Tag: Coronavirus

  • ಕೊವ್ಯಾಕ್ಸಿನ್ ಲಸಿಕೆ ಪಡೆದವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಬಹುದು

    ಕೊವ್ಯಾಕ್ಸಿನ್ ಲಸಿಕೆ ಪಡೆದವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಬಹುದು

    ನವದೆಹಲಿ: ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಆಸ್ಟ್ರೇಲಿಯಾ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಆಸ್ಟ್ರೇಲಿಯಾ ಹೈ ಕಮಿಷನರ್ ಬ್ಯಾರಿ ಓಫಾರೆಲ್ ಹೇಳಿದ್ದಾರೆ.

    ಆಸ್ಟ್ರೇಲಿಯದ ಔಷಧಿ ಮತ್ತು ಲಸಿಕೆ ನಿಯಂತ್ರಣ ಮಂಡಳಿ “ಚಿಕಿತ್ಸಕ ಸರಕುಗಳ ಆಡಳಿತವು”(ಟಿಜಿಎ) ವರದಿ ಆಧರಿಸಿ ಬ್ಯಾರಿ ಓಫಾರೆಲ್ ಈ ಹೇಳಿಕೆ ನೀಡಿದ್ದು, ಆಸ್ಟ್ರೇಲಿಯಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊವ್ಯಾಕ್ಸಿನ್ ಪರಿಣಾಮಕಾರಿತ್ವವನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕೊವ್ಯಾಕ್ಸಿನ್ ಪರಿಣಾಮಕಾರಿಯಾಗಿದ್ದು ಅದು ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ ಎಂದು ವರದಿಗಳ ಆಧಾರದ ಮೇಲೆ ಟಿಎಜಿ ನಿರ್ಧಾರ ಮಾಡಿದ್ದು ಅನುಮತಿಗೆ ಒಪ್ಪಿದೆ. ಇದನ್ನೂ ಓದಿ: ಗೌಪ್ಯವಾಗಿ ಬೂಸ್ಟರ್ ಡೋಸ್ ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ

    ಆಸ್ಟ್ರೇಲಿಯಾ ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ಭಾರತೀಯ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ಅನುಕೂಲವಾಗಲಿದ್ದು, ಹೆಚ್ಚು ಜನರ ಸಂಚಾರಕ್ಕೆ ಸಹಕಾರಿಯಾಗಲಿದೆ. ಇದನ್ನೂ ಓದಿ: ಮಿಸ್ ಕೇರಳ ಸುಂದರಿಯರ ದುರಂತ ಅಂತ್ಯ

    ಕೊವ್ಯಾಕ್ಸಿನ್ ಲಸಿಕೆಗೆ ಈವರೆಗೂ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿಲ್ಲ, ಈಗಾಗಲೇ ಎರಡು ಹಂತದಲ್ಲಿ ಸಭೆಗಳನ್ನು ನಡೆಸಿರುವ ತಜ್ಞರ ಸಮಿತಿ ಹೆಚ್ಚುವರಿ ಮಾಹಿತಿಯನ್ನು ಕೇಳಿದ್ದು ಮೂರನೇ ಹಂತದ ಸಭೆಯಲ್ಲಿ ಬಹುತೇಕ ಮಾನ್ಯತೆ ಸಿಗುವ ಸಾಧ್ಯತೆಗಳಿದೆ. ಅದಕ್ಕೂ ಮುನ್ನ ಆಸ್ಟ್ರೇಲಿಯ ಸರ್ಕಾರ ನೀಡಿರುವ ಈ ಮಾನ್ಯತೆ ಕೊವ್ಯಾಕ್ಸಿನ್ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

  • ಒಟ್ಟು 292 ಕೇಸ್ – ಬೆಂಗಳೂರಿನಲ್ಲಿ 7 ಮಂದಿ ಸಾವು

    ಒಟ್ಟು 292 ಕೇಸ್ – ಬೆಂಗಳೂರಿನಲ್ಲಿ 7 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 292 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 137 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 204 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 7 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 345 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,644 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88,333 ಮಂದಿಗೆ ಕೊರೊನಾ ಬಂದಿದೆ. 29,41,578 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.76 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇದನ್ನೂ ಓದಿ: ಕಾಡಿನಲ್ಲೇ ತನ್ನ ಆಯಸ್ಸು ಕಳೆದ 90ರ ವೃದ್ಧನಿಗೆ ಒಲಿದು ಬಂತು ರಾಜ್ಯೋತ್ಸವ ಪ್ರಶಸ್ತಿ

    ಇಂದು ರಾಜ್ಯದಲ್ಲಿ ಒಟ್ಟು 28,947 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,06,939 ಸ್ಯಾಂಪಲ್ (ಆರ್‍ಟಿ ಪಿಸಿಆರ್ 86,737 + 20,202 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹಾಸನಾಂಬೆಯ ದರ್ಶನ ಪಡೆದ ಯದುವೀರ್ ಒಡೆಯರ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 137, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 24, ದಾವಣಗೆರೆ 2, ಧಾರವಾಡ 0, ಗದಗ 0, ಹಾಸನ 26, ಹಾವೇರಿ 1, ಕಲಬುರಗಿ 3, ಕೊಡಗು 11, ಕೋಲಾರ 2, ಕೊಪ್ಪಳ 0, ಮಂಡ್ಯ 8, ಮೈಸೂರು 33, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 17, ಉಡುಪಿ 2, ಉತ್ತರ ಕನ್ನಡ 6, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ.

  • ಒಟ್ಟು 347 ಕೊರೊನಾ ಪ್ರಕರಣ – 10 ಮಂದಿ ಸಾವು

    ಒಟ್ಟು 347 ಕೊರೊನಾ ಪ್ರಕರಣ – 10 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 347 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 166 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 100 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,708 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88.041 ಮಂದಿಗೆ ಕೊರೊನಾ ಬಂದಿದೆ. 29,41,233 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.88 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇದನ್ನೂ ಓದಿ: ನಕಲಿ ಬಾಂಬ್ ಸಿಕ್ಕ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಭದ್ರತಾ ತಪಾಸಣೆ

    ಇಂದು ರಾಜ್ಯದಲ್ಲಿ ಒಟ್ಟು 1,66,234 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,08,868 ಸ್ಯಾಂಪಲ್ (ಆರ್‍ಟಿ ಪಿಸಿಆರ್ 88,463 + 20,405 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 21, ದಾವಣಗೆರೆ 4, ಧಾರವಾಡ 1, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 3, ಕೊಪ್ಪಳ 0, ಮಂಡ್ಯ 8, ಮೈಸೂರು 44, ರಾಯಚೂರು 1, ರಾಮನಗರ 1, ಶಿವಮೊಗ್ಗ 9, ತುಮಕೂರು 19, ಉಡುಪಿ 14, ಉತ್ತರ ಕನ್ನಡ 14, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ 282 ಕೇಸ್ – 15 ಮಂದಿಯಲ್ಲಿ ಕಾಣಿಸಿಕೊಂಡ AY 12 ಪ್ರಭೇದ

    ರಾಜ್ಯದಲ್ಲಿ 282 ಕೇಸ್ – 15 ಮಂದಿಯಲ್ಲಿ ಕಾಣಿಸಿಕೊಂಡ AY 12 ಪ್ರಭೇದ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 282 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು 13 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದಿನ ವರೆಗೆ ಒಟ್ಟು 15 ಎವೈ-12 ಕೊರೊನಾ ಪ್ರಭೇದ ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 142 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 174 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 6 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 349 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,430 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,86,835 ಮಂದಿಗೆ ಕೊರೊನಾ ಬಂದಿದೆ. 29,40,339 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.4.60 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.24 ರಷ್ಟಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

    ಇಂದು ರಾಜ್ಯದಲ್ಲಿ ಇಂದು ಒಟ್ಟು 4,90,315 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,351 ಸ್ಯಾಂಪಲ್ (ಆರ್‍ಟಿ ಪಿಸಿಆರ್ 93,617 + 23,734 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶಾಲೆ ಆರಂಭವಾದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇದೆ: ಬಿ.ಸಿ ನಾಗೇಶ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 142, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 4, ಚಿತ್ರದುರ್ಗ 3, ದಕ್ಷಿಣ ಕನ್ನಡ 28, ದಾವಣಗೆರೆ 1, ಧಾರವಾಡ 1, ಗದಗ 0, ಹಾಸನ 18, ಹಾವೇರಿ 0, ಕಲಬುರಗಿ 0, ಕೊಡಗು 31, ಕೋಲಾರ 1, ಕೊಪ್ಪಳ 0, ಮಂಡ್ಯ 5, ಮೈಸೂರು 18, ರಾಯಚೂರು 1, ರಾಮನಗರ 3, ಶಿವಮೊಗ್ಗ 2, ತುಮಕೂರು 9, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಒಟ್ಟು 388 ಕೊರೊನಾ ಪ್ರಕರಣ – ಬೆಂಗಳೂರಿನಲ್ಲಿ 194 ಕೇಸ್

    ರಾಜ್ಯದಲ್ಲಿ ಒಟ್ಟು 388 ಕೊರೊನಾ ಪ್ರಕರಣ – ಬೆಂಗಳೂರಿನಲ್ಲಿ 194 ಕೇಸ್

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 388 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 194 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 448 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 586 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,711 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,85,986 ಮಂದಿಗೆ ಕೊರೊನಾ ಬಂದಿದೆ. 29,39,239 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.28 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.32 ರಷ್ಟಿದೆ. ಇದನ್ನೂ ಓದಿ: ಕಾಳಿ ನದಿಯಲ್ಲಿ ಗಾಳಹಾಕಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ

    ಇಂದು ರಾಜ್ಯದಲ್ಲಿ ಇಂದು ಒಟ್ಟು 39,983 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,827 ಸ್ಯಾಂಪಲ್ (ಆರ್‍ಟಿ ಪಿಸಿಆರ್ 95,523 + 22,304 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೆಡಿಕಲ್‍ನಲ್ಲಿ ಗ್ರೈಪ್ ವಾಟರ್ ಬದಲು ಪಾಯಿಸನ್ ಕೊಟ್ರು

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 194, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 7, ಚಿತ್ರದುರ್ಗ 4, ದಕ್ಷಿಣ ಕನ್ನಡ 34, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 25, ಹಾವೇರಿ 0, ಕಲಬುರಗಿ 0, ಕೊಡಗು 6, ಕೋಲಾರ 5, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 3, ಶಿವಮೊಗ್ಗ 12, ತುಮಕೂರು 37, ಉಡುಪಿ 4, ಉತ್ತರ ಕನ್ನಡ 10, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಳಿತ – ಇಂದು 214 ಕೇಸ್, 12 ಸಾವು

    ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಳಿತ – ಇಂದು 214 ಕೇಸ್, 12 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 214 ಹೊಸ ಕೊರೊನಾ ಕೇಸ್ ದಾಖಲಾಗುವ ಮೂಲಕ ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಕೊರೊನಾ ಸಾವಿನ ಸಂಖ್ಯೆ ಏರಿಕೆ ಕಂಡಿದ್ದು, ರಾಜ್ಯಾದ್ಯಂತ 12 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, 83 ಮಂದಿಗೆ ಪಾಸಿಟಿವ್ ವರದಿಯಾಗಿದೆ. 151 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,164 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,83,673 ಮಂದಿಗೆ ಕೊರೊನಾ ಬಂದಿದೆ. 29,36,527 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.5.61 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ಇಂದು ರಾಜ್ಯದಲ್ಲಿ ಇಂದು ಒಟ್ಟು 2,32,168 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 77,901 ಸ್ಯಾಂಪಲ್ (ಆರ್‍ಟಿ ಪಿಸಿಆರ್ 65,756 + 12,145 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರವಾಹದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ- ಪಾತ್ರೆಯಲ್ಲಿ ಕುಳಿತು ಮಂಟಪಕ್ಕೆ ತೆರಳಿದ್ರು!

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 83, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 2, ಕೊಡಗು 7, ಕೋಲಾರ 5, ಕೊಪ್ಪಳ 0, ಮಂಡ್ಯ 6, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 13, ತುಮಕೂರು 14, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಇಳಿಕೆ- ಇಂದು 326 ಕೇಸ್, 4 ಸಾವು

    ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಇಳಿಕೆ- ಇಂದು 326 ಕೇಸ್, 4 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 326 ಹೊಸ ಕೊರೊನಾ ಕೇಸ್ ದಾಖಲಾಗುವ ಮೂಲಕ ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಕೊರೊನಾ ಸಾವಿನ ಸಂಖ್ಯೆ ಇಳಿಕೆ ಕಂಡಿದ್ದು, ರಾಜ್ಯಾದ್ಯಂತ 4 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 173 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 87 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 1 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 380 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,450 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,83,459 ಮಂದಿಗೆ ಕೊರೊನಾ ಬಂದಿದೆ. 29,36,039 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.22 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.41 ರಷ್ಟಿದೆ. ಇದನ್ನೂ ಓದಿ: ಮನೆಯವರ ಒತ್ತಾಯಕ್ಕೆ ಮದುವೆ- 10ನೇ ದಿನಕ್ಕೆ ಗರ್ಭಿಣಿ, ಪತಿಗೆ ಶಾಕ್‌!

    ಇಂದು ರಾಜ್ಯದಲ್ಲಿ ಇಂದು ಒಟ್ಟು 29,173 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 78,742 ಸ್ಯಾಂಪಲ್ (ಆರ್‍ಟಿ ಪಿಸಿಆರ್ 52,732 + 26,010 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 9 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 173, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 12, ಹಾವೇರಿ 1, ಕಲಬುರಗಿ 1, ಕೊಡಗು 8, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 42, ರಾಯಚೂರು 1, ರಾಮನಗರ 0, ಶಿವಮೊಗ್ಗ 5, ತುಮಕೂರು 17, ಉಡುಪಿ 12, ಉತ್ತರ ಕನ್ನಡ 4, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

    ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

    ಮಡಿಕೇರಿ: ಕನ್ನಡ ನಾಡಿನ ಜೀವನದಿ, ಕೊಡಗಿನ ಕಾವೇರಿ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ  ದರ್ಶನ ನೀಡಿದ್ದಾಳೆ. ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವಾಗಿದ್ದು, ಸಾವಿರಾರು ಭಕ್ತರು ಈ ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು.

    ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಸರಿಯಾಗಿ ತೀರ್ಥೋದ್ಭವಾಗಿದೆ. ಮುಖ್ಯ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ 12 ಅರ್ಚಕರ ತಂಡ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಬಳಿಕ ತೀರ್ಥೋದ್ಭವವಾಗಿದೆ. ಈ ಮೊದಲು ಬ್ರಹ್ಮಕುಂಡಿಕೆ ಬಳಿ ಪುಷ್ಪಾರ್ಚನೆ, ಕುಂಕುಮಾರ್ಚನೆ ಮತ್ತು ಮಹಾಮಂಗಳಾರತಿಗಳನ್ನು ನೆರವೇರಿಸಿದರು. ಪವಿತ್ರ ತೀರ್ಥ ಕುಂಡಿಕೆಯ ಸಮೀಪ ಪುಷ್ಪಲಂಕಾರ ಮಾಡಲಾಗಿತ್ತು. ತೀರ್ಥೋದ್ಭವದ ಬಳಿಕ ಸಹಸ್ರಾರು ಮಂದಿ ತೀರ್ಥ ಪಡೆದು ಪುನೀತರಾದರು. ಇದನ್ನೂ ಓದಿ: RSS ಒಂದು ಕೋಮುವಾದಿ ಸಂಘಟನೆ- ಸಿದ್ದರಾಮಯ್ಯ

    ತೀರ್ಥೋದ್ಭವದಲ್ಲಿ ಭಾಗವಹಿಸಲು ಎಲ್ಲಾ ಭಕ್ತರಿಗೆ ಮುಕ್ತ ಅವಕಾಶ ನೀಡಿರುವುದರಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದಾರೆ. ಹೀಗಾಗಿ ಯಾವುದೇ ನೂಕು ನುಗ್ಗಲು ಆಗದಂತೆ ತಡೆಯುವುದಕ್ಕಾಗಿ ಜಿಲ್ಲಾಡಳಿತ ಬ್ಯಾರಿಕೇಡ್ ಗಳನ್ನು ಹಾಕಿ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಕೋವಿಡ್ ಇರುವುದರಿಂದ ತೀರ್ಥ ಕುಂಡಿಕೆಯ ಪಕ್ಕದಲ್ಲೇ ಇರುವ ಪವಿತ್ರ ಕೊಳದಲ್ಲಿ ಯಾರಿಗೂ ಹೋಗಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಅಲ್ಲಿ ಪುಣ್ಯ ಸ್ನಾನಕ್ಕೂ ಅವಕಾಶ ನಿರಾಕರಿಸಲಾಗಿತ್ತು.

    ದೊಡ್ಡ ಕೊಳಾಯಿಗಳನ್ನು ಇರಿಸಿ ಅಲ್ಲಿಂದಲೇ ಎಲ್ಲಾ ಭಕ್ತರಿಗೆ ತೀರ್ಥ ವಿತರಣೆಗೆ ವ್ಯವಸ್ಥೆ ಮಾಡಲಾಗಿತ್ತು. ತಲಕಾವೇರಿಗೆ ಬರುವ ಭಕ್ತರಿಗೆ ಕೊಡಗು ಏಕೀಕರಣ ರಂಗವು ಪ್ರತೀ ವರ್ಷದಂತೆ ಈ ವರ್ಷವೂ ಊಟದ ವ್ಯವಸ್ಥೆ ಮಾಡಿತ್ತು. ತೀರ್ಥೋದ್ಭವದ ದಿನವಾದ ಭಾನುವಾರ ಮತ್ತು ಸೋಮವಾರ ಎರಡು ದಿನ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಆದರೆ ಕೋವಿಡ್-19 ಆತಂಕ ಇರುವುದರಿಂದ ಸೀಮಿತ ಜನರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೊಮ್ಮಾಯಿ ಆರ್‌ಎಸ್‍ಎಸ್‍ನವರು ಅಲ್ಲ: ಸಿದ್ದರಾಮಯ್ಯ 

  • ಲಸಿಕೆ ಪಡೆಯದೇ ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದು ಹೈಡ್ರಾಮಾ ಮಾಡಿದ ವಯೋವೃದ್ಧೆ

    ಲಸಿಕೆ ಪಡೆಯದೇ ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದು ಹೈಡ್ರಾಮಾ ಮಾಡಿದ ವಯೋವೃದ್ಧೆ

    ಬೀದರ್: ಕೊರೊನಾ ಲಸಿಕೆ ಪಡೆಯದೇ ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದು ವಯೋವೃದ್ಧೆ ಹೈಡ್ರಾಮಾ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದಲ್ಲಿ ನಡೆದಿದೆ.

    ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದಡಿ ಬೀದರ್ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಹಳ್ಳಿಖೇಡ್ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಗ್ರಾಮದಲ್ಲಿ ಲಸಿಕೆ ಪಡೆಯದವರಿಗೆ ಲಸಿಕೆ ನೀಡಲು ಮುಂದಾದಾಗ ಲಸಿಕೆ ಪಡೆಯಲು ವಯೋವೃದ್ಧೆ ಮತ್ತು ಕೆಲವು ಮಹಿಳೆಯರು ಹಿಂದೇಟು ಹಾಕಿದ್ದಾರೆ. ಇದನ್ನೂ ಓದಿ: ತೋಟದ ಮನೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ -ರೈತರಿಗೆ ವ್ಯಾಕ್ಸಿನ್ ಹಾಕಿದ ಸಿಬ್ಬಂದಿ

    ವಯೋವೃದ್ಧೆ ಸರೋಜಾ (65) ಅವರು, ನನಗೆ ಲಸಿಕೆ ಬೇಡ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಅವರ ಕಾಲಿಗೆ ಬಿದ್ದು, ಈಗಾಗಲೆ ನನಗೆ ಜ್ವರ ಮತ್ತು ಕೈ ನೋವು ಇದೆ. ನಾನು ಸತ್ತರೆ ಏನು ಮಾಡೋದು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ, ಹಾಗೂ ಡಿಎಚ್‍ಓ ಮುಂದೆ ಹೈಡ್ರಾಮಾ ಮಾಡಿದ್ದಾರೆ. ಈ ವೇಳೆ ವೃದ್ಧೆಯ ಮನೆಯ ನೆಲದ ಮೇಲೆ ಕುಳಿತು ಜಿಲ್ಲಾಧಿಕಾರಿ, ಜಿಪಂ ಸಿಇಓ ಹಾಗೂ ಡಿಎಚ್‍ಓ ಎಷ್ಟೇ ಮನವೊಲಿಸಿದರು ಲಸಿಕೆ ಪಡೆಯಲು ವಯೋವೃದ್ಧೆ ಹಿಂದೇಟು ಹಾಕಿದ್ರು. ನಂತರ ಸತತ 30 ನಿಮಿಷಗಳ ಬಳಿಕ ಜಿಲ್ಲಾಧಿಕಾರಿಗಳ ಮಾತಿಗೆ ಒಪ್ಪಿದ ವಯೋವೃದ್ಧೆ ಲಸಿಕೆ ಪಡೆದರು. ಇದನ್ನೂ ಓದಿ: ಲಸಿಕೆ ಪಡೆಯಲು ಹೇಳಿದ್ದಕ್ಕೆ ಪೊಲೀಸರಿಗೆ ಬೆದರಿಕೆ ಹಾಕಿದ ವೃದ್ಧೆ

    ನನಗೆ ಏನಾದರು ಆದರೆ ನೋಡಿಕೊಳ್ಳಲು ಯಾರು ಇಲ್ಲ. ಜೊತೆಗೆ ಲಸಿಕೆ ಪಡೆದರೆ ಜ್ವರ ಹಾಗೂ ಕೈ ನೋವು ಬರುತ್ತೆ ಎಂದು ವೈಯೋ ವೃದ್ಧೆ ಪಬ್ಲಿಕ್ ಟಿವಿಗೆ ತನ್ನ ಅತಂಕ ವ್ಯಕ್ತಪಡಿಸಿದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ರಾಮಚಂದ್ರನ್ ತಪ್ಪು ಕಲ್ಪನೆಯಿಂದಾಗಿ ಅಜ್ಜಿ ಲಸಿಕೆ ಪಡೆಯಲು ಹಿಂದೇಟು ಹಾಕಿದ್ರು, ಈಗ ನಾವು ಸತತ ಮನವೊಲಿಸಿದ ಬಳಿಕ ಲಸಿಕೆ ಪಡೆದಿದ್ದಾರೆ. ಯಾರು ಲಸಿಕೆ ಪಡೆಯಲು ಭಯ ಪಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ನಂಗೆ ಇಂಜೆಕ್ಷನ್ ಬೇಡ, ನನ್ನ ಮಕ್ಕಳಿಗೆ ಅನ್ನ ಮಾಡಿಕೊಡೋರು ಯಾರೂ ಇಲ್ಲ- ಲಸಿಕೆ ಹೈಡ್ರಾಮ

  • ರಾಜ್ಯದಲ್ಲಿ ಇಳಿಕೆ ಕಂಡ ಕೊರೊನಾ- 264 ಕೇಸ್, 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

    ರಾಜ್ಯದಲ್ಲಿ ಇಳಿಕೆ ಕಂಡ ಕೊರೊನಾ- 264 ಕೇಸ್, 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 264 ಹೊಸ ಕೊರೊನಾ ಕೇಸ್ ದಾಖಲಾಗುವ ಮೂಲಕ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. 6 ಮಂದಿ ಸಾವನ್ನಪ್ಪಿದ್ದಾರೆ. ಇಂದು ಒಟ್ಟು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 421 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,508 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,83,133 ಮಂದಿಗೆ ಕೊರೊನಾ ಬಂದಿದೆ. 29,35,659 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.27 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.43 ರಷ್ಟಿದೆ. ಇದನ್ನೂ ಓದಿ: ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು ದೇವೇಗೌಡ್ರು: ಹೆಚ್.ಡಿ. ರೇವಣ್ಣ

    ಇಂದು ರಾಜ್ಯದಲ್ಲಿ ಇಂದು ಒಟ್ಟು 2,03,951 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 60,141 ಸ್ಯಾಂಪಲ್ (ಆರ್‍ಟಿ ಪಿಸಿಆರ್ 47,396 + 12,745 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ 121 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 132 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 3 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 121, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ಚಿತ್ರದುರ್ಗ 0, ದಕ್ಷಿಣ ಕನ್ನಡ 34, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 16, ಹಾವೇರಿ 1, ಕಲಬುರಗಿ 1, ಕೊಡಗು 12, ಕೋಲಾರ 7, ಕೊಪ್ಪಳ 0, ಮಂಡ್ಯ 7, ಮೈಸೂರು 21, ರಾಯಚೂರು 1, ರಾಮನಗರ 2, ಶಿವಮೊಗ್ಗ 5, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ 0, ಮತ್ತು ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.