ಮಡಿಕೇರಿ: ಮತಾಂತರ ಕಾಯ್ದೆಗೆ ಈಗಾಗಲೇ ಅಂಕಿತ ಬಿದ್ದರೂ ಕೆಲವೊಂದು ಕಡೆ ರಾಜಾರೋಷವಾಗಿ ಕ್ರೈಸ್ತ ಮಿಷನರಿಗಳಿಂದ ಮತಾಂತರ ನಡೆಯುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮಂಚಳ್ಳಿ ಗ್ರಾಮಕ್ಕೆ ಕೇರಳದಿಂದ ಬಂದ ದಂಪತಿ ಗ್ರಾಮದಲ್ಲಿ ಇರುವ ಬಡ ವರ್ಗದವರನ್ನು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಕೆಎಲ್-12-ಎನ್2494 ಕಾರಿನಲ್ಲಿ ಕೊಡಗಿನ ಮಂಚಳ್ಳಿ ಗ್ರಾಮಕ್ಕೆ ಬಂದಿದ್ದ ದಂಪತಿ ಕೇರಳದ ಪಡಿಜ್ಞಾತ ಗ್ರಾಮದ ಕುರಿಯಚ್ಚನ್ ಹಾಗೂ ಸಲಿನಾಮ ದಂಪತಿ ಎನ್ನಲಾಗಿದೆ. ಇದನ್ನೂ ಓದಿ: ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೈನಿಕರು
ಈ ದಂಪತಿ ಗ್ರಾಮಕ್ಕೆ ಬಂದು ಮತಾಂತರ ಮಾಡುವ ಸಂದರ್ಭದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ಕೊಡಗು-ಕೇರಳ ಗಡಿ ಗ್ರಾಮದಲ್ಲಿ ಮತಾಂತರ ಪ್ರಕರಣ ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬರುತ್ತಿದೆ. ಹಿಂದೂಗಳನ್ನು ಮತಾಂತರ ಮಾಡಲು ಕ್ರೈಸ್ತ ದಂಪತಿ ಯತ್ನಿಸುತ್ತಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ದಂಪತಿಯನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರೋಧ ವಾಗ್ದಾಳಿ ಮಾಡಿದರು.
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ) ಕಾಯ್ದೆ ಬಗ್ಗೆ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದರು. ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸುತ್ತಿದೆ. ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಜನರು ಕಡಿಮೆ ನಾಟಕವನ್ನು ಬಯಸಿದ್ದರಿಂದ ಬೈಡನ್ ಆಯ್ಕೆಯಾದರು: ಟ್ರಂಪ್ ಕಾಲೆಳೆದ ಮಸ್ಕ್
ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದಿಂದ ಈ ಕಾಯ್ದೆಯನ್ನು ಜಾರಿ ಮಾಡಲಾಗುತ್ತಿದೆ. ಅದಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದರು.
ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ ಎಂದು ಪ್ರಶ್ನಿಸಿದರು.
ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ. ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದೂ ಬಾಂಧವರೆಲ್ಲರೂ ಖಂಡಿಸಬೇಕು ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್‍ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವಾ ಎಂದು ಸಿಎಂ ಬೊಮ್ಮಾಯಿ ಅವರಿಗೆ ಪ್ರಶ್ನೆ ಕೇಳಿದರು.
ಸ್ವಯೀಚ್ಛೆಯಿಂದ ಮತಾಂತರಗೊಳ್ಳುವ ಹಕ್ಕುನ್ನು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ಎಂದು ಕಿಡಿಕಾರಿದರು. ಇದನ್ನೂ ಓದಿ: ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7
ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲುತ್ತೆ. ಈ ಕಾಯ್ದೆಯ ವಿರುದ್ಧ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ತಿಳಿಸಿದರು.
– ಬಂದ್ನಿಂದ ಕನ್ನಡಿಗರಿಗೆ ಕಷ್ಟ ಆಗುತ್ತದೆ ಎಂದಿದ್ದ ಎಚ್‍ಡಿಕೆ
– ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಡುವ ದೃಷ್ಟಿಯಿಂದ ಬಂದ್ ಅಗತ್ಯವಿದೆ
ಹಾಸನ: ಮಾಜಿ ಸಿಎಂ ಕುಮಾರಸ್ವಾಮಿ ಬಂದ್‍ನಿಂದ ಕನ್ನಡಿಗರಿಗೆ ಕಷ್ಟ ಆಗುತ್ತದೆ ಎಂದು ಹೇಳಿದರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಒಂದು ದಿನ ತೀವ್ರ ತರವಾದ ಬಂದ್ ಮಾಡಿದರೆ ತಪ್ಪೇನು ಆಗಲ್ಲ ಎಂದು ಹೇಳುವ ಮೂಲಕ ಕರ್ನಾಟಕ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಡಿ.31 ಕರ್ನಾಟಕ ಬಂದ್ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕನ್ನಡಪರ ಚಳುವಳಿಗಾರರು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಅದು ಒಂದು ದಿನ ತೀವ್ರ ತರವಾದ ಬಂದ್ ಮಾಡಿದರೆ ತಪ್ಪೇನು ಆಗಲ್ಲ. ಏಕೆಂದರೆ ನಾವು ಪ್ರತಿದಿನ ಏನು ಬಂದ್ ಮಾಡಲ್ಲ ಎಂದು ಉತ್ತರಿಸಿದ ಅವರು, ಎಂಇಎಸ್, ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಡುವ ದೃಷ್ಟಿಯಿಂದ ಬಂದ್ ಅಗತ್ಯವಿದೆ. ಬಂದ್‍ಗೆ ಜೆಡಿಎಸ್ ಬೆಂಬಲವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲೇ ಬೆಂಬಲ ಇಲ್ಲ: ಅಶೋಕ್ ಚಂದರಗಿ
ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಎಚ್‍ಡಿಕೆ, ಡಿ. 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದೆ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‍ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು ಎಂದಿದ್ದರು.
ಡಿ.28 ರಿಂದ ಹತ್ತು ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕಫ್ರ್ಯೂ ಜಾರಿ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಕೆ ಕುಮಾರಸ್ವಾಮಿ, ಜನರು ಇನ್ನೂ ಕೂಡ ಜಾಗೃತರಾಗಿಲ್ಲ. ಕೊರೊನಾ ಅನೇಕ ರೂಪಾಂತರಿಗಳನ್ನು ಹೊಂದಿದೆ. ಈಗ ಓಮಿಕ್ರಾನ್ ಬಂದಿದ್ದು, ಹೆಚ್ಚಾಗುತ್ತಿದೆ. ಸರ್ಕಾರದ ಕಾನೂನುಗಳನ್ನು ಜನರು ಪಾಲಿಸಬೇಕು. ಒಂದಿಷ್ಟು ಜನ ಸೇರಬಹುದು ಎಂದು ಮಾಡಿರುವುದು ತಪ್ಪು. ಮೊದಲಿನಂತೆ ಬಿಗಿಯಾಗಬೇಕು. ಜನರ ದಿನಚರಿಗೆ ತೊಂದರೆಯಾಗದಂತೆ ನಿಯಮಗಳನ್ನು ತರಬೇಕು ಎಂದರು. ಇದನ್ನೂ ಓದಿ: ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ
ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಅವರು, ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ದೇಶದಲ್ಲಿ ಎಲ್ಲರೂ ಕೂಡ ಒಂದೇ, ಯಾವುದೇ ಧರ್ಮ ಅನುಸರಿಸಲಿ ಎಲ್ಲ ಕೂಡ ಒಂದೇ. ಮಹಾತ್ಮ, ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಮತಾಂತರವಾಗಿದ್ರು. ಅದು ಅವರವರ ಇಚ್ಛೇ. ಆದರೆ ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಈಗಾಗಲೇ ಸಂವಿಧಾನದಲ್ಲಿ ಅವಕಾಶವಿದೆ, ಆದ್ದರಿಂದ ಇವೆಲ್ಲವನ್ನೂ ತರುವ ಅಗತ್ಯವಿಲ್ಲ. ಭಾವನಾತ್ಮಕ ವಿಚಾರಗಳನ್ನು ತಂದು ಪಕ್ಷಕ್ಕೆ ಅನೂಕೂಲ ಮಾಡಿಕೊಳ್ಳುವ ದೃಷ್ಟಿಯಿಂದ ಬಿಜೆಪಿ ಸರ್ಕಾರ ಈ ರೀತಿ ಮಾಡಿದೆ. ನಾವು ವಿರೋಧ ಮಾಡಿದ್ದೀವಿ, ಕಾಂಗ್ರೆಸ್ ವಿರೋಧ ಮಾಡಿದೆ, ಜನಸಾಮಾನ್ಯರು ವಿರೋಧ ಮಾಡಿದ್ದಾರೆ ಎಂದು ಹೇಳಿದರು.