Tag: Coronavirus

  • ರಾಜ್ಯದಲ್ಲಿ ಇಂದು ಒಟ್ಟು 470 ಕೇಸ್, 9 ಸಾವು- ಬೆಂಗಳೂರಿನಲ್ಲಿ 232 ಪ್ರಕರಣ

    ರಾಜ್ಯದಲ್ಲಿ ಇಂದು ಒಟ್ಟು 470 ಕೇಸ್, 9 ಸಾವು- ಬೆಂಗಳೂರಿನಲ್ಲಿ 232 ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 470 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ನಿನ್ನೆಗಿಂತ ಹೆಚ್ಚು ಪ್ರಕರಣಗಳು ದಾಖಲಾಗಿದೆ. 232 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 122 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 1 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 368 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,671 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,82,869 ಮಂದಿಗೆ ಕೊರೊನಾ ಬಂದಿದೆ. 29,35,238 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.91 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.50 ರಷ್ಟಿದೆ. ಇದನ್ನೂ ಓದಿ: 20 ನಿಮಿಷದಲ್ಲಿ ವಿಶ್ವವಿಖ್ಯಾತ ಮೈಸೂರಿನ ಜಂಬೂಸವಾರಿ ಮುಕ್ತಾಯ

    ಇಂದು ರಾಜ್ಯದಲ್ಲಿ ಇಂದು ಕಡಿಮೆ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದ್ದು, ಒಟ್ಟು 38,002 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 93,806 ಸ್ಯಾಂಪಲ್ (ಆರ್‍ಟಿ ಪಿಸಿಆರ್ 79,668 + 14,138 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಇನ್ನೂ 9 ದಿನ ವಿಸ್ತರಣೆ: ಬೊಮ್ಮಾಯಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 232, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 8, ಚಿತ್ರದುರ್ಗ 3, ದಕ್ಷಿಣ ಕನ್ನಡ 36, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 16, ಹಾವೇರಿ 0, ಕಲಬುರಗಿ 0, ಕೊಡಗು 22, ಕೋಲಾರ 9, ಕೊಪ್ಪಳ 0, ಮಂಡ್ಯ 16, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 4, ತುಮಕೂರು 16, ಉಡುಪಿ 14, ಉತ್ತರ ಕನ್ನಡ 11, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್

    ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್

    ನವದೆಹಲಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮನಮೋಹನ್ ಸಿಂಗ್ ಅವರಿಗೆ ನಿನ್ನೆಯಿಂದ ಜ್ವರ ಆರಂಭವಾಗಿದ್ದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಇಂದು ಜ್ವರ ಹೆಚ್ಚಳಗೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಮನಮೋಹನ್ ಸಿಂಗ್ ಅವರು ಕೆಲ ದಿನಗಳ ಹಿಂದೆ 89ನೇ ವರ್ಷಕ್ಕೆ ಕಾಲಿಟ್ಟಿದ್ದರು. ಅದಲ್ಲದೆ ಕೊರೊನಾ 2ನೇ ಅಲೆಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ

  • ರಾಜ್ಯದಲ್ಲಿ ಇಂದು ಒಟ್ಟು 357 ಕೇಸ್- ಬೆಂಗಳೂರಿನಲ್ಲಿ 140 ಪ್ರಕರಣ

    ರಾಜ್ಯದಲ್ಲಿ ಇಂದು ಒಟ್ಟು 357 ಕೇಸ್- ಬೆಂಗಳೂರಿನಲ್ಲಿ 140 ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 357 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 140 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 157 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 5 ಜನ ಮರಣ ಹೊಂದಿದ್ದಾರೆ.

    ರಾಜ್ಯದಲ್ಲಿ 438 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,621 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,82,089 ಮಂದಿಗೆ ಕೊರೊನಾ ಬಂದಿದೆ. 29,34,523 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.80 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇದನ್ನೂ ಓದಿ: ಉಪ್ಪಿಗೆ ರೆಡ್ ಆಕ್ಸೈಡ್ ಮಿಶ್ರಣ ಮಾಡಿ ಗೊಬ್ಬರವೆಂದು ಮಾರಾಟ – ಆರೋಪಿಗಳು ಪೊಲೀಸರ ಬಲೆಗೆ

    ಇಂದು ರಾಜ್ಯದಲ್ಲಿ ಒಟ್ಟು 4,19,846 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,12,780 ಸ್ಯಾಂಪಲ್ (ಆರ್‍ಟಿ ಪಿಸಿಆರ್ 87,948 + 24,832 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯತ್ನಿಸುತ್ತಿವೆ: ದೇವೇಗೌಡ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 140, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ 1, ಹಾಸನ 26, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 8, ಕೊಪ್ಪಳ 1, ಮಂಡ್ಯ 9, ಮೈಸೂರು 21, ರಾಯಚೂರು 2, ರಾಮನಗರ 2, ಶಿವಮೊಗ್ಗ 9, ತುಮಕೂರು 27, ಉಡುಪಿ 16, ಉತ್ತರ ಕನ್ನಡ 13, ವಿಜಯಪುರ 6 ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಇಂದು 373 ಕೇಸ್- 14 ಜಿಲ್ಲೆಗಳಲ್ಲಿ ಒಂದಕ್ಕಿ ಪ್ರಕರಣ

    ರಾಜ್ಯದಲ್ಲಿ ಇಂದು 373 ಕೇಸ್- 14 ಜಿಲ್ಲೆಗಳಲ್ಲಿ ಒಂದಕ್ಕಿ ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 373 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. 14 ಜಿಲ್ಲೆಗಳಲ್ಲಿ ಒಂದಕ್ಕಿ (10ಕ್ಕಿಂತ ಕಡಿಮೆ) ಪ್ರಕರಣಗಳು ದಾಖಲಾಗಿದೆ.

    ರಾಜ್ಯದಲ್ಲಿ 611 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,906 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,81,400 ಮಂದಿಗೆ ಕೊರೊನಾ ಬಂದಿದೆ. 29,33,570 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.68ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.45ರಷ್ಟಿದೆ. ಇದನ್ನೂ ಓದಿ: ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

    ಇಂದು ರಾಜ್ಯದಲ್ಲಿ ಒಟ್ಟು 3,25,664 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 82,853 ಸ್ಯಾಂಪಲ್ (ಆರ್‍ಟಿ ಪಿಸಿಆರ್ 69,790 + 13,063 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 146 ಪ್ರಕರಣಗಳು ವರದಿಯಾಗಿದ್ದು, 210 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿ, 5 ಜನ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ – ಸಾಕ್ಷ್ಯ ನೀಡಿ ಸ್ಪಷ್ಟನೆ ನೀಡಿದ ಸುಧಾಕರ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಒಟ್ಟು 7 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ. ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 146, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 0, ಚಿತ್ರದುರ್ಗ 1, ದಕ್ಷಿಣ ಕನ್ನಡ 38, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 38, ಹಾವೇರಿ 0, ಕಲಬುರಗಿ 0, ಕೊಡಗು 15, ಕೋಲಾರ 7, ಕೊಪ್ಪಳ 1, ಮಂಡ್ಯ 10, ಮೈಸೂರು 43, ರಾಯಚೂರು 2, ರಾಮನಗರ 1, ಶಿವಮೊಗ್ಗ 5, ತುಮಕೂರು 17, ಉಡುಪಿ 15, ಉತ್ತರ ಕನ್ನಡ 12, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

    ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

    ನ್ಯೂಯಾರ್ಕ್: ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಇಡೀ ಪ್ರಪಂಚವೇ ತತ್ತರಿಸಿ ಹೋಗಿತ್ತು. ಈ ಸಮಯದಲ್ಲಿ ಸಾಂಕ್ರಾಮಿಕಕ್ಕೆ ಮದ್ದಾಗಿದ್ದೇ ಕೋವಿಡ್ ಲಸಿಕೆ. ಈ ವರ್ಷ ವೈದ್ಯಕೀಯ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ದೊರಕಬಹುದು ಎಂದು ಹಲವು ಊಹೆ ಮಾಡಿದ್ದರು. ಆದರೆ ಅದು ಸಿಗಲಿಲ್ಲ, ಇದಕ್ಕೆ ಕಾರಣ ಏನು ಎಂಬುದು ಬಯಲಾಗಿದೆ.

    ಪ್ರತಿವರ್ಷ ನೊಬೆಲ್ ಪುರಸ್ಕಾರಕ್ಕೆ ಅರ್ಹರ ಹೆಸರು ಶಿಫಾರಸು ಮಾಡಲು ಫೆ.1 ಕಡೆಯ ದಿನ ಅಷ್ಟರೊಳಗೆ ಸಲ್ಲಿಕೆಯಾದ ಹೆಸರುಗಳನ್ನು ಸ್ಟಾಕ್ ಹೋಂ ನೆರಾಯಲ್ ಸ್ವೀಡಿಶ್ ಅಕಾಡೆಮಿ(  Royal Swedish Academy of Sciences in Stockholm) ಪ್ರಶಸ್ತಿಗೆ ಪರಿಗಣತಿಸುತ್ತದೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರರ ಪೋರಿ

    ಆದರೆ ಫೆ.1ಕ್ಕೆ ಮೊದಲೇ ಕೋವಿಡ್‍ಗೆ ಮೊದಲು ಎಂಆರ್‍ಎನ್‍ಎ (MRNA) ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿತ್ತಾದರೂ, ಅದನ್ನು ಪೂರ್ಣ ಪ್ರಮಾಣದಲ್ಲಿ ನೀಡಲಾಗಿರಲಿಲ್ಲ. ಜೊತೆಗೆ ಅದರ ಪರಿಣಾಮಗಳ ಕುರಿತಾಗಿ ಹೆಚ್ಚನ ಮಾಹಿತಿ ಇರಲಿಲ್ಲ. ಹೀಗಾಗಿ ನಾಮನಿರ್ದೇಶನದ ವೇಳೆ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದವರ ಹೆಸರು ಸೇರ್ಪಡೆಯಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 7 ಮಕ್ಕಳ ನಾಪತ್ತೆ ಪ್ರಕರಣ – 4 ತಂಡ ಮಾಡಿ ಪತ್ತೆ ಕಾರ್ಯ

    ನೊಬೆಲ್ ಪ್ರಶಸ್ತಿ ನಾಮ ನಿರ್ದೇಶನ ಮಾಡಲು ನಿಗಧಿ ಕಾಲಮಿತಿ ಇರುತ್ತದೆ. ಇದರೊಟ್ಟಿಗೆ ಹಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಆದರೆ ಕೋವಿಡ್ ಲಸಿಕೆ ಸಂಬಂಧಿದಂತೆ ಸಕಾಲದಲ್ಲಿ ಸಲ್ಲಿಕೆಯಾಗದಿದ್ದರಿಂದ ಪ್ರಶಸ್ತಿ ಪಟ್ಟಿಯಲ್ಲಿ ಇರಲಿಲ್ಲ. ಸಮಯ ಇದೇ ಕಾಯೋಣ ಎಂದು ರಾಯಲ್ ಸ್ವೀಡಿಶ್ ಅಕಾಡೆಮಿಯ ಮಖ್ಯ ಕಾರ್ಯದರ್ಶಿ ಗೋರನ್ ಹ್ಯಾನ್ಸನ್ ಹೇಳಿದ್ದಾರೆ.

    ಕೋವಿಡ್ ಲಸಿಕೆ ನೀಜಕ್ಕೂ ಅದ್ಭುತವಾದ್ದು, ಮನುಕುಲಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಲಸಿಕೆ ತಯಾರಿಸಲು ಶ್ರಮಿಸಿದ ವಿಜ್ಞಾನಿಗಳಿಗೆ ಇಡೀ ಮನುಕುಲವೇ ಆಭಾರಿಯಾಗಿದೆ.

  • ರಾಜ್ಯದಲ್ಲಿ ಇಂದು 406 ಕೇಸ್- ಬೆಂಗಳೂರಿನಲ್ಲಿ 156 ಪ್ರಕರಣ, 5 ಸಾವು

    ರಾಜ್ಯದಲ್ಲಿ ಇಂದು 406 ಕೇಸ್- ಬೆಂಗಳೂರಿನಲ್ಲಿ 156 ಪ್ರಕರಣ, 5 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 406 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 156 ಮಂದಿಗೆ ಸೋಂಕು ತಗುಲಿದ್ದು, 5 ಮಂದಿ ಮೃತಪಟ್ಟಿದ್ದಾರೆ.

    ರಾಜ್ಯದಲ್ಲಿ 637 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 10,154 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,81,027 ಮಂದಿಗೆ ಕೊರೊನಾ ಬಂದಿದೆ. 29,32,959 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.46ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.35ರಷ್ಟಿದೆ. ಇದನ್ನೂ ಓದಿ: VVIPಗಳಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ- ಭಕ್ತರ ಆಕ್ರೋಶ

    ಇಂದು ರಾಜ್ಯದಲ್ಲಿ ಒಟ್ಟು 1,57,197 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,365 ಸ್ಯಾಂಪಲ್ (ಆರ್‍ಟಿ ಪಿಸಿಆರ್ 93,199 + 21,166 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 8 ಜಿಲ್ಲೆಗಳಾದ ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಭಾರತದಲ್ಲಿ 2022ರ ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ: ಕೇಂದ್ರ ಸಚಿವ ನಖ್ವಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 4, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 156, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 11, ಚಿತ್ರದುರ್ಗ 2, ದಕ್ಷಿಣ ಕನ್ನಡ 38, ದಾವಣಗೆರೆ 4, ಧಾರವಾಡ 7, ಗದಗ 0, ಹಾಸನ 32, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 4, ಕೊಪ್ಪಳ 0, ಮಂಡ್ಯ 11, ಮೈಸೂರು 56, ರಾಯಚೂರು 1, ರಾಮನಗರ 3, ಶಿವಮೊಗ್ಗ 11, ತುಮಕೂರು 13, ಉಡುಪಿ 18, ಉತ್ತರ ಕನ್ನಡ 12 ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • VVIPಗಳಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ- ಭಕ್ತರ ಆಕ್ರೋಶ

    VVIPಗಳಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ- ಭಕ್ತರ ಆಕ್ರೋಶ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲನ್ನು ಇದೇ ಅಕ್ಟೋಬರ್ 28 ರಂದು ತೆರೆದು ನವೆಂಬರ್ 6 ರಂದು ಬಾಗಿಲು ಹಾಕಲಾಗುತ್ತದೆ. ಈ ಬಾರಿ ವಿವಿಐಪಿಗಳಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಅಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.


    ಕೊರೊನಾ ಬರುವುದಕ್ಕಿಂತ ಮುಂಚೆ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ ಈಗ ಕೊರೊನ ನೆಪವೊಡ್ಡಿ ಸಾರ್ವಜನಿಕರಿಗೆ ನೇರ ದರ್ಶನಕ್ಕೆ ಅವಕಾಶವಿಲ್ಲ ಎಂದು ನಿರ್ಧರಿಸಲಾಗಿದ್ದು, ಆನ್‍ಲೈನ್ ಮೂಲಕ ಮತ್ತು ಹಾಸನ ನಗರದ ಹಲವೆಡೆ ಬೃಹತ್ ಎಲ್‍ಇಡಿ ಪರದೆ ಹಾಕಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಹಾಗಾಗಿ ವಿವಿಐಪಿಗಳಿ ಮಾತ್ರ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವುದು ಹಾಸನದ ಜನಸಾಮಾನ್ಯರ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಅ.28 ರಿಂದ ನ.6 ರವರೆಗೆ ಹಾಸನಾಂಬ ಬಾಗಿಲು ಓಪನ್- ಸಾರ್ವಜನಿಕರ ದರ್ಶನಕ್ಕೆ ಇಲ್ಲ ಅವಕಾಶ

    ಬಹುತೇಕ ರಾಜ್ಯದ ಎಲ್ಲ ಪ್ರಮುಖ ದೇವಾಲಯಗಳಲ್ಲೂ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ. ರಾಜಕಾರಣಿಗಳ ಕಾರ್ಯಕ್ರಮಗಳಲ್ಲಿ ಸಾವಿರಾರು ಜನ ಸೇರುತ್ತಾರೆ. ಅಲ್ಲಿ ಎಲ್ಲೂ ಕೊರೊನ ಬರೋದಿಲ್ಲ. ಆದರೆ ಹಾಸನಾಂಬೆ ದೇವಾಲಯದಲ್ಲಿ ಮಾತ್ರ ಕೊರೊನ ಬರುತ್ತ? ಹಾಸನ ಜನರಿಗೊಂದು ನ್ಯಾಯ, ವಿವಿಐಪಿಗಳಿಗೊಂದು ನ್ಯಾಯ ಮಾಡೋದು ಸರಿಯಲ್ಲ. ಹಾಸನಾಂಬೆಯ ಮಕ್ಕಳಾದ ಹಾಸನ ಜನರಿಗೆ ದೇವಿಯ ದರ್ಶನಕ್ಕೆ ಅವಕಾಶ ಇಲ್ಲ ಅನ್ನೋದಾದ್ರೆ, ಯಾವ ವಿವಿಐಪಿಗಳಿಗೂ ದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಹಾಸನದ ಜನರು ಆಕ್ರೋಶ ಹೊರಹಾಕಿದ್ದಾರೆ.

    ಒಟ್ಟಾರೆ ವರ್ಷಕ್ಕೊಮ್ಮೆ ವಾಗಿಲು ತೆರೆಯುವ ಹಾಸನಾಂಬೆ ದೇವರ ದರ್ಶನಕ್ಕೆ ಕೇವಲ ವಿವಿಐಪಿಗಳಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸುತ್ತಿರುವುದಕ್ಕೆ ಹಾಸನ ಜನರ ತೀವ್ರ ವಿರೋಧವಿದೆ. ದೇವರ ದರ್ಶನಕ್ಕೆ ಕೊರೊನ ಅಡ್ಡಿ ಅನ್ನೋದಾದ್ರೆ ಯಾವ ವಿವಿಐಪಿಗಳಿಗೂ ದರ್ಶನ ನೀಡಬೇಡಿ ಎಂಬ ಹಾಸನ ಜನರ ಮಾತಿಗೆ ಜಿಲ್ಲೆಯಾದ್ಯಂತ ಬೆಂಬಲ ವ್ಯಕ್ತವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಯಾವ ರೀತಿ ಸ್ಪಂದಿಸುತ್ತಾರೆ ಕಾದು ನೋಡಬೇಕಿದೆ. ಇದನ್ನೂ ಓದಿ: ಮುಡಿ ಮಾಡಿಸಿಕೊಂಡು ಬರುವ ಭಕ್ತರಿಗಿಲ್ಲ ಮಾದಪ್ಪನ ದರ್ಶನ- ಭಕ್ತರ ಆಕ್ರೋಶ

  • ರಾಜ್ಯದಲ್ಲಿ ಇಂದು 451 ಕೇಸ್- 9 ಸಾವು

    ರಾಜ್ಯದಲ್ಲಿ ಇಂದು 451 ಕೇಸ್- 9 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು 451 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.1.99 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.37 ರಷ್ಟಿದೆ.

    ರಾಜ್ಯದಲ್ಲಿ 1,455 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 10,395 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,80,621 ಮಂದಿಗೆ ಕೊರೊನಾ ಬಂದಿದೆ. 29,32,322 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದನ್ನೂ ಓದಿ: ಪಟಾಕಿ, ವಾದ್ಯದ ಸದ್ದಿಗೆ ಬೆದರಿದ ಆನೆ – ಜಂಬೂ ಸವಾರಿ ಮೆರವಣಿಗೆ ಸ್ಥಗಿತ

    ಇಂದು ರಾಜ್ಯದಲ್ಲಿ ಒಟ್ಟು 1,37,417 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,20,045 ಸ್ಯಾಂಪಲ್ (ಆರ್‍ಟಿ ಪಿಸಿಆರ್ 94,506 + 25,539 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸೋಂಕಿನ ಸಂಖ್ಯೆ ನೂರಕ್ಕಿಂತ ಕಡಿಮೆ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 187 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 1,009 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 187, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 27, ದಾವಣಗೆರೆ 2, ಧಾರವಾಡ 5, ಗದಗ 1, ಹಾಸನ 43, ಹಾವೇರಿ 0, ಕಲಬುರಗಿ 0, ಕೊಡಗು 14, ಕೋಲಾರ 4, ಕೊಪ್ಪಳ 0, ಮಂಡ್ಯ 11, ಮೈಸೂರು 48, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 17, ಉಡುಪಿ 21, ಉತ್ತರ ಕನ್ನಡ 37 ವಿಜಯನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಟಾಮ್ ಬಾಯ್ ಲುಕ್‍ನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್

  • ಕೆರೆ ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನ್

    ಕೆರೆ ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನ್

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ಅಮಾನಿ, ಭೈರಸಾಗರ ಕೆರೆ ನೋಡಲು ಬಂದವರಿಗೆ ಕೋವಿಡ್-19 ಲಸಿಕೆ ಹಾಕುವ ಮೂಲಕ ವಿನೂತನ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ನಡೆದಿದೆ.

    ಗುಡಿಬಂಡೆಯಲ್ಲಿ ಅಮಾನಿ, ಭೈರಸಾಗರ ಕೆರೆ ತುಂಬಿ ಹರಿದಿದೆ ಇದನ್ನು ನೋಡಲು ಸುತ್ತಮುತ್ತಲಿನ ಗ್ರಾಮದ ಜನರು ಆಗಮಿಸಿದ್ದಾರೆ. ಇದನ್ನು ಕಂಡು ಗುಡಿಬಂಡೆ ತಾಲೂಕು ಅರೋಗ್ಯಾಧಿಕಾರಿ ವಿನೂತನ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಆರಂಭಿಸಿದ್ದಾರೆ. ಗುಡಿಬಂಡೆ ಆರೋಗ್ಯ ಇಲಾಖಾ ಸಿಬ್ಬಂದಿಯ ಕಾರ್ಯಕ್ಕೆ ಡಿಎಚ್ ಇಂದಿರಾ ಕಬಾಡೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ಶೇ.86 ರಷ್ಟು ಮಂದಿ ಮೊದಲ ಲಸಿಕೆ ಪಡೆದಿದ್ದು, ಶೇ.42 ರಷ್ಟು ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಇಂದಿರಾ ಕಬಾಡೆ ತಿಳಿಸಿದ್ದಾರೆ. ಇದನ್ನೂ ಓದಿ: ಲಸಿಕೆ ಬಗ್ಗೆ ಮುಂದುವರಿದ ಮೌಢ್ಯತೆ – ಅಧಿಕಾರಿಗಳಿಗೆ ಕುಂಟು ನೆಪ ಹೇಳಿ ಎಸ್ಕೇಪ್

    ಕೆರೆ ತುಂಬಿಹರಿಯುತ್ತಿರುವುದನ್ನು ನೋಡಲು ಬಂದ ನೂರಾರು ಜನರಿಗೆ ವ್ಯಾಕ್ಸಿನ್ ಶಾಕ್ ಎದುರಾಗಿದೆ. ತಾಲೂಕು ಆರೋಗ್ಯಾಧಿಕಾರಿಗಳು ಕೆರೆ ನೋಡಲು ಆಗಮಿಸಿದ ಸಾರ್ವಜನಿಕರಿಗೆ ಕೆರೆಯ ದಡದಲ್ಲೆ ಲಸಿಕೆ ನೀಡುವ ಮೂಲಕ ಕೊರೊನಾ ಜಾಗೃತಿ ಮೂಡಿಸಿದ್ದಾರೆ. ಹಲವು ಕಡೆ ಹಳ್ಳಿಯ ಜನ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿಲ್ಲ. ಮನೆ ಮನೆಗೆ ಬಂದು ಲಸಿಕೆ ಕೊಡಲು ಮುಂದಾದರು ಹಾಕಿಸಿಕೊಳ್ಳಲು ಸಾರ್ವಜನಿಕರು ಭಯಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದು ಜಿಲ್ಲೆಯ ಗ್ರಾಮಸ್ಥರು ಕೆರೆ ನೋಡಲು ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳುವಂತಾಗಿದೆ. ಇದನ್ನೂ ಓದಿ: ಲಸಿಕೆ ಪ್ರಮಾಣ ಹೆಚ್ಚಳ – ಯಾದಗಿರಿ ಜಿಲ್ಲಾಡಳಿತದ ಪ್ಲ್ಯಾನ್ ಯಶಸ್ವಿಯಾಗಿದ್ದು ಹೇಗೆ?

  • ಕೋವಿಡ್ ಸಮಯದಲ್ಲಿ ವೈದ್ಯರ ಸೇವೆಗೆ ಸಿಗದ ಪ್ರೋತ್ಸಾಹ ಧನ- ಕ್ರಿಮ್ಸ್ ವೈದ್ಯರ ಪ್ರತಿಭಟನೆ

    ಕೋವಿಡ್ ಸಮಯದಲ್ಲಿ ವೈದ್ಯರ ಸೇವೆಗೆ ಸಿಗದ ಪ್ರೋತ್ಸಾಹ ಧನ- ಕ್ರಿಮ್ಸ್ ವೈದ್ಯರ ಪ್ರತಿಭಟನೆ

    ಕಾರವಾರ: ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವೈದ್ಯರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

    ನಗರದ ಕಾರವಾರ ಮೆಡಿಕಲ್ ಕಾಲೇಜಿನ ಎದುರು ಜಮಾಯಿಸಿದ ಕ್ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ಥಾನಿಕ ವೈದ್ಯರು, ಸರ್ಕಾರದ ವಿರುದ್ಧ ಘೋಷಣಾ ಫಲಕಗಳನದನ ಹಿಡಿದು ಶಾಂತಿಯುತವಾಗಿ ಪ್ರತಿಭಟಿಸಿದರು. ಇದನ್ನೂ ಓದಿ: ರಾಯಚೂರಿನಲ್ಲಿ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ – ಹೋರಾಟಗಾರರ ಬಂಧನ

    ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ರಾಜ್ಯಾದ್ಯಂತ ವೈದ್ಯರು ಸೇವೆ ಸಲ್ಲಿಸಿದ್ದಾರೆ. ಆದರೆ ವೈದ್ಯರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನು ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದ್ದು, ಇದರಿಂದಾಗಿ ವೈದ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಶೀಘ್ರದಲ್ಲಿ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು ಎಂದು ವೈದ್ಯರು ಒತ್ತಾಯಿಸಿದ್ದರೆ.