Tag: Conversion Bill

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ

    ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ. ಕಳೆದ ವಾರ ನಡೆದ ಕ್ಯಾಬಿನೆಟ್ ನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

    ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಿರಲಿಲ್ಲ.

    ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಆಧ್ಯಾದೇಶ 2022 ಇದಕ್ಕೆ ಅನುಮೋದನೆ ನೀಡಿತ್ತು. ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸುವಂತೆ ಶಿಫಾರಸು ಮಾಡಲಾಗಿತ್ತು. ಇದೀಗ ರಾಜ್ಯಪಾಲರ ಅಂಕಿತ ಹಾಕಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!

    ಕಾಯ್ದೆಯಲ್ಲಿ ಏನಿದೆ?
    * ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು
    * ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.
    * ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು
    * ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓಗಳು ಪಾಲ್ಗೊಳ್ಳುವಂತಿಲ್ಲ.
    * ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ
    * ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
    * ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ,ಇತರೆ ಸೌಲಭ್ಯ ರದ್ದು

    ದಂಡ ಮತ್ತು ಶಿಕ್ಷೆ
    * ಎಸ್‍ಸಿ,ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ
    * ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
    * ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
    * ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
    * ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
    * ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ
    * ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ
    * ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

  • ಕ್ರೈಸ್ತ ಧರ್ಮಕ್ಕೆ ಮತಾಂತರವಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ ವ್ಯಂಗ್ಯ

    ಕ್ರೈಸ್ತ ಧರ್ಮಕ್ಕೆ ಮತಾಂತರವಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ ವ್ಯಂಗ್ಯ

    ಚಿಕ್ಕಮಗಳೂರು: ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಸಿದ್ದರಾಮಯ್ಯಗೆ ಎಲ್ಲಿ ಜಾಗ ಸಿಗುತ್ತದೆ ಎಂದು ಶಾಸಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್‍ಗೆ ಎಲ್ಲಿ ಜಾಗ ಸಿಗುತ್ತದೆ. ಕ್ರಿಸ್ತನಿಗೆ ಪರಿವರ್ತನೆಯಾದರೆ ಸಿದ್ದರಾಮಯ್ಯನವರಿಗೆ ಎಲ್ಲಿ ಜಾಗ ಇದೆ. ಹಿಂದೂಗಳು ಬೌದ್ಧರು, ವೈಷ್ಣವರಾದರೆ, ಅಂಬೇಡ್ಕರ್, ರಾಮನಿಗೆ ಜಾಗ ಸಿಗುತ್ತದೆ. ಜೈನರ ಮನೆಯಲ್ಲಿ ರಾಮ, ಗಣಪತಿಗೆ ಜಾಗ ಇದೆ. ಇಸ್ಲಾಮಿಗೆ ಪರಿವರ್ತನೆಯಾದರೆ ಅಂಬೇಡ್ಕರ್, ಬುದ್ಧನಿಗೂ ಜಾಗವಿರುವುದಿಲ್ಲ ಎಂದು ಹರಿಹಾಯ್ದಿದ್ದಾರೆ.

    ಮತಾಂತರ ಮತಗಳ ಗಳಿಕೆಗೆ ಇರುವ ಸಾಧನ ಅಲ್ಲ. ಮತಾಂತರ ದೇಶಾಂತರಕ್ಕೆ ಸಮ ಅಂತ ಗಾಂಧಿಜೀ ಹೇಳಿದ್ದಾರೆ. ಕಾಂಗ್ರೆಸ್ ನಮ್ದು ಗೋಡ್ಸೆ ಹಿಂದೂತ್ವ ಅಲ್ಲ, ಗಾಂಧಿ ಹಿಂದುತ್ವ ಎನ್ನುತ್ತಾರೆ. ಆದರೆ ಮತಾಂತರದ ಬಗ್ಗೆ ಗಾಂಧಿ ಏನು ಹೇಳಿದ್ದರು ಅಂತ ಕಾಂಗ್ರೆಸ್ ಇತಿಹಾಸ ಓದಲಿ. ಸಿದ್ದರಾಮಯ್ಯನವರೇ ನೀವು ಒಮ್ಮೆ ಇತಿಹಾಸ ಓದಿ. ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಎನ್ನುವುದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವವರಿಗೆ ಕಾಯ್ದೆಯಿಂದ ತೊಡಕಿಲ್ಲ. ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ ನೀಡುತ್ತದೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಎಂದು ಹೇಳುವವರೇ ತನ್ನಿ ಅಂತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    CT Ravi, Siddaramaiah, conversion bill, Chikkamagaluru

  • ಮತಾಂತರ ಕಾಯ್ದೆ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ: ಶೋಭಾ ಕರಂದ್ಲಾಜೆ

    ಮತಾಂತರ ಕಾಯ್ದೆ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ: ಶೋಭಾ ಕರಂದ್ಲಾಜೆ

    ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    Bommai

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳುತ್ತದೆ. ಮಂಗಳೂರು ಆತ್ಮಹತ್ಯೆ, ಲವ್ ಜಿಹಾದಿ ಪ್ರಕರಣಗಳ ನಂತರ, ದೇಶದಲ್ಲಿ ಮತಾಂತರ ಕಾಯ್ದೆ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಎಲ್ಲ ಜಾತಿ ವರ್ಗದ ಜನರನ್ನು ಅವರ ಬಡತನ, ಅನಾರೋಗ್ಯ ಸಂದರ್ಭ ಮುಂದಿಟ್ಟುಕೊಂಡು ಮತಾಂತರಗೊಳಿಸುವುದು ನಡೆಯುತ್ತಿದೆ. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚನೆ ಮಾಡಬೇಕು ಎಂದರು. ಇದನ್ನೂ ಓದಿ: ಬಡತನಕ್ಕೆ, ಆಸೆ ಆಮಿಷಕ್ಕೆ ಮತಾಂತರ ಆಗೋದು ತಪ್ಪು : ಬೊಮ್ಮಾಯಿ

    ಸಾಮಾಜಿಕ ಅಸಮತೋಲನೆ ನಿರ್ಮಾಣ ಆಗಬಾರದು. ನಮ್ಮ ಬಡತನ ನಮ್ಮ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ಕೊಡಬಾರದು. ನಾವು ಕೂಡ ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ಯಾವ ಕಾರಣಕ್ಕೆ ಧರ್ಮವನ್ನು ಬಿಟ್ಟು ಹೋಗೋದಕ್ಕೆ ಸಾಧ್ಯವಾಗಿದೆ. ಇದಕ್ಕೆ ಜಾತಿ ಕಾರಣವೋ, ಆರೋಗ್ಯ ಕಾರಣವೋ, ಆರ್ಥಿಕ ಪರಿಸ್ಥಿತ ಕಾರಣವೋ, ಸಾಮಾಜಿಕ ಅಡತಡೆಗಳು ಕಾರಣವೋ ಎನ್ನುವುದನ್ನು ಪ್ರಾಮಾಣಿಕವಾಗಿ ಅಧ್ಯಯನ ಮಾಡಬೇಕು. ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

    ಮತಾಂತರ ಕಾಯ್ದೆಗೆ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರ ಕುರಿತಂತೆ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಈ ಬಗ್ಗೆ ಹೆಚ್ಚು ಮಾತಾಡಲ್ಲ. ಆದರೆ, ನಾನೇ ಕಂಡಂತೆ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಬಾಂಗ್ಲಾ ದೇಶದಿಂದ ಬರುವ ಮಕ್ಕಳನ್ನು ಇಲ್ಲಿಗೆ ತಂದು ರಕ್ಷಣೆ ಮಾಡಲಾಗುತ್ತದೆ. ಅವರಿಗೆ ವೋಟರ್ ಐಡಿ ಕೊಟ್ಟು ಮುಂದೆ ಅವರನ್ನು ಮತದಾರರನ್ನಾ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಮಾನಸಿಕತೆ ಇರುವುದು ಕಾಂಗ್ರೆಸ್‍ನಲ್ಲಿ ಮಾತ್ರ. ಜಾತಿ ಹಾಗೂ ಧರ್ಮದ ಆಧಾರದಲ್ಲಿ ಪರ್ಮನೆಂಟ್ ಆಗಿ ಅಧಿಕಾರದಲ್ಲಿ ಇರಬಹುದು ಎನ್ನುವುದು ಕಾಂಗ್ರೆಸ್ ಮಾನಸಿಕತೆ. ಈ ಬಗ್ಗೆ ಡಿಕೆ ಶಿವಕುಮಾರ್ ಚರ್ಚೆ ಮಾಡದೇ ಇರುವುದು ಒಳ್ಳೆಯದು. ಅವರ ಪಕ್ಷ ನಿಂತಿದ್ದೆ ಇದೇ ಆಧಾರದಲ್ಲಿ. ಜಾತಿ, ಧರ್ಮ, ಒಂದು ವರ್ಗ ಓಲೈಸಿ ಅಧಿಕಾರ ಪಡೆಯುವುದು ಅಲ್ಲ ಎಂದು ಮೋದಿ ಅವರು ಎರಡು ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

    ರಾವತ್ ಸಾವಿಗೆ ವಿಕೃತ ಮನಸ್ಸುಗಳ ಸಂಭ್ರಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ದೇಶದ ಸಿಡಿಎಸ್ ರಾವತ್ ಅವರು ನಿಧನರಾದ ಸಂದರ್ಭದಲ್ಲಿ ಕೆಲವು ವಿಕೃತ ಮನಸ್ಸುಗಳು ಸಂಭ್ರಮಿಸಿದ್ದಾರೆ. ಅವರು ವಿಕೃತ ಮನಸ್ಸುಗಳಲ್ಲ, ದೇಶದ್ರೋಹಿಗಳು. ಈ ಬಗ್ಗೆ ಕೇಂದ್ರ ಸರ್ಕಾರದ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂಥವರಿಗೆ ಕಠಿಣವಾದ ಶಿಕ್ಷೆಯನ್ನು ಕೊಡಬೇಕು ಅನ್ನುವುದು ನಮ್ಮೆಲ್ಲರ ಆಗ್ರಹ ಹಾಗೂ ದೇಶದ ಜನರ ಆಗ್ರಹವಾಗಿದೆ. ಇದರಲ್ಲೇನು ರಾಜಕೀಯವಿಲ್ಲ. ಕೆಲವರು ದೇಶಕ್ಕಾಗಿ ವಿರೋಧ ಮಾಡುವವರು ವಿರೋಧಿಗಳಾಗಿಯೇ ಇರುತ್ತಾರೆ. ಅಂತವರಿಗೆ ಪಕ್ಷ ಇಲ್ಲ, ಪಂಗಡ ಇಲ್ಲ, ಜಾತಿ ಇಲ್ಲ, ಪಂಥ ಇಲ್ಲ. ಅಂಥವರ ಮೇಲೆ ಉಗ್ರ ಕ್ರಮಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಹೇಳಿದರು.

  • ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

    ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

    ಬೆಂಗಳೂರು: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ  ವಿರೋಧ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ಮತಾಂತರ ನಿಷೇಧ ತಡೆ ಬಿಲ್ ಬರುತ್ತಿದೆ. ಬಲವಂತವಾಗಿ ಮತಾಂತರ ಮಾಡಬಾರದು ಅಂತ ಸಂವಿಧಾನದಲ್ಲೇ ಇದೆ. ಹಾಗಿದ್ದರೂ ಈ ಮಸೂದೆಯನ್ನು ಯಾಕೆ ತರುತ್ತಿದ್ದಾರೆ? ಇದರರ್ಥ ಸರ್ಕಾರ ಎಲ್ಲದರಲ್ಲೂ ವಿಫಲವಾಗುತ್ತಿದೆ. ಜನರ ಗಮನ ಬೇರೆ ಕಡೆ ಸೆಳೆಯಲು ಬೊಮ್ಮಾಯಿ ಮೂಲಕ ಮಸೂದೆ ಮಂಡನೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ಬಡತನಕ್ಕೆ, ಆಸೆ ಆಮಿಷಕ್ಕೆ ಮತಾಂತರ ಆಗೋದು ತಪ್ಪು : ಬೊಮ್ಮಾಯಿ

    basavaraj bommai

    ಮತಾಂತರವನ್ನು ಯಾರೂ ಬಲವಂತವಾಗಿ ಮಾಡಬಾರದು. ಸ್ವಯಿಚ್ಚೆಯಿಂದ ಬೇಕಾದರೆ ಮತಾಂತರವಾಗಲಿ. ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತಾಡಿದೆವಾ? ರಿಜ್ವಿ ಹಿಂದೂ ಆದ, ನಾವು ಏನಾದರೂ ಹೇಳಿದ್ವಾ? ಮತಾಂತರ ಅವರವರ ಇಚ್ಛೆ. ಅದಕ್ಕಾಗಿ ಒಂದು ಮಸೂದೆ ತರುವ ನಾಟಕ ಎಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಡ್ಡನ ಅಡ್ಡಾದಲ್ಲಿ ಕಾಣಿಸಿಕೊಂಡ ವಾರ್ನರ್: ನೀನು ಚೆನ್ನಾಗಿದ್ದೀಯಾ ತಾನೇ ಎಂದು ಕಾಲೆಳೆದ ಕೊಹ್ಲಿ