Tag: Converstion

  • ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಪಾಟೀಲನೂ ಕನ್ವರ್ಟ್- ಯತ್ನಾಳ್ ಹೀಗಂದಿದ್ಯಾಕೆ..?

    ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಪಾಟೀಲನೂ ಕನ್ವರ್ಟ್- ಯತ್ನಾಳ್ ಹೀಗಂದಿದ್ಯಾಕೆ..?

    ಬೆಂಗಳೂರು: ಬಿಜೆಪಿ ಸರ್ಕಾರ (BJP Government) ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ರದ್ದಿಗೆ ಇಂದಿನ ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದ್ದು, ಈ ಸಂಬಂಧ ಇದೀಗ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಟ್ವೀಟ್‍ನಲ್ಲೇನಿದೆ..?: ಮತಾಂತರ ನಿಷೇಧ ಕಾಯ್ದೆ (Prohibition of Conversion Act) ಯನ್ನು ಹಿಂಪಡೆಯುವುದರ ಮೂಲಕ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ (Congress Government) ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು “ಹಿಂದೂ” ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ಯಾವ “ಮಾಫಿಯಾ” ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ. ಸಿದ್ದರಾಮಯ್ಯನವರ “Conversion Bhagya” ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇನ್ನು ಮುಂದೆ ಮಹದೇವಪ್ಪನೂ “”CONVERT”” ಕಾಕಪಾಟಿಲನೂ “”CONVERT”” ಎಂದು ಬರೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ: ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ (H K Patil) , ಕಾಂಗ್ರೆಸ್ ಸರ್ಕಾರದ ಮತ್ತೊಂದು ದೊಡ್ಡ ನಿರ್ಧಾರವನ್ನು ಬಹಿರಂಗಪಡಿಸಿದರು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ತೀರ್ಮಾನವನ್ನು ಕ್ಯಾಬಿನೆಟ್ ಸಭೆಯಲ್ಲಿ ಮಾಡಿರುವುದಾಗಿ ತಿಳಿಸಿದ ಅವರು ಜುಲೈ ಅಧಿವೇಶನದಲ್ಲಿ ಹೊಸ ತಿದ್ದುಪಡಿಯೊಂದಿಗೆ ಮರುಮಂಡನೆ ಮಾಡುವುದಾಗಿ ಹೇಳಿದರು.

  • ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

    ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

    ತುಮಕೂರು: ವಿವಾಹ ನೋಂದಣಿ ಮಾಡುವಂತೆ ಮತಾಂತರವನ್ನು ಕೂಡ ನೋಂದಣಿ ಮಾಡುವಂತಹ ಪದ್ಧತಿಯನ್ನು ಮತಾಂತರ ನಿಷೇಧ ಕಾಯ್ದೆಯಲ್ಲಿ ತರುವ ಚಿಂತನೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರದಲ್ಲಿ ಮಾತನಾಡಿದ ಅವರು, ಮದುವೆ ನೋಂದಣಿ ಪ್ರಕ್ರಿಯೆಯಲ್ಲಿ ಹೇಗೆ ನೋಟಿಸ್ ಬೋರ್ಡಿಗೆ ವಿವಾಹಿತರ ವಿವರ ಹಾಕುತ್ತೇವೆಯೋ ಹಾಗೆಯೇ ಮತಾಂತರಗೊಂಡವರ ವಿವರವನ್ನೂ ನೋಟಿಸ್ ಬೋರ್ಡ್‍ಗೆ ಹಾಕಿ ಆಕ್ಷೇಪಣೆಗೆ ಸಮಯವಕಾಶ ಕೊಡಲಾಗುತ್ತದೆ. ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ಅಂಥವರ ಅರ್ಜಿಯನ್ನು ಪುರಸ್ಕರಿಸಲಾಗುತ್ತದೆ ಎಂದು ಹೇಳಿದರು.

    ಯಾರಿಗೂ ನೋವು ಆಗದ, ಅಡಚಣೆ ಆಗದ ರೀತಿಯಲ್ಲಿ ಕಾಯ್ದೆ ಇರಬೇಕು ಎಂದು ಯೋಚಿಸಿದ್ದೇನೆ. ಆ ನಿಟ್ಟಿನಲ್ಲಿ ಪರಾಮರ್ಶೆ ನಡೆದಿದೆ. ಬಲವಂತ ಹಾಗೂ ಆಮಿಷ ಒಡ್ಡಿ ಮಾಡುವ ಮತಾಂತರ ಈಗಾಗಲೇ ನಿಷೇಧ ಇದ್ದು, ಮತಾಂತರ ಮಾಡಿದವರಿಗೆ ಯಾವ ರೀತಿಯ ಶಿಕ್ಷೆ ಆಗಬೇಕು ಅನ್ನೋದು ಚರ್ಚೆ ನಡೆಯಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ವೇದಿಕೆ ಮೇಲೆ ಕಣ್ಣೀರಿಟ್ಟ ಮಾಧುಸ್ವಾಮಿ

    ಸ್ವಯಂಪ್ರೇರಿತ ಮತಾಂತರಕ್ಕೂ ರೂಪುರೇಷೆ ಸಿದ್ಧಗೊಳ್ಳುತಿದ್ದು, ಮತಾಂತರ ಆಗುವವನೂ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಯಾಗಲಿದೆ. ಬಲವಂತದ ಮತಾಂತರ ಅಲ್ಲ ಎಂದು ತಿಳಿದ ಮೇಲೆ ಜಿಲ್ಲಾಧಿಕಾರಿಗಳು ಮತಾಂತರದ ಅರ್ಜಿ ಪುರಸ್ಕರಿಸಬಹುದಾಗಿದೆ. ಜೊತೆಗೆ ಒಮ್ಮೆ ಮತಾಂತರಗೊಂಡ ವ್ಯಕ್ತಿ ಮೂಲ ಜಾತಿ, ಧರ್ಮವನ್ನು ಕಳೆದುಕೊಳ್ಳುತ್ತಾನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತ ಯುದ್ಧವನ್ನೂ ಗೆಲ್ಲಲಿದೆ: ರಾಜನಾಥ್ ಸಿಂಗ್

    ಪರಿಶಿಷ್ಠ ಜಾತಿ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರಗೊಂಡರೆ, ಆತ ಅಲ್ಪಸಂಖ್ಯಾತ ಎಂದಾಗುತ್ತದೆ. ಆತನ ಮೂಲ ಜಾತಿ ಪ್ರಮಾಣ ಪತ್ರ ಬದಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ ಬರೋಬ್ಬರಿ 10 ಡೋಸ್ ಕೋವಿಡ್ ಲಸಿಕೆ ಪಡೆದ ಭೂಪ!

  • ರಾಜ್ಯದಲ್ಲಿರುವ ಚರ್ಚ್, ಕ್ರೈಸ್ತ ಮಿಷನರಿಗಳ ಸಮೀಕ್ಷೆ

    ರಾಜ್ಯದಲ್ಲಿರುವ ಚರ್ಚ್, ಕ್ರೈಸ್ತ ಮಿಷನರಿಗಳ ಸಮೀಕ್ಷೆ

    ಬೆಂಗಳೂರು: ಮತಾಂತರ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಚರ್ಚ್‍ಗಳು, ಕ್ರೈಸ್ತ ಮಿಷನರಿಗಳ ಸಮೀಕ್ಷೆಗೆ ಎಲ್ಲಾ ಜಿಲ್ಲಾಡಳಿತಗಳಿಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರದ ಕಲ್ಯಾಣ ಸಮಿತಿ ಸೂಚಿಸಿದೆ.

    ಅಧಿಕೃತ, ಅನಧಿಕೃತ ಚರ್ಚ್‍ಗಳ ಸಮೀಕ್ಷೆ ನಡೆಸುವಂತೆಯೂ ಆ ಚರ್ಚ್‍ಗಳ ಪಾದ್ರಿಗಳು, ಇತರೆ ಸಿಬ್ಬಂದಿ ಮಾಹಿತಿ ಸಂಗ್ರಹಿಸುವಂತೆಯೂ ನಿರ್ದೇಶಿಸಿದೆ. ಜೊತೆಗೆ ಬಲವಂತದ ಮತಾಂತರ ಸಂಬಂಧ ಪ್ರಕರಣ ದಾಖಲಾಗಿದ್ದರೆ ಆ ಬಗ್ಗೆಯೂ ಮಾಹಿತಿ ನೀಡುವಂತೆಯೂ ತಿಳಿಸಲಾಗಿದೆ. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್ 

    ಕೈಸ್ತ ಮಿಷನರಿಗಳಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅಧ್ಯಕ್ಷರಾಗಿರುವ ಸದನ ಸಮಿತಿ ಈ ಸೂಚನೆ ನೀಡಿದೆ. ಈ ಸದನ ಸಮಿತಿಯಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಜೆಡಿಎಸ್ ಎಂಎಲ್‍ಸಿ ಬಿ ಎಂ ಫಾರೂಕ್, ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮತ್ತು ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಇದ್ದಾರೆ.

  • ಸಿಎಂ ಮನೆಯಂಗಳದಲ್ಲೇ ಮತಾಂತರ ನಡೆಯುತ್ತಿದೆ: ಸಂಸದೆ ಶೋಭಾ ಆರೋಪ

    ಸಿಎಂ ಮನೆಯಂಗಳದಲ್ಲೇ ಮತಾಂತರ ನಡೆಯುತ್ತಿದೆ: ಸಂಸದೆ ಶೋಭಾ ಆರೋಪ

    ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಂಗಳದಲ್ಲೇ ಮತಾಂತರ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಸಮಾಜದ್ರೋಹಿ ಸಂಘಟನೆಗಳಿಗೆ ರಕ್ಷಣೆ ನೀಡಿ ಪೋಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

    ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಐಸಿಸ್ ಸಂಘಟನೆಗೆ ಜನರನ್ನು ನೇಮಕ ಮಾಡುವ ಪ್ರಮುಖ ಕೇಂದ್ರವಾಗಿ ಪರಿವರ್ತನೆಯಾಗಿದೆ. ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಲ್ಲದೇ ಪೊಲೀಸ್ ಪಡೆ ಎಸಿಬಿಯನ್ನು ದುರುಪಯೋಗ ಮಾಡಕೊಳ್ಳಲಾಗುತ್ತಿದೆ. ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಹಾಕಿದೆ ಎಂದು ವಾಗ್ದಾಳಿ ನಡೆಸಿದರು.

    ಬೆಂಗಳೂರಿನ ಹೆಬ್ಬಾಳದಲ್ಲಿದ್ದ ಅಕ್ಷತಾ ಅನ್ನುವ ಹುಡುಗಿ ಆಯೆಷಾ ಆಗಿದ್ದಾಳೆ. ಹೆಬ್ಬಾಳದ ಸಿರಾಜುದ್ದೀನ್ ಎಂಬ ಯುವಕ, ಝಾಕಿರ್ ನಾಯ್ಕ್ ವಿಡಿಯೋಗಳನ್ನು ತೋರಿಸಿ ಮತಾಂತರ ಮಾಡಿದ್ದ. ಐಸಿಸ್ ಸಂಘಟನೆ ಸೇರುವಂತೆ ಕಳುಹಿಸಿಕೊಟ್ಟಿದ್ದ. ಅಲ್ಲದೇ ಐಸಿಸ್ ಉಗ್ರರು ಅತ್ಯಾಚಾರ ಮಾಡಿದರು ನೀನು ಅಲ್ಲಿಯೇ ಇರಬೇಕು ಎಂದು ಹೇಳಿದ್ದ ಎಂದು ಕೇರಳ ಹೈಕೋರ್ಟ್‍ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

    ಅಕ್ಷತಾ ಕೋರ್ಟ್‍ಗೆ ನೀಡಿರುವ ದೂರಿನಲ್ಲಿ ತನ್ನನ್ನು ಹೇಗೆ ಮತಾಂತರ ಮಾಡಿದ್ದಾರೆ ಎಂದು ಸಂಪೂರ್ಣವಾಗಿ ವಿವರಿಸಿದ್ದಾರೆ. ಅಕ್ಷತಾ ಐಸಿಸ್ ಎಂಬ ರಾಕ್ಷಸ ಸಂಘಟನೆಯಿಂದ ತಪ್ಪಿಸಿಕೊಂಡು ಅಹಮದಾಬಾದ್ ಬಂದಿದ್ದು, ಪೋನ್ ಮೂಲಕ ತನ್ನ ಪೋಷಕರನ್ನು ಸಂಪರ್ಕಿಸಿದ್ದಾರೆ. ಅಲ್ಲದೇ ತನಗಾದ ಕಷ್ಟಗಳನ್ನು ಕೋರ್ಟ್‍ನ ಮುಂದೆ ವಿವರಿಸಿ ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ ಎಂದು ತಿಳಿಸಿದರು.