Tag: Coolie

  • ರಜನಿಕಾಂತ್ ಹೊಸ ಸಿನಿಮಾದಲ್ಲಿ ಕರ್ನಾಟಕದ ಹುಡುಗ

    ರಜನಿಕಾಂತ್ ಹೊಸ ಸಿನಿಮಾದಲ್ಲಿ ಕರ್ನಾಟಕದ ಹುಡುಗ

    ಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಸದ್ಯ ‘ಕೂಲಿ’ (Coolie Film) ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶ್ರುತಿ ಹಾಸನ್, ಕನ್ನಡದ ‘ರತ್ನನ್ ಪ್ರಪಂಚ’ ನಟಿ ರೆಬಾ ಕಾಣಿಸಿಕೊಳ್ತಿದ್ದಾರೆ. ಇದರ ನಡುವೆ ಕನ್ನಡದ ಹುಡುಗನಿಗೆ ಈ ಚಿತ್ರದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

    ಇವರು ದೊಡ್ಡ ಸೆಲಬ್ರಿಟಿ ಏನಲ್ಲ, ಬದಲಿಗೆ ಕರ್ನಾಟಕದ ಮೂಲದ ಹುಡುಗ ಅನ್ನೋದು ವಿಶೇಷ. ವೈರಲ್‌ ಆಗಿರುವ ಸೋಷಿಯಲ್‌ ಮೀಡಿಯಾ ಪೋಸ್ಟ್‌ನಲ್ಲಿ ತಲೈವರ್ ಜೊತೆ ‘ಮಿಸ್ಟರ್ ಇಂಡಿಯನ್’ ಎಂದು ‘ಕೂಲಿ’ ಸಿನಿಮಾದ ಸೆಟ್‌ನಲ್ಲಿ ತೆಗೆದಿರುವ ಫೋಟೋ ಹಂಚಿಕೊಂಡಿದ್ದಾರೆ. ಸೆಟ್‌ನಲ್ಲಿ ಅವರು ಕಾಣಿಸಿಕೊಂಡ ಹಿನ್ನಲೆ ಕೂಲಿ ಸಿನಿಮಾದಲ್ಲಿ ನಟಿಸುತ್ತಾರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಅಧಿಕೃತ ಮಾಹಿತಿಗಾಗಿ ಕಾದುನೋಡಬೇಕಿದೆ. ಇದನ್ನೂ ಓದಿ:ಬಹುಭಾಷಾ ನಟ ಪ್ರಭುದೇವ ಅಜ್ಜಿ ನಂಜನಗೂಡಿನಲ್ಲಿ ನಿಧನ

    ಈ ಯುವಕನ ಹೆಸರು ರಾಜೇಶ್ ಸಂಜು. ಇವರು ತಮ್ಮ ಎಕ್ಸ್ ಅಕೌಂಟ್ ಬಯೋದಲ್ಲಿ ಫಿಲ್ಮ್ ಮೇಕಿಂಗ್, ಸ್ಟೋರಿ ಟೆಲ್ಲರ್ ಎಂದು ಬರೆದುಕೊಂಡಿದ್ದಾರೆ. ಇವರು ಮೂಲತಃ ಬೆಂಗಳೂರಿನವರು ಆಗಿದ್ದು, ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ರಾಜೇಶ್ ಸಂಜು ಅವರು ಶಾವೊಲಿನ್ ಕುಂಗ್ ಫೂ ಕೂಡ ಕಲಿತಿದ್ದಾರೆ ಅನ್ನೋದು ಅವರ ಸೋಷಿಯಲ್ ಮೀಡಿಯಾ ಖಾತೆಯಿಂದ ತಿಳಿದು ಬಂದಿದೆ.

    ‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಮೊದಲ ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

  • ‌’ಸಲಾರ್‌’ ಬಳಿಕ ಬಿಗ್‌ ಚಾನ್ಸ್- ರಜನಿಕಾಂತ್ ಸಿನಿಮಾದಲ್ಲಿ ಶ್ರುತಿ ಹಾಸನ್

    ‌’ಸಲಾರ್‌’ ಬಳಿಕ ಬಿಗ್‌ ಚಾನ್ಸ್- ರಜನಿಕಾಂತ್ ಸಿನಿಮಾದಲ್ಲಿ ಶ್ರುತಿ ಹಾಸನ್

    ಸ್ಟಾರ್ ನಟ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ (Shruti Haasan) ಬಹುಬೇಡಿಕೆ ನಟಿಯಾಗಿದ್ದಾರೆ. ‘ಸಲಾರ್’ ಸಿನಿಮಾದ ನಂತರ ಬಂಪರ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾದಲ್ಲಿ ನಟಿಸುವ ಅವಕಾಶ ಒಲಿದು ಬಂದಿದೆ. ಇದನ್ನೂ ಓದಿ:ತಮಿಳಿನತ್ತ ನಟಿ- ಶಶಿಕುಮಾರ್‌ಗೆ ಚೈತ್ರಾ ಆಚಾರ್ ನಾಯಕಿ

    ಪ್ರಭಾಸ್ ಜೊತೆಗಿನ ‘ಸಲಾರ್’ ಸಿನಿಮಾ ಆದ್ಮೇಲೆ ಯಾವುದೇ ಚಿತ್ರದ ಅಪ್‌ಡೇಟ್ ಹೊರಬಿದ್ದಿರಲಿಲ್ಲ. ಬ್ರೇಕಪ್‌ನಿಂದಲೇ ಹೆಚ್ಚು ಸುದ್ದಿಯಲ್ಲಿದ್ದ ಶ್ರುತಿ ಈಗ ಹೊಸ ಚಿತ್ರದ ಅಪ್‌ಡೇಟ್ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಕೂಲಿ’ (Coolie Film) ಚಿತ್ರಕ್ಕೆ ನಟಿ ಎಂಟ್ರಿ ಕೊಟ್ಟಿದ್ದಾರೆ.

    ಲೋಕೇಶ್ ಕನಕರಾಜ್ ನಿರ್ದೇಶನದ ‘ಕೂಲಿ’ ಸಿನಿಮಾದಲ್ಲಿ ಪ್ರಸ್ತುತ ರಜನಿಕಾಂತ್ ಬ್ಯುಸಿಯಾಗಿದ್ದಾರೆ. ಈ ತಂಡದ ಜೊತೆ ನಟಿ ಸೇರಿಕೊಂಡಿದ್ದಾರೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ‘ಕೂಲಿ’ ಚಿತ್ರೀಕರಣದಲ್ಲಿ ಮೊದಲೇ ದಿನ ಎಂದು ನಟಿ ಅಡಿಬರಹ ನೀಡಿ ಶೂಟಿಂಗ್ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿರೋದು ಈಗ ವೈರಲ್ ಆಗಿದೆ. ಸದ್ಯ ಈ ಬ್ರೇಕಿಂಗ್ ನ್ಯೂಸ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    ಚಿತ್ರದಲ್ಲಿ ಶ್ರುತಿ ಹಾಸನ್ ಪಾತ್ರದ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆದರೆ ಒಂದೇ ಚಿತ್ರದಲ್ಲಿ ರಜನಿಕಾಂತ್ (Rajanikanth) ಮತ್ತು ಶ್ರುತಿ ನಟಿಸ್ತಾರೆ ಎಂದು ಕೇಳಿ ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    ಅಂದಹಾಗೆ, ಸಲಾರ್ 2, ಡಕಾಯಿತ್, ಚೆನ್ನೈ ಸ್ಟೋರಿ ಸಿನಿಮಾಗಳಲ್ಲಿ ಶ್ರುತಿ ಹಾಸನ್ ಬ್ಯುಸಿಯಾಗಿದ್ದಾರೆ. ಹೊಸ ಸಿನಿಮಾಗಳ ಮಾತುಕತೆ ನಡೆಯುತ್ತಿದೆ.

  • ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ

    ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ

    ಕ್ಷಿಣದ ಹೆಸರಾಂತ ನಟ ರಜನಿಕಾಂತ್ (Rajinikanth) ನಟನೆಯ ಕೂಲಿ (Coolie) ಸಿನಿಮಾ ತಂಡಕ್ಕೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ನೋಟಿಸ್ (Notice) ಕಳುಹಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಸಂಗೀತ ಸಂಯೋಜನೆಯನ್ನು ಅನುಮತಿ ಇಲ್ಲದೇ ಬಳಸಿದ್ದಾರೆ ಎಂದು ನೋಟಿಸ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

    ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ವಾ ವಾ ಪಾಕಂ ವಾ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ತಮ್ಮ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

     

    ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.