Tag: Corona Report

  • ಕಾರ್ಕಳದಲ್ಲಿ 10 ತಿಂಗಳ ವಿಜಯಪುರದ ಮಗು ಸಂಶಯಾಸ್ಪದ ಸಾವು

    ಕಾರ್ಕಳದಲ್ಲಿ 10 ತಿಂಗಳ ವಿಜಯಪುರದ ಮಗು ಸಂಶಯಾಸ್ಪದ ಸಾವು

    – ಲ್ಯಾಬ್ ವರದಿಗಾಗಿ ಕಾಯುತ್ತಿರುವ ವೈದ್ಯರು

    ಉಡುಪಿ: ಜ್ವರ ಮತ್ತು ತೊಂದರೆಯಿಂದ ಹತ್ತು ತಿಂಗಳ ಮಗು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

    ಸಾವನ್ನಪ್ಪಿದ ಮಗುವನ್ನು ಕಾರ್ಕಳದ ಮಿಯಾರು ಗ್ರಾಮದಲ್ಲಿ ನೆಲೆಸಿರುವ ಮೂಲತಃ ವಿಜಯಪುರ ಜಿಲ್ಲೆಯ ದಂಪತಿಯ ಮಗು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ವಿಜಯಪುರಕ್ಕೆ ಹೋದ ದಂಪತಿ ಹತ್ತು ದಿನಗಳ ಹಿಂದೆ ವಾಪಸ್ ಆಗಿದ್ದರು.

    ಜೂನ್ 28 ರಂದು ಮಗುವಿಗೆ ಜ್ವರ ಕಾಣಿಸಿಕೊಂಡಿತ್ತು. ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಾಲೂಕು ಆಸ್ಪತ್ರೆಗೆ ಮಗುವನ್ನು ಕರೆ ತರುವಾಗ ಸಾವು ಸಂಭವಿಸಿದೆ. ಕೊರೊನಾ ಸಂದರ್ಭದಲ್ಲಿ ಮೃತಪಟ್ಟಿರುವ ಕಾರಣ ಮಗುವಿನ ಗಂಟಲ ದ್ರವ ಪರೀಕ್ಷೆಗಾಗಿ ರವಾನಿಸಲಾಗಿದೆ. ಕೆಎಂಸಿ ಲ್ಯಾಬ್‍ನ ವರದಿಗಾಗಿ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ.