Tag: Coronavirus

  • ಕೊರೊನಾ ಬಳಿಕ ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆ

    ಕೊರೊನಾ ಬಳಿಕ ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆ

    – ಬಾವಲಿ ಮೂಲಕ ಮನುಷ್ಯರಿಗೆ ಹರಡುವ ವೈರಾಣು

    ಬೀಜಿಂಗ್: ಹೆಮ್ಮಾರಿ ಕೊರೊನಾ ಬಳಿಕ ಚೀನಾದಲ್ಲಿ ಮತ್ತೊಂದು ಮಹಾಮಾರಿ ವೈರಸ್ ಪತ್ತೆಯಾಗಿದೆ.

    ಬಾವಲಿ ಮೂಲಕ ಮನುಷ್ಯರಿಗೆ ಹರಡುವ ಎಚ್‌ಕೆಯು5-ಸಿಒವಿ-2 ಎಂಬ ವೈರಾಣು ಇದಾಗಿದೆ. ಈ ವೈರಸ್ ಮೆರ್ಬೆಕೊವೈರಸ್ ಉಪಜಾತಿಗೆ ಸೇರಿದ ಕೊರೊನಾ ವೈರಸ್ ಆಗಿದ್ದು, ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್‌ಗೆ ಕಾರಣವಾಗುವ ವೈರಸ್ ಒಳಗೊಂಡಿದೆ.

    ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿದೆ. ಮಾನವನ ಉಸಿರಾಟ ವ್ಯವಸ್ಥೆ ಮೇಲೆ ಪರಿಣಾಮ ಬೀರಬಲ್ಲದ್ದಾಗಿದೆ.

  • ಐದು ತಿಂಗಳ ಬಳಿಕ ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣದಲ್ಲಿ ಏರಿಕೆ

    ಐದು ತಿಂಗಳ ಬಳಿಕ ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣದಲ್ಲಿ ಏರಿಕೆ

    ನವದೆಹಲಿ: ಕಳೆದ ಐದು ತಿಂಗಳಿಂದ ದಿನದ ವರದಿಯಲ್ಲಿ 2,000 ಗಡಿ ದಾಟಿರದ ಕೊರೋನಾ (coronavirus) ಪ್ರಕರಣಗಳು ಕಳೆದ 24 ಗಂಟೆಯಲ್ಲಿ ಏರಿಕೆ ಕಂಡಿದೆ. ದೇಶದಲ್ಲಿ 2151 ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ದೇಶದಲ್ಲಿ ಸಕ್ರಿಯ ಪ್ರಕರಣಗಳು 11,903 ಎಂದು ಕೇಂದ್ರ ಆರೋಗ್ಯ ಸಚಿವಾಯ (Union health ministry) ತಿಳಿಸಿದೆ.

    ಕಳೆದ ಅಕ್ಟೋಬರ್ 28ರಂದು ಒಂದೇ ದಿನ ದೇಶದಲ್ಲಿ 2208 ಕೊರೋನಾ ಪ್ರಕರಣಗಳು ದಾಖಲಾಗಿದ್ದವು. ದಿನ ನಿತ್ಯದ ಪಟ್ಟಿಯಲ್ಲಿ ಕೊರೋನಾ ಪ್ರಕರಣ 1.51% ಇದ್ದು, ಕರ್ನಾಟಕದಲ್ಲಿ (Karnataka) ಒಂದು, ಮಹಾರಾಷ್ಟ್ರದಲ್ಲಿ (Maharashtra) ಮೂರು ಹಾಗೂ ಕೇರಳದಲ್ಲಿ (Kerala) ಒಂದು ಸಾವಾಗಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾದಿಂದಾಗಿ ಸಾವಿಗೀಡಾದವರ ಸಂಖ್ಯೆ 5,30,848ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣ- ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ವಶಕ್ಕೆ

    ಪ್ರಕರಣಗಳು ಏರುತ್ತಿರುವ ನಡುವೆಯು ಚೇತರಿಕೆಗೊಳ್ಳುವವರ ಪ್ರಮಾಣ 98.78% ಇದೆ. ದೇಶಾದ್ಯಂತ 220.65 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು

  • 253 ಕೊರೊನಾ ಪ್ರಕರಣ – 611 ಮಂದಿ ಡಿಸ್ಚಾರ್ಜ್

    253 ಕೊರೊನಾ ಪ್ರಕರಣ – 611 ಮಂದಿ ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 253 ಜನರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. 611 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

    ಇದುವರೆಗೆ 39,19,766 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 6805 ಜನರು ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದಾರೆ. ಇಲ್ಲಿವರೆಗೂ 6,805 ಜನರಿಗೆ ಕೊರೊನಾ ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ಇಂದು ರಾಜ್ಯದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.3.71 ಇದ್ದು, ಮೃತರ ಪ್ರಮಾಣ ಶೇ.0.00 ಇದೆ. ಇದನ್ನೂ ಓದಿ:  ಇಂದಿರಾಗಾಂಧಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿದ್ರು: ಬೊಮ್ಮಾಯಿ 

    ಇಂದು 60,710 ಜನರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಒಟ್ಟು 6,805 ಸ್ಯಾಂಪಲ್(ಆರ್‌ಟಿಪಿಸಿಆರ್ 4,213 + 2,592 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಹೆಲ್ತ್ ಬುಲೆಟಿನ್ ವರದಿಗಳ ಪ್ರಕಾರ ಬೆಂಗಳೂರು ನಗರ ಒಂದರಲ್ಲೇ 236 ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಗ್ರಾಮಾಂತರ 02, ಬೀದರ್‌ 01, ದಕ್ಷಿಣ ಕನ್ನಡ 02, ಧಾರವಾಡ 01, ಕಲಬುರಗಿ 02, ಕೋಲಾರ 2, ಮಂಡ್ಯ 01, ಮೈಸೂರು 01, ರಾಮನಗರ 02, ತುಮಕೂರು 01, ಉಡುಪಿ 2 ಮತ್ತು ಉತ್ತರ ಕನ್ನಡ 02 ಕೊರೊನಾ ಪ್ರಕರಣ ಪತ್ತೆಯಾಗಿದೆ.

    Live Tv

  • ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    ಮುಂಬೈ: ಕೊರೊನಾ ವೈರಸ್ ಉಪ ತಳಿ ಓಮಿಕ್ರಾನ್‍ನಿಂದ ಈಗ ಮತ್ತಷ್ಟು ಉಪ ತಳಿಗಳು ಪತ್ತೆಯಾಗಿದ್ದು, BA.2 ಗಿಂತ BA.2.12 ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ಉನ್ನತ ಸಾರ್ವಜನಿಕ ಆರೋಗ್ಯ ತಜ್ಞರು ತಿಳಿಸಿದ್ದಾರೆ. ಈ ಹೊಸ ತಳಿ ಸೋಂಕಿಗೆ ತುತ್ತಾಗಿ ಆಸ್ಪತ್ರೆ ದಾಖಲಾಗುವ ರೋಗಿಗಳ ಮೇಲೆ ವಿಶೇಷ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

    INSACOG ಮೂಲಗಳ ಪ್ರಕಾರ ಭಾರತದಲ್ಲಿ ಪತ್ತೆಯಾಗುತ್ತಿರುವ ಸೋಂಕಿತರಲ್ಲಿ ಹೆಚ್ಚು BA.2.12 ತಳಿ ಪತ್ತೆಯಾಗುತ್ತಿದ್ದು ಈ ಪ್ರಮಾಣ ದೆಹಲಿಯಲ್ಲಿ ಹೆಚ್ಚಿದೆ. ಇನ್ನೂ ಅಧ್ಯಯನಗಳು ನಡೆಯುತ್ತಿರುವ ಹಿನ್ನಲೆ ಇದರ ತೀವ್ರತೆ ಬಗ್ಗೆ ಈಗಲೇ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

    ಈ ಬಗ್ಗೆ ಮಾತನಾಡಿರುವ ವೈರಲಾಜಿಸ್ಟ್ ಡಾ.ಶಾಹೀದ್ ಜಮೀಲ್, BA.2.12 ಓಮಿಕ್ರಾನ್ ಉಪ ತಳಿ BA.2 ನ ಉಪ ತಳಿಯಾಗಿದ್ದು ಅಮೇರಿಕಾದಲ್ಲಿ ಹೆಚ್ಚು ಹರಡುತ್ತಿದೆ ಎಂದು ತಿಳಿಸಿದ್ದಾರೆ. ಅದಾಗ್ಯೂ ಭಾರತದಲ್ಲಿ ಇದು ಹೆಚ್ಚು ಪ್ರಸರಿಸುತ್ತಿಲ್ಲ. BA.1ಗೆ ಹೋಲಿಸಿದರೆ 10%, BA.2ಗೆ ಹೋಲಿಸಿದರೆ 20% ಹೆಚ್ಚು ವೇಗವಾಗಿ ಹರಡುತ್ತಿದೆ. ಸೀಮಿತ ಡಾಟಾ ಇರುವ ಕಾರಣ ತೀವ್ರತೆ ಬಗ್ಗೆ ಸ್ಪಷ್ಟತೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ನವಾಬ್‌ ಮಲಿಕ್‌ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಹೊಸ ರೂಪಾಂತರ ವೈರಸ್‍ಗಳು ಮೂಲ ವೈರಸ್‍ಕ್ಕಿಂತ ಹೆಚ್ಚು ವೇಗವಾಗಿ ಹರಡಬಲ್ಲದು. ಆದರೆ BA.2.12 ತೀವ್ರತೆ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಇದರ ಕ್ಲಿನಿಕಲ್ ಡಾಟಾ ಅಗತ್ಯ ಎಂದು ಮತ್ತೊರ್ವ ವೈರಲಾಜಿಸ್ಟ್ ಗಗನ್ ದೀಪ್ ಹೇಳಿದ್ದಾರೆ. ನ್ಯೂಯಾರ್ಕ್, ದಕ್ಷಿಣ ಆಫ್ರಿಕಾದಲ್ಲಿ ಈ ರೂಪಾಂತರಿ ವೇಗವಾಗಿ ಹರಡುತ್ತಿದ್ದು, ಇದು ಪರಿಣಾಮಕಾರಿಯಾಗಿರಬಹುದು ಎಂದು ಡಾ. ಸಂಜಯ್ ಪೂಜಾರಿ ಹೇಳಿದ್ದಾರೆ. ಇದನ್ನೂ ಓದಿ: ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ಭಾರತದಲ್ಲಿ ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ನಿತ್ಯ ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ಪಂಜಾಬ್ ಹರಿಯಾಣ ದೆಹಲಿ ಸೇರಿದಂತೆ ಹಲವು ರಾಜ್ಯಗಳು ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಿವೆ.

  • 5-12 ವರ್ಷದ ಮಕ್ಕಳಿಗೂ ಶೀಘ್ರದಲ್ಲಿ ವ್ಯಾಕ್ಸಿನ್?

    5-12 ವರ್ಷದ ಮಕ್ಕಳಿಗೂ ಶೀಘ್ರದಲ್ಲಿ ವ್ಯಾಕ್ಸಿನ್?

    ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕಣಗಳು ಮತ್ತೆ ಹೆಚ್ಚುತ್ತಿರುವ ಹೊತ್ತಲ್ಲೆ ವ್ಯಾಕ್ಸಿನ್ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ತಯಾರಿ ಆರಂಭಗೊಂಡಿದೆ. 12-14 ವರ್ಷದ ಮಕ್ಕಳಿಗೆ ನಡೆಯುತ್ತಿರುವ ವ್ಯಾಕ್ಸಿನೇಷನ್ ಅಭಿಯಾನ ಯಶಸ್ಸು ಕಂಡ ಬಳಿಕ ಈಗ 5-12 ವರೆಗಿನ ಮಕ್ಕಳಿಗೆ ವ್ಯಾಕ್ಸಿನ್ ಅಭಿಯಾನ ವಿಸ್ತರಿಸುವ ಚಿಂತನೆ ಶುರುವಾಗಿದೆ.

    vaccine

    ಈ ಸಂಬಂಧ ಚರ್ಚಿಸಲು ಡಿಸಿಜಿಐನ ವಿಷಯ ತಜ್ಞರ ತಂಡ ಇಂದು ವಿಶೇಷ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ 5-12 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಕಾರ್ಬೆವಾಕ್ಸ್ ವ್ಯಾಕ್ಸಿನ್ ಮಕ್ಕಳಿಗೆ ನೀಡಲು ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ

    ಜನವರಿ 3 ರಿಂದ ಭಾರತದಲ್ಲಿ ಅಪ್ರಾಪ್ತ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಮೊದಲು 15-18 ಬಳಿಕ 12-15 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಯಿತು. ಈಗ 5-12 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ವ್ಯಾಕ್ಸಿನ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹಣದುಬ್ಬರದ ಬಗ್ಗೆ ಅರ್ಥಹೀನ ಮಾತನಾಡಿದ್ದಾರೆ: ದಿನೇಶ್ ಗುಂಡೂರಾವ್

    ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಕೋವಿಡ್ -19 ಸೋಂಕುಗಳು ಹೆಚ್ಚಾದ ಬಳಿಕ ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣ ಸೇರಿದಂತೆ ಹಲವಾರು ರಾಜ್ಯಗಳು ಮತ್ತು ಮಹಾನಗರಗಳಲ್ಲಿ ಮತ್ತೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿವೆ.

  • ಕೊರೊನಾ ಮತ್ತೆರಡು ಹೊಸ ರೂಪ ಪತ್ತೆ: ಏನಿದು ಬಿಎ-1, ಬಿಎ-2..?, ಲಕ್ಷಣಗಳೇನು..?

    ಕೊರೊನಾ ಮತ್ತೆರಡು ಹೊಸ ರೂಪ ಪತ್ತೆ: ಏನಿದು ಬಿಎ-1, ಬಿಎ-2..?, ಲಕ್ಷಣಗಳೇನು..?

    ಜೆರುಸಲೇಂ/ಸೌತ್ ಕೊರಿಯಾ: ಈಗಾಗಲೇ ಡೆಲ್ಟಾ, ಡೆಲ್ಟಾಪ್ಲಸ್, ಓಮಿಕ್ರಾನ್ ತಳಿಗಳಾಗಿ ರೂಪ ಬದಲಿಸಿರುವ ಕೊರೊನಾ ಸೋಂಕು ಇದೀಗ ಮತ್ತೆ ಹೊಸ ರೂಪ ಬದಲಿಸಿದೆ. ದೇಶ – ವಿದೇಶಗಳಲ್ಲಿ ಮತ್ತೆ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಕಳೆದ ಒಂದೇ ವಾರದಲ್ಲಿ ವಿವಿಧೆಡೆಯಿಂದ 11 ಮಿಲಿಯನ್‍ನಷ್ಟು ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.

    ಇಸ್ರೇಲ್‍ನ ಆರೋಗ್ಯ ಸಚಿವಾಲಯವು ಎರಡು ಹೊಸ ಕೋವಿಡ್ ರೂಪಾಂತರ ಪ್ರಕರಣಗಳನ್ನು ದಾಖಲಿಸಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಇದರಿಂದ ಹೆಚ್ಚು ಆತಂಕ ಪಡುವ ಅವಶ್ಯಕತೆಯಿಲ್ಲವೆಂದೂ ಅವರು ಸಲಹೆ ನೀಡಿದ್ದಾರೆ.

    ಕೋವಿಡ್-19 ರೂಪಾಂತರಿಯ ಓಮಿಕ್ರಾನ್ ಆವೃತ್ತಿಯ ಎರಡು ಉಪ-ವ್ಯತ್ಯಯಗಳನ್ನು ಸಂಯೋಜಿಸುವ ಈ ರೂಪಾಂತರಿಗಳನ್ನು ಸ್ಟ್ರೈನ್ ಬಿಎ-1 ಹಾಗೂ ಬಿಎ-2 ಎಂದು ಹೆಸರಿಸಲಾಗಿದೆ. ಇಸ್ರೇಲ್‍ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಮೇಲೆ ಆರ್‍ಟಿಪಿಸಿಆರ್ ಪರೀಕ್ಷೆ ನಡೆಸಿದ ವೇಳೆ ರೊಪಾಂತರಿ ಪತ್ತೆಯಾಗಿದೆ. `ಈ ರೂಪಾಂತರವು ಪ್ರಪಂಚದಾದ್ಯಂತ ಇನ್ನೂ ತಿಳಿದಿಲ್ಲ’ ಎಂಬ ಕುತೂಹಲಕಾರಿ ಮಾಹಿತಿಯನ್ನು ಆರೋಗ್ಯ ಸಚಿವಾಲಯವು ಹೊರಹಾಕಿದೆ. ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯ ಸೌಮ್ಯ ಲಕ್ಷಣಗಳಿಂದ ಬಳಲುತ್ತಿದ್ದ ಇಬ್ಬರಲ್ಲಿ ಈ ರೂಪಾಂತರಿಯನ್ನು ಪತ್ತೆಹಚ್ಚಲಾಗಿದೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ‘ಜೇಮ್ಸ್’ ಸಿನಿಮಾ: ಅಭಿಮಾನಿಗಳ ಫಸ್ಟ್ ರಿಯ್ಯಾಕ್ಷನ್

    ಭಾರತದಲ್ಲಿ ನಿಗಾ ವಹಿಸಲು ಸೂಚನೆ: 
    ಯುರೋಪ್ ಮತ್ತು ಪೂರ್ವ ಏಷ್ಯಾದ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಹಾಗೂ ಜಾಗರೂಕತೆ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,539 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಉನ್ನತ ಸಭೆ ನಡೆಸಿರುವ ಅವರು, ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆಗಳನ್ನು ಹೆಚ್ಚಿಸುವಂತೆಯೂ ಸೂಚನೆ ನೀಡಿದ್ದಾರೆ.

    ಒಂದೇ ದಿನ 6 ಲಕ್ಷ ಕೊರೊನಾ ಪ್ರಕರಣ!
    ದಕ್ಷಿಣ ಕೊರಿಯಾದಲ್ಲಿ ಕೊರೊನಾ ರೂಪಾಂತರಿಯಾದ ಓಮಿಕ್ರಾನ್ ಆರ್ಭಟವು ಮುಂದುವರಿದಿದ್ದು, ಬುಧವಾರ ಒಂದೇ ದಿನ 6 ಲಕ್ಷಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ದಕ್ಷಿಣ ಕೊರಿಯಾದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಕೊರೊನಾ ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ. ಇದನ್ನೂ ಓದಿ:  ರವಿವರ್ಮಾ ಸ್ಟಂಟ್‌ಗೆ ಪವರ್ ಸ್ಟಾರ್ ಫಿದಾ: ಫೋನ್ ಮಾಡಿ ಪುನೀತ್ ಹೇಳಿದ್ದೇನು?

    ಕೊರಿಯಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಸಂಸ್ಥೆ ಈ ಸಂಬಂಧ ಮಾಹಿತಿ ನೀಡಿದ್ದು, ದಕ್ಷಿಣ ಕೊರಿಯಾದಲ್ಲಿ ಮಂಗಳವಾರ 4,00,741 ಪ್ರಕರಣಗಳು ಪತ್ತೆಯಾಗಿತ್ತು. ಆದರೆ ಬುಧವಾರ 6,21,328 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 429 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಒಂದೇ ದಿನದಲ್ಲಿ ಶೇ.55 ರಷ್ಟು ಕೊರೊನಾ ಸೋಂಕು ವ್ಯಾಪಿಸಿರುವುದು ಜನರಲ್ಲಿ ಆತಂಕ ಮೂಡಿಸಿದೆ.

    ಈವರೆಗೆ ದಕ್ಷಿಣ ಕೊರಿಯಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 82,50,592ಕ್ಕೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಸರ್ಕಾರ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಕಟ್ಟಿನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.

  • ರಾಜ್ಯದಲ್ಲಿ ಇಂದು 1,137 ಕೊರೊನಾ ಪಾಸಿಟಿವ್ – 20 ಸಾವು

    ರಾಜ್ಯದಲ್ಲಿ ಇಂದು 1,137 ಕೊರೊನಾ ಪಾಸಿಟಿವ್ – 20 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನ ಇಳಿಕೆಯಾಗುತ್ತಿದ್ದು, 1,137 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಸೋಂಕಿನಿಂದ 20 ಜನರು ಸಾವನ್ನಪ್ಪಿದ್ದಾರೆ.

    ರಾಜ್ಯದಲ್ಲಿ ಇಂದು 3,870 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ಒಟ್ಟು 38,82,340 ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 13,431 ಜನರಿಗೆ ಕೊರೊನಾ ಪಾಸಿಟಿವ್ ಇದೆ. ಇದುವರೆಗೂ ರಾಜ್ಯದಲ್ಲಿ 39,777 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ರೇಟ್ ಪ್ರಮಾಣ 1.43%ಗೆ ಇಳಿದಿದೆ. 1.75% ಸೋಂಕಿನಿಂದ ಜನರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮಕ್ಕೆ ಎತ್ತಿನಗಾಡಿ ಏರಿ ಬಂದ ಸುಧಾಕರ್

    ಬೆಂಗಳೂರಿನಲ್ಲಿಯೂ ಸೋಂಕಿನ ಸಂಖ್ಯೆ ಕಡಿಮೆಯಾಗಿದ್ದು, 646 ಪಾಸಿಟಿವ್ ರೇಟ್ ಕಾಣಿಸಿಕೊಂಡಿದೆ. ಒಟ್ಟು 8 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

    ಹೆಲ್ತ್ ಬುಲೆಟಿನ್ ಪ್ರಕಾರ ಬಾಗಲಕೋಟೆ 07, ಬಳ್ಳಾರಿ 19, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 05, ಬೆಂಗಳೂರು ನಗರ 646, ಬೀದರ್ 5, ಚಾಮರಾಜನಗರ 13, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 07, ಚಿತ್ರದುರ್ಗ 27, ದಕ್ಷಿಣ ಕನ್ನಡ 33, ದಾವಣಗೆರೆ 2, ಧಾರವಾಡ 18, ಗದಗ 2, ಹಾಸನ 21, ಹಾವೇರಿ 12, ಕಲಬುರಗಿ 11, ಕೊಡಗು 28, ಕೋಲಾರ 06, ಕೊಪ್ಪಳ 07, ಮಂಡ್ಯ 28 ಮೈಸೂರು 64, ರಾಯಚೂರು 9, ರಾಮನಗರ 10, ಶಿವಮೊಗ್ಗ 28, ತುಮಕೂರು 35, ಉಡುಪಿ 21, ಉತ್ತರ ಕನ್ನಡ 09, ವಿಜಯಪುರ 17 ಹಾಗೂ ಯಾದಗಿರಿಯಲ್ಲಿ 2 ಹೊಸ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ‘ಫಸಲ್ ಭೀಮಾ ಯೋಜನೆ’ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಕೆ.ಸಿ.ನಾರಾಯಣಗೌಡ

  • ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕೋವಿಡ್ ಸೋಂಕಿತರಿಗೆ ಸರ್ಕಾರದ ಪರಿಹಾರ ಇಲ್ಲ: ಮಾಧುಸ್ವಾಮಿ

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕೋವಿಡ್ ಸೋಂಕಿತರಿಗೆ ಸರ್ಕಾರದ ಪರಿಹಾರ ಇಲ್ಲ: ಮಾಧುಸ್ವಾಮಿ

    ತುಮಕೂರು: ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಗೆ ಸೇರದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು, ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಬಳಿಕ ಖಾಸಗಿ ಆಸ್ಪತ್ರೆಗೆ ರೆಫರ್ ಆಗಿರಬೇಕು. ಇವೆರಡೂ ಆಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದರ ಬಿಲ್ ಅನ್ನು ಸರ್ಕಾರಕ್ಕೆ ಕಳುಹಿಸಿದರೆ ಪರಿಹಾರ ನೀಡಲಾಗುವುದಿಲ್ಲ ಹಾಗೂ ಮರಣಾನಂತರ ಸಿಗುವ ಸೌಲಭ್ಯಗಳನ್ನು ಕೂಡ ನೀಡಲಾಗುವುದಿಲ್ಲ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಎಣ್ಣೆ ದರ ಭಾರೀ ಇಳಿಕೆ – ಮನೆಯಲ್ಲೇ ಮಿನಿಬಾರ್‌ಗೆ ಅನುಮತಿ

    ಬುಧವಾರ ರಾಜ್ಯದಲ್ಲಿ 40,499 ಕೇಸ್ ವರದಿಯಾಗಿದ್ದು, ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಒಟ್ಟು 24,135 ಮಂದಿಗೆ ಸೋಂಕು ತಗುಲಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,84,000ಕ್ಕೆ ತಲುಪಿದೆ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

  • 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?

    12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?

    ನವದೆಹಲಿ: ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಿಂದ 12 ರಿಂದ 14 ವರ್ಷದ ಮಕ್ಕಳಿಗೂ ವ್ಯಾಕ್ಸಿನ್ ನೀಡಲಾಗುವುದು ಎಂದು ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಕೋವಿಡ್-19 ಕಾರ್ಯನಿರತ ಗುಂಪಿನ ಅಧ್ಯಕ್ಷ ಡಾ.ಎನ್.ಕೆ ಅರೋರಾ ಹೇಳಿದ್ದಾರೆ.

     

     

    ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, 15 ರಿಂದ 17 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಕಾರ್ಯ ಯಶಸ್ವಿಯಾಗಿದೆ. ಹಲವು ರಾಜ್ಯಗಳು ಪೂರ್ಣ ಪ್ರಮಾಣದಲ್ಲಿ ಮಕ್ಕಳಿಗೆ ಮೊದಲ ಡೋಸ್ ನೀಡಿವೆ. ದೇಶದ್ಯಾಂತ ಈವರೆಗೂ 3.31 ಕೋಟಿ ಮಕ್ಕಳಿಗೆ ಮೊದಲ ಡೋಸ್ ಲಸಿಕೆ ನೀಡಿದೆ. 13 ದಿನಗಳಲ್ಲಿ 45% ಮಕ್ಕಳು ವ್ಯಾಕ್ಸಿನ್ ಪಡೆದಿದ್ದು, ಜನವರಿ ಅಂತ್ಯದ ವೇಳೆಗೆ 7.4 ಕೋಟಿ ಮಕ್ಕಳಿಗೆ ಮೊದಲ ಡೋಸ್ ನೀಡುವ ಗುರಿ ಹೊಂದಿದೆ ಎಂದಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಲಾಕ್‍ಡೌನ್ ಬೇಡ- ಸರ್ಕಾರಕ್ಕೆ ಪ್ರತಾಪ್ ಸಿಂಹ ಒತ್ತಾಯ

    ಮೊದಲ ಡೋಸ್ ಬಳಿಕ ಫೆಬ್ರವರಿಯಲ್ಲಿ ಎರಡನೇ ಡೋಸ್‍ಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಎರಡನೇ ಡೋಸ್ ಕೂಡಾ ನೀಡಲಾಗುವುದು. ಈ ಪ್ರಕ್ರಿಯೆ ಬಳಿಕ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಚೇತರಿಕೆಗಾಗಿ ವಿಶೇಷ ಪೂಜೆ ಸಲ್ಲಿಸುತ್ತಿರುವ ಆಶಾ ಭೋಂಸ್ಲೆ

  • ಕಾಫಿನಾಡಿನ ಎರಡು ವಸತಿ ಶಾಲೆಯ 55 ಮಕ್ಕಳಿಗೆ ಕೊರೊನಾ

    ಕಾಫಿನಾಡಿನ ಎರಡು ವಸತಿ ಶಾಲೆಯ 55 ಮಕ್ಕಳಿಗೆ ಕೊರೊನಾ

    ಚಿಕ್ಕಮಗಳೂರು: ಜಿಲ್ಲೆಯ ಎರಡು ವಸತಿ ಶಾಲೆಯ ಸುಮಾರು 55 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

    ನಗರದ ಕಲ್ಯಾಣ ನಗರದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ 17 ಮಕ್ಕಳು ಹಾಗೂ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 38 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆದರೆ ಮಕ್ಕಳಿಗೆ ಸೋಂಕು ಹರಡಲು ಕಾರಣವೇನು ಎಂದು ಜಿಲ್ಲಾಡಳಿತ ಗೊಂದಲಕ್ಕೊಳಗಾಗಿದೆ.

    ಇದು 1 ರಿಂದ 7ನೇ ತರಗತಿವರೆಗಿನ ವಸತಿ ಶಾಲೆಯಾಗಿದ್ದು, ವಿಸ್ತಾರವಾದ ಆವರಣವಿದೆ. ಮಕ್ಕಳ ಆಟ-ಪಾಠ ಎಲ್ಲಾ ಒಂದೇ ಕಾಂಪೌಂಡ್ ಒಳಗೆ ನಡೆಯುತ್ತದೆ. ಮಕ್ಕಳು ಹೊರಗೇ ಬಿಡುವುದಿಲ್ಲ. ಆದರೂ ಶಾಲೆ ಒಳಗೆ ಹೆಮ್ಮಾರಿ ಕೊರೊನಾ ಹೇಗೆ ಬಂದಿದೆ ಎನ್ನುವುದು ನಿಗೂಢವಾಗಿದ್ದು, ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ. ಇದನ್ನೂ ಓದಿ: ಸಿಎಂಗೆ ಕೊರೊನಾ – ಹೋಂ ಐಸೋಲೇಷನ್‍ಗೆ ಒಳಗಾದ ಸಚಿವ ಸುಧಾಕರ್

    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 424 ಮಕ್ಕಳಿದ್ದು, ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ 38 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ, ಯಾವ ಮಕ್ಕಳಲ್ಲಿಯೂ ಸೋಂಕಿನ ಲಕ್ಷಣಗಳಿಲ್ಲ. ಸದ್ಯಕ್ಕೆ ಶಾಲೆಯನ್ನೇ ಸೀಲ್‍ಡೌನ್‍ಗೊಳಿಸಿರುವ ಜಿಲ್ಲಾಡಳಿತ ಪ್ರತ್ಯೇಕ ಐಸೋಲೇಶನ್ ಮೂಲಕ ಮಕ್ಕಳಿಗೆ ಚಿಕಿತ್ಸೆ ಮಂದುವರೆಸಿದ್ದು, ಇಬ್ಬರು ನರ್ಸ್ ಹಾಗೂ ಓರ್ವ ವೈದ್ಯರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಶಾಲೆಗೆ ಭೇಟಿ ನೀಡಿರುವ ಶಾಸಕ ಎಂ.ಪಿ.ಕುಮಾರಸ್ವಾಮಿ ಮಕ್ಕಳ ಯೋಗಕ್ಷೇಮ ವಿಚಾರಿಸಿ ಪೋಷಕರು ಹಾಗೂ ಮಕ್ಕಳಿಗೆ ನಿಮ್ಮ ಜವಾಬ್ದಾರಿ ನಮ್ಮದ್ದು. ಯಾರೂ ಆತಂಕಕ್ಕೊಳಗಾಗಬೇಡಿ ಎಂದು ಧೈರ್ಯ ತುಂಬಿದ್ದಾರೆ.

    ಮತ್ತೊಂದೆಡೆ ಚಿಕ್ಕಮಗಳೂರು ನಗರದ ಅಂಬೇಡ್ಕರ್ ವಸತಿ ಶಾಲೆಯಲ್ಲೂ 17 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಲ್ಲೂ ಕೂಡ ಮಕ್ಕಳು ಎಲ್ಲೂ ಹೋಗಿಲ್ಲ. ಆದರೂ ಕೊರೊನಾ ಸೋಂಕು ಮಕ್ಕಳಿಗೆ ತಗುಲಿರುವುದು ಭವಿಷ್ಯದ ಆತಂಕಕ್ಕೆ ಕಾರಣವಾಗಿದೆ. ಈ ಶಾಲೆಯಲ್ಲಿ 214 ಜನ ಮಕ್ಕಳಿದ್ದಾರೆ. 194 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದಾಗ 17 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ. ಇದನ್ನೂ ಓದಿ: BJP ರಾಜ್ಯಾಧ್ಯಕ್ಷ, ರಾಷ್ಟ್ರಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್

    ಸರ್ಕಾರದ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ವಸತಿ ಶಾಲೆಗಳಲ್ಲಿ ಮಕ್ಕಳ ಪರೀಕ್ಷೆಗೆ ಮುಂದಾದಾಗ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹೇಗೆ ಬಂದಿರಬಹುದು ಎನ್ನುವ ಮಾಹಿತಿ ಸರ್ಕಾರಕ್ಕೆ ದೊರೆತ್ತಿಲ್ಲ. ಕಳೆದ ತಿಂಗಳಷ್ಟೇ ಜಿಲ್ಲೆಯ ನವೋದಯ ಶಾಲೆಯಲ್ಲಿ 104 ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿತ್ತು. ಒಂದೆಡೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಓಮಿಕ್ರಾನ್ ಕೇಸ್ ಕಂಡು ಜನ ಕಂಗಾಲಾಗಿದ್ದಾರೆ. ಮತ್ತೊಂದೆಡೆ ಜಿಲ್ಲೆಗೆ ಎಗ್ಗಿಲ್ಲದೆ ಬರುತ್ತಿರುವ ಪ್ರವಾಸಿಗರು ಕಾಫಿನಾಡಿಗರಿಗೆ ಮತ್ತಷ್ಟು ಭಯ ತರಿಸಿದ್ದಾರೆ. ಹಾಗಾಗಿ, ಜಿಲ್ಲೆಯ ಜನ ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಕೂಡಲೇ ಜಿಲ್ಲೆಗೆ ಬರುವ ಪ್ರವಾಸಿಗರನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


    Coronavirus, Childrens, Chikkamagaluru