Tag: Conrgess

  • ಕರ್ನಾಟಕ ಜನತೆಗೆ ಧನ್ಯವಾದ ತಿಳಿಸಿ ಸೋನಿಯಾ ಗಾಂಧಿ ವೀಡಿಯೋ ಸಂದೇಶ

    ಕರ್ನಾಟಕ ಜನತೆಗೆ ಧನ್ಯವಾದ ತಿಳಿಸಿ ಸೋನಿಯಾ ಗಾಂಧಿ ವೀಡಿಯೋ ಸಂದೇಶ

    ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ (DK Shivakumar) ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿ ವೀಡಿಯೋ ಸಂದೇಶ ಕಳುಹಿಸಿದ್ದಾರೆ.

    ವೀಡಿಯೋ ಸಂದೇಶದಲ್ಲೇನಿದೆ?
    ನಮಸ್ಕಾರ, ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಈ ಬಹುಮತ ಜನಪರ ಸರ್ಕಾರಕ್ಕಾಗಿ, ಈ ಬಹುಮತ ಬಡವರ ಪರವಾದ ಸರ್ಕಾರಕ್ಕಾಗಿ. ಇದು ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶವಾಗಿದೆ. ಇದನ್ನೂ ಓದಿ: ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

    ಇಂದು ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದು, ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದು ಸಂದೇಶ ರವಾನಿಸಿದ್ದಾರೆ.

    ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ವಿರೋಧಿ ನಾಯಕರು ತಮ್ಮ ಒಗ್ಗಟ್ಟು ಪ್ರದರ್ಶಿಸಿದರು. ಇದನ್ನೂ ಓದಿ: ಸಿಎಂ, ಡಿಸಿಎಂ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  • ಸಿಎಂ ಕುರ್ಚಿ ಫೈಟ್‌; 50-50 ಪ್ಲಾನ್‌ ಡಿಕೆಶಿ ಮುಂದಿಡ್ತಾರಾ ಸಿದ್ದು?

    ಸಿಎಂ ಕುರ್ಚಿ ಫೈಟ್‌; 50-50 ಪ್ಲಾನ್‌ ಡಿಕೆಶಿ ಮುಂದಿಡ್ತಾರಾ ಸಿದ್ದು?

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಪಾಳಯದಲ್ಲಿ ಈಗ ಸಿಎಂ ಕುರ್ಚಿ (CM Fight) ಫೈಟ್‌ ಸದ್ದು ಮಾಡುತ್ತಿದೆ. ಸಿಎಂ ರೇಸ್‌ನಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ.ಶಿವಕುಮಾರ್‌ (DK Shivakumar) ಇದ್ದು, ಮುಂದಿನ ಸಿಎಂ ಯಾರಾಗ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಸಿಎಂ ವಿಷಯದಲ್ಲಿ ಸಿದ್ದರಾಮಯ್ಯ ಪ್ಲಾನ್‌ ಏನು? ಸಿದ್ದು ಪ್ಲಾನ್‌ಗೆ ಡಿ.ಕೆ.ಶಿವಕುಮಾರ್‌ ಒಪ್ಪದಿದ್ದರೆ ಮುಂದೇನಾಗುತ್ತದೆ ಎಂಬ ಚರ್ಚೆಯೂ ಜೋರಾಗಿದೆ.

    ಸಿದ್ದರಾಮಯ್ಯ ಅವರ ಬಳಿ 50-50 ಫಾರ್ಮುಲ ಪ್ರಪೋಸಲ್‌ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಡಿ.ಕೆ.ಶಿವಕುಮಾರ್ ಒಪ್ಪದಿದ್ದರೆ ಸಿದ್ದರಾಮಯ್ಯ ಮೊದಲ 2 ವರ್ಷ ಹಾಗೂ ಡಿಕೆಶಿ 3 ವರ್ಷದ ಪ್ರಪೋಸಲ್ ಮುಂದಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಪ್ಲಾನ್ ಎ 50-50 ಫಾರ್ಮುಲ ಹಾಗೂ ಪ್ಲಾನ್ ಬಿ ಅನಿವಾರ್ಯವಾದರೆ 2-3 ವರ್ಷದ ಅಧಿಕಾರ ಹಂಚಿಕೆ. ಈ ಸಂಧಾನ ಸೂತ್ರ ಮುಂದಿಡುವ ಸಾಧ್ಯತೆ ಇದೆ ಎಂಬ ಮಾತಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಯಾರಾಗ್ತಾರೆ ಮುಖ್ಯಮಂತ್ರಿ..?

    ಡಿಕೆಶಿ ಇದ್ಯಾವುದಕ್ಕೂ ಒಪ್ಪದಿದ್ದರೆ ಸಿದ್ದರಾಮಯ್ಯ ಸಹ ತಮ್ಮ ಪಟ್ಟಿನಿಂದ ಹಿಂದೆ ಸರಿಯದಿರಲು ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಸಂಧಾನ ಸೂತ್ರಕ್ಕೆ ಡಿಕೆಶಿ ಒಪ್ಪದಿದ್ದರೆ ಶಾಸಕರ ತಲೆ ಎಣಿಕೆ‌ ಅಸ್ತ್ರ ಬಳಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

    ಶಾಸಕರ ಸಭೆ ಕರೆದು ಅವರ ಮೂಲಕವೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಆಗಲಿ ಎಂದು ಸಿದ್ದು ಪಟ್ಟು ಹಿಡಿಯಲು ತೀರ್ಮಾನಿಸಿದ್ದಾರೆ. ಶಾಸಕರೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಿ. ಆಯ್ಕೆ ಆದವರು ಮುಂದಿನ 5 ವರ್ಷ ಸಿಎಂ ಆಗಲಿ ಎಂದು ಸಿದ್ದು ಪಟ್ಟು ಹಿಡಿಯಬಹುದು. ಇದೇ ವಿಚಾರವನ್ನ ಸ್ಪಷ್ಟವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ನಿಲುವೇನು ಎಂಬುದನ್ನ ಮಲ್ಲಿಕಾರ್ಜುನ ಖರ್ಗೆ ಮೂಲಕ ಸೋನಿಯ ಹಾಗೂ ರಾಹುಲ್ ಗಾಂಧಿಗೆ ತಲುಪಿಸಲು ಸಿದ್ದು ಮುಂದಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಸಹಕಾರ ಕೊಡುವ ವಿಶ್ವಾಸವಿದೆ: ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ