Tag: corbevax

  • ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ – ಯಾವ ಜಿಲ್ಲೆಗೆ ಎಷ್ಟು ಡೋಸ್ ಹಂಚಿಕೆಯಾಗಿದೆ?

    ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ – ಯಾವ ಜಿಲ್ಲೆಗೆ ಎಷ್ಟು ಡೋಸ್ ಹಂಚಿಕೆಯಾಗಿದೆ?

    ಬೆಂಗಳೂರು: ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

    ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು. ಇದನ್ನೂ ಓದಿ: ವರ್ಷದ ಮೊದಲ ದಿನವೇ ಬಿಎಂಟಿಸಿಗೆ 4.37 ಕೋಟಿ ಆದಾಯ

    60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಆಪ್ತರಿಗೆ ಸಿಬಿಐ ನೋಟಿಸ್‌- ಪೊಲಿಟಿಕಲ್‌ ಸೇಫ್‌ ಗೇಮ್‌ ಆಡಲು ಮುಂದಾದ ಡಿಕೆಶಿ

    ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ?
    ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ. ಇದನ್ನೂ ಓದಿ: ರಾಮಮಂದಿರ ವಿಚಾರದಲ್ಲಿ ಯೋಚಿಸಿ ಮಾತಾಡಿ – ಕೈ ನಾಯಕರಿಗೆ ಹೈಕಮಾಂಡ್‌ ಸೂಚನೆ

  • ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆಯಿಂದ ಉಚಿತ ಕೋರ್ಬೆವ್ಯಾಕ್ಸ್‌ ಲಸಿಕಾಕರಣ

    ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆಯಿಂದ ಉಚಿತ ಕೋರ್ಬೆವ್ಯಾಕ್ಸ್‌ ಲಸಿಕಾಕರಣ

    ಬೆಂಗಳೂರು: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಶುಕ್ರವಾರದಿಂದ ಬೂಸ್ಟರ್‌ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಲಸಿಕೆ ಸಿಗಲಿದೆ.

    ನಾಳೆಯಿಂದ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವ್ಯಾಕ್ಸ್‌ ಲಸಿಕೆ ನೀಡಲಾಗುವುದು. ಎಲ್ಲಾ ಸರ್ಕಾರಿ ಆಸ್ಫತ್ರೆಗಳಲ್ಲಿ ಉಚಿತವಾಗಿ ಲಸಿಕೆ ಸಿಗಲಿದೆ. ಇದನ್ನೂ ಓದಿ: ಆಗಸ್ಟ್ 12 ರಿಂದ ಕೋವಿಡ್ ಬೂಸ್ಟರ್ ಆಗಿ ವಯಸ್ಕರಿಗೆ ಸಿಗಲಿದೆ ಕಾರ್ಬೆವಾಕ್ಸ್

    ಕೋರ್ಬೆವ್ಯಾಕ್ಸ್‌ ಲಸಿಕಾಕರಣಕ್ಕೆ ಸಚಿವ ಸುಧಾಕರ್‌ ಅವರು ನಾಳೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇಷ್ಟು ದಿನ ಮುನ್ನೆಚ್ಚರಿಕಾ ಡೋಸ್ ಆಗಿ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್‌ ಲಸಿಕೆಗಳನ್ನು ನೀಡಲಾಗುತ್ತಿತ್ತು. ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಜೊತೆಗೆ ಕೋರ್ಬೆವ್ಯಾಕ್ಸ್‌ ಲಸಿಕೆಯನ್ನು ಮುನ್ನೆಚ್ಚರಿಕಾ ಡೋಸ್ ಪಡೆಯಬಹುದು.

    ಕೊರೊನಾ ವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ, ಕೋವಿಶೀಲ್ಡ್ ಅಥವಾ ಕೋವಾಕ್ಸಿನ್‌ನ 2 ಡೋಸ್ ಪಡೆದ ವಯಸ್ಕರಿಗೆ ಸರ್ಕಾರ ಜೈವಿಕ ಇ ಕೋರ್ಬೆವ್ಯಾಕ್ಸ್‌ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದು ಆಗಸ್ಟ್ 12 ರಿಂದ ಜಾರಿಗೆ ಬರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯು.ಎಸ್ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ

    ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ 18 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಅಥವಾ ಕೋವಾಕ್ಸಿನ್‌ನ 2 ಡೋಸ್ ಪಡೆದು 6 ಅಥವಾ 26 ವಾರಗಳಾಗಿದ್ದರೆ, ಬೂಸ್ಟರ್ ಡೋಸ್ ಆಗಿ ಕೋರ್ಬೆವ್ಯಾಕ್ಸ್‌ ನೀಡಲು ಅನುಮೋದಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಆಗಸ್ಟ್ 12 ರಿಂದ ಕೋವಿಡ್ ಬೂಸ್ಟರ್ ಆಗಿ ವಯಸ್ಕರಿಗೆ ಸಿಗಲಿದೆ ಕಾರ್ಬೆವಾಕ್ಸ್

    ಆಗಸ್ಟ್ 12 ರಿಂದ ಕೋವಿಡ್ ಬೂಸ್ಟರ್ ಆಗಿ ವಯಸ್ಕರಿಗೆ ಸಿಗಲಿದೆ ಕಾರ್ಬೆವಾಕ್ಸ್

    ನವದೆಹಲಿ: ಕೊರೊನಾ ವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ, ಕೋವಿಶೀಲ್ಡ್ ಅಥವಾ ಕೋವಾಕ್ಸಿನ್‌ನ 2 ಡೋಸ್ ಪಡೆದ ವಯಸ್ಕರಿಗೆ ಸರ್ಕಾರ ಜೈವಿಕ ಇ ಕಾರ್ಬೆವಾಕ್ಸ್ ನೀಡಲು ಒಪ್ಪಿಗೆ ನೀಡಿದೆ. ಇದು ಆಗಸ್ಟ್ 12 ರಿಂದ ಜಾರಿಗೆ ಬರಲಿದೆ.

    ಈ ನಿರ್ಧಾರದ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದು, ಕೋವಿಡ್-19 ವಿರುದ್ಧ ಭಾರತದ ಹೋರಾಟಕ್ಕೆ ಮತ್ತಷ್ಟು ಶಕ್ತಿ ನೀಡಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ 18 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಅಥವಾ ಕೋವಾಕ್ಸಿನ್‌ನ 2 ಡೋಸ್ ಪಡೆದು 6 ಅಥವಾ 26 ವಾರಗಳಾಗಿದ್ದರೆ, ಬೂಸ್ಟರ್ ಡೋಸ್ ಆಗಿ ಕಾರ್ಬೆವಾಕ್ಸ್ ನೀಡಲು ಅನುಮೋದಿಸಿದೆ. ಈ ಕ್ರಮ ಆಗಸ್ಟ್ 12 ರಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ – ಶೇ.40 ರಿಂದ 70ರಷ್ಟು ಮರಣ ಸಾಧ್ಯತೆ

    ಭಾರತ ಇದೇ ಮೊದಲ ಬಾರಿಗೆ ಕೋವಿಡ್ ವಿರುದ್ಧದ ಪ್ರಾಥಮಿಕ ಲಸಿಕೆಗಳಿಗಿಂತ ಭಿನ್ನವಾದ ಬೂಸ್ಟರ್ ಡೋಸ್ ನೀಡಲು ಅನುಮತಿ ನೀಡಿದೆ. ಕಾರ್ಬೆವಾಕ್ಸ್ ಅನ್ನು ಆಗಸ್ಟ್ 12ರಿಂದ ಬೂಸ್ಟರ್ ಡೋಸ್ ಆಗಿ ವಯಸ್ಕರು ಪಡೆಯಬಹುದು. ಇದನ್ನೂ ಓದಿ: ರಾಜ್ಯದಲ್ಲಿಂದು 1,680 ಮಂದಿಗೆ ಕೊರೊನಾ – ಐವರು ಸಾವು

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಬೂಸ್ಟರ್ ಶಾಟ್ ಆಗಿ ಕಾರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು: DCGI

    ಕೋವಿಡ್ ಬೂಸ್ಟರ್ ಶಾಟ್ ಆಗಿ ಕಾರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು: DCGI

    ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟವರು ಕಾರ್ಬೆವ್ಯಾಕ್ಸ್ ಅನ್ನು ಬೂಸ್ಟರ್‌ಡೋಸ್ ಆಗಿ ಬಳಸಬಹುದು ಎಂದು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ತಿಳಿಸಿದೆ.

    ಏಪ್ರಿಲ್ ಅಂತ್ಯದ ವೇಳೆ ಕಾರ್ಬೆವ್ಯಾಕ್ಸ್ ಅನ್ನು 5 ರಿಂದ 15 ವರ್ಷದೊಳಗಿನ ಮಕ್ಕಳಿಗೆ ತುರ್ತು ಬಳಕೆಗೆ ಭಾರತದ ಔಷಧ ನಿಯಂತ್ರಕ ಅಧಿಕಾರ ನೀಡಿತ್ತು. ಬಳಿಕ 12 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿತ್ತು. ಇದನ್ನೂ ಓದಿ: ಐವರು ಟಾಪ್ ನಾಯಕರು ಕಾಂಗ್ರೆಸ್‌ಗೆ ಗುಡ್‌ಬೈ – ಕಮಲಕ್ಕೆ ಹಾಯ್

    ಭಾರತೀಯ ಜೈವಿಕ ತಂತ್ರಜ್ಞಾನ ಹಾಗೂ ಜೈವಿಕ ಔಷಧಿ ಕಂಪನಿ ಬಯೋಲಾಜಿಕಲ್ ಇ ತಯಾರಿಸಿರುವ ಲಸಿಕೆಯ ಬೆಲೆಯನ್ನು ಮೇ ತಿಂಗಳಿನಲ್ಲಿ ಇಳಿಸಿತ್ತು. ಖಾಸಗಿ ಲಸಿಕಾ ಕೇಂದ್ರಗಳಿಗೆ ಸರಕು ಹಾಗೂ ಸೇವಾ ತೆರಿಗೆಯನ್ನು ಒಳಗೊಂಡಂತೆ ಕಾರ್ಬೆವ್ಯಾಕ್ಸ್‌ನ ಬೆಲೆ 840 ರಿಂದ 250 ರೂ.ಗೆ ಇಳಿಸಲಾಗಿತ್ತು. ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಳ – ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರದಿಂದ ಪತ್ರ

    ಮಾರ್ಚ್ ತಿಂಗಳಿನಲ್ಲಿ ಭಾರತದಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಪ್ರಕ್ರಿಯೆ ಪ್ರಾರಂಭವಾದಾಗ, ಕಾರ್ಬೆವಾಕ್ಸ್ ಲಸಿಕೆಯನ್ನು ಬಳಸಲಾಯಿತು. ಮತ್ತು ಸರ್ಕಾರದ ಲಸಿಕಾ ಕಾರ್ಯಕ್ರಮಕ್ಕಾಗಿ ಅದರ ಬೆಲೆಯನ್ನು 145 ರೂ.ಗೆ ನಿಗದಿಪಡಿಸಿತು.

  • ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್ ಬೆಲೆ 250 ರೂ.ಗೆ ಇಳಿಕೆ

    ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್ ಬೆಲೆ 250 ರೂ.ಗೆ ಇಳಿಕೆ

    ಹೈದರಾಬಾದ್: ಲಸಿಕೆ ಮತ್ತು ಔಷಧಿಯ ಸಂಸ್ಥೆ ಬಯಾಲಾಜಿಕಲ್ ಇ. ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ ಕಾರ್ಬೆವಾಕ್ಸ್‌ನ ಬೆಲೆಯನ್ನು ಡೋಸ್‍ಗೆ 250 ರೂ. ನಿಗದಿಪಡಿಸಲಾಗಿದೆ.

    ಈ ಹಿಂದೆ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಕಾರ್ಬೆವಾಕ್ಸ್ ಬೆಲೆ 840 ರೂ. ಇತ್ತು. ಇದೀಗ ಲಸಿಕೆ ತಯಾರಿಕಾ ಸಂಸ್ಥೆ ಈ ಬೆಲೆಯನ್ನು 250 ರೂ.ಗೆ ಇಳಿಸಿದೆ. ಇದೀಗ ಟ್ಯಾಕ್ಸ್ ಮತ್ತು ಲಸಿಕೆ ನೀಡಿದ ಶುಲ್ಕ ಸೇರಿ 400 ರೂ.ಗಳಿಗೆ ಲಸಿಕೆಯನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ ನೇಮಕ

    ಈ ಹಿಂದೆ ಲಸಿಕೆಯ ಟ್ಯಾಕ್ಸ್ ಮತ್ತು ಲಸಿಕೆ ನೀಡಿದ ಶುಲ್ಕ ಸೇರಿ ಒಟ್ಟು 900 ರೂ. ಆಗಿತ್ತು. ಇದೀಗ ಈ ಬೆಲೆ 400 ರೂ.ಗಳಿಗೆ ಇಳಿಕೆ ಕಂಡಿದೆ. ಈಗಾಗಲೇ 5 ರಿಂದ 12 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ತುರ್ತು ಬಳಕೆಗೆ (EUA) ಅವಕಾಶ ನೀಡಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಪದೇ ಪದೇ ಭೂಕಂಪನ – ಬಾಗೇಪಲ್ಲಿ ತಾಲೂಕಿನ ಹಲವೆಡೆ ಭೀಕರ ಶಬ್ದ

    ಮಾರ್ಚ್ 2022ರ ಬಳಿಕ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆಯನ್ನು ನೀಡಲಾಗುತ್ತಿದೆ ಈಗಾಗಲೇ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 145 ರೂ.ಗಳನ್ನು ನಿಗದಿಪಡಿಸಲಾಗಿದೆ. ಟೆಕ್ಸಾಸ್ ಚಿಲ್ಡ್ರನ್ ಮತ್ತು ಬೇಲರ್ ಕಾಲೇಜ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಬಯಾಲಾಜಿಕಲ್ ಇ. ಲಿಮಿಟೆಡ್ ಕಾರ್ಬೆವಾಕ್ಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

  • 2 ಕೋವಿಡ್‌ ಲಸಿಕೆ, ಮೊಲ್ನುಪಿರವಿರ್‌ ಮಾತ್ರೆ ತುರ್ತು ಬಳಕೆಗೆ ಶಿಫಾರಸು

    2 ಕೋವಿಡ್‌ ಲಸಿಕೆ, ಮೊಲ್ನುಪಿರವಿರ್‌ ಮಾತ್ರೆ ತುರ್ತು ಬಳಕೆಗೆ ಶಿಫಾರಸು

    ನವದೆಹಲಿ: ಕೋವಿಡ್‌-19 ವಿರುದ್ಧದ ಎರಡು ಲಸಿಕೆಗಳು ಹಾಗೂ ಮಾತ್ರೆಯ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಅನುಮತಿ ನೀಡಲು ಶಿಫಾರಸು ಮಾಡಿದೆ.

    ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಕೋವೊವ್ಯಾಕ್ಸ್‌, ಬಯೋಲಾಜಿಕಲ್‌-ಇ ಸಂಸ್ಥೆಯ ಕೋರ್ಬೆವ್ಯಾಕ್ಸ್‌ ಲಸಿಕೆ ಹಾಗೂ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಎಸ್‌ಇಸಿ) ತಜ್ಞರ ಸಮಿತಿಯು ತಯಾರಿಸಿರುವ ಮೊಲ್ನುಪಿರವಿರ್‌ ಮಾತ್ರೆ ತುರ್ತು ಬಳಕೆಗೆ ಅನುಮೋದನೆ ಪಡೆದಿವೆ. ಕೋರ್ಬೆವ್ಯಾಕ್ಸ್‌ ಭಾರತದ ಮೊದಲ ಸ್ವದೇಶಿ ʼಆರ್‌ಬಿಡಿ ಪ್ರೊಟೀನ್‌ ಉಪ ಘಟಕ ಲಸಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾಮಾನ್ಯ ಜನರಲ್ಲಿ ಮತ್ತೆ ಹೆಚ್ಚುತ್ತಿದೆ ಪಾಸಿಟಿವಿಟಿ – ಸಮುದಾಯಕ್ಕೆ ಹಬ್ಬಿತಾ ಓಮಿಕ್ರಾನ್ ಸೋಂಕು

    ಕೋವಿಡ್‌ ವಿರುದ್ಧದ ಮೂರನೇ ಲಸಿಕೆಯನ್ನು ತಯಾರಿಸುವ ಮೂಲಕ ಭಾರತ ಹ್ಯಾಟ್ರಿಕ್‌ ಸಾಧನೆ ಮಾಡಿದೆ ಎಂದು ಸಚಿವರು ಹೇಳಿದ್ದಾರೆ.

    ಮೊಲ್ನುಪಿರವಿರ್‌ ಮಾತ್ರೆಯನ್ನು ಕೆಲವು ಷರತ್ತುಬದ್ಧ ನಿಯಮಗಳೊಂದಿಗೆ ಬಳಕೆಗೆ ಸೂಚಿಸಲಾಗಿದೆ. ಆಮ್ಲಜನಕ ಮಟ್ಟ ಶೇ.93ಕ್ಕಿಂತ ಕಡಿಮೆ ಇರುವ ವಯಸ್ಕರು, ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಮಾತ್ರ ನೀಡಬಹುದಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಸೆರಮ್ ಸಂಸ್ಥೆಯ 2ನೇ ಲಸಿಕೆ ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ಶಿಫಾರಸು

    ಈವರೆಗೆ ಒಟ್ಟು 8 ಲಸಿಕೆಗಳು ಭಾರತದ ಔಷಧ ನಿಯಂತ್ರಕದಿಂದ ತುರ್ತು ಬಳಕೆಗೆ ಅನುಮೋದನೆ ಪಡೆದಿವೆ. ಕೋವಿಶೀಲ್ಡ್‌, ಜೈಕೋವ್‌-ಡಿ, ಸ್ಪುಟ್ನಿಕ್‌ ವಿ, ಮೋಡೆರ್ನಾ, ಜಾನ್ಸನ್‌ ಅಂಡ್‌ ಜಾನ್ಸನ್‌, ಕೋರ್ಬೆವ್ಯಾಕ್ಸ್‌, ಕೋವೊವ್ಯಾಕ್ಸ್‌ ಲಸಿಕೆಗಳಿಗೆ ಅನುಮತಿಸಲಾಗಿದೆ.