ನೆಲಮಂಗಲ: ಹಿಂಬದಿಯಿಂದ ಕಂಟೇನರ್ (Container) ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ (Tempo) ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲದ (Nelamangala) ಅಂಚೆಪಾಳ್ಯದ (Anchepalya) ಬಳಿ ನಡೆದಿದೆ.
ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ (55) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ
ಮತ್ತೊಂದು ವಾಹನದ ಚಾಲಕ ಓಬಣ್ಣರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟೆಂಪೋ ಪಲ್ಟಿಯಾಗಿದ್ದರಿಂದ ಕೆಲ ಜನರು ಈರುಳ್ಳಿ ತುಂಬಲು ಮುಗಿಬಿದ್ದ ಘಟನೆ ಕೂಡ ನಡೆದಿದೆ. ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಪೊಲೀಸರು ಎರಡೂ ವಾಹನಗಳನ್ನು ತೆರವು ಮಾಡಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್ ಡಿಮ್ಯಾಂಡ್ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಮುಂಬೈ: ರಸ್ತೆಬದಿ ನಿಂತಿದ್ದ ಕಂಟೈನರ್ ಟ್ರಕ್‌ಗೆ (Container Truck) ಕಾರೊಂದು (Car) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ನಾಸಿಕ್ (Nashik) ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ನಡೆದಿದೆ.
ಕಾರು ನಾಸಿಕ್‌ನಿಂದ ಧುಲೆ (Dhule) ಕಡೆಗೆ ತೆರಳುತ್ತಿದ್ದ ಸಂದರ್ಭ ಚಂದವಾಡ ತಾಲೂಕಿನ ಮಲ್ಸಾನೆ ಶಿವಾರ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ರಿಪೇರಿಗಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಜೆಯಲ್ಲಿದ್ದ ಯೋಧನ ಮನೆಗೆ ನುಗ್ಗಿ ಕಿಡ್ನ್ಯಾಪ್ ಮಾಡಿ ಹತ್ಯೆ
ಮೃತರನ್ನು ಕಿರಣ್ ಅಹಿರಾರಾವ್ (47), ಕೃಷ್ಣಕಾಂತ್ ಮಾಲಿ (43), ಪ್ರವೀಣ್ ಪವಾರ್ (38) ಮತ್ತು ಅನಿಲ್ ಪಾಟೀಲ್ (38) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮೂಲತಃ ಧುಲೆ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಲಕ್ನೋದಲ್ಲಿ ಇಲಿ ಹಿಡಿಯೋದಕ್ಕೆ 69 ಲಕ್ಷ ರೂ. ಖರ್ಚು ಮಾಡಿದ ರೈಲ್ವೆ
ದಿಸ್ಪುರ: ಕಂಟೈನರ್ ಟ್ರಕ್‌ಗೆ (Container Truck) ಕಾರು ಡಿಕ್ಕಿ ಹೊಡೆದ ಪರಿಣಾಮ ಲೇಡಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಅಸ್ಸಾಂನ ಮಹಿಳಾ ಸಬ್ ಇನ್ಸ್ಪೆಕ್ಟರ್ (SI) ಜುನ್ಮೋನಿ ರಾಭಾ (Junmoni Rabha) ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದಲ್ಲಿ ಅಪಘಾತ (Accident) ಸಂಭವಿಸಿದ್ದು, ಹಿಂದಿ ಪೊಲೀಸ್ ಸಿನಿಮಾಗಳ ನಂತರ ‘ಲೇಡಿ ಸಿಂಗಂ’ ಹಾಗೂ ‘ದಬಂಗ್ ಕಾಪ್’ ಎಂಬ ಹೆಸರುಗಳಿಂದ ಜನಪ್ರಿಯವಾಗಿರುವ ಜುನ್ಮೋನಿ ರಾಭಾ (30) ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ ವೇಳೆ ರಾಭಾ ತಮ್ಮ ಖಾಸಗಿ ಕಾರಿನಲ್ಲಿ ಏಕಂಗಿಯಾಗಿ ಹೋಗುತ್ತಿದ್ದು, ಪೊಲೀಸ್ ಸಮವಸ್ತ್ರ ಧರಿಸಿರಲಿಲ್ಲ. ನಸುಕಿನ ಜಾವ 2:30ರ ಸುಮಾರಿಗೆ ಮಾಹಿತಿ ತಿಳಿದ ಪೋಲಿಸ್ ತಂಡವು ಕೂಡಲೇ ಘಟನೆ ನಡೆದ ಸ್ಥಳಕ್ಕೆ ಧಾವಿಸಿ ರಾಭಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ರಾಭಾ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಂಬುಲೆನ್ಸ್ ಕೊಡದ ಸರ್ಕಾರಿ ಆಸ್ಪತ್ರೆ- ಮಗಳ ಶವವನ್ನು ಬೈಕಿನಲ್ಲೇ ಸಾಗಿಸಿದ ತಂದೆ!
2022ನೇ ವರ್ಷದ ಜೂನ್ ತಿಂಗಳಿನಲ್ಲಿ ತನ್ನ ಮಾಜಿ ಪ್ರಿಯಕರನೊಂದಿಗೆ ಸೇರಿಕೊಂಡು ರಭಾ ಲೀಗ್ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಅಮಾನತು ಹಿಂಪಡೆದುಕೊಂಡು ಮತ್ತೆ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಆದೇಶ ಹೊರಡಿಸಿತು. ನಂತರ ರಾಭಾ ಮತ್ತೆ ಸೇವೆಗೆ ಸೇರಿದರು. ಇಂತಹ ಹಲವಾರು ಅಕ್ರಮ ಹಾಗೂ ಅಪರಾಧಗಳನ್ನು ರಾಭಾ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿತ್ತು. ಇದನ್ನೂ ಓದಿ: ಬರೋಬ್ಬರಿ 9 ವರ್ಷಗಳ ಬಳಿಕ ದೇಗುಲದಲ್ಲಿ ಕದ್ದ ಆಭರಣ ವಾಪಸ್ ನೀಡಿದ ಕಳ್ಳ!
ಘಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಭಾ ತಾಯಿ ಸುಮಿತ್ರಾ ರಾಭಾ, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಆರೋಪಿಸಿದ್ದು, ಯಾವುದೋ ಅಪರಿಚಿತ ತಂಡದಿಂದ ನಡೆದಿದೆ ಎಂದು ಹೇಳಿದ್ದಾರೆ. ಘಟನೆ ನಡೆಯುವ ಹಿಂದಿನ ದಿನ ರಾತ್ರಿ ಉನ್ನತ ಪೊಲೀಸ್ ಅಧಿಕಾರಿಗಳ ತಂಡವು ನಾಗಾನ್‌ನಲ್ಲಿರುವ ರಾಭಾ ಅವರ ಅಧಿಕೃತ ಕ್ವಾರ್ಟರ್‌ಗೆ ದಾಳಿ ನಡೆಸಿ ಸುಮಾರು 1 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ವೇಳೆ ರಾಭಾ ತಾಯಿ ಸಹಾ ಅಲ್ಲೇ ಇದ್ದು, ಆ ಹಣ ತಾನು ಕೋಳಿ ಮತ್ತು ಹಂದಿ ಸಾಕಾಣಿಕೆ ಮಾಡಿ ಗಳಿಸಿರುವ ಹಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂವರು ಅಪ್ರಾಪ್ತರಿಂದಲೇ 12ರ ಬಾಲಕನ ಭೀಕರ ಹತ್ಯೆ – ತಲೆಗೆ ಜಜ್ಜಿ ಕತ್ತು ಸೀಳಿದ್ರು
ಅಪಘಾತದ ಬಳಿಕ ಉತ್ತರ ಪ್ರದೇಶ (Uttar Pradesh) ನೋಂದಣಿ ಹೊಂದಿದ್ದ ಕಂಟೈನರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನಾಗಾಂವ್ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ರಾಭಾ ದೇಹವನ್ನು ಗುವಾಹಟಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಮೃತ ರಾಭಾ ಕುಟುಂಬಸ್ಥರು ಈ ಘಟನೆ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ನಾಗಾಂವ್ (Nagaon) ಪೊಲೀಸ್ ಅಧೀಕ್ಷಕಿ ಲೀನಾ ಡೋಲಿ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಇದನ್ನೂ ಓದಿ: ದೆಹಲಿಯ ಶಾಲೆಗೆ ಬಾಂಬ್ ಬೆದರಿಕೆ ಕರೆ – ತೀವ್ರ ಶೋಧ
ನೆಲಮಂಗಲ: ಮಂಗಳೂರು ಕಡೆಗೆ ಸಂಚರಿಸುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ಈ ಅವಘಡ ಸಂಭವಿಸಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಷ್ಟ್ರೀಯ ಹೆದ್ದಾರಿಯಿಂದ ಡಿವೈಡರ್ ದಾಟಿ ಮನೆಗೆ ನುಗ್ಗಿದ ಪರಿಣಾಮ ತೆಂಗಿನ ಮರದಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದ ಮನೆಯ ಗೋಡೆ ಸಂಪೂರ್ಣ ಜಖಂಗೊಂಡಿದ್ದು, ಹಳೆಯ ತೆಂಗಿನ ಮರ ನೆಲಕ್ಕೆ ಬಿದ್ದಿದೆ.
ವೇಗವಾಗಿ ಬರುತ್ತಿದ್ದ ಲಾರಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ವೇಗ ನಿಯಂತ್ರಣಕ್ಕೆ ಬಂದಿದೆ. ಇದರಿಂದಾಗಿ ಮನೆಯಲ್ಲಿ ಇದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ನೆರವಿನೊಂದಿಗೆ ಲಾರಿ ತೆರವುಗೊಳಿಸಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅವಘಡ ನಡೆದಿದೆ ಎನ್ನಲಾಗಿದೆ.
ಮಂಗಳೂರು: ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಚೇತನ್ (21) ಮೃತಪಟ್ಟ ಕಾರು ಚಾಲಕ. ಮಂಗಳೂರಿನ ಹೊರ ವಲಯದ ತೊಕ್ಕೊಟ್ಟು ಎಂಬಲ್ಲಿ ಮೆಹಂದಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಐದು ಮಂದಿ ಹಿಂದುರುತ್ತಿದ್ದರು. ಜಪ್ಪಿನಮೊಗರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಚೇತನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಇದ್ದ ನಾಲ್ವರು ಗಾಯಗೊಂಡಿದ್ದಾರೆ.
ಗಾಯಗೊಂಡ ನಾಲ್ವರನ್ನು ಕೂಡಲೇ ಮಾರ್ಗದಲ್ಲಿ ಹೋಗುತ್ತಿದ್ದ ಜನರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ಕಂಟೇನರ್ ಲಾರಿ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಚಾಲಕ ಹಾಗೂ ಕ್ಲೀನರ್ ಸೇರಿದಂತೆ ನಾಲ್ವರು ಸಜೀವ ದಹನವಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಘಟನೆ ನಡೆದಿದ್ದು, ಹರಿಯಾಣ ರಾಜ್ಯಕ್ಕೆ ಸೇರಿದ ಗ್ಯಾಸ್ ಟ್ಯಾಂಕರ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಟಯರ್ ಗಳನ್ನು ತುಂಬಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ಗ್ಯಾಸ್ ಟ್ಯಾಂಕರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಅಪಘಾತದ ಹಿನ್ನಲೆ ದಟ್ಟವಾದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ವಾಹನಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದ್ದವು.
ಕಂಟೇನರ್ ಲಾರಿಯಲ್ಲಿದ್ದ ಇನ್ನಿಬ್ಬರು ಕೂಡ ಸಜೀವ ದಹನವಾಗಿರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಂಟೇನರ್ ಲಾರಿ ಹಾಗೂ ಟ್ಯಾಂಕರ್ ನಲ್ಲಿ ಒಟ್ಟು 4 ಮಂದಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದ್ದು, ಟ್ಯಾಂಕರ್ ನಿಂದ ದಟ್ಟ ಹೊಗೆ ಬರುತ್ತಿದ್ದ ಹಿನ್ನೆಲೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ಜಗಳೂರು ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.