Tag: Coronavirus

  • ರಾಜ್ಯದಲ್ಲಿ ಕೊರೊನಾ ಇಳಿಕೆ – 171 ಪ್ರಕರಣ, 1 ಸಾವು

    ರಾಜ್ಯದಲ್ಲಿ ಕೊರೊನಾ ಇಳಿಕೆ – 171 ಪ್ರಕರಣ, 1 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಇಳಿಕೆ ಕಂಡಿದೆ. ಇಂದು ಒಟ್ಟು 171 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 1 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ದಾಖಲಾಗಿರುವ 1 ಮರಣ ಪ್ರಕರಣ ಮೈಸೂರಿನಲ್ಲಿ ವರದಿಯಾಗಿದೆ.

    ಬೆಂಗಳೂರು ಸಹಿತ ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 118 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 144 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,912 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,92,021 ಮಂದಿಗೆ ಕೊರೊನಾ ಬಂದಿದೆ. 29,45,934 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.58 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.25 ರಷ್ಟಿದೆ. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

    ಇಂದು ರಾಜ್ಯದಲ್ಲಿ ಒಟ್ಟು 1,73,637 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 66,596 ಸ್ಯಾಂಪಲ್ (ಆರ್‍ಟಿ ಪಿಸಿಆರ್ 57,835 + 8,761 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೊಡಗಿನ ಶನಿವಾರ ಸಂತೆ ಬಂದ್ – ಹಿಂದೂ ಕಾರ್ಯಕರ್ತರ ಬಂಧನ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 118, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 8, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 2, ಕೊಡಗು 3, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 14, ರಾಯಚೂರು 1, ರಾಮನಗರ 0, ಶಿವಮೊಗ್ಗ 1, ತುಮಕೂರು 2, ಉಡುಪಿ 4, ಉತ್ತರ ಕನ್ನಡ 2, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ 236 ಕೇಸ್, 2 ಸಾವು – ನಿನ್ನೆಗಿಂತ ಇಂದು 9 ಪ್ರಕರಣ ಇಳಿಕೆ

    ರಾಜ್ಯದಲ್ಲಿ 236 ಕೇಸ್, 2 ಸಾವು – ನಿನ್ನೆಗಿಂತ ಇಂದು 9 ಪ್ರಕರಣ ಇಳಿಕೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 236 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಒಟ್ಟು 2 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾಜ್ಯದಲ್ಲಿ ಒಟ್ಟು 245 ಪ್ರಕರಣ ದಾಖಲಾಗಿತ್ತು. ಈ ಪೈಕಿ ಇಂದು 9 ಪ್ರಕರಣ ಇಳಿಕೆ ಕಂಡಿದೆ. ಇಂದಿನ 2 ಸಾವಿನ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಇಂದು ಕೂಡ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

    ಬೆಂಗಳೂರು ನಗರದಲ್ಲಿ 152 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 187 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 2 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 264 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,997 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,850 ಮಂದಿಗೆ ಕೊರೊನಾ ಬಂದಿದೆ. 29,45,678 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.84 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.24 ರಷ್ಟಿದೆ. ಇದನ್ನೂ ಓದಿ: ಎಮ್ಮೆ ಹಾಲು ಕೊಡ್ತಿಲ್ಲ, ಯಾರೋ ಮಾಟ ಮಾಡ್ಸಿದ್ದಾರೆಂದು ಪೊಲೀಸ್‌ ಠಾಣೆಗೆ ದೂರು ನೀಡಿದ ರೈತ!

    ಇಂದು ರಾಜ್ಯದಲ್ಲಿ ಒಟ್ಟು 26,805 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 96,838 ಸ್ಯಾಂಪಲ್ (ಆರ್‌ಟಿಪಿಸಿಆರ್ 80,573 + 16,265 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 7, ಕೊಪ್ಪಳ 0, ಮಂಡ್ಯ 1, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 5, ಉಡುಪಿ 6, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆಯ ಫೋಟೋ ಮಾರ್ಫಿಂಗ್ – ಸೋದರ ಸಂಬಂಧಿ ಅರೆಸ್ಟ್

     

  • 245 ಕೇಸ್, ಬೆಂಗಳೂರಿನಲ್ಲಿ 3 ಸಾವು – 29 ಜಿಲ್ಲೆಯಲ್ಲಿ ಶೂನ್ಯ ಮರಣ

    245 ಕೇಸ್, ಬೆಂಗಳೂರಿನಲ್ಲಿ 3 ಸಾವು – 29 ಜಿಲ್ಲೆಯಲ್ಲಿ ಶೂನ್ಯ ಮರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 245 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಒಟ್ಟು 3 ಮಂದಿ ಸಾವನ್ನಪ್ಪಿದ್ದಾರೆ. ಈ ಮೂರು ಸಾವು ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

    ಬೆಂಗಳೂರು ನಗರದಲ್ಲಿ 154 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 160 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 206 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,036 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,614 ಮಂದಿಗೆ ಕೊರೊನಾ ಬಂದಿದೆ. 29,45,415 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.22 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.24 ರಷ್ಟಿದೆ. ಇದನ್ನೂ ಓದಿ: ಕೋವಿಡ್ ಲಸಿಕೆಯ 2ನೇ ಡೋಸ್ ಪಡೆಯಲು ಜನರ ಹಿಂದೇಟು- ವ್ಯಾಕ್ಸಿನ್ ವಿತರಣೆಗೆ ಹೊಸ ಯೋಜನೆ

    ಇಂದು ರಾಜ್ಯದಲ್ಲಿ ಒಟ್ಟು 1,17,590 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,01,119 ಸ್ಯಾಂಪಲ್ (ಆರ್‌ಟಿಪಿಸಿಆರ್ 82,979 + 18,140 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನನ್ನ ಜೀವನದಲ್ಲಿ ಒಂದು ತಪ್ಪು ನಡೆದಿದೆ ಅದನ್ನೇ ಇಟ್ಟುಕೊಂಡು ಪದೇ ಪದೇ ಟಾರ್ಗೆಟ್ ಮಾಡಬೇಡಿ: ನಲಪಾಡ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 154, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 0, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 2, ಹಾವೇರಿ 0, ಕಲಬುರಗಿ 2, ಕೊಡಗು 3, ಕೋಲಾರ 3, ಕೊಪ್ಪಳ 0, ಮಂಡ್ಯ 3, ಮೈಸೂರು 13, ರಾಯಚೂರು 0, ರಾಮನಗರ 1, ಶಿವಮೊಗ್ಗ 5, ತುಮಕೂರು 8, ಉಡುಪಿ 6, ಉತ್ತರ ಕನ್ನಡ 13, ವಿಜಯಪುರ 1, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಚಿತಾ ರಾಮ್ ಫಸ್ಟ್ ನೈಟ್ ಹೇಳಿಕೆಗೆ ಆಕ್ಷೇಪ: ಕ್ಷಮೆ ಕೇಳಲು ಆಗ್ರಹ

  • ರಾಜ್ಯದಲ್ಲಿ 227 ಪಾಸಿಟಿವ್ ಕೇಸ್ – 8,036 ಸಕ್ರಿಯ ಪ್ರಕರಣ

    ರಾಜ್ಯದಲ್ಲಿ 227 ಪಾಸಿಟಿವ್ ಕೇಸ್ – 8,036 ಸಕ್ರಿಯ ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 227 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. 2 ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರದಲ್ಲಿ 147 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 62 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 206 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,036 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,369 ಮಂದಿಗೆ ಕೊರೊನಾ ಬಂದಿದೆ. 29,45,164 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.88 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.22 ರಷ್ಟಿದೆ. ಇದನ್ನೂ ಓದಿ: ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

    ಇಂದು ರಾಜ್ಯದಲ್ಲಿ ಒಟ್ಟು 1,59,797 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,03,169 ಸ್ಯಾಂಪಲ್ (ಆರ್‍ಟಿ ಪಿಸಿಆರ್ 84,423 + 18,746 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರರನ್ನು ಅಣಕಿಸಿದ ಶಾಹೀನ್ ಶಾ ಆಫ್ರಿದಿಗೆ ಚಾಟಿ ಬೀಸಿದ ನೆಟ್ಟಿಗರು

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 147, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 3, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 7, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 2, ಕೊಪ್ಪಳ 0, ಮಂಡ್ಯ 2, ಮೈಸೂರು 10, ರಾಯಚೂರು 0, ರಾಮನಗರ 1, ಶಿವಮೊಗ್ಗ 2, ತುಮಕೂರು 6, ಉಡುಪಿ 6, ಉತ್ತರ ಕನ್ನಡ 9, ವಿಜಯಪುರ, ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ.

  • ಇಂದು 286 ಪಾಸಿಟಿವ್ ಕೇಸ್ – 289 ಮಂದಿ ಆಸ್ಪತ್ರೆಯಿಂದ ಬಿಡುಗಡೆ

    ಇಂದು 286 ಪಾಸಿಟಿವ್ ಕೇಸ್ – 289 ಮಂದಿ ಆಸ್ಪತ್ರೆಯಿಂದ ಬಿಡುಗಡೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 286 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. 7 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ 289 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಒಟ್ಟು 8,017 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,142 ಮಂದಿಗೆ ಕೊರೊನಾ ಬಂದಿದೆ. 29,44,958 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.44 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.25 ರಷ್ಟಿದೆ. ಇದನ್ನೂ ಓದಿ: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ

    ಇಂದು ರಾಜ್ಯದಲ್ಲಿ ಒಟ್ಟು 1,06,278 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,11,190 ಸ್ಯಾಂಪಲ್ (ಆರ್‍ಟಿ ಪಿಸಿಆರ್ 90,584 + 20,606 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ 169 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 171 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 169, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 17, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 23, ಹಾವೇರಿ 0, ಕಲಬುರಗಿ 0, ಕೊಡಗು 2, ಕೋಲಾರ 4, ಕೊಪ್ಪಳ 0, ಮಂಡ್ಯ 2, ಮೈಸೂರು 11, ರಾಯಚೂರು 0, ರಾಮನಗರ 1, ಶಿವಮೊಗ್ಗ 4, ತುಮಕೂರು 12, ಉಡುಪಿ 3, ಉತ್ತರ ಕನ್ನಡ 16, ವಿಜಯಪುರ, ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ರಾಜ್ಯಕ್ಕೆ ಪ್ರಧಾನಿ ಭೇಟಿ

  • ನಾನು ಕುಡಿದಿದ್ದೇನೆ ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ – ತಹಶೀಲ್ದಾರ್ ಮನವಿಗೆ ಡೋಂಟ್ ಕೇರ್

    ನಾನು ಕುಡಿದಿದ್ದೇನೆ ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ – ತಹಶೀಲ್ದಾರ್ ಮನವಿಗೆ ಡೋಂಟ್ ಕೇರ್

    ಹಾಸನ: ಮನೆ ಬಳಿ ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ ತಹಶೀಲ್ದಾರ್‌ಗೆ ಗ್ರಾಮಸ್ಥರೊಬ್ಬರು ನಾನು ಎಣ್ಣೆ ಹೊಡೆದಿದ್ದೇನೆ ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ ಎಂದರೆ, ಮಹಿಳೆಯರು ಡೋಂಟ್ ಕೇರ್ ಎನ್ನುತ್ತಾ ತಮ್ಮ ಹಿಂದೆ ಊರೆಲ್ಲ ಸುತ್ತಾಡಿಸಿದ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ, ಚಿಕ್ಕ ಮಗ್ಗೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮಕ್ಕೆ ವೈದ್ಯರ ಜೊತೆ ಭೇಟಿ ನೀಡಿದ ಅರಕಲಗೂಡು ತಹಶೀಲ್ದಾರ್ ರೇಣುಕುಮಾರ್, ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇರುವವರ ಮನೆಯ ಬಳಿ ಹೋಗಿ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ನನಗೆ ತಲೆನೋವಿದೆ. ನಾನು ಚೆಕಪ್ ಮಾಡಿಸುತ್ತಿರುವ ಡಾಕ್ಟರ್ ವ್ಯಾಕ್ಸಿನ್ ಹಾಕಿಸಿಕೊಳ್ಳದಂತೆ ಹೇಳಿದ್ದಾರೆ. ಹೀಗಾಗಿ ನಾನು ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ ಎಂದು ವಿವಿಧ ಸಬೂಬು ಹೇಳಿದ್ದಾರೆ. ಇದನ್ನೂ ಓದಿ: ಸಾಯೋ ವಯಸ್ಸಾಗಿದೆ, ನಮಗೆ ಲಸಿಕೆ ಬೇಡವೇ ಬೇಡ – ಬಳ್ಳಾರಿಯಲ್ಲೂ ವ್ಯಾಕ್ಸಿನ್‍ಗೆ ಹಿಂದೇಟು

    ಮಹಿಳೆಯರಿಗೆ ತಹಶೀಲ್ದಾರ್ ಮತ್ತು ವೈದ್ಯರು ಎಷ್ಟೇ ತಿಳಿಹೇಳಿದ್ರು ಪ್ರಯೋಜನವಾಗಿಲ್ಲ. ಮತ್ತೊಬ್ಬ ಮಹಿಳೆ ನಾನು ಚೀಟಿ ಕಟ್ಟಬೇಕು, ನನಗೆ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಟೈಮಿಲ್ಲ ಎಂದು ಒಂದು ಗಂಟೆ ಸತಾಯಿಸಿ, ಗ್ರಾಮವೆಲ್ಲ ಸುತ್ತಾಡಿಸಿ, ಕೊನೆಗೂ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಮತ್ತೊಬ್ಬ ಆಸಾಮಿಯಂತು ನಾನು ಎಣ್ಣೆ ಹೊಡೆದಿದ್ದೇನೆ. ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ ಎಂದಿದ್ದಾನೆ. ಹೀಗೆ ಮನೆ ಬಳಿ ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮನವಿ ಮಾಡಿದ ತಹಶೀಲ್ದಾರ್‌ಗೆ ಗ್ರಾಮದ ಜನ ವಿವಿಧ ಉತ್ತರ ನೀಡಿ ತಪ್ಪಿಸಿಕೊಳ್ಳುತ್ತಿರುವುದನ್ನು ಗಮನಿಸಿದ್ರೆ, ವ್ಯಾಕ್ಸಿನ್ ಬಗ್ಗೆ ಇನ್ನೂ ಬಹುತೇಕರಿಗೆ ನಂಬಿಕೆಯೇ ಬಂದಿಲ್ಲ ಎಂಬುದು ಎದ್ದು ಕಾಣುತ್ತಿದೆ. ದನ್ನೂ ಓದಿ: ನಮ್ಗೆ ಲಸಿಕೆ ಕೊಡ್ಬೇಡಿ, ನಮ್ಮ ಮೇಲೆ ದೇವರು ಬಂದಿದ್ದಾರೆ – ಯಾದಗಿರಿಯಲ್ಲಿ ಹೈಡ್ರಾಮಾ

  • ರಾಜ್ಯದಲ್ಲಿ ಮೂನ್ನೂರರ ಗಡಿದಾಟಿದ ಕೊರೊನಾ – 328 ಕೇಸ್, 9 ಸಾವು

    ರಾಜ್ಯದಲ್ಲಿ ಮೂನ್ನೂರರ ಗಡಿದಾಟಿದ ಕೊರೊನಾ – 328 ಕೇಸ್, 9 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 328 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೆಲದಿನಗಳಿಂದ ಇಳಿಕೆ ಕಂಡಿದ್ದ ಕೊರೊನಾ ಕೇಸ್ ಮತ್ತೆ ಮೂನ್ನೂರರ ಗಡಿದಾಟಿದೆ. 9 ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರದಲ್ಲಿ 176 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 102 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 5 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 247 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,027 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,90,856 ಮಂದಿಗೆ ಕೊರೊನಾ ಬಂದಿದೆ. 29,44,669 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.74 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇದನ್ನೂ ಓದಿ: ವಿವಾಹಗಳಲ್ಲಿ ಕೇಕ್ ಕತ್ತರಿಸುವಂತಿಲ್ಲ, ಶಾಂಪೇನ್‌ ಹಾರಿಸುವಂತಿಲ್ಲ: ಕೊಡವ ಸಮಾಜದಿಂದ ನಿಷೇಧ

    ಇಂದು ರಾಜ್ಯದಲ್ಲಿ ಒಟ್ಟು 4,78,875 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,748 ಸ್ಯಾಂಪಲ್ (ಆರ್‍ಟಿ ಪಿಸಿಆರ್ 96,139 + 21,609 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್‌, ಪೆಟ್ರೋಲ್‌ ಇಲ್ಲ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 176, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 29, ಹಾವೇರಿ 0, ಕಲಬುರಗಿ 2, ಕೊಡಗು 7, ಕೋಲಾರ 4, ಕೊಪ್ಪಳ 0, ಮಂಡ್ಯ 8, ಮೈಸೂರು 15, ರಾಯಚೂರು 0, ರಾಮನಗರ 1, ಶಿವಮೊಗ್ಗ 11, ತುಮಕೂರು 8, ಉಡುಪಿ 2, ಉತ್ತರ ಕನ್ನಡ 10, ವಿಜಯಪುರ, ಮತ್ತು ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ 283 ಕೊರೊನಾ ಕೇಸ್ – 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

    ರಾಜ್ಯದಲ್ಲಿ 283 ಕೊರೊನಾ ಕೇಸ್ – 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 283 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 290 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,989 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,90,235 ಮಂದಿಗೆ ಕೊರೊನಾ ಬಂದಿದೆ. 29,44,099 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.12 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನೋತ್ಸವ – ಕಾಣಿಕೆ ಹುಂಡಿಯಲ್ಲಿ ಭಕ್ತರ ನಾನಾ ಕೋರಿಕೆ ಪತ್ರ!

    ಇಂದು ರಾಜ್ಯದಲ್ಲಿ ಒಟ್ಟು 2,02,614 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,05,278 ಸ್ಯಾಂಪಲ್ (ಆರ್‍ಟಿ ಪಿಸಿಆರ್ 94,941 + 10,337 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ 159 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 104 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 159, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 10, ದಾವಣಗೆರೆ 0, ಧಾರವಾಡ 7, ಗದಗ 0, ಹಾಸನ 24, ಹಾವೇರಿ 0, ಕಲಬುರಗಿ 3, ಕೊಡಗು 8, ಕೋಲಾರ 11, ಕೊಪ್ಪಳ 0, ಮಂಡ್ಯ 6, ಮೈಸೂರು 15, ರಾಯಚೂರು 2, ರಾಮನಗರ 2, ಶಿವಮೊಗ್ಗ 1, ತುಮಕೂರು 6, ಉಡುಪಿ 5, ಉತ್ತರ ಕನ್ನಡ 4, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭ್ರಷ್ಟ ರಾಜಕಾರಣಿಗಳು ಸಾಯಬೇಕಿತ್ತು – ಹಾಸನಾಂಬೆಗೆ ಪತ್ರ ಬರೆದ ಅಪ್ಪು ಅಭಿಮಾನಿ

  • ರಾಜ್ಯದಲ್ಲಿ 224 ಕೊರೊನಾ ಕೇಸ್ – ಬೆಂಗಳೂರಿನಲ್ಲಿ ಶೂನ್ಯ ಸಾವು

    ರಾಜ್ಯದಲ್ಲಿ 224 ಕೊರೊನಾ ಕೇಸ್ – ಬೆಂಗಳೂರಿನಲ್ಲಿ ಶೂನ್ಯ ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 224 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 148 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 163 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 317 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,090 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,89,713 ಮಂದಿಗೆ ಕೊರೊನಾ ಬಂದಿದೆ. 29,43,487 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.23 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.37 ರಷ್ಟಿದೆ. ಇದನ್ನೂ ಓದಿ: ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ

    ಇಂದು ರಾಜ್ಯದಲ್ಲಿ ಒಟ್ಟು 4,14,324 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 59,144 ಸ್ಯಾಂಪಲ್ (ಆರ್‍ಟಿ ಪಿಸಿಆರ್ 50,466 + 8,678 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.  ಇದನ್ನೂ ಓದಿ: ಯುವಕನ ಕೊಲೆಗೈದು ಮನೆ ಗೇಟ್ ಮುಂಭಾಗ ಎಸೆದು ಹೋದ್ರು!

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 148, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 3, ದಕ್ಷಿಣ ಕನ್ನಡ 15, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 4, ಹಾವೇರಿ 0, ಕಲಬುರಗಿ 0, ಕೊಡಗು 1, ಕೋಲಾರ 6, ಕೊಪ್ಪಳ 0, ಮಂಡ್ಯ 7, ಮೈಸೂರು 9, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 7, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

  • ಟೋಂಗಾ ದೇಶದಲ್ಲಿ ಮೊದಲ ಬಾರಿ ಕೊರೊನಾ ಕೇಸ್ ಪತ್ತೆ

    ಟೋಂಗಾ ದೇಶದಲ್ಲಿ ಮೊದಲ ಬಾರಿ ಕೊರೊನಾ ಕೇಸ್ ಪತ್ತೆ

    ಟೋಂಗಾ: ಕೊರೊನಾ ವೈರಸ್‍ನಿಂದ ದೂರ ಉಳಿದಿದ್ದ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಒಂದಾಗಿದ್ದ ಟೋಂಗಾ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸೋಂಕು ಪತ್ತೆಯಾಗಿದೆ.

    ನ್ಯೂಜಿಲೆಂಡ್‍ನಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಪೂರ್ಣ ಪ್ರಮಾಣದ ಲಸಿಕೆ ಪಡೆದ 215 ಮಂದಿ ನ್ಯೂಜಿಲೆಂಡ್‍ನಿಂದ ಟೋಂಗಾಕ್ಕೆ ಬಂದಿಳಿದಿದ್ದಾರೆ. ಈ ಪೈಕಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಲಾಕ್‍ಡೌನ್ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಗೌಪ್ಯವಾಗಿ ಬೂಸ್ಟರ್ ಡೋಸ್  ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ

    ನ್ಯೂಜಿಲೆಂಡ್‍ನಿಂದ ಟೋಂಗಾಕ್ಕೆ ಬಂದಿಳಿದ ಎಲ್ಲಾ ಪ್ರಯಾಣಿಕರನ್ನು ಕ್ವಾರಂಟೈನ್‍ಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಪ್ರಧಾನಿ ಪೊಹಿವಾ ಅವರು ಭವಿಷ್ಯದಲ್ಲಿ ಟೋಂಗಾ ದೇಶದಲ್ಲಿ ಲಾಕ್‍ಡೌನ್ ಜಾರಿಮಾಡಬೇಕಾಗಬಹುದು ಎಂದು ಎಚ್ಚರಿಸಿದ್ದಾರೆ. ಕೇವಲ 1.06ಲಕ್ಷ ಜನಸಂಖ್ಯೆ ಇರುವ ಪುಟ್ಟ ರಾಷ್ಟ್ರದಲ್ಲಿ ಈವರೆಗೆ ಮೂರನೇ ಒಂದರಷ್ಟು ಜನರು ಮಾತ್ರ ಕೋವಿಡ್ ಲಸಿಕೆ ಪಡೆದಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ