Tag: Corona Vaccine

  • ಒಂದು ವರ್ಷ ಪೂರೈಸಿದ ಲಸಿಕಾ ಅಭಿಯಾನ – ಟ್ವೀಟ್ ಮಾಡಿ ಮೋದಿ ಪ್ರಶಂಸೆ

    ಒಂದು ವರ್ಷ ಪೂರೈಸಿದ ಲಸಿಕಾ ಅಭಿಯಾನ – ಟ್ವೀಟ್ ಮಾಡಿ ಮೋದಿ ಪ್ರಶಂಸೆ

    ನವದೆಹಲಿ: ಭಾರತದಲ್ಲಿ ಲಸಿಕೆ ಅಭಿಯಾನ ಪ್ರಾರಂಭವಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ  ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಲಸಿಕಾ ಅಭಿಯಾನ ಒಂದು ವರ್ಷ ಪೂರೈಸಿರುವ ಕುರಿತು ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಲಸಿಕಾ ಅಭಿಯಾನವು ಕೊರೊನಾ ವಿರುದ್ಧ ಹೋರಾಡಲು ಹೆಚ್ಚಿನ ಶಕ್ತಿಯನ್ನು ನೀಡಿದೆ. ಕೊರೊನಾ ಸಾಂಕ್ರಾಮಿಕ ಮೊದಲ ಬಾರಿಗೆ ಅಪ್ಪಳಿಸಿದಾಗ ಈ ಬಗ್ಗೆ ನಮಗೂ ಹೆಚ್ಚೆನೂ ಮಾಹಿತಿ ಇರಲಿಲ್ಲ. ಆದರೂ ವಿಜ್ಞಾನಿಗಳು ಲಸಿಕೆಯನ್ನು ಅಭಿವೃದ್ಧಿ ಪಡಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಲಸಿಕೆ ಮೂಲಕ ಕೊರೊನಾ ವಿರುದ್ಧ ಹೋರಾಡಲು ನಮಗೆ ಸಹಾಯವಾಗಿದೆ ಎಂದು ತಿಳಿಸಿದ್ದಾರೆ.

    ಈ ಸಮಯದಲ್ಲಿ ಸಹಾಯ ಮಾಡಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದವನ್ನು ತಿಳಿಸುತ್ತೇನೆ. ಇವರ ಸೇವಾ ಕಾರ್ಯಕ್ಕೆ ಹೆಮ್ಮೆಯೆನಿಸುತ್ತದೆ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡೋಣ ಎಂದು ಟ್ವಿಟ್ಟರ್ ನಲ್ಲಿ ಕರೆ ನೀಡಿದ್ದಾರೆ.

    ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಕೂಡ ಈ ಬಗ್ಗೆ ಟ್ವೀಟ್ ಮಾಡಿ ವಿಶ್ವದಲ್ಲೇ ಇದು ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಂಡವಿಯಾ ಪ್ರಶಂಸಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

    ವಿಶ್ವದ ಅತಿದೊಡ್ಡ ಅಭಿಯಾನ ಇಂದು ಒಂದು ವರ್ಷವನ್ನು ಪೂರೈಸಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ಈ ಅಭಿಯಾನವು ಇಂದು ವಿಶ್ವದಲ್ಲೇ ಅತ್ಯಂತ ಯಶಸ್ವಿ ಅಭಿಯಾನವಾಗಿದೆ. ಇದಕ್ಕೆ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೂ, ವಿಜ್ಞಾನಿಗಳಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಭಾರತದಲ್ಲಿ ಈವರೆಗೆ ಕೋವಿಡ್ ಲಸಿಕೆ, 156.76 ಡೋಸ್ ವಿತರಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ 66 ಲಕ್ಷಕ್ಕೂ ಹೆಚ್ಚು ಡೋಸ್‍ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮತ್ತು ಸ್ಫೂರ್ತಿದಾಯಕ ನಾಯಕತ್ವದಿಂದಾಗಿ ಕೊರೊನಾ ವಿರುದ್ಧ ಸಾಮೂಹಿಕವಾಗಿ ಹೋರಾಡಲು ಸಹಾಯಕವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಲಸಿಕಾ ಅಭಿಯಾನ ಹೇಗೆ ಪ್ರಾರಂಭವಾಯಿತು ಮತ್ತು ಒಂದು ವರ್ಷದ ಅವಧಿಯಲ್ಲಿ 150 ಕೋಟಿಗೂ ಹೆಚ್ಚು ಡೋಸ್‍ಗಳನ್ನು ನೀಡುವಲ್ಲಿ ಹೇಗೆ ಯಶಸ್ವಿಯಾದೆವು ಎನ್ನುವುದರ ಬಗ್ಗೆ ಚಾರ್ಟ್‍ನ್ನು ಅವರು ಹಂಚಿಕೊಂಡಿದ್ದಾರೆ.

    ಕೊರೊನಾ ಲಸಿಕೆ ಅಭಿಯಾನವನ್ನು 2021ರ ಜನವರಿ 16ರಲ್ಲಿ ಪ್ರಾರಂಭಿಸಲಾಯಿತು. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,71,202 ಹೊಸ ಕೋವಿಡ್ ಪ್ರಕರಣಗಳು, 314 ಸೋಂಕಿತರು ಸಾವನ್ನಪ್ಪಿದ್ದು, 1,38,331 ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

     

  • ಆರೋಗ್ಯ ಕೇಂದ್ರದಲ್ಲೇ ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್

    ಆರೋಗ್ಯ ಕೇಂದ್ರದಲ್ಲೇ ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್

    ಹಾವೇರಿ: ಇಂದಿನಿಂದ ದೇಶಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಅಭಿಯಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲೆಯಲ್ಲಿ ಲಸಿಕೆಯನ್ನು ಪಡೆದರು.

    ಹಾವೇರಿಯ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವ ಬಿ.ಸಿ. ಪಾಟೀಲ್ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್ ಅವರು, ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಜನರಿಗೆ ಕೊರೋನಾ ವೈರಸ್ ವಿರುದ್ಧ ಹೋರಾಡಲು ಬೂಸ್ಟರ್ ಡೋಸ್‌ನ್ನು ಇಂದಿನಿಂದ ನೀಡಲಾಗುತ್ತಿದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ ಎಂದರು. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

    ಈ ಹಿಂದೆ ಮೊದಲ ಮತ್ತು ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್‌ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

    ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೂರನೇ ಡೋಸ್ ಲಸಿಕೆಯನ್ನು ಪಡೆಯುವುದರಿಂದ ಓಮಿಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ. 88ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಒಬ್ಬ ಸಾಮಾನ್ಯ ಮನುಷ್ಯ ಸಚಿವನಾಗಿದ್ದಕ್ಕೆ ಹೊಟ್ಟೆ ಉರಿ – ಎಂಬಿಪಿಗೆ ಕಾರಜೋಳ ತಿರುಗೇಟು

    ಕಳೆದ ವರ್ಷ ಬಿಸಿ ಪಾಟೀಲ್ ಮನೆಯಲ್ಲೇ ಪ್ರಥಮ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಈ ವಿಚಾರ ದೇಶವ್ಯಾಪಿ ಚರ್ಚೆಗೆ ಕಾರಣವಾಗಿತ್ತು.

  • ಹೈಡ್ರಾಮಾ ಮಾಡುತ್ತಿದ್ದ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿದ ಆಶಾ ಕಾರ್ಯಕರ್ತೆಯರು

    ಹೈಡ್ರಾಮಾ ಮಾಡುತ್ತಿದ್ದ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿದ ಆಶಾ ಕಾರ್ಯಕರ್ತೆಯರು

    ಬೀದರ್: ಅಜ್ಜಿ ಲಸಿಕೆ ಪಡೆಯದೆ ಹೈಡ್ರಾಮಾ ಮಾಡುತ್ತಿದ್ದಾಗ ಅವರ ಕೈಗಳನ್ನು ಹಿಡಿದು ಆರೋಗ್ಯ ಸಿಬ್ಬಂದಿ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.

    ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಪರ್ತಾಪೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಸಿಕೆ ಪಡೆಯಲು ಅಜ್ಜಿ ಒಲ್ಲೆ ಎಂದರೂ ಬಿಡದ ಆರೋಗ್ಯ ಸಿಬ್ಬಂದಿ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

    ಅಜ್ಜಿ ಲಸಿಕೆ ಪಡೆಯುತ್ತಿಲ್ಲಾ ಎಂಬ ಮಾಹಿತಿ ಪಡೆದ ಆಶಾ ಕಾರ್ಯಕರ್ತೆರು ಹಾಗೂ ಆರೋಗ್ಯ ಸಿಬ್ಬಂದಿ ಲಸಿಕೆ ನೀಡಲು ಅಜ್ಜಿ ಮನೆಗೆ ಭೇಟಿ ನೀಡಿದರು. ಈ ವೇಳೆ ಎಷ್ಟೇ ಮನವೊಲಿಸಿದರೂ, ಅಜ್ಜಿ ಲಸಿಕೆ ಪಡೆಯಲು ಹಿಂದೇಟು ಹಾಕಿದಾಗ ಒತ್ತಾಯವಾಗಿ ಲಸಿಕೆ ನೀಡಿದ್ದಾರೆ. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

     

    ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾಗೆ ಸಂಜೀವಿನಿಯಾದ ಲಸಿಕೆ ಪಡೆಯಲು ಬೀದರ್ ಜಿಲ್ಲೆಯ ಗ್ರಾಮೀಣ ಭಾಗದ ಜನರು ಇನ್ನೂ ಹಿಂದೇಟು ಹಾಕುತ್ತಿರುವುದು ಆರೋಗ್ಯ ಸಿಬ್ಬಂದಿಯನ್ನು ಹೈರಾಣಾಗುವಂತೆ ಮಾಡಿದೆ. ಇದನ್ನೂ ಓದಿ: ಓಮಿಕ್ರಾನ್‌ ಬಗ್ಗೆ ಸಿಕ್ತು ಗುಡ್‌ ನ್ಯೂಸ್‌ – ಪ್ರಾಥಮಿಕ ಅಧ್ಯಯನ ವರದಿಗಳು ಬಹಿರಂಗ

  • ಹಳ್ಳಿಗೆ 300 ಕೋವಿಡ್ ಲಸಿಕೆಗಳನ್ನು ಸಾಗಿಸಿದ ಡ್ರೋನ್

    ಹಳ್ಳಿಗೆ 300 ಕೋವಿಡ್ ಲಸಿಕೆಗಳನ್ನು ಸಾಗಿಸಿದ ಡ್ರೋನ್

    ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಲಸಿಕೆಯನ್ನು ದೂರದ ಹಳ್ಳಿಗಳಿಗೆ ಡ್ರೋನ್ ಮುಖಾಂತರ ತಲುಪಿಸುವ ವ್ಯವಸ್ಥೆ ನಡೆದಿದೆ.

    ಮಹಾರಾಷ್ಟ್ರದ ಪಾಲ್ಘರ್‌ನ ಜಿಲ್ಲಾಡಳಿತವು ಈ ಪ್ರಯೋಗವನ್ನು ನಡೆಸಿದೆ. ಈ ಪ್ರಯೋಗದ ಭಾಗವಾಗಿ 300 ಲಸಿಕೆಗಳನ್ನು ಜವಾಹರ್‌ನಿಂದ ಝಾಫ್ ಗ್ರಾಮಕ್ಕೆ ಸಾಗಿಸಲಾಗಿದೆ. ವಾಹನದ ಮೂಲಕ 40 ನಿಮಿಷಕ್ಕಿಂತಲೂ ಹೆಚ್ಚು ಸಮಯ ತೆಗೆದುಕೊಳ್ಳಬೇಕಾದ ಕಾರ್ಯವು ಕೇವಲ ಒಂಭತ್ತು ನಿಮಿಷಗಳಲ್ಲಿ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ಹೇಳಿದೆ. ಇದನ್ನೂ ಓದಿ: ದೇಶದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಡೋಸ್ ವ್ಯರ್ಥ

    ಗುರುವಾರ ಯಶಸ್ವಿಯಾಗಿ ನಡೆಸಿದ ಪ್ರಯೋಗ ಬಹುಶಃ ರಾಜ್ಯದಲ್ಲಿಯೇ ಮೊದಲನೆಯದು ಎಂದು ಜಿಲ್ಲಾಧಿಕಾರಿ ಡಾ. ಮಾಣಿಕ್ ಗುರ್ಸಾಲ್ ಹೇಳಿದರು.

    ಲಸಿಕೆಗಳನ್ನು ವೇಗವಾಗಿ ಗ್ರಾಮಸ್ಥರ ಮನೆ ಬಾಗಿಲಿಗೆ ಡ್ರೋನ್ ಮೂಲಕ ತಲುಪಿಸಬಹುದು. ಲಸಿಕೆಗಳು ಸರಿಯಾದ ಸಂದರ್ಭಕ್ಕೆ ಸಿಗುವುದಿಲ್ಲ ಎಂಬ ಜನರ ತಪ್ಪು ಕಲ್ಪನೆಗಳನ್ನು ತೆಗದು ಹಾಕಲು ಈ ಪ್ರಯೋಗ ಸಹಾಯಕಾರಿಯಾಗುತ್ತದೆ ಎಂದು ಪಾಲ್ಘರ್‌ನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ದಯಾನಂದ ಸೂರ್ಯವಂಶಿ ಹೇಳಿದ್ದಾರೆ. ಇದನ್ನೂ ಓದಿ: ಸ್ಪುಟ್ನಿಕ್ ಲಸಿಕೆ ಓಮಿಕ್ರಾನ್‌ಗೆ ಪರಿಣಾಮಕಾರಿ – ರಷ್ಯಾ

  • ಕೋವಿಡ್ ಸರ್ಟಿಫಿಕೇಟ್ ಇಲ್ಲದವರಿಗೆ ಮಾಲ್‌ಗೆ ನೋ ಎಂಟ್ರಿ

    ಕೋವಿಡ್ ಸರ್ಟಿಫಿಕೇಟ್ ಇಲ್ಲದವರಿಗೆ ಮಾಲ್‌ಗೆ ನೋ ಎಂಟ್ರಿ

    ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಮಾಲ್‌ಗೆ ಎಂಟ್ರಿ ಕೊಡುವವರಿಗೆ ಎರಡು ಡೋಸ್ ಸರ್ಟಿಫಿಕೇಟ್ ಕಡ್ಡಾಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಲ್‌ಗಳಲ್ಲಿ ಈಗಾಗಲೇ ಪರಿಶೀಲನೆ ಪ್ರಾರಂಭವಾಗಿದೆ.

    ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಮಾಲ್‌ಗಳಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಎರಡು ಡೋಸ್ ಲಸಿಕೆ ಪಡೆದವರಿಗಷ್ಟೇ ಮಾಲ್‌ನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ವೀಕೆಂಡ್‌ನಲ್ಲಿ ಮಾಲ್‌ಗೆ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾಲ್‌ಗಳ ಮುಂಭಾಗ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.

    2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್‌ಗೆ ಪ್ರವೇಶ ಎಂದು ಮಾಲ್ ಮುಂದೆ ಸಿಬ್ಬಂದಿ ನೋಟಿಸ್ ಬೋರ್ಡ್ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬರ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಟಿಫಿಕೇಟ್ ಇಲ್ಲದವರನ್ನು ಸಿಬ್ಬಂದಿ ವಾಪಾಸ್ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತದೆ – ಸಂಶೋಧನಾ ವರದಿ

    ಬೇರೆ ಯಾರದ್ದೋ ಲಸಿಕೆಯ ರಿಪೋರ್ಟ್ ತೋರಿಸಿ ಬರುವುದರಿಂದ ಸರ್ಕಾರ ನೀಡಿದ ಯಾವುದಾದರೊಂದು ಗುರುತಿನ ಚೀಟಿಯೂ ಕಡ್ಡಾಯಗೊಳಿಸಿದೆ. ಇದರಿಂದಾಗಿ ಐಡಿ ಕಾರ್ಡ್ ನಲ್ಲಿರುವ ಹೆಸರಿನ ಜೊತೆಗೆ ವ್ಯಾಕ್ಸಿನೇಷನ್ ರಿಪೋರ್ಟ್ ನಲ್ಲಿರುವ ಹೆಸರು ಎರಡನ್ನು ಪರಿಶೀಲಿಸುತ್ತಿದ್ದಾರೆ. ಸರ್ಟಿಫಿಕೇಟ್ ಇಲ್ಲದೇ ಇರುವವರು ಹೊರಗಡೆ ನಿಂತಿದ್ದಾರೆ.

  • ಕತ್ರಿನಾ,ವಿಕ್ಕಿ ವಿವಾಹ – 120 ವ್ಯಾಕ್ಸಿನೇಟೆಡ್ ಅತಿಥಿಗಳಿಗೆ ಮಾತ್ರ ಆಹ್ವಾನ

    ಕತ್ರಿನಾ,ವಿಕ್ಕಿ ವಿವಾಹ – 120 ವ್ಯಾಕ್ಸಿನೇಟೆಡ್ ಅತಿಥಿಗಳಿಗೆ ಮಾತ್ರ ಆಹ್ವಾನ

    ಮುಂಬೈ: ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಬಾಲಿವುಡ್‍ನಲ್ಲಿ ಟ್ರೆಂಡಿಂಗ್ ಸುದ್ದಿಯಾಗಿದೆ. ಜೋಡಿಗಳ ಮದುವೆಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಸೆಲೆಬ್ರಿಟಿಗಳ ಮದುವೆಗೆ ಕೋವಿಡ್ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಅಧಿಕಾರಿಗಳು ಹಲವಾರು ನಿಯಮಗಳನ್ನು ವಿಧಿಸಿದ್ದಾರೆ.

    ಡಿಸೆಂಬರ್ 9 ರಂದು ರಾಜಸ್ಥಾನದಲ್ಲಿ ನಡೆಯಲಿರುವ ಸೆಲೆಬ್ರಿಟಿ ಜೋಡಿಗಳ ವಿವಾಹದಲ್ಲಿ ಕೇವಲ 120 ಸಂಪೂರ್ಣ ಲಸಿಕೆಯನ್ನು ಪಡೆದಿರುವ ಅತಿಥಿಗಳಿಗಷ್ಟೇ ಆಹ್ವಾನ ನೀಡಲಾಗಿದೆ. ಕೋವಿಡ್-19 ಪ್ರೋಟೋಕಾಲ್‍ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರೊಂದಿಗೆ, ಲಸಿಕೆ ಹಾಕಿಸದವರು ಆರ್‍ಟಿ-ಪಿಸಿಆರ್ ಪರೀಕ್ಷೆ ನಡಸದೇ ವಿವಾಹದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸವಾಯಿ ಮಧೋಪುರ್ ಡಿಸಿ ರಾಜೇಂದ್ರ ಕಿಶನ್ ತಿಳಿಸಿದ್ದಾರೆ. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

    ಜನಸಂದಣಿ ನಿಯಂತ್ರಣ, ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಮತ್ತು ವಿಐಪಿ ಸಂಚಾರಕ್ಕೆ ವ್ಯವಸ್ಥೆ ಮಾಡಲು ಶುಕ್ರವಾರ ಜಿಲ್ಲಾಧಿಕಾರಿ ಪೊಲೀಸ್, ಅರಣ್ಯ, ಹೋಟೆಲ್ ಮತ್ತು ಈವೆಂಟ್ ಮ್ಯಾನೇಜರ್‌ಗಳ ಸಭೆಯನ್ನು ಕರೆಯಲಾಗಿತ್ತು. ವಿವಿಧ ಏಜೆನ್ಸಿಗಳ ನಡುವೆ ಹೊಂದಾಣಿಕೆ ಸಂಬಂಧ ಈ ಸಭೆಯನ್ನು ಆಯೋಜಿಸಲಾಗಿತ್ತು. ಇದನ್ನೂ ಓದಿ: ಕತ್ರಿನಾ, ವಿಕ್ಕಿ ಮದುವೆಗೆ ಬರುವ ಅತಿಥಿಗಳಿಗೆ ಸೀಕ್ರೆಟ್‌ ಕೋಡ್‌- ಯಾರ‍್ಯಾರಿಗೆ ಆಹ್ವಾನ?

    ಮದುವೆಯ ಸ್ಥಳ ಪಂಚಾಯತ್ ಸಮಿತಿ ಚೌತ್ ಕಾ ಬರ್ವಾರಾದ ಫೋರ್ಟ್ ಬರ್ವಾರದಲ್ಲಿದೆ. ಇದು ಐತಿಹಾಸಿಕ ಕೋಟೆಯಾಗಿದ್ದು, ಹೆರಿಟೇಜ್ ಹೋಟೆಲ್ ಆಗಿ ಪರಿವರ್ತಿಸಲಾಗಿದೆ. ಈ ಸ್ಥಳ ಜಿಲ್ಲಾ ಕೇಂದ್ರದಿಂದ ಸುಮಾರು 22 ಕಿ.ಮೀ. ದೂರದಲ್ಲಿದೆ ಮತ್ತು ಜೈಪುರದಿಂದ ಸುಮಾರು 174 ಕಿ.ಮೀ. ದೂರದಲ್ಲಿದೆ. ಇದನ್ನೂ ಓದಿ: ಕತ್ರಿನಾ, ವಿಕ್ಕಿ ವಿವಾಹ – 120 ವ್ಯಾಕ್ಸಿನೇಟೆಡ್ ಅತಿಥಿಗಳಿಗೆ ಮಾತ್ರ ಆಹ್ವಾನ

    ಸವಾಯಿ ಮಧೋಪುರ್ ಜಿಲ್ಲೆ ರಣಥಂಬೋರ್ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಹೆಸರುವಾಸಿಯಾಗಿದೆ. ಅತಿಥಿಗಳು ವಿಶೇಷ ಹುಲಿ ಸಫಾರಿಯನ್ನು ಕೂಡಾ ಆನಂದಿಸಲಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: ಅಪ್ಪು ಅಮೋಘವಾದ ಕನಸಿನ ಪಯಣ ಹಂಚಿಕೊಂಡ ಪತ್ನಿ ಅಶ್ವಿನಿ

  • ಕೊರೊನಾ ನಿಯಂತ್ರಿಸಲು ಸರ್ಕಾರವೊಂದಕ್ಕೇ ಸಾಧ್ಯವಿಲ್ಲ, ಜನರು ಸಹ ಮುನ್ನೆಚ್ಚರಿಕೆ ವಹಿಸಬೇಕು: ಡಾ.ಕೆ. ಸುಧಾಕರ್

    ಕೊರೊನಾ ನಿಯಂತ್ರಿಸಲು ಸರ್ಕಾರವೊಂದಕ್ಕೇ ಸಾಧ್ಯವಿಲ್ಲ, ಜನರು ಸಹ ಮುನ್ನೆಚ್ಚರಿಕೆ ವಹಿಸಬೇಕು: ಡಾ.ಕೆ. ಸುಧಾಕರ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರವೊಂದಕ್ಕೇ ಸಾಧ್ಯವಾಗುವುದಿಲ್ಲ. ಜನರು ಜಹ ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿರ್ದೇಶನದಂತೆ ಇಂದಿನಿಂದ ಏರ್‌ಪೋರ್ಟ್‍ನಲ್ಲಿ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಟೆಸ್ಟ್ ಮಾಡಲು ಪ್ರಾರಂಭ ಮಾಡಿದ್ದೇವೆ. ಈ ಕುರಿತ ಸಿದ್ಧತೆಗಳನ್ನು ನಾನೇ ಖುದ್ದಾಗಿ ಏರ್‌ಪೋರ್ಟ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಂದಿದ್ದೇನೆ. ಏರ್‌ಪೋರ್ಟ್‍ನಲ್ಲಿ ಕೊರೊನಾ ಟೆಸ್ಟ್ ಆದ ಬಳಿಕ ವರದಿ ಬರುವವರೆಗೂ ಪ್ರಯಾಣಿಕರು ಅಲ್ಲಿಯೇ ಇರಬೇಕಾಗುತ್ತದೆ. ಡಿಸೆಂಬರ್ 2 ರಂದು ಬಸವರಾಜ್ ಬೊಮ್ಮಾಯಿ ಅವರು ದೆಹಲಿಯಲ್ಲಿ ಆರೋಗ್ಯ ಸಚಿವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕೊರೊನಾ ವಾರಿಯರ್ಸ್‍ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?

    ಕೊರೊನಾ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿಗಳನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಜನರು ಸಹ ಮುನ್ನೆಚ್ಚರಿಕೆಯಿಂದ ಇರಬೇಕು. ಸರ್ಕಾರ ಒಂದೇ ಇದನ್ನು ನಿಭಾಯಿಸಲು ಸಾಧ್ಯವಿಲ್ಲ. ಜನರು ನಮ್ಮ ಜೊತೆ ಕೈ ಜೋಡಿಸಬೇಕು. ಜನರೇ ಸ್ವಯಂ ಆಗಿ ಬಂದು ಲಸಿಕೆ ಪಡೆಯಬೇಕು. ರಾಜ್ಯದಲ್ಲಿ ಎಲ್ಲೂ ಲಸಿಕೆ ಕೊರತೆ ಇಲ್ಲ. ಲಕ್ಷಾಂತರ ಲಸಿಕೆ ದಾಸ್ತಾನು ಇದೆ ಎಂದಿದ್ದಾರೆ.

    ಇದೇ ವೇಳೆ ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ನೀಡದ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಇಂತಹ ಶಿಫಾರಸ್ಸು ಒಪ್ಪುವುದಿಲ್ಲ. ಇದರಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ. ಆಂದೋಲನ ಮಾಡಿ ಜಾಗೃತಿ ಮೂಡಿಸಿ ಲಸಿಕೆ ಕೊಡುತ್ತೇವೆ. ಈಗ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆಗೆ ಅಗತ್ಯ ಬಿದ್ದರೆ ಕಠಿಣ ಕ್ರಮ ತಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ವಾರಿಯರ್ಸ್‌ಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ

    ಓಮಿಕ್ರಾನ್ ವೇಗವಾಗಿ ಹರಡುತ್ತದೆ. ಹೀಗಾಗಿ ಈಗಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಕಾಲ ಕಾಲಕ್ಕೆ ಮಾರ್ಗಸೂಚಿ ಬದಲಾವಣೆ ಮಾಡುವುದಕ್ಕೆ ನಿರ್ಧಾರ ಮಾಡುತ್ತೇವೆ. ಮನೆ ಮನೆಗೆ ಲಸಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ನೀಡಲಾಗುತ್ತಿದೆ. ʼಲಸಿಕಾ ಮಿತ್ರʼ ಹೆಸರಿನಲ್ಲಿ ಲಸಿಕೆ ನೀಡಲಾಗುತ್ತಿದೆ. ಅತ್ಯಂತ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಹೇಳಿದ್ದಾರೆ.

  • ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು: ಬಿ.ಸಿ ನಾಗೇಶ್

    ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು: ಬಿ.ಸಿ ನಾಗೇಶ್

    – 75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ

    ಬೆಂಗಳೂರು: ಭಾರತದಲ್ಲಿ ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ) ಕುರಿತು ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನಕ್ಕೆ ಬಿ.ಸಿ ನಾಗೇಶ್ ಚಾಲನೆ ನೀಡಿ, ನಂತರ ಈ ಕುರಿತು ಮಾತನಾಡಿದ್ದು, ಅನೇಕ ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆ ಆಗಬೇಕು ಎಂಬ ಚರ್ಚೆ ಆಗಿತ್ತು. 2020ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಸತ್ ಅಂಗೀಕಾರ ಮಾಡಿತು. ಈ ಹಿಂದೆ ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು. ಬ್ರಿಟಿಷರು ಯಾವಾಗ ನಮ್ಮ ವ್ಯವಸ್ಥೆಗೆ ಕೈ ಹಾಕಿಲು ಮುಂದಾದ್ರೋ ಆಗ ಸ್ವಾತಂತ್ರ್ಯ ಹೋರಾಟ ಕಾವು ಹೆಚ್ಚಾಯ್ತು ಎಂದು ತಿಳಿಸಿದರು.

    ಶ್ಯಾಂ ಪ್ರಸಾದ್ ಮುಖರ್ಜಿ ಅವರು ಶಿಕ್ಷಣ ವ್ಯವಸ್ಥೆ ಬಗ್ಗೆ ಅಂದೇ ಧ್ವನಿ ಎತ್ತಿದ್ದರು. ಪಂಚಶೀಲ ಶಿಕ್ಷಣ ನೀತಿ ಬರಬೇಕು ಎಂದು ಮುಖರ್ಜಿ ಅವರು ಪ್ರತಿಪಾದನೆ ಮಾಡ್ತಾರೆ. ಅವರು ಅಂದೇ ಮೆಕ್ಯಾಲೆ ಶಿಕ್ಷಣ ವ್ಯವಸ್ಥೆಯನ್ನ ವಿರೋಧ ಮಾಡಿದ್ರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಟೇಕ್ ಆಫ್ ಆಗ್ತಿದ್ದಂತೇ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಈಗ ಇರುವ ಶಿಕ್ಷಣ ಪದ್ದತಿ ಕುಟುಂಬಗಳನ್ನು ವಿಭಾಗ ಮಾಡುವ ವ್ಯವಸ್ಥೆಯನ್ನ ಹುಟ್ಟು ಹಾಕುತ್ತಿದೆ. ಇಂತಹ ವ್ಯವಸ್ಥೆಯ ಶಿಕ್ಷಣ ಬದಲಾವಣೆ ಆಗಬೇಕು. 75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ. ಶಿಕ್ಷಣ ವ್ಯವಸ್ಥೆ ಮೂಲಕ ದೇಶ ಬದಲಾವಣೆ ಮಾಡಬೇಕು. ಹೊಸ ಶಿಕ್ಷಣ ನೀತಿ 2014 ರಿಂದ ಚರ್ಚೆ ಆಗಿತ್ತು. 2020ರಲ್ಲಿ ಅನುಷ್ಠಾನ ಮಾಡಲಾಗಿದೆ. ಕರ್ನಾಟಕ ಮೊದಲ ರಾಜ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಿದ್ದೇವೆ ಎಂದು ತಿಳಿಸಿದರು.

    ಮುಂದಿನ ವರ್ಷದಿಂದ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡ್ತೀವಿ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಈಗಾಗಲೇ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಯಾವ ತರಗತಿಯಿಂದ ಹೇಗೆ ಅನುಷ್ಠಾನ ಮಾಡಬೇಕು ಎಂದು ಟಾಸ್ಕ್ ಫೋರ್ಸ್ ವರದಿ ಕೊಡುತ್ತೆ. ವರದಿ ಬಂದ ಬಳಿಕ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುತ್ತೇವೆ. ಅದು ಬಿಟ್ಟು ವಿರೋಧಗಳಿಗೆ ನಾವು ತಲೆ ಕೆಡಿಸಿಕೊಳ್ಳೊಲ್ಲ ಎಂದು ಸ್ಪಷ್ಟನೆ ನೀಡಿದರು.

    ಕೊರೊನಾ ಲಸಿಕೆಯನ್ನು ವಿರೋಧಿ ಮಾಡಿರೋ ಜನರು ನಮ್ಮ ಮಧ್ಯೆ ಇದ್ದಾರೆ. ಹೀಗಾಗಿ ಯಾವುದೇ ವಿರೋಧಕ್ಕೆ ನಾವು ತಲೆ ಕೆಡಿಸಿಕೊಳ್ಳೊಲ್ಲ. ರಾಷ್ಟ್ರೀಯ ಶಿಕ್ಷಣ ನೀತಿ ಓದಿದವರು ಯಾರು ವಿರೋಧ ಮಾಡ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಓದದೇ ಅನೇಕ ಜನರು ವಿರೋಧ ಮಾಡ್ತಿದ್ದಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ವಿರೋಧಗಳಿಗೆ ತಲೆ ಕೆಡಿಸಿಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡ್ತೀವಿ ಎಂದು ನಿಖರವಾಗಿ ತಿಳಿಸಿದರು. ಇದನ್ನೂ ಓದಿ: ಮೃಗಾಲಯದ 4 ಸಿಂಹಗಳಿಗೆ ಕೊರೊನಾ ಪಾಸಿಟಿವ್

    ಈ ಸಮ್ಮೇಳನವನ್ನು ಆರ್.ವಿ. ಶಿಕ್ಷಕರ ಮಹಾ ವಿದ್ಯಾಲಯದ ಸಾರ್ವಜನಿಕ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಎಂ.ಕೆ.ಶ್ರೀಧರ್, ಶಿಕ್ಷಣ ತಜ್ಞ ಡಾ.ಗುರುರಾಜ್ ಕರ್ಜಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಸೇರಿ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

  • 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ

    100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ

    ಬೆಂಗಳೂರು: 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

    100 ಕೋಟಿ ಲಸಿಕೆ ವಿತರಿಸಿದ ಹಿನ್ನೆಲೆಯಲ್ಲಿ ಕೇದ್ರ ಸರ್ಕಾರ ಸಂಭ್ರಮಾಚಾರಣೆಗೆ ಮುಂದಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದೇನು?
    ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ.

    ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ?

    ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

    ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ.

  • ಕೊರೊನಾ ಹೋರಾಟದಲ್ಲಿ ಭಾರತದ ಮೈಲಿಗಲ್ಲು – 100 ಕೋಟಿ ಲಸಿಕೆ ವಿತರಣೆ

    ಕೊರೊನಾ ಹೋರಾಟದಲ್ಲಿ ಭಾರತದ ಮೈಲಿಗಲ್ಲು – 100 ಕೋಟಿ ಲಸಿಕೆ ವಿತರಣೆ

    ನವದೆಹಲಿ: ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಭಾರತದಿಂದ ಇಂದು ಮೈಲಿಗಲ್ಲು ಸೃಷ್ಟಿಯಾಗಲಿದೆ. ಇಂದು 100 ಕೋಟಿ (1 ಬಿಲಿಯನ್‌) ಲಸಿಕೆ ವಿತರಿಸಿ ಐತಿಹಾಸಿಕ ಸಾಧನೆಗೆ ಕ್ಷಣಗಣನೆ ಆರಂಭವಾಗಿದೆ.

    ನಿನ್ನೆ ಮಧ್ಯರಾತ್ರಿಯವರೆಗೂ 99,85,16,644 ಡೋಸ್ ಹಂಚಿಕೆ ಆಗಿತ್ತು. ಈ ಮೂಲಕ 9 ತಿಂಗಳಲ್ಲಿ 100 ಕೋಟಿ ಡೋಸ್ ನೀಡಿದ ಗರಿಮೆಗೆ ಭಾರತ ಪಾತ್ರವಾಗಲಿದೆ. ಚೀನಾ ನಂತರ ಕಡಿಮೆ ಅವಧಿಯಲ್ಲಿ 100 ಕೋಟಿ ಲಸಿಕೆ ಸಾಧನೆ ಮಾಡಿದ ಎರಡನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

    ಜನವರಿ 16ರಂದು ಮೊದಲ ವ್ಯಾಕ್ಸಿನ್ ನೀಡಲಾಗಿತ್ತು. ಆ ಬಳಿಕ 100 ಕೋಟಿ ಲಸಿಕೆ ವಿತರಿಸಲು 277 ದಿನ ಪಡೆದುಕೊಂಡಿದೆ. ದೇಶದ ಶೇ. 50ರಷ್ಟು ಮಂದಿಗೆ ಸಿಂಗಲ್ ಡೋಸ್ ಲಸಿಕೆ ಸಿಕ್ಕಿದರೆ ಶೇ.21ರಷ್ಟು ಮಂದಿಗೆ ಡಬಲ್ ಡೋಸ್ ಲಸಿಕೆ ಪೂರ್ಣವಾಗಿದೆ. 58,645 ಸರ್ಕಾರಿ, 2,019 ಖಾಸಗಿ ಕೇಂದ್ರ ಸೇರಿ ಒಟ್ಟು 60,664 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗಿದೆ. ಲಸಿಕೆ ವಿತರಿಸಲು ಕೇಂದ್ರ ಸರ್ಕಾರ 35 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಇದನ್ನೂ ಓದಿ: ಭಾರೀ ಮಳೆ – ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

    ಟಾಪ್ 5 ವ್ಯಾಕ್ಸಿನ್ ರಾಜ್ಯಗಳು
    ಉತ್ತರ ಪ್ರದೇಶ -12,19,47,031
    ಮಹಾರಾಷ್ಟ್ರ – 9,28,41,727
    ಪಶ್ಚಿಮ ಬಂಗಾಳ – 6,85,12,831
    ಗುಜರಾತ್ – 6,76,67,794
    ಕರ್ನಾಟಕ – 6,15,62,329 (8ನೇ ಸ್ಥಾನ)