Tag: Container lorry

  • ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್‌ಹೆಚ್ 50ರಲ್ಲಿ ನಡೆದಿದೆ.

    ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಇತರರಿಗೆ ಗಾಯಗಳಾಗಿವೆ. ಅಲ್ಲದೇ ಕಂಟೇನರ್‌ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

    ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

  • ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ದಿಬ್ಬಣದ ಲಾರಿ- ಮೂವರ ದುರ್ಮರಣ

    ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ದಿಬ್ಬಣದ ಲಾರಿ- ಮೂವರ ದುರ್ಮರಣ

    – ಭೀಕರ ಅಪಘಾತದಲ್ಲಿ 15 ಜನರಿಗೆ ಗಾಯ
    – ಇಬ್ಬರ ಸ್ಥಿತಿ ಚಿಂತಾಜನಕ

    ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ದಿಬ್ಬಣದ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದ ಬಳಿ ನಡೆದಿದೆ.

    ಆಂಧ್ರ ಪ್ರದೇಶದ ಇಂದೂಪುರ ನಿವಾಸಿಗಳಾದ ವರಲಕ್ಷ್ಮೀ (40), ಅನುಷಾ (38) ಹಾಗೂ ರತ್ನಮ್ಮ (56) ಮೃತ ದುರ್ದೈವಿಗಳು. ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಚನ್ನಗಿರಿ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ.

    ಇಂದೂಪುರ ಯುವಕನ ಜೊತೆಗೆ ಶಿವಮೊಗ್ಗದ ಯುವತಿಯ ವಿವಾಹ ನಿಶ್ಚಯ ಮಾಡಲಾಗಿತ್ತು. ಹೀಗಾಗಿ ಇಂದು ವಿವಾಹದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗಕ್ಕೆ ಕಂಟೇನರ್ ಲಾರಿ ಹೋಗುತ್ತಿತ್ತು. ಮಾವಿನಕಟ್ಟೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿದ್ದ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಲಾರಿಯಲ್ಲಿದ್ದ ಮೂವರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಪೊಲೀಸ್ರಿಂದ ಪಾರಾಗಲು ಹೋಗಿ ಡಿಕ್ಕಿ- ಕಂಟೈನರ್ ಮೇಲೆಯೇ ಉರುಳಿದ ಮರ

    ಪೊಲೀಸ್ರಿಂದ ಪಾರಾಗಲು ಹೋಗಿ ಡಿಕ್ಕಿ- ಕಂಟೈನರ್ ಮೇಲೆಯೇ ಉರುಳಿದ ಮರ

    ಚಿಕ್ಕಬಳ್ಳಾಪುರ: ಪೊಲಿಸರಿಂದ ಪಾರಾಗಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಟೈನರ್ ಲಾರಿ ಮೇಲೆಯೇ ಮರ ಉರುಳಿ ಬಿದ್ದಿದೆ. ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯ ದೊಡ್ಡಬೆಳವಂಗಲ ಕ್ರಾಸ್ ಬಳಿ ನಡೆದಿದೆ.

    ಕಂಟೈನರ್ ಲಾರಿ ಬರುತ್ತಿದ್ದ ದೊಡ್ಡಬೆಳವಂಗಲ ಕ್ರಾಸ್ ನಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಹೋಗಿ ಚಾಲಕ ಲಾರಿಯನ್ನು ಯದ್ವಾ-ತದ್ವಾವಾಗಿ ಚಲಾಯಿಸಿದ್ದಾನೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಮರಕ್ಕೆ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಮರ ಮುರಿದು ಲಾರಿ ಮೇಲೆಯೇ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಧರ್ಮಸ್ಥಳ ಪ್ರವಾಸ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದವರು ಮಸಣಕ್ಕೆ

    ಧರ್ಮಸ್ಥಳ ಪ್ರವಾಸ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದವರು ಮಸಣಕ್ಕೆ

    – ಶಿರಾಡಿ ಘಾಟ್‍ನಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ
    – ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    ಮಂಗಳೂರು: ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿಯಾಗಿ ಮೂವರು ಮೃತಪಟ್ಟ ಭಾರೀ ಅನಾಹುತ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಬಳಿಯ ಶಿರಾಡಿ ಗ್ರಾಮದ ಪರ್ವರಕೊಟ್ಯ ಬಳಿ ನಡೆದಿದೆ.

    ಮಂಡ್ಯ ಮೂಲದ ನಾರಾಯಣ (65), ನೀತು(35), ನಿಧಿ(15) ಮೃತ ದುರ್ದೈವಿಗಳು. ಮಂಗಳೂರಿನಿಂದ ಮಂಡ್ಯದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

    ಮಂಡ್ಯ ಜಿಲ್ಲೆಯ ನಾರಾಯಣ ಸೇರಿದಂತೆ ಐವರು ಬ್ರೀಝಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದರು. ಮಂಜುನಾಥನ ದರ್ಶನ ಪಡೆದು ಶುಕ್ರವಾರ ಪ್ರವಾಸ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದರು. ಈ ವೇಳೆ ಬ್ರೀಝಾ ಕಾರು ಶಿರಾಡಿ ಗ್ರಾಮದ ಪರ್ವರಕೊಟ್ಯ ಸಮೀಪ ಇರುವಂತೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಕಂಟೇನರ್ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸಮೀಪದ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತರ ಹಾಗೂ ಗಾಯಾಳುಗಳ ಸಂಬಂಧಿಕರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.