂದಿ ಶಾಸಕರು ತಲಾ 30 ಸಾವಿರ ಲೀಡ್ ಕೊಟ್ಟರು. ಈಗ ಮಂತ್ರಿಗಿರಿ ಯಾರಿಗೆ ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

    ಸಚಿವ ಸ್ಥಾನದ ಆ ಆರು ಆಕಾಂಕ್ಷಿಗಳು ಯಾರು..?
    * ಸಂಡೂರಿನ ತುಕಾರಾಂ ಅವರು ಮೂರನೇ ಬಾರಿಗೆ ಕಾಂಗ್ರೆಸ್ ಶಾಸಕರಾಗಿರುವ ಇವರು ರಾಜ್ಯ ಕಾಂಗ್ರೆಸ್ ನಾಯಕರ ಪಾಲಿಗೆ ಮಂತ್ರಿ ಸ್ಥಾನದ ಡಾರ್ಕ್ ಹಾರ್ಸ್ ಆಗಿದ್ದಾರೆ. ಜಾತಿ ಲೆಕ್ಕಾಚಾರದಲ್ಲಿ ತುಕಾರಾಂ ಮೇಲೆ ಮಂತ್ರಿ ಸ್ಥಾನದ ಒಲವು ಹೆಚ್ಚಿದೆ.

    * ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು 30 ಸಾವಿರದಷ್ಟು ಲೀಡ್ ತಂದುಕೊಟ್ಟಿದ್ದಾರೆ. ಇವರು ಸತತವಾಗಿ 4 ಬಾರಿ ಗೆದ್ದಿದ್ದು ಕಳೆದ ಬಾರಿ ಸಚಿವರಾಗಿದ್ದವರು. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಮೂರೂವರೆ ವರ್ಷ ಸಚಿವರಾಗಿದ್ದರು. ಇದೀಗ ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

    * ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾಗಿರೋ ಭೀಮಾ ನಾಯಕ್ ಅವರು 2ನೇ ಬಾರಿಗೆ ಶಾಸಕರಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    * ಬಳ್ಳಾರಿ ಗ್ರಾಮೀಣ ಭಾಗದ ಶಾಸಕರಾಗಿರುವ ನಾಗೇಂದ್ರ ಕೂಡ ಇದೀಗ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇವರು 3 ನೇ ಬಾರಿ ಶಾಸಕರಾಗಿದ್ದಾರೆ.

    * ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇವರು ಈ ಹಿಂದೆ ಹಲವು ಬಾರಿ ತನಗೆ ಸಚಿವ ಸ್ಥಾನ ನೀಡಲೇಬೇಕೆಂದು ಒತ್ತಾಯಿಸಿದ್ದರು.

    * ಕಂಪ್ಲಿ ಶಾಸಕ ಗಣೇಶ್ ಅವರು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿದ್ದರೂ ಕೂಡ ಸಚಿವ ಸ್ಥಾನ ನೀಡಬೇಕೆಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ: ವಿ.ಎಸ್ ಉಗ್ರಪ್ಪ

    ಒಟ್ಟಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಈ ತಿಂಗಳ 12ರ ನಂತರ ಬಂಪರ್ ಗಿಫ್ಟ್ ಸಿಗೋದು ಗ್ಯಾರಂಟಿಯಾಗಿದೆ. ಸಂಪುಟ ವಿಸ್ತರಣೆಗೆ ನವಂಬರ್ 12ರ ನಂತರ ಮುಹೂರ್ತ ಫಿಕ್ಸ್ ಆಗಿದ್ದು, ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಮಾತುಕತೆ ಪ್ರಕಾರ ನವೆಂಬರ್ 12 ರ ನಂತರ ಸಂಪುಟ ವಿಸ್ತರಣೆ ನಡೆಯಲಿದೆ.

    ಚುನಾವಣಾ ಫಲಿತಾಂಶ ದಿನದಂದೇ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ದೇವೇಗೌಡರನ್ನ ಭೇಟಿಯಾಗಿದ್ದರು. ಈ ವೇಳೆ ಆದಷ್ಟು ಬೇಗ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಾತಿಗೆ ದೇವೇಗೌಡರು ಸೂಚನೆ ನೀಡಿದ್ದಾರೆ. ಅಲ್ಲದೇ ಈ ಕುರಿತು ವೇಣುಗೋಪಾಲ್ ಅವರು ನವೆಂಬರ್ 9 ರಂದು ರಾಹುಲ್ ಗಾಂಧಿ ಜೊತೆ ಸಹ ದೂರವಾಣಿಯಲ್ಲಿ ದೂರವಾಣಿಯಲ್ಲಿ ಚರ್ಚೆ ನಡೆಸಲಿದ್ದಾರೆ. ನವೆಂಬರ್ 09, 10ರಂದು ಕಾಂಗ್ರೆಸ್, ಜೆಡಿಎಸ್ ನಾಯಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಯಲಿದೆ. ನ.11ರ ಹೈಕಮಾಂಡ್‍ಗೆ ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮ ಪಟ್ಟಿ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿಯೊಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ:  ಸೋಲು ಅನಾಥ, ನಾನೇ ಬಳ್ಳಾರಿ ಸೋಲಿನ ಹೊಣೆ ಹೊರುತ್ತೇನೆ: ಶ್ರೀರಾಮುಲು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv