Tag: Corona Virus

  • ರಾಜ್ಯದಲ್ಲಿ 750, ಬೆಂಗ್ಳೂರಲ್ಲಿ 716 ಕೇಸ್ – ಪಾಸಿಟಿವಿಟಿ ರೇಟ್ ಶೇ. 3.06ಕ್ಕೆ ಏರಿಕೆ

    ರಾಜ್ಯದಲ್ಲಿ 750, ಬೆಂಗ್ಳೂರಲ್ಲಿ 716 ಕೇಸ್ – ಪಾಸಿಟಿವಿಟಿ ರೇಟ್ ಶೇ. 3.06ಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್‍ಗಳು ದಾಖಲಾಗಿದೆ.

    ಬೆಂಗಳೂರು ನಗರದಲ್ಲಿ ಇಂದು ಒಟ್ಟು 716 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,653ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 34 ಕೇಸ್ ಮತ್ತು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 425 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,825ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು

    ಈವರೆಗೆ ರಾಜ್ಯದಲ್ಲಿ ಒಟ್ಟು 39,60,208 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,15,271 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 57,152 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,469 ಸ್ಯಾಂಪಲ್ (ಆರ್‌ಟಿಪಿಸಿಆರ್ 18,146 + 6,323 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದೇಶಭಕ್ತಿ ಇರೋರು ಸೇನೆ ಸೇರ್ತಾರೆ ಇಲ್ಲದಿರೋರು ಸಿದ್ದರಾಮಯ್ಯ ಥರ ಮಾತನಾಡುತ್ತಾರೆ: ಸಿ.ಟಿ ರವಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 716, ಮೈಸೂರು 8, ದಕ್ಷಿಣಕನ್ನಡ 7, ಉಡುಪಿ 6, ಶಿವಮೊಗ್ಗ 5, ಧಾರವಾಡ 4, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ತಲಾ ಎರಡೆರಡು ಪ್ರಕರಣ ಸೇರಿ ಒಟ್ಟು 750 ಕೇಸ್ ವರದಿಯಾಗಿದೆ.

    Live Tv

  • ಒಟ್ಟು 634 ಕೇಸ್, 2 ಸಾವು – ಸಕ್ರಿಯ ಪ್ರಕರಣಗಳ ಸಂಖ್ಯೆ 4,500ಕ್ಕೆ ಏರಿಕೆ

    ಒಟ್ಟು 634 ಕೇಸ್, 2 ಸಾವು – ಸಕ್ರಿಯ ಪ್ರಕರಣಗಳ ಸಂಖ್ಯೆ 4,500ಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 634 ಪಾಸಿಟಿವ್ ಕೇಸ್ ವರದಿಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,500ಕ್ಕೆ ಏರಿಕೆ ಕಂಡಿದೆ.


    ಬೆಂಗಳೂರು ನಗರದಲ್ಲಿ ಇಂದು ಒಟ್ಟು 610 ಕೇಸ್ ಪತ್ತೆಯಾಗಿದ್ದು, 1 ಮರಣ ಪ್ರಕರಣ ಕೂಡ ವರದಿಯಾಗಿದೆ. ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,346ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 7 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 11 ಜಿಲ್ಲೆಗಳಲ್ಲಿ 24 ಕೇಸ್ ಮತ್ತು 19 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಬೆಂಗಳೂರು ನಗರದಲ್ಲಿ ಮತ್ತು ದಕ್ಷಿಣಕನ್ನಡದಲ್ಲಿ ತಲಾ ಒಂದರಂತೆ 2 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 503 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೋವಿಡ್‌ ನಂತ್ರ ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್

    ಈವರೆಗೆ ರಾಜ್ಯದಲ್ಲಿ ಒಟ್ಟು 39,59,458 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,14,846 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 53,931 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 22,586 ಸ್ಯಾಂಪಲ್ (ಆರ್​ಟಿಪಿಸಿಆರ್ 16,000 + 6,586 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 4 ದಿನಗಳಿಂದ ನೂಪುರ್ ಶರ್ಮಾ ನಾಪತ್ತೆ – ಹುಡುಕಾಡಿ ಸುಸ್ತಾದ ಪೊಲೀಸರು

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 610, ದಕ್ಷಿಣಕನ್ನಡ 7, ಉಡುಪಿ ಮತ್ತು ಉತ್ತರಕನ್ನಡದಲ್ಲಿ ತಲಾ 3, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಮೈಸೂರಲ್ಲಿ ತಲಾ 2, ಬೆಳಗಾವಿ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಒಂದೊಂದು ಪ್ರಕರಣ ಸೇರಿ ಒಟ್ಟು 634 ಕೇಸ್ ವರದಿಯಾಗಿದೆ.

    Live Tv

  • ಕೋವಿಡ್‌ ನಂತ್ರ ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್

    ಕೋವಿಡ್‌ ನಂತ್ರ ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್

    ನವದೆಹಲಿ: ಕೋವಿಡ್ ಸೋಂಕಿತರಾಗಿರುವ ಎಐಸಿಸಿ ಅಧ್ಯಕ್ಷೆ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಕೋವಿಡ್ ನಂತರದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸೋನಿಯಾಗಾಂಧಿ ಆರೋಗ್ಯ ಪರಿಸ್ಥಿತಿ ಕುರಿತಂತೆ ಎಐಸಿಸಿ ಪ್ರಕಟಣೆ ಹೊರಡಿಸಿದೆ.

    ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್ ಇರೋದನ್ನು ವೈದ್ಯರು ಗುರುತಿಸಿದ್ದಾರೆ. ಸದ್ಯ ಸೋನಿಯಾ ಗಾಂಧಿ ಆರೋಗ್ಯದ ಮೇಲೆ ತಜ್ಞ ವೈದ್ಯರು ನಿಗಾ ಇರಿಸಿದ್ದು, ಚಿಕಿತ್ಸೆ ಮುಂದುವರಿಸಿದ್ದಾರೆ. ಸೋನಿಯಾ ಗಾಂಧಿ ಮೂಗಿನಲ್ಲಿ ರಕ್ತ ಒಸರಿದ ಹಿನ್ನೆಲೆಯಲ್ಲಿ ಜೂನ್ 12ರಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಸೋನಿಯಾ ಗಾಂಧಿ ಅನಾರೋಗ್ಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮಾಡಿದ ಮನವಿಗೆ ಇ.ಡಿ ಸ್ಪಂದಿಸಿದೆ. ಇ.ಡಿ ವಿಚಾರಣೆಯಿಂದ ರಾಹುಲ್‍ಗೆ ಮೂರು ದಿನ ವಿನಾಯ್ತಿ ಸಿಕ್ಕಿದೆ. ಸೋಮವಾರ ರಾಹುಲ್ ಗಾಂಧಿ ಇ.ಡಿ ಮುಂದೆ ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ. ಬುಧವಾರ ಸೋನಿಯಾ ಗಾಂಧಿ ಕೂಡ ಇ.ಡಿ ವಿಚಾರಣೆಗೆ ಹಾಜರಾಗಬೇಕಿದೆ. ಆದ್ರೆ, ಸೋನಿಯಾ ಗಾಂಧಿಯ ಆರೋಗ್ಯ ಪರಿಸ್ಥಿತಿಯನ್ನು ನೋಡುತ್ತಿದ್ದರೆ, ಸದ್ಯಕ್ಕೆ ಅವರು ವಿಚಾರಣೆ ಎದುರಿಸೋದು ಅನುಮಾನವಾಗಿದೆ.

    Live Tv

  • ಪಾಸಿಟಿವಿಟಿ ರೇಟ್ ಶೇ.3.47ಕ್ಕೆ ಏರಿಕೆ – ಬೆಂಗ್ಳೂರಲ್ಲಿ 791 ಕೇಸ್

    ಪಾಸಿಟಿವಿಟಿ ರೇಟ್ ಶೇ.3.47ಕ್ಕೆ ಏರಿಕೆ – ಬೆಂಗ್ಳೂರಲ್ಲಿ 791 ಕೇಸ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಂದು ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 833 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೊತೆಗೆ ಇಂದು ಕೂಡ ಏಕೈಕ ಮರಣ ಪ್ರಕರಣ ವರದಿಯಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.47ಕ್ಕೆ ಏರಿಕೆ ಕಂಡಿದೆ.

     

    ಬೆಂಗಳೂರು ನಗರದಲ್ಲಿ ಇಂದು ಒಟ್ಟು 791 ಕೇಸ್ ಪತ್ತೆಯಾಗಿದ್ದು, ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,199ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 12 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ ತಲುಪಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 10 ಜಿಲ್ಲೆಗಳಲ್ಲಿ 42 ಕೇಸ್ ಮತ್ತು 19 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಏಕೈಕ ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,068 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮೋದಿ 2 ದಿನ- ಎಲ್ಲೆಲ್ಲಿಗೆ ಭೇಟಿ..?, ಕಾರ್ಯಕ್ರಮಗಳೇನು..?

    ಈವರೆಗೆ ರಾಜ್ಯದಲ್ಲಿ ಒಟ್ಟು 39,58,824 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,14,343 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 45,352 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 23,990 ಸ್ಯಾಂಪಲ್ (ಆರ್‌ಟಿಪಿಸಿಆರ್ 17,413 + 6,577 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬ್ರ್ಯಾಂಡೆಡ್ ಕಂಪನಿಗಳ ಹೆಸರಲ್ಲಿ ನಕಲಿ ವಸ್ತುಗಳ ಮಾರಾಟ – ಇಬ್ಬರ ಬಂಧನ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 791, ಮೈಸೂರು 12, ದಕ್ಷಿಣಕನ್ನಡ 6, ಉಡುಪಿ 5, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಬಳ್ಳಾರಿ ತಲಾ 4, ಧಾರವಾಡ 3, ಬೆಳಗಾವಿ 2, ರಾಮನಗರ ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 833 ಕೇಸ್ ವರದಿಯಾಗಿದೆ.

    Live Tv

  • ರಾಜ್ಯದಲ್ಲಿ ಕೋವಿಡ್‌ ಮತ್ತೆ ಏರಿಕೆ; ಸರ್ಕಾರದಿಂದ ಪರಿಷ್ಕೃತ Guidelines ಪ್ರಕಟ – ಮಾರ್ಗಸೂಚಿಯಲ್ಲೇನಿದೆ?

    ರಾಜ್ಯದಲ್ಲಿ ಕೋವಿಡ್‌ ಮತ್ತೆ ಏರಿಕೆ; ಸರ್ಕಾರದಿಂದ ಪರಿಷ್ಕೃತ Guidelines ಪ್ರಕಟ – ಮಾರ್ಗಸೂಚಿಯಲ್ಲೇನಿದೆ?

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ಪ್ರಕಟ ಮಾಡಿರೋ ಮಾರ್ಗಸೂಚಿಯಲ್ಲಿ ಏನಿದೆ? ಜನ ಏನು ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಾಹಿತಿ.

    ಪರಿಷ್ಕೃತ ಮಾರ್ಗಸೂಚಿಯಲ್ಲಿ ಏನಿದೆ?
    ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು. ಹೊರ ದೇಶದಿಂದ ಬರುವವರಿಗೆ ರ‍್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್‌ಟಿ-ಪಿಸಿಆರ್‌ ಪರೀಕ್ಷೆ ಕಡ್ಡಾಯವಾಗಿದೆ. ಪಾಸಿಟಿವ್ ಆದ ಎಲ್ಲಾ ಸ್ವಾಬ್‌ಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು. ಇದನ್ನೂ ಓದಿ: ಕಾಂಗ್ರೆಸ್‍ ನಾಯಕರಿಂದ ರಾಜಭವನ ಚಲೋ

    ಪಾಸಿಟಿವ್ ಆಗಿದ್ರೆ ಅಥವಾ ರಿಪೋರ್ಟ್ ಬರುವವದಿದ್ದರೆ, ವ್ಯಕ್ತಿಯನ್ನ ಕ್ವಾರಂಟೈನ್ ಮಾಡಬೇಕು. ಕ್ವಾರಂಟೈನ್ ಅವಧಿ ಮುಗಿಯುವವರೆಗೂ ವೈದ್ಯರು ನಿಗಾ ಇಡಬೇಕು. ಎಲ್ಲಾ ಐಎಲ್‌ಐ ಸ್ಯಾರಿ ಕೇಸ್‌ಗಳ ಡೇಟಾವನ್ನು ಐಡಿಎಸ್‌ನಲ್ಲಿ ಅಪ್ಲೋಡ್ ಮಾಡಬೇಕು. ಆಸ್ಪತ್ರೆಗಳಿಗೆ ಐಎಲ್‌ಐ ಕೇಸ್‌ಗಳು ದಾಖಲಾದರೆ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಬೇಕು.

    ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಸ್ವಾಬ್ ರವಾನೆ ಮಾಡಲು ಮಾರ್ಗಸೂಚಿ
    ಕ್ಲಸ್ಟರ್‌ಗಳಲ್ಲಿ ಪಾಸಿಟಿವ್ ಬಂದ ಸ್ವಾಬ್‌ಗಳನ್ನು ಕಡ್ಡಾಯವಾಗಿ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳಿಸಬೇಕು. ಬೆಂಗಳೂರು ಮತ್ತು ಇತರೆ ಜಿಲ್ಲೆಗಳಲ್ಲಿ ನಡೆಯುವ ಟೆಸ್ಟಿಂಗ್ ಕೇಂದ್ರಗಳಿಂದ ಆಯ್ದಾ ಸ್ವಾಬ್‌ಗಳನ್ನ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಬೇಕು. ಇದನ್ನೂ ಓದಿ: ಕಾಂಗ್ರೆಸ್ ಹೋರಾಟದಿಂದ ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ: ಸಚಿವ ಸುಧಾಕರ್

    ಸಮುದಾಯ ಮಟ್ಟದಲ್ಲಿ ಕೇಸ್ ಬ್ರೇಕ್ ಥ್ರೂ ಆಗಿದ್ದರೆ ಅಲ್ಲಿ ಸ್ಯಾಂಪಲ್ ಅನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರ ಸ್ಯಾಂಪಲ್ ಅನ್ನು ಕಡ್ಡಾಯವಾಗಿ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ಪ್ರಕಟಿಸಿದೆ.

    6 ರಿಂದ 14 ವರ್ಷದ ಮಕ್ಕಳಿಗೆ ಸೆರೋ ಸರ್ವೆ
    ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಸೆರೋ ಸರ್ವೆ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 14 ವರ್ಷದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೇಗಿದೆ. ಈಗಾಗಲೇ ಕೋವಿಡ್ ಬಂದು ಹೋಗಿದೆಯಾ ಹೇಗೆ ಅಂತಾ ಸೆರೋ ಸರ್ವೆ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಗದಿತ ಸಮಯದಲ್ಲಿ ಸೆರೋ ಸರ್ವೆ ಮಾಡಲು ಸೂಚನೆ ನೀಡಿದೆ.

    Live Tv

  • ಒಟ್ಟು 648 ಕೇಸ್ – 4 ಸಾವಿರದ ಆಸುಪಾಸಿನಲ್ಲಿ ಸಕ್ರಿಯ ಪ್ರಕರಣ

    ಒಟ್ಟು 648 ಕೇಸ್ – 4 ಸಾವಿರದ ಆಸುಪಾಸಿನಲ್ಲಿ ಸಕ್ರಿಯ ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಇಂದು ಒಟ್ಟು 648 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೊತೆಗೆ ಏಕೈಕ ಮರಣ ಪ್ರಕರಣ ವರದಿಯಾಗಿದೆ.

    ಬೆಂಗಳೂರು ನಗರದಲ್ಲಿ ಇಂದು ಒಟ್ಟು 615 ಕೇಸ್ ಪತ್ತೆಯಾಗಿದ್ದು, ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,843ಕ್ಕೆ ಏರಿಕೆ ಕಂಡಿದೆ. ಜೊತೆಗೆ ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 12 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.76ಕ್ಕೆ ತಲುಪಿದೆ. ಇದನ್ನೂ ಓದಿ: ಹಿಂದಿ ಭಾಷೆ ಬರುವ ಶಾಲಾ, ಕಾಲೇಜು ಮಕ್ಕಳಿಗಷ್ಟೇ ಪ್ರವಾಸ ಭಾಗ್ಯ- ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು ಹೊರತು ಪಡಿಸಿ ಉಳಿದಂತೆ 12 ಜಿಲ್ಲೆಗಳಲ್ಲಿ 33 ಕೇಸ್ ಮತ್ತು 17 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಏಕೈಕ ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,067 ಮರಣ ಪ್ರಕರಣ ಪತ್ತೆಯಾಗಿದೆ. 532 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,57,991 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,13,885 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 2,50,510 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 23,452 ಸ್ಯಾಂಪಲ್ (ಆರ್‌ಟಿಪಿಸಿಆರ್ 16,350 + 7,102 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೊರೊನಾ ರೂಪಾಂತರ ಓಮಿಕ್ರಾನ್, ಡೆಲ್ಟಾ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ICMR

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 615, ದಕ್ಷಿಣಕನ್ನಡ 12, ಮೈಸೂರು 5, ಧಾರವಾಡ 4, ಶಿವಮೊಗ್ಗ 3, ತುಮಕೂರು 2, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಹಾಸನ, ಕಲಬುರಗಿ, ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 648 ಕೇಸ್ ವರದಿಯಾಗಿದೆ.

    Live Tv

  • ರಾಜ್ಯದಲ್ಲಿಂದು 594 ಮಂದಿಗೆ ಕೊರೊನಾ – ಶೇ.3.14ಕ್ಕೆ ಪಾಸಿಟಿವಿಟಿ ದರ ಏರಿಕೆ

    ರಾಜ್ಯದಲ್ಲಿಂದು 594 ಮಂದಿಗೆ ಕೊರೊನಾ – ಶೇ.3.14ಕ್ಕೆ ಪಾಸಿಟಿವಿಟಿ ದರ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 594 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ ಭರ್ತಿ 582 ಪಾಸಿಟಿವ್ ಕೇಸ್ ವರದಿಯಾಗಿದೆ.

    ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,882ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.14ಕ್ಕೆ ತಲುಪಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 400 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ.

    ಈವರೆಗೆ ರಾಜ್ಯದಲ್ಲಿ ಒಟ್ಟು 39,57,343 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,13,353 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 46,711 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,883 ಸ್ಯಾಂಪಲ್ (ಆರ್‌ಟಿಪಿಸಿಆರ್ 11,750 + 7,133 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರು ಒಂದರಲ್ಲೇ 582 ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿಯಲ್ಲಿ 2, ದಕ್ಷಿಣ ಕನ್ನಡದಲ್ಲಿ 5, ಕೊಪ್ಪಳ, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಿದ್ಧತೆಗಳು ಬಿರುಸು ಪಡೆದು ಕೊಂಡಿವೆ. ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮದ ಮೊದಲ ಹಂತದ ರೂಪು ರೇಷೆಗಳು ಸಿದ್ಧವಾಗಿವೆ. ಈ ಮಧ್ಯೆ ಕಾರ್ಯದಲ್ಲಿ ಪಾಲ್ಗೊಳ್ಳುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

    ಹೌದು. ಮೈಸೂರು ಅರಮನೆ ಮುಂಭಾಗ ಜೂನ್ 21 ರಂದು ಪ್ರಧಾನ ಮಂತ್ರಿಗಳು ಯೋಗ ಮಾಡಲಿದ್ದಾರೆ. ಪ್ರಧಾನಿಗಳ ಜೊತೆ 15 ಸಾವಿರ ಜನ ಯೋಗ ಮಾಡಲಿದ್ದು ಇದಕ್ಕಾಗಿ ಸಿದ್ಧತೆಗಳು ನಡೆದಿವೆ. ಅಂದು ಬೆಳಗ್ಗೆ 6.30 ಕ್ಕೆ ಯೋಗ ಆರಂಭವಾಗಲಿದೆ. ಒಟ್ಟು ಮುಕ್ಕಾಲು ಗಂಟೆ 21 ಯೋಗದ ಆಸನಗಳನ್ನು ಮಾಡಲಾಗುತ್ತದೆ.

    ಪ್ರಧಾನಿಗಳು ಯೋಗ ಆರಂಭಿಸುವ ಒಂದು ಗಂಟೆ ಮುನ್ನ ಅಂದರೆ ಬೆಳಗ್ಗೆ 5.30 ರ ಒಳಗೆ ನೋಂದಣಿ ಮಾಡಿ ಕೊಂಡಿರುವ ಯೋಗಪಟುಗಳು ಅರಮನೆ ಒಳಗೆ ಬರಬೇಕು. ಸರಿಯಾಗಿ 5.30 ಕ್ಕೆ ಅರಮನೆಯ ಎಲ್ಲಾ ದ್ವಾರಗಳು ಬಂದ್ ಆಗುತ್ತವೆ. ನೋಂದಣಿಯಾದ ಪ್ರತಿಯೊಬ್ಬ ಯೋಗಪಟುವಿಗೂ ಯೋಗ ಮ್ಯಾಟ್, ಶೂ ಇಡುವ ಬಾಕ್ಸ್, ಮೊಬೈಲ್ ಇಟ್ಟುಕೊಳ್ಳಲು ಪ್ರತ್ಯೇಕ ಕವರ್ ಅನ್ನು ಕೇಂದ್ರದ ಆಯುಷ್ ಇಲಾಖೆಯೆ ನೀಡಲಿದೆ. ಅಲ್ಲದೆ ಅರಮನೆ ಆವರಣದಲ್ಲಿ ಯೋಗ ಮಾಡಲು ನೋಂದಣಿ ಮಾಡುವವರು ಕೊರೊನಾ ಎರಡನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು. ಯೋಗ ದಿನಕ್ಕೂ 72 ಗಂಟೆ ಮುಂಚಿನ ಕರೋನಾ ನೆಗಟಿವ್ ರೀಪೋರ್ಟ್ ಕಡ್ಡಾಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವವೇ ಮುಸ್ಲಿಮರಿಗೆ ಕ್ಷಮೆ ಕೇಳ್ಬೇಕು – 500 ವೆಬ್‌ಸೈಟ್ಸ್ ಹ್ಯಾಕ್, ಪ್ರವಾದಿ ಅವಹೇಳನಕ್ಕಿದೆಯಾ ಲಿಂಕ್?

    ಒಟ್ಟು 15 ಸಾವಿರ ಜನರಲ್ಲಿ 12 ಸಾವಿರ ಸ್ಥಳೀಯರು, 1 ಸಾವಿರ ವಿವಿಧ ರಾಜ್ಯಗಳ ಪ್ರತಿನಿಧಿಗಳು, ಒಂದು ಸಾವಿರ ಆಯುಷ್ ಇಲಾಖೆ ಹಾಗೂ ಕೇಂದ್ರದ ವಿವಿಧ ಇಲಾಖೆ ಅಧಿಕಾರಿಗಳು, ಒಂದು ಸಾವಿರ ಕೇಂದ್ರ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. 12 ಸಾವಿರ ಸ್ಥಳೀಯರ ಆಯ್ಕೆ ಪ್ರಕ್ರಿಯೆ ಕೂಡ ಮುಗಿದಿದೆ. ಇದರಲ್ಲಿ ಪೌರಕಾರ್ಮಿಕರು, ಆಟೋ ಚಾಲಕರು, ತೃತೀಯ ಲಿಂಗಿಗಳು, ಯೋಗ ಒಕ್ಕೂಟಗಳಲ್ಲಿನ ಯೋಗ ಪಟುಗಳು, ರಾಜ್ಯ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ, ಹೋಟೆಲ್ ಸಿಬ್ಬಂದಿ, ಪೊಲೀಸ್ ಇಲಾಖೆ ಹೀಗೆ ಎಲ್ಲಾ ಕಾರ್ಮಿಕ ವರ್ಗ, ಎಲ್ಲಾ ಸ್ಥರದ ಜನರನ್ನು ಸೇರಿಸಿ ಕೊಳ್ಳಲಾಗಿದೆ. ಅವರ ಕೋವಿಡ್ ಲಸಿಕಾ ವರದಿಗಳನ್ನು ಪಡೆಯಲಾಗಿದೆ. ಅವರ ಪಾಸ್ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ.

    ಅರಮನೆ ಒಳಗೆ ಒಟ್ಟು 17 ಬ್ಲಾಕ್ ಮಾಡಲಾಗುತ್ತದೆ. ಪ್ರತಿ ಬ್ಲಾಕ್ ನಲ್ಲೂ 100 ಜನ ಯೋಗ ಮಾಡಲಿದ್ದಾರೆ. ಪಾಸ್ ಗಳಲ್ಲೆ ಯಾವ ಬ್ಲಾಕ್ ಗೆ ಹೋಗಬೇಕು ಎಂಬ ಸೂಚನೆ ಇರಲಿದೆ. ಒಟ್ಟು 120 ಮೊಬೈಲ್ ಶೌಚಾಲಯದ ವ್ಯವಸ್ಥೆ ಆಗಲಿದೆ. ಇಡೀ ಕಾರ್ಯಕ್ರಮದ ನಿರ್ವಹಣೆಯನ್ನು ಕೇಂದ್ರದ ಆಯುಷ್ ಇಲಾಖೆಯೆ ಮಾಡಲಿದೆ. ಆಹ್ವಾನ ಪತ್ರಿಕೆ ಮತ್ತು ವೇದಿಕೆ ನಿರ್ಮಾಣದ ಜವಾಬ್ದಾರಿ ಮಾತ್ರ ರಾಜ್ಯ ಸರಕಾರ ನಿರ್ವಹಿಸಲಿದೆ. ಇದನ್ನೂ ಓದಿ: ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ಕೇಂದ್ರ ಸರಕಾರ ಕ್ವಾಲಿಟಿ ಮುಖ್ಯ ಹೊರತು ಕ್ವಾಂಟಿಟಿ ಮುಖ್ಯವಲ್ಲ ಎಂದು ಸ್ಪಷ್ಟವಾಗಿ ಜಿಲ್ಲಾಡಳಿತಕ್ಕೆ ಸಂದೇಶ ರವಾನಿಸಿದೆ. ಹೀಗಾಗಿ ಬೇಕಾಬಿಟ್ಟಿ ಜನರನ್ನು ಸೇರಿಸದೆ ಯೋಗವನ್ನು ಕ್ರಮ ಬದ್ದವಾಗಿ ಮಾಡುವವರನ್ನೆ ಗುರುತಿಸಿ ಯೋಗ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

  • ಬೆಂಗ್ಳೂರಲ್ಲಿ 400 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 3,545ಕ್ಕೆ ಏರಿಕೆ

    ಬೆಂಗ್ಳೂರಲ್ಲಿ 400 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 3,545ಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 415 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ ಭರ್ತಿ 400 ಪಾಸಿಟಿವ್ ಕೇಸ್ ವರದಿಯಾಗಿದೆ.

    ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,542ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 5 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,688ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.56ಕ್ಕೆ ತಲುಪಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 15 ಕೇಸ್ ಮತ್ತು 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 378 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್‌ವಾಲ್

    ಈವರೆಗೆ ರಾಜ್ಯದಲ್ಲಿ ಒಟ್ಟು 39,56,749 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,12,953 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 52,267 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 16,190 ಸ್ಯಾಂಪಲ್ (ಆರ್‌ಟಿಪಿಸಿಆರ್ 12,185 + 4,005 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ- ಸಿಎಂ, ಕಟೀಲ್ ಸಂತಾಪ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 400, ದಕ್ಷಿಣಕನ್ನಡ 5, ಕಲಬುರಗಿ 3, ಬಳ್ಳಾರಿ 2, ಬೆಳಗಾವಿ, ಧಾರವಾಡ, ಕೋಲಾರ, ಶಿವಮೊಗ್ಗ, ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 415 ಕೇಸ್ ವರದಿಯಾಗಿದೆ.

  • ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

    ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

    ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ.

    ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಸಹ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ಇಂದು 199 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಮೇಕ್ ಇನ್ ಇಂಡಿಯಾಗೆ ಉತ್ತೇಜನ – 96 ಸುಧಾರಿತ ಯುದ್ಧ ವಿಮಾನ ತಯಾರಿಸಲು ಐಎಎಫ್ ಯೋಜನೆ

    ಈವರೆಗೆ ರಾಜ್ಯದಲ್ಲಿ ಒಟ್ಟು 39,56,334 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,12,575 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9,028 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,519 ಸ್ಯಾಂಪಲ್ (ಆರ್‌ಟಿಪಿಸಿಆರ್ 16,406 + 5,113 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರು ನಗರದಲ್ಲಿ 429 ಪ್ರಕರಣ ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 14, ದಾವಣಗೆರೆಯಲ್ಲಿ 2, ಧಾರವಾಡದಲ್ಲಿ 4, ಉಡುಪಿಯಲ್ಲಿ 3, ಉತ್ತರ ಕನ್ನಡದಲ್ಲಿ 6 ಹಾಗೂ ಬಳ್ಳಾರಿ, ಚಿತ್ರದುರ್ಗ, ಗದಗ, ಹಾಸನ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.