Tag: Corona Relief Fund

  • ರೈತ ಮುಖಂಡನ ಸರಳ ವಿವಾಹ – ಜೋಡಿಯಿಂದ ಮದ್ವೆ ಖರ್ಚಿನ ಹಣ ದೇಣಿಗೆ

    ರೈತ ಮುಖಂಡನ ಸರಳ ವಿವಾಹ – ಜೋಡಿಯಿಂದ ಮದ್ವೆ ಖರ್ಚಿನ ಹಣ ದೇಣಿಗೆ

    ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅನೇಕರು ತುಂಬಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇದೀಗ ರೈತ ಮುಖಂಡ ಕೊರೊನಾ ಲಾಕ್‍ಡೌನ್‍ನಿಂದಾಗಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಡಬೂರು ನಿವಾಸಿ ಮಂಜು ಅದೇ ಗ್ರಾಮದ ಮಾದಲಾಂಬಿಕೆ ವಧುವಿನ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ವರ ಮಂಜು ತಮ್ಮ ಮದುವೆಗೆಂದು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ವರ ಮಂಜು ಮತ್ತು ವಧು ಮಾದಲಾಂಬಿಕೆ ಕಡಬೂರು ಗ್ರಾಮದಲ್ಲೇ ಕುಟುಂಬದವರ ಸಮ್ಮುಖದಲ್ಲಿ ಶಾಸ್ತ್ರೋಸ್ತವಾಗಿ ಸರಳವಾಗಿ ಮದುವೆಯಾಗಿದ್ದಾರೆ. ನಂತರ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 1 ಲಕ್ಷ ರೂ. ಮತ್ತು ಗ್ರಾಮದ ದೇವಸ್ಥಾನದ ಅಭಿವೃದ್ಧಿಗೆ 2 ಲಕ್ಷ ರೂಪಾಯಿಯನ್ನು ದೇಣಿಗೆ ನೀಡಿದ್ದಾರೆ. ಈ ಮೂಲಕ ಮದುವೆ ಖರ್ಚಿನ ಹಣವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿ ರೈತ ಮುಖಂಡ ಮಾದರಿಯಾಗಿದ್ದಾರೆ.

  • ಸರಳ ವಿವಾಹವಾಗಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದ ನವದಂಪತಿ

    ಸರಳ ವಿವಾಹವಾಗಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದ ನವದಂಪತಿ

    ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರಳ ವಿವಾಹವಾದ ನವದಂಪತಿ ಮದುವೆಯ ಖರ್ಚನ್ನು ಕೊರೊನಾ ಪರಿಹಾರ ನಿಧಿಗೆ ನೀಡಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ.

    ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸರಳವಾಗಿ ಮದುವೆ ಮಾಡಿಕೊಂಡು ಮದುವೆ ಖರ್ಚಿಗೆ ಎಂದು ಇಟ್ಟುಕೊಂಡಿದ್ದ 50 ಸಾವಿರ ರೂಪಾಯಿಗಳನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದ ನವಜೋಡಿ ಕಾರ್ಯಕ್ಕೆ ಪೋಷಕರು ಶಹಬ್ಬಾಸ್ ಎಂದಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದ ಚಂದ್ರಶೇಖರಮೂರ್ತಿ, ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಮೇಘನಾ ಸರಳವಾಗಿ ವಿವಾಹವಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಸಾವಿರ ಹಾಗೂ ಪ್ರಧಾನಿ ಕೊರೊನಾ ಪರಿಹಾರ ನಿಧಿಗೆ 25 ಸಾವಿರ ರೂ. ಅನ್ನು ಆನ್‍ಲೈನ್ ಮೂಲಕ ಪಾವತಿಸಿದ್ದಾರೆ. ನವ ವಧುವರರ ಈ ಕೆಲಸಕ್ಕೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಹುಟ್ಟುಹಬ್ಬಕ್ಕೆಂದು ಕೂಡಿಟ್ಟ ಹಣವನ್ನು ಸಿಎಂ ಪರಿಹಾರ ನಿಧಿಗೆ ಕೊಟ್ಟ 3ರ ಬಾಲಕ

    ಹುಟ್ಟುಹಬ್ಬಕ್ಕೆಂದು ಕೂಡಿಟ್ಟ ಹಣವನ್ನು ಸಿಎಂ ಪರಿಹಾರ ನಿಧಿಗೆ ಕೊಟ್ಟ 3ರ ಬಾಲಕ

    ಧಾರವಾಡ: ಧಾರವಾಡದಲ್ಲಿ ಮೂರು ವರ್ಷದ ಬಾಲಕನೋರ್ವ ತನ್ನ ಹುಟ್ಟುಹಬ್ಬಕ್ಕೆ ಎಂದು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

    ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ಮೂರು ವರ್ಷದ ಬಾಲಕ ಸಂಸ್ಕೃತ ಹೂಗಾರ ತನ್ನ ಹುಂಡಿಯಲ್ಲಿನ ಹಣವನ್ನು ಸಿಎಂ ಕೊರೊನಾ ಪರಿಹಾರ ನಿಧಿಗೆ ನೀಡಿದ್ದಾನೆ. ವರ್ಷವಿಡೀ ಕೂಡಿಟ್ಟ 508 ರೂ. ಗಳವನ್ನು ಈತ ತನ್ನೂರಿಗೆ ಆಗಮಿಸಿದ್ದ ತಹಶೀಲ್ದಾರ್ ಸಂತೋಷಕುಮಾರ್ ಬಿರಾದಾರರಿಗೆ ನೀಡಿದ್ದಾನೆ.

    ಈತನ ಕಾರ್ಯವೀಗ ಇತರರಿಗೆ ಮಾದರಿಯಾಗಿದೆ. ಪ್ರಕಾಶ್ ಮತ್ತು ಝಾಂನ್ಸಿ ಲಕ್ಷ್ಮಿ ದಂಪತಿಯ ಮಗ ಸಂಸ್ಕೃತನ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಕೊರೊನಾ ಪರಿಹಾರ ನಿಧಿಗೆ ತನ್ನ 6 ತಿಂಗ್ಳ ಸಂಬಳ ನೀಡಿದ ಭಾರತದ ಕುಸ್ತಿಪಟು

    ಕೊರೊನಾ ಪರಿಹಾರ ನಿಧಿಗೆ ತನ್ನ 6 ತಿಂಗ್ಳ ಸಂಬಳ ನೀಡಿದ ಭಾರತದ ಕುಸ್ತಿಪಟು

    – ಮಾನವೀಯತೆ ಮೆರೆದ ಭಜರಂಗ್ ಪೂನಿಯಾ

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆವರಿಸುತ್ತಿದೆ. ಇದುವರೆಗೆ ಭಾರತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಕೊರೊನಾ ವೈರಸ್ ಬಗ್ಗೆ ಕ್ರೀಡಾಪಟುಗಳು, ನಟ-ನಟಿಯರು ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ಭಾರತ ಸ್ಟಾರ್ ಕುಸ್ತಿಪಟು ಭಜರಂಗ್ ಪೂನಿಯಾ ಕೂಡ ಆರ್ಥಿಕ ಸಹಾಯ ಮಾಡಿದ್ದಾರೆ.

    ಭಜರಂಗ್ ಪೂನಿಯಾ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ತಮ್ಮ 6 ತಿಂಗಳ ವೇತನನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. “ಹರಿಯಾಣ ಮುಖ್ಯಮಂತ್ರಿ ಎಂಎಲ್ ಖಟ್ಟರ್ ಅವರು ಸ್ಥಾಪಿಸಿದ ಕೋವಿಡ್ -19 ರೋಗಿಗಳ ಪರಿಹಾರ ನಿಧಿಗೆ ನನ್ನ ಆರು ತಿಂಗಳ ವೇತನವನ್ನು ನೀಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

    ಭಜರಂಗ್ ರೈಲ್ವೆ ಇಲಾಖೆಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ “ಹರಿಯಾಣ ಕೊರೊನಾ ಪರಿಹಾರ ನಿಧಿಗೆ” ಕೊಡುಗೆ ನೀಡುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    2019ರ ವಿಶ್ವ ಚಾಂಪಿಯನ್‍ಶಿಪ್ ಕಂಚಿನ ಪದಕ ವಿಜೇತ ಭಜರಂಗ್ ಪೂನಿಯಾ ಅವರ ಪ್ರಯತ್ನ ಶ್ಲಾಘನೀಯ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಾರ್ವಜನಿಕ ಸೇವೆಗಳನ್ನು ಒದಗಿಸಲು ಹರಿಯಾಣ ಸರ್ಕಾರ ಸೋಮವಾರ ಸ್ವಯಂಪ್ರೇರಿತ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಕೋವಿಡ್-19 ಅನ್ನು ನಿರ್ಮಾಣ ಮಾಡಲು ”ಕೋವಿಡ್ – ಸಂಘರ್ಷ ಸೇನಾನಿ” ಎಂಬ ಕಾರ್ಯಕ್ರಮವನ್ನು ಸೋಮವಾರ ಪ್ರಾರಂಭಿಸಲಾಗಿದೆ.

    ಭಾರತದ ಮಾಜಿ ಆರಂಭಿಕ ಮತ್ತು ಬಿಜೆಪಿ ಶಾಸಕ ಗೌತಮ್ ಗಂಭೀರ್ ಅವರು ಕೂಡ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಅವರ ತಮ್ಮ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ(ಎಂಪಿಎಲ್‍ಎಡಿಎಸ್) ನಿಧಿಯಿಂದ 50 ಲಕ್ಷ ರೂ. ದೇಣಿಗೆಯನ್ನು ನೀಡಿದ್ದಾರೆ. ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡುವ ಅಗತ್ಯ ಸಲಕರಣೆಗಳಿಗಾಗಿ ದೆಹಲಿ ಸರ್ಕಾರಿ ಆಸ್ಪತ್ರೆಗಳಿಗೆ ನೀಡಿದ್ದಾರೆ.