Tag: convicts

  • 7 ವರ್ಷದಿಂದ ಜೈಲು – 1 ಲಕ್ಷಕ್ಕೂ ಅಧಿಕ ಹಣ ಸಂಪಾದಿಸಿದ ನಿರ್ಭಯಾ ದೋಷಿಗಳು

    7 ವರ್ಷದಿಂದ ಜೈಲು – 1 ಲಕ್ಷಕ್ಕೂ ಅಧಿಕ ಹಣ ಸಂಪಾದಿಸಿದ ನಿರ್ಭಯಾ ದೋಷಿಗಳು

    – 23 ಬಾರಿ ಜೈಲಿನ ನಿಯಮ ಉಲ್ಲಂಘನೆ

    ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಕಳೆದ 7 ವರ್ಷದಿಂದ ಜೈಲಿನಲ್ಲಿದ್ದು, ಅಲ್ಲಿ ಬರೋಬ್ಬರಿ 1,37,000 ರೂ. ಹಣವನ್ನು ಸಂಪಾದಿಸಿದ್ದಾರೆ.

    ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಅಕ್ಷಯ್ ಠಾಕುರ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಕಳೆದ 7 ವರ್ಷದ ಜೈಲು ವಾಸದಲ್ಲಿ 1,37,000 ರೂ. ಹಣವನ್ನು ಸಂಪಾದಿಸಿದ್ದಾರೆ. ಈ 7 ವರ್ಷದಲ್ಲಿ ಮುಕೇಶ್ ಜೈಲಿನಲ್ಲಿ ಯಾವುದೇ ಕೆಲಸ ಮಾಡಲು ನಿರಾಕರಿಸಿದ ಕಾರಣಕ್ಕೆ ಅತ ಯಾವುದೇ ಹಣವನ್ನು ಸಂಪಾದಿಸಿಲ್ಲ. ಆದರೆ ಅಕ್ಷಯ್ 69 ಸಾವಿರ ರೂ., ವಿನಯ್ 39 ಸಾವಿರ ರೂ. ಹಾಗೂ ಪವನ್ 29 ಸಾವಿರ ರೂ. ಹಣವನ್ನು ಜೈಲಿನಲ್ಲಿ ಕೆಲಸ ಮಾಡಿ ಸಂಪಾದಿಸಿದ್ದಾರೆ. ಇದನ್ನೂ ಓದಿ: ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ಅಷ್ಟೇ ಅಲ್ಲದೆ ಈ ನಾಲ್ವರು ದೋಷಿಗಳು ಸುಮಾರು 23 ಬಾರಿ ಜೈಲಿನ ನಿಯಮವನ್ನು ಉಲ್ಲಂಘಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿದಕ್ಕೆ ವಿನಯ್ 11 ಬಾರಿ, ಅಕ್ಷಯ್ 1 ಬಾರಿ, ಮುಕೇಶ್ 3 ಬಾರಿ ಹಾಗೂ ಪವನ್‍ಗೆ 8 ಬಾರಿ ಶಿಕ್ಷೆ ಕೂಡ ನೀಡಲಾಗಿದೆ.

  • ನಿರ್ಭಯಾ ದೋಷಿಗಳಿಗೆ ಗಲ್ಲು ಫಿಕ್ಸ್ – ಕ್ಯೂರೇಟಿವ್ ಅರ್ಜಿ ವಜಾ

    ನಿರ್ಭಯಾ ದೋಷಿಗಳಿಗೆ ಗಲ್ಲು ಫಿಕ್ಸ್ – ಕ್ಯೂರೇಟಿವ್ ಅರ್ಜಿ ವಜಾ

    ನವದೆಹಲಿ: 2012ರ ದೆಹಲಿ ಗ್ಯಾಂಗ್ ರೇಪ್ ನಿರ್ಭಯಾ ಪ್ರಕರಣದ ಇಬ್ಬರು ದೋಷಿಗಳು ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ದೋಷಿಗಳಾದ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟಿಗೆ ಕ್ಯೂರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಈ ಅರ್ಜಿಯನ್ನು ವಜಾಗೊಳಿಸಿದೆ.

    ಈ ಬಗ್ಗೆ ಸಂತ್ರಸ್ತೆಯ ತಾಯಿ ಆಶಾ ದೇವಿ ಪ್ರತಿಕ್ರಿಯಿಸಿ, ಇದು ನನಗೆ ಮಹತ್ವದ ದಿನವಾಗಿದೆ. ನಾನು ನನ್ನ ಮಗಳಿಗೆ ನ್ಯಾಯ ಕೊಡಿಸಲು ಸತತ 7 ವರ್ಷದಿಂದ ಹೋರಾಡುತ್ತಿದ್ದೇನೆ. ಜ. 22ರಂದು ದೋಷಿಗಳಿಗೆ ಗಲ್ಲಿಗೆ ಹಾಕುತ್ತಾರೆ. ಆ ದಿನ ನನ್ನ ಜೀವನದ ಹೆಚ್ಚು ಮಹತ್ವರ ದಿನ ಎಂದು ಹೇಳಿಕೊಂಡಿದ್ದಾರೆ.

    ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದೋಷಿಗಳಿಗೆ ಈಗಾಗಲೇ ಗಲ್ಲು ಶಿಕ್ಷೆ ಖಾಯಂ ಆಗಿದೆ. ಜನವರಿ 22ಕ್ಕೆ ನೇಣುಗಂಬ ಏರಲಿದ್ದಾರೆ. ಈ ಹಿಂದೆ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಮರಣದಂಡನೆಯಿಂದ ಪಾರಾಗಲು ಕೊನೆಯ ಪ್ರಯತ್ನವಾಗಿ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಕ್ಯೂರೇಟಿವ್ ಅರ್ಜಿ ಸಲ್ಲಿಸಿ ಡೆತ್ ವಾರಂಟ್ ಜಾರಿಯಾಗದಂತೆ ಮನವಿ ಮಾಡಿಕೊಂಡಿದ್ದರು.

  • ನಿರ್ಭಯಾ ಪ್ರಕರಣ ದೋಷಿಗಳಿಗೆ ಗಲ್ಲು – ಇದು ಅತ್ಯಾಚಾರಿಗಳಿಗೆ ಎಚ್ಚರಿಕೆಯ ಘಂಟೆ ಎಂದ ಸಿಎಂ

    ನಿರ್ಭಯಾ ಪ್ರಕರಣ ದೋಷಿಗಳಿಗೆ ಗಲ್ಲು – ಇದು ಅತ್ಯಾಚಾರಿಗಳಿಗೆ ಎಚ್ಚರಿಕೆಯ ಘಂಟೆ ಎಂದ ಸಿಎಂ

    ಹುಬ್ಬಳ್ಳಿ: ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಿದ್ದು ಸ್ವಾಗರ್ತಾಹವಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನವಾಗಿರುವುದು ಸ್ವಾಗತಾರ್ಹ. ಈ ರೀತಿಯ ಪ್ರಕರಣಗಳಲ್ಲಿ ಪಾಲ್ಗೊಳ್ಳುವ ಆರೋಪಿಗಳಿಗೆ ಇದು ಎಚ್ಚರಿಕೆ ಘಂಟೆಯಾಗಿದೆ ಎಂದು ಹೇಳಿದರು.

    8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ, ವಿಚಾರಣೆಯ ಪೀಠದಿಂದ ದಿಢೀರ್ ಹಿಂದೆ ಸರಿದ ಕಾರಣ ಇಂದು ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರ ಪೀಠದಲ್ಲಿ ನಡೆಯಿತು.

    ಏನಿದು ಪ್ರಕರಣ?
    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು.

    ಆದರೆ ಆತನ ಕ್ಷಮದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. 2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು.

  • ಕೊನೆಗೂ ಸಿಕ್ಕಿದ್ರು ನಿರ್ಭಯ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ

    ಕೊನೆಗೂ ಸಿಕ್ಕಿದ್ರು ನಿರ್ಭಯ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ

    ನವದೆಹಲಿ: ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಹಂತಕರನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಪೂರ್ವತಯಾರಿ ನಡೆಯುತ್ತಿದ್ದು, ಕಾಮುಕರನ್ನು ಗಲ್ಲಿಗೇರಿಸುವ ವ್ಯಕ್ತಿಗಾಗಿ ಜೈಲಿನ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು. ಕೊನೆಗೂ ಕಾಮುಕರ ಹುಟ್ಟಡಗಿಸಲು ಉತ್ತರ ಪ್ರದೇಶದ ಮೀರತ್ ಜೈಲಿನಿಂದ ಹ್ಯಾಂಗ್‍ಮ್ಯಾನ್ ಬರಲಿದ್ದಾರೆ.

    ಈಗಾಗಲೇ ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲು ಅಗತ್ಯವಾಗಿರುವ ನೇಣು ಕುಣಿಕೆಯನ್ನು ತಯಾರಿಸುವಂತೆ ಬಿಹಾರದ ಬಕ್ಸರ್ ಜೈಲು ಅಧಿಕಾರಿಗಳಿಗೆ ತಿಹಾರ್ ಜೈಲಿನ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿ ಯಾವುದೇ ಹ್ಯಾಂಗ್‍ಮ್ಯಾನ್ ಇರದ ಹಿನ್ನೆಲೆ ಸೋಮವಾರ ಈ ಕೆಲಸಕ್ಕಾಗಿ ಸಿಬ್ಬಂದಿ ಬೇಕು ಎಂದು ಅಧಿಕಾರಿಗಳು ದೇಶದ ಹಲವು ಜೈಲುಗಳ ಮೊರೆಹೋಗಿದ್ದರು.

    ಈ ವೇಳೆ ಮೀರತ್ ಜೈಲಿನಲ್ಲಿ ಇಬ್ಬರು ಹ್ಯಾಂಗ್‍ಮೆನ್ ಇರುವ ಬಗ್ಗೆ ತಿಹಾರ್ ಜೈಲಿನ ಅಧಿಕಾರಿಗಳಿಗೆ ತಿಳಿದಿದ್ದು, ಬುಧವಾರ ಮೀರತ್ ಜೈಲಿಗೆ ಪತ್ರ ಬರೆದು ಓರ್ವ ಹ್ಯಾಂಗ್‍ಮ್ಯಾನ್‍ನನ್ನು ತಿಹಾರ್ ಜೈಲಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಲಾಗಿತ್ತು. ಆದರೆ ಯಾರನ್ನು? ಯಾವಾಗ ಗಲ್ಲಿಗೇರಿಸಲಾಗುತ್ತಿದೆ ಎಂಬ ಬಗ್ಗೆ ಪತ್ರದಲ್ಲಿ ತಿಳಿಸಿರಲಿಲ್ಲ. ಅದರ ಬದಲಿಗೆ ಕೆಲವು ಅಪರಾಧಿಗಳಿಗೆ ಗಲ್ಲಿಗೇರಿಸಬೇಕಿದೆ, ಎಲ್ಲಾ ಕಾನೂನು ಪ್ರಕಿಯೆ ಮುಗಿದಿದೆ ಎಂದು ಉಲ್ಲೇಖಿಸಲಾಗಿತ್ತು.

    ಈ ಮನವಿ ಮೇರೆಗೆ ಮೀರತ್ ಜೈಲಿನ ಹ್ಯಾಂಗ್‍ಮ್ಯಾನ್ ಪವನ್ ಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗುತ್ತಿದೆ. ಇವರು ನಿರ್ಭಯ ಪ್ರಕರಣದ ಅಪರಾಧಿಗಳನ್ನು ಸದ್ಯದಲ್ಲೇ ಗಲ್ಲಿಗೇರಿಸಲಿದ್ದಾರೆ.

    ತಿಹಾರ್ ಜೈಲಿನ ಅಧಿಕಾರಿಗಳು ಹ್ಯಾಂಗ್‍ಮ್ಯಾನ್‍ಗಾಗಿ ಹುಡುಕಾಟ ನಡೆದಿಸುತ್ತಿದ್ದ ವೇಳೆ ತಮಿಳುನಾಡಿನ ರಾಮನಾಥಪುರಂನ ಹೆಡ್ ಕಾನ್‍ಸ್ಟೇಬಲ್ ಎಸ್. ಸುಭಾಷ್ ಶ್ರೀನಿವಾಸನ್(42) ಸ್ವಯಂಪ್ರೇರಿತರಾಗಿ ಈ ಕಾರ್ಯವನ್ನು ನಡೆಸಲು ಮುಂದೆ ಬಂದಿದ್ದರು.

    ಈ ಬಗ್ಗೆ ತಿಹಾರ್ ಜೈಲಿಗೆ ಪತ್ರ ಬರೆದಿದ್ದ ಸುಭಾಷ್ ಅವರು, ನೀವು ನನಗೆ ಈ ಕಾರ್ಯ ನಿರ್ವಹಿಸಲು ಯಾವುದೇ ಸಂಬಳವನ್ನು ನೀಡಬೇಡಿ, ನೀವು ನನಗೆ ಈ ಅಪರಾಧಿಗಳನ್ನು ಗಲ್ಲಿಗೇರಿಸಲು ಅವಕಾಶ ಕೊಡಿ ಅಷ್ಟೇ ಸಾಕು ಎಂದು ತಿಳಿಸಿದ್ದರು.

    ಈ ಹಿಂದೆ 2015ರಲ್ಲಿ ಪವನ್ ಕುಮಾರ್ ಅವರು ಭಾರೀ ಸುದ್ದಿಯಾಗಿದ್ದರು. ಗಲ್ಲಿಗೇರಿಸುವ ಕೆಲಸಕ್ಕೆ ಅವರಿಗೆ ಸರಿಯಾಗಿ ಸಂಬಳ ನೀಡುತ್ತಿರಲಿಲ್ಲ. ಹೀಗಾಗಿ ಹಣಕ್ಕಾಗಿ ಅವರು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆದು ಬೇಸತ್ತು ಹೋಗಿದ್ದರು. ತಿಂಗಳ ಸಂಬಳ ಮಾತ್ರವಲ್ಲ ಅಪರಾಧಿಗಳನ್ನು ಗಲ್ಲಿಗೇರಿಸಿದರೆ 3 ಸಾವಿರ ರೂ. ನನಗೆ ನೀಡಬೇಕು. ಆದರೆ ಯಾವ ಹಣವು ನನಗೆ ಸಿಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು.

    ಪವನ್ ಕುಮಾರ್ ಅವರು ಭಾರತದಲ್ಲಿರುವ ಕೆಲವೇ ಕೆಲವು ಅಧಿಕೃತ ನೊಂದಾಯಿತ ವೃತ್ತಿಪರ ಹ್ಯಾಂಗ್‍ಮ್ಯಾನ್‍ಗಳಲ್ಲಿ ಒಬ್ಬರು. ಈ ಹಿಂದೆ ಅವರು ಮೀರತ್ ಜೈಲಿನಲ್ಲಿ ನಿಥಾರಿ ಸಿರಿಯಲ್ ಕಿಲ್ಲರ್ ಸುರೇಂದ್ರ ಕೋಲಿಯನ್ನು ಗಲ್ಲಿಗೇರಿಸಿದ್ದರು.

  • ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    ನವದೆಹಲಿ: 2012ರ `ನಿರ್ಭಯಾ’ ಅತ್ಯಾಚಾರ ಪ್ರಕರಣದ ದೋಷಿರ್ಯೋವ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಆದ್ದರಿಂದ ಶೀಘ್ರದಲ್ಲೇ ದೋಷಿಗಳನ್ನು ಗಲ್ಲಿಗೇರಿಸಲಾಗುವುದು ಎನ್ನಲಾಗಿದೆ.

    ಈ ಸಂಬಂಧ ದೆಹಲಿ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದು, ಇದನ್ನು ಗೃಹ ಸಚಿವಾಲಯ ಪರಿಶೀಲಿಸಿ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ರವಾನಿಸಲಿದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ರಾಷ್ಟ್ರಪತಿಗಳು ತೆಗೆದುಕೊಳ್ಳಲಿದ್ದಾರೆ. ಆದರೆ ಅವರು ಕೂಡ ದೆಹಲಿ ಸರ್ಕಾರದಂತೆ ಕ್ಷಮಾದಾನ ಅರ್ಜಿ ತಿರಸ್ಕರಿಸುವ ಸಾಧ್ಯತೆ ಹೆಚ್ಚಾಗಿದ್ದು, ಶೀಘ್ರದಲ್ಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 10ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಪೊಲೀಸ್ ಮಗನ ಜೊತೆ ಸಿಆರ್​ಪಿಎಫ್​ ಯೋಧನಿಂದ ಕೃತ್ಯ

    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಖಡಕ್ ಪ್ರಶ್ನೆಗೆ ತಲೆ ತಗ್ಗಿಸಿ ನಿಂತ ಐಸಿಸ್ ರೇಪಿಸ್ಟ್

    ಆದರೆ ಆತನ ಕ್ಷಮದಾನ ಅರ್ಜಿಯನ್ನು ಬುಧವಾರ ದೆಹಲಿ ಸರ್ಕಾರ ತಿರಸ್ಕರಿಸಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. ಒಂದು ವೇಳೆ ಗೃಹ ಸಚಿವಾಲಯ ದೋಷಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರೆ ನಿರ್ಭಯಾ ಪ್ರಕರಣದ ನಾಲ್ವರು ಅತ್ಯಚಾರಿಗಳನ್ನು ಗಲ್ಲಿಗೇರಿಸುವುದು ಖಚಿತ.

    2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು. ಇದನ್ನೂ ಓದಿ: ಕೊಲೆಗೈದು ಮಹಿಳೆ ಶವದ ಮೇಲೆ ರೇಪ್ – ವಿಡಿಯೋ ಸೆರೆಹಿಡಿದ ವಿಕೃತಕಾಮಿ ಅರೆಸ್ಟ್

    ನಿರ್ಭಯಾ ಪ್ರಕರಣದ ರೀತಿಯೇ ನವೆಂಬರ್ 27ರಂದು ಹೈದರಾಬಾದಿನಲ್ಲಿಯೂ ಪಶುವೈದ್ಯೆಯ ಅತ್ಯಾಚಾರ ಪ್ರಕರಣ ನಡೆದಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಹೆತ್ತವರು ಕೂಡ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿ, ತಮ್ಮ ಮಕ್ಕಳ ದುಷ್ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    ಹೈದರಾಬಾದ್ ಅತ್ಯಾಚಾರ, ಕೊಲೆ ಪ್ರಕರಣದ ಬಳಿಕ ದೇಶದಲ್ಲಿ ಪ್ರತಿನಿತ್ಯ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅಪ್ರಾಪ್ತೆಯರು, ಮಹಿಳೆಯರು ಮಾತ್ರವಲ್ಲದೆ ವೃದ್ಧೆಯರ ಮೇಲೂ ಕಾಮುಕರು ಕ್ರೌರ್ಯ ಮೆರೆದ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ದೇಶದೆಲ್ಲೆಡೆ ಆತ್ಯಾಚಾರಿಗಳನ್ನು ಗಲ್ಲಿಗೇರಿಸಿ ಆಗ ಹೆಣ್ಣನ್ನು ಕಾಮ ದೃಷ್ಠಿಯಿಂದ ನೋಡುವ ದುರುಳರು ಹೆದರುತ್ತಾರೆ ಎಂದು ಜನರು ಆಗ್ರಹಿಸುತ್ತಿದ್ದಾರೆ.