Tag: Cooked Food

  • ಮೂಳೆ ಶಸ್ತ್ರಚಿಕಿತ್ಸೆಯಾಗಿದೆ ಮನೆ ಊಟ ಕೊಡಿ – ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರ ಬರೆದ ದರ್ಶನ್‌!

    ಮೂಳೆ ಶಸ್ತ್ರಚಿಕಿತ್ಸೆಯಾಗಿದೆ ಮನೆ ಊಟ ಕೊಡಿ – ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರ ಬರೆದ ದರ್ಶನ್‌!

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲೂಟ ಸೇವಿಸುತ್ತಿರುವ ನಟ ದರ್ಶನ್‌ (Darshan) ಮತ್ತೆ ಮೆನಯೂಟ ಕೋರಿ ಜೈಲಾಧಿಕಾರಿಗಳು ಹಾಗೂ ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರಗಳನ್ನ ಬರೆದಿದ್ದಾರೆ. ಸ್ವತಃ ಕೈ ಬರಹದ ಮೂಲಕ ಜೈಲಾಧಿಕಾರಿಗೆ, ಜೈಲಿನ‌ ಮಹಾನಿರ್ದೇಶಕರಿಗೆ, ವೈದ್ಯಾಧಿಕಾರಿಗೆ, ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರ ʻಪಬ್ಲಿಕ ಟಿವಿʼಗೆ ಲಭ್ಯವಾಗಿದೆ.

    ನನಗೆ ಮೂಳೆ ಶಸ್ತ್ರಚಿಕಿತ್ಸೆಯಾಗಿದೆ, ಪ್ರೋಟಿನ್‌ ಅವಶ್ಯಕತೆ ಇದೆ. ಕಾರಾಗೃಹಕ್ಕೆ ದಾಖಲಾದ ದಿನದಿಂದ ಜೈಲೂಟ ಸೇವೆನೆ ಮಾಡುತ್ತಿದ್ದೇನೆ. ನನ್ನ ಆರೋಗ್ಯ, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ಪತ್ರದ ಮೂಲಕ ದರ್ಶನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮೀಸಲಾತಿ ಹೆಚ್ಚಿಸಿದ್ದ ನಿತೀಶ್‌ಗೆ ಹಿನ್ನಡೆ – ಹೈಕೋರ್ಟ್‌ ಆದೇಶಕ್ಕೆ ತಡೆ ನೀಡದ ಸುಪ್ರೀಂ

    ಇತ್ತೀಚೆಗಷ್ಟೇ ಮನೆಯೂಟ ಕೋರಿ ಹೈಕೋರ್ಟ್‌ನಲ್ಲಿ (High Court) ಸಲ್ಲಿಸಿದ್ದ ಸಲ್ಲಿಸಿದ್ದ ಮೆಮೋ ಅರ್ಜಿಯನ್ನು ವಿಚಾರಣೆಗೆ ಬರುತ್ತಿದ್ದಂತೆ ದರ್ಶನ್‌ ಪರ ವಕೀಲರು ಹಿಂದಕ್ಕೆ ಪಡೆದಿದ್ದರು. ತಾಂತ್ರಿಕ ಕಾರಣ ನೀಡಿ ದರ್ಶನ್‌ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದರು. ಅರ್ಜಿ ವಾಪಸ್‌ ಪಡೆದ ಕಾರಣ ದರ್ಶನ್‌ ಜೈಲೂಟವನ್ನೇ ಸೇವಿಸಬೇಕಿದೆ.

    ಇದಕ್ಕೂ ಮುನ್ನ ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: Wayanad Landslides: 93 ಮೃತದೇಹ ಸಿಕ್ಕಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು – ಸಿಎಂ ಪಿಣರಾಯಿ ಆತಂಕ

    ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ 

  • ದರ್ಶನ್‌ಗೆ ಜೈಲೂಟ – ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್‌

    ದರ್ಶನ್‌ಗೆ ಜೈಲೂಟ – ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್‌

    ಬೆಂಗಳೂರು: ಮನೆಯೂಟ ಕೋರಿ ಹೈಕೋರ್ಟ್‌ನಲ್ಲಿ (High Court) ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (Darshan) ಪರ ವಕೀಲರು ಹಿಂದಕ್ಕೆ ಪಡೆದಿದ್ದಾರೆ. ಅರ್ಜಿ ವಾಪಸ್‌ ಪಡೆದ ಕಾರಣ ದರ್ಶನ್‌ ಜೈಲೂಟವನ್ನೇ ಸೇವಿಸಬೇಕಿದೆ.

    ಇಂದು ವಿಚಾರಣೆಗೆ ಬರುತ್ತಿದ್ದಂತೆ ಮೆಮೋ‌ ಸಲ್ಲಿಸಿ ಅರ್ಜಿಯನ್ನು ಹಿಂದಕ್ಕೆ ಪಡೆಯಲಾಗಿದೆ. ತಾಂತ್ರಿಕ ಕಾರಣ ನೀಡಿ ದರ್ಶನ್‌ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದು ಮತ್ತೆ ಹೊಸ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

    ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು.

    ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು.

  • ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದು ಕಾಡಿಗೆ ಎಸೆದ ಪೋಷಕರು

    ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದು ಕಾಡಿಗೆ ಎಸೆದ ಪೋಷಕರು

    ರಾಯಪುರ: ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದಿದ್ದ ಘಟನೆ ಛತ್ತಿಸ್‌ಗಢದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಘಟನೆಗೆ ಸಂಬಂಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ ದಿಲ್ಸಾ ಎಕ್ಕಾ ಇಬ್ಬರನ್ನು ಬಂಧಿಸಲಾಗಿದೆ. ಈ ವರ್ಷ ಜೂನ್ ನಲ್ಲಿ ಘಟನೆ ನಡೆದಿತ್ತು. ಕೃತ್ಯ ಎಸಗಿದ್ದ ಪೋಷಕರು ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದ ಮಗಳನ್ನು ತಾವೇ ಕೊಂದು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೈಲ್ವೆ ಅಂಡರ್ ಪಾಸ್‍ನಲ್ಲಿ ಸಿಲುಕಿದ ಕಾಲೇಜ್ ಬಸ್- ವಿದ್ಯಾರ್ಥಿಗಳ ರಕ್ಷಣೆ

    ಕೃತ್ಯ ನಡೆದಿದ್ದು ಹೇಗೆ?
    2022ರ ಜೂನ್ 28ರಂದು 12 ವರ್ಷದ ತಮ್ಮ ಮಗಳು ಸಮಯಕ್ಕೆ ಸರಿತಯಾಗಿ ಅಡುಗೆ ಮಾಡಲಿಲ್ಲ ಹಾಗೂ ದನಕರುಗಳಿಗೆ ಮೇವು ಹಾಕಿರಲಿಲ್ಲ. ಇದರಿಂದ ಕೋಪಗೊಂಡ ಬಾಲಕಿ ತಂದೆ ದೊಣ್ಣೆಯಿಂದ ಥಳಿಸಿದ್ದಾನೆ. ನೆಲದ ಮೇಲೆ ಬಿದ್ದು ಒದ್ದಾಡುತ್ತಲೇ ಹುಡುಗೆ ಪ್ರಾಣ ಬಿಟ್ಟಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ತಾಯಿ ಕೂಡ ಇದ್ದರು. ಬಳಿಕ ಇಬ್ಬರೂ ಸೇರಿ ಮಗಳ ಮೃತದೇಹವನ್ನು ಇಲ್ಲಿನ ಸುರ್ಗುಜಾ ಜಿಲ್ಲೆಯ ಕಾಡಿನಲ್ಲಿ ಎಸೆದಿದ್ದಾರೆ. ನಂತರ ಯಾರಿಗೂ ಅನುಮಾನ ಬಾರದಂತೆ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದಾರೆ.

    ಇದೇ ತಿಂಗಳ ಆಗಸ್ಟ್ 26ರಂದು ಹುಡುಗಿಯ ತಂದೆಯೇ ತಮ್ಮ ಮಗಳ ದೇಹವು ಕೊಳೆತ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮಗಳ ಬಟ್ಟೆ ಹಾಗೂ ಚಪ್ಪಲಿಯನ್ನೂ ಗುರುತಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಗೆ ಒಳಪಡಿಸಿದಾಗ ತಾವೇ ಕೊಲೆ ಮಾಡಿರುವುದು ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲೂ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿ ವಾಪಸ್?

    KILLING CRIME

    ಘಟನೆ ಜೂನ್‌ನಲ್ಲಿ ನಡೆದಿತ್ತು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನಿನ್ನೆ ಸಂಜೆ ಆರೋಪಿ ಪೋಷಕರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]