Tag: Conrad Sangma

  • ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

    ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

    ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ (Conrad Sangma) ಅವರು ಮಂಗಳವಾರ ಮೇಘಾಲಯದ ಮುಖ್ಯಮಂತ್ರಿಯಾಗಿ (Meghalaya CM) ಸತತ 2ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.

    ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಸಂಗ್ಮಾ ನೇತೃತ್ವದ ಎನ್‌ಪಿಪಿ 26 ಸ್ಥಾನಗಳನ್ನು ಗೆದ್ದಿತ್ತು. ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಇತರ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

    ಸಂಗ್ಮಾ ನೇತೃತ್ವದ ಮೇಘಾಲಯದ ಹೊಸ ಸರ್ಕಾರದಲ್ಲಿ ಅವರ ಪಕ್ಷದಿಂದ 8 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಮಿತ್ರಪಕ್ಷಗಳಿಂದ 4 ಸಚಿವ ಸ್ಥಾನಗಳಿವೆ. ಎನ್‌ಪಿಪಿಯ ಮಿತ್ರ ಪಕ್ಷ ಯುಡಿಪಿ ಇಬ್ಬರು ಸಚಿವರನ್ನು ಹೊಂದಿದ್ದರೆ, ಬಿಜೆಪಿ ಮತ್ತು ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (HSPDP) ತಲಾ ಒಬ್ಬೊಬ್ಬರು ಸಚಿವರು ಇದ್ದಾರೆ. ಇದನ್ನೂ ಓದಿ: ಹೋಳಿ ಬಣ್ಣ ತಾಗಬಾರದೆಂದು ಇಡೀ ಮಸೀದಿಯನ್ನೇ ಟಾರ್ಪಲ್‌ನಿಂದ ಮುಚ್ಚಿದ್ರು

    60 ಸದಸ್ಯ ಬಲದ ವಿಧಾನಸಭೆ ಇರುವ ಮೇಘಾಲಯದಲ್ಲಿ ಎನ್‌ಪಿಪಿಗೆ ಪ್ರಸ್ತುತ 45 ಶಾಸಕರ ಬೆಂಬಲವಿದೆ. ಇತ್ತೀಚೆಗೆ ನಡೆದ ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಎನ್‌ಪಿಪಿ 26 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿದೆ. ಯುಡಿಪಿ 11 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ, ಹೆಚ್‌ಎಸ್‌ಪಿಡಿಪಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ (PDF) ತಲಾ 2 ಸ್ಥಾನಗಳನ್ನು ಪಡೆದಿವೆ. ಇಬ್ಬರು ಪಕ್ಷೇತರ ಶಾಸಕರು ಕೂಡಾ ಸಂಗ್ಮಾಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

  • ರಾಜ್ಯಪಾಲರನ್ನು ಭೇಟಿಯಾದ ಕಾನ್ರಾಡ್ ಸಂಗ್ಮಾ – ಮೇಘಾಲಯದಲ್ಲಿ ಸರ್ಕಾರ ರಚನೆಗೆ ಮನವಿ

    ರಾಜ್ಯಪಾಲರನ್ನು ಭೇಟಿಯಾದ ಕಾನ್ರಾಡ್ ಸಂಗ್ಮಾ – ಮೇಘಾಲಯದಲ್ಲಿ ಸರ್ಕಾರ ರಚನೆಗೆ ಮನವಿ

    ಶಿಲ್ಲಾಂಗ್: ಮೇಘಾಲಯ (Meghalaya) ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಪಕ್ಷದ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ (Conrad Sangma) ರಾಜ್ಯಪಾಲ ಫಾಗು ಚೌಹಾಣ್ (Phagu Chauhan) ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೋರಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

    ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಅವರು, ಬಿಜೆಪಿಯ ಇಬ್ಬರು ಶಾಸಕರು, ಬಗ್ಮಾರಾದ ಸ್ವತಂತ್ರ ಶಾಸಕರು ಸೇರಿದಂತೆ ಹಲವಾರು ಶಾಸಕರು ನಮಗೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆ ನಾವು ಸರ್ಕಾರ ರಚನೆಗೆ ತಯಾರಿ ಆರಂಭಿಸಿದ್ದೇವೆ, ಕಾದು ನೋಡಿ ಎಂದು ಅವರು ಹೇಳಿದ್ದಾರೆ.

    11 ಸ್ಥಾನಗಳ ಮೂಲಕ 2ನೇ ಅತಿದೊಡ್ಡ ಪಕ್ಷವಾಗಿರುವ ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿಯ (UDP) ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಲು ನಿರಾಕರಿಸಿದ ಸಂಗ್ಮಾ, ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಅವರೊಂದಿಗೆ ಚರ್ಚಿಸುತ್ತೇವೆ. ನಾನು ಈಗ ಎಲ್ಲಾ ವಿವರಗಳನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

    ಪ್ರಮಾಣ ವಚನ ಸಮಾರಂಭದ ದಿನಾಂಕವನ್ನು ನಿರ್ಧರಿಸಿಲ್ಲ ಮತ್ತು ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಗ್ಗೆ ಅವರಿಂದ ದೃಢೀಕರಣವನ್ನು ಪಡೆದ ನಂತರವೇ ತಿಳಿಸುವುದಾಗಿ ಸಂಗ್ಮಾ ಹೇಳಿದರು. ಇದನ್ನೂ ಓದಿ: ಲಂಚ ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ರಣದೀಪ್ ಸುರ್ಜೇವಾಲ

  • ಕಡಿಮೆ ಸ್ಥಾನ ಸಿಕ್ಕಿದ್ರೂ ಮೇಘಾಲಯದಲ್ಲೂ ಅರಳಲಿದೆ ಕಮಲ ಸರ್ಕಾರ!

    ಕಡಿಮೆ ಸ್ಥಾನ ಸಿಕ್ಕಿದ್ರೂ ಮೇಘಾಲಯದಲ್ಲೂ ಅರಳಲಿದೆ ಕಮಲ ಸರ್ಕಾರ!

    ಶಿಲ್ಲಾಂಗ್: ಗೋವಾದಲ್ಲಿ ಕಡಿಮೆ ಸ್ಥಾನ ಸಿಕ್ಕಿದ್ದರೂ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಈಗ ಅದೇ ತಂತ್ರವನ್ನು ಬಳಸಿ ಮಿತ್ರ ಪಕ್ಷಗಳನ್ನು ಸೆಳೆದು ಮೇಘಾಲಯದಲ್ಲೂ ಅಧಿಕಾರದ ಗದ್ದುಗೆ ಏರಲು ಮುಂದಾಗಿದೆ.

    ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವುದರಿಂದ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ನಡೆಸುತ್ತೇವೆ. ಬಹುಮತ ಸಾಬೀತು ಪಡಿಸಲು ಅನುಮತಿ ನೀಡಿ ಎಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‍ಪಿಪಿ) ಅಧ್ಯಕ್ಷ ಕೊನ್ರಾಡ್ ಸಂಗ್ಮಾ ರಾಜ್ಯಪಾಲರಲ್ಲಿ ಅನುಮತಿ ಕೇಳಿದ್ದಾರೆ.

    ಮೇಘಾಲಯದ ಒಟ್ಟು 59 ಸ್ಥಾನಗಳಲ್ಲಿ ಕಾಂಗ್ರೆಸ್ 21, ಎನ್‍ಪಿಪಿ 17, ಬಿಜೆಪಿ 2 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಇತರ ಪಕ್ಷಗಳ 19 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಸರಳ ಬಹುಮತಕ್ಕೆ 30 ಸ್ಥಾನಗಳ ಅಗತ್ಯವಿದ್ದು, ಯುನೈಟೆಡ್ ಡೆಮಾಕ್ರೆಟಿಕ್  ಪಾರ್ಟಿಯ 6 ಮಂದಿ ಮತ್ತು ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ 2 ಮಂದಿ ಸರ್ಕಾರಕ್ಕೆ ಬೆಂಬಲ ನೀಡಲಿದ್ದಾರೆ. ಮಾರ್ಚ್ 6ರ ಬೆಳಗ್ಗೆ 10 ಗಂಟೆಗೆ ಕೊನ್ರಾಡ್ ಸಂಗ್ಮಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ಫಲಿತಾಂಶ ಪ್ರಕಟವಾದ ಬಳಿಕ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಮೇಘಾಲಯದಲ್ಲಿ ಕಾಂಗ್ರೆಸ್ಸೇತರ ಪಕ್ಷ ಅಧಿಕಾರಕ್ಕೆ ಏರಲಿದ್ದು ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದರು.

    ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರದ ಅನುದಾನದ ಪಾಲು ಹೆಚ್ಚು. ಹೀಗಾಗಿ ಮೇಘಾಲಯದಲ್ಲಿ ಕಾಂಗ್ರೆಸ್ಸಿಗೆ ಉಳಿದ ಪಕ್ಷಗಳು ಬೆಂಬಲ ನೀಡುವುದು ಕಷ್ಟ ಎನ್ನುವ ವಿಶ್ಲೇಷಣೆ ಶನಿವಾರವೇ ಪ್ರಕಟವಾಗಿತ್ತು. ಮಣಿಪುರ ಹಾಗೂ ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದಾಗ, ಅಲ್ಲಿನ ಸಣ್ಣಪುಟ್ಟ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳ ನೆರವಿನಿಂದ ಸರ್ಕಾರ ರಚಿಸುವುಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

    ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮೈತ್ರಿ ಸರ್ಕಾರ ರಚನೆ ಕುರಿತು ಮೇಘಾಲಯದ ಇತರ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಮೇಘಾಲಯಕ್ಕೆ ತೆರಳುವಂತೆ ಅಸ್ಸಾಂ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿತ್ತು. ಮೇಘಾಲಯದಲ್ಲಿ ಅತಿ ಹೆಚ್ಚು ಸ್ಥಾನ ಸಿಕ್ಕಿದ ಕೂಡಲೇ ಕಾಂಗ್ರೆಸ್ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಹಾಗೂ ಕಮಲ್ ನಾಥ್ ಅವರೂ ಮೇಘಾಲಯಕ್ಕೆ ಆಗಮಿಸಿದ್ದರು. ಅತಂತ್ರ ಸ್ಥಿತಿಯಲ್ಲೂ ತನ್ನ ತಂತ್ರಗಾರಿಕೆ ಬಳಸಿ ಮಿತ್ರ ಪಕ್ಷಗಳನ್ನು ತನ್ನತ್ತ ಸೆಳೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿಯಾಗಿದೆ.