Tag: Coronavirus

  • ರಾಮನಗರ ಜೈಲಿನಲ್ಲಿ ಐವರಿಗೆ ಕೊರೊನಾ ದೃಢ: ಅಶ್ವತ್ಥನಾರಾಯಣ

    ರಾಮನಗರ ಜೈಲಿನಲ್ಲಿ ಐವರಿಗೆ ಕೊರೊನಾ ದೃಢ: ಅಶ್ವತ್ಥನಾರಾಯಣ

    – ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಸಲ್ಲದು
    – ಡಿಕೆಶಿಗೆ ಡಿಸಿಎಂ ಟಾಂಗ್

    ಬೆಂಗಳೂರು: ರಾಮನಗರ ಜೈಲಿನಲ್ಲಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿ ಬಳಿಕ ಮಾತನಾಡಿದ ಅವರು, ರಾಮನಗರದಲ್ಲಿರುವ ಖೈದಿಗಳನ್ನು ವರ್ಗಾಯಿಸುವ ವೇಳೆ ವಿರೋಧ ಇತ್ತು. ಪರಪ್ಪನ ಅಗ್ರಹಾರ ದೊಡ್ಡ ಜೈಲು, ರಾಮನಗರ ಚಿಕ್ಕ ಜೈಲು. ಹಾಗಾಗಿ ಪಾದರಾಯನಪುರದ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ ಇಡಲಾಯ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದರು.

    ರಾಮನಗರ ಜೈಲಿನ 19 ಮಂದಿ ಖೈದಿಗಳನ್ನು ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡುತ್ತೇವೆ. ಪಾಸಿಟಿವ್ ಬಂದಿರುವ 5 ಮಂದಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡುತ್ತೇವೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುತ್ತೇವೆ ಎಂದು ತಿಳಿಸಿದರು.

    ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ನಾವು ಮುನ್ನೆಚ್ಚಿರಕ ಕ್ರಮಗಳನ್ನು ಕೈಗೊಂಡೇ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ ಇರಿಸಿದ್ದೆವು. ಇಂತಹ ಪರಿಸ್ಥಿತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರಕ್ಕೆ ಸಲಹೆ ನೀಡಿಬೇಕೇ ಹೊರತು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು. ಯಾವುದೇ ಕಾರಣಕ್ಕೂ ಜನರನ್ನು ಪ್ರಚೋದನೆ ಮಾಡಬಾರದು. ಈವರೆಗೂ ಸಹಕಾರ ಕೊಟ್ಟಿದ್ದಾರೆ. ಅವರು ಒಂದು ಪಕ್ಷದ ರಾಜ್ಯಾಧ್ಯಕ್ಷರು, ಪ್ರಚೋದನೆ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಟಾಂಗ್ ಕೊಟ್ಟರು.

    121 ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಅದರಲ್ಲಿ ಇಬ್ಬರು ಆರೋಪಿಗಳಿಗೆ ಸೋಂಕಿನ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಗುರುವಾರ ತಡರಾತ್ರಿಯೇ ಇಬ್ಬರು ಸೋಂಕಿತ ಆರೋಪಿಗಳನ್ನು ಆರೋಗ್ಯ ಸಿಬ್ಬಂದಿ ಶಿಫ್ಟ್ ಮಾಡಿದ್ದರು. ಜೈಲಿನಿಂದ ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತರ ಶಿಫ್ಟ್ ಮಾಡಿದ್ದು, ಆರೋಗ್ಯ ಸಿಬ್ಬಂದಿ ಮತ್ತು ಜಿಲ್ಲಾಡಳಿತ ಜೈಲಿನ ಸುತ್ತಮುತ್ತ ಸೀಲ್‍ಡೌನ್ ಮಾಡಿದ್ದಾರೆ. ಈ ಬೆನ್ನಲ್ಲೇ ಐವರಿಗೆ ಸೋಂಕು ತಗುಲಿರುವುದನ್ನು ಅಶ್ವತ್ಥನಾರಾಯಣ ಅವರು ದೃಢಪಡಿಸಿದ್ದಾರೆ.

    ರಾಮನಗರ ಜೈಲಿನಲ್ಲಿರುವ ಕೈದಿಗಳಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಇತ್ತ ಬೆಂಗಳೂರು ಪೊಲೀಸರಿಗೂ ಆತಂಕ ಶುರುವಾಗಿದೆ. ಹೀಗಾಗಿ ಪಾದರಾಯನಪುರ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನು ಅಟ್ಟಾಡಿಸಿ ಸೆರೆ ಹಿಡಿದಿದ್ದಾರೆ. ಮೂರು ರಾತ್ರಿ- ಹಗಲು ಕಾರ್ಯಚರಣೆ ನಡೆಸಿ ಸುಮಾರು 135 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಎಲ್ಲಾ ಆರೋಪಿಗಳನ್ನು ರಾಮನಗರ ಜೈಲಿಗೆ ಬಿಟ್ಟು ಬಂದಿದ್ದರು. ಸದ್ಯ ರಾಮನಗರ ಜೈಲಿನಲ್ಲಿರುವ ಇಬ್ಬರು ಆರೋಪಿಗಳಿಗೆ ಪಾಸಿಟಿವ್ ಬಂದಿದ್ದು, ಇದೀಗ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್ ಇರೋ ಶಂಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ಬೆಂಗಳೂರಿಗೆ ವಾಪಸ್ ಕರೆ ತರೋ ಸಾಧ್ಯತೆಗಳಿವೆ.

  • ಬೆಂಗ್ಳೂರಿಗೆ ಲಾಕ್‍ಡೌನ್‍ನಿಂದ ಸದ್ಯಕ್ಕಿಲ್ಲ ರಿಲೀಫ್

    ಬೆಂಗ್ಳೂರಿಗೆ ಲಾಕ್‍ಡೌನ್‍ನಿಂದ ಸದ್ಯಕ್ಕಿಲ್ಲ ರಿಲೀಫ್

    – 5 ಏರಿಯಾಗಳಲ್ಲಿ ಲಾಕ್‍ಡೌನ್ ವಿಸ್ತರಣೆ

    ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್‍ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್‍ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್‍ಡೌನ್‍ನಿಂದ ಮೇ 3ರಂದು ರಿಲೀಫ್ ಇಲ್ಲ.

    ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್‍ಮೆಂಟ್ ಝೋನ್‍ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್‍ಮೆಂಟ್ ಝೋನ್‍ಗಳು ನಾರ್ಮಲ್ ಸ್ಥಿತಿಗೆ ಬರುವ ದಿನಾಂಕವನ್ನು ಬಿಬಿಎಂಪಿ ಹೊರಡಿಸಿದ್ದು, ಕೆಲ ಏರಿಯಾಗಳಲ್ಲಿ ಈ ಅವಧಿ ಮೇ 3ಕ್ಕಿಂತ ವಿಸ್ತರಣೆ ಆಗಿದೆ.

    ಕ್ವಾರಂಟೈನ್ ಅವಧಿ ಅಂತ್ಯವಾಗುವವರೆಗೆ ಕಂಟೈನ್‍ಮೆಂಟ್ ಝೋನ್‍ಗೆ ರಿಲೀಫ್ ಇಲ್ಲವೆಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.
    1. ಪಾದರಾಯನಪುರ – ಮೇ 16
    2. ಆರ್‍ಆರ್ ನಗರ – ಮೇ 11
    3. ಬೊಮ್ಮನಹಳ್ಳಿ – ಮೇ 11
    4. ಸುಧಾಮನಗರ – ಮೇ 10
    5. ರಾಧಾಕೃಷ್ಣ ವಾರ್ಡ್ – ಮೇ 9

    ಬಿಬಿಎಂಪಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಸೋಂಕಿತರ ಪ್ರಾಥಮಿಕ, ಸೆಕೆಂಡರಿ ಕಾಂಟ್ಯಾಕ್ಟ್‍ನ ಕ್ವಾರಂಟೈನ್ ಅವಧಿ ಮೇಲೆ ನಿರ್ಧಾರವಾಗಲಿದೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಮೇಯರ್ ಗೌತಮ್ ಕುಮಾರ್ ಹಾಗೂ ಕಮೀಷನರ್ ಅನಿಲ್ ಕುಮಾರ್, ಕ್ವಾರಂಟೈನ್ ಆದ 28 ದಿನಗಳಲ್ಲಿ ಒಂದೇ ಒಂದು ಕೇಸ್ ಪಾಸಿಟಿವ್ ಬಂದರೂ ಸೀಲ್‍ಡೌನ್ ಮುಂದುವರಿಸುತ್ತೇವೆ ಎಂದಿದ್ದಾರೆ.

  • ಬಿಹಾರಿ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೊನಾ – ನಂಜನಗೂಡಂತೆ ಆಗುತ್ತಾ ಬೆಂಗ್ಳೂರಿನ ಹೊಂಗಸಂದ್ರ

    ಬಿಹಾರಿ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೊನಾ – ನಂಜನಗೂಡಂತೆ ಆಗುತ್ತಾ ಬೆಂಗ್ಳೂರಿನ ಹೊಂಗಸಂದ್ರ

    – ಕಂಟೈನ್‍ಮೆಂಟ್ ಝೋನ್‍ನಲ್ಲಿ ಲಾಕ್‍ಡೌನ್ ಬಿಗಿ

    ಬೆಂಗಳೂರು: ಕೊರೊನಾ ಕೇಸ್‍ನಲ್ಲಿ ಬೆಂಗಳೂರಿನ ಹೊಂಗಸಂದ್ರ ನಂಜನಗೂಡು ಆಗುತ್ತಿದಿಯಾ ಅನ್ನೋ ಆತಂಕ ಎದುರಾಗಿದೆ. ಕಾರಣ ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಈ ಏರಿಯಾದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

    ಬಿಹಾರ ಮೂಲದ ಕಾರ್ಮಿಕ ಬೊಮ್ಮನಹಳ್ಳಿ ವಲಯಕ್ಕೆ ಬರುವ ಹೊಂಗಸಂದ್ರದಲ್ಲಿ ವಾಸಿಸುತ್ತಿದ್ದ. ಈತ ನಮ್ಮ ಮೆಟ್ರೋ ಕಾಮಗಾರಿಗೆ ಕೆಲಸ ಮಾಡುತ್ತಿದ್ದು, ಬರೋಬ್ಬರಿ 13 ಮಂದಿಗೆ ಕೊರೊನಾ ಹಬ್ಬಿರುವುದು ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಇಡೀ ಏರಿಯಾವನ್ನು ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಿನ ಕೊರೊನಾ ಸೋಂಕಿತ ಕಾರ್ಮಿಕನ ಟ್ರಾವೆಲ್ ಹಿಸ್ಟರಿ – ಆಟೋದಲ್ಲಿ ಪ್ರಯಾಣ

    ಈತ ವಾಸಿಸುತ್ತಿದ್ದ ವಿದ್ಯಾಜ್ಯೋತಿ ನಗರದಲ್ಲಿ ರಸ್ತೆ, ಅಂಗಡಿ, ಮನೆಗಳನ್ನು ಬಂದ್ ಮಾಡಲಾಗಿದೆ. ಬಿಹಾರ ಮೂಲದ ಈ ಕಾರ್ಮಿಕ ಹೊಂಗಸಂದ್ರದಲ್ಲಿ ಉಳಿದ 13 ಮಂದಿಯ ಒಟ್ಟಿಗೆ ವಾಸವಾಗಿದ್ದ. ಅಲ್ಲದೇ ಬಿಬಿಎಂಪಿ ನೀಡಿದ್ದ ಆಹಾರದ ಕಿಟ್‍ನಿಂದ 150 ಮಂದಿ ಒಟ್ಟಿಗೆ ಅಡುಗೆ ರೆಡಿ ಮಾಡುತ್ತಿದ್ದರು.

    ಈತನ ಸಂಪರ್ಕದಲ್ಲಿದ್ದ 150 ಮಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ. ಆದರೆ ಈ ಕಾರ್ಮಿಕನಿಗೆ ಕೊರೊನಾ ಹೇಗೆ ಬಂತು ಅನ್ನೋದೇ ಈಗ ರಹಸ್ಯವಾಗಿಬಿಟ್ಟಿದೆ. ಲಾಕ್‍ಡೌನ್‍ಗೂ ಮೊದಲು ಈತ ಬಿಹಾರಕ್ಕೆ ಹೋಗಿಬಂದಿದ್ದ ಎಂದು ತಿಳಿದುಬಂದಿದೆ. ಈತನಿಂದ ಸೋಂಕಿತರಾದವರು ಪಕ್ಕದ ಮಂಗಮ್ಮನ ಪಾಳ್ಯದಲ್ಲೂ ಕೆಲಸ ಮಾಡುತ್ತಿದ್ದರು. ಹೀಗಾಗಿ ಈ ಸೋಂಕಿತರ ಸಂಪರ್ಕಕ್ಕೆ ಯಾರೆಲ್ಲ ಬಂದಿದ್ದಾರೆ ಅನ್ನೋ ಬಗ್ಗೆಯೂ ಇವತ್ತಿನಿಂದ ಬಿಬಿಎಂಪಿ ಮಾಹಿತಿ ಸಂಗ್ರಹಿಸಲಿದೆ. ಇನ್ನೂ ಈತ ಓಡಾಡುತ್ತಿದ್ದ ಆಟೋ ಚಾಲಕ ಮತ್ತು ಆತನ ಮನೆಯವರಿಗೆ ಕೊರೊನಾ ನೆಗೆಟಿವ್ ಬಂದಿದೆ.

  • ರಾಮನಗರದಲ್ಲಿರುವ ಪಾದರಾಯನಪುರದ ಇಬ್ಬರು ಕೈದಿಗಳಿಗೆ ಕೊರೊನಾ

    ರಾಮನಗರದಲ್ಲಿರುವ ಪಾದರಾಯನಪುರದ ಇಬ್ಬರು ಕೈದಿಗಳಿಗೆ ಕೊರೊನಾ

    ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಜೈಲಿಗೆ ಬಿಡುವಾಗ ಆರೋಪಿಗಳ ಜೊತೆಯಲ್ಲಿ ಇದ್ದ ಹಿನ್ನೆಲೆಯಲ್ಲಿ ಎಲ್ಲ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.

    ಮಾಜಿ ಸಿಎಂ ಕಿಡಿ: ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೊನಾ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

    ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೊನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ಗೆ ಕರೆದೊಯ್ಯಲಾಗಿದೆ. ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ. ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

    ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 17 ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದು. ಇದೀಗ ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆ ಯವರು ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಎಚ್‍ಡಿಕೆ ಆಗ್ರಹಿಸಿದ್ದಾರೆ.

     

     

  • ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ

    ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ

    – ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹೆಣ್ಣು ಮಗು
    – ಪೋಷಕರು, ಆಸ್ಪತ್ರೆಯ ವೈದ್ಯರಿಗಿಲ್ಲ ಸೋಂಕು

    ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ.

    ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ ಕಂಡು ಕಂದಮ್ಮ ಪ್ರಾಣಬಿಟ್ಟಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

    ಮಗು ಜನಿಸಿದಾಗ ಎರಡೂವರೆ ಕೆಜಿ ಇತ್ತು. ನಂತರ 6 ತಿಂಗಳ ಕಳೆದರೂ ತೂಕವು 3 ಕೆಜಿಗಿಂತ ಹೆಚ್ಚಾಗಲಿಲ್ಲ. ಹೀಗಾಗಿ ಪೋಷಕರು ಮಗುವನ್ನು ಜಲಂಧರಿನ ಅಪೊಲೊ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ 36 ದಿನಗಳವರೆಗೆ ಚಿಕಿತ್ಸೆ ಕೊಡಿಸಿದ್ದರು. ಆದರೆ ಮಗುವಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದನ್ನು ಅರಿತ ಅಪೊಲೊ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐಗೆ ದಾಖಲಿಸುವಂತೆ ಸಲಹೆ ನೀಡಿದ್ದರು. ಹೀಗಾಗಿ ಪೋಷಕರು ಏಪ್ರಿಲ್ 9ರಂದು ಅಂಬುಲೆನ್ಸ್ ಮೂಲಕ ಪಿಜಿಐಗೆ ಕರೆತಂದಿದ್ದರು.

    ಚಿಕಿತ್ಸೆ ಆರಂಭಿಸಿದ ವೈದ್ಯರು ಮಗುವಿನ ಹೃದಯದಲ್ಲಿ ರಂಧ್ರವಿದೆ, ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ತಿಳಿಸಿದ್ದರು. ಆದರೆ ಶಸ್ತ್ರಚಿಕಿತ್ಸೆಗೂ ಮುನ್ನವೇ ಮಗುವಿಗೆ ಸೋಂಕು ತಗುಲಿತ್ತು. ಮಗುವಿಗೆ ಜ್ವರದ ಲಕ್ಷಣಗಳು ಇರಲಿಲ್ಲ. ಆದರೆ ಕೈ-ಕಾಲು ಸೇರಿದಂತೆ ದೇಹದ ಭಾಗಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದವು.

    ತಾಯಿ-ತಂದೆ ಕೊರೊನಾ ಬಂದಿಲ್ಲ:
    ವೆಂಟಿಲೇಟರ್ ಮೇಲೆ ಇರಿಸಿದ್ದ ಮಗಳನ್ನು ನೋಡಲು ತಾಯಿ ಹೋಗಿದ್ದರು. ಮಗುವಿನ ತಂದೆ ರಾಮು ಮತ್ತು ತಾಯಿ ಇಬ್ಬರೂ ಕೊರೊನಾ ಟೆಸ್ಟ್‌ಗೆ ಒಳಗಾಗಿದ್ದರು. ಆದರೆ ಅವರ ರಿಪೋರ್ಟ್ ನಲ್ಲಿ ಸೋಂಕು ದೃಢಪಟ್ಟಿಲ್ಲ. ಅಜ್ಜಿ ಮತ್ತು ಅಜ್ಜನಿಗೂ ಕೊರೊನಾ ಟೆಸ್ಟ್ ಮಾಡಲಾಗಿದೆ. ಅವರಲ್ಲಿಯೂ ಸೋಂಕು ಕಂಡುಬಂದಿಲ್ಲ. ಹೀಗಾಗಿ ಮಗುವಿಗೆ ಕೊರೊನಾ ಹೇಗೆ ಹರಡಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

    ಹೆಣ್ಣು ಮಗುವಿನೊಂದಿಗೆ ಸಂಪರ್ಕ ಹೊಂದಿದ್ದ 18 ವೈದ್ಯರು, ಎಚ್‍ಎ ಮತ್ತು ಎಕ್ಸ್ ರೇ ತಂತ್ರಜ್ಞರು ಸೇರಿದಂತೆ 54 ಮಂದಿ ಆಸ್ಪತ್ರೆಯ ಉದ್ಯೋಗಿಗಳ ರಿಪೋರ್ಟ್ ನೆಗೆಟಿವ್ ಬಂದಿದೆ. ಪಿಜಿಐ ಬುಧವಾರ 18 ವೈದ್ಯರನ್ನು ಪ್ರತ್ಯೇಕಿಸಿ ಪ್ರತ್ಯೇಕ ವಾರ್ಡಿಗೆ ದಾಖಲಿಸಿದೆ. ಉಳಿದ ಸಿಬ್ಬಂದಿಯ ವರದಿ ನೆಗೆಟಿವ್ ಬಂದಿದ್ದರಿಂದ ಅವರನ್ನು ಮನೆಗೆ ಕಳುಹಿಸಿದೆ.

  • ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣಕ್ಕೆ ಅನುಮತಿ

    ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣಕ್ಕೆ ಅನುಮತಿ

    – ಐಸ್‍ಕ್ರೀಂ, ಜ್ಯೂಸ್, ಪುಸ್ತಕ ಮಾರಾಟಕ್ಕೆ ಗ್ರೀನ್ ಸಿಗ್ನಲ್

    ಬೆಂಗಳೂರು: ಕೇಂದ್ರ ಸರ್ಕಾರದ ಬುಧವಾರ ನೀಡಿದ್ದ ಮಾರ್ಗಸೂಚಿಗಳ ಅನ್ವಯ ಒಂದಿಷ್ಟು ಕೊರೊನಾ ಲಾಕ್‍ಡೌನ್ ನಿಯಮಗಳನ್ನು ಸಡಿಲ ಮಾಡಿದ್ದ ರಾಜ್ಯ ಸರ್ಕಾರ, ಇವತ್ತು ಇನ್ನೊಂದಿಷ್ಟು ವಿನಾಯಿತಿ ನೀಡಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.

    ಬೆಂಗಳೂರು ಸೇರಿದಂತೆ ನಗರ ಹಲವು ನಗರಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗದಿದ್ದರೂ ರಾಜ್ಯ ಸರ್ಕಾರ ರಿಸ್ಕ್ ತೆಗೆದುಕೊಂಡಂತೆ ಕಾಣುತ್ತಿದೆ. ಮೊಬೈಲ್ ಅಂಗಡಿ, ಜ್ಯೂಸ್ ಅಂಗಡಿ, ಕಟ್ಟಡ ನಿರ್ಮಾಣ ಹೀಗೆ ಹಲವುಗಳಿಗೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಷರತ್ತುಬದ್ಧ ಅನುಮತಿ ನೀಡಿದೆ.

    ಬೆಂಗಳೂರು ಸೇರಿದಂತೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಬುಧವಾರ ಅವಕಾಶ ನೀಡಿರಲಿಲ್ಲ. ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ನೇತೃತ್ವದ ಸರ್ಕಾರ ಮಣಿದಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ಇವತ್ತು ನೀಡಿರುವ ಲಾಕ್‍ಡೌನ್ ವಿನಾಯ್ತಿಗಳನ್ನು ಘೋಷಿಸಿದೆ.

    ಲಾಕ್‍ಡೌನ್‍ನಿಂದ ಮತ್ತಷ್ಟು ವಿನಾಯ್ತಿ..!
    * ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ
    * ಕಾರ್ಮಿಕರು ಸೈಟ್‍ನಲ್ಲಿಯೇ ಇರಬೇಕು (ಕಾರ್ಮಿಕರಿಗೆ ಅಲ್ಲಿಯೇ ಉಳಿದುಕೊಳ್ಳಲು ಅಗತ್ಯ ಸೌಲಭ್ಯ ಕಲ್ಪಿಸಬೇಕು, ಹೊರಗಿನಿಂದ ಕಾರ್ಮಿಕರನ್ನು ಕರೆಸುವಂತಿಲ್ಲ)
    * ನೀರು ಪೂರೈಕೆ ಮತ್ತು ಒಳಚರಂಡಿ ರಿಪೇರಿ
    * ಟೆಲಿಕಾಮ್, ಕೇಬಲ್ ಸಂಬಂಧಿ ಕೆಲಸಗಳು

    * ಬ್ಯಾಂಕೇತರ ಹಣಕಾಸು ಸಂಸ್ಥೆಗಳು
    * ಸಹಕಾರ ಬ್ಯಾಂಕ್/ಸೊಸೈಟಿಗಳು
    * ಸ್ಟೇಷನರಿ ಮತ್ತು ಬುಕ್ ಶಾಪ್
    * ಎಲೆಕ್ಟ್ರಿಕ್ ಅಂಗಡಿ (ಫ್ಯಾನ್ ಮಾರಲು ಅವಕಾಶ)
    * ನಗರ ಪ್ರದೇಶದಲ್ಲಿ ಆಹಾರ ಸಂಸ್ಕರಣೆ ಘಟಕ (ಬ್ರೆಡ್, ಹಾಲು, ಬೇಳೆ, ಫ್ಲೋರ್‍ಮಿಲ್)
    * ಪ್ರಿಪೇಡ್ ಮೊಬೈಲ್ ರಿಚಾರ್ಜ್‍ಗೆ ಅಂಗಡಿ
    * ಐಸ್ ಕ್ರರೀಂ, ಡ್ರೈ ಫ್ರೂಟ್ಸ್, ಜ್ಯೂಸ್ ಅಂಗಡಿ (ಪಾರ್ಸಲ್‍ಗಷ್ಟೇ ಅವಕಾಶ)
    * ಹಿರಿಯ ನಾಗರಿಕರು ಇರುವ ಮನೆಗಳಿಗೆ ಸಹಾಯಕಿಯರು

  • ಚಾಮರಾಜನಗರದಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಟೆಲಿ ಮೆಡಿಸಿನ್ ಸೇವೆ

    ಚಾಮರಾಜನಗರದಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಟೆಲಿ ಮೆಡಿಸಿನ್ ಸೇವೆ

    ಚಾಮರಾಜನಗರ: ಕೋವಿಡ್-19 ಹೊರತುಪಡಿಸಿ ಉಳಿದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಅನುಕೂಲಕ್ಕಾಗಿ ಚಾಮರಾಜನಗರದಲ್ಲಿ ಟೆಲಿ ಮೆಡಿಸಿನ್ ಸೇವೆ ಆರಂಭಿಸಲಾಗಿದೆ.

    ಇದಕ್ಕಾಗಿ ಜಿಲ್ಲೆಯ ಹನೂರು, ಬೇಗೂರು, ಸಂತೇಮಾರಹಳ್ಳಿ, ಕೊಳ್ಳೇಗಾಲ, ಯಳಂದೂರು ಹಾಗೂ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಹೃದ್ರೋಗ, ಮಧುಮೇಹ, ಚರ್ಮರೋಗ, ಸ್ತ್ರೀ ರೋಗ ಹಾಗೂ ಮಕ್ಕಳ ತಜ್ಞರು ಟೆಲಿ ಮೆಡಿಸಿನ್ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಬರಲು ಸಾಧ್ಯವಾಗದೆ ಇರುವವರು ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಸ್ಪತ್ರೆಯಲ್ಲಿರುವ ತಜ್ಞರು ಹಾಗೂ ವೈದ್ಯರನ್ನು ಸಂಪರ್ಕಿಸಲು ವ್ಯವಸ್ಥೆ ಮಾಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೋಗಿಯ ಗುಣಲಕ್ಷಣಗಳನ್ನು ತಿಳಿದುಕೊಳ್ಳುವ ಜಿಲ್ಲಾಸ್ಪತ್ರೆಯಲ್ಲಿರುವ ತಜ್ಞರು ಹಾಗೂ ವೈದ್ಯರು ಸೇವಾ ಕೇಂದ್ರದಲ್ಲಿರುವ ವೈದ್ಯರೊಂದಿಗೆ ಸಮಾಲೋಚಿಸಿ, ಯಾವ ಚಿಕಿತ್ಸೆ ನೀಡಬೇಕು ಎನ್ನುವುದನ್ನು ತಿಳಿಸುತ್ತಾರೆ.

  • ದ.ಕನ್ನಡದಲ್ಲಿ ಕೊರೊನಾಗೆ ಎರಡನೇ ಬಲಿ- ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

    ದ.ಕನ್ನಡದಲ್ಲಿ ಕೊರೊನಾಗೆ ಎರಡನೇ ಬಲಿ- ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

    – ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯ ಸಾವು

    ಮಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ.

    ಬಂಟ್ವಾಳದ ಕೊರೊನಾ ಸೋಂಕಿತ ಮಹಿಳೆ ಏಪ್ರಿಲ್ 19ರಂದು ಮೃತರಾಗಿದ್ದರು. ಈ ಬೆನ್ನಲ್ಲೇ ಕೊರೊನಾ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಕೂಡ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಸಾವು ಇದಾಗಿದೆ.

    75 ವರ್ಷದ ವೃದ್ಧೆ ಏಪ್ರಿಲ್ 18ರಿಂದ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅವರನ್ನು ಮಂಗಳೂರಿನ ಕೋವಿಡ್-19 ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ.

    ವೃದ್ಧೆಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆ ಏರಿಯಾವನ್ನು ಕ್ವಾರಂಟೈನ್ ಮಾಡಲಾಗಿದೆ.

    ರಾಜ್ಯದಲ್ಲಿ ಇಂದು 18 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 10 ಜನರಿಗೆ ಕೊರೊನಾ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬುಧವಾರ ಬೆಂಗಳೂರಿನ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

    ಇಂದು ಬೆಂಗಳೂರಿನಲ್ಲಿ 10, ವಿಜಯಪುರ, ಹುಬ್ಬಳ್ಳಿ ಮತ್ತು ಮಂಡ್ಯದಲ್ಲಿ ತಲಾ ಇಬ್ಬರು ಸೋಂಕಿತರು ಪತ್ತೆಯಾದರೆ, ದಕ್ಷಿಣ ಕನ್ನಡ ಹಾಗೂ ಕಲಬುಗಿಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ವಿಜಯಪುರದ ರೋಗಿ-429, 25 ವರ್ಷದ ಮಹಿಳೆಗೆ ಸೋಂಕು ಹೇಗೆ ತಗುಲಿತು ಎಂಬುದರ ಬಗ್ಗೆ ತಿಳಿದು ಬಂದಿಲ್ಲ.

  • ಇಂದು 18 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆ

    ಇಂದು 18 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆ

    – ಬೆಂಗ್ಳೂರಿನಲ್ಲಿ ಇಂದು 10 ಜನರಿಗೆ ಕೊರೊನಾ
    – ರೋಗಿ 419ರಿಂದ 9 ಮಂದಿಗೆ ಸೋಂಕು

    ಬೆಂಗಳೂರು: ರಾಜ್ಯದಲ್ಲಿಂದು 18 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ.

    ಇಂದು ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 10 ಜನರಿಗೆ ಕೊರೊನಾ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬುಧವಾರ ಬೆಂಗಳೂರಿನ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬೆಂಗಳೂರಿನ ಹೊಂಗಸಂದ್ರದ ಬಿಹಾರ ಮೂಲಕ ಕಾರ್ಮಿಕ (ರೋಗಿ ನಂಬರ್ 419) ಸಿಲಿಕಾನ್ ಸಿಟಿಗೆ ಕಂಟಕವಾಗುತ್ತಾ ಅನ್ನೋ ಅನುಮಾನಗಳು ದಟ್ಟವಾಗಿವೆ. ಕೂಲಿ ಕಾರ್ಮಿಕನ ಸಂಪರ್ಕದಲ್ಲಿದ್ದ 9 ಜನರಿಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ತಡರಾತ್ರಿ ಕಾರ್ಯಚರಣೆ ನಡೆಸಿದ ಆರೋಗ್ಯ ಜಲ್ಲಾಧಿಕಾರಿಗಳು 118 ಜನರನ್ನು ಕ್ವಾರಂಟೈನ್ ಮಾಡಿದ್ದಾರೆ.

    ನಂಜನಗೂಡಿನ ರೋಗಿ ನಂಬರ್ 52ರಂತೆ ಬಿಹಾರ ಕಾರ್ಮಿಕ ಬೆಂಗಳೂರಿಗೆ ಕಂಟಕವಾಗುವ ಸಾಧ್ಯತೆಗಳಿವೆ. ಸೋಂಕು ತಗುಲಿದ ಬಳಿಕ ಕಾರ್ಮಿಕ ಆಟೋದಲ್ಲಿ ಹೊಂಗಸಂದ್ರದ ವೇಣು ಕ್ಲಿನಿಕ್, ಜಯದೇವ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಿಗೆ ತೆರಳಿದ್ದಾನೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕರ್ನಾಟಕದ ಎಲ್ಲಾ ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆಯ ಫಾರ್ಮಸಿಸ್ ಅವರು ಔಷಧಿ ಕೊಡುವಾಗ ಆಡ್ರೆಸ್, ಮೊಬೈಲ್ ನಂಬರ್ ಕಲೆಕ್ಟ್ ಮಾಡಲು ಸೂಚನೆ ಕೊಡಲಾಗಿದೆ. ಕೆಮ್ಮು, ನಗಡಿ, ಗಂಟಲು ನೋವಿಗೆ ಕೊಡುವಾಗ ಕಲೆಕ್ಟ್ ಮಾಡಬೇಕು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

    ಕೊರೊನಾ ಸೋಂಕಿತರ ವಿವರ:
    ರೋಗಿ 428 : 32 ವರ್ಷದ ಪುರುಷ, ವಿಜಯಪುರದ ನಿವಾಸಿ. ರೋಗಿ-221ರ ಸಂಪರ್ಕದಲ್ಲಿದ್ದರು.
    ರೋಗಿ 429: 25 ವರ್ಷದ ಮಹಿಳೆ, ವಿಜಯಪುರದ ನಿವಾಸಿ. ಸಂಪರ್ಕ ಇನ್ನು ಪತ್ತೆಯಾಗಿಲ್ಲ.
    ರೋಗಿ 430: 30 ವರ್ಷದ ಮಹಿಳೆ, ಹುಬ್ಬಳ್ಳಿಯ ನಿವಾಸಿ. ರೋಗಿ-236ರ ಸಂಪರ್ಕ ಹೊಂದಿದ್ದರು.
    ರೋಗಿ 431: 13 ವರ್ಷದ ಬಾಲಕಿ, ಹುಬ್ಬಳ್ಳಿಯ ನಿವಾಸಿ. ರೋಗಿ-236ರ ಸಂಪರ್ಕದಲ್ಲಿದ್ದರು.
    ರೋಗಿ 432: 78 ವರ್ಷದ ವೃದ್ಧೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಿವಾಸಿ. ರೋಗಿ-390ರ ಸಂಪರ್ಕ ಹೊಂದಿದ್ದರು.
    ರೋಗಿ 433: 30 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕದಲ್ಲಿದ್ದರು.

    ರೋಗಿ 434: 60 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕ ಹೊಂದಿದ್ದರು.
    ರೋಗಿ 435: 22 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕದಲ್ಲಿದ್ದರು.
    ರೋಗಿ 436: 40 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕದಲ್ಲಿ ಇದ್ದರು.
    ರೋಗಿ 437: 30 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕ ಹೊಂದಿದ್ದರು.
    ರೋಗಿ 438: 25 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕದಲ್ಲಿದ್ದರು.
    ರೋಗಿ 439: 37 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕದಲ್ಲಿ ಇದ್ದರು.

    ರೋಗಿ 440: 43 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕದಲ್ಲಿದ್ದರು.
    ರೋಗಿ 441: 41 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-419ರ ಸಂಪರ್ಕ ಹೊಂದಿದ್ದರು.
    ರೋಗಿ 442: 47 ವರ್ಷದ ಪುರುಷ, ಮಂಡ್ಯ ನಿವಾಸಿ. ರೋಗಿ-171 ಮತ್ತು 371ರ ಸಂಪರ್ಕದಲ್ಲಿದ್ದರು.
    ರೋಗಿ 443: 28 ವರ್ಷದ ಮಹಿಳೆ, ಮಂಡ್ಯ ಜಿಲ್ಲೆಯ ಮಳವಳ್ಳಿ ನಿವಾಸಿ. ರೋಗಿ-179ರ ಸಂಪರ್ಕದಲ್ಲಿ ಇದ್ದರು.
    ರೋಗಿ 444: 41 ವರ್ಷದ ಪುರುಷ, ಬೆಂಗಳೂರಿನ ನಿವಾಸಿ. ರೋಗಿ-252ರ ಸಂಪರ್ಕದಲ್ಲಿದ್ದರು.
    ರೋಗಿ 445: 32 ವರ್ಷದ ಮಹಿಳೆ, ಕಲಬುರಗಿ ನಿವಾಸಿ. ರೋಗಿ-413ರ ಸಂಪರ್ಕ ಹೊಂದಿದ್ದರು.

    ಬೆಂಗಳೂರಿನಲ್ಲಿ 10, ವಿಜಯಪುರ, ಹುಬ್ಬಳ್ಳಿ ಮತ್ತು ಮಂಡ್ಯದಲ್ಲಿ ತಲಾ ಇಬ್ಬರು ಸೋಂಕಿತರು ಪತ್ತೆಯಾದರೆ, ದಕ್ಷಿಣ ಕನ್ನಡ ಹಾಗೂ ಕಲಬುಗಿಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ವಿಜಯಪುರದ ರೋಗಿ ನಂಬರ್ 429, 25 ವರ್ಷದ ಮಹಿಳೆಗೆ ಸೋಂಕು ಹೇಗೆ ತಗುಲಿತು ಎಂಬುದರ ಬಗ್ಗೆ ತಿಳಿದು ಬಂದಿಲ್ಲ.

  • ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ಸಾವು

    ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ಸಾವು

    ಗದಗ: ರಜೆ ಮೇಲೆ ಸ್ವ-ಗ್ರಾಮಕ್ಕೆ ಬಂದಿದ್ದ ಯೋಧ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ನಡೆದಿದೆ.

    ವೀರಪ್ಪ ತಹಶೀಲ್ದಾರ (34) ಮೃತ ಯೋಧ. ಇವರು ನಿಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಬುಧವಾರ ರಾತ್ರಿ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ನಂತರ ಕೊರೊನಾ ವೈರಸ್‍ ಪರೀಕ್ಷೆಗೆ ಕಳುಹಿಸಲಾಗಿತ್ತು. ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಇಂದು ಅಂತ್ಯ ಸಂಸ್ಕಾರ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿತ್ತು.

    ವೀರಪ್ಪ ಬಿಎಸ್‍ಎಫ್ ಪಶ್ಚಿಮ ಬಂಗಾಳದ 158ನೇ ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 2006ರಿಂದ ದೇಶ ಸೇವೆಯಲ್ಲಿ ತೊಡಗಿದ್ದರು. ವೀರಪ್ಪ ರಜೆಗಾಗಿ ಶ್ಯಾಗೋಟಿ ಗ್ರಾಮಕ್ಕೆ ಬಂದಿದ್ದು, ಏಪ್ರಿಲ್ 15ಕ್ಕೆ ರಜೆ ಮುಗಿದಿತ್ತು. ಆದರೆ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ವಾಪಸ್ ಹೋಗಲು ಸಾಧ್ಯವಾಗದೆ ಗ್ರಾಮದಲ್ಲೇ ಉಳಿದುಕೊಂಡಿದ್ದರು.

    ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಯೋಧ ಅಗಲಿದ್ದಾರೆ. ಗದಗ ಜಿಲ್ಲಾಡಳಿತದಿಂದ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.