Tag: Corona Warriors

  • ಸರ್ಕಾರದಿಂದ ಬಿಗ್ ಶಾಕ್- ಕೊರೊನಾ ವಾರಿಯರ್ಸ್‍ಗಿಲ್ಲ ಭದ್ರತೆ

    ಸರ್ಕಾರದಿಂದ ಬಿಗ್ ಶಾಕ್- ಕೊರೊನಾ ವಾರಿಯರ್ಸ್‍ಗಿಲ್ಲ ಭದ್ರತೆ

    ಬೆಳಗಾವಿ: ದೇಶದಲ್ಲಿ ಕೊರೊನಾ ಮಹಾಮಾರಿ ಕದಂಬಬಾಹು ಚಾಚುತ್ತಾ ರಣಕೇಕೆ ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರ, ಶಂಕಿತರ ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿ ಎಡವಟ್ಟು ಮಾಡುತ್ತಿದ್ದು, ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಸೋಂಕಿತರು ಗುಣಮುಖರಾಗಲು ಅದಮ್ಯ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ.

    ಕೋವಿಡ್ ವಾರ್ಡಿನಲ್ಲಿ ಹಾಗೂ ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರ ಲಾಡ್ಜ್‍ಗಳಲ್ಲಿ ಇರಲು ವ್ಯವಸ್ಥೆ ಮಾಡಿತ್ತು. ಕೋವಿಡ್ ವಾರ್ಡಿನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ 7 ದಿನ ಕೆಲಸ ಮಾಡಿದ ಬಳಿಕ 14 ದಿನಗಳ ಕಾಲ ಹೋಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಬೇಕು ಅಂತ ನಿಯಮ ಕೂಡ ರೂಪಿಸಿತ್ತು. ಆದರೆ ಇದೀಗ ವೈದ್ಯಕೀಯ ಸಿಬ್ಬಂದಿ ಲಾಡ್ಜ್ ತೊರೆಯುವಂತೆ ಸೂಚಿಸಿ, ಮನೆಯಿಂದಲೇ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಕೆಲ ಸಿಬ್ಬಂದಿ ಮನೆ ಚಿಕ್ಕದಿರುತ್ತೆ, ಪ್ರತ್ಯೇಕ ರೂಮಿನಲ್ಲಿ ಐಸೊಲೇಷನ್ ಇರಲಾಗಲ್ಲ. ಕೆಲವರ ಮನೆಯಲ್ಲಿ ಮಕ್ಕಳು, ವಯೋವೃದ್ಧರು ಇರ್ತಾರೆ ಅವರ ಪರಿಸ್ಥಿತಿ ಏನು ಅಂತ ಕೋವಿಡ್ ವಾರ್ಡ್ ವೈದ್ಯಕೀಯ ಸಿಬ್ಬಂದಿ, ಕುಟುಂಬಸ್ಥರು ಚಿಂತಿಸುತ್ತಿದ್ದಾರೆ.

    ಬೆಳಗಾವಿಯ ಐಸಿಎಂಆರ್‍ನಲ್ಲಿರುವ ಕೋವಿಡ್ ಟೆಸ್ಟ್ ಲ್ಯಾಬ್‍ನಲ್ಲಿ ಕೆಲಸ ಮಾಡುವ 10 ಸಿಬ್ಬಂದಿಗೂ ಲಾಡ್ಜ್ ಖಾಲಿ ಮಾಡುವಂತೆ ಸೂಚಿಸಲಾಗಿದೆ. ಬೇರೆ ಊರುಗಳಿಂದ ಬರುವವರಿಗೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸ್ಥಳೀಯರಿಗೆ ಮನೆಯಿಂದಲೇ ಬರಲು ತಿಳಿಸಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಬೆಳಗಾವಿ ಡಿಹೆಚ್‍ಒ ಡಾ.ಎಸ್.ವಿ ಮುನ್ಯಾಳ್, ಮೊದಲು ಸೋಂಕಿನ ಪ್ರಮಾಣ ಜಾಸ್ತಿ ಇತ್ತು. ಹೀಗಾಗಿ ಕೋವಿಡ್ ವಾರ್ಡಿನಲ್ಲಿ, ಕೋವಿಡ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 7 ದಿನಗಳ ಕೆಲಸ ಬಳಿಕ ಕ್ವಾರಂಟೈನ್‍ನಲ್ಲಿ ಇಡಲಾಗುತ್ತಿತ್ತು. ರಾಜ್ಯಮಟ್ಟದಿಂದ ಬಂದ ನಿರ್ದೇಶನದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

    ಒಟ್ಟಿನಲ್ಲಿ ಹೊರರಾಜ್ಯದಿಂದ ಬಂದವರು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾಗ ವರದಿ ಬರುವ ಮುನ್ನವೇ ಅವರನ್ನು ಬಿಡುಗಡೆ ಮಾಡಿ ಅವರ ಮನೆಯವರಿಗೆ ಆತಂಕಕ್ಕೀಡುವಂತೆ ಮಾಡಿದ್ದು ಒಂದೆಡೆಯಾದರೆ, ಹೈರಿಸ್ಕ್‍ನಲ್ಲಿ ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್‍ಗೆ ಆದರೆ ಇದರ ವಿರುದ್ಧ ಧ್ವನಿ ಎತ್ತಿದ್ರೆ ಎಲ್ಲಿ ಕೆಲಸಕ್ಕೆ ಕುತ್ತು ಬರುತ್ತೋ ಅಂತ ಮಾತನಾಡುತ್ತಿಲ್ಲವೇನೋ ಗೊತ್ತಿಲ್ಲ. ಸರ್ಕಾರ ಕೈಗೊಳ್ಳುವ ನಿರ್ಧಾರದಿಂದ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ತೊಂದರೆಯಾಗದಿರಲಿ ಎಂಬುದೇ ಸಾರ್ವಜನಿಕರ ಆಶಯವಾಗಿದೆ.

  • ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್

    ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್

    ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.

    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು.

    ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ ಬಳ್ಳಾರಿಗೆ ಪ್ರಯಾಣಿಸಿದ ಟ್ರಾವೆಲ್ ಹಿಸ್ಟರಿ ಹೊಂದಿದ್ದರು. 26 ವರ್ಷದ ಯುವತಿ, ರೋಗಿ ಸಂಖ್ಯೆ-2778 ಕುರಿಹಟ್ಟಿ ಮೂಲದವರೆಂದು ಗುರುತಿಸಲಾಗಿದೆ.

    ಜಿಲ್ಲೆಯ ನಿನ್ನೆ ತಡರಾತ್ರಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿತ್ತು. ಇಂದು ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಈವರೆಗೂ ಡಿಸ್ಚಾರ್ಜ್ ಆಗಿರುವ ಸಂಖ್ಯೆ 35ಕ್ಕೇರಿದೆ. ಇದುವರೆಗೂ ಜಿಲ್ಲೆ ಒಬ್ಬರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, 17 ಸಕ್ರಿಯ ಪ್ರಕರಣಗಳಿವೆ.

  • ಪೊಲೀಸರು ಕೊರೊನಾ ವಾರಿಯರ್ಸ್, ಅವರನ್ನು ಅಸ್ಪೃಶ್ಯರಂತೆ ನೋಡಬೇಡಿ: ಉಡುಪಿ ಡಿಸಿ

    ಪೊಲೀಸರು ಕೊರೊನಾ ವಾರಿಯರ್ಸ್, ಅವರನ್ನು ಅಸ್ಪೃಶ್ಯರಂತೆ ನೋಡಬೇಡಿ: ಉಡುಪಿ ಡಿಸಿ

    – ಕೊರೊನಾ ಗೆದ್ದ ಉಡುಪಿಯ 9 ಪೊಲೀಸರು ಡಿಸ್ಚಾರ್ಜ್

    ಉಡುಪಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪೊಲೀಸರು ಯೋಧರಂತೆ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಎಲ್ಲಾ ಪೊಲೀಸರನ್ನು ಅಸ್ಪೃಶ್ಯರಂತೆ ನೋಡಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.

    ಉಡುಪಿ ಜಿಲ್ಲೆಯ 9 ಪೊಲೀಸರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಅವರ ಜೊತೆ ಕೆಲಸ ಮಾಡಿದ್ದ ಇತರೇ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಜಿಲ್ಲೆಯ ಜನ ಖಾಕಿ ಯುನಿಫಾರ್ಮ್ ನೋಡಿದಾಗ ದೂರ ಹೋಗುತ್ತಿದ್ದರು. ಗೆಳೆಯರು ಕೂಡಾ ಅಂತರ ಕಾಯ್ದು ಕೊಳ್ಳುತ್ತಿದ್ದರು ಎಂಬ ದೂರುಗಳು ಉಡುಪಿಯಲ್ಲಿ ಕೇಳಿಬಂದಿತ್ತು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿಸಿ ಜಿ.ಜಗದೀಶ್, ಉಡುಪಿ ಜಿಲ್ಲೆಯಲ್ಲಿ 9 ಪೊಲೀಸರಿಗೆ ಕೊರೊನಾ ಬಂದಿತ್ತು. ಇಡೀ ಜಿಲ್ಲೆಗೆ ಬಹಳ ಆತಂಕವಾಗಿತ್ತು. ಎಲ್ಲಾ 9 ಜನ ಪೊಲೀಸರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿದ್ದಾರೆ. ಪೊಲೀಸರು, ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಕೊರೊನಾ ವಾರಿಯರ್ಸ್‍ಗಳು. ಕೊರೊನಾ ವಾರಿಯರ್ಸ್‍ಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

    ಕೊರೊನಾ ಬಂತು ಅಂತ ಸಾರ್ವಜನಿಕವಾಗಿ ಪೊಲೀಸರನ್ನು ಯಾರೂ ಸಂಶಯದಿಂದ ನೋಡಬಾರದು. ಕೊರೊನಾ ಬಂದ ಸಾರ್ವಜನಿಕರನ್ನು ಅಸ್ಪೃಶ್ಯರಂತೆ ನೋಡಬಾರದು. ಪೊಲೀಸರು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುವ ಯೋಧರು, ಪೊಲೀಸರ ಮೇಲೆ ಸಾರ್ವಜನಿಕರಿಗೆ ಹೆಚ್ಚು ಗೌರವ ಬರಬೇಕು ಎಂದು ತಿಳಿಸಿದರು.

  • ಚಪ್ಪಾಳೆ ಬೇಡ ಸೌಲಭ್ಯ ನೀಡಿ – ಮುಷ್ಕರಕ್ಕೆ ಸಿದ್ಧವಾದ ಕೊರೊನಾ ವಾರಿಯರ್ಸ್

    ಚಪ್ಪಾಳೆ ಬೇಡ ಸೌಲಭ್ಯ ನೀಡಿ – ಮುಷ್ಕರಕ್ಕೆ ಸಿದ್ಧವಾದ ಕೊರೊನಾ ವಾರಿಯರ್ಸ್

    – ಗುತ್ತಿಗೆ, ಹೊರ ಗುತ್ತಿದೆ ನೌಕರರ ಬೇಡಿಕೇನು?

    ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ.

    ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ.

    ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲವು ಬೇಡಿಕೆಗಳನ್ನು ನೀಡಿ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ವಿಚಾರವಾಗಿ ಮೇ 20ರಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು. ಈ ಬಗ್ಗೆ ಸಮಿತಿ ರಚನೆಯ ಮಾಡಿ ಬೇಡಿಕೆಗಳನ್ನು ಪರಿಶೀಲನೆಯ ಮಾಡುವ ಭರವಸೆ ನೀಡಿಲಾಗಿತ್ತು. ಆದರೆ ಈಗ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರ ಮಾಡಲು ಸಂಘ ತೀರ್ಮಾನಿಸಿದೆ.

    ನಮ್ಮ ರಾಜ್ಯದಲ್ಲಿ 23 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಡಾಕ್ಟರ್, ಸ್ಟಾಫ್ ನರ್ಸ್, ಅಂಬುಲೆನ್ಸ್ ಚಾಲಕರು ಸೇರಿ 180 ವಿವಿಧ ಹುದ್ದೆಯಲ್ಲಿ ಈ ನೌಕರರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಒಟ್ಟು 1,500 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಕ್ವಾರಂಟೈನ್ ಸೆಂಟರ್ ಮತ್ತು ಫೀಲ್ಡ್‍ನಲ್ಲಿ ಈ ಸಿಬ್ಬಂದಿಯೇ ಪ್ರಮುಖವಾಗಿ ಕೆಲಸ ಮಾಡುತ್ತಿದ್ದಾರೆ.

    ನೌಕರರ ಬೇಡಿಕೆಯೇನು?
    1. ಕಡಿಮೆ ವೇತನ
    2. ಪರಿಷ್ಕೃತ ವೇತನ ಇಲ್ಲ
    3. ಭತ್ಯೆಗಳು ಇಲ್ಲ
    4. ವೈದ್ಯಕೀಯ ಸೌಲಭ್ಯವಿಲ್ಲ
    5. ರಜೆಗಳು ಇಲ್ಲ (ವರ್ಷಕ್ಕೆ 10 ಮಾತ್ರ)
    6. ಸೇವಾ ಭದ್ರತೆ ಇಲ್ಲ
    7. ವರ್ಗಾವಣೆ ಇಲ್ಲ (15 ವರ್ಷದಿಂದ ಒಂದೇ ಕಡೆ ಕೆಲಸ)
    8. ಬ್ಯಾಂಕಿನಲ್ಲಿ ಸಾಲ ನೀಡುವುದಿಲ್ಲ
    9. ಪದೋನ್ನತಿ ಇಲ್ಲ
    10. ಹೆಚ್‍ಆರ್ ಪಾಲಿಸಿ ಇಲ್ಲ
    11. ವಿಮೆ ಇಲ್ಲ
    12. ಡೆತ್ ಬೆನಿಫಿಟ್ ಇಲ್ಲ
    13. ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲ
    14. ಮಹಿಳಾ ಸಿಬ್ಬಂದಿಗೆ ಕುಟುಂಬ ಶಸ್ತ್ರಚಿಕಿತ್ಸೆಗೆ ರಜೆ ಇಲ್ಲ.
    15. ಕಡಿಮೆ ವೇತನವಿದ್ದರೂ ಸರ್ಕಾರಿ ಕೆಲಸ ಎಂದು ಬಿಪಿಎಲ್ ಕಾರ್ಡ್ ನೀಡುವುದಿಲ್ಲ
    16. ಹೊರಗುತ್ತಿಗೆ ಪದ್ದತಿ ಕೈಬಿಡಬೇಕು

    ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ ನಾಲ್ಕರಂದು ನೌಕರರ ಸಂಘ ಪ್ರತಿಭಟನೆ ಮಾಡಲು ತೀರ್ಮಾನಿಸಿದೆ. ಜೊತೆಗೆ ನೌಕರಿರಿಗೆ ಜೂನ್ 4ರಂದು ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ. ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡಬೇಕಾದ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವು ತಂದಿಟ್ಟಿದೆ.

  • ‘ವಾರಿಯರ್ಸ್‍ಗೆ ಕೇವಲ ಹೂಮಳೆ ಸುರಿಸಿ, ಚಪ್ಪಾಳೆ ತಟ್ಟಿದ್ರೆ ಸಾಕಾ?’: ಆರೋಗ್ಯ ಸಿಬ್ಬಂದಿ ಪ್ರಶ್ನೆ

    ‘ವಾರಿಯರ್ಸ್‍ಗೆ ಕೇವಲ ಹೂಮಳೆ ಸುರಿಸಿ, ಚಪ್ಪಾಳೆ ತಟ್ಟಿದ್ರೆ ಸಾಕಾ?’: ಆರೋಗ್ಯ ಸಿಬ್ಬಂದಿ ಪ್ರಶ್ನೆ

    – ‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ’
    – ಆರೋಗ್ಯ ಇಲಾಖೆ ಒಳ, ಹೊರ ಗುತ್ತಿಗೆ ನೌಕರರ ಮುಷ್ಕರ

    ಶಿವಮೊಗ್ಗ: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಕಳೆದ 15-20 ವರ್ಷಗಳಿಂದ ಒಳ ಹಾಗೂ ಹೊರಗುತ್ತಿಗೆ ಅಡಿಯಲ್ಲಿ ಕಡಿಮೆ ವೇತನಕ್ಕೆ ಆರೋಗ್ಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ತಾರತಮ್ಯ ನಿವಾರಿಸುವಂತೆ ಹಾಗೂ ಗುತ್ತಿಗೆ ನೌಕರರನ್ನೇ ಖಾಯಂಗೊಳಿಸುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಿಬ್ಬಂದಿ ಆರೋಪಿಸಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಡಾ.ಹೇಮಲತಾ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ನ್ಯಾಯಾಲಯ ಸಹ ಹೇಳಿದೆ. ಈಗಿದ್ದರೂ ಸರ್ಕಾರ ನಮ್ಮನ್ನು ಅತ್ಯಂತ ನಿಷ್ಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದರು.

    ಅಲ್ಲದೇ ಸರ್ಕಾರ ನಿರ್ಲಕ್ಷ್ಯ ಖಂಡಿಸಿ ಜೂನ್ 4 ರಿಂದ ಆರೋಗ್ಯ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗಿ ಮನೆಯಲ್ಲೇ ಕುಳಿತು ಅಸಹಕಾರ ಚಳುವಳಿ ಮಾಡುವುದಾಗಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಿಬ್ಬಂದಿ ತಿಳಿಸಿದ್ದಾರೆ.

    ಕೊರೊನಾ ಸೋಂಕಿನ ಸಂದಿಗ್ಧ ಸಂದರ್ಭದಲ್ಲಿ ನಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದೇವೆ. ಅದಕ್ಕೆ ಪ್ರತಿಯಾಗಿ ಸರ್ಕಾರ ಹೂ ಮಳೆ ಸುರಿಸಿ, ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದೆ. ಆದರೆ ಕೇವಲ ಅಷ್ಟೇ ಸಾಕಾ? ನಮಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಜೂನ್ 4 ರಿಂದ ಮುಷ್ಕರ ಕೈಗೊಂಡಿದ್ದು, ಒಂದು ವೇಳೆ ಏನಾದರೂ ಅನಾಹುತವಾದರೆ ನಾವು ಜವಾಬ್ದಾರರಲ್ಲ ಎಂದು ತಿಳಿಸಿದ್ದಾರೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತವಾಗಿ ಭರವಸೆ ನೀಡಿದರೆ ಮುಷ್ಕರ ಹಿಂಪಡೆಯುತ್ತೇವೆ. ಇಲ್ಲದಿದ್ದರೆ ರಾಜ್ಯಾದ್ಯಂತ ಸಾವಿರಾರು ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ.

  • ಕೊರೊನಾ ವಾರಿಯರ್ಸ್‍ಗೆ ಊಟದ ಬಾಕ್ಸ್ ವಿತರಿಸಿದ್ರು ಬಸವರಾಜ ಹೊರಟ್ಟಿ

    ಕೊರೊನಾ ವಾರಿಯರ್ಸ್‍ಗೆ ಊಟದ ಬಾಕ್ಸ್ ವಿತರಿಸಿದ್ರು ಬಸವರಾಜ ಹೊರಟ್ಟಿ

    ಹುಬ್ಬಳ್ಳಿ: ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ ಕೊರೊನಾ ವಾರಿಯರ್ಸ್‍ಗಳಾದ ಪೊಲೀಸ್ ಸಿಬ್ಬಂದಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಊಟದ ಡಬ್ಬಿಯನ್ನು ನೀಡಿ ಗೌರವಿಸಿದರು.

    ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಊಟದ ಬಾಕ್ಸ್ ನೀಡಿ ಗೌರವಿಸಲಾಯಿತು. ಇದೇ ವೇಳೆ ಮಾತನಾಡಿದ ಅವರು, ಚಿಟಗುಪ್ಪಿ ಕಾಲೋನಿಯ ಜನತೆಯ ಸಹಯೋಗದಲ್ಲಿಂದು ಲಾಕ್ ಡೌನ್ ಸಂದಿಗ್ಧ ಪರಿಸ್ಥಿತಿಯಲ್ಲಿಯು ಕೂಡ ಕಾರ್ಯನಿರ್ವಹಿಸಿದ ಪೊಲೀಸರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಊಟವನ್ನು ವಿತರಣೆ ಮಾಡುವ ಸದುದ್ದೇಶದಿಂದ ಈ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ಇದೇ ವೇಳೆ ಬಿಜೆಪಿಯಲ್ಲಿ ಬುಗೆಲಿದ್ದಿರುವ ನಾಯಕತ್ವ ಬದಲಾವಣೆ ಕುರಿತು ಮಾತನಾಡಿದ ಅವರು, ಕೋರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಿನ್ನಮತ ಸ್ಫೋಟಗೊಂಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಬಿಜೆಪಿ ರಾಜಕೀಯ ಆಂತರಿಕ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದ ಅವರು, ಯಾರು ರಾಜಿನಾಮೆ ನೀಡಿ ಬಂದರೂ ಕೂಡ ಜೆಡಿಎಸ್ ಅವರನ್ನು ಒಳಗೆ ಸೇರಿಸಿಕೊಳ್ಳುವುದಿಲ್ಲ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

  • ಕೊರೊನಾ ವಾರಿಯರ್ಸ್‍ಗೆ ದುಬಾರಿ ಶೂ ಕೊಡಿಸಿ ಮಾನವೀಯತೆ ಮೆರೆದ ‘ಮಿಸ್ಟರ್ 360’

    ಕೊರೊನಾ ವಾರಿಯರ್ಸ್‍ಗೆ ದುಬಾರಿ ಶೂ ಕೊಡಿಸಿ ಮಾನವೀಯತೆ ಮೆರೆದ ‘ಮಿಸ್ಟರ್ 360’

    ಬೆಂಗಳೂರು: ಕೋವಿಡ್-19 ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮುಂಚೂಣಿಯಲ್ಲಿದ್ದಾರೆ. ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್‍ಗೆ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಧನ್ಯವಾದ ತಿಳಿಸಿ, ಉಡುಗೊರೆ ನೀಡಿದ್ದಾರೆ.

    ಕೆ.ಎಲ್ ರಾಹುಲ್ ಅವರು ಬೆಂಗಳೂರಿನಲ್ಲಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಪೂಮಾ ಶೂಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಜೊತೆಗೆ ಕೊರೊನಾ ವಾರಿಯರ್ಸ್ ನಿಸ್ವಾರ್ಥ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಟೆಸ್ಟ್‌ಗೆ ವಿರಾಟ್, ಏಕದಿನಕ್ಕೆ ಕೆ.ಎಲ್.ರಾಹುಲ್ ನಾಯಕತ್ವ

    ಈ ಕುರಿತು ಟ್ವೀಟ್ ಮಾಡಿರುವ ಕೆ.ಎಲ್.ರಾಹುಲ್, ಕೊರೊನಾ ವಿರುದ್ಧ ಹಗಲಿರುಳು ದುಡಿಯುತ್ತಿರುವಿರಿ. ಹೆಮ್ಮಾರಿ ಕೊರೊನಾವನ್ನು ನಮ್ಮ ದೇಶದಿಂದ ಹೋಗಲಾಡಿಸಲು ಎಲ್ಲ ಅಪಾಯವನ್ನು ಮೆಟ್ಟಿನಿಂತು ದುಡಿಯುತ್ತಿರುವ ನಿಮಗೆ ಧನ್ಯವಾದಗಳು. ನಿಮ್ಮ ಹೋರಾಟಕ್ಕೆ ನನ್ನದೊಂದು ಪುಟ್ಟ ಕೊಡುಗೆ, ಸಣ್ಣ ಕೃತಜ್ಞತೆ. ಹೋರಾಟವನ್ನು ಮುಂದುವರಿಸಿ. ಧನ್ಯವಾದಗಳು,’ ಎಂದು ರಾಹುಲ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ‘ಕೆ.ಎಲ್.ರಾಹುಲ್ ಟೀಂ ಇಂಡಿಯಾದ ಮುಂದಿನ ನಾಯಕ’

    ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್‌ಗೆ ಏನಾದರೂ ನೀಡಬೇಕು ಎಂದು ನನಗೆ ಅನಿಸಿತ್ತು. ಹಾಗಾಗಿ ಅವರಿಗೆ ಪೂಮಾ ಶೂಗಳನ್ನು ನೀಡಲು ಬಯಸಿದ್ದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಕಾರ್ಯದಲ್ಲಿ ತೊಡಗಿಕೊಳ್ಳಲು ಪ್ರಯತ್ನಿಸುವುದು ಮುಖ್ಯವಾಗಿದೆ. ಕೊರೊನಾ ವಿರುದ್ಧದ ಹೋರಾಟವು ಸಾಮೂಹಿಕವಾಗಿದೆ’ ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ಕನ್ನಡಿಗ ಕೆಎಲ್ ರಾಹುಲ್ ತಮ್ಮ ಬ್ಯಾಟ್, ಹೆಲ್ಮೇಟ್, ಗ್ಲೌಸ್, ಪ್ಯಾಡ್ ಸೇರಿದಂತೆ ಕಿಟ್ ಅನ್ನು ಹರಾಜಿಗೆ ನೀಡಿದ್ದರು. ಈ ಹರಾಜು ಪ್ರಕ್ರಿಯೆಯಲ್ಲಿ ಅವರ ಬ್ಯಾಟ್ 2.64 ಲಕ್ಷ ರೂ.ಗೆ ಮಾರಾಟವಾಗಿತ್ತು. ಕ್ರಿಕೆಟ್ ಕಿಟ್‍ಗಳಿಂದ ಕೆ.ಎಲ್.ರಾಹುಲ್ ಒಟ್ಟು 8 ಲಕ್ಷ ರೂ.ಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದರು. ಈ ಹಣವನ್ನು ಅವೇರ್ ಫೌಂಡೇಷನ್ ಮೂಲಕ ಬಡ ಮಕ್ಕಳ ಕಲ್ಯಾಣಕ್ಕಾಗಿ ಬಳಸಲು ನೀಡಿ ಮಾನವೀಯತೆ ಮೆರೆದಿದ್ದರು.

  • ಆಂಧ್ರದಿಂದ ವಲಸೆ- ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ

    ಆಂಧ್ರದಿಂದ ವಲಸೆ- ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ

    ಬಳ್ಳಾರಿ: ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆಂಧ್ರ ಗಡಿ ಭಾಗದಿಂದ ವಲಸೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆಶಾ ಕಾರ್ಯಕರ್ತೆಯರು ಮುಂದಾದಗ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದೇಶ ಪೂರಕವಾಗಿ ಕ್ವಾರಂಟೈನ್ ಮಾಡುತಿದ್ದಾರೆ ಎಂದು ಆರೋಪಿಸಿ ಕೊರೊನಾ ವಾರಿಯರಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

    ಆಂಧ್ರ ಪ್ರದೇಶದ ಗುಂಟೂರು ಹಾಗೂ ಪ್ರಕಾಶಂ ಜಿಲ್ಲೆಯಿಂದ ಕಾರ್ಮಿಕರು ವಲಸೆ ಬಂದಿದ್ದರು. ಮುಂಜಾಗ್ರತಾ ಕ್ರಮವಾಗಿ ಕಾರ್ಮಿಕರ ಮಾಹಿತಿ ಪಡೆದು, ಕ್ವಾರಂಟೈನ್ ಮಾಡಲು ಕೊರೊನಾ ವಾರಿಯರ್ಸ್ ಮುಂದಾಗಿದ್ದಾರೆ. ಇಷ್ಟಕ್ಕೆ ನಾಡಂಗ ಗ್ರಾಮದ ಕಲೆ ಜನರು ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

  • ಕೊರೊನಾ ವಾರಿಯರ್ಸ್ ಮೇಲೂ ಮಹಾಮಾರಿ ಕೊರೊನಾ ಕರಿನೆರಳು

    ಕೊರೊನಾ ವಾರಿಯರ್ಸ್ ಮೇಲೂ ಮಹಾಮಾರಿ ಕೊರೊನಾ ಕರಿನೆರಳು

    ಬಳ್ಳಾರಿ: ಗಣಿನಾಡಿನ ಬಳ್ಳಾರಿ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿನಲ್ಲಿ ಕೊರೊನಾ ವಾರಿಯರ್ಸ್ ಸೇವೆಯಲ್ಲಿ ತೊಡಗಿಕೊಂಡಿದ್ದ ಪುರುಷ ಸ್ಟಾಫ್ ನರ್ಸ್ ಒಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

    ಇದಕ್ಕೂ ಮುನ್ನ ಗಣಿ ಜಿಲ್ಲೆಯಲ್ಲಿ 36 ಪಾಸಿಟಿವ್ ಕೇಸ್‍ಗಳಿದ್ದವು. ಇದೀಗ ಅದರ ಸಂಖ್ಯೆ 37ಕ್ಕೆ ಜಿಗಿದಿದೆ. ಈವರೆಗೂ 15 ಮಂದಿ ಗುಣಮುಖರಾಗಿದ್ದು, ಕೇವಲ ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ. ಐಸೊಲೇಷನ್ ನಲ್ಲಿರುವವರ ಸಂಖ್ಯೆ 21ಕ್ಕೇ ಏರಿಕೆಯಾಗಿದೆ.

    ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೊಲೇಷನ್ ಸೇವೆಯಲ್ಲಿ ತೊಡಗಿಕೊಂಡಿದ್ದ 14 ಮಂದಿಯನ್ನು ನಿನ್ನೆಯ ದಿನ ಗಂಟಲು ದ್ರವ ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 13 ನೆಗೆಟಿವ್ ಬಂದಿದ್ದು, ಕೇವಲ ಒಂದು ಮಾತ್ರ ಪಾಸಿಟಿವ್ ಬಂದಿದೆ. ಕಳೆದ 14 ದಿನಗಳ ಕಾಲ ಕೊರೊನಾ ವಾರ್ಡಿನಲ್ಲಿ ಡಿ ಗ್ರೂಪ್ ನೌಕರರಿಗೆ ಟೆಸ್ಟ್ ಮಾಡಲಾಗಿತ್ತು. ವರದಿ ಬಂದ ಬಳಿಕ ಕೊರೊನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

    ಈ ಮೂಲಕ ಕೊರೊನಾ ವಾರಿಯರ್ಸ್ ಗೂ ಸೋಂಕು ತಗುಲಿದ್ದು ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಐಸೊಲೇಷನ್ ವಾರ್ಡಿನಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ವಾರಿಯರ್ಸ್ ಗೆ ಸೋಂಕು ತಗುಲಿದ್ದು ಹೇಗೆ ಎನ್ನುವುದು ಮಾತ್ರ ಈವರೆಗೂ ನಿಗೂಢವಾಗಿದೆ.

  • ರಸ್ತೆಯುದ್ದಕ್ಕೂ ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಟಿ

    ರಸ್ತೆಯುದ್ದಕ್ಕೂ ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಟಿ

    ನೆಲಮಂಗಲ: ಕೋವಿಡ್-19 ವಿರುದ್ಧ ಪ್ರತಿನಿತ್ಯ ಹೋರಾಟ ನಡೆಸುತ್ತಿರುವ, ಕೊರೊನಾ ವಾರಿಯರ್ಸ್ ಗೆ ಜನರಿಂದ ಪುಷ್ಪವೃಷ್ಟಿ ನಡೆಸಲಾಯಿತು.

    ಸಿಎಂ ರಾಜಕೀಯ ಕಾರ್ಯದರ್ಶಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪುಷ್ಪವೃಷ್ಟಿ ನಡೆದಿದೆ. ಈ ವೇಳೆ ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಸ್ತೆಯುದ್ದಕ್ಕೂ ಹೂವಿನ ಸುರಿಮಳೆಗೈದ ಸಾರ್ವಜನಿಕರು ಕರೋನ ವಾರಿಯರ್ಸ್ ಗೆ ಸಲಾಂ ಹೇಳಿದರು. ರಸ್ತೆಯಲ್ಲಿ ಸಾಲುಗಟ್ಟಿ ನಿಂತು ಧನ್ಯವಾದ ಅರ್ಪಿಸಿದ ಸಾರ್ವಜನಿಕರು ಮಕ್ಕಳ, ಇಡೀ ದಾಸನಪುರ ಹೋಬಳಿ ಸಾರ್ವಜನಿಕರಿಂದ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸಿದರು.

    ಸಾಮಾಜಿಕ ಅಂತರ ಕಾಯ್ದುಕೊಂಡು ಸಾವಿರಾರು ಜನರಿಂದ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸಿದರು. ರಸ್ತೆಗಳಲ್ಲಿ ಪೆರೇಡ್ ಮೂಲಕ ಕೊರೋನ ವೈರಸ್ ನ ಜಾಗೃತಿ ಮೂಡಿಸಿದ ವಾರಿಯರ್ಸ್ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.