Tag: Contempt of Court

  • ಜಪ್ತಿಗೆ ಬಂದವರಿಗೆ ಕಾರು ಕೀ ಕೊಡದೇ ಸತಾಯಿಸಿದ ಕೊಪ್ಪಳ ಡಿಸಿ

    ಜಪ್ತಿಗೆ ಬಂದವರಿಗೆ ಕಾರು ಕೀ ಕೊಡದೇ ಸತಾಯಿಸಿದ ಕೊಪ್ಪಳ ಡಿಸಿ

    ಕೊಪ್ಪಳ: ನ್ಯಾಯಾಂಗ ನಿಂದನೆಗೆ (Contempt of Court) ಕೊಪ್ಪಳ ಜಿಲ್ಲಾಧಿಕಾರಿ (Koppala DC) ನಳೀನ್ ಅತುಲ್ ಗುರಿಯಾಗಿದ್ದಾರೆ.

    ಪ್ರಕರಣ ಒಂದರ ವಿಚಾರಣೆ ನಡೆಸಿದ್ದ ಗಂಗಾವತಿಯ ಕೋರ್ಟ್‌ (Gangavathi Court) ಜಿಲ್ಲಾಧಿಕಾರಿ ಕಾರನ್ನು ಜಪ್ತಿ ಮಾಡಲು ಆದೇಶಿಸಿತ್ತು. ಕಾರು ಜಪ್ತಿ ಮಾಡಲು ಕೋರ್ಟ್ ಅಧಿಕಾರಿಗಳು ಹೋದಾಗ ಡಿಸಿ ಕೀ ಕೊಡದೇ ಸತಾಯಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಜಿಗಿದ ಮಹಿಳೆ

     

    ಏನಿದು ಪ್ರಕರಣ?
    ಗಂಗಾವತಿ ನಗರಸಭೆ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಈ ವೇಳೆ ಗಂಗಾವತಿಯ ಕಲ್ಮಠ ಹಾಗೂ ವೀರುಪಾಕ್ಷಪ್ಪ ಅವರ ಭೂಮಿ ಒತ್ತುವರಿ ಮಾಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಮಾಲೀಕರಿಗೆ ಮಾಹಿತಿ ನೀಡದೇ ರಸ್ತೆ ಅಗಲೀಕರಣ ಮಾಡಿದ್ದು, ಮತ್ತು ಪರಿಹಾರ ಕೊಡದ ಹಿನ್ನೆಲೆ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ತಾಯಿ, ಮಗನ ಕೊಲೆ ಕೇಸ್‌ – ಪೊಲೀಸರಿಗೆ ಹೆದರಿ ಆರೋಪಿ ನೇಣಿಗೆ ಶರಣು

    ಸುದೀರ್ಘ 6 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್‌ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಲು ಆದೇಶ ಮಾಡಿತ್ತು. ವಿಚಾರಣೆ ಮಾಡಿದ ಬಳಿಕ ಕಲ್ಮಠಕ್ಕೆ ಸುಮಾರು 7 ಲಕ್ಷ ರೂ., ವಿರೂಪಾಕ್ಷಪ್ಪ ಅವರಿಗೆ 6 ಲಕ್ಷ ರೂ. ಪರಿಹಾರ ನೀಡಲು ಆದೇಶ ಮಾಡಿತ್ತು. ಇದುವರೆಗೂ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಮಾಲೀಕರು ಮತ್ತೊಮ್ಮೆ ಕೋರ್ಟ್ ಮೊರೆ ಹೋದಾಗ ಗಂಗಾವತಿಯ ಹಿರಿಯ ಶ್ರೇಣಿಯ ನ್ಯಾಯಾಲಯ ಕಾರು ಜಪ್ತಿ ಮಾಡಲು ಆದೇಶ ನೀಡಿತ್ತು.

  • ಜ್ಞಾನವಾಪಿ ತೀರ್ಪು ವಿರೋಧಿಸಿ ನ್ಯಾಯಾಧೀಶರ ನಿಂದನೆ – ವಕೀಲ ಅರೆಸ್ಟ್

    ಜ್ಞಾನವಾಪಿ ತೀರ್ಪು ವಿರೋಧಿಸಿ ನ್ಯಾಯಾಧೀಶರ ನಿಂದನೆ – ವಕೀಲ ಅರೆಸ್ಟ್

    ರಾಮನಗರ: ಜ್ಞಾನವಾಪಿ ಮಸೀದಿಯ (Gyanvapi Mosque) ನೆಲ ಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಅವಕಾಶ ಕೊಟ್ಟಿದ್ದನ್ನು ವಿರೋಧಿಸಿ, ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ರಾಮನಗರ (Ramanagara) ಮೂಲದ ವಕೀಲನನ್ನ (Lawyer) ಪೊಲೀಸರು  (Police) ಬಂಧಿಸಿದ್ದಾರೆ.

    ಬಂಧಿತ ವಕೀಲನನ್ನು ಚಾನ್ ಪಾಷ ಎಂದು ಗುರುತಿಸಲಾಗಿದೆ. ಆರೋಪಿ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ವಿಚಾರಕ್ಕೆ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಪೋಸ್ಟ್‍ನಲ್ಲಿ ನ್ಯಾಯಾಧೀಶರನ್ನು ನಾಲಾಯಕ್, ಭ್ರಷ್ಟ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್

    ಈ ಸಂಬಂಧ ಹಿಂದೂಪರ ಕಾರ್ಯಕರ್ತರು ಹಾಗೂ ಕೆಲ ವಕೀಲರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ನ್ಯಾಯಾಂಗ ನಿಂದನೆ (Contempt Of Court) ಆರೋಪದಡಿ ಚಾನ್ ಪಾಷನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: 15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ

  • ಕೋರ್ಟ್ ಕಟಕಟೆಯಲ್ಲಿ ನಿಂತು ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಕೋರ್ಟ್ ಕಟಕಟೆಯಲ್ಲಿ ನಿಂತು ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ದು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ (The Kashmir Files) ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಕ್ಷಮೆ ಕೇಳಿದ್ದಾರೆ. 2018ರಲ್ಲಿ ವಿವೇಕ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ (Contempt of Court) ದಾಖಲಾಗಿತ್ತು. ಖುದ್ದಾಗಿ ಕೋರ್ಟಿಗೆ ಬಂದು ಕ್ಷಮೆ ಕೇಳಬೇಕು ಎಂದು ದೆಹಲಿ (Delhi) ಹೈಕೋರ್ಟ್ (High Court) ವಿವೇಕ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

    ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್.ಮುರಳೀಧರ್ ಅವರ ಕುರಿತು ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತನಾಗಿದ್ದ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಿದ್ದ ನ್ಯಾಯಾಧೀಶರ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದರು ವಿವೇಕ್. ಈ ಕುರಿತಂತೆ ವಿವೇಕ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.

    kashmir

    ಈ ಪ್ರಕರಣಕ್ಕೆ ಇತಿಶ್ರೀ ಹಾಡಲೆಂದೇ ವಿವೇಕ್ 2022ರ ಡಿಸೆಂಬರ್ ನಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ದೆಹಲಿ ಹೈಕೋರ್ಟ್ ಖುದ್ದಾಗಿ ಬಂದು ಕ್ಷಮೆಯಾಚಿಸಬೇಕು ಎಂದು ಸೂಚಿಸಿತ್ತು. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನೂ ನೀಡಿತ್ತು. ಹಾಗಾಗಿ ನಿನ್ನೆ ಖುದ್ದಾಗಿ ಕೋರ್ಟಿಗೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೋರ್ಟ್ ವಜಾಗೊಳಿಸಿದೆ.

    ದಿ ಕಾಶ್ಮೀರ ಫೈಲ್ಸ್ ಸಿನಿಮಾ ಹಿಟ್ ಆದ ನಂತರ ಸೋಷಿಯಲ್ ಮೀಡಿಯಾದಲ್ಲಿ ಅನೇಕ ರೀತಿಯಲ್ಲಿ ವಿವೇಕ್ ಬರೆಯುತ್ತಿದ್ದಾರೆ. ಇವರ ಬರವಣಿಗೆ ಸಾಕಷ್ಟು ವಿವಾದಗಳನ್ನೂ ಹುಟ್ಟುಹಾಕಿವೆ. ಪ್ರಕಾಶ್ ರಾಜ್ ಸೇರಿದಂತೆ ಅನೇಕರು ವಿವೇಕ್ ಕುರಿತು ಟೀಕೆಗಳನ್ನು ಮಾಡಿದ್ದಾರೆ. ಮಾಡಿದ ಟೀಕೆಗಳಿಗೆ ಅವರೂ ಉತ್ತರವನ್ನು ನೀಡಿದ್ದಾರೆ.

  • ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ನ್ಯಾಯಾಂಗ ನಿಂದನೆ ಆರೋಪಕಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದೆಹಲಿ ಹೈಕೋರ್ಟಿಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಕ್ಷಮೆ ಕುರಿತಂತೆ ತಮ್ಮ ವಕೀಲರ ಮೂಲಕ ಅವರು ಅಫಿಡವಿಟ್ ಸಲ್ಲಿಸಿದ್ದಾರೆ. ಈ ಹಿಂದೆ ವಿವೇಕ್ ಟ್ವೀಟ್ ಒಂದನ್ನು ಮಾಡಿದ್ದರು. ಆ ಟ್ವೀಟ್‍ ನಲ್ಲಿ ನ್ಯಾಯಾಂಗ ನಿಂದನೆ ಮಾಡಿದ್ದರು.  ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು.

    2018ರಲ್ಲಿ ಭೀಮಾ ಕೋರೆಗಾಂವ್ ಪ್ರಕಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖ ಅವರಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ, ನ್ಯಾಯಮೂರ್ತಿಗಳಾದ ಎಸ್.ಮುರುಳೀಧರ್ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಆ ಟ್ವೀಟ್ ಅನ್ನು ಸ್ವತಃ ಟ್ವಿಟರ್ ಸಂಸ್ಥೆಯೇ ಡಿಲೀಟ್ ಮಾಡಿತ್ತು. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

    kashmir

    ವಕೀಲರ ಮೂಲಕ ಈ ಹಿಂದಿನ ಟ್ವೀಟ್ ಅನ್ನು ತಗೆದುಹಾಕಿದ್ದೇವೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳುವ ಪ್ರಯತ್ನ ಮಾಡಿದ್ದರು. ಆದರೆ, ಟ್ವಿಟರ್ ಸಂಸ್ಥೆಯೇ ಅದನ್ನು ತಗೆದುಹಾಕಿದ್ದು ಎಂದು ವಾದಿಸಲಾಗಿತ್ತು. ಅಲ್ಲದೇ, ಖುದ್ದಾಗಿ ವಿವೇಕ್ ಅಗ್ನಿಹೋತ್ರಿ ನ್ಯಾಯಾಲಯದ ಮುಂದೆ ಹಾಜರು ಕೂಡ ಆಗಿರಲಿಲ್ಲ. ಇದೆಲ್ಲವನ್ನೂ ಪರಿಗಣಿಸಿರುವ ನ್ಯಾಯಾಲಯವು 2023 ಮಾರ್ಚ್ 16ರಂದು ಕೋರ್ಟಿಗೆ ಖುದ್ದಾಗಿ ಹಾಜರಿರಬೇಕು ಎಂದು ಆದೇಶಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಬಲ್‌ ವಿರುದ್ದ ನ್ಯಾಯಾಂಗ ನಿಂದನೆ ಕೇಸ್‌: ಅಟಾರ್ನಿ ಜನರಲ್‌ಗೆ ಮನವಿ

    ಸಿಬಲ್‌ ವಿರುದ್ದ ನ್ಯಾಯಾಂಗ ನಿಂದನೆ ಕೇಸ್‌: ಅಟಾರ್ನಿ ಜನರಲ್‌ಗೆ ಮನವಿ

    ನವದೆಹಲಿ: ಸುಪ್ರೀಂ ಕೋರ್ಟ್‌ ತೀರ್ಪುಗಳನ್ನು ಉಲ್ಲೇಖಿಸಿ ಮಾತನಾಡಿದ್ದ ಮಾಜಿ ಕಾಂಗ್ರೆಸ್‌ ನಾಯಕ, ಹಿರಿಯ ವಕೀಲ, ಪ್ರಸ್ತುತ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಾಗುವ ಸಾಧ್ಯತೆಯಿದೆ.

    ವಕೀಲರಾದ ವಿನೀತ್ ಜಿಂದಾಲ್ ಮತ್ತು ಶಶಾಂಕ್ ಶೇಖರ್ ಝಾ ಅವರು, ಭಾರತೀಯ ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿ ಘನತೆಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಲು ಒಪ್ಪಿಗೆ ನೀಡುವಂತೆ ಭಾರತದ ಅಟಾರ್ನಿ ಜನರಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    court order law

    ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗದ ವಿರುದ್ಧ ಸಿಬಲ್ ಮಾಡಿದ ಟೀಕೆಗಳ ಬಗ್ಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಕೂಡ ಟೀಕಿಸಿದೆ. ಹಿರಿಯ ವಕೀಲ ಮತ್ತು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ, ಕಪಿಲ್ ಸಿಬಲ್ ಅವರು ಇಂತಹ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ. ಅವರು ಕಾನೂನು ಕ್ಷೇತ್ರದ ಧೀಮಂತರು ಮತ್ತು ದೇಶದ ಮಾಜಿ ಕಾನೂನು ಸಚಿವರೂ ಆಗಿದ್ದಾರೆ. ಎರಡು, ಮೂರು ಪ್ರಕರಣದಲ್ಲಿ ಸೋತಿದ್ದಕ್ಕೆ ನ್ಯಾಯಾಂಗವನ್ನು ಗುರಿಯಾಗಿ ಮಾತನಾಡುವುದು ಸರಿಯಲ್ಲ. ನ್ಯಾಯಾಂಗವು ಮುಕ್ತ ಮತ್ತು ಸ್ವತಂತ್ರ ಸಂಸ್ಥೆಯಾಗಿದೆ. ಅದರ ಮೇಲೆ ದಾಳಿ ಮಾಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್‌ ಬ್ಯಾನ್‌? – ಭಾರತದಲ್ಲಿ ಯಾವ ಕಂಪನಿಯ ಪಾಲು ಎಷ್ಟಿದೆ?

    ನೀವು ದುರ್ಬಲ ಪ್ರಕರಣವನ್ನು ತೆಗೆದುಕೊಂಡು ನ್ಯಾಯಾಲಯದಲ್ಲಿ ಸೋತರೆ ನ್ಯಾಯಾಧೀಶರು ಮತ್ತು ನ್ಯಾಯಾಂಗವನ್ನು ದೂಷಿಸಲು ಬರುವುದಿಲ್ಲ ಎಂದು ಮಿಶ್ರಾ ಅಭಿಪ್ರಾಯ ವ್ಯಕ್ತಪಡಿದ್ದಾರೆ.

    ಸಿಬಲ್‌ ಹೇಳಿದ್ದೇನು?
    ಸುಪ್ರೀಂ ಕೋರ್ಟ್‌ ಮೇಲೆ ನನಗೆ ಯಾವುದೇ ಭರವಸೆ ಇಲ್ಲ. ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಸಿಗುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು ಭಾವನೆಯಾಗಿದೆ. ನಾನು 50 ವರ್ಷಗಳ ಕಾಲ ವಕೀಲಿಕೆ ಪೂರ್ಣಗೊಳಿಸಿದ ನಂತರ ಈ ಮಾತನ್ನು ಹೇಳುತ್ತಿದ್ದೇನೆ.

    ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ನೀಡಿದ ತೀರ್ಪನ್ನು ಉಲ್ಲೇಖಿಸಿ, ಗುಜರಾತ್ ಗಲಭೆ ವೇಳೆ ಮನೆಗಳಿಗೆ ಬೆಂಕಿ ಹಚ್ಚಲಾಯಿತು. ಆಗ ಅಗ್ನಿಶಾಮಕ ದಳವನ್ನು ಪೊಲೀಸರು ಕರೆಸಿರಲಿಲ್ಲ. ಇದು ಉದ್ದೇಶಪೂರ್ವಕ ಹಿಂಸಾಚಾರ ಎಂದು ನಾನು ದಾಖಲೆ ಸಮೇತ ವಾದ ಮಾಡಿದ್ದೆ. ಆದರೆ ಕೋರ್ಟ್ ಇದನ್ನು ಪರಿಗಣಿಸಲೇ ಇಲ್ಲ. ಸಾಮಾಜಿಕ ಕಾರ್ಯಕರ್ತೆ, ತೀಸ್ತಾ ಸೆಟಲ್ವಾಡ್ ಬಗ್ಗೆ ವಾದ-ಪ್ರತಿವಾದ ನಡೆಯಲಿಲ್ಲ. ಆದರೂ ಅವರನ್ನು ತೀರ್ಪಿನಲ್ಲಿ ದೂಷಿಸಲಾಗಿದೆ.

    ಯಾವಾಗ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠವನ್ನು ನಿಗದಿಪಡಿಸುತ್ತಾರೋ ಅಂಥ ನ್ಯಾಯಾಂಗ ಸ್ವತಂತ್ರವಲ್ಲ. ಈಗ ಮಾತನಾಡುವ ಕಾಲ ಬಂದಿದೆ. ನಾವು ಈಗ ಮಾತನಾಡದೇ ಇನ್ಯಾರು ಮಾತನಾಡಬೇಕು?

    Live Tv
    [brid partner=56869869 player=32851 video=960834 autoplay=true]

  • 1800 ಕೋಟಿ ಟೆಂಡರ್‌ ರದ್ದು – ಸರ್ಕಾರ ಕ್ರಮವೇ ನ್ಯಾಯಾಂಗ ನಿಂದನೆ ಎಂದ ಹೈಕೋರ್ಟ್‌

    1800 ಕೋಟಿ ಟೆಂಡರ್‌ ರದ್ದು – ಸರ್ಕಾರ ಕ್ರಮವೇ ನ್ಯಾಯಾಂಗ ನಿಂದನೆ ಎಂದ ಹೈಕೋರ್ಟ್‌

    ಬೆಂಗಳೂರು: ಅಂಬುಲೆನ್ಸ್ ನಿಯಂತ್ರಣಾ ಕೇಂದ್ರ ಸ್ಥಾಪಿಸುವ ಸಂಬಂಧ 1800 ಕೋಟಿ ರೂ. ಟೆಂಡರ್‌ ರದ್ದುಗೊಳಿಸಿದ್ದಕ್ಕೆ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

    ಅಂಬುಲೆನ್ಸ್ ಗಳ ಸುಗಮ‌ ಸಂಚಾರಕ್ಕೆ ನಿಯಂತ್ರಣ ಕೇಂದ್ರ ಸ್ಥಾಪಿಸಲು 1800 ಕೋಟಿ ರೂ. ಟೆಂಡರ್‌ ಕರೆಯಲು ಸರ್ಕಾರ ಮುಂದಾಗಿತ್ತು. ಆದರೆ ಆರೋಗ್ಯ ಸಚಿವರ ಸೂಚನೆಯಂತೆ ಟೆಂಡರ್ ರದ್ದುಗೊಳಿಸಿದ್ದು ಯಾಕೆ ಎಂದು ಪ್ರಶ್ನಿಸಿ ಸಿಜೆ ಎ.ಎಸ್.ಒಕಾ‌ ನೇತೃತ್ವದ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.

    ಹೈಕೋರ್ಟ್ ಟೆಂಡರ್ ಪ್ರಕ್ರಿಯೆಯ ನಿಗಾ ವಹಿಸಿದೆ. ಕೋರ್ಟ್‌ಗೆ ಭರವಸೆ ನೀಡಿದ ಬಳಿಕವೂ ಟೆಂಡರ್ ರದ್ದುಪಡಿಸಿದ್ದು ಯಾಕೆ? ಸರ್ಕಾರದ ಕ್ರಮವೇ ನ್ಯಾಯಾಂಗ ನಿಂದನೆಯಾಗಿದೆ. ಸಚಿವರಿಗೆ ಕೋರ್ಟ್ ವಿಚಾರಣೆಯ ಮಾಹಿತಿ ಇರಲಿಲ್ಲವೇ ಎಂದು ಪ್ರಶ್ನಿಸಿದೆ.

    ಸರ್ಕಾರದ ಪ್ರಮಾಣಪತ್ರದಲ್ಲೂ ರದ್ದಿಗೆ ಸಕಾರಣ ನೀಡಿಲ್ಲ. ಕೋರ್ಟ್‌ಗೂ ಮಾಹಿತಿ ನೀಡದೇ ಟೆಂಡರ್ ರದ್ದುಪಡಿಸಿದ್ದೇಕೆ? ಸರ್ಕಾರ ಇದಕ್ಕೆ ಸೂಕ್ತ ವಿವರಣೆ ನೀಡಬೇಕು. ಇಲ್ಲವಾದರೆ ಆರೋಗ್ಯ ಸಚಿವರನ್ನೇ ಪ್ರತಿವಾದಿಯಾಗಿಸುವುದಾಗಿ ಎಚ್ಚರಿಕೆ ನೀಡಿದೆ.

    ಟೆಂಡರ್‌ ರದ್ದುಪಡಿಸಲು ತಜ್ಞರ ಲಿಖಿತ ಅಭಿಪ್ರಾಯವನ್ನೂ ಪಡೆದಿಲ್ಲ. ಇದು ಟೆಂಡರ್ ಪ್ರಕ್ರಿಯೆಯನ್ನು ವಿಳಂಬಿಸುವ ಯತ್ನವೆನಿಸುತ್ತಿದೆ. ಆರೋಗ್ಯ ಸಚಿವರೇ ಸ್ವತಃ ವೃತ್ತಿಪರ ವೈದ್ಯರಾಗಿದ್ದಾರೆ. ಹೀಗಿರುವಾಗ ಟೆಂಡರ್‌ ರದ್ದುಗೊಳಿಸಿದ್ದು ಯಾಕೆ ಎಂದು ಪ್ರಶ್ನಿಸಿದೆ.

     

    ಅಕ್ರಮಗಳು ನಡೆದಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಟೆಂಡರ್‌ ಪ್ರಕ್ರಿಯೆ ರದ್ದು ಮಾಡಲಾಗಿದೆ ಎಂದು ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ ಈ ಸಮಜಾಯಿಷಿಯನ್ನು ಒಪ್ಪದ ಕೋರ್ಟ್‌ ಚಾಟಿ ಬೀಸಿ ಪ್ರಶ್ನಿಸಿದೆ.

    ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಲ್ಲಿ ಅಂಬುಲೆನ್ಸ್‌ಗಳು ಸಿಲುಕಿಕೊಳ್ಳುತ್ತಿವೆ. ಆಸ್ಪತ್ರೆ ತಲುಪುವುದು ವಿಳಂಬವಾಗಿ ರೋಗಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಮರ್ಪಕ ಅಂಬುಲೆನ್ಸ್ ಸೇವೆಗಾಗಿ ನಿಯಂತ್ರಣಾ ಕೇಂದ್ರ ಸ್ಥಾಪಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಭಾರತ ಪುನರುತ್ಥಾನ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

  • 2 ಟ್ವೀಟ್‌ ಮಾಡಿ ಅಪರಾಧಿಯಾದ ಪ್ರಶಾಂತ್‌ ಭೂಷಣ್‌ – ಶಿಕ್ಷೆ ಏನಿರಬಹುದು?

    2 ಟ್ವೀಟ್‌ ಮಾಡಿ ಅಪರಾಧಿಯಾದ ಪ್ರಶಾಂತ್‌ ಭೂಷಣ್‌ – ಶಿಕ್ಷೆ ಏನಿರಬಹುದು?

    ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ಅಪರಾಧಿ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

    ನ್ಯಾ. ಅರುಣ್‌ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು ‘ನ್ಯಾಯಾಂಗ ನಿಂದನೆ ಕಾಯ್ದೆ’ ಅನ್ವಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 20ಕ್ಕೆ ಪ್ರಕಟಿಸುವುದಾಗಿ ತಿಳಿಸಿದೆ.

    ಪ್ರಶಾಂತ್ ಭೂಷಣ್ ಅವರಿಗೆ ಈ ಕಾಯ್ದೆಯ ಅಡಿ ಗರಿಷ್ಟ 6 ತಿಂಗಳು ಜೈಲು ಶಿಕ್ಷೆ ಅಥವಾ 2 ಸಾವಿರ ರೂಪಾಯಿ ದಂಡ ಅಥವಾ ಜೈಲುವಾಸ ಮತ್ತು ದಂಡ ಎರಡನ್ನೂ ವಿಧಿಸಲು ಅವಕಾಶವಿದೆ.

    ಜೂನ್‌ 27 ಹಾಗೂ 29ರಂದು ಭೂಷಣ್‌ ಎರಡು ಟ್ವೀಟ್‌ಗಳನ್ನು ಮಾಡಿದ್ದರು. ಈ ಟ್ವೀಟ್‌ಗಳ ಬಗ್ಗೆ ಭಾರೀ ಚರ್ಚೆ/ ಟೀಕೆ ವ್ಯಕ್ತವಾದ ಬಳಿಕ ಟ್ವಿಟ್ಟರ್‌ ಈ ಎರಡು ಟ್ವೀಟ್‌ಗಳನ್ನು ತೆಗೆದು ಹಾಕಿತ್ತು.

    ಈ ಬಗ್ಗೆ ಗ್ವಾಲಿಯರ್ ಮೂಲದ ವಕೀಲರೊಬ್ಬರು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಬಳಿಕ ಸುಪ್ರೀಂ ಕೋರ್ಟ್‌ ನಿಮ್ಮ ವಿರುದ್ಧ ನಾವು ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ಪ್ರಶ್ನಿಸಿ ನೋಟಿಸ್‌ ಜಾರಿ ಮಾಡಿತ್ತು.

    ಶೋಕಾಸ್‌ ನೋಟಿಸ್‌ಗೆ ಅಫಿಡವಿಟ್‌ ಸಲ್ಲಿಸಿದ್ದ ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಿಂದನೆ ಮಾಡಿ ಟ್ವೀಟ್‌ ಮಾಡಿದ್ದು ತಪ್ಪು. ಅವರು ಬೈಕ್‌ನಲ್ಲಿ ತೆರಳುತ್ತಿರಲಿಲ್ಲ. ನಿಂತಿದ್ದ ಬೈಕ್ ಮೇಲೆ ಹೆಲ್ಮೆಟ್ ಧರಿಸದ್ದೇ ಕುಳಿತ್ತಿದ್ದನ್ನು ಗಮನಿಸುವಲ್ಲಿ ನಾನು ವಿಫಲನಾಗಿದ್ದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

    ಟ್ವೀಟ್ ಗಳ ಬಗ್ಗೆ ಪ್ರಶಾಂತ್ ಭೂಷಣ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕಳೆದ ಜುಲೈ 22ರಂದು ತಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ಏಕೆ ನಡೆಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್‌ ನೀಡಿತ್ತು.

    ಟ್ವೀಟ್‌ನಲ್ಲಿ ಏನಿತ್ತು?
    ಮೊದಲ ಟ್ವೀಟ್ – ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರದೇ ಕಳೆದ 6 ವರ್ಷದಲ್ಲಿ ಪ್ರಜಾಪ್ರಭುತ್ವವನ್ನು ಯಾವ ರೀತಿ ನಾಶ ಮಾಡಲಾಗಿದೆ ಎಂಬುದನ್ನು ಇತಿಹಾಸಕಾರರು ಹಿಂದಿರುಗಿ ನೋಡಿದರೆ, ಈ ನಾಶದಲ್ಲಿ ಸುಪ್ರೀಂ ಕೋರ್ಟ್‌ ಪಾತ್ರವನ್ನು ನೋಡಬಹುದು. ಅದರಲ್ಲೂ ವಿಶೇಷವಾಗಿ ಕಳೆದ 4 ಜಡ್ಜ್‌ಗಳ ಪಾತ್ರವನ್ನು ಸ್ಪಷ್ಟವಾಗಿ ಗಮನಿಸಬಹುದು.

    ಎರಡನೇ ಟ್ವೀಟ್‌: ನಾಗ್ಪುರದಲ್ಲಿ ರಾಜಭವನದಲ್ಲಿ ಬಿಜೆಪಿ ನಾಯಕನಿಗೆ ಸೇರಿದ 50 ಲಕ್ಷದ ಬೈಕ್‌ನಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಕ್ಕೆ ಕೊರೊನಾ ಲಾಕ್‌ಡೌನ್‌ ಎಂದು ರಜೆ ಹಾಕಿ ದೇಶದ ನಾಗರಿಕರ ಮೂಲಭೂತ ಹಕ್ಕಾದ ನ್ಯಾಯ ಸಿಗದ ಸಮಯದಲ್ಲಿ ಬೈಕ್‌ ಸವಾರಿ ಮಾಡಿದ್ದಾರೆ.

    ಈ ಎರಡು ಟ್ವೀಟ್‌ ಅಲ್ಲದೇ 2009ರಲ್ಲಿ ತೆಹಲ್ಕಾ ಮ್ಯಾಗಜಿನ್‌ಗೆ ಹಿಂದಿನ ಮುಖ್ಯ ನ್ಯಾಯಮೂರ್ತಿಗಳು ಭ್ರಷ್ಟರಾಗಿದ್ದರು ಎಂದು ಸಂದರ್ಶನ ನೀಡಿದ್ದ ಪ್ರಶಾಂತ್ ಭೂಷಣ್ ಹೇಳಿಕೆ ಸಂಬಂಧ ಸುಪ್ರೀಂ ಕೋರ್ಟ್ ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಿತ್ತು.

  • ಸಿಎಂ ಎಚ್‍ಡಿಕೆ ವಿರುದ್ಧ ಶಿವಸೇನೆ ಗರಂ

    ಸಿಎಂ ಎಚ್‍ಡಿಕೆ ವಿರುದ್ಧ ಶಿವಸೇನೆ ಗರಂ

    ಮುಂಬೈ: ಬೆಳಗಾವಿ ವಿಚಾರದಲ್ಲಿ ಕರ್ನಾಟಕ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನಡೆಗೆ ಶಿವಸೇನೆ ಕಿಡಿಕಾರಿದೆ.

    ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಮುಖ್ಯತೆ ನೀಡಲು ಸರ್ಕಾರ ಬೆಳಗಾವಿಯನ್ನು 2ನೇ ರಾಜಧಾನಿ ಮಾಡುವ ಸೂಚನೆ ನೀಡಿತ್ತು. ಸಿಎಂ ಅವರ ನಡೆಗೆ ಶಿವಸೇನೆ ಆಕ್ಷೇಪ ವ್ಯಕ್ತಪಡಿಸಿದ್ದು ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್ ನೀಡಲು ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದೆ.

    ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಗಡಿ ಸಮಸ್ಯೆ ಇದ್ದು, ಸಿಎಂ ಎಚ್‍ಡಿಕೆ ಹೇಳಿಕೆ ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಬೇಕೆಂದು ನಡೆಸುತ್ತಿರುವ ಹೋರಾಟಗಾರರ ಗಾಯದ ಮೇಲೆ ಉಪ್ಪು ಸವರಿದಂತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.

    ಮತ್ತೊಮ್ಮೆ ಬೆಳಗಾವಿ ಬಾಂಬೆ ಕರ್ನಾಟಕದ ಒಂದು ಭಾಗ ಎಂದು ಶಿವಸೇನೆ ವಾದ ನಡೆಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಸಿಎಂ ಎಚ್‍ಡಿಕೆ ಹೇಗೆ 2ನೇ ರಾಜಧಾನಿ ಮಾಡುವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರ ಕೂಡಲೇ ನ್ಯಾಯಾಲಯಲ್ಲಿ ದೂರನ್ನು ದಾಖಲಿಸಬೇಕು ಎಂದು ಹೇಳಿದೆ.

    ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಸಿಎಂ ಕುಮಾರಸ್ವಾಮಿಯವರು ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗುವುದು ಎಂದು ಜುಲೈ 31 ರಂದು ಹೇಳಿದ್ದರು.

    ಭಾಷಾವಾರು ಪ್ರಾಂತ್ಯದ ಆಧಾರದಲ್ಲಿ ರಾಜ್ಯಗಳನ್ನು ರಚಿಸುವ ವೇಳೆ ವೇಳೆ ಹೆಚ್ಚಿನ ಜನರು ಮಾತನಾಡುವ ಭಾಷೆಯ ಆಧಾರದ ಮೇಲೆ ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಲಾಯಿತು. ಬಳಿಕ ಸರ್ಕಾರ ಉತ್ತರ ಕರ್ನಾಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಸುವರ್ಣಸೌಧವನ್ನು ಬೆಳಗಾವಿಯಲ್ಲಿ ನಿರ್ಮಾಣ ಮಾಡಿತ್ತು. ಪ್ರತಿ ವರ್ಷ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತದೆ.

  • ಬಜೆಟ್ ದಿನವೇ ಸುಪ್ರೀಂನಿಂದ ಸಿಎಂಗೆ ಬಿಗ್ ರಿಲೀಫ್

    ಬಜೆಟ್ ದಿನವೇ ಸುಪ್ರೀಂನಿಂದ ಸಿಎಂಗೆ ಬಿಗ್ ರಿಲೀಫ್

    ನವದೆಹಲಿ: ಕಾವೇರಿ ನ್ಯಾಯಾಧಿಕರಣದ ಐತೀರ್ಪಿನಂತೆ ನಿಗಧಿತ ಪ್ರಮಾಣದಲ್ಲಿ ನೀರು ಹರಿಸಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ.

    ಕಾವೇರಿ ವಿವಾದದ ಕುರಿತು ಇಂದು ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ, ಕರ್ನಾಟಕದ ಪರ ವಾದವನ್ನು ಪರಿಗಣಿಸಿ ಐತೀರ್ಪಿನಲ್ಲಿದ್ದ ಕೆಲವು ಅಂಶಗಳಿಗೆ ಸುಧಾರಣೆ ಮಾಡಿ ತನ್ನ ತೀರ್ಪನ್ನು ಪ್ರಕಟಿಸಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 2013ರಲ್ಲಿ ತಮಿಳುನಾಡು ಸರ್ಕಾರ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಂದುವರಿಸಲು ಇಚ್ಛಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸುಪ್ರೀಂ ತೀರ್ಪಿನಲ್ಲಿ ಏನಿದೆ? ಇಲ್ಲಿದೆ 14 ಪ್ರಮುಖ ಅಂಶಗಳು

    ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
    ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು ಎಂದು ನ್ಯಾಯಾಧಿಕರಣ ತನ್ನ ಐತೀರ್ಪಿನಲ್ಲಿ ತಿಳಿಸಿತ್ತು.