Tag: contractor santosh

  • ಈಶ್ವರಪ್ಪನನ್ನು ವಜಾಗೊಳಿಸಿ – ಅಮಿತ್ ಶಾ ನಿವಾಸದ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

    ಈಶ್ವರಪ್ಪನನ್ನು ವಜಾಗೊಳಿಸಿ – ಅಮಿತ್ ಶಾ ನಿವಾಸದ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

    ನವದೆಹಲಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪನನ್ನು ವಜಾಗೊಳಿಸುವಂತೆ ದೆಹಲಿಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವಾಗಿ ಈಶ್ವರಪ್ಪ ವಿರುದ್ಧ ಇದೀಗ ಕೇಸ್ ದಾಖಲಾಗಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಅಮಿತ್ ಶಾ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಈಶ್ವರಪ್ಪ

    ಗುತ್ತಿಗೆದಾರ ಸಂತೋಷ್ ಬಳಿ ಸಚಿವ ಈಶ್ವರಪ್ಪ ಶೇ.40 ರಷ್ಟು ಕಮಿಷನ್ ಕೇಳಿದ್ದಾರೆ. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೊನೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಆರೋಪಿಸಿ, ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ನಕಲಿ ಡೆತ್ ನೋಟ್ ಇಟ್ಕೊಂಡು ಗೊಡ್ಡು ಬೆದರಿಕೆ ಹಾಕಿದ್ರೆ ಹೆದರಲ್ಲ: ಈಶ್ವರಪ್ಪ

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕದ ಸಚಿವ ಕೆಎಸ್ ಈಶ್ವರಪ್ಪ ಹಾಗೂ ಅವರ ಸಹಾಯಕರಾದ ಬಸವರಾಜ್ ಮತ್ತು ರಮೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ.

  • ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆ

    ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆ

    ನವದೆಹಲಿ: ಸಂತೋಷ್ ಪಾಟೀಲ್ ಮಾತ್ರವಲ್ಲ ಬಹಳಷ್ಟು ಗುತ್ತಿಗೆದಾರರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪ ಮಾಡಿದ್ದಾರೆ. ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಏನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ರಾಜ್ಯಸಭೆ ಸಂಸದ ನಾಸೀರ್ ಹುಸೇನ್ ಪ್ರಶ್ನಿಸಿದ್ದಾರೆ.

    MODi

    ನವದೆಹಲಿಯಲ್ಲಿ ಮಾತನಾಡಿದ ಅವರು, ಸಂತೋಷ ಪಾಟೀಲ್ ಡೆತ್‌ನೋಟ್‌ನಲ್ಲಿ ಕೆ.ಎಸ್.ಈಶ್ವರಪ್ಪ ಹೆಸರು ಉಲ್ಲೇಖಿಸಿದ್ದಾರೆ. ಸಾವಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಬಹಳಷ್ಟು ನಾಯಕರಿಗೆ ಪತ್ರ ಬರೆದು ನ್ಯಾಯ ಕೊಡಿಸಲು ಮನವಿ ಮಾಡಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಸರಣಿ ಪತ್ರಗಳನ್ನು ಬರೆದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಯಾವ ನಾಯಕರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತಮ್ಮ ಪಕ್ಷದ ಕಾರ್ಯಕರ್ತನಿಗೆ ತಮ್ಮದೇ ಪಕ್ಷದ ನಾಯಕರಿಂದ ಅನ್ಯಾಯ ಆದರೂ ಯಾರೂ ನ್ಯಾಯ ಕೊಡಿಸಲಿಲ್ಲ. ಇದರಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಸಂತೋಷ ಪಾಟೀಲ್ ಆತ್ಮಹತ್ಯೆ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಕೆ.ಎಸ್.ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಬೇಕು. ಒಂದು ವೇಳೆ ರಾಜೀನಾಮೆ ನೀಡದಿದ್ದಲ್ಲಿ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ