ಪುಣೆ: 10 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ(Covishield Vaccine) ವ್ಯರ್ಥವಾಗಿದೆ ಎಂದು ವಿಶ್ವದ ಅತಿದೊಡ್ಡ ಅತಿ ದೊಡ್ಡ ಲಸಿಕೆ ತಯಾರಿಕೆ ಕಂಪನಿ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(Serum Institute of India) ಹೇಳಿದೆ.
ಕಂಪನಿಯ ಸಿಇಒ ಆದಾರ್ ಪೂನಾವಾಲ(Adar Poonawalla), 2021ರ ಡಿಸೆಂಬರ್‌ನಲ್ಲೇ ಕೋವಿಡ್ ಲಸಿಕೆ ಕೋವಿಶೀಲ್ಡ್ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವುದಾಗಿ ಹೇಳಿದೆ.
ಜನರು ಬೂಸ್ಟರ್ ಡೋಸ್(Booster Dose) ಪಡೆಯಲು ಹಿಂಜರಿಯುತ್ತಿದ್ದಾರೆ. ಈ ಕಾರಣಕ್ಕೆ ನಾವು ಉತ್ಪಾದನೆ ಮಾಡುವುದನ್ನು ನಿಲ್ಲಿಸಿದೆವು ಎಂದಿದ್ದಾರೆ.
ಈ ವೇಳೆ ಉತ್ಪಾದನೆಯಾಗಿ ಖರೀದಿಯಾಗದೇ ಉಳಿದಿದ್ದ 10 ಕೋಟಿ ಡೋಸ್‌ನಷ್ಟು ಲಸಿಕೆಯ ಅವಧಿ ಮುಗಿದ ಕಾರಣ ವ್ಯರ್ಥವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೋವಿಶೀಲ್ಡ್ ಲಸಿಕೆಯ ಗರಿಷ್ಠ ಬಳಕೆಯ ಅವಧಿ 9 ತಿಂಗಳು ಆಗಿತ್ತು. 2021ರ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರ ಕೋವಿಶೀಲ್ಡ್ ಲಸಿಕೆಯ ಗರಿಷ್ಠ ಬಳಕೆಯ ಅವಧಿಯನ್ನು ಆರರಿಂದ ಒಂಬತ್ತು ತಿಂಗಳಿಗೆ ಹೆಚ್ಚಿಸಿತ್ತು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: 6-12 ವರ್ಷದ ಮಕ್ಕಳಿಗೆ ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಡ್ರೈ ಆರಂಭ ಮಾಡುತ್ತೇವೆ. 6-12 ವರ್ಷದ ಮಕ್ಕಳಿಗೆ ಶೀಘ್ರದಲ್ಲಿ ಲಸಿಕೆ ನೀಡುವ ವಿಚಾರವಾಗಿ ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು.
ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಬೇಸಿಗೆ ರಜೆ ಪ್ರಾರಂಭ ಆಗಿದೆ. ಹೀಗಾಗಿ ಶಾಲೆಯಲ್ಲಿ ಮಾಡಬೇಕಾ? ಆಯಾ ಇನ್‍ಸ್ಟಿಟ್ಯೂಷನ್‍ನಲ್ಲಿ ಮಾಡಬೇಕಾ ಎಂದು ಚರ್ಚೆ ಮಾಡುತ್ತೇವೆ. ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. 6-12 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಲಸಿಕೆ ಉಚಿತನಾ ಅಂತ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗಲ್ಲ: ಮೋಹನ್ ಭಾಗವತ್
ಬೆಂಗಳೂರಿನಲ್ಲಿ ಕೇಸ್ ದಿನೇ ದಿನೇ ಹೆಚ್ಚಳ ಆಗುತ್ತಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ದೊಡ್ಡ ಮಟ್ಟದ ಕೇಸ್ ಹೆಚ್ಚಳ ಆಗಿಲ್ಲ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದು ತಿಳಿಸಿದರು.
ಲಸಿಕೆ ಮತ್ತು ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಸದ್ಯಕ್ಕೆ ಆತಂಕ ಪಡುವ ಸ್ಥಿತಿ ರಾಜ್ಯದಲ್ಲಿ ಇಲ್ಲ. ಅನಗತ್ಯವಾಗಿ ಭಯ, ಆತಂಕಕ್ಕೆ ಒಳಗಾಗುವ ಅವಶ್ಯಕತೆ ತಕ್ಷಣಕ್ಕೆ ಇಲ್ಲ. ಬೂಸ್ಟರ್ ಡೋಸ್‍ನ್ನು ತೆಗೆದುಕೊಳ್ಳುತ್ತಿದ್ದಾರೆ. 2-3 ದಿನಗಳಿಂದ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಬಗ್ಗೆ ಮಾತನಾಡುವ ಹಕ್ಕು ಪಾಕಿಸ್ತಾನಕ್ಕಿಲ್ಲ: ಭಾರತ ತಿರುಗೇಟು
ಒಮಿಕ್ರಾನ್ ಹೊಸ ತಳಿ ಪತ್ತೆ ವಿಚಾರವಾಗಿ ಮಾತನಾಡಿ, ಈಗಾಗಲೇ ಲ್ಯಾಬ್‍ಗೆ ಸ್ಯಾಂಪಲ್ ಕಳುಹಿಸಲಾಗಿದೆ. ಇಂದು ವರದಿ ಬರಬಹುದು ಎಂದರು.
ನವದೆಹಲಿ: ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಹಾದಿ ಸುಗಮವಾಗಿದೆ. ಒಂದೇ ದಿನ ಮೂರು ಲಸಿಕೆಗೆ ಅನುಮತಿ ಸಿಕ್ಕಿದೆ
ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು 6 ರಿಂದ 12 ವರ್ಷದ ಮಕ್ಕಳಿಗೆ ನೀಡಲು ಭಾರತ ಔಷಧ ನಿಯಂತ್ರಣ ಮಂಡಳಿ(ಡಿಸಿಜಿಐ) ತುರ್ತು ಅನುಮತಿ ನೀಡಿದೆ.
5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಬಯೊಲಾಜಿಕಲ್-ಇ ಸಂಸ್ಥೆ ತಯಾರಿಸಿದ ಕಾರ್ಬೇವ್ಯಾಕ್ಸ್ ಲಸಿಕೆ, 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜೈಡಸ್ ಕ್ಯಾಡಿಲ್ಲಾ ಅಭಿವೃದ್ಧಿಪಡಿಸಿರುವ ಜೈಕೋವ್ ಡಿ ಲಸಿಕೆಯ ತುರ್ತು ಬಳಕೆಗೂ ಡಿಸಿಜಿಐ ಅನುಮೋದನೆ ನೀಡಿದೆ. ಇದನ್ನೂ ಓದಿ: ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು
ಮೂರು ಸಂಸ್ಥೆಗಳಿಗೂ ಡಿಸಿಜಿಐ ಕೆಲ ಷರತ್ತುಗಳನ್ನು ವಿಧಿಸಿದೆ. ಲಸಿಕೆ ಹಂಚಿಕೆಯಾದ ನಂತರ ಮೊದಲ ಎರಡು ತಿಂಗಳು ಪ್ರತಿ 15 ದಿನಕ್ಕೊಮ್ಮೆ ಭದ್ರತಾ ದತ್ತಾಂಶಗಳನ್ನು ಡಿಸಿಜಿಐಗೆ ಸಲ್ಲಿಸಬೇಕು. ಆ ನಂತರ ಐದು ತಿಂಗಳಿಗೊಮ್ಮೆ ವಿವರಗಳನ್ನು ನೀಡಬೇಕು ಎಂದು ಸೂಚಿಸಿದೆ. ಶೀಘ್ರವೇ ಕೇಂದ್ರ ಸರ್ಕಾರ, ಲಸಿಕೆ ಹಂಚಿಕೆಗೂ ಗ್ರೀನ್ ಸಿಗ್ನಲ್ ನೀಡುವ ಸಂಭವ ಹೆಚ್ಚಿವೆ.
ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ.
ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಶಶಿಕಾಂತ ಮುನ್ಯಾಳ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ. ಈಶ್ವರ ಗಡದ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಯ್ದ 20 ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತದೆ. ಉಳಿದ ಎಲ್ಲಾ ಮಕ್ಕಳಿಗೆ ಅವರ ಶಾಲೆಗಳು ಹಾಗೂ ನಗರ ಮತ್ತು ಗ್ರಾಮದಲ್ಲಿ ಲಸಿಕಾ ಕೇಂದ್ರಗಳಲ್ಲಿ ನೀಡಲಾಗುವದು ಎಂದು ತಿಳಿಸಿದ್ದಾರೆ.
ತುಮಕೂರು: 6 ತಿಂಗಳ ಹಿಂದೆ ಮರಣ ಹೊಂದಿದ್ದ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಸರ್ಟಿಫಿಕೆಟ್ ನೀಡಿ ಆರೋಗ್ಯ ಮಹಾ ಎಡವಟ್ಟು ಮಾಡಿದೆ.
ತುಮಕೂರು ನಗರದ ಮೆಳೆಕೋಟೆ ನಿವಾಸಿ ಬಸಪ್ಪ(80) 2021ರ ಏಪ್ರಿಲ್ 9ರಂದು ಮೊದಲ ಡೋಸ್ ತೆಗೆದುಕೊಂಡಿದ್ದರು. ಈ ನಡುವೆ ಜು.16 ರಂದು ಅವರು ಮೃತಪಟ್ಟಿದ್ದಾರೆ. ಆದರೆ ನಿನ್ನೆ 29ರಂದು ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೆಜ್ ಬಂದಿದೆ. ಸಂಬಂಧಿಕರು ಸೈಟ್ ಓಪನ್ ಮಾಡಿದಾಗ ಸರ್ಟಿಫಿಕೆಟ್ ಅಪ್‍ಡೇಟ್ ಆಗಿತ್ತು.
ಚಿತ್ರದುರ್ಗ: ಕೊರೊನಾ ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕನ ಮನವೊಲಿಸಿ ಕೊರೊನಾ ಲಸಿಕೆ ನೀಡುವಲ್ಲಿ ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಒಂದು ಹಾಗೂ ಎರಡನೇ ಹಂತದ ಲಸಿಕೆ ಪಡೆಯದ ವ್ಯಕ್ತಿಗಳನ್ನು ಗುರುತಿಸಿ ಅಂತಹವರಿಗೆ ವ್ಯಾಕ್ಸಿನ್ ನೀಡಲಾಗುತ್ತಿತ್ತು. ಆಗ ಮಂಜುನಾಥ್ ಎಂಬ ಯುವಕ ಮೊದಲನೆ ಲಸಿಕೆ ಪಡೆದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು ಲಸಿಕೆ ಹಾಕಲು ಹೋದಾಗ, ಮಂಜುನಾಥ್ ನನಗೆ ಲಸಿಕೆ ಬೇಡ ಎಂದು ಹಠ ಹಿಡಿದು ಮನೆ ಏರಿ ಕುಳಿತಿದ್ದನು. ಇದನ್ನೂ ಓದಿ: ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ
ಆಗ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ತಹಶೀಲ್ದಾರ್ ಎನ್. ರಘುಮೂರ್ತಿ ಹಾಗೂ ಆರೋಗ್ಯ ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರು, ಕುಟುಂಬಸ್ಥರ ನೇತೃತ್ವದಲ್ಲಿ ಯುವಕನನ್ನು ಮನವೊಲಿಸಿ ಮನೆ ಮೇಲಿನಿಂದ ಕೆಳಗೆ ಇಳಿಸಿಕೊಂಡು ಲಸಿಕೆಯನ್ನು ನೀಡಿದ್ದಾರೆ. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಇದ್ದರು. ಇದನ್ನೂ ಓದಿ:ಸಕಲೇಶಪುರದಲ್ಲಿ ಕಲ್ಲು ಎತ್ತಿ ಹಾಕಿ ವೃದ್ಧೆಯ ಬರ್ಬರ ಹತ್ಯೆ
ಬೆಂಗಳೂರು: ಕೊರೊನಾ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡದಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು ಎಂದು ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ದಾಳಿ ಮಾಡಿದೆ.
ಟ್ವೀಟ್‍ನಲ್ಲಿ ಏನಿದೆ?: ಆರಂಭದಲ್ಲಿ ಕಾಂಗ್ರೆಸ್ ನಾಯಕರಿಂದ ಲಸಿಕೆಯ ವಿರುದ್ಧ ಅಪಪ್ರಚಾರವಾಗಿತ್ತು. ದೇಶದ ಜನರಲ್ಲಿ ಲಸಿಕೆಯ ಕುರಿತು ಕಾಂಗ್ರೆಸ್ ಸುಳ್ಳಿನ ಸರಮಾಲೆ ಹಬ್ಬಿಸಿತ್ತು. ಲಸಿಕೆಯನ್ನು ಮೋದಿ ವ್ಯಾಕ್ಸಿನ್ ಎಂದು ಕರೆದಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆದಿದ್ದರು. ಇದು ರಾಷ್ಟ್ರ ವಿರೋಧಿ ಸಂಚಲ್ಲವೇ ಎಂದು ಕಿಡಿಕಾರಿದೆ. ಇದನ್ನೂ ಓದಿ: ಪಾರಿವಾಳ ವಿಚಾರ ಕೊಲೆಯಲ್ಲಿ ಅಂತ್ಯ
ಮೋದಿ ಲಸಿಕೆ ಹಾಕಿಸಿಕೊಂಡಿದ್ದಾರಾ ಎಂದು ಪ್ರಶ್ನಿಸುತ್ತಿದ್ದ ಸಿದ್ದರಾಮಯ್ಯನವರೇ,
ರಾಹುಲ್ ಗಾಂಧಿ ಎರಡು ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂಬ ದೇಶದ ಜನತೆಯ ಪ್ರಶ್ನೆಗೆ ಉತ್ತರಿಸುವಿರಾ?
ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎನ್ನುವಂತೆ, ರಾಹುಲ್ ಗಾಂಧಿ ಅವರ ಹಾದಿಯಲ್ಲೇ ಸಿದ್ದರಾಮಯ್ಯ ಲಸಿಕೆಯ ವಿರುದ್ಧ ಮಾತನಾಡಿದ್ದರು. ಮೋದಿ ಲಸಿಕೆ ಹಾಕಿಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದರು. ಪೌರ ಕಾರ್ಮಿಕರ ಮೇಲೆ ಪ್ರಯೋಗಕ್ಕೆ ಹೊರಟಿದ್ದಾರೆ ಎಂದೆಲ್ಲ ಅಪಪ್ರಚಾರ ನಡೆಸಿದ್ದರು. ಕೊನೆಗೆ ಕಾಂಗ್ರೆಸ್ ನಾಯಕರು ತಾವೇ ಲಸಿಕೆ ಹಾಕಿಸಿಕೊಂಡರು ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ನವೋದಯದಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಬೇಡಿ – ಕೊಡಗಿನ ಪೋಷಕರಿಂದ ವಿರೋಧ
ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರದ ಅಭಿಯಾನ ನಡೆಸದೇ ಹೋಗಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು.
ಎಲ್ಲದರಲ್ಲೂ ರಾಜಕೀಯ ಅರಸಲು ಹೊರಟ ಕಾಂಗ್ರೆಸ್ ಪಕ್ಷ ಜನರ ದೃಷ್ಟಿಯಲ್ಲಿ ಅಪ್ರಸ್ತುತವಾಗುತ್ತಿದೆ. ಲಸಿಕೆ ಅಭಿಯಾನದ ಯಶಸ್ಸೇ ಇದಕ್ಕೆ ಸಾಕ್ಷಿ.#CONgressAgainstVaccination
ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರದ ಅಭಿಯಾನ ನಡೆಸದೆ ಹೋಗಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು. ಎಲ್ಲದರಲ್ಲೂ ಕಾಂಗ್ರೆಸ್ ರಾಜಕೀಯ ಅರಸಲು ಹೊರಟಿದೆ. ಕಾಂಗ್ರೆಸ್ ಪಕ್ಷ ಜನರ ದೃಷ್ಟಿಯಲ್ಲಿ ಅಪ್ರಸ್ತುತವಾಗುತ್ತಿದೆ. ಲಸಿಕೆ ಅಭಿಯಾನದ ಯಶಸ್ಸೆ ಇದಕ್ಕೆ ಸಾಕ್ಷಿ. ಮೋದಿ ಲಸಿಕೆ ಹಾಕಿಸಿಕೊಂಡಿದ್ದಾರಾ ಎಂದು ಪ್ರಶ್ನಿಸುತ್ತಿದ್ದ ಸಿದ್ದರಾಮಯ್ಯನವರೇ, ರಾಹುಲ್ ಗಾಂಧಿ ಎರಡು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂಬ ದೇಶದ ಜನತೆಯ ಪ್ರಶ್ನೆಗೆ ಉತ್ತರಿಸುವಿರಾ. ಜನತೆಯ ಸಂಶಯ ಬಗೆಹರಿಸಿ, ಗುಟ್ಟು ಕಾಪಾಡಿಕೊಳ್ಳಲು ಇದೇನು ರಾಷ್ಟ್ರೀಯ ಭದ್ರತೆಯ ವಿಚಾರವಲ್ಲ ಎಂದು ವಾಗ್ದಾಳಿ ನಡಿಸಿದೆ.
ನವದೆಹಲಿ: ವಿಶ್ವದಲ್ಲೇ ಓಮಿಕ್ರಾನ್ ಹಾಗೂ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದೆ. ಇದಕ್ಕಾಗಿ ಗೂಗಲ್ ಡೂಡಲ್ ಕೊರೊನಾ, ಓಮಿಕ್ರಾನ್‍ನನ್ನು ತಡೆಯಲು ಮಾಸ್ಕ್ ಹಾಗೂ ಇನ್ನಿತರೆ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದೆ.
ಈ ಅನಿಮೇಟೆಡ್ ಡೂಡಲ್‍ನಲ್ಲಿ, ಕೊರೊನಾ ಲಸಿಕೆ ತೆಗೆದುಕೊಂಡ ನಂತರ ಗೂಗಲ್ ಸರ್ಚ್ ಎಂಜಿನ್‍ನ ಎಲ್ಲಾ ಅಕ್ಷರಗಳು ಮಾಸ್ಕ್ ಹಾಕಿಕೊಂಡು ಸಂಭ್ರಮಿಸುತ್ತಿರುವುದನ್ನು ಗೂಗಲ್‍ನಲ್ಲಿ ಕಾಣಬಹುದು.
ಮಾಸ್ಕ್ ಹಾಗೂ ಲಸಿಕೆಯನ್ನು ಹಾಕಿಕೊಂಡು ಎಲ್ಲರೂ ತಮ್ಮ ಜೀವವನ್ನು ಉಳಿಸಿಕೊಳ್ಳಿ ಎಂದು ಗೂಗಲ್ ಡೂಡಲ್ ಸಂದೇಶವನ್ನು ಸಾರಿದೆ. ಕೊರೊನಾ ಕುರಿತು ಮಾಹಿತಿ ಪಡೆಯಲು ಹಾಗೂ ಲಸಿಕೆಯನ್ನು ಪಡೆದುಕೊಳ್ಳಲು ಹತ್ತಿರದ ಮಾಹಿತಿ ಕೇಂದ್ರಗಳು ಎಲ್ಲಿವೆ ಎನ್ನುವುದರ ಕುರಿತು ಇದರಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,58,089 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇಲ್ಲಿಯವರೆಗೆ 8,209 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಲಸಿಕಾಭಿಯಾನದಲ್ಲಿ ದೇಶದಲ್ಲಿ ಇದುವರೆಗೆ ಒಂದನೇ ಹಾಗೂ ಎರಡನೇ ಲಸಿಕೆಯನ್ನು ಸೇರಿ 157.20 ಕೋಟಿ ಲಸಿಕೆ ನೀಡಲಾಗಿದೆ. ಆದರೂ ಕೊರೊನಾ ವೇಗವಾಗಿ ಹರಡುತ್ತಿದೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
ನವದೆಹಲಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ ಕೊರೊನಾ ಲಸಿಕೆ ನೀಡುವುದಿಲ್ಲ. ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ.
ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಎಂಬ ಎನ್‍ಜಿಒ ಒಂದು ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ. ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ ತಂದಿಲ್ಲ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಇದನ್ನೂ ಓದಿ: ಶಲ್ಯ ಮುಖಕ್ಕೆ ಕಟ್‌ಕೊಂಡಿನ್ರೀ ಮತ್ ಮಾಸ್ಕ್ ಯಾಕ್ ಹಾಕಬೇಕು: ವ್ಯಕ್ತಿಯ ಕಿರಿಕ್
ಒತ್ತಾಯದಿಂದ ಯಾರ ಮೇಲೂ ಅದನ್ನೂ ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದೆ. ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನ ವಿರುದ್ಧ ಹೋರಾಡುವಂತೆ ಸೂಚಿಸಲಾಗಿದೆ. ಆದರೆ ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ನೀಡಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಕೊರೊನಾ, ಓಮಿಕ್ರಾನ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಜನರು ಮೊದಲು ಮತ್ತು 2ನೆ ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಪಾಸಿಟಿವ್ ಇದ್ದರೂ ಶಬರಿಮಲೆಗೆ ತೆರಳ್ತಿದ್ದ 30 ಮಂದಿ ಮೇಲೆ ಎಫ್‍ಐಆರ್
ಬೆಂಗಳೂರು: ಎಷ್ಟೇ ಜನರಿಗೆ ಸೋಂಕು ತಗುಲಿದರೂ ಮನೆಯಲ್ಲಿ ಆರೈಕೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ. ಈ ಮೂಲಕ ಕೊರೊನಾ ಮೂರನೇ ಅಲೆಯನ್ನು ನಿಯಂತ್ರಣ ಮಾಡಲು ವಿಶೇಷ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ಬಸವನಗುಡಿಯ ಅಬಲಾಶ್ರಮದಲ್ಲಿ ಸ್ವಾಸ್ಥ್ಯ ಹೆಸರಿನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಕೊರೊನಾ ಮೂರನೇ ಅಲೆಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಈ ಕುರಿತಾಗಿ ನಿನ್ನೆ 10 ಸಾವಿರ ವೈದ್ಯರ ಜೊತೆ ಸಂವಾದ ಮಾಡಿದ್ದೇನೆ. ಇವರು ಹೋಂ ಐಸೋಲೇಷನ್ ಇದ್ದಾಗ ಹೇಗೆ ಟೆಲಿ ಟ್ರೈನಿಂಗ್ ಮಾಡಬೇಕು ಎನ್ನುವುದರ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.
ವಿಶ್ವದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಜಾಸ್ತಿಯಾಗಿದೆ. ಸಮಾಧಾನದ ವಿಚಾರ ಎಂದರೆ ರೋಗದ ಲಕ್ಷಣ ಕಡಿಮೆ ಇದೆ. ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಇದರಿಂದಾಗಿ ಕೊರೊನಾ ಮೂರನೇ ಅಲೆಯನ್ನು ನಿಯಂತ್ರಣ ಮಾಡಬಹುದು. ಫೆಬ್ರವರಿಯಲ್ಲಿ ಇದರ ತೀವ್ರತೆ ಕಡಿಮೆಯಾಗಬಹುದು ಎಂದು ಹೇಳಲಾಗುತ್ತದೆ ಎಂದರು.
ಬಳ್ಳಾರಿಯಲ್ಲಿ ಹಾಸ್ಟೆಲ್‍ಗಳನ್ನು ಮುಚ್ಚುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಜಿಲ್ಲೆಗಳ ಪರಿಸ್ಥಿತಿಗೆ ಅನುಸಾರವಾಗಿ ಕ್ರಮಕೈಗೊಳ್ಳುವ ಅಧಿಕಾರವನ್ನು ಅಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಬಳ್ಳಾರಿಯಲ್ಲಿ ಹಾಸ್ಟೆಲ್‍ಗಳಲ್ಲಿ ಕೇಸ್‍ಗಳ ಸಂಖ್ಯೆ ಜಾಸ್ತಿ ಆಗಿರಬಹುದು. ಹಾಗಾಗಿ ಡಿಸಿ ಈ ಕ್ರಮ ಕೈಗೊಂಡಿರಬಹುದು. ಬಳ್ಳಾರಿಯ ಪರಿಸ್ಥಿತಿ ಬಗ್ಗೆ ಅಲ್ಲಿನ ಡಿಸಿ ಜೊತೆ ಚರ್ಚಿಸುತ್ತೇನೆ. ಡಿಸಿಯವರಿಂದ ಜಿಲ್ಲೆಯ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಬೆಳಗಾವಿಯ ರಾಮದುರ್ಗ ತಾಲೂಕಿನಲ್ಲಿ ರೂಬೆಲ್ಲ ಲಸಿಕೆ ಪಡೆದ ಬಳಿಕ ಮೂವರು ಮಕ್ಕಳು ಸಾವನ್ನಪ್ಪಿದ್ದರು. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಏನಾಗಿದೆ ಎಂದು ನೋಡಿಕೊಂಡು ಮಾತಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನ್
ಇಂದಿಗೆ ಲಸಿಕಾಕರಣವು 1 ವರ್ಷ ಪೂರೈಸಿದೆ. ಇಡೀ ವಿಶ್ವದಲ್ಲಿ ಇಷ್ಟು ದೊಡ್ಡ ಪ್ರಮಾಣದ ಸಾಧನೆ ಭಾರತ ಮಾಡಿದೆ. ಪ್ರಧಾನ ಮಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅಭಿಯಾನ ಸಾಕಾರಗೊಳ್ಳಲು ಲಸಿಕೆ ಸಂಶೋಧನೆ ಮಾಡಿದ ವಿಜ್ಞಾನಿಗಳು ಸಂಸ್ಥೆಗೆ ಕೃತಜ್ಞತೆ ಹೇಳುತ್ತೇನೆ. 36 ದೇಶಗಳಲ್ಲಿ ಕೇವಲ 10% ರಷ್ಟು ಲಸಿಕೆ ಪಡೆಯಲು ಆಗಿಲ್ಲ. ಕರ್ನಾಟಕ 99% ಮೊದಲ ಡೋಸ್ ಆಗಿದೆ. 80% ಎರಡನೇ ಡೋಸ್ ಆಗಿರುವವರು ಇದ್ದಾರೆ. ವಿಶ್ವದ ಬಡ ರಾಷ್ಟ್ರಗಳಿಗೆ ಕೂಡಾ ಭಾರತ ಲಸಿಕೆ ಸರಬರಾಜು ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: MPSC ಹುದ್ದೆ ಆಕಾಂಕ್ಷಿ ಅನುಮಾನಾಸ್ಪದ ರೀತಿಯಲ್ಲಿ ಕೊಠಡಿಯಲ್ಲಿ ಶವವಾಗಿ ಪತ್ತೆ
ಈ ಸಂದರ್ಭದಲ್ಲಿ ಆರ್ ಎಸ್‍ಎಸ್ ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ, ಅಬಲಾಶ್ರಮದ ಗೌರವಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ದೇಶಪಾಂಡೆ, ಮಾಜಿ ಮೇಯರ್ ಬಿ.ಎಸ್.ಸತ್ಯನಾರಾಯಣ ಉಪಸ್ಥಿತರಿದ್ದರು.