Tag: Coronavirus

  • ಇಂದಿನಿಂದ ನಂದಿಬೆಟ್ಟ ಓಪನ್ – ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು

    ಇಂದಿನಿಂದ ನಂದಿಬೆಟ್ಟ ಓಪನ್ – ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು

    ಚಿಕ್ಕಬಳ್ಳಾಪುರ: ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟವನ್ನು ಇಂದಿನಿಂದ ಮತ್ತೆ ತೆರೆಯಲಾಗಿದ್ದು, ನಂದಿ ಬೆಟ್ಟ ವೀಕ್ಷಿಸಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.

    ಆಗಸ್ಟ್ 24 ರಂದು ಭೂ ಕುಸಿತ ಉಂಟಾಗಿಗಿ ನಂದಿಬೆಟ್ಟದ ರಸ್ತೆ ಕೊಚ್ಚಿ ಹೋಗಿತ್ತು. ಇದರಿಂದ ವಾಹನಗಳ ಸಂಚಾರ ಸಂಪೂರ್ಣ ಕಡಿತಗೊಂಡಿತ್ತು. ಈಗ 80 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಕೊಚ್ಚಿ ಹೋದ ರಸ್ತೆ ದುರಸ್ಥಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಮೂರು ತಿಂಗಳ ನಂತರ ನಂದಿಗಿರಿಧಾಮದ ಬಾಗಿಲನ್ನು ತೆರೆಯಲಾಗಿದ್ದು, ನಂದಿಬೆಟ್ಟಕ್ಕೆ ಪ್ರವಾಸಿಗರು ಆಗಮಿಸಿ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ- ಮೂರು ಮಕ್ಕಳು ಸಾವು

    ಮುಂಜಾನೆ ಚುಮು, ಚುಮು ಚಳಿ ಮಂಜಿನ ನಡುವೆ ಕಾರು ಹಾಗೂ ಬೈಕ್‍ಗಳಲ್ಲಿ ನೂರಾರು ಮಂದಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೊರೊನಾ ಹಾಗೂ ಓಮಿಕ್ರಾನ್ ವೈರಸ್ ಆತಂಕದ ಹಿನ್ನೆಲೆಯಲ್ಲಿ ವೀಕೆಂಡ್‍ನಲ್ಲಿ ನಿಬರ್ಂಧ ವಿಧಿಸಲಾಗಿದೆ. ಆದರೆ ಎರಡು-ಮೂರು ವಾರಗಳ ಕಾಲ ಪ್ರವಾಸಿಗರ ಆಗಮನದ ಸಂಖ್ಯೆಗೆ ಅನುಗುಣವಾಗಿ ವೀಕೆಂಡ್‍ನಲ್ಲಿ ಅವಕಾಶ ಕಲ್ಪಿಸಲು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ – ಇಂದಿನಿಂದ ಆಟೋ ದರ ಕಾಸ್ಟ್ಲಿ

  • ವಿದೇಶಗಳಲ್ಲಿ ಓಮಿಕ್ರಾನ್ ಅಬ್ಬರ – ರಾಜ್ಯದಲ್ಲಿ ವ್ಯಾಕ್ಸಿನ್ ಪಡೆಯಲು ಕ್ಯೂ ನಿಂತ ಜನ

    ವಿದೇಶಗಳಲ್ಲಿ ಓಮಿಕ್ರಾನ್ ಅಬ್ಬರ – ರಾಜ್ಯದಲ್ಲಿ ವ್ಯಾಕ್ಸಿನ್ ಪಡೆಯಲು ಕ್ಯೂ ನಿಂತ ಜನ

    ಬೆಂಗಳೂರು: ವಿದೇಶಗಳಲ್ಲಿ ಕೊರೊನಾ ಹೊಸ ರೂಪಾಂತರ ತಳಿ ಓಮಿಕ್ರಾನ್ ತನ್ನ ಆರ್ಭಟ ಶುರು ಮಾಡಿದೆ. ಈ ನಡುವೆ ರಾಜ್ಯದಲ್ಲಿ 3ನೇ ಅಲೆ ಭೀತಿಯಿಂದಾಗಿ ಜನ ವ್ಯಾಕ್ಸಿನ್ ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

    ದೇಶದಲ್ಲಿ ಕೊರೊನಾ ಎರಡನೇ ಅಲೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಮೂರನೇ ಅಲೆ ಇಲ್ಲ ಅಂದುಕೊಂಡಿದ್ದ ಜನತೆಗೆ ಇದೀಗ ಕೊರೊನಾ ಹೊಸ ರೂಪಾಂತರ ತಳಿ ಓಮಿಕ್ರಾನ್ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ, ನೃತ್ಯ ನಿರ್ದೇಶಕ ಶಿವಶಂಕರ್ ಕೊರೊನಾದಿಂದ ಸಾವು

    vaccine

    ಈಗಾಗಲೇ ಒಮಿಕ್ರಾನ್ ರೂಪಾಂತರಿ ವೈರಸ್ ನಿಧಾನವಾಗಿ ಅನೇಕ ದೇಶಗಳಲ್ಲಿ ಕಾಣಿಸಿಕೊಂಡು ತನ್ನ ಅಬ್ಬರವನ್ನ ಶುರು ಮಾಡಿಕೊಳ್ಳುತ್ತಿದೆ. ದಕ್ಷಿಣ ಆಪ್ರಿಕಾ, ಲಂಡನ್, ಹಾಂಕಾಂಗ್, ಕೆನಡಾ ಸೇರಿದಂತೆ ಹಲವೆಡೆ ರೂಪಾಂತರಿ ವೈರಸ್ ರೂಪ ತಾಳಿ ಅನೇಕ ಸಾವು ನೋವುಗಳನ್ನು ಉಂಟುಮಾಡುತ್ತಿದೆ.

    vaccine

    ಈಗ ಭಾರತವೂ ಹೈ ಅಲರ್ಟ್ ಆಗಿದ್ದು ನಮ್ಮ ದೇಶಕ್ಕೆ ಈ ರೂಪಾಂತರಿ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಮೂರನೇ ಅಲೆ ಶುರುವಾಗಿರುವ ಸಾಧ್ಯತೆ ಹೆಚ್ಚಾಗಿದ್ದು, ಕೊರೊನಾ ತಡೆಯಲು ಇರುವ ಮಾರ್ಗದಲ್ಲಿ ವ್ಯಾಕ್ಸಿನ್ ಕೂಡ ಬಹಳ ಪ್ರಮುಖವಾದ ಅಸ್ತ್ರ. ಇಷ್ಟು ದಿನ ಖಾಲಿ, ಖಾಲಿಯಾಗಿದ್ದ ವ್ಯಾಕ್ಸಿನ್ ಸೆಂಟರ್‌ಗಳು ಈಗ ಹೌಸ್ ಪುಲ್ ಆಗಿದ್ದು, ಜನ ಮೂರನೇ ಅಲೆಯ ಭೀತಿಯಿಂದ ವ್ಯಾಕ್ಸಿನ್ ಪಡೆಯಲು ಕ್ಯೂ ನಿಂತು ಕಾಯುತ್ತಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ತಡೆಗೆ ರಾಜ್ಯದಲ್ಲಿ ಕಟ್ಟೆಚ್ಚರ – ಇಂದು ಸುಧಾಕರ್ ನೇತೃತ್ವದಲ್ಲಿ ಸಭೆ

    vaccine

    ಚಾಮರಾಜಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಷ್ಟು ದಿನ 50 ರಿಂದ 60 ಜನ ಬಂದು ವ್ಯಾಕ್ಸಿನ್ ಪಡೆಯುತ್ತಿದ್ದರು. ಒಮಿಕ್ರಾನ್ ಆತಂಕ ಶುರುವಾಗಿರುವ ಕಾರಣ ಇಂದು ವ್ಯಾಕ್ಸಿನ್ ಡ್ರೈವ್ ಶುರುವಾಗಿ ಕೇವಲ 2 ಗಂಟೆಯೊಳಗೆ 120ಕ್ಕೂ ಹೆಚ್ಚು ಜನ ವ್ಯಾಕ್ಸಿನ್ ಪಡೆದಿದ್ದಾರೆ. ಇನ್ನೂ ನೂರಾರು ಜನ ವ್ಯಾಕ್ಸಿನ್ ಪಡೆಯಲು ಕ್ಯೂ ನಿಂತು ಕಾಯುತ್ತಿದ್ದಾರೆ.

  • ಓಮಿಕ್ರಾನ್ ಭಾರೀ ಡೇಂಜರ್ – ಹೊಸ ವೈರಸ್, ಹೊಸ ಲಕ್ಷಣ!

    ಓಮಿಕ್ರಾನ್ ಭಾರೀ ಡೇಂಜರ್ – ಹೊಸ ವೈರಸ್, ಹೊಸ ಲಕ್ಷಣ!

    ಬೆಂಗಳೂರು: ಡೆಡ್ಲಿ ಕೊರೊನಾ ಮತ್ತೆ ಕಮ್ ಬ್ಯಾಕ್ ಮಾಡಿದೆ. ಈ ಬಾರಿಯ ಹೊಸ ತಳಿ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ನಾಲ್ಕು ರಾಷ್ಟ್ರಗಳಲ್ಲಿ ಸೋಂಕು ಹಬ್ಬುತ್ತಿದ್ದಂತೆ ಭಾರತ ಸರ್ಕಾರವೂ ಫುಲ್ ಅಲರ್ಟ್ ಆಗಿದೆ. ಜೊತೆಗೆ ಕರ್ನಟಕ ಸೇರಿದಂತೆ ಎಲ್ಲಾ ರಾಜ್ಯಗಳು ಕೂಡ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    ಇಡೀ ಮನುಕುಲವನ್ನು 2 ವರ್ಷಗಳಿಂದ ಬಿಟ್ಟುಬಿಡದೆ ಕಾಡುತ್ತಿರುವ ಕೊರೊನಾ ಮತ್ತೆ ವಕ್ಕರಿಸಿದೆ. ಕೊರೊನಾ ಕತೆ ಮುಗೀತು ಅಂತ ಇಡೀ ಜಗತ್ತು ಭಾವಿಸಿದ ಹೊತ್ತಲ್ಲಿ, ಓಮಿಕ್ರಾನ್ ಅಥವಾ B.1.1.529 ರೂಪ ಪಡೆದು ಹೆಮ್ಮಾರಿಯಾಗಿ ಮರುಪ್ರವೇಶವಾಗಿದೆ. ರೂಪಾಂತರಿಗಳಿಗಿಂತ ಭಯಂಕರ, ಡೆಲ್ಟಾಗಿಂತಲೂ ಅಪಾಯಕಾರಿ ಎನ್ನಲಾಗಿರುವ ಈ ವೈರಸ್ ಗುಣಲಕ್ಷಣವೇ ಬದಲಾಗಿದೆ. ಅತ್ಯಂತ ವೇಗವಾಗಿ ಜಗತ್ತನ್ನು ಆವರಿಸುವ ಶಕ್ತಿ ಪಡೆದಿರುವ ಓಮಿಕ್ರಾನ್ ಭಾರೀ ಡೇಂಜರಸ್ ಆಗಿದೆ.  ಇದನ್ನೂ ಓದಿ: ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ: ಆರ್. ಅಶೋಕ್

    ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರಿ ತಳಿಯ ಓಮಿಕ್ರಾನ್ ಅಥವಾ B.1.1.529 ಎಂದು ಹೆಸರಿಟ್ಟಿರುವ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ತಳಿಯಿಂದ ಒಬ್ಬ ವ್ಯಕ್ತಿಯಿಂದ ಉಳಿದವರಿಗೆ ಸೋಂಕು ಹಬ್ಬುವ ಪ್ರಮಾಣ ಉಳಿದ ರೂಪಾಂತರಿಗಿಂತ ಅಧಿಕವಾಗಿದೆ. ಈಗಾಗಲೇ ದಕ್ಷಿಣ ಆಫ್ರಿಕಾದಲ್ಲಿ 77 ಮಂದಿಯಲ್ಲಿ ಕಾಣಿಸಿಕೊಂಡಿದ್ದು, ವಿಶ್ವಾದ್ಯಂತ 87 ಮಂದಿಯಲ್ಲಿ ಕಾಣಿಸಿಕೊಂಡಿದೆ. ಹಾಗಾಗಿ ಭಾರತಕ್ಕೆ ದಕ್ಷಿಣ ಆಫ್ರಿಕಾ ಸೇರಿದಂತೆ 10 ಹೈರಿಸ್ಕ್ ದೇಶಗಳ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, 10 ದೇಶಗಳಿಂದ ಕಳೆದ ಹತ್ತು ದಿನಗಳಲ್ಲಿ 584 ಜನ ಬಂದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದಿಂದ 94 ಜನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ಪೈಕಿ ಇಬ್ಬರಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?

    2 ಡೋಸ್ ಆಗಿದ್ರೂ ತಪ್ಪಿಸಿಕೊಳ್ಳೋಕೆ ಕಷ್ಟ:
    ಎರಡು ಡೋಸ್ ತೆಗೆದುಕೊಂಡವರಲ್ಲಿಯೂ ಇದು ಕಂಡುಬರ್ತಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಈವರೆಗೂ ಡಬಲ್ ಡೋಸ್ ಪಡೆದವರ ಪ್ರಮಾಣ ಶೇಕಡಾ 24 ಹೀಗಾಗಿ ಅಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಮನುಷ್ಯನಲ್ಲಿನ ರೋಗನಿರೋಧಕ ಶಕ್ತಿಯನ್ನು ವಂಚಿಸುವ ಸಾಮರ್ಥ್ಯ ಹೊಂದಿರುವ ಈ ವೈರಸ್, ರೋಗನಿರೋಧಕ ವ್ಯವಸ್ಥೆಯ ಇತರೆ ಭಾಗಗಳ ಮೇಲೆ ದಾಳಿ ಮಾಡಲಿದೆ. ಹೀಗಾಗಿ, 2 ಡೋಸ್ ವ್ಯಾಕ್ಸಿನ್ ಪ್ರಭಾವ ಇದರ ಮೇಲೆ ಶೇ.60ರಷ್ಟು ಆಗುವ ಸಾಧ್ಯತೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ

    ಹೊಸ ವೈರಸ್, ಹೊಸ ಲಕ್ಷಣ:
    ಹೆಚ್ಚು ಸುಸ್ತು, 5 ದಿನದ ಬಳಿಕ ಜ್ವರ ಜಾಸ್ತಿ, ಬಿಟ್ಟು ಬಿಟ್ಟು ಜ್ವರ, ಶೀತ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ, ಮೈ ನಡುಗುವಿಕೆ, ಸ್ನಾಯು ಸೆಳೆತ, ತಲೆ ನೋವು, ಗಂಟಲು ನೋವು, ರುಚಿ, ವಾಸನೆ ಕಳೆದುಕೊಳ್ಳುವುದು ಇನ್ನಿತರ ಲಕ್ಷಣಗಳು ಕಂಡು ಬರುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ.

    ಹೊಸ ತಳಿ ಆತಂಕ ಯಾಕೆ?:
    ಮೂಲ ಕೊರೊನಾ ವೈರಾಣುವಿನಲ್ಲಿದ್ದ ಸ್ಪೈಕ್ ಪ್ರೊಟೀನ್‍ಗಳು ಮನುಷ್ಯನ ದೇಹವನ್ನು ಸೇರಲು ನೆರವಾಗುವ ಮುಳ್ಳುಗಳ ಸಂಖ್ಯೆ ಕಡಿಮೆ ಇತ್ತು. ಆದರೆ ಆಲ್ಫಾ ತಳಿಯಲ್ಲಿ ಈ ಸಂಖ್ಯೆ ಸ್ವಲ್ಪ ಹೆಚ್ಚಾಗಿತ್ತು. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ತಳಿಗಳಲ್ಲಿ ಇವುಗಳ ಸಂಖ್ಯೆ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿತ್ತು. ಇವುಗಳ ಸಂಖ್ಯೆ ಹೆಚ್ಚಿದ್ದಷ್ಟೂ, ಸೂಪರ್ ಸ್ಪ್ರೆಡ್ ಆಗುತ್ತದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಬಿ.1.1.529 ತಳಿಯ ಪ್ರತೀ ವೈರಾಣುವಿನಲ್ಲಿ ಇಂತಹ 50 ಸ್ಪೈಕ್ ಪ್ರೊಟೀನ್‍ಗಳು ಇವೆ. ಹೀಗಾಗಿ ಇದು ಡೇಂಜರ್ ಎನ್ನಲಾಗಿದೆ.

    ಡೇಂಜರ್ ಡೆಲ್ಟಾವನ್ನೂ ಮೀರಿಸಿದ ಓಮಿಕ್ರಾನ್
    ಡೆಲ್ಟಾ ವೈರಸ್‍ಗಿಂತ ಓಮಿಕ್ರಾನ್ ಹೆಚ್ಚು ಎಫೆಕ್ಟಿವ್ ಆಗಿದೆ. ಹಾಗಾಗಿ, ಇದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬೇಕು. ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೆ ತೊಂದರೆಯಾಗುವುದಿಲ್ಲ. ಬದಲಾಗಿ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಪ್ರಾರಂಭಿಕ ಹಂತದಲ್ಲೇ ಇದನ್ನು ತಡೆಯೋದು ಸೂಕ್ತ. ಜನರಲ್ಲಿ ಇಮ್ಯೂನಿಟಿ ಕಡಿಮೆ ಆಗುತ್ತಿದೆ. ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ತಜ್ಞ ವೈದ್ಯರು ಎಚ್ಚರಿಸಿದ್ದಾರೆ.

  • ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್

    ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್

    -ಲಸಿಕೆ ಪಡೆಯಿರಿ, ಸುರಕ್ಷತಾ ಕ್ರಮ ಪಾಲಿಸಿ

    ಬೆಂಗಳೂರು: ಕೋವಿಡ್‍ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ. ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಇದನ್ನೂ ಓದಿ: ಓಮಿಕ್ರಾನ್‌ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ

    ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್‍ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?

    ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್‍ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.

    ಎರಡನೇ ಡೋಸ್ ಪಡೆಯಿರಿ:
    ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

    ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿನ ಭೀತಿ – ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟ ಪುನಾರಂಭ ಅನುಮಾನ

    25 ರೂಪಾಂತರಿ:
    ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.

    ಔಷಧಿ ಖರೀದಿ:
    ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

  • ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?

    ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?

    ನವದೆಹಲಿ: ದಕ್ಷಿಣ ಅಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಾಣುವಿನ ಹೊಸ ತಳಿ ಬಿ.1.1.529 ವಿರುದ್ಧ ಕೋವಿಡ್‍ನ ಲಸಿಕೆಗಳು ಪರಿಣಾಮ ಬೀರುವ ಸಾಧ್ಯತೆ ಅತ್ಯಂತ ಕಡಿಮೆ ಎಂದು ಬ್ರಿಟನ್‍ನ ಆರೋಗ್ಯ ಸಚಿವಾಲಯ ತಿಳಿಸಿದ್ದು, ಲಸಿಕೆ ಪಡೆದವರಲ್ಲೂ ಹೊಸ ತಳಿ ಪತ್ತೆಯಾಗಿ ಆತಂಕ ಮೂಡಿಸಿದೆ.

    ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರಿ ತಳಿಯ ಒಮಿಕ್ರಾನ್ ಅಥವಾ ಬಿ.1.1.529 ಎಂದು ಹೆಸರಿಟ್ಟಿರುವ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿದೆ. ಈ ತಳಿಯಿಂದ ಒಬ್ಬ ವ್ಯಕ್ತಿಯಿಂದ ಉಳಿದವರಿಗೆ ಸೋಂಕು ಹಬ್ಬುವ ಪ್ರಮಾಣ ಉಳಿದ ರೂಪಾಂತರಿಗಿಂತ ಅಧಿಕವಾಗಿದೆ. ಈಗಾಗಲೇ ದಕ್ಷಿಣ ಆಫ್ರಿಕಾದಲ್ಲಿ 77 ಮಂದಿಯಲ್ಲಿ ಕಾಣಿಸಿಕೊಂಡಿದ್ದು, ವಿಶ್ವಾದ್ಯಂತ 87 ಮಂದಿಯಲ್ಲಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ

    ವಿಶ್ವಾದ್ಯಂತ 87 ಮಂದಿಗೆ ಸೋಂಕು ಕಾಣಿಸಿಕೊಂಡ ಬಳಿಕ ಈಗ ಭಾರತದಲ್ಲಿ ಕಟ್ಟೆಚ್ಚರ ವಹಿಸಲು ಪೂರ್ವಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಸಿಕೆಯ ಎರಡು ಡೋಸ್‍ಗಳನ್ನು ಪಡೆದುಕೊಂಡಿದ್ದವರಿಗೂ ಕೊರೊನಾ ಹೊಸ ರೂಪಾಂತರ ತಳಿ ತಗುಲಿದೆ. ಲಸಿಕೆಗಳು ಸೃಷ್ಟಿಸಿರುವ ಪ್ರತಿಕಾಯಗಳನ್ನು ಭೇದಿಸಿ ದೇಹವನ್ನು ಅಟಕಾಯಿಸಿಕೊಳ್ಳುತ್ತಿರುವ ತಳಿ ಅಂತಾ ಜಿನೋಮ್ ಸೀಕ್ವೆನ್ಸ್ ನಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ಹೊಸ ತಳಿ ಆತಂಕ ಯಾಕೆ?
    ಮೂಲ ಕೊರೊನಾ ವೈರಾಣುವಿನಲ್ಲಿದ್ದ ಸ್ಪೈಕ್ ಪ್ರೊಟೀನ್‍ಗಳು ಮನುಷ್ಯನ ದೇಹವನ್ನು ಸೇರಲು ನೆರವಾಗುವ ಮುಳ್ಳುಗಳ ಸಂಖ್ಯೆ ಕಡಿಮೆ ಇತ್ತು. ಆದರೆ ಆಲ್ಫಾ ತಳಿಯಲ್ಲಿ ಈ ಸಂಖ್ಯೆ ಸ್ವಲ್ಪ ಹೆಚ್ಚಾಗಿತ್ತು. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ತಳಿಗಳಲ್ಲಿ ಇವುಗಳ ಸಂಖ್ಯೆ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿತ್ತು. ಇವುಗಳ ಸಂಖ್ಯೆ ಹೆಚ್ಚಿದ್ದಷ್ಟೂ, ಸೂಪರ್ ಸ್ಪ್ರೆಡ್ ಆಗುತ್ತದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಬಿ.1.1.529 ತಳಿಯ ಪ್ರತೀ ವೈರಾಣುವಿನಲ್ಲಿ ಇಂತಹ 50 ಸ್ಪೈಕ್ ಪ್ರೊಟೀನ್‍ಗಳು ಇವೆ. ಹೀಗಾಗಿ ಇದು ಡೇಂಜರ್ ಎನ್ನಲಾಗಿದೆ.

  • ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

    ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

    ನವದೆಹಲಿ : ಕೊರೊನಾ ವೈರಸ್ ಮೂರನೇ ಅಲೆ ಇಲ್ಲ ಅಂತ ಸಂತಸ ಪಡುವ ಹೊತ್ತಿನಲ್ಲಿಯೇ ಆಫ್ರಿಕಾದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

    ಕೊರೊನಾ ಎರಡನೇ ಅಲೆಯ ನಂತರ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ವ್ಯಾಕ್ಸಿನ್ ಪಡೆದ ನಂತರ ಕೊರೊನಾ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಇಳಿಕೆ ಕಂಡಿತು. ಇದೀಗ ಜನರಲ್ಲಿ ಕೋವಿಡ್ ಆತಂಕ ಮತ್ತೆ ಮನೆಮಾಡಿದೆ. ಅತ್ಯಂತ ಅಪಾಯಕಾರಿ ಕೋವಿಡ್ ವೈರಸ್‍ನ ರೂಪಾಂತರ ತಳಿ ಪತ್ತೆ ಆಗಿದ್ದು, ಈ ಕುರಿತಂತೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೂ ಪತ್ರ ಬರೆದಿದೆ.  ಇದನ್ನೂ ಓದಿ: ಮಂಜು ಪಾವಗಡ ಜೊತೆ ಶುಭಾ ಮತ್ತೊಮ್ಮೆ ಟ್ರಿಪ್

    `ಹಲವು ರೂಪಾಂತರಗಳನ್ನು ಹೊಂದಿರುವ ಕೋವಿಡ್ ವೈರಸ್‍ನ ಹೊಸ ತಳಿ ದಕ್ಷಿಣ ಆಫ್ರಿಕಾ, ಬೋಟ್ಸಾವಾನ, ಹಾಂಕಾಂಗ್‍ನಲ್ಲಿ ಪತ್ತೆ ಆಗಿದೆ. ಅಂತಾರಾಷ್ಟ್ರೀಯ ಪ್ರಯಾಣಕ್ಕೆ ವೀಸಾ ಸಡಿಲಿಕೆಯಿಂದ ಈ ರೂಪಾಂತರ ತಳಿ ಆ ದೇಶಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಈ ಹೈ ರಿಸ್ಕ್ ರಾಷ್ಟ್ರಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ತೀವ್ರ ತಪಾಸಣೆಗೆ ಒಳಪಡಿಸಬೇಕು. ಕೋವಿಡ್ ಲಸಿಕೆಯ ವಿತರಣೆಯನ್ನು ತೀವ್ರಗೊಳಿಸಬೇಕು’ ಎಂದು ಆರೋಗ್ಯ ಸಚಿವಾಲಯ ಸೂಚಿಸಿದೆ.

    ಹೊಸ ರೂಪಾಂತರ ತಳಿಯಿಂದಾಗಿ ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ವೈರಸ್ ಪ್ರಮಾಣ 10 ಪಟ್ಟು ಏರಿಕೆ ಆಗಿದ್ದು, ದಕ್ಷಿಣ ಆಫ್ರಿಕಾ, ಬೋಟ್ಸಾವಾನಾ, ಜಿಂಬಾಬ್ವೆ, ನಮಿಬೀಯಾದಿಂದ ಬರುವ ವಿಮಾನಗಳಿಗೆ ಬ್ರಿಟನ್ ನಿಷೇಧ ಹೇರಿದೆ. ಇದನ್ನೂ ಓದಿ:  ಇಂದಿನಿಂದ 3 ದಿನ ಚಂಡಮಾರುತ ಮಳೆ – ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ

  • ರಾಜ್ಯದಲ್ಲಿ 224 ಕೇಸ್, 5 ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು

    ರಾಜ್ಯದಲ್ಲಿ 224 ಕೇಸ್, 5 ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 224 ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಐದು ಜಿಲ್ಲೆಗಳಲ್ಲಿ ತಲಾ ಒಂದೊಂದರಂತೆ ಒಟ್ಟು 5 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 379 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,707 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,94,001 ಮಂದಿಗೆ ಕೊರೊನಾ ಬಂದಿದೆ. 29,49,083 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.23 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.43 ರಷ್ಟಿದೆ. ಇಂದು ದಾಖಲಾದ ಐದು ಮರಣ ಪ್ರಕರಣ ಬೆಳಗಾವಿ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಕೊಪ್ಪಳ, ತುಮಕೂರಿನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಪದೇಗುಲಕ್ಕೆ ಬಂದ ಭಿಕ್ಷುಕಿಯನ್ನು ಬೈದು ಹೊರಗೆ ಕಳುಹಿಸಿದ್ರೂ ಆಕೆ ಕೊಟ್ಳು 10 ಸಾವಿರ ರೂ.!

    ಇಂದು ರಾಜ್ಯದಲ್ಲಿ ಒಟ್ಟು 2,70,770 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 51,618 ಸ್ಯಾಂಪಲ್ (ಆರ್‍ಟಿ ಪಿಸಿಆರ್ 38,336 + 13,282 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪಕ್ಷಕ್ಕೆ ಬರುವಂತೆ ಪುನೀತ್‍ಗೆ ಹಲವು ಬಾರಿ ಗಾಳ ಹಾಕಿದ್ದೆ: ಡಿಕೆಶಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 122, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 17, ದಾವಣಗೆರೆ 1, ಧಾರವಾಡ 4, ಗದಗ 1, ಹಾಸನ 5, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 4, ಕೊಪ್ಪಳ 0, ಮಂಡ್ಯ 2, ಮೈಸೂರು 22, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 12, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ಮತ್ತೆ ಸದ್ದು ಮಾಡಿದ ಕೊರೊನಾ – ಆಸ್ಟ್ರೀಯಾದಲ್ಲಿ ನಾಳೆಯಿಂದ ಲಾಕ್‍ಡೌನ್

    ಮತ್ತೆ ಸದ್ದು ಮಾಡಿದ ಕೊರೊನಾ – ಆಸ್ಟ್ರೀಯಾದಲ್ಲಿ ನಾಳೆಯಿಂದ ಲಾಕ್‍ಡೌನ್

    ನವದೆಹಲಿ: ಜಗತ್ತಿನ ಹಲವು ದೇಶಗಳಲ್ಲಿ ಮತ್ತೆ ಕೋವಿಡ್ ವಿಜೃಂಭಿಸುತ್ತಿದೆ. ಲಾಕ್‍ಡೌನ್ ದಿನಗಳು ಮರುಕಳಿಸುತ್ತಿದೆ. ಆಸ್ಟ್ರೀಯಾದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದ್ದು ನಾಳೆಯಿಂದ ಲಾಕ್‍ಡೌನ್ ಜಾರಿಗೆ ಬರುತ್ತಿದೆ.

    ಆಸ್ಟ್ರೀಯಾದಲ್ಲಿ ಕೊರೊನಾ ಸೋಂಕು ಹೆಚ್ಚಾದ ಪರಿಣಾಮ ಅಲ್ಲಿನ ಸರ್ಕಾರ ಲಾಕ್‍ಡೌನ್ ಮಾಡಲು ಸಿದ್ಧತೆಮಾಡಿಕೊಂಡಿದೆ. ಈ ನಡುವೆ ಆಸ್ಟ್ರೀಯಾದ ಈ ನಡೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರೊಂದಿಗೆ ನೆದರ್ ಲ್ಯಾಂಡ್ ನ ರೋಟರ್‍ಡ್ಯಾಂನಲ್ಲಿ ಕೊರೊನಾ ಲಾಕ್‍ಡೌನ್ ವಿರೋಧಿಸಿ ನಡೆದ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ರಾಜಧಾನಿ ವಿಯೆನ್ನಾದಲ್ಲಿ ನಿನ್ನೆ 35 ಸಾವಿರ ಮಂದಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರೊಟೆಸ್ಟ್ ಮಾಡಲು ಬೀದಿಗೆ ಇಳಿದವರು ಮಾಸ್ಕ್ ಕೂಡ ಧರಿಸಿರಲಿಲ್ಲ. ಸ್ವಿಟ್ಜರ್ಲೆಂಡ್, ಕ್ರೊವೇಶಿಯಾ, ಇಟಲಿಯಲ್ಲಿಯೂ ಲಾಕ್‍ಡೌನ್‍ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರೂಪಿಸಿದ ಕಾನೂನಿಗೆ ತೀವ್ರ ವಿರೋಧ ಕೇಳಿ ಬಂದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 247 ಕೊರೊನಾ ಕೇಸ್, 1 ಸಾವು

    ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,488 ಪಾಸಿಟಿವ್ ಕೇಸ್ ದಾಖಲಾಗಿದ್ದು, 313 ಮಂದಿ ಮರಣ ಹೊಂದಿದ್ದಾರೆ. 12,329 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಭಾಷಣದಲ್ಲಿಂದು ಪೂರ್ತಿ ಮೋದಿ ‘ಜೀ’ ಮಯ

  • ರಾಜ್ಯದಲ್ಲಿ ಇಂದು 247 ಕೊರೊನಾ ಕೇಸ್, 1 ಸಾವು

    ರಾಜ್ಯದಲ್ಲಿ ಇಂದು 247 ಕೊರೊನಾ ಕೇಸ್, 1 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ಇಂದು ನಿನ್ನೆಗಿಂತ ಹೆಚ್ಚು ಪಾಸಿಟಿವ್ ಪ್ರಕರಣ ವರದಿಯಾಗಿದೆ. 247 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 1 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ ದಾಖಲಾಗಿರುವ ಏಕೈಕ ಸಾವು ಬೆಂಗಳೂರು ನಗರದಲ್ಲಿ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 134 ಮಂದಿಗೆ ಪಾಸಿಟಿವ್ ವರದಿ ಬಂದಿದ್ದು, ರಾಜ್ಯದಲ್ಲಿ 278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,064 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,93,599 ಮಂದಿಗೆ ಕೊರೊನಾ ಬಂದಿದೆ. 29,48,331 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.40 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಭಾಷಣದಲ್ಲಿಂದು ಪೂರ್ತಿ ಮೋದಿ ‘ಜೀ’ ಮಯ

    ಇಂದು ರಾಜ್ಯದಲ್ಲಿ ಒಟ್ಟು 54,348 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 78,037 ಸ್ಯಾಂಪಲ್ (ಆರ್‍ಟಿ ಪಿಸಿಆರ್ 62,699 + 15,338 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರೈತರು ಸ್ಮಾರ್ಟ್‍ಫೋನ್ ಕೊಳ್ಳಲು 1500 ರೂ. ಆರ್ಥಿಕ ನೆರವು ಕೊಟ್ಟ ಸರ್ಕಾರ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 134, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 10, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 6, ಹಾವೇರಿ 0, ಕಲಬುರಗಿ 1, ಕೊಡಗು 6, ಕೋಲಾರ 3, ಕೊಪ್ಪಳ 0, ಮಂಡ್ಯ 2, ಮೈಸೂರು 48, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 10, ಉಡುಪಿ 5, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಕೊರೊನಾ ಏರಿಳಿತ – 213 ಕೇಸ್, 5 ಸಾವು

    ರಾಜ್ಯದಲ್ಲಿ ಕೊರೊನಾ ಏರಿಳಿತ – 213 ಕೇಸ್, 5 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ಇಂದು ಒಟ್ಟು 213 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 5 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರು ಮತ್ತು ಕೋಲಾರದಲ್ಲಿ ತಲಾ 2 ಮತ್ತು ರಾಮನಗರದಲ್ಲಿ 1 ಸಾವು ಸಂಭವಿಸಿದೆ.

    ಬೆಂಗಳೂರು ನಗರದಲ್ಲಿ 134 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 245 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ 370 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,096 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,93,352 ಮಂದಿಗೆ ಕೊರೊನಾ ಬಂದಿದೆ. 29,48,053 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.2.34 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ವಿದರ್ಭ ವಿರುದ್ಧ ಕರ್ನಾಟಕಕ್ಕೆ ರೋಚಕ ಜಯ – ಫೈನಲ್‍ಗೆ ಲಗ್ಗೆ

    ಇಂದು ರಾಜ್ಯದಲ್ಲಿ ಒಟ್ಟು 2,36,784 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 80,090 ಸ್ಯಾಂಪಲ್ (ಆರ್‍ಟಿ ಪಿಸಿಆರ್ 65,433 + 14,657 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಎರಡು ಲಸಿಕೆ ಪಡೆದಿದ್ದರೂ ಕೊರೊನಾಗೆ ವೈದ್ಯೆ ಬಲಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 134, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 1, ಕೊಡಗು 3, ಕೋಲಾರ 0, ಕೊಪ್ಪಳ 1, ಮಂಡ್ಯ 4, ಮೈಸೂರು 17, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 9, ಉಡುಪಿ 5, ಉತ್ತರ ಕನ್ನಡ 1, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.